ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ನರಮೇಧಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಉಗ್ರರು ಹಾಗೂ ಪಾಕಿಸ್ತಾನದ ವಿರುದ್ಧ ಭಾರತ ಮತ್ತಷ್ಟು ಕಠಿಣ ನಿರ್ಧಾರಗಳನ್ನೇ ತೆಗೆದುಕೊಳ್ಳಬೇಕು ಅನ್ನೋ ಕೂಗು ದೇಶಾದ್ಯಂತ ಜ್ವಾಲಾಮುಖಿಯಂತೆ ಪ್ರತಿಧ್ವನಿಸುತ್ತಿದೆ. ಇದರ ಬೆನ್ನಲ್ಲೇ ಪಾಕ್ ಹೈಕಮಿಷನ್‌ನ ಬಳಿ ಇಂದು ಬೆಳಗ್ಗೆ ವ್ಯಕ್ತಿಯೊಬ್ಬ ಕೇಕ್ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಮಾಧ್ಯಮದ ವ್ಯಕ್ತಿಗಳು ಆ ವ್ಯಕ್ತಿಯನ್ನು ಸುತ್ತುವರಿದು, ಯಾಕೆ ಈ ಆಚರಣೆ? ಎಲ್ಲಿಗೆ ತಗೆದುಕೊಂಡು ಹೋಗಲಾಗುತ್ತದೆ ಎಂದು ಪ್ರಶ್ನಿಸಿದರು. ಆದರೆ ಆ ವ್ಯಕ್ತಿ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾನೆ. ಪಾಕಿಸ್ತಾನ ಹೈಕಮಿಷನ್‌ನ ಉನ್ನತ ರಾಜತಾಂತ್ರಿಕ ಸಾದ್ ಅಹ್ಮದ್ ವಾರೈಚ್ ಅವರನ್ನು ಬುಧವಾರ ತಡರಾತ್ರಿ ಕೇಂದ್ರವು ಸಮನ್ಸ್ ಜಾರಿ ಮಾಡಿರುವ ಬಗ್ಗೆಯೂ ಅವರನ್ನು ಕೇಳಲಾಯಿತು. ಆದರೆ ಆ ವ್ಯಕ್ತಿ ಯಾವುದೇ ಪ್ರತಿಕ್ರಿಯೆ ನೀಡದೇ ನಡೆದುಕೊಂಡು ಮುಂದೆ ಹೋಗಿದ್ದಾನೆ. ಪಾಕ್ ಹೈಕಮಿಷನ್‌ಗೆ ನೀಡಲಾಗಿದ್ದ ಭದ್ರತೆಯನ್ನು ಈಗಾಗಲೇ ಭಾರತದ ಸರ್ಕಾರ ಕಡಿತ ಮಾಡಿದೆ. ಅಷ್ಟೇ ಅಲ್ಲದೇ 48 ಗಂಟೆಯ ಒಳಗಡೆ…
Author: Author AIN
ಬೆಂಗಳೂರು: “ಭಯೋತ್ಪಾದನೆ ವಿರುದ್ಧ ನಾವು ಒಟ್ಟಾಗಿ ನಿಂತು ಹೋರಾಟ ಮಾಡಬೇಕು. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರಗಳಿಗೆ ನಮ್ಮ ಸಹಕಾರವಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗ ಭರತ್ ಭೂಷಣ್ ಅವರ ಮತ್ತಿಕೆರೆ ನಿವಾಸಕ್ಕೆ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಗುರುವಾರ ತೆರಳಿ, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುರೇಶ್ ಅವರು, “ಜಮ್ಮು ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕರ ದಾಳಿಯನ್ನು ನಾವು ಖಂಡಿಸುತ್ತೇವೆ. ಮೊದಲು ದೇಶ ನಂತರ ಉಳಿದ ವಿಚಾರಗಳು. ಈ ದಾಳಿ ವಿರುದ್ಧ ನಾವೆಲ್ಲರೂ ಒಟ್ಟಾಗಿ ನಿಲ್ಲಬೇಕು, ಭಯೋತ್ಪಾದನೆ ವಿರುದ್ಧ ಹೋರಾಟ ಮಾಡಬೇಕು. ಭವಿಷ್ಯದಲ್ಲಿ ನಮ್ಮ ಪ್ರಜೆಗಳ ರಕ್ಷಣೆ ಮಾಡಬೇಕು. ಪ್ರತಿಯೊಬ್ಬರ ಜೀವವೂ ಬಹಳ ಮುಖ್ಯವಾದುದು” ಎಂದು ತಿಳಿಸಿದರು. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಇದು ಗುಪ್ತಚರ ಇಲಾಖೆ ವೈಫಲ್ಯವೇ ಎಂದು ಕೇಳಿದಾಗ, “ಇಂತಹ ಪರಿಸ್ಥಿತಿಯಲ್ಲಿ ನಾನು ಈ ವಿಚಾರವಾಗಿ ನಾನು…
ಬೆಂಗಳೂರು: ಇಂದು ಸಂಜೆ 7.30ಕ್ಕೆ ಚಿನ್ನಸ್ವಾಮಿಯಲ್ಲಿ ಬೆಂಗಳೂರು ಮತ್ತು ರಾಜಸ್ಥಾನ್ ತಂಡಗಳು ಸೆಣಸಾಟ ನಡೆಸಲಿವೆ. ಎರಡೂ ತಂಡಗಳು ಪ್ಲೇ-ಆಫ್ ಕನಸು ಕಾಣುತ್ತಿದ್ದು, ಗೆಲುವು ಯಾರಿಗೆ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಪ್ಲೇ-ಆಫ್ಗೆ ಹೋಗಬೇಕು ಅಂದ್ರೆ ಆರ್ಸಿಬಿ ಇವತ್ತಿನ ಪಂದ್ಯ ಗೆಲ್ಲಲೇಬೇಕಿದೆ. ಈಗಾಗಲೇ 8 ಪಂದ್ಯಗಳಲ್ಲಿ ಐದು ಗೆದ್ದಿರುವ ಆರ್ಸಿಬಿ, ಪಾಯಿಂಟ್ಸ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಕ್ವೀನ್ಸ್ ರಸ್ತೆ, ಎಂಜಿ ರಸ್ತೆ ಮುಂತಾದ ಪ್ರಮುಖ ರಸ್ತೆಗಳಲ್ಲಿ ಭಾರೀ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದೆ. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಅದಲ್ಲದೆ ಐಪಿಎಲ್ ಪಂದ್ಯಗಳ ದಿನ ಮೆಟ್ರೋ ಸೇವೆಯನ್ನು ತಡ ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ ಎಂದು ಬಿಎಂಆರ್ಸಿಎಲ್ ಈ ಹಿಂದೆಯೇ ತಿಳಿಸಿದೆ. ಈ ಹಿಂದಿನ ಪಂದ್ಯಗಳ ವೇಳೆಯೂ ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆಯಾಗಿತ್ತು. ಎಲ್ಲಾ ನಾಲ್ಕು ಟರ್ಮಿನಲ್ಗಳಿಂದ, ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ ರೇಷ್ಮೆ ಸಂಸ್ಥೆ ಮತ್ತು ಮಾದಾವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ರಾತ್ರಿ 12.30ರ ವರೆಗೆ…
ಅಕ್ಷಯ ತೃತೀಯದಂದು ಲಕ್ಷ್ಮಿ ದೇವಿಯ ಸಮೃದ್ಧಿಯು ಮನೆಗೆ ಶಾಂತಿ, ಸಮೃದ್ಧಿ ಮತ್ತು ಸಂಪತ್ತನ್ನು ತರುತ್ತದೆ. ಆದಾಗ್ಯೂ, ಈ ಆಶೀರ್ವಾದವನ್ನು ಪಡೆಯಲು, ನೀವು ಮೊದಲು ಮನೆಯಿಂದ ಕೆಲವು ವಸ್ತುಗಳನ್ನು ತೆಗೆದುಹಾಕಬೇಕು. ಏಕೆಂದರೆ ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕೆಲವು ವಸ್ತುಗಳು ಇದ್ದರೆ, ಅವು ನಕಾರಾತ್ಮಕ ಶಕ್ತಿಯನ್ನು ಉಂಟುಮಾಡಬಹುದು. ಅಂತಹ ವಸ್ತುಗಳು ಮನೆಯಲ್ಲಿದ್ದರೆ, ಲಕ್ಷ್ಮಿ ದೇವಿಯು ಆ ಸ್ಥಳಕ್ಕೆ ಬರದಿರಬಹುದು. ಈಗ ಅಂತಹ ವಸ್ತುಗಳು ಯಾವುವು ಎಂದು ತಿಳಿದುಕೊಳ್ಳೋಣ. ಪೊರಕೆ ಪೊರಕೆಯು ಸ್ವಚ್ಛತೆಯನ್ನು ಪ್ರತಿನಿಧಿಸುವ ಒಂದು ವಸ್ತುವಾಗಿದೆ. ಆದರೆ ಅದು ಹಾನಿಗೊಳಗಾಗಿದ್ದರೆ, ಬಿರುಕು ಬಿಟ್ಟಿದ್ದರೆ ಅಥವಾ ಒಡೆದಿದ್ದರೆ, ಅದು ಮನೆಗೆ ಬಡತನವನ್ನು ತರುತ್ತದೆ ಎಂದು ನಂಬಲಾಗಿದೆ. ಅಂತಹ ಪೊರಕೆಯನ್ನು ಮನೆಯಲ್ಲಿ ಇಡುವುದರಿಂದ ಆರ್ಥಿಕ ತೊಂದರೆ ಉಂಟಾಗುತ್ತದೆ ಎಂದು ವಾಸ್ತು ತಜ್ಞರು ಸೂಚಿಸುತ್ತಾರೆ. ಆದ್ದರಿಂದ, ಅಕ್ಷಯ ತೃತೀಯ ಬರುವ ಮೊದಲು ಮುರಿದ ಪೊರಕೆಯನ್ನು ತೆಗೆದು ಹೊಸ ಪೊರಕೆಯನ್ನು ಮನೆಗೆ ತರುವುದು ಒಳ್ಳೆಯದು. ಬಟ್ಟೆಗಳು ಮನೆಯಲ್ಲಿ ಹರಿದ, ಕೊಳಕಾದ, ಹಾನಿಗೊಳಗಾದ ಅಥವಾ ಹಲವು ದಿನಗಳಿಂದ ಸ್ವಚ್ಛಗೊಳಿಸದ ಬಟ್ಟೆಗಳಿದ್ದರೆ,…
ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಸ್ಟಾರ್ ಡೈರೆಕ್ಟರ್ ಅಟ್ಲಿ ಜೊತೆ ದೊಡ್ಡ ಪ್ರಾಜೆಕ್ಟ್ ಗೆ ಕೈಹಾಕಿದ್ದಾರೆ. ಬರೋಬ್ಬರಿ 800 ಕೋಟಿ ಪ್ರಾಜೆಕ್ಟ್ ನಲ್ಲಿ ಸಿನಿಮಾ ತಯಾರಾಗುತ್ತಿದೆ ಎನ್ನಲಾಗುತ್ತಿದೆ. ಹಾಲಿವುಡ್ ರೇಂಜ್ ನಲ್ಲಿ ಮೂಡಿ ಬರುತ್ತಿರುವ ಸಿನಿಮಾಗಾಗಿ ಅಲ್ಲು ಅರ್ಜುನ್ ಹೊಸ ಅವತಾರ ತಾಳಿದ್ದಾರೆ. ಪುಷ್ಪ ಸರಣಿ ಸಿನಿಮಾಗಾಗಿ ಗಡ್ಡ ಬಿಟ್ಟು ರಗಡ್ ಆಗಿ ಕಾಣಿಸಿಕೊಳ್ಳುತ್ತಿದ್ದ ಬನ್ನಿ ಗಡ್ಡ ಟ್ರಿಮ್ ಮಾಡಿಸಿ, ಹೊಸ ಹೇರ್ ಸ್ಟೈಲ್ ನಲ್ಲಿ ಕ್ಯಾಮೆರಾಗೆ ಕಣ್ಣು ಹೊಡೆದಿದ್ದಾರೆ. ಇತ್ತೀಚೆಗೆ ತಮ್ಮ ಸೋದರಸಂಬಂಧಿಯ ಮದುವೆಗೆ ಪತ್ನಿ ಸ್ನೇಹಾ ರೆಡ್ಡಿ ಮತ್ತು ಅವರ ಮಗಳು ಅರ್ಹಾ ಜೊತೆ ಆಗಮಿಸಿದ್ದರು. ಅಲ್ಲು ಅರ್ಜುನ್ ಕಪ್ಪು ಪ್ಯಾಂಟ್ ಜೊತೆಗೆ ಸರಳವಾದ ಕಂದು ಬಣ್ಣದ ಕುರ್ತಾ ಧರಿಸಿ, ಸ್ಟೈಲೀಶ್ ಆಗಿ ಐಕಾನ್ ಸ್ಟಾರ್ ಕಾಣಿಸಿಕೊಂಡಿದ್ದಾರೆ. ಅಲ್ಲು ಅರ್ಜುನ್-ಅಟ್ಲಿ ಸಿನಿಮಾಗೆ AA22xA6 ಅಂತ ಟೈಟಲ್ ಇಡಲಾಗಿದ್ದು, ಅಲ್ಲು ಬರ್ತಡೇ ವಿಶೇಷವಾಗಿ ಅನೌನ್ಸ್‌ಮೆಂಟ್ ಜೊತೆಗೆ ಸಿನಿಮಾಗೆ ಪೂರ್ವ ತಯಾರಿ ಕ್ಷಣಗಳನ್ನು ವಿಡಿಯೋ ರಿಲೀಸ್ ಮಾಡಿತ್ತು. ಅಟ್ಲಿ ಮತ್ತು…
ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಿಂದ 27ಕ್ಕೂ ಹೆಚ್ಚು ಪ್ರವಾಸಿಗರು ಅಸುನೀಗಿದ್ದಾರೆ. ಈ ದಾಳಿ ಬೆನ್ನಲ್ಲೇ ಇಡೀ ಭಾರತೀಯರು ಪಾಕ್ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಾಳಿಯನ್ನು ಖಂಡಿಸಿ ಪಾಪಿಗಳ ಕೃತ್ಯದ ವಿರುದ್ಧ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಸಾಮಾಜಿಕ ಮಾಧ್ಯಮಗಳಲ್ಲಿ ಭಾರತೀಯ ಸಿನಿಮಾಗಳಲ್ಲಿ ಪಾಕಿಸ್ತಾನಿ ಕಲಾವಿದರು ಕೆಲಸ ಮಾಡಬಾರದು ಎಂದು ಆಕ್ರೋಶ ಶುರುವಾಗಿದೆ. ಪ್ರಭಾಸ್ ಘೌಜಿ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಇಮಾನ್ವಿ ಇಸ್ಮಾಯಿಲ್ ಪಾಕಿಸ್ತಾನಿ ಮಿಲಿಟರಿ ವ್ಯಕ್ತಿಯ ಮಗಳು ಎಂಬ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಅವರನ್ನು ಚಿತ್ರದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದರು. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಇಮಾನ್ವಿ, ನಾನು ಹೆಮ್ಮೆಯ ಭಾರತೀಯ-ಅಮೆರಿಕನ್ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ನಟಿ ಇಮಾನ್ವಿ, ‘ನನ್ನ ಬಗ್ಗೆ ಸುಳ್ಳು ಮಾಹಿತಿಗಳನ್ನು ಹರಿಬಿಡಲಾಗುತ್ತಿದೆ. ನನ್ನ ಕುಟುಂಬದ ಯಾರೂ ಸಹ ಎಂದಿಗೂ ಸಹ ಯಾವುದೇ ರೀತಿಯಲ್ಲಿಯೂ ಪಾಕಿಸ್ತಾನದ ಸೇನೆಯೊಟ್ಟಿಗೆ ಕೆಲಸ ಮಾಡಿಲ್ಲ. ನಾನು ಪಾಕಿಸ್ತಾನದವಳಲ್ಲ, ನಾನೊಬ್ಬ ಹೆಮ್ಮೆಯ ಭಾರತೀಯ…
ಅರ್ಧಕ್ಕಿಂತ ಹೆಚ್ಚು ಪಂದ್ಯಗಳು ಮುಗಿದಿವೆ. ಅನಿರೀಕ್ಷಿತವಾಗಿ, ಈ ಸಮಯದಲ್ಲಿ, ಐಪಿಎಲ್ 2025 ರಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪಗಳು ಕೋಲಾಹಲಕ್ಕೆ ಕಾರಣವಾಗಿವೆ. ಇತ್ತೀಚೆಗೆ ರಾಜಸ್ಥಾನ ರಾಯಲ್ಸ್ ವಿರುದ್ಧವೂ ಇದೇ ರೀತಿಯ ಆರೋಪಗಳನ್ನು ಮಾಡಲಾಗಿತ್ತು, ಮತ್ತು ಈಗ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ಸಮಯದಲ್ಲಿ ಈ ಗಂಭೀರ ಆರೋಪಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿವೆ. ಇದರ ಹಿಂದಿನ ನಿಜವಾದ ಕಾರಣವೇನು? ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಸನ್‌ರೈಸರ್ಸ್ ಮೊದಲು ಬ್ಯಾಟಿಂಗ್ ಮಾಡಿತು. ಈ ಹಂತದಲ್ಲಿ, https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಸನ್‌ರೈಸರ್ಸ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅವರನ್ನು ಅಂಪೈರ್ ಔಟ್ ಎಂದು ಘೋಷಿಸುವ ಮೊದಲೇ ಪೆವಿಲಿಯನ್‌ಗೆ ಹೋದರು. ಚೆಂಡು ಲೆಗ್ ಸೈಡ್‌ಗೆ ಹೋದ ಕಾರಣ ಅಂಪೈರ್ ವಾಸ್ತವವಾಗಿ ಚೆಂಡನ್ನು ವೈಡ್ ಎಂದು ಘೋಷಿಸಿದರು. ಮುಂಬೈ ಇಂಡಿಯನ್ಸ್ ಆಟಗಾರರು ಕೂಡ ಮೇಲ್ಮನವಿ ಸಲ್ಲಿಸಲಿಲ್ಲ. ಆದರೆ ಇಶಾನ್ ಸ್ವತಃ ಪೆವಿಲಿಯನ್‌ಗೆ ಹಿಂತಿರುಗಿದರು. ನಂತರ ಅಂಪೈರ್ ಕೂಡ ಅವರನ್ನು ಔಟ್ ಎಂದು ಘೋಷಿಸಿದರು. ಆದರೆ…
ಪಾಟ್ನಾ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿ ವಿಡಿಯೋಗಳನ್ನು ಕಂಡು ಇಡೀ ದೇಶವೇ ಬೆಚ್ಚಿ ಬಿದ್ದಿದೆ. ನೀನು ಹಿಂದೂನಾ? ಅಲ್ಲ ಮುಸ್ಲಿಂನಾ ಅಂತ ಕೇಳಿ ತಲೆಗೆ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಇನ್ನೂ ಈ ವಿಚಾರವಾಗಿ ಪ್ರಧಾನಿ ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ–ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಉಗ್ರರಿಗೆ ಎಚ್ಚರಿಕೆ ನೀಡಿದರು. ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಭಾಷಣ ಆರಂಭಿಸಿದರು. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡೀ ಜಗತ್ತಿಗೆ ಹೇಳುತ್ತೇನೆ. ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸುತ್ತದೆ ಪತ್ತೆ ಹಚ್ಚುತ್ತದೆ ಮತ್ತು ಶಿಕ್ಷಿಸುತ್ತದೆ ಎಂದು ಹೇಳಿದರು. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ್ದರಿಂದ ಇಡೀ ರಾಷ್ಟ್ರವು ದುಃಖಿತವಾಗಿದೆ.…
ಪಾಕಿಸ್ತಾನ್: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿ ವಿಡಿಯೋಗಳನ್ನು ಕಂಡು ಇಡೀ ದೇಶವೇ ಬೆಚ್ಚಿ ಬಿದ್ದಿದೆ. ನೀನು ಹಿಂದೂನಾ? ಅಲ್ಲ ಮುಸ್ಲಿಂನಾ ಅಂತ ಕೇಳಿ ತಲೆಗೆ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಈ ದಾಳಿಯಲ್ಲಿ 26 ಮಂದಿ ಮೃತಪಟ್ಟ ಬೆನ್ನಲ್ಲೇ ರಾಜ್ಯ ಪ್ರವಾಸಿ ತಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಭಾರತ, ಪಾಕಿಸ್ತಾನ ಸರ್ಕಾರದ ಎಕ್ಸ್ ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಿದೆ. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಬುಧವಾರ ನಡೆದ ಸಿಸಿಎಸ್ ಸಭೆಯಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ, ಸಿಂಧೂ ಜಲ ಒಪ್ಪಂದವನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಭಾರತ ಹಲವಾರು ಕ್ರಮಗಳನ್ನು ಕೈಗೊಂಡಿತ್ತು. ಇದಾದ ಬಳಿಕ ಈಗ ಪಾಕ್ ಸರ್ಕಾರದ ಎಕ್ಸ್ ಖಾತೆಯನ್ನು ಭಾರತ ಸ್ಥಗಿತಗೊಳಿಸಿದೆ. ಪಾಕಿಸ್ತಾನಿ ಪ್ರಜೆಗಳಿಗೆ ಸಾರ್ಕ್ ವೀಸಾ ವಿನಾಯಿತಿ ಯೋಜನೆಯನ್ನು ಬುಧವಾರ ಭಾರತ ಸ್ಥಗಿತಗೊಳಿಸಿತ್ತು. ಇದರ ಅಡಿ ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ಯಾವುದೇ ಅಸ್ತಿತ್ವದಲ್ಲಿರುವ ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. 48 ಗಂಟೆಗಳಲ್ಲಿ…
ಬೆಂಗಳೂರು: ಕೇಂದ್ರ ಕೈಗೊಂಡ ಕಠಿಣ ನಿರ್ಣಯಗಳು ಪಾಕಿಸ್ತಾನದ ದುಗುಡ ಹೆಚ್ಚಿಸಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ಅವರ ಮೃತದೇಹದ ಅಂತಿಮ ದರ್ಶನ ಪಡೆದರು. ನಂತರ ಮಾತನಾಡಿದ ಅವರು, ಪಾಕಿಸ್ತಾನದ ಮೇಲೆ ನಮ್ಮವರು ದಾಳಿ ಮಾಡಬಹುದು. ದೇಶದ ಜನರ ಆಕ್ರೋಶ ಅರ್ಥ ಮಾಡಿಕೊಂಡು ಕೇಂದ್ರ ಕಠಿಣ ಕ್ರಮಕ್ಕೆ ಮುಂದಾಗುವುದಂತೂ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಎಂಥಾ ಕಠಿಣ ಕ್ರಮಕ್ಕೆ ಕೇಂದ್ರ ಮುಂದಾಗುತ್ತದೆ ಅಂದರೆ ಮತ್ತೊಮ್ಮೆ ಪಾಕಿಸ್ತಾನ ನಮ್ಮ ದೇಶದ ಮೇಲೆ ಉಗ್ರ ಚಟುವಟಿಕೆ ನಡೆಸಲು ಹೆದರಬೇಕು. ಬುಧವಾರ ಕೇಂದ್ರ ಕೈಗೊಂಡ ಕಠಿಣ ನಿರ್ಣಯಗಳು ಪಾಕಿಸ್ತಾನದ ದುಗುಡ ಹೆಚ್ಚಿಸಿದೆ. ಮುಂದೆಯೂ ಪಾಕಿಸ್ತಾನದ ಮೇಲೆ ದಾಳಿ ನಡೆಯುವ ವಿಶ್ವಾಸ ನನಗೆ ಇದೆ ಎಂದು ಹೇಳಿದರು. ಇಂದು ಸರ್ವಪಕ್ಷ ಸಭೆ ನಡೆಯಲಿದೆ. ಎಲ್ಲಾ ಪಕ್ಷಗಳೂ ಕಠಿಣ ನಡೆಗೆ ಒತ್ತಾಯಿಸುವ ಸಾಧ್ಯತೆ ಇದೆ. ಭಾರತವೂ ಪಾಕಿಸ್ತಾನದ ವಿಚಾರದಲ್ಲಿ ಕಠಿಣ ಹೆಜ್ಜೆ ಇಡಲಿದೆ. ಭಾರತ ಸರ್ಕಾರ…