ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಮತ್ತು ಆರ್ಸಿಬಿ ನಡುವೆ ಪಂದ್ಯ ನಡೆಯಲಿದೆ. ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ರದ್ದಾದ ನಂತರ, ಲಕ್ನೋ ಮತ್ತು ಆರ್ಸಿಬಿ ಪಂದ್ಯದ ಬಗ್ಗೆ ದೊಡ್ಡ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಕೂಡ ಪ್ರತಿಕ್ರಿಯಿಸಿದ್ದಾರೆ. https://ainkannada.com/shivakumar-human-resources-are-our-strength-dcm-d-k-shivakumar/ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಐಪಿಎಲ್ ಆಡಳಿತ ಮಂಡಳಿಯ ಸಭೆ ನಡೆಯಿತು. ಆದಾಗ್ಯೂ, ಲಕ್ನೋ ಮತ್ತು ಆರ್ಸಿಬಿ ನಡುವಿನ ಪಂದ್ಯದ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬುದರ ಕುರಿತು ಐಪಿಎಲ್ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಇದಕ್ಕೂ ಮೊದಲು, ಅರುಣ್ ಧುಮಾಲ್ ಅವರು ಭಾರತ ಸರ್ಕಾರದ ಸೂಚನೆಗಳಿಗಾಗಿ ಕಾಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದರು. ಸರ್ಕಾರದಿಂದ ಯಾವುದೇ ಆದೇಶ ಬಂದರೂ ಅದನ್ನು ಪಾಲಿಸಲಾಗುವುದು ಎಂದು ಅವರು ಹೇಳಿದ್ದಾರೆ. ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದಾಗಿ, ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವನ್ನು ಅಹಮದಾಬಾದ್ಗೆ ಸ್ಥಳಾಂತರಿಸಲಾಗಿದೆ. ಪಂದ್ಯವು ಮೇ 11 ರಂದು ಮಧ್ಯಾಹ್ನ 3:30…
Author: AIN Author
ಬೆಂಗಳೂರು, ಮೇ 08; “ನಮ್ಮ ರಾಜ್ಯದಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಸಂಸ್ಥೆಗಳಿದ್ದು, ಇಲ್ಲಿ ಓದಿದವರು ವಿಶ್ವದ ಮೂಲೆ ಮೂಲೆಯಲ್ಲಿ ಯಶಸ್ಸು ಸಾಧಿಸಿದ್ದಾರೆ. ಹೀಗಾಗಿ ನಮ್ಮ ಮಾನವ ಸಂಪನ್ಮೂಲವೇ ನಮ್ಮ ರಾಜ್ಯದ ಶಕ್ತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ. https://ainkannada.com/pro-pakistan-post-fir-registered-against-vijayapura-student/ ಸುರಾನ ಎಜುಕೇಶನಲ್ ಇನ್ಸ್ಟಿಟ್ಯೂಷನ್ ವತಿಯಿಂದ ಪೀಣ್ಯ ಕಾಲೇಜಿನಲ್ಲಿ ಗುರುವಾರ ನಡೆದ 4ನೇ ಆವೃತ್ತಿಯ ಜಿಸಿಸ್ ಕಾನ್ಕ್ಲೇವ್ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಇಂತಹ ಕಾರ್ಯಕ್ರಮಗಳು ಕೇವಲ ಭಾಷಣಕ್ಕೆ ಮಾತ್ರ ಸೀಮಿತವಲ್ಲ. ಸಮಾಜ, ವ್ಯವಸ್ಥೆ ಹಾಗೂ ಶಿಕ್ಷಣದ ಮಧ್ಯೆ ಸೇತುವೆಯಾಗಿ ನಿಲ್ಲುತ್ತವೆ. ಕರ್ನಾಟಕ ಬಲಿಷ್ಠ ರಾಜ್ಯ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರಧಾನಿ ವಾಜಪೇಯಿ ಅವರು ಇಷ್ಟು ದಿನ ವಿಶ್ವದ ನಾಯಕರು ಮೊದಲು ದೆಹಲಿಗೆ ಬಂದು ನಂತರ ದೇಶದ ಇತರೆ ನಗರಗಳಿಗೆ ತೆರಳುತ್ತಿದ್ದರು. ಈಗ ಕಾಲ ಬದಲಾಗಿದೆ. ಅವರು ಮೊದಲು ಬೆಂಗಳೂರಿಗೆ ಬಂದು ನಂತರ ದೆಹಲಿ ಹಾಗೂ ಇತರೆ…
ವಿಜಯಪುರ:- ಪಾಕ್ ಪರ ಪೋಸ್ಟ್ ಮಾಡಿದ್ದ ವಿಜಯಪುರದ ವಿದ್ಯಾರ್ಥಿನಿ ಮೇಲೆ FIR ದಾಖಲಾಗಿದೆ. ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. https://ainkannada.com/war-situation-between-india-and-pakistan-high-alert-at-hal-bangalore-staff-leave-cancelled/ ಪೆಹೆಲ್ಗಾಮ್ನಲ್ಲಿ ಪಾಕ್ ಉಗ್ರರಿಂದ 26 ಭಾರತೀಯ ಪ್ರವಾಸಿಗರ ಹತ್ಯೆ ವಿಚಾರವಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡುವ ಮೂಲಕ ಭಾರತೀಯ ಸೇನೆ ಈಗಾಗಲೇ ಪ್ರತೀಕಾರ ತೀರಿಸಿಕೊಂಡಿದೆ. ಸದ್ಯ ಎರಡೂ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಮಧ್ಯೆ ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ತಷಾವುದ್ದ ಫಾರೂಖಿ ಶೇಖ್ ಎಂಬ ವಿದ್ಯಾರ್ಥಿನಿ ಪಾಕಿಸ್ತಾನದ ಪರ ಪೋಸ್ಟ್ ಹರಿಬಿಟ್ಟಿದ್ದಾಳೆ. ಪೋಸ್ಟ್ನಲ್ಲಿ ಏನಿದೆ? ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ. ಗಡಿಯಿಂದ 200…
ಬೆಂಗಳೂರು:- ಆಪರೇಷನ್ ಸಿಂದೂರ್ ನಂತರ ಪಾಕಿಸ್ತಾನವು ಭಾರತದ 15 ನಗರಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ಮಾಡಲು ಮುಂದಾಗಿದ್ದು, ಅದನ್ನು ಭಾರತದ ವಾಯು ರಕ್ಷಣಾ ವ್ಯವಸ್ಥೆ ತಡೆದಿದೆ. ಇದರ ಬೆನ್ನಲ್ಲೇ ಭಾರತೀಯ ಸೇನೆ ಕೂಡ ಪಾಕಿಸ್ತಾನದ ಅದೇ ತೀವ್ರತೆಯಲ್ಲಿ ಲಾಹೋರ್, ಕರಾಚಿಗಳ ಮೇಲೆ ದಾಳಿ ನಡೆದಿತ್ತು. ನಂತರ ಮತ್ತೆ ಪಾಕಿಸ್ತಾನ ಜಮ್ಮು ವಾಯುನೆಲೆಯ ಮೇಲೆ ದಾಳಿಗೆ ಯತ್ನಿಸಿದ್ದಕ್ಕೆ ಪ್ರತಿಯಾಗಿ ಭಾರತೀಯ ಸೇನಾ ಪಡೆಗಳು ಮಿಂಚಿನ ದಾಳಿ ನಡೆಸಿವೆ. https://ainkannada.com/hit-and-run-bike-rider-dies-driver-dies/ ಆಪರೇಷನ್ ಸಿಂದೂರ್ ನಂತರದ ಬೆಳವಣಿಗೆಗಳಿಂದ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ವಾತಾವರಣ ಸೃಷ್ಟಿಯಾಗಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿರುವ ಹೆಚ್ಎಎಎಲ್ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹೆಚ್ಎಎಎಲ್ನ ಎಲ್ಲ ಸಿಬ್ಬಂದಿಯ ರಜೆ ರದ್ದುಗೊಳಿಸಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧರಿರುವಂತೆ ಸೂಚಿಸಲಾಗಿದೆ. ಯುದ್ಧ ವಿಮಾನಗಳ ನಿರ್ವಹಣೆಯ ಕಾರಣ ಕಡ್ಡಾಯ ಹಾಜರಿರುವಂತೆ ಸಿಬ್ಬಂದಿಗೆ, ತಂತ್ರಜ್ಞರಿಗೆ ಸೂಚನೆ ನೀಡಲಾಗಿದೆ. ತುರ್ತು ಪರಿಸ್ಥಿತಿ ಎದುರಿಸಲು ತಯಾರಿ ನಡೆಸುವಂತೆ ನಿರ್ದೇಶನ ನೀಡಿದೆ.
ಬೆಂಗಳೂರು:- ಹಿಟ್ ಆಂಡ್ ರನ್ ಗೆ ಬೈಕ್ ಹಿಂಬದಿ ಸವಾರ ಬಲಿಯಾಗಿರುವ ಘಟನೆ ದೇವನಹಳ್ಳಿಯ ಪೂಜೇನಹಳ್ಳಿ ಗೇಟ್ ಬಳಿ ಜರುಗಿದೆ. ಕೆಜಿಎಫ್ ಮೂಲದ ಡಿ. ವೇಲು ಮೃತಪಟ್ಟಿರುವ ಹಿಂಬದಿ ಸವಾರ. https://ainkannada.com/attempted-attack-on-jammu-more-than-50-pakistani-drones-destroyed/ ಇಬ್ಬರು ಸವಾರರು, ಕೆಲಸ ಮುಗಿಸಿ ಬೈಕ್ ನಲ್ಲಿ ಹೋಗುತ್ತಿದ್ದರು. ಅನಂತ್ ಬೈಕ್ ಓಡಿಸ್ತಿದ್ರೆ ವೇಲು ಹಿಂಭಾಗದಲ್ಲಿ ಕೂತಿದ್ದರು. ಈ ವೇಳೆ ವೇಗವಾಗಿ ಬಂದು ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಅಪರಿಚಿತ ಕಾರು ಡಿಕ್ಕಿ ರಭಸಕ್ಕೆ ಹಿಂಬದಿ ಸವಾರ ವೇಲು ಸಾವನ್ನಪ್ಪಿದ್ದಾರೆ. ದೇವನಹಳ್ಳಿಯಲ್ಲಿ ಇಬ್ಬರು ವ್ಯಕ್ತಿಗಳು ಕೆಲಸ ಮಾಡುತ್ತಿದ್ದರು. ಅಪಘಾತ ಎಸಗಿ ಕಾರಿನ ಸಮೇತ ಚಾಲಕ ಪರಾರಿ ಆಗಿದ್ದು, ಕಳೆದ ರಾತ್ರಿ 7:10 ರ ಸುಮಾರಿಗೆ ಘಟನೆ ಜರುಗಿದೆ. ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ:- ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ತಾರಕಕ್ಕೇರಿದೆ. , ಜಮ್ಮುವನ್ನು ಗುರಿಯಾಗಿಸಿ ಮತ್ತೆ ಪಾಕಿಸ್ತಾನ ದಾಳಿ ನಡೆಸಿದೆ. ಕ್ಷಿಪಣಿಗಳು ಮತ್ತು ಡ್ರೋನ್ಗಳನ್ನು ಜಮ್ಮುವಿನ ಮೇಲೆ ಹಮಾಸ್ ಮಾದರಿಯಲ್ಲಿ ದಾಳಿ ನಡೆಸಿದೆ.ಇಸ್ರೇಲ್ ಮಾದರಿಯಲ್ಲೇ ಭಾರತವು ತಕ್ಕ ಪ್ರತ್ಯುತ್ತರ ನೀಡುತ್ತಿದೆ. https://ainkannada.com/india-has-killed-many-pakistani-terrorists/ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಪಾಕ್ ಮತ್ತು ಅಲ್ಲಿನ ಜನತೆ ತತ್ತರಿಸಿದೆ. ಇಷ್ಟಾಗಿಯೂ ಕಿತಾಪತಿ ಬಿಡದ ಪಾಕಿಸ್ತಾನ ಮತ್ತೆ ಭಾರತದ ಜಮ್ಮುವಿನ ಮೇಲೆ ದಾಳಿಗೆ ವಿಫಲಯತ್ನ ನಡೆಸಿದೆ. ಜಮ್ಮುವಿನ ಮೇಲೆ ಪಾಕ್ 100 ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಕೌಂಟರ್ ಅಟ್ಯಾಕ್ ಮಾಡಿರುವ ಭಾರತ ಲಾಹೋರ್ ಮೇಲೆ ಮಿಸೈಲ್ಗಳ ಸುರಿಮಳೆ ಗರೆದಿದೆ. ಜಮ್ಮುವಿನಲ್ಲಿ ಇದುವರೆಗೆ ಪಾಕಿಸ್ತಾನದ 50ಕ್ಕೂ ಹೆಚ್ಚು ಡ್ರೋನ್ ದಾಳಿಯನ್ನು ಭಾರತೀಯ ವಿಫಲಗೊಳಿಸಿದೆ. ಭಾರತೀಯ ಗಡಿ ನಿಯಂತ್ರಣ ರೇಖೆ ಹಾಗೂ ವಿವಿಧ ಪ್ರದೇಶಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿತ್ತು. ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್ಕೋಟ್, ಅಮೃತಸರ, ಕಪುರ್ತಲ, ಜಲಂಧರ್, ಲುಧಿಯಾನ, ಆದಂಪುರ, ಬಟಿಂಡಾ, ಚಂಡೀಗಢ, ನಾಲ್, ಫಲೋಡಿ, ಉತ್ತರಲೈ,…
ನವದೆಹಲಿ:- ಭಾರತವು ಪಾಕಿಸ್ತಾನದ ಹಲವು ಉಗ್ರರ ಹತ್ಯೆಗೈದಿರುವ ಘಟನೆ ಸಾಂಬಾದಲ್ಲಿ ಜರುಗಿದೆ. https://ainkannada.com/attack-counterattack-high-alert-declared-on-india-pakistan-border/ ಗುರುವಾರ ಹಲವು ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್ಎಫ್ ವಿಫಲಗೊಳಿಸಿದೆ ಎಂದು ಭಾರತದ ಗಡಿ ಭದ್ರತಾ ಪಡೆ ತಿಳಿಸಿದೆ. ಸಾಂಬಾದ ಅಂತರರಾಷ್ಟ್ರೀಯ ಗಡಿಯಲ್ಲಿ ಅನೇಕ ಪಾಕಿಸ್ತಾನಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಭಾರತೀಯ ವಾಯು ಸೇನೆಯು, ಪಾಕ್ನ ಪ್ರಮುಖ ಎಫ್-16 ಹೊಡೆದುರುಳಿಸಿ ತಕ್ಕ ಶಾಸ್ತಿ ಮಾಡಿದೆ. ಪಾಕಿಸ್ತಾನದ ವಾಯುಪಡೆಯ ಪ್ರಮುಖ ವಾಯುಪಡೆಯ ಕೇಂದ್ರವಾದ ಪಾಕಿಸ್ತಾನದ ಸರ್ಗೋಧಾ ವಾಯುನೆಲೆಯಿಂದ ಎಫ್ -16 ಹಾರಾಟ ನಡೆಸಿತು. ಈ ವೇಳೆ ಭಾರತೀಯ SAM ಸರ್ಗೋಧಾ ವಾಯುನೆಲೆಯ ಬಳಿ ಫೈಟರ್ ಜೆಟ್ ಅನ್ನು ಹೊಡೆದುರುಳಿಸಿತು. ಸರ್ಗೋಧಾ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಮುಂಚೂಣಿಯ ವಾಯುನೆಲೆಯಾಗಿದ್ದು, ದೇಶದಲ್ಲಿ ಅತ್ಯಂತ ಹೆಚ್ಚು ರಕ್ಷಣೆ ಹೊಂದಿರುವ ವಾಯುನೆಲೆಗಳಲ್ಲಿ ಒಂದಾಗಿದೆ.
ಶ್ರೀನಗರ:- ಸಿಂಧೂರ್ ಕಾರ್ಯಾಚರಣೆ ಬಳಿಕ ಪಾಕಿಸ್ತಾನ ಉದ್ಧಟತನ ಮುಂದುವರಿಸಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಘರ್ಷಣೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ. ಜಮ್ಮುಕಾಶ್ಮೀರ, ಪಂಜಾಬ್, ರಾಜಸ್ಥಾನ್ ಸೇರಿದಂತೆ ಕೆಲವು ಪ್ರದೇಶಗಳನ್ನು ಟಾರ್ಗೆಟ್ ಮಾಡಿ ಪಾಕಿಸ್ತಾನವೂ ಡ್ರೋಣ್, ಕ್ಷಿಪಣಿಗಳನ್ನು ಉಡಾಯಿಸಲು ಯತ್ನಿಸಿತ್ತು. ಇದಕ್ಕೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆ ದಾಳಿಗೆ ಯತ್ನಿಸಿದ್ದ ಪಾಕಿಸ್ತಾನದ ಡ್ರೋಣ್, ಕ್ಷಿಪಣಿಗಳನ್ನು ಹೊಡೆದುರಳಿಸಿದೆ. ಭಾರತದ ಮೇಲೆ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತ ಪಾಕ್ ಮೇಲೆ ದಾಳಿ ನಡೆಸುತ್ತಿದೆ. ಇದರಿಂದಾಗಿ ಭಾರತ್-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. https://ainkannada.com/missile-attack-on-several-areas-in-jammu-india-shoots-down-pakistani-rockets/ ಜಮ್ಮು, ಪಂಜಾಬ್, ರಾಜಸ್ಥಾನ ಗುರಿಯಾಗಿಸಿಕೊಂಡು ಪಾಕ್ ದಾಳಿ ಆರಂಭಿಸಿದರೆ, ಭಾರತ ಲಾಹೋರ್, ಇಸ್ಲಾಮಾಬಾದ್ ಮೇಲೆ ದಾಳಿ ನಡೆಸಿದ್ದು, ಅರಬ್ಬೀ ಸಮುದ್ರದಲ್ಲಿಯೂ ನೌಕಾ ಪಡೆ ದಾಳಿ ಆರಂಭಿಸಿದೆ. ಭಾರತದ ಏರ್ ಡಿಫೆನ್ಸ್ ಯೂನಿಟ್ನಿಂದ ಪಾಕ್ನ ಎಲ್ಲ ಕ್ಷಿಪಣಿಗಳನ್ನು ಉಡೀಸ್ ಮಾಡಿದೆ. ಇಸ್ರೇಲ್ ಮೇಲೆ ಹಮಾಸ್ ದಾಳಿಯ ಮಾದರಿಯಲ್ಲಿ ಪಾಕ್ ಆರ್ಮಿ ದಾಳಿ…
ನವದೆಹಲಿ:- ಭಾರತ-ಪಾಕಿಸ್ತಾನ ನಡುವಿನ ಯುದ್ಧದ ಸನ್ನಿವೇಶ ದಿನೇ-ದಿನೇ ಗಾಢವಾಗುತ್ತಿದ್ದು, ಮೇ 8ರ ಗುರುವಾರ ಪಾಕಿಸ್ತಾನದಿಂದ ಭಾರತದ ಕಡೆಗೆ ಭಾರೀ ಕ್ಷಿಪಣಿಗಳು ಉಡಾವಣೆಯಾಗಿವೆ. ಜೊತೆಗೆ, ಎಫ್ 16 , ಎಫ್ 17 ಯುದ್ಧ ವಿಮಾನಗಳನ್ನು ಕಳುಹಿಸಲಾಗಿದ್ದು ಅವೆಲ್ಲವನ್ನೂ ಭಾರತ ಹೊಡೆದುರುಳಿಸಿದೆ. ಈ ನಡುವೆ ಫೈಟರ್ ಜೆಟ್ ನಲ್ಲಿದ್ದ ಪೈಲಟ್ ಒಬ್ಬನ್ನು ಭಾರತೀಯ ಸೇನಾ ಪಡೆಗಳು ಸೆರೆ ಹಿಡಿದಿವೆ. https://ainkannada.com/operation-sindoor-pakistani-prime-minister-of-india/ ಭಾರತದ ಆಪರೇಷನ್ ಸಿಂಧೂರ್ ಗೆ ಪ್ರತ್ಯುತ್ತರವಾಗಿ ಪಾಕಿಸ್ತಾನ ಕೂಡ ಭಾರತದ ಮೇಲೆ ದಾಳಿ ಮಾಡಲಾರಂಭಿಸಿದೆ. ಮೇ 8ರ ರಾತ್ರಿಯಿಂದಲೇ ಪಾಕಿಸ್ತಾನದ ಕಡೆಯಿಂದ ಅನೇಕ ಕ್ಷಿಪಣಿಗಳು ಭಾರತದ ಜಮ್ಮು ಕಡೆಗೆ ಹಾರಿಬಂದಿದ್ದು ಅವುಗಳನ್ನು ಭಾರತದಲ್ಲಿರುವ ಕ್ಷಿಪಣಿ ನಿಗ್ರಹ ವ್ಯವಸ್ಥೆಯ ಸಹಾಯದಿಂದ ಮಾರ್ಗಮಧ್ಯದಲ್ಲೇ ಹೊಡೆದುರುಳಿಸಲಾಗಿದೆ. ಈ ದಾಳಿಗಳಲ್ಲಿ ಹಮಾಸ್ ಮಾದರಿಯ ಕ್ಷಿಪಣಿಗಳನ್ನು ಪಾಕಿಸ್ತಾನ ಉಡಾಯಿಸಿದೆ ಎಂದು ಹೇಳಲಾಗಿದೆ. ಜಮ್ಮುವನ್ನು ಗುರಿಯಾಗಿಸಿಕೊಂಡು ಮತ್ತೆ ಪಾಕಿಸ್ತಾನ ದಾಳಿ ನಡೆಸಿದ್ದು, ಕ್ಷಿಪಣಿಗಳನ್ನು ಬಳಸಿಕೊಂಡು ಹಮಾಸ್ ಸ್ಟೈಲ್ನಲ್ಲಿ ಪಾಕ್ ಆರ್ಮಿ ಆಟ್ಯಾಕ್ ಆರಂಭಿಸಿದೆ. ಆದರೆ ಭಾರತದ ಏರ್ ಡಿಫೆನ್ಸ್ ಯೂನಿಟ್ನಿಂದ ಪಾಕ್ನ…
ಇಸ್ಲಾಮಾಬಾದ್:- ಭಾರತದ ಮಿಸೈಲ್ ದಾಳಿಗೆ ಪಾಕ್ ಪ್ರಧಾನಿ ಶೇಕ್ ಆಗಿದ್ದು, ಶೆಹಬಾಜ್ ಶರೀಫ್ ಮನೆ ಬಳಿಯೇ ದಾಳಿ ನಡೆದಿದೆ. ಪಾಕ್ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಶೆಹಬಾಜ್ ಶರೀಫ್ ಅವರ ಮನೆಯಿದೆ. ಮನೆಗೆ 20 ಕಿಮೀ ದೂರದಲ್ಲೇ ಸ್ಫೋಟದ ಸದ್ದಾಗಿದೆ. https://ainkannada.com/ipl-match-is-banned-what-is-minister-santosh-lad-demand/ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಆರಂಭವಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತವು ʼಆಪರೇಷನ್ ಸಿಂದೂರ್ʼ ಕಾರ್ಯಾಚರಣೆ ಕೈಗೊಂಡಿದೆ. ಈಗಾಗಲೇ ಪಾಕಿಸ್ತಾನದ ಉಗ್ರರ ನೆಲೆಗಳನ್ನ ಉಡಿಸ್ ಮಾಡಿರುವ ಭಾರತ ಇಂದು ಪಾಕಿಸ್ತಾನದ ಪ್ರಮುಖ ನಗರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಭಾರತೀಯ ಸೇನಾಪಡೆ ಪಾಕಿಸ್ತಾನ ಹಲವು ನಗರಗಳಿಗೆ ನುಗ್ಗಿ ಹೊಡೆಯುತ್ತಿದೆ. ಪಾಕ್ ರಾಜಧಾನಿ ಇಸ್ಲಾಮಾದಾದ್, ಲಾಹೋರ್, ರಾವಲ್ಪಿಂಡಿ, ಸಿಯಾಲ್ಕೋಟ್, ಪೇಶಾವರ ಸೇರಿದಂತೆ ಹಲವು ನಗರಗಳ ಮೇಲೆ ದಾಳಿ ನಡೆಸಿದೆ. ಭಾರತೀಯ ನೌಕಾಪಡೆಯೂ ಕೂಡ INS ವಿಕ್ರಾಂತ್ ಮೂಲಕ ಆರ್ಭಟಿಸಿದ್ದು, ಕರಾಚಿ ಬಂದರಿನ ಮೇಲೆ ದಾಳಿ ಮಾಡುವ ಮೂಲಕ ಧ್ವಂಸ ಮಾಡಿದೆ ಪಾಕಿಸ್ತಾನದಲ್ಲಿ ದಿಕ್ಕು ತೋಚದ ಪರಿಸ್ಥಿತಿ ನಿರ್ಮಾಣವಾಗಿದೆ.…