Author: AIN Author

ಬೆಂಗಳೂರು:- ಜನಗಣತಿಯೊಂದಿಗೆ ಜಾತಿ ಗಣತಿಗೆ ತೀರ್ಮಾನಿಸಿರುವ ಕೇಂದ್ರದ ನಿರ್ಧಾರವನ್ನು ಸಚಿವ HD ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇದು ಮೋದಿ ಅವರ ದಿಟ್ಟ ಹೆಜ್ಜೆ ಎಂದಿದ್ದಾರೆ. https://ainkannada.com/tractor-overturns-in-the-middle-of-the-road-one-worker-dies-8-injured/ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ ಎಂದಿದ್ದಾರೆ. ಈ ಮಹತ್ವದ ಹೆಜ್ಜೆ ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಹೇಳಿದರು

Read More

ಬಳ್ಳಾರಿ:: ನಡುರಸ್ತೆಯಲ್ಲೇ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, 8 ಮಂದಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ನಾಗಲಾಪುರ ಗ್ರಾಮದ ಬಳಿ ಜರುಗಿದೆ. https://ainkannada.com/if-the-caste-census-of-the-people-is-ugly-it-should-not-be-a-census-of-the-officials-rahul-gandhi/ ಜ್ಯೋತಿಲಾಲ್ ತುಡು (35) ಸಾವನ್ನಪ್ಪಿರುವ ಕಾರ್ಮಿಕ. ವಿಂಡ್ ಫ್ಯಾನ್‌ ಕೆಲಸಕ್ಕೆಂದು ಬಂದಿದ್ದ ಬಿಹಾರ ಹಾಗೂ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ಟ್ರಾಕ್ಟರ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಕೈ, ಕಾಲು ಮುರಿದಿದ್ದು, ಗಂಭೀರ ಗಾಯಗಳಾಗಿವೆ. ಉಳಿದಂತೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೂಡ್ಲಿಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗ್ತಿದೆ.

Read More

ನವದೆಹಲಿ:- ಕೇಂದ್ರದ ನಿರ್ಧಾರ ಸ್ವಾಗತ..ಜನರ ಜಾತಿಗಣತಿ ಆಗ್ಲಿ, ಆದರೆ ಅಧಿಕಾರಿಗಳ ಗಣತಿ ಆಗಬಾರದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. https://ainkannada.com/foreign-womans-body-found-suspiciously-suspicion-surrounds-death-2/ ಕೇಂದ್ರ ಸರ್ಕಾರದ ಜಾತಿ ಜನಗಣತಿ ನಿರ್ಧಾರ ತಡವಾದರೂ ನಾನು ಇದನ್ನೂ ಸ್ವಾಗತ ಮಾಡುತ್ತೇನೆ ಎಂದು ರಾಹುಲ್ ಹೇಳಿದ್ದಾರೆ. ಪಹಲ್ಗಾಮ್ ದಾಳಿಯ ಸಮಯದಲ್ಲೇ ಜಾತಿ ಜನಗಣತಿ ಯಾಕೆ ಘೋಷಣೆ ನಿರ್ಧಾರ ಯಾಕೆ ಮಾಡಿದ್ದಾರೆ ಎನ್ನುವುದು ನಂಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಸರ್ಕಾರ ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಇದು ಜನರ ಜಾತಿಗಣತಿ ಆಗಬೇಕು, ಅಧಿಕಾರಿಗಳ ಗಣತಿ ಆಗಬಾರದು. ಇದನ್ನು ಹೇಗೆ ಮಾಡ್ತಾರೆ ಎಂದು ಹೇಳಬೇಕು ಎಂದರು ಜಾತಿಗಣತಿ ಹಾಗೂ ಜನಗಣತಿಗೆ ಅವಧಿ, ಸಮಯ ನಿರ್ಧಾರ ಮಾಡಬೇಕು. ಬಜೆಟ್‌ನಲ್ಲಿ ಹಣವನ್ನು ನಿಗದಿಪಡಿಸಬೇಕು. ಬಜೆಟ್‌ನ್ನು ಹಣ ತೆಗೆದಿರಿಸುವ ಬಗ್ಗೆ ಮಾಹಿತಿ ನೀಡಬೇಕು. ನಮ್ಮ ಆಗ್ರಹ, ಒತ್ತಡಕ್ಕೆ ಪ್ರಧಾನಿ ಮೋದಿ ಅವರು ಸ್ಪಂದಿಸಿದಕ್ಕೆ ಅವರಿಗೆ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದರು. ನಮ್ಮ ಪಕ್ಷ ಸಮೀಕ್ಷೆಗೆ ಆಗ್ರಹಿಸಿ ದೇಶದಲ್ಲೆಡೆ ಅಭಿಯಾನ ಆರಂಭಿಸಿದ್ದೆವು. ಜಾತಿಗಣತಿಯಿಂದಾಗಿ ಅಭಿವೃದ್ದಿಗೆ ಹಲವು…

Read More

ಬೆಂಗಳೂರು :- ನಿರ್ಜನ ಪ್ರದೇಶದಲ್ಲಿ ವಿದೇಶಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ತರಹುಣಸೆ ಗ್ರಾಮದ ನಿರ್ಜನ ಪ್ರದೇಶದಲ್ಲಿ ಜರುಗಿದೆ. https://ainkannada.com/cm-siddaramaiah-welcomes-the-central-governments-caste-census-decision/ ಮೃತಳನ್ನು ಆಫ್ರಿಕಾದ ನೈಜೀರಿಯಾದ ಕ್ರಾಸ್ ರಿವರ್ ಮೂಲದ ಲೋವೆತ್ ಎಂದು ಗುರುತಿಸಲಾಗಿದೆ. ಮೃತಳ ಪಾಸ್ ಪೋರ್ಟ್ ಚಿಕ್ಕ ಮಜಾಲ ಪೊಲೀಸರಿಗೆ ಪತ್ತೆಯಾಗಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿ ನೆಲೆಸಿದ್ದಳು ಎಂದು ತಿಳಿದುಬಂದಿದೆ. ಮೃತ ಮಹಿಳೆ ಮೂಲತಃ ಆಫ್ರಿಕಾದ ಕ್ರಾಸ್ ರಿವರ್ ರಾಜ್ಯದ ಮಹಿಳೆ‌. ಮಹಿಳೆ ಹಿನ್ನಲೆ ಪರಿಶೀಲನೆ ನಡೆಸ್ತಿರುವ ಪೊಲೀಸರು, ಆಕೆ ಭಾರತಕ್ಕೆ ಬಂದಿದ್ದರ ಹಿಂದಿನ ಉದ್ದೇಶವೇನು? ಕಳೆದ ರಾತ್ರಿ ಕೊಲೆಗೂ ಮುನ್ನ ಆಕೆ ಸಂಪರ್ಕದಲ್ಲಿದ್ದವರು ಯಾರು ಎನ್ನುವುದರ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ. ಇನ್ನು ಪೋರೆ‌ನ್ಸಿಕ್ ತಂಡದೊಂದಿಗೆ ಕೃತ್ಯ ನಡೆದ ಕ್ರೈಂ ಸ್ಪಾಟ್ ಗೆ ದೌಡಯಿಸಿದ ಚಿಕ್ಕಜಾಲ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತಳ ಗುರುತು ಪತ್ತೆಹಚ್ಚಲು ಮುಂದಾಗಿದ್ದಾರೆ ವಿದೇಶಿ ಮಹಿಳೆ ಮೃತದೇಹ ಮರಣೋತ್ತರ ಪರೀಕ್ಷೆಗೆ ಅಂಬೇಡ್ಕರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ಲೋವಿತ…

Read More

ಬೆಂಗಳೂರು :- ನಿರ್ಜನ ಪ್ರದೇಶದಲ್ಲಿ ವಿದೇಶಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ತರಹುಣಸೆ ಗ್ರಾಮದ ನಿರ್ಜನ ಪ್ರದೇಶದಲ್ಲಿ ಜರುಗಿದೆ. https://ainkannada.com/cm-siddaramaiah-welcomes-the-central-governments-caste-census-decision/ ಮೃತಳನ್ನು ಆಫ್ರಿಕಾದ ನೈಜೀರಿಯಾದ ಕ್ರಾಸ್ ರಿವರ್ ಮೂಲದ ಲೋವೆತ್ ಎಂದು ಗುರುತಿಸಲಾಗಿದೆ. ಮೃತಳ ಪಾಸ್ ಪೋರ್ಟ್ ಚಿಕ್ಕ ಮಜಾಲ ಪೊಲೀಸರಿಗೆ ಪತ್ತೆಯಾಗಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿ ನೆಲೆಸಿದ್ದಳು ಎಂದು ತಿಳಿದುಬಂದಿದೆ. ಮೃತ ಮಹಿಳೆ ಮೂಲತಃ ಆಫ್ರಿಕಾದ ಕ್ರಾಸ್ ರಿವರ್ ರಾಜ್ಯದ ಮಹಿಳೆ‌. ಮಹಿಳೆ ಹಿನ್ನಲೆ ಪರಿಶೀಲನೆ ನಡೆಸ್ತಿರುವ ಪೊಲೀಸರು, ಆಕೆ ಭಾರತಕ್ಕೆ ಬಂದಿದ್ದರ ಹಿಂದಿನ ಉದ್ದೇಶವೇನು? ಕಳೆದ ರಾತ್ರಿ ಕೊಲೆಗೂ ಮುನ್ನ ಆಕೆ ಸಂಪರ್ಕದಲ್ಲಿದ್ದವರು ಯಾರು ಎನ್ನುವುದರ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ. ಇನ್ನು ಪೋರೆ‌ನ್ಸಿಕ್ ತಂಡದೊಂದಿಗೆ ಕೃತ್ಯ ನಡೆದ ಕ್ರೈಂ ಸ್ಪಾಟ್ ಗೆ ದೌಡಯಿಸಿದ ಚಿಕ್ಕಜಾಲ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತಳ ಗುರುತು ಪತ್ತೆಹಚ್ಚಲು ಮುಂದಾಗಿದ್ದಾರೆ ವಿದೇಶಿ ಮಹಿಳೆ ಮೃತದೇಹ ಮರಣೋತ್ತರ ಪರೀಕ್ಷೆಗೆ ಅಂಬೇಡ್ಕರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ಲೋವಿತ…

Read More

ಬೆಂಗಳೂರು:- ಕೇಂದ್ರ ಸರ್ಕಾರದ ಜಾತಿ ಗಣತಿ ನಿರ್ಧಾರವನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ. https://ainkannada.com/attention-diabetics-just-smelling-this-leaf-will-bring-your-sugar-under-control/ ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೇ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ ಎಂದು ತಿಳಿಸಿದರು. ವೈಜ್ಞಾನಿಕವಾದ…

Read More

ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆಯಿಂದ ಹಾರ್ಟ್ ಅಟ್ಯಾಕ್ ಸಂಭವ ಹೆಚ್ಚಾಗಿದೆ. ನಮ್ಮ ಜೀವನ ಶೈಲಿ ಇದಕ್ಕೆ ಪ್ರಮುಖವಾದ ಕಾರಣವಾಗಿದೆ. ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ಅದರಿಂದ ಹಲವು ಬಗೆಯ ಆರೋಗ್ಯ ಸಮಸ್ಯೆಗಳು ಕೂಡ ಶುರುವಾಗುತ್ತವೆ. ಆದರೆ ಸಕ್ಕರೆ ಕಾಯಿಲೆಯನ್ನು ಸರಿಯಾದ ರೀತಿಯಲ್ಲಿ ಹೇಗೆ ನಿಯಂತ್ರಣ ಮಾಡಿಕೊಳ್ಳುವುದು ಎನ್ನುವುದು ಹಲವರ ಗೊಂದಲ. https://ainkannada.com/rain-news-heavy-rain-for-another-six-days-in-these-districts-of-karnataka/ ಮಧುಮೇಹ ರೋಗಿಗಳಲ್ಲಿ ಹೆಚ್ಚಿನ ಸಕ್ಕರೆ ಮಟ್ಟದಿಂದಾಗಿ ರಕ್ತನಾಳಗಳು ಹಾನಿಗೊಳಗಾಗಲು ಪ್ರಾರಂಭಿಸುತ್ತವೆ. ರಕ್ತದೊತ್ತಡದ ಮೇಲೂ ಪರಿಣಾಮ ಬೀರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ದೊಡ್ಡಪತ್ರೆ ಎಲೆಗಳನ್ನು ತಿನ್ನುವುದು ಸಕ್ಕರೆಯ ಜೊತೆಗೆ ಬಿಪಿಯನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಇದರ ತಂಪಾಗಿಸುವ ಗುಣಗಳು ರಕ್ತನಾಳಗಳನ್ನು ಆರೋಗ್ಯವಾಗಿಡುತ್ತದೆ ಮತ್ತು ರಕ್ತದೊತ್ತಡವನ್ನು ಕಾಪಾಡಿಕೊಳ್ಳುತ್ತದೆ. ಮಧುಮೇಹ ರೋಗಿಗಳ ಚಯಾಪಚಯ ಕ್ರಿಯೆ ಕಳಪೆಯಾದಾಗ, ಉಪವಾಸದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ದೊಡ್ಡಪತ್ರೆ ಎಲೆಗಳನ್ನು ಸೇವಿಸುವುದರಿಂದ ಚಯಾಪಚಯ ಕ್ರಿಯೆಯನ್ನು ವೇಗಗೊಳಿಸಲು ಮತ್ತು ಜೀರ್ಣಕಾರಿ ಕಿಣ್ವಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಸಕ್ಕರೆ ಚಯಾಪಚಯ ಕ್ರಿಯೆಯನ್ನು ಸರಿಯಾಗಿರಿಸುತ್ತದೆ ಮತ್ತು ಉಪವಾಸದ ಸಕ್ಕರೆ…

Read More

ಬೆಂಗಳೂರು :- ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ ಆರು ದಿನಗಳು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/do-you-know-the-benefits-of-black-pepper-in-your-kitchen/ ಮುಂದಿನ 03 ದಿನ ಬೆಂಗಳೂರು ನಗರ, ದಾವಣಗೆರೆ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಬರಬಹುದು ಎನ್ನಲಾಗಿದೆ. ನಂತರ ಮೂರು ದಿನ ಭರ್ಜರಿ ಮಳೆ ಆರ್ಭಟ ಕಂಡು ಬರಲಿದೆ. ಗುಡುಗು ಮಿಂಚು ಸಹಿತ ಪೂರ್ವ ಮುಂಗಾರು ಮಳೆ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಸುರಿಯಲಿದೆ ಎಂದು ಅಂದಾಜಿಸಲಾಗಿದೆ. ಮೇ 6ರವರೆಗೆ ಬೆಂಗಳೂರು ನಗರ ಸೇರಿದಂತೆ ಬೆಂಗಳುರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಮಂಡ್ಯ ಸೇರಿದಂತೆ ಈ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಆಗಲಿದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ

Read More

ಮಸಾಲೆಗಳ ರಾಜ ಎಂದೇ ಕರೆಯಲ್ಪಡುವ ಕರಿ ಮೆಣಸು ಅಥವಾ ಕಾಳು ಮೆಣಸು ಅನೇಕ ಆರೋಗ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ. ಕಾಳುಮೆಣಸನ್ನು ಸೇವಿಸುವುದರಿಂದ ತೂಕವನ್ನು ಇಳಿಸಿಕೊಳ್ಳಬಹುದು. ಇದು ಜೀರ್ಣಕ್ರಿಯೆಗೆ ಸಹಕಾರಿ. ಇದು ದೇಹದ ವಿಷವನ್ನು ಹೊರಹಾಕುವ ಮೂಲಕ ಕ್ಯಾನ್ಸರ್ ಅನ್ನು ತಡೆಯುತ್ತದೆ ಎಂದು ಹೇಳಲಾಗುತ್ತದೆ. https://ainkannada.com/ksrtc-driver-prays-namaz-while-sitting-on-passenger-seat/ ಕರಿಮೆಣಸು ನಿಮ್ಮ ಒಟ್ಟಾರೆ ಆರೋಗ್ಯವನ್ನು ಗಣನೀಯವಾಗಿ ಸುಧಾರಿಸುತ್ತದೆ. ಇದನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಕಾಳು ಮೆಣಸಿನ ಇನ್ನಷ್ಟು ಆರೋಗ್ಯ ಪ್ರಯೋಜನಗಳನ್ನು ಇಲ್ಲಿ ತಿಳಿದುಕೊಳ್ಳೋಣ. ಕರಿಮೆಣಸು ಮತ್ತು ಹಾಲಿನ ಸಂಯೋಜನೆಯು ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಪ್ರಯೋಜನಕಾರಿಯಾದ ಹಲವಾರು ಚಿಕಿತ್ಸಕ ಗುಣಲಕ್ಷಣಗಳನ್ನು ಒಳಗೊಂಡಿದೆ. ಹಾಲು ವಿಟಮಿನ್ ಬಿ 2, ಕ್ಯಾಲ್ಸಿಯಂ, ಪ್ರೋಟೀನ್, ವಿಟಮಿನ್ ಬಿ 12, ವಿಟಮಿನ್ ಡಿ, ಸತು, ಪೊಟ್ಯಾಸಿಯಮ್, ರಂಜಕ ಮತ್ತು ಇತರ ಸೂಕ್ಷ್ಮ ಪೋಷಕಾಂಶಗಳನ್ನು ಒಳಗೊಂಡಂತೆ ವಿವಿಧ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಹೆಲ್ತ್‌ಲೈನ್‌ನಲ್ಲಿನ ಸುದ್ದಿ ಲೇಖನದ ಪ್ರಕಾರ, ಕರಿಮೆಣಸನ್ನು ಹಾಲಿನೊಂದಿಗೆ ಸೇರಿಸಿ…

Read More

ಹಾವೇರಿ:- ಕೆ ಎಸ್ ಆರ್ ಟಿಸಿ ಚಾಲಕನೋರ್ವ ಪ್ರಯಾಣಿಕರ ಸೀಟ್ ಮೇಲೆ ಕುಳಿತು ನಮಾಝ್ ಮಾಡಿರುವ ಘಟನೆ ಹಾವೇರಿಯಲ್ಲಿ ಜರುಗಿದೆ. ಪ್ರಯಾಣಿಕರಿದ್ರೂ ಸಹ ಚಾಲಕನೋರ್ವ ಬಸ್​ ನಿಲ್ಲಿಸಿ ನಮಾಜ್​ ಮಾಡಿದ್ದಾನೆ. https://ainkannada.com/heavy-rain-in-bangalore-capital-cool-cool/ ಏಪ್ರಿಲ್ 29ರ ಸಂಜೆ ಹುಬ್ಬಳ್ಳಿಯಿಂದ ಹಾವೇರಿಯತ್ತ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್ಸನ್ನು ಮಾರ್ಗಮಧ್ಯ ನಿಲ್ಲಿಸಿ ನಮಾಜ್ ಮಾಡಿದ್ದಾನೆ. ಬಸ್ ನಲ್ಲಿ ಪ್ರಯಾಣಿಕರನ್ನ ಇದ್ದರೂ ಕರ್ತವ್ಯದ ಅವಧಿಯಲ್ಲಿಯೇ ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಕಂ ಕಂಡಕ್ಟರ್ ಸೀಟಿನ ಮೇಲೆ ಕುಳಿತು ನಮಾಜ್ ಮಾಡಿದ್ದು, ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ, ಸಧ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Read More