Author: Author AIN

ನೀವು ಏರ್ ಟೆಲ್, ಜಿಯೋ ಗ್ರಾಹಕರಾಗಿದ್ದರೆ ನಿಮಗೆ ಈ ಸುದ್ದಿ ಕೇಳಿ ಶಾಕ್ ಆಗಬಹುದು. ಇದುವರೆಗೂ ಕಡಿಮೆ ಬೆಲೆಗೆ ಕಾಲ್ ಹಾಗೂ ಇಂಟರ್ ನೆಟ್ ಸೌಲಭ್ಯ ನೀಡುತ್ತಿದ್ದ ಏರ್ ಟೆಲ್ ಹಾಗೂ ಜಿಯೋ ಇದೀಗ ಶುಲ್ಕ್ ಹೆಚ್ಚಳಕ್ಕೆ ಮುಂದಾಗಿವೆ. ಈ ಮೂಲಕ ನಿಮ್ಮ ಜೇಬಿಗೆ ಕತ್ತರಿ ಬೀಳೋದಂತು ಖಂಡಿತ. ಜನಪ್ರಿಯ ಭಾರ್ತಿ ಏರ್‌ಟೆಲ್‌ ಸಂಸ್ಥೆಯು ಶುಲ್ಕ ಏರಿಕೆ ಮಾಡಬಹುದು ಎಂದು ಏರ್‌ಟೆಲ್‌ನ ಅಧ್ಯಕ್ಷ ಸುನೀಲ್‌ ಮಿತ್ತಲ್ ತಿಳಿಸಿದ್ದಾರೆ. ಇತ್ತೀಚಿಗೆ ಎನ್‌ಡಿಟಿವಿ ಪ್ರಾಫಿಟ್‌ಗೆ ನೀಡಿದ ಸಂದರ್ಶನವೊಂದರಲ್ಲಿ, ಮಾತನಾಡಿದ ಅವರು ಮಾರುಕಟ್ಟೆಯನ್ನು ಸುಸ್ಥಿರವಾಗಿಡಲು ಸಂಸ್ಥೆಯು ಟೆಲಿಕಾಂ ದರಗಳನ್ನು ಹೆಚ್ಚಿಸಲಿದೆ ಎಂದಿದ್ದಾರೆ. ಇನ್ನು ಪರಿಷ್ಕೃತ ದರಗಳಿಗೆ ನಿರ್ದಿಷ್ಟ ಕಾಲಮಿತಿಯ ಮಾಹಿತಿ ಅನ್ನು ಸುನೀಲ್‌ ಮಿತ್ತಲ್ ಬಹಿರಂಗಪಡಿಸಿಲ್ಲ. ಅದಾಗ್ಯೂ, ಪ್ರಸಕ್ತ – 2024 ರ ದ್ವಿತೀಯಾರ್ಧದಲ್ಲಿ ಟೆಲಿಕಾಂ ಶುಲ್ಕಗಳಲ್ಲಿ ಬದಲಾವಣೆಗಳನ್ನು ಕಾಣಬಹುದಾಗಿದೆ. ಮುಂದಿನ ತಿಂಗಳುಗಳಲ್ಲಿ ಪ್ರತಿ ಬಳಕೆದಾರರ ಸರಾಸರಿ ಆದಾಯವನ್ನು (ARPU) 208 ರೂ. ನಿಂದ 300 ರೂ. ಗೆ ಹೆಚ್ಚಿಸುವ ಗುರಿಯನ್ನು ಏರ್‌ಟೆಲ್‌ ಟೆಲಿಕಾಂ ಹೊಂದಿದೆ.…

Read More

ಜಗ್ಗೇಶ್ ನಟನೆಯ ಗುರುಪ್ರಸಾದ್ ನಿರ್ದೇಶನದ ‘ರಂಗನಾಯಕ’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಜಗ್ಗೇಶ್ ಮತ್ತು ಗುರುಪ್ರಸಾದ್ ಕಾಂಬಿನೇಷನ್ ನಲ್ಲಿ ಈ ಹಿಂದೆ ಬಂದ ಎರಡೂ ಸಿನಿಮಾಗಳಲ್ಲೂ ವಿಡಂಬನೆಗೆ ಹೆಚ್ಚು ಒತ್ತು ನೀಡಲಾಗಿತ್ತು. ರಂಗನಾಯಕ ಚಿತ್ರದ ಟ್ರೈಲರ್ ಅನ್ನು ಕೂಡ ವಿಡಂಬನೆಗೆ ಮೀಸಲಿಟ್ಟಿದ್ದಾರೆ. ಈ ಹಿಂದೆ ರಂಗನಾಯಕ ಚಿತ್ರದ ಹಾಡೊಂದು ರಿಲೀಸ್ ಆಗಿತ್ತು. ಆ ಹಾಡಿನಲ್ಲಿ ಮೀಟೂ ಶ್ರುತಿ, ಬಿಗ್ ಬಾಸ್ ಶ್ರುತಿ ಎಂದು ಇಬ್ಬರು ನಟಿಯರ ಕಾಲೆಳೆದಿದ್ದರು ಗುರುಪ್ರಸಾದ್. ಈಗ ಬಿಡುಗಡೆ ಆಗಿರುವ ಟ್ರೈಲರ್ ನಲ್ಲಿ ಶಿವಣ್ಣ, ಯಶ್, ಸುದೀಪ್, ದರ್ಶನ್, ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಕಲ್ಪನಾ, ಗಿರೀಶ್ ಕಾಸರವಳ್ಳಿ ಹೀಗೆ ಅನೇಕ ಕಲಾವಿದರನ್ನು ಕರೆತಂದಿದ್ದಾರೆ. ಕನ್ನಡಕ್ಕೆ ತೊಂದರೆ ಆಗ್ತಿದೆ ಬನ್ನಿರಿ ಎಂದು ಕರೆಯುವ ಡೈಲಾಗ್ ನಲ್ಲಿ ಶಿವಣ್ಣ, ಯಶ್, ಸುದೀಪ್, ದರ್ಶನ್ ಅವರ ಹೆಸರನ್ನು ಬಳಸಿಕೊಂಡಿದ್ದಾರೆ ಗುರುಪ್ರಸಾದ್. ಐಟಂ ಸಾಂಗ್ ವಿಚಾರವಾಗಿ ಗಿರೀಶ್ ಕಾಸರವಳ್ಳಿ ಅವರ ಹೆಸರನ್ನೂ ನಿರ್ದೇಶಕರು ಬಳಸಿಕೊಂಡಿದ್ದು, ಗಿರೀಶ್ ಕಾಸರವಳ್ಳಿ ಸಿನಿಮಾದಲ್ಲಿ ಐಟಂ ಸಾಂಗ್ ಕೇಳಿದಂಗಾತು…

Read More

ತುಳು ನಾಡಿನ ಹುಡುಗಿ ನಟಿ ಕೃತಿ ಶೆಟ್ಟಿ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳಿಗೆ ಬಣ್ಣ ಹಚ್ಚುತ್ತಿರುವ ನಟಿ ಹಿಟ್ ಸಿನಿಮಾಗಳನ್ನ ನೀಡಲು ಸೋಲುತ್ತಿದ್ದಾರೆ. ಉಪ್ಪೇನ ಚಿತ್ರದ ಮೂಲಕ ಖ್ಯಾತಿ ಗಳಿಸಿದ್ದ ಕೃತಿ ಶೆಟ್ಟಿ ಸದ್ಯಕ್ಕೆ ಸಾಲು ಸಾಲು ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ಕೃತಿ ನಟಿಸಿದ ಸಿನಿಮಾಗಳೆಲ್ಲಾ ಬಾಕ್ಸ್ ಆಫೀಸ್​ನಲ್ಲಿ ಮಲಗುತ್ತಿವೆ. ಆದರೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಮುನ್ನಡೆಯುತ್ತಿದ್ದಾರೆ ಕೃತಿ ಶೆಟ್ಟಿ. ಮೊದಲ ಸಿನಿಮಾದಲ್ಲೇ 100 ಕೋಟಿ ಕಲೆಕ್ಷನ್ ಮಾಡಿದ ನಾಯಕಿಯಾಗಿ ಕೃತಿ ಶೆಟ್ಟಿ ಟಾಲಿವುಡ್ ನಲ್ಲಿ ದಾಖಲೆ ಸೃಷ್ಟಿಸಿದ್ದಾರೆ. ಇಂಡಸ್ಟ್ರಿಗೆ ಬಂದ ನಂತರ ಸತತ ಮೂರು ಚಿತ್ರಗಳಲ್ಲಿ ಯಶಸ್ಸು ಪಡೆದು ಹ್ಯಾಟ್ರಿಕ್ ಹೀರೋಯಿನ್ ಆದ ಚೆಲುವೆ ಈಕೆ. ಕೃತಿ ಶೆಟ್ಟಿ ಚಿಕ್ಕವಳಿದ್ದಾಗ ಅಮ್ಮ ಹೇಳಿದ ಎಲ್ಲ ದಿನಸಿ ಸಾಮಾನುಗಳನ್ನು ಅಂಗಡಿಗೆ ಹೋಗಿ ಖರೀದಿಸುತ್ತಿದ್ದರು. ಅದು ತನ್ನ ಮೊದಲ ಕೆಲಸ ಎಂದು ಹೇಳಿದರು. ಈ ಕೆಲಸ ಮಾಡಲು ಅವರ ತಾಯಿ 100 ಅಥವಾ 150 ರೂಪಾಯಿಗಳನ್ನು ನೀಡುತ್ತಿದ್ದರು…

Read More

ಮಾಸ್ಕೋ: ಉಕ್ರೇನ್‌ನಲ್ಲಿ ಹೋರಾಡಲು ತನ್ನ ಸೈನ್ಯವನ್ನು ಕಳುಹಿಸುವ ಧೈರ್ಯಮಾಡುವ ಯಾವುದೇ ಪಾಶ್ಚಿಮಾತ್ಯ ರಾಷ್ಟ್ರಗಳು “ಅಣ್ವಸ್ತ್ರ ಬಳಕೆಯ ಪರಿಣಾಮ” ಎದುರಿಸಬೇಕಾಗುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಕೆ ನೀಡಿದ್ದಾರೆ. ರಷ್ಯಾ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಪಾಶ್ಚಿಮಾತ್ಯ ದೇಶಗಳು ರಷ್ಯಾದ ಸಾಮರ್ಥ್ಯ ಕುಗ್ಗಿಸಲು ಪ್ರಯತ್ನಿಸುತ್ತಿವೆ. ಆದರೆ ರಷ್ಯಾ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದು ಎಷ್ಟು ಅಪಾಯಕಾರಿ ಎಂಬುದನ್ನು ಆ ದೇಶಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ. ಈ ವಾರದ ಆರಂಭದಲ್ಲಿ ನ್ಯಾಟೊ ಸದಸ್ಯ ರಾಷ್ಟ್ರಗಳು ಉಕ್ರೇನ್‌ಗೆ ಸೇನಾಪಡೆಗಳನ್ನುಕಳುಹಿಸಬೇಕು ಎಂದು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಸಲಹೆ ನೀಡಿದ್ದರು. ಮ್ಯಾಕ್ರನ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಪುಟಿನ್ ಅವರು ಈ ಎಚ್ಚರಿಕೆ ನೀಡಿದ್ದಾರೆ ಎಂದು ದಿನಪತ್ರಿಕೆ ವರದಿ ಮಾಡಿದೆ. ಅಮೆರಿಕ, ಜರ್ಮನಿ, ಬ್ರಿಟನ್ ಮತ್ತು ಇತರ ರಾಷ್ಟ್ರಗಳು, ಸೇನೆ ಕಳುಹಿಸುವ ಮ್ಯಾಕ್ರನ್ ಅವರ ಸಲಹೆಯನ್ನು ತಿರಸ್ಕರಿಸಿದ್ದರು.

Read More

15ನೇ ಬೆಂಗಳೂರು ಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆಂಗಳೂರು ಚಿತ್ರೋತ್ಸವಕ್ಕೆ ಮತ್ತಷ್ಟು ಬಲ ನೀಡಿದ್ದಾರೆ. ಈ ವೇಳೆ ಶಿವಣ್ಣ ಕಾಂತಾರ ಹಾಗೂ ಕೆಜಿಎಫ್‌ ನಂತಹ ಸಿನಿಮಾಗಳಿಂದ ಕನ್ನಡ ಸಿನಿಮಾ ವಿಶ್ವಮಟ್ಟದವರೆಗೆ ಮುಟ್ಟಿದೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ.  ಕಾಂತಾರ, ಕೆಜಿಎಫ್‌ನಿಂದ ಕನ್ನಡ ಸಿನಿಮಾ ವಿಶ್ವಮಟ್ಟದವರೆಗೆ ಮುಟ್ಟಿದೆ ಅಂದರೆ ನಾವೆಲ್ಲಾ ಹೆಮ್ಮೆ ಪಡುವ ವಿಚಾರ. ಕನ್ನಡ ಭಾಷೆ ಬಂದು 90 ವರ್ಷ ಆಯ್ತು ಇಂಡಸ್ಟ್ರಿಗೆ ಬಂದು. ಇದರಲ್ಲಿ ನನ್ನದು ಕೂಡ 38 ವರ್ಷ ಸೇವೆ ಇದೆ ಅನ್ನೋದು ಖುಷಿಯಿದೆ. ಈ ಸಂಭ್ರಮದಲ್ಲಿ ನಾನು ಭಾಗಿಯಾಗಿರೋದು ಖುಷಿಯಿದೆ ಎಂದು ಶಿವಣ್ಣ ಬೆಂಗಳೂರು ಚಿತ್ರೋತ್ಸವದಲ್ಲಿ ಮಾತನಾಡಿದ್ದಾರೆ. ಫೆ.29ರಿಂದ ಮಾರ್ಚ್ 7ರವರೆಗೂ ಸಿನಿಮಾ ಹಬ್ಬ ನಡೆಯಲಿದ್ದು,ಫಿಲ್ಮ್ ಫೆಸ್ಟಿವಲ್‌ಗೆ 200 ಸಿನಿಮಾಗಳು ಬಂದಿವೆ. ಅದರಲ್ಲಿ ಕನ್ನಡ ಸಿನಿಮಾಗಳು ಕೂಡ ಇದೆ ಎಂಬುದು ಹೆಮ್ಮೆಯ ವಿಷಯವಾಗಿದೆ.

Read More

ರಾಂಗ್ ರೂಟ್ ನಲ್ಲಿ ಕಾರು ಚಲಾಯಿಸಿದ್ದಲ್ಲದೇ, ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದ ತೆಲುಗು ನಟಿ ಸೌಮ್ಯ ಜಾನು ಕೊನೆಗೂ ಕ್ಷಮೆ ಯಾಚಿಸಿದ್ದಾರೆ. ತಾನು ಮಾಡಿದ ತಪ್ಪಿನ ಅರಿವಾದ ಬಳಿಕ ಕ್ಷಮೆ ಕೇಳಿದ್ದಾರೆ. ನಟಿ ಸೌಮ್ಯ ಜಾನು ವಿರುದ್ಧ ಹೈದರಾಬಾದ್ ನ ಬಂಜಾರ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಾಯಿಗೆ ಔಷಧಿ ತರಬೇಕಾದ ತುರ್ತು ಕಾರಣದಿಂದಾಗಿ ರಾಂಗ್ ರೂಟ್ ನಲ್ಲಿ ಬಂದೆ. ಪೊಲೀಸರು ನನಗೆ ಕೆಟ್ಟದಾಗಿ ನಿಂದಿಸಿದರು ಎಂದು ನಟಿ ಹೇಳಿಕೊಂಡಿದ್ದರು. ರಾಂಗ್ ರೂಟ್ ನಲ್ಲಿ ಬಂದ ನಟಿಯ ಕಾರನ್ನು ತಡೆದ ಟ್ರಾಫಿಕ್ ಹೋಮ್ ಗಾರ್ಡ್ ದಂಡ ಕಟ್ಟುವಂತೆ ಹೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ಮಧ್ಯ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಹೋಮ್ ಗಾರ್ಡ್ ಸಮವಸ್ತ್ರ ಹರಿದಿತ್ತು. ಈ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸೌಮ್ಯ ಜಾನು ಕುಡಿದು ಕಾರು ಚಲಾಯಿಸುತ್ತಿದ್ದರು ಎಂದು ಕೆಲವರು ಹೇಳಿದ್ದರು. ಆದರೆ, ಸೌಮ್ಯಗೆ ಕುಡಿಯುವ ಅಭ್ಯಾಸವಿಲ್ಲ ಎಂದು ನಟಿ ಹೇಳಿಕೊಂಡಿದ್ದರು. ಪೊಲೀಸ್…

Read More

ಮಲಯಾಳಂ ಚಿತ್ರ ರಂಗದ ಖ್ಯಾತ ನಟಿ ಲೆನಾ ಕುಮಾರ್ ಎರಡನೇ ಮದುವೆಯಾಗಿದ್ದಾರೆ.  ಒಂದು ತಿಂಗಳ ಹಿಂದೆಯೇ ಮದುವೆಯಾಗಿರುವ ನಟಿ ಕಳೆದೆರಡು ದಿನಗಳ ಹಿಂದಷ್ಟೇ ಮದುವೆ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಇಸ್ರೋ ನಡೆಸುತ್ತಿರುವ ಗಗನಯಾನ್ ಗೆ ಆಯ್ಕೆಯಾದ ನಾಲ್ವರ ಹೆಸರನ್ನು ಪ್ರಕಟಿಸುತ್ತಿದ್ದಂತೆಯೇ ಲೆನಾ ಕೂಡ ತಮ್ಮ ಮದುವೆ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಲೆನಾ ಮದುವೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಗನಯಾನ್ ಗೆ ಹೊರಟಿರುವ ನಾಲ್ವರ ಪೈಕಿ ಲೆನಾ ಮದುವೆ ಆಗಿರುವ ಹುಡುಗ ಕೂಡ ಒಬ್ಬರು. ಪ್ರಶಾಂತ್ ಬಾಲಕೃಷ್ಣ ನಾಯರ್ ಜೊತೆ ಜನವರಿ 17ರಂದು ಲೆನಾ ಮದುವೆ ಆಗಿದ್ದಾರೆ. ಈ ವಿಚಾರವನ್ನು ಸ್ವತಃ ನಟಿಯೇ ಹೇಳಿಕೊಂಡಿದ್ದಾರೆ. ಈ ವಿಷಯವನ್ನು ಹೇಳುವುದಕ್ಕಾಗಿ ನಾನು ಈ ದಿನ ಕಾಯುತ್ತಿದ್ದೆ ಎಂದು ನಟಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ. https://www.instagram.com/p/C35aCcmyYXl/ ಪ್ರಶಾಂತ್ ಬಾಲಕೃಷ್ಣ ನಾಯರ್ ಗ್ರೂಪ್ ಕ್ಯಾಪ್ಟನ್ ಆಗಿ ಭಾರತೀಯ ವಾಯುಸೇನೆಯಲ್ಲಿ ಪೈಲಟ್ ಆಗಿ ಕೆಲಸ ಮಾಡಿದ್ದಾರೆ. ಮೂರು ಸಾವಿರಕ್ಕೂ…

Read More

ಪ್ಯಾಲೆಸ್ಟೀನ್ ರಾಜಧಾನಿ ಗಾಜಾದಲ್ಲಿ ಆಹಾರ ವಿತರಣೆ ವೇಳೆ ನೂಕು ನುಗ್ಗಲಿ ಸಂಭವಿಸಿದ್ದು ಘಟನೆಯಲ್ಲಿ ನೂರಾರು ಅಧಿಕ ಮಂದಿ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಟೊನಿಯೊ ಗುಟೆರಸ್ ಖಂಡನೆ ವ್ಯಕ್ತಪಡಿಸಿದ್ದಾರೆ. ಆಹಾರಕ್ಕಾಗಿ ಪರಿಹಾರ ಟ್ರಕ್‌ಗಳ ಬಳಿ ಸೇರಿದ ಜನರ ಮೇಲೆ ಇಸ್ರೇಲ್ ಪಡೆಗಳು ಗುಂಡು ಹಾರಿಸಿದ್ದರಿಂದ ಉಂಟಾದ ನೂಕು ನುಗ್ಗಲಿನಲ್ಲಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ಟೀನ್ ಆರೋಗ್ಯ ಸಚಿವಾಲಯ ಹೇಳಿದೆ. ಆದರೆ, ಈ ಕುರಿತಂತೆ ಇಸ್ರೇಲ್ ಮತ್ತು ಪ್ರತ್ಯಕ್ಷದರ್ಶಿಗಳು ಬೇರೆ ಬೇರೆ ಕಥೆಗಳನ್ನು ಹೇಳುತ್ತಿದ್ದಾರೆ ಎಂದು ಸಿಎನ್‌ಎನ್‌ ವರದಿ ಮಾಡಿದೆ. ‘ತೀವ್ರ ಹತಾಶೆಯಲ್ಲಿರುವ ಗಾಜಾ ಜನರಿಗೆ ತುರ್ತು ನೆರವಿನ ಅಗತ್ಯವಿದೆ. ಅದರಲ್ಲೂ ಉತ್ತರ ಗಾಜಾದಲ್ಲಿ ಸಿಲುಕಿರುವವರ ಸ್ಥಿತಿ ಶೋಚನೀಯವಾಗಿದ್ದು, ವಾರದಿಂದ ಇಲ್ಲಿ ವಿಶ್ವಸಂಸ್ಥೆ ನೆರವನ್ನು ಒದಗಿಸಲು ಸಾಧ್ಯವಾಗಿರಲಿಲ್ಲ’ ಎಂದು ವಿಶ್ವಸಂಸ್ಥೆಯ ಮುಖ್ಯಸ್ಥರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ವಿಶ್ವಸಂಸ್ಥೆಯ ಪ್ರತಿನಿಧಿ ಇರಲಿಲ್ಲ ಎಂದಿರುವ ಅವರು, ಈ ಬಗ್ಗೆ ಕೂಲಂಕಷ ತನಿಖೆಗೆ ಒತ್ತಾಯಿಸಿದ್ದಾರೆ. ಗಾಜಾದಲ್ಲಿ…

Read More

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 6 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 44 ಮಂದಿ ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ಸಂಭವಿಸಿದೆ. ಢಾಕಾದ ಬೈಲಿ ರಸ್ತೆಯಲ್ಲಿರುವ ಬಿರಿಯಾನಿ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿಯ ಕೆನ್ನಾಲಿಗೆ ಇತರ ಮಹಡಿಗಳಿಗೂ ವ್ಯಾಪಿಸಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ 42 ಮಂದಿ ಸೇರಿದಂತೆ 75 ಮಂದಿಯನ್ನು 7 ಅಂತಸ್ತಿನ ಕಟ್ಟಡದಿಂದ ಹೊರ ತೆಗೆಯಲಾಗಿದ್ದು, ಕೆಲವ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವು ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಅವಘಟ ಸಂಭವಿಸಿದೆ ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ಮೆಟ್ಟಿಲುಗಳ ಮೇಲೆ ಹೊಗೆ ಬರುತ್ತಿತ್ತು. ಸಾಕಷ್ಟು ಜನರು ಮೇಲೆ ಓಡಿ ಹೋಗಿದ್ದಾರೆ, ಕೆಲವರು ಕಟ್ಟಡಿಂದ ಇಳಿಯಲು ನೀರಿನ ಪೈಪ್ ಗಳನ್ನು ಬಳಸಿದರೆ, ಮತ್ತಷ್ಟು ಜನ…

Read More

ನಟ, ನಟಿಯರು ಅಂದ್ರೆ ಪ್ರತಿಯೊಬ್ಬರಿಗೂ ಅವರ ಬಗ್ಗೆ ಸಾಕಷ್ಟು ಕುತೂಹಲ ಇದ್ದೆ ಇರುತ್ತೆ. ಅವರು ಕುಡಿಯೋ ನೀರಿನಿಂದ ಹಿಡಿದು ಅವರ ಬ್ಯಾಂಕ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿದುಕೊಳ್ಳುವ ಕ್ಯೂರಿಯಾಸಿಟಿ ಸಾಕಷ್ಟು ಮಂದಿಯದ್ದು. ಜೊತೆಗೆ ಅವರನ್ನು ಫಾಲೋ ಮಾಡುವವರ ಸಂಖ್ಯೆ ಕೂಡ ಸಾಕಷ್ಟು ಇರುತ್ತೆ. ಇದೇ ಕಾರಣಕ್ಕೆ ನಟಿಯರು ಆಗಾಗ ಸುಳ್ಳು ಹೇಳಿ ಸಿಕ್ಕಿ ಬಿಳೋದು ಇದೆ. ಇದೀಗ ಬಾಲಿವುಡ್ ಬ್ಯೂಟಿ ನಟಿ ಮಲೈಕಾ ಅರೋರಾ ಸುಳ್ಳು ಹೇಳಿ ಸರಿಯಾಗಿಯೇ ನೆಟ್ಟಿಗರ ಕೈಗೆ ತಗಲಾಕಿಕೊಂಡಿದ್ದಾರೆ. ಸಾಕಷ್ಟು ನಟಿಯರು ತಾವು ಪ್ರಾಣಿಗಳಿಗೆ ಹಿಂಸೆ ನೀಡಬಾರದು ಎಂಬ ಕಾರಣಕ್ಕೆ ಮಾಂಸಹಾರ ತ್ಯಜಿಸಿ ಸಸ್ಯಹಾರಿಗಳಾಗಿದ್ದಾರೆ. ಹಲವು ಸಿನಿಮಾ ನಟ ನಟಿಯರು ತಾವು ಈಗ ವೆಜಿಟೇರಿಯನ್ ಆಗಿದ್ದೇವೆ ಎಂದು ಹೇಳಿದ್ದಾರೆ. ಅಲ್ಲದೇ, ಪ್ರಾಣಿಗಳಿಗೆ ಹಿಂಸೆ ಕೊಡುವುದು ತಪ್ಪು ಅನ್ನೋ ಕಾರಣಕ್ಕಾಗಿ ನಾವು ಶಾಖಾಹಾರಿಯಾಗಿದ್ದೇವೆ ಎಂದಿದ್ದಾರೆ. ಕೆಲವರು ನಿಜವಾಗಿಯೂ ವೆಜಿಟೇರಿಯನ್ ಆಗಿದ್ದಾರೆ. ಆದರೆ ನಟಿ ಮಲೈಕಾ ಅರೋರಾ ತಾವು ವೆಜಿಟೇರಿಯನ್ ಎಂದು ವೀಡಿಯೋ ಮುಂದೆ ಹೇಳಿಕೊಂಡು, ಸೆಟ್ನಲ್ಲಿ ನಾನ್‌ವೆಜ್ ಊಟ…

Read More