Author: AIN Author

ಚಿಕ್ಕಬಳ್ಳಾಪುರ:- ಗ್ಯಾರಂಟಿಗಳಿಂದ ಖಜಾನೆ ಖಾಲಿ ಆಗಿಲ್ಲ. ಬಿಜೆಪಿಯವರ ಮಾತು ನಂಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. https://ainkannada.com/series-accident-between-3-cars-person-death-five-injuries/ ಈ ಸಂಬಂಧ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಖಜಾನೆ ಖಾಲಿ, ಪಾಪರ್ ಸರ್ಕಾರ ಎಂದು ಬಿಜೆಪಿಯವರು ಟೀಕೆ ಮಾಡುತ್ತಾರೆ. ಬಿಜೆಪಿಯವರ ಮಾತಲ್ಲಿ ಎಳ್ಳಷ್ಟು ಸತ್ಯ ಇಲ್ಲ ಎಂದರು. ಚುನಾವಣಾ ಪೂರ್ವದಲ್ಲಿ ಜನರಿಗೆ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಿದ್ದೆವು. ಅಧಿಕಾರಕ್ಕೆ ಬಂದ ಕೂಡಲೇ ನಾವು 5 ಗ್ಯಾರಂಟಿಗಳನ್ನ ಜನರಿಗೆ ಕೊಡುತ್ತಿದ್ದೇವೆ. 2 ವರ್ಷದಲ್ಲಿ 80 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದೇವೆ. ಈ ವರ್ಷವೂ ಕೂಡ 50 ಸಾವಿರ ಕೋಟಿಗೂ ಹೆಚ್ಚು ಹಣ ಬಜೆಟ್‌ನಲ್ಲಿಟ್ಟಿದ್ದೇವೆ. ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಹಾಗಿದ್ರೆ ಇಂದು 1,000 ಕೋಟಿಗೂ ಅಧಿಕ ಕಾಮಗಾರಿಗಳಿಗೆ ಚಾಲನೆ ಕೊಡೋಕೆ ಆಗುತ್ತಿತ್ತಾ? ಪಾಪರ್ ಆಗಿರುವ ಸರ್ಕಾರ ಈ ಕೆಲಸ ಮಾಡಲು ಸಾಧ್ಯ ಇಲ್ಲ ಎಂದರು ಬಿಜೆಪಿಯವರು ಜನಾಕ್ರೋಶ ಅಂತ ಹೋರಾಟ ಮಾಡುತ್ತಿದ್ದಾರೆ. ಸುರ್ಜೇವಾಲರು ಹೇಳಿರುವ ಹಾಗೆ ಗೋಡೆ ಮಂಕಾಗಿದೆ, ಕೊಳಕಾಗಿದೆ ಎಂದು ಹೆಣ್ಣುಮಗಳು…

Read More

ಕೋಲಾರ:- ಕೋಲಾರ ತಾಲೂಕಿನ ನರಸಾಪುರ ಬಳಿಯ ಬೆಳ್ಳೂರು ಬ್ರಿಡ್ಜ್ ಬಳಿ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ಜರುಗಿದೆ. https://ainkannada.com/bjp-does-not-want-hindu-muslim-minister-jameer-kidi/ ಮೂರು ಕಾರುಗಳ ನಡುವೆ ಈ ಅಪಘಾತ ಸಂಭವಿಸಿ ದುರಂತ ಸಂಭವಿಸಿದೆ. ಅಫ್ರೋಜ್ ಮೃತ ದುರ್ದೈವಿ. ಬೆಳ್ಳೂರು ಗೇಟ್‌ ಬಳಿಯ ಚೆನ್ನೈ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 76ರಲ್ಲಿ ಇಂಡಿಕಾ, ಫಾರ್ಚುನರ್‌ ಹಾಗೂ ಪೊಲೋ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ವೇಳೆ ಪೊಲೋ ಕಾರಿನಲ್ಲಿದ್ದ ಬೆಂಗಳೂರು ಆರ್‌.ಟಿ ನಗರದ ನಿವಾಸಿ ಅಫ್ರೂಜ್‌ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಅಫ್ರೂಜ್‌ ಮುಳಬಾಗಿಲಿನ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ತೆರಳಿದ್ದರು. ಇನ್ನೂ ಘಟನೆಯಲ್ಲಿ ಗಾಯಗೊಂಡ ಐವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ

Read More

ಚಿಕ್ಕಬಳ್ಳಾಪುರ:- ಬಿಜೆಪಿಯವರಿಗೆ ಅಧಿಕಾರ ಬಿಟ್ಟು ಏನು ಬೇಕಾಗಿಲ್ಲ. ಹಿಂದೂ-ಮುಸ್ಲಿಂ ಯಾರು ಬೇಕಿಲ್ಲ ಎಂದು ಸಚಿವ ಜಮೀರ್ ಕಿಡಿಕಾರಿದ್ದಾರೆ. https://ainkannada.com/rcb-revenge-against-delhi-dc-silent-for-karnal-kohli/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಾವು ಕಾಂಗ್ರೆಸ್‌ನವರು ಸಾಧನೆಗಳ ಮೂಲಕ ಮತಯಾಚನೆ ಮಾಡ್ತೀವಿ. ಬಿಜೆಪಿಯವರು ಎಂದಾದರೂ ಸಾಧನೆಗಳ ಮೂಲಕ ಮತ ಕೇಳಿದ್ದಾರಾ? ಆದ್ರೆ ಬಿಜೆಪಿಯವರು ಹಿಂದೂ ಮುಸ್ಲಿಂ ಅಂತ ಬೇಧಭಾವ ಮಾಡಿ ಮತ ಕೇಳ್ತಾರೆ. ಅವರಿಗೆ ಹಿಂದೂಗಳು ಬೇಕಿಲ್ಲ ಮುಸ್ಲಿಮರೂ ಬೇಕಿಲ್ಲ ಬೇಕಿರೋದು ಅಧಿಕಾರ ಮಾತ್ರ ಅಂತ ಕಿಡಿ ಕಾರಿದ್ದಾರ ಹಿಂದೂ, ಮುಸ್ಲಿಂ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಇಸ್ಲಾಂ ನಲ್ಲಿ ಜಾತಿ ಧರ್ಮ ಭೇದ ಭಾವ ಮಾಡಿ ಅಂತ ಹೇಳಿಲ್ಲ. ʻಸಾರೇ ಜಹಾನ್ಸೇ ಅಚ್ಚಾ ಹಿಂದೂಸ್ತಾನ್ ಹಮಾರಾʼ ಅಂತ ಇಸ್ಲಾಂ ಧರ್ಮ ಹೇಳಿಕೊಟ್ಟಿರೋದು ಅಂತ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

Read More

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2025ರ ಐಪಿಎಲ್ ನ ತನ್ನ 10ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. https://ainkannada.com/this-pile-has-come-to-the-wedding-of-the-wedding-mondays-rashi-future-28-april-2025/ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು. ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ ಇನ್ನೂ 9 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು. ಈ ಮೂಲಕ ಆರ್ ಸಿಬಿ ತನ್ನ ಅಂಕಗಳ ಗಳಿಕೆಯನ್ನು 14ಕ್ಕೆ ಏರಿಸಿಕೊಂಡಿದ್ದು ಮಾತ್ರವಲ್ಲದೇ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹಾಲಿ ಟೂರ್ನಿಯಲ್ಲಿ ಆರ್ ಸಿಬಿ ಒಟ್ಟು 10 ಪಂದ್ಯಗಳ ಪೈಕಿ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿ 3 ಪಂದ್ಯಗಳಲ್ಲಿ ಸೋಲು ಕಂಡಿದೆ. ಆ ಮೂಲಕ 14 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದೆ. ಅಂತೆಯೇ ಆರ್ ಸಿಬಿ ತನ್ನನೆಟ್ ರನ್…

Read More

ಸೂರ್ಯೋದಯ- 5.55 ಬೆ. ಸೂರ್ಯಾಸ್ತ – 6:31 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ಪಾಡ್ಯ ನಕ್ಷತ್ರ – ಭರಣಿ ಯೋಗ – ಆಯುಷ್ಮಾನ್ ಕರಣ – ಕಿಂಸ್ತುಘ್ನ *ಮಳೆ ನಕ್ಷತ್ರ :ಭರಣಿ* ರಾಹು ಕಾಲ – 07:30 ದಿಂದ 09:00 ವರೆಗೆ ಯಮಗಂಡ – 10:30 ದಿಂದ 12:00 ವರೆಗೆ ಗುಳಿಕ ಕಾಲ – 01:30 ದಿಂದ 03:00 ವರೆಗೆ ಬ್ರಹ್ಮ ಮುಹೂರ್ತ – 4:19 ಬೆ. ದಿಂದ 5:07 ಬೆ.ವರೆಗೆ ಅಮೃತ ಕಾಲ – 5:24 ಸಂಜೆ.ದಿಂದ 6:48 ಸಂಜೆ. ವರೆಗೆ ಅಭಿಜಿತ್ ಮುಹುರ್ತ – 11:48 ಬೆ. ದಿಂದ 12:38 ಮ. ವರೆಗೆ ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ,…

Read More

ದೇವನಹಳ್ಳಿ : ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರ ಜತೆಗೆ, ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ರಾಜ್ಯದ ಜನರ ಋಣ ತೀರಿಸುವ ಕೆಲಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.   ದೇವನಹಳ್ಳಿಯಲ್ಲಿ ಭಾನುವಾರ ನಡೆದ ಸಾಧನಾ ಸಮಾವೇಶ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದ ಅವರು, ಇದು ಸಾಧನೆಯ ಸಮಾವೇಶ. ಅಧಿಕಾರ ನಶ್ವರ, ಸಾಧನೆಗಳು ಅಜರಾಮರ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನೇ ಈಶ್ವರ. ರಾಜ್ಯದ ಮತದಾರರು 136 ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ನಮಗೆ ಅಧಿಕಾರ ಕೊಟ್ಟಿದ್ದೀರಿ. ಇಬ್ಬರು ಪಕ್ಷೇತರರು ಹಾಗೂ ಮತ್ತಿಬ್ಬರು ಶಾಸಕರು ಉಪಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಆಮೂಲಕ ನಮ್ಮದು 140 ಸಂಖ್ಯಾಬಲದ ಸರ್ಕಾರ. ಈ ಸರ್ಕಾರ ಇಂದು ನಿಮ್ಮ ಋಣ ತೀರಿಸುವ ಕೆಲಸ ಮಾಡಿದೆ ಎಂದರು. ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಮುನಿಯಪ್ಪ ಅವರ ನೇತೃತ್ವದಲ್ಲಿ ಶರತ್ ಬಚ್ಛೆಗೌಡ…

Read More

ಮುಂಬೈ: ಇಡಿ ಕಚೇರಿಯ ಕಟ್ಟದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.  ದಕ್ಷಿಣ ಮುಂಬೈನಲ್ಲಿರುವ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಕೈಸರ್-ಐ-ಹಿಂದ್ ಕಟ್ಟಡದಲ್ಲಿರುವ ಇಡಿ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ಮಧ್ಯಾಹ್ನ 3.33ರ ಸುಮಾರಿಗೆ ಘಟನೆ ನಡೆದಿದ್ದು, ಇದಕ್ಕಿದ್ದಂತೆ ಕಟ್ಟಡದಲ್ಲಿ ಭಾರೀ ಬೆಂಕಿ ಉಂಟಾಗಿದ್ದು, ಇಡಿ ಕಚೇರಿಯ ಐದು ಅಂತಸ್ತಿನ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಮಾತ್ರ ಬೆಂಕಿ ಉಂಟಾಗಿದೆ. ಎಂಟು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ, ಸುಮಾರು 12 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿಯ ತಹಬದಿಗೆ ತಂದಿದ್ದಾಋೆ. https://ainkannada.com/van-collides-with-bike-falls-into-well-11-dead/ ಆಷ್ಟರಲ್ಲಾಗಲೇ ಕಡತಗಳು, ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬೆಂಕಿ ಅವಘಡಕ್ಕೆ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.

Read More

ಮಧ್ಯಪ್ರದೇಶ : ವೇಗವಾಗಿ ಬಂದ ವ್ಯಾನ್ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಬಾವಿಗೆ ಉರುಳಿ ಬಿದ್ದಿದೆ. ಈ ಅವಘಡದಲ್ಲಿ ಬೈಕ್ ಸವಾರ ಸೇರಿದಂತೆ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ.  ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,. ವ್ಯಾನ್‌ನಲ್ಲಿ 13 ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ನಾಲ್ವರನ್ನು ರಕ್ಷಿಸಲಾಗಿದೆ. ಆದರೆ ವ್ಯಾನ್‌ನಲ್ಲಿನ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ. https://ainkannada.com/water-level-of-jhelum-river-rises-suddenly-emergency-declared/ ಇನ್ನೂ ಇವರ ರಕ್ಷಣೆಗಾಗಿ ಬಾವಿಗೆ ಇಳಿದ ಮನೋಹರ್ ಎಂದು ಗುರುತಿಸಲಾದ ಗ್ರಾಮಸ್ಥರು ಸಹ ಸಾವನ್ನಪ್ಪಿದ್ದಾರೆ.  ಎನ್‌ಡಿಆರ್‌ಎಫ್ ಮತ್ತು ಇತರ ಘಟಕಗಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಸ್ಥಳಕ್ಕೆ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಭೇಟಿ ನೀಡಿ, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

Read More

ಇಸ್ಲಾಮಾಬಾದ್ : ಝೇಲಂ ನದಿಯ ನೀರಿನ ಮಟ್ಟ ಹಠಾತ್ತನೆ ಏರಿಕೆಯಾಗಿದ್ದು, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಹಟ್ಟಿಯನ್ ಬಾಲಾ ಪ್ರದೇಶದಲ್ಲಿ ನೀರಿನ ತುರ್ತು ಪರಿಸ್ಥಿತಿ ಘೋಷಿಸಿದ್ದು, ಸ್ಥಳೀಯ ನಾಗರಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಝೇಲಂ ನದಿಯ ನೀರಿನ ಮಟ್ಟ ವೇಗವಾಗಿ ಏರಿದ್ದು, ಗರಿ ದುಪಟ್ಟಾ, ಮಝೋಯ್ ಮತ್ತು ಮುಜಫರಾಬಾದ್‌ನಂತಹ ಪ್ರದೇಶಗಳಲ್ಲಿ ಭೀತಿ ಉಂಟಾಗಿದ್ದು, ಮಸೀದಿಗಳಿಂದ ನಿರಂತರವಾಗಿ ಎಚ್ಚರಿಕೆಗಳನ್ನು ಪ್ರಸಾರ ಮಾಡಲಾಗುತ್ತಿದೆ. https://ainkannada.com/is-it-easy-for-pakistan-to-stop-water-does-india-have-the-ability-to-stop-the-indus-what-do-experts-say/ ಭಾರತವು ಯಾವುದೇ ಪೂರ್ವ ಸೂಚನೆ ಇಲ್ಲದೆ ಅನಂತನಾಗ್‌ನಿಂದ ಝೇಲಂ ನದಿಗೆ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ್ದರಿಂದ, ಚಕೋತಿ ಗಡಿಯ ಮೂಲಕ ಪಿಒಕೆ ಪ್ರವೇಶಿಸಿದೆ ಎಂದು ಪಾಕಿಸ್ತಾನಿ ಅಧಿಕಾರಿಗಳು ಮತ್ತು ಸ್ಥಳೀಯರು ಆರೋಪಿಸಿದ್ದಾರೆ. ಇದು ಭಾರತ ಉದ್ದೇಶಪೂರ್ವಕವಾಗಿ ತೆಗೆದುಕೊಂಡ ಕ್ರಮ ಎಂದು ಸಹ ಪಾಕಿಸ್ತಾನ ದೂರಿದೆ. ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸುವುದಾಗಿ ಭಾರತ ಇತ್ತೀಚೆಗೆ ಬೆದರಿಕೆ ಹಾಕಿದ್ದ ನಂತರ ಈ ಅನಿರೀಕ್ಷಿತ ನಡೆ ಅಚ್ಚರಿಯೇನಲ್ಲ ಎಂದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.…

Read More

ಚೆನ್ನೈ : ತಮಿಳುನಾಡು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಡಿಎಂಕೆ ಸರ್ಕಾಋದ ಇಬ್ಬರು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು,ತಮಿಳುನಾಡಿನಲ್ಲಿ ಪ್ರಮುಖ ಸಚಿವರಾದ ವಿ.ಸೆಂಥಿಲ್ ಬಾಲಾಜಿ ಮತ್ತು ಕೆ.ಪೊನ್ಮುಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶಿಫಾರಸಿನ ಮೇರೆಗೆ ರಾಜ್ಯಪಾಲ ಆರ್.ಎನ್. ರವಿ ಭಾಸಚಿವರಾದ ವಿ. ಸೆಂಥಿಲ್‌ಬಾಲಾಜಿ ಮತ್ತು ಕೆ. ಪೊನ್ಮುಡಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎನ್ನಲಾಗಿದೆ. https://ainkannada.com/4-year-old-girl-sexually-assaulted-and-murdered-by-relative/ ಸೆಂಥಿಲ್ ಬಾಲಾಜಿ ವಿರುದ್ಧ ಅಕ್ರಮ ಹಣವರ್ಗಾವಣೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಇದೇ ವಿಚಾರವಾಗಿ ಈ ಹಿಂದೆ ಇಡಿ ಅವರನ್ನು ಬಂಧಿಸಿತ್ತು. ಅಂತೆಯೇ ಇಂದು ರಾಜಿನಾಮೆ ನೀಡಿರುವ ಕೆ ಪೊನ್ಮುಡಿ ಕೂಡ ಹಿಂದೂ ಧರ್ಮದ ಕುರಿತು ಮತ್ತು ಮಹಿಳೆಯರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ವಿಪಕ್ಷಗಳು ಮಾತ್ರವಲ್ಲದೇ ಸ್ವಪಕ್ಷೀಯರಿಂದಲೂ ಟೀಕೆ ಎದುರಿಸಿದ್ದರು.

Read More