Author: AIN Author

ಮಂಗಳೂರು : ಮಂಗಳೂರಿನಲ್ಲಿ ನಡದ ಗುಂಪು ಘರ್ಷಣೆಗೆ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದೆ ಕಾರಣ ಎಂದು ಹೇಳಲಾಗುತ್ತಿದೆ. ಇನ್ನೂ ಘಟನೆ ಸಂಬಂಧ ಮತ್ತೆ ಮೂವರನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. https://ainkannada.com/terrorist-attack-in-pahalgam-karnataka-coast-on-high-alert/ ಪ್ರಕರಣದ ಹಿನ್ನೆಲೆ ಮಂಗಳೂರು ನಗರದ ಕುಡುಪು ಎಂಬಲ್ಲಿ ಏಪ್ರಿಲ್ 27ರಂದು ಕ್ರಿಕೆಟ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕೇರಳದ ಮೂಲದ ಮೊಹಮ್ಮದ್ ಆಶ್ರಫ್‌ ಕೂಡ ಅಲ್ಲಿಗೆ ಬಂದಿದ್ದ. ಕ್ರಿಕೆಟ್‌ ಆಟ ಆಡುವ ವೇಳೆ ಗಲಾಟೆ ಸಂಭವಿಸಿ ಆತನ ಮೇಲೆ ಹಲ್ಲೆ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಆತ ಮರುದಿನ ಮೃತಪಟ್ಟಿದ್ದ. ಇದೀಗ ಘಟನೆಗೆ ಆತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಕಾರಣ ಎಂದು ಹೇಳಲಾಗಿದೆ. ಇನ್ನೂ ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಪ್ ಕುಮಾರ್ ಎಂಬುವರು ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಘಟನೆಗೆ, ‘‘ಪಾಕಿಸ್ತಾನ ಪಾಕಿಸ್ತಾನ’’ ಎಂದು…

Read More

ಹುಬ್ಬಳ್ಳಿ: ನಗರದ ಹೊಸ ಕೋರ್ಟ್ ಹಿಂಭಾಗದಲ್ಲಿನ ಕಲ್ಲೂರ ಲೇಔಟ್ ಮೈದಾನದಲ್ಲಿ ಮೇ 1ರಿಂದ ಮೇ 3ರವರೆಗೆ ಕರಾವಳಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಕ್ಲಬ್ ಆಫ್‌ ಹುಬ್ಬಳ್ಳಿ ಮಿಡ್‌ಟೌನ್ ಅಧ್ಯಕ್ಷ ದಿನೇಶ ಶೆಟ್ಟಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಇನ್ನರ್‌ವೀಲ್ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್‌ಟೌನ್ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೇ 1ರಂದು ಸಂಜೆ 5 ಗಂಟೆಗೆ ಕೆ.ಶಂಕರ ಶೆಟ್ಟಿ ವೇದಿಕೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದ ಜಗದೀಶ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್, ಮೇಯರ್ ರಾಮಪ್ಪ ಬಡಿಗೇರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಪೊಲೀಸ್‌ ಕಮೀಷನ‌ರ್ ಎನ್‌.ಶಶಿಕುಮಾ‌ರ್ ಪಾಲ್ಗೊಳ್ಳಲಿದ್ದಾರೆ  ಎಂದರು. https://ainkannada.com/hubli-advice-for-the-availability-of-the-self-earn-india-campaign/ ಮೇ 2 ರಂದು…

Read More

ಕಾರವಾರ : ಪಹಲ್ಗಾಮ್‌ನಲ್ಲಿ ಉಗ್ರ ದಾಳಿ ಬೆನ್ನಲ್ಲೇ ದೇಶವ್ಯಾಪಿ ಕೆಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದೇ ಹಿನ್ನೆಲೆಯಲ್ಲಿ  ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಕರಾವಳಿ ಕಾವಲು ಪಡೆ, ಭಾರತೀಯ ಕೊಸ್ಟ್ ಗಾರ್ಡ್, ನೌಕಾ ನೆಲೆ ಸಿಬ್ಬಂದಿ ಹಾಗೂ ಜಿಲ್ಲಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಮೀನುಗಾರಿಕೆ ಬೋಟ್ ಹಾಗೂ ಹಡಗುಗಳ ಮೇಲೆ ಕಣ್ಣಿಡಲಾಗಿದ್ದು, ಕರಾವಳಿ ಕಾವಲು ಪಡೆ ಹಾಗೂ ಭಾರತಿಯ ಕೊಸ್ಟಲ್ ಗಾರ್ಡ್ ಸಿಬ್ಬಂದಿ ಸಮುದ್ರದಾಳಕ್ಕೆ ಹೋಗಿ ಪ್ರತಿಯೊಂದು ಬೋಟ್​​ಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೆ ಜಿಲ್ಲೆಯ ಬಂದರುಗಳಿಗೆ ಬರುವ ಪ್ರತಿಯೋಂದು ಪರ್ಷಿಯನ್ ಬೋಟ್​​ಗಳ ಪರಿಶೀಲನೆ ನಡೆಸುತ್ತಿದ್ದಾರೆ. https://ainkannada.com/it-is-embarrassing-that-congress-keeps-speaking-in-favor-of-pakistan-minister-g-kishan-reddy/ ದೇಶದ ಅತಿ ದೊಡ್ಡ ಕದಂಬ ನೌಕಾ ನೆಲೆ ಕಾರವಾರ ಬಳಿ ಇದೆ. ಹೀಗಾಗಿ ಕಾರವಾರ ಸೇರಿದಂತೆ ಸುತ್ತಲಿನ ಗ್ರಾಮಗಳಿಗೆ ಬರುವ ವಲಸಿಗರ ಮೇಲೆ ಹದ್ದಿನ ಕಣ್ಣಿಡಲಾಗಿದೆ. ನೌಕಾನೆಲೆ ಭದ್ರತೆ ವಿಚಾರವಾಗಿ ಕೇಂದ್ರ ಗೃಹ ಇಲಾಖೆಯ ಸೂಚನೆಯ ಪ್ರಕಾರ, ನೌಕಾನೆಲೆಯ ಕೂಗಳತೆ ದೂರದಲ್ಲಿನ ರವೀಂದ್ರನಾಥ್ ಠಾಗೋರ…

Read More

ನೆಲಮಂಗಲ: ಗ್ಯಾಸ್‌ ಲೀಕೇಜ್‌ನಿಂದಾಗಿ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.  ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಓವರ್ ಟ್ಯಾಂಕ್ ಬಳಿ ಈ ಘಟನೆ ಸಂಭವಿಸಿದೆ. ನಾಗರಾಜ್ (50), ಶ್ರೀನಿವಾಸ್ (50) ಮೃತ ದುರ್ದೈವಿಗಳಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಗಂಗಯ್ಯ ಎಂಬವರಿಗೆ ಸೇರಿದ ಎರಡು ಬಾಡಿಗೆ ಮನೆಗಳಲ್ಲಿ ನಾಗರಾಜ್‌ ಅವರು  ಒಂದು ಮನೆಯನ್ನ ನಾಗರಾಜ್ ಬಾಡಿಗೆಗೆ ಪಡೆದಿದ್ದರು. ನಾಗರಾಜ್ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19), ಅಭಿಷೇಕ್ ಗೌಡ (18) ವಾಸವಾಗಿದ್ದರು. ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದ ನಾಗರಾಜ್ ದೇವರಿಗೆ ದೀಪ ಹಚ್ಚಿದ್ದರು. ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಎರಡನೇ ಮಗ ಅಭಿಷೇಕ್ ಮುಂದಾಗಿದ್ದರು. ಈ ವೇಳೆ ಸಿಲಿಂಡರ್‌ನಿಂದ ಗ್ಯಾಸ್ ಲೀಕ್ ಆಗಿದ್ದು, ದೀಪದ ಬೆಂಕಿ ತಗುಲಿದೆ. https://ainkannada.com/terrible-accident-three-people-killed/ ನಾಗರಾಜ್, ಲಕ್ಷ್ಮಿದೇವಿ, ಬಸವನಗೌಡ, ಅಭಿಷೇಕ್‌ಗೂ ಬೆಂಕಿ ಅವಘಡಕ್ಕೆ ಸಿಲುಕಿದ್ದರು. ಸ್ಥಳೀಯರು ಅವರನ್ನು ರಕ್ಷಿಸಿ, ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದರು. ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಹಾಗೂ ಬಸವ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್…

Read More

ಬೆಂಗಳೂರು:- ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಯರ್ 20ರೂ. ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಡೀಸೆಲ್, ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಮದ್ಯದ ದರ ಏರಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. https://ainkannada.com/terrible-accident-three-people-killed/ ಬಿಯರ್ ಮೇಲಿನ ಅಬಕಾರಿ ಸುಂಕವನ್ನ 195% ನಿಂದ 205% ಹೆಚ್ಚಿಸುವ ಬಗ್ಗೆ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಇದಕ್ಕೆ ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಬ್ರಾಂಡಿ, ವಿಸ್ಕಿ, ರಮ್, ಜಿನ್‍ಗಳ ದರವನ್ನ ಪ್ರತಿ ಕ್ವಾಟರ್‍ಗೆ 10 ರೂ.ನಿಂದ 15 ರೂ. ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಅಲ್ಲದೇ ಬಿಯರ್ ದರವನ್ನ 10 ರೂ. ನಿಂದ 20 ರೂ. ವರೆಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಆಲ್ಕೋಹಾಲ್ ಹೆಚ್ಚಿರುವ ಬ್ರ್ಯಾಂಡ್‍ಗಳ ಬಿಯರ್ ಬೆಲೆ ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ

Read More

ಚಿತ್ರದುರ್ಗ:- ಭೀಕರ ಅಪಘಾತ ನಡೆದು ಮೂರು ಜನ ಸ್ಥಳದಲ್ಲಿಯೇ ಮೃತಪಟ್ಟು, ಆರು ಜನರು ತೀವ್ರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದ ಸೀಬಾರದ ಬಳಿಯಿಂದು ನಡೆದಿದೆ. https://ainkannada.com/hand-protest-against-center-price-hike-today-stage-ready-for-convention/ ಮೃತರನ್ನು ಅರ್ಜುನ, ಶ್ರೀಧರ್ ಮತ್ತು ಶರವಣ ಎಂದು ಗುರುತಿಸಿದೆ. ಗಾಯಗೊಂಡವರನ್ನು ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾರ್, ರಮೇಶ್ ಮತ್ತು ಗೌತಮ್ ಎಂದು ತಿಳಿದು ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದ್ದು, ಘಟನೆಗೆ ಕಾರಣ ಎನ್ನಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಿರುದ್ಧ ʻಕೈʼ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಂವಿಧಾನ್‌ ಬಚಾವೋ ಹೆಸರಿನಲ್ಲಿ ಹೋರಾಟ ಇದಾಗಿದೆ. ನಗರದ ಗಿರಣಿ ಚಾಳ ಮೈದಾನದಲ್ಲಿ ಕಾಂಗ್ರೆಸ್‌ ಧರಣಿ ಹಮ್ಮಿಕೊಳ್ಳಲಾಗಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಯಕರಾದ ಸುರ್ಜೇವಾಲಾ, ಸಿಎಂ ಸಿದ್ದ ರಾಮಯ್ಯ, ಡಿ ಸಿಎಂ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಹಾಗೂ ಎಐಸಿಸಿ,‌ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸುವರು.ಮಧ್ಯಾಹ್ನ ಮೂರು ಗಂಟೆಗೆ ನಡೆಯುವ ಪ್ರತಿಭಟನೆ ಕೇಂದ್ರ ಸರ್ಕಾರದ ಮೇಲೆ ಸಿಡಿದೆದ್ದಿರುವ ಕಾಂಗ್ರೆಸ್ ಇಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ. https://ainkannada.com/hubli-advice-for-the-availability-of-the-self-earn-india-campaign/ ಸಂವಿಧಾನ್‌ ಬಚಾವೋ ಹೆಸರಿನಲ್ಲಿ ಪ್ರತಿಭನಾ ಸಮಾವೇಶ ಹಮ್ಮಿಕೊಳ್ಳಲಾಗಿದ್ದು 30 ಸಾವಿರನ್ನೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾರವಾರ ರಸ್ತೆಯಲ್ಲಿರುವ ಗಿರಣಿ ಚಾಳ ಮೈದಾನದಲ್ಲಿ ಮಧ್ಯಾಹ್ನ 3ಕ್ಕೆ ಕಾಂಗ್ರೆಸ್‌ ಕೇಂದ್ರ ಸರಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ಸಮಾವೇಶ ನಡೆಸಲಿದೆ. ಸಂವಿಧಾನ ಆಶಯಗಳಿಗೆ ವಿರುದ್ಧದ ಧೋರಣೆಗಳನ್ನು ಜನರಿಗೆ ತಿಳಿಸಿ ಸಂವಿಧಾನ ರಕ್ಷಿಸಿ ಎಂಬ ಸಂದೇಶ ನೀಡಲು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ…

Read More

ಹುಬ್ಬಳ್ಳಿ: ಉದ್ಯಮಿಗಳಿಗೆ ಹಾಗೂ ಆತ್ಮ ನಿರ್ಭರ ಭಾರತ ಅಭಿಯಾನ ಕಿರು ಉದ್ಯೋಗದಿಂದ ಸ್ವಾವಲಂಬಿ ಬದುಕಿಗಾಗಿ ಕೇಂದ್ರ ಸರ್ಕಾರ ಆತ್ಮ ನಿರ್ಭರ ಭಾರತ ಅಭಿಯಾನ ಕಿರು ಆಹಾರ ಸಂರಕ್ಷಣಾ ಉದ್ದಿಮೆಗಳ ಔಪಚಾರೀಕ ಯೋಜನೆ ಅತ್ಯಂತ ಉಪಯುಕ್ತವಾದ ಯೋಜನೆ ಆಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಅಭಿಪ್ರಾಯಪಟ್ಟರು. https://ainkannada.com/6-people-of-the-same-family-go-to-a-bath-in-the-river/ ನಗರದ ಲಿಂಗರಾಜನಗರದಲ್ಲಿ ಬಸವೇಶ್ವರ ಜಯಂತಿ ದಿನದಂದು ಯುವ ಉದ್ಯಮಿ ಕುಮಾರ ಧೀರಜ್ ಶಿವಯೋಗಿ ಮುಗಬಸ್ತ ಅವರ ಮಸಾಲೆ ಪದಾರ್ಥಗಳ ತಯಾರಿಕೆ ಘಟಕ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಅವರು ಮಾತನಾಡಿದರು, ಕೇಂದ್ರ ಸರ್ಕಾರ ಇಂತಹ ಅನೇಕ ಉದ್ಯೋಗ ಹಾಗೂ ಉದ್ಯಮ ಕ್ಷೇತ್ರಕ್ಕೆ ಅನುಕೂಲ ಆಗಲೆಂದು ಜಾರಿ ಮಾಡಿದ್ದು ಅದು ಸದುಪಯೋಗಪಡಿಸಿಕೊಳ್ಳಲು ಸಲಹೆ ನೀಡಿದರು. ಕರ್ನಾಟಕ ರಾಜ್ಯ ವಿದ್ಯುನ್ಮಾನ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕಲ್ಮೇಶ ಮಂಡ್ಯಾಳ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ, ಸ್ಥಳೀಯ ಎಸ್ ಬಿಐ ಬ್ಯಾಂಕ್ ಸಹಕಾರದಿಂದ ಯುವಕ ಉದ್ಯೋಗ ಪ್ರಾರಂಭಿಸಿದ್ದು ಅತ್ಯಂತ ಉಪಯುಕ್ತ ಆಗಿದೆ. ಇದು…

Read More

ಖೇಡಾ:- ಖೇಡಾ ಜಿಲ್ಲೆಯ ಮೆಶ್ವೋ ನದಿಯಲ್ಲಿ ಒಂದೇ ಕುಟುಂಬದ 6 ಮಂದಿ ನದಿ ಯಲ್ಲಿ ಮುಳುಗಿ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಘಟನೆ ಜರುಗಿದೆ. https://ainkannada.com/do-you-leave-the-dishes-unwashed-after-dinner-a-story-you-must-watch/ ಕನಿಜ್ ಗ್ರಾಮದ ಬಳಿಯ ನದಿಯಲ್ಲಿ ಸಂಜೆ ಸ್ನಾನ ಮಾಡಲು ಆರು ಮಂದಿ ತೆರಳಿದ್ದರು. ನೀರಿನ ಆಳ ತಿಳಿಯದೇ ಇಳಿದು ಈಜಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ತಂಡವು ಸ್ಥಳಕ್ಕೆ ತಲುಪಿ ಅವರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಯಿತು ಎಂದು ಖೇಡಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಗಾಧಿಯಾ ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ ಫ್ಯಾಮಿಲಿ ಮ್ಯಾನ್ 3ಯಲ್ಲಿ ನಟಿಸಿದ್ದ ರೋಹಿತ್ ಎಂಬುವವರ ಮೃತದೇಹ ಜಲಪಾತದ ಬಳಿ ಪತ್ತೆಯಾಗಿದೆ. ಮಧ್ಯಾಹ್ನ ಗರ್ಭಂಗ ಜಲಪಾತದ ಬಳಿ ಅವರ ಮೃತದೇಹ ಪತ್ತೆಯಾಗಿದೆ. ರೋಹಿತ್ ತನ್ನ ಒಂಬತ್ತು ಸಹೋದ್ಯೋಗಿಗಳೊಂದಿಗೆ ಪಿಕ್ನಿಕ್‌ಗೆ ಹೋಗಿದ್ದಾಗ ಜಲಪಾತಕ್ಕೆ ಬಿದ್ದಿದ್ದಾನೆ ಎಂದು ವರದಿಯಾಗಿದೆ. ಆಕಸ್ಮಿಕವಾಗಿ ರೋಹಿತ್ ಜಲಪಾತಕ್ಕೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ, ಇದುವರೆಗೆ ಬೇರೆ ಯಾವುದೆ ಅನುಮಾನ ವ್ಯಕ್ತವಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

Read More

ಮನೆ ಕೆಲಸಗಳನ್ನು ನಿರ್ವಹಿಸುವ ನಿಯಮಗಳನ್ನು ಧರ್ಮಗ್ರಂಥಗಳಲ್ಲಿ ವಿವರಿಸಲಾಗಿದೆ. ಈ ನಿಯಮಗಳಲ್ಲಿ ಒಂದು ರಾತ್ರಿಯಲ್ಲಿ ಅಡುಗೆ ಮನೆಯಲ್ಲಿ ಎಂಜಲು ಪಾತ್ರಗಳನ್ನು ಬಿಡುವುದನ್ನು ನಿಷೇಧಿಸಲಾಗಿದೆ. ಧರ್ಮಗ್ರಂಥಗಳ ಪ್ರಕಾರ, ರಾತ್ರಿಯಲ್ಲಿ ಎಂಜಲು ಪಾತ್ರೆಗಳನ್ನು ಬಿಡುವುದರಿಂದ, ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಯು ಕೋಪಗೊಳ್ಳುತ್ತಾಳೆ. ಯಾವ ಮನೆ ಸ್ವಚ್ಚವಾಗಿರುತ್ತೋ, ಆ ಮನೆಯಲ್ಲಿ ಲಕ್ಷ್ಮಿ ದೇವಿಯು ವಾಸಿಸುತ್ತಾಳೆ. https://ainkannada.com/increase-amul-milk-rate-enforcement-from-today/ ರಾತ್ರಿಯಲ್ಲಿ ಕೊಳಕು ಪಾತ್ರೆಗಳನ್ನು ಇಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಡುತ್ತದೆ. ಇದು ಆರ್ಥಿಕ ತೊಂದರೆಗಳು, ಬಡತನ ಮತ್ತು ಕೌಟುಂಬಿಕ ವಿವಾದಗಳಿಗೆ ಕಾರಣವಾಗಬಹುದು. ಇಷ್ಟು ಮಾತ್ರವಲ್ಲದೆ ಕೊಳಕು ಪಾತ್ರೆಗಳಲ್ಲಿ ಬ್ಯಾಕ್ಟೀರಿಯಾಗಳು ಉತ್ಪತ್ತಿಯಾಗುತ್ತವೆ. ಇದು ಅಡುಗೆ ಮನೆ ಮತ್ತು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಮಥುರಾದ ಪಂಡಿತ್ ಮದನ್ ಮೋಹನ್ ಅವರ ಪ್ರಕಾರ, ರಾತ್ರಿಯಲ್ಲಿ ಕೊಳಕು ಪಾತ್ರೆಗಳನ್ನು ಇಡುವುದರಿಂದ ಅನ್ನಪೂರ್ಣ ದೇವಿ ಕೋಗೊಳ್ಳುತ್ತಾಳೆ. ಇದು ಮನೆಯ ಯೋಗಕ್ಷೇಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ. ರಾತ್ರಿಯಿಡೀ ಕೊಳಕು ಪಾತ್ರೆಗಳನ್ನು ಸಿಂಕ್‌ನಲ್ಲಿ ಇಡುವುದರಿಂದ ಆಹಾರ ಕಣಗಳು ಮತ್ತು ತೇವಾಂಶದಿಂದಾಗಿ ಬ್ಯಾಕ್ಟೀರಿಯಾಗಳು ವೇಗವಾಗಿ ಬೆಳೆಯಲು…

Read More