Author: AIN Author

ಚಾಮರಾಜನಗರ : ಅಜ್ಜೀಪುರ ಸಫಾರಿ ಕೇಂದ್ರದ ಪ್ರಾರಂಭವಾದ ನಂತರ ಇದೇ ಮೊದಲ ಬಾರಿಗೆ ಹುಲಿ ಕಾಣಿಸಿಕೊಂಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿರಾಯ ದರ್ಶನ ನೀಡಿದ್ದಾನೆ. https://ainkannada.com/%e0%b2%ae%e0%b3%81%e0%b2%82%e0%b2%a6%e0%b2%bf%e0%b2%a8-%e0%b2%a6%e0%b2%bf%e0%b2%a8%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%87%e0%b2%82%e0%b2%a4%e0%b2%b9-%e0%b2%95%e0%b3%83/ ಕಳೆದ ತಿಂಗಳು ನಿರಂತರವಾಗಿ ಬಿದ್ದ ಮಳೆಗೆ ಅರಣ್ಯವು ಅಚ್ಚ ಹಸಿರಿನಿಂದ ಕಂಗೊಳಿಸುತ್ತಿರುವುದರಿಂದ ಸಫಾರಿಗೆ ತೆರಳುವ ವನ್ಯ ಪ್ರಿಯರಿಗೆ ಒಂದಲ್ಲ ಒಂದು ಪ್ರಾಣಿಗಳು ಕಾಣಸಿಗುತ್ತಿವೆ.ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸಫಾರಿ ಕೇಂದ್ರ ಅಕ್ಟೋಬರ್ 2 2024ರಂದು ಪ್ರಾರಂಭಿಸಲಾಗಿತ್ತು. ಆದರೆ ಇದುವರೆಗೂ ಒಮ್ಮೆಯೂ ಹುಲಿರಾಯ ದರ್ಶನ ನೀಡಿರಲಿಲ್ಲ. ಇಂದು ಮೊದಲ ಬಾರಿಗೆ ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಹುಲಿ ಕಾಣಿಸಿಕೊಂಡಿದೆ.

Read More

ದೇವನಹಳ್ಳಿ : ಇಲ್ಲಿಯವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಸರಿ ಪಡೆಗೆ ತಿರುಗೇಟು ನೀಡಿದರು. ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರ ಸಾವಿರ ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳೆಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ ಎಂದರು. https://ainkannada.com/no-one-should-do-politics-in-the-house-of-death-ganiga-ravikumar/ ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾಣುತ್ತದೆ ಎಂದು ಟೀಕಿಸಿದರು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ…

Read More

ಬೆಂಗಳೂರು: ಪಹಲ್ಗಾಮ್ ನಲ್ಲಿನ ಭಯೋತ್ಪಾದಕರ ದಾಳಿ ಕುರಿತ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಸಿಎಂ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು ಎಂದಿದ್ದಾರೆ. ಪಹಲ್ಗಾಮ್ ನಲ್ಲಿ ನಡೆದ ಪಾಕ್‍ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ. ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ…

Read More

ಬೆಂಗಳೂರು : ಖ್ಯಾತ ವಿಜ್ಞಾನಿ ಡಾ. ಕಸ್ತೂರಿ ರಂಗನ್ ಅವರ ನಿಧನದಿಂದ ಅಪಾರ ಜ್ಞಾನ ಸಂಪತ್ತನ್ನು ಕಳೆದುಕೊಂಡಿದ್ದೇವೆ. ಇವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಬೇಡಿಕೊಳ್ಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. https://ainkannada.com/road-accident-three-spot-death-one-serious-sutak-at-madves-house/ ಕಸ್ತೂರಿ ರಂಗನ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,‌ ನಾಡು ಮತ್ತು ಕಾಡಿನ ಸಂಪತ್ತು ಉಳಿಯಲು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡವರು ಕಸ್ತೂರಿ ರಂಗನ್ ಅವರು. ಭಾರತದ ಹಾಗೂ ಪ್ರಪಂಚದ ಶ್ರೇಷ್ಠ ವಿಜ್ಞಾನಿಗಳಾಗಿದ್ದ ಕಸ್ತೂರಿ ರಂಗನ್ ಅವರು ಜ್ಞಾನ ಆಯೋಗದ ಅಧ್ಯಕ್ಷರಾಗಿ, ರಾಜ್ಯಸಭಾ ಸದಸ್ಯರಾಗಿ ಸಮಾಜಕ್ಕೆ ಅಪಾರ ಕೊಡುಗೆ ಕೊಟ್ಟಿದ್ದಾರೆ‌. ಸಾವು ಖಚಿತ, ಆದರೆ ನಾವು ಏನು ಕೊಡುಗೆಗಳನ್ನು ಬಿಟ್ಟು ಹೋಗುತ್ತೇವೆ ಎನ್ನುವುದು ಮುಖ್ಯ” ಎಂದು ಹೇಳಿದರು. ಸರ್ಕಾರ ಇವರ ಕೊಡುಗೆಗಳ ಬಗ್ಗೆ ಚರ್ಚಿಸಿ, ಅವುಗಳನ್ನು ಉಳಿಸುವ ಕೆಲಸ ಮಾಡಲಾಗುವುದು. ಇಸ್ರೋಗೆ ದೊಡ್ಡ ಹೆಸರು ಬರಲು ಇವರ ಕೊಡುಗೆ ಅಪಾರ ಎಂದು ಸ್ಮರಿಸಿದರು.

Read More

ಬೆಂಗಳೂರು: ಡಾ. ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಅದರಲ್ಲೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ: ಕೆ ಕಸ್ತೂರಿ ರಂಗನ್ ರವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ದೇಶ ಕಂಡಂತ ಹೆಸರಾಂತ ವಿಜ್ಞಾನಿ.ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ದೀರ್ಘ ಕಾಲ ಇಸ್ರೋ ಅಧ್ಯಕ್ಷರಾಗಿ ದ್ದವರು. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರನ್ನು ನಾವು ಮರೆಯಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಕೂಡ ಮಾಡುವ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ರಾಷ್ಟ್ರ ಮಟ್ಟದಲ್ಲಿ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು ಎಂದರು. ಪರಿಸರ ಕ್ಷೇತ್ರಕ್ಕೆ ಹಾಗೂ ಕರ್ನಾಟಕಕ್ಕೆ ಅವರ ಕೊಡುಗೆ ಅಪಾರವಾದುದು. ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. https://ainkannada.com/good-news-for-senior-citizens-if-you-have-someone-over-60-years-of-age-in-your-household-check-out-this-news/ ಅನಿವಾರ್ಯವಾದಾಗ ಮಾತ್ರ ಯುದ್ಧಮಾಡಬೇಕು. ಯುದ್ಧ ಬೇಡ ಎಂಬ ಮುಖ್ಯಮಂತ್ರಿಗಳ ಹೇಳಿಕೆಯ…

Read More

ಕಲಬುರಗಿ: ಪಾಕಿಸ್ತಾನ ವಿರುದ್ಧ ಯುದ್ಧ ಬೇಡ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ತ್ನಾಳ್ ಗರಂ ಆಗಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮುಸ್ಲಿಂ ಏಜೆಂಟ್ ಪಾಕಿಸ್ತಾನದ ಏಜೆಂಟ್ಸಿ. ಸಿದ್ದರಾಮಯ್ಯಗೆ ಮಾನ ಮಾರ್ಯಾದೆ ಏನಾದರೂ ಇದ್ಯಾ..? ಧರ್ಮ ಯಾವುದು ಅಂತಾ ಕೇಳಿ ಫೈರಿಂಗ್ ಮಾಡಿದ್ದಾರೆ. ಸಿದ್ದರಾಮಯ್ಯ ಹಿಂದೂಗಳು ವೋಟ್ ಹಾಕಿಲ್ವ? ಕೇವಲ ಸಾಬುರುಗಳೇ ವೋಟ್ ಹಾಕಿದಾರ? ಸಾಬರ ಎಂಜಲು ತಿನ್ನೊ ಪಾರ್ಟಿ ಕಾಂಗ್ರೆಸ್ ಪಾರ್ಟಿ, ಕಾಂಗ್ರೆಸ್ ಅಂದ್ರೆ ಸಾಬೂರ ಪಾರ್ಟಿ ಆಗಿಬಿಟ್ಟಿದೆ. ಪಾಕ್‌ಗೆ ನೀರು ಬಿಡೋದು ಬಿಟ್ಟು ಹೆಚ್ಚಾದರೇ ಏನ್ ಮಾಡ್ತಿರ ಅಂತಾ ಕೇಳ್ತಾರೆ. ನಾಚಿಕೆಯಾಗಬೇಕು ಇವರ ಜನ್ಮಕ್ಕೆ.. https://ainkannada.com/what-a-time-it-has-been-guru-wife-tries-to-kill-husband-who-questioned-her/ ಕಾಂಗ್ರೆಸ್‌ನವರು ಅಯೋಗ್ಯರು ಪಾಕಿಸ್ತಾನದ ಪರ ಮಾತಾಡ್ತಾರೆ. ಯುದ್ಧ ಬೇಕು ಬೇಡ ಅನ್ನೊದು ಸಿದ್ದರಾಮಯ್ಯಗೆ ಸಂಬಂಧವಿಲ್ಲ. ಸಿದ್ದರಾಮಯ್ಯ ಕರ್ನಾಟಕ ಸಿಎಂ ಅಷ್ಟೇ. ಯುದ್ಧದ ಬಗ್ಗೆ ನಿರ್ಣಯ ತೆಗೆದುಕೊಳ್ಳೊದು ಕೇಂದ್ರ ಸರ್ಕಾರ ಹಾಗೂ ಸೇನೆ ಎಂದು ತಿರುಗೇಟು ನೀಡಿದರು.

Read More

ಮಂಡ್ಯ : ಸಾವಿನ ಮನೆಯಲ್ಲಿ ಯಾರೂ ರಾಜಕಾರಣ ಮಾಡಬಾರದು. ಫಹಲ್ಗಾಮ್ ನಲ್ಲಿ ನಡೆದ ಘಟನೆ ನಿಜಕ್ಕೂ ಖಂಡನೀಯ ಎಂದು ಶಾಸಕ ರವಿಕುಮಾರ್ ಗಾಣಿಗ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ಮಾತನಾಡಿದ ಅವರು,ಸಂವಿಧಾನವನ್ನು ತಿರುಚಿ ರಾಜಕಾರಣ ಮಾಡುವುದು ಸರಿಯಲ್ಲ. ಸಂವಿಧಾನಕ್ಕೆ ನಾವು ಗೌರವ ಕೊಡಬೇಕು. ಹೆಣ ಇಟ್ಟುಕೊಂಡು ರಾಜಕಾರಣ ಮಾಡುವುದು ಸರಿಯಲ್ಲ. ನಾವು ಶಾಂತಿ ಪ್ರಿಯರು ಈ ಘಟನೆ ನಿಜಕ್ಕೂ ಖಂಡನೀಯ. ಸಾವಿನ ಮನೆಯೆಂಬುದು ಕಾಣದೇ ರಾಜಕಾರಣ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. https://ainkannada.com/pahalgam-attack-case-srimurali-lashes-out-at-terrorists/ ಭಾರತದಲ್ಲಿ ಹೆಣದ ಮೇಲಿನ ರಾಜಕಾರಣ ನಡೆಯಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರ ಎಂದು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ರವಿಕುಮಾರ್ ಗಣಿಗ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಬಿಜೆಪಿಗರ ಜನಾಕ್ರೋಶ ಯಾತ್ರೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಹಿಳೆಯರ ಬಾಯಿಗೆ ಮೋದಿ ಮಣ್ಣಾಕಿದರು. ಮೋದಿ ಬೆಲೆ ಏರಿಕೆ ಮಾಡಿದ್ದಾರೆ. ಅವರ ವಿರುದ್ದ ಇಂದು ಮಂಡ್ಯದಲ್ಲಿ ಪ್ರತಿಭಟನೆ ಮಾಡ್ತಿದ್ದಾರಾ?. ಮಹಿಳೆಯರ ಬಾಯಿಗೆ ಮೋದಿಯವ್ರು…

Read More

ಅಮಾಯಕರ ಜೀವ ತೆಗೆದ ಉಗ್ರರನ್ನು ಹುಡ್ಕೊಂಡು ಹೋಗಿ ಹೊಡೆಯಬೇಕು ಎಂದು ನಟ ಶ್ರೀಮುರಳಿ ಹೇಳಿದ್ದಾರೆ. https://ainkannada.com/what-a-time-it-has-been-guru-wife-tries-to-kill-husband-who-questioned-her/ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯಲ್ಲಿ ಜೀವ ಕಳೆದುಕೊಂಡವರ ಬಗ್ಗೆ ನೋವಾಗ್ತಿದೆ. ಇದನ್ನೆಲ್ಲಾ ಯಾರು ಮಾಡಿದ್ದಾರೋ ಅವರನ್ನು ಹುಡ್ಕೊಂಡು ಹೋಗಿ ಹೊಡೆಯಬೇಕು. ಅಲ್ಲಿ ಸಮಾಧಾನವಿಲ್ಲ. ಈ ಬಗ್ಗೆ ಸರ್ಕಾರ ಕೆಲಸ ಮಾಡುತ್ತಿದೆ. ಒಬ್ಬ ನಾಗರೀಕನಾಗಿ ಹೇಳಬೇಕು ಅಂದರೆ ಉಗ್ರರ ದಾಳಿ ವಿಷ್ಯ ಕೇಳಿ ಮೈಯಲ್ಲಿ ರಕ್ತ ಕುದಿಯುತ್ತಿದೆ. ಅವರ ಸಂಹಾರ ಆಗೋವರೆಗೂ ನಮಗೆ ನೆಮ್ಮದಿಯಿಲ್ಲ. ಅಮಯರ ಜೀವ ತೆಗೆದಿದ್ದಾರೆ. ಅದಕ್ಕೆ ಉಗ್ರರ ಅಂತ್ಯ ಆಗಲೇಬೇಕು ಎಂದು ಶ್ರೀಮುರಳಿ ಮಾತನಾಡಿದ್ದಾರೆ

Read More

ವಿಜಯಪುರ:- ಇಲ್ಲಿನ ಆಲಕುಂಟೆ ನಗರದಲ್ಲಿ ಪತ್ನಿಯೇ ಪತಿ ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. https://ainkannada.com/good-news-for-senior-citizens-if-you-have-someone-over-60-years-of-age-in-your-household-check-out-this-news/ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್​ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ. ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ ಬಿಎಲ್​​ಡಿಇ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅಜೀತ್ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಘಟನೆಗೆ ಕಾರಣ ಪತ್ನಿ ತೇಜುಗೆ ಬುದ್ದಿಮಾತು ಹೇಳಿದ್ದೇ ಅಜೀತ್ ಪ್ರಾಣಕ್ಕೆ ಸಂಚಕಾರ ತಂದಿದೆ ಎನ್ನಲಾಗಿದೆ. ಸದಾಕಾಲ ಮೊಬೈಲ್​ನಲ್ಲಿ ಬೇರೆಯವರೊಂದಿಗೆ ಚಾಟ್ ಮಾಡುತ್ತಿದ್ದ ತೇಜುಗೆ ಚಾಟ್ ಮಾಡಬೇಡ ಎಂದು ಬುದ್ದಿ ಮಾತು ಹೇಳಿದ್ದಕ್ಕೆ ಪತಿ ಅಜೀತ್ ಮೇಲೆ ಸಿಟ್ಟಾಗಿ ಇಂತ ದುಸ್ಸಾಹಸ ಮಾಡಿದ್ದಾಳೆ.

Read More

ಆದಾಯ ತೆರಿಗೆ ರಿಟರ್ನ್ (ಐಟಿಆರ್) ಎನ್ನುವುದು ತೆರಿಗೆದಾರರು ತಮ್ಮ ಆದಾಯ, ವೆಚ್ಚಗಳು, ತೆರಿಗೆ ಕಡಿತಗಳು, ಹೂಡಿಕೆಗಳು, ತೆರಿಗೆಗಳು ಇತ್ಯಾದಿಗಳನ್ನು ಘೋಷಿಸಲು ಅನುವು ಮಾಡಿಕೊಡುವ ಒಂದು ರೂಪವಾಗಿದೆ. ಆದಾಯ ತೆರಿಗೆ ಕಾಯ್ದೆ, 1961 ರ ಪ್ರಕಾರ ತೆರಿಗೆದಾರರು ವಿವಿಧ ಸಂದರ್ಭಗಳಲ್ಲಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದು ಕಡ್ಡಾಯವಾಗಿದೆ. https://ainkannada.com/kai-government-celebrates-two-years-achievement-conference-from-today-cm-dcm-make-grand-entry-to-the-stage/ ಅದರಂತೆ ಹಿರಿಯ ನಾಗರಿಕರಿಗೆ ಇದೇ ವಿಚಾರದಲ್ಲಿ ಗುಡ್ ನ್ಯೂಸ್ ಸಿಕ್ಕಿದೆ. ನಿಮ್ಮ ಮನೆಯಲ್ಲೂ 60 ವರ್ಷ ಮೇಲ್ಪಟ್ಟವರು ಇದ್ರೆ, ಈ ಸುದ್ದಿ ಮಿಸ್ ಮಾಡ್ದೆ ನೋಡಿ. ಆದಾಯ ತೆರಿಗೆ ಇಲಾಖೆ 60 ವರ್ಷಕ್ಕಿಂತ ಮೇಲಿನವರನ್ನು “ಹಿರಿಯ ನಾಗರಿಕರು” ಎಂದು ಕರೆಯುತ್ತದೆ. 80 ವರ್ಷಕ್ಕಿಂತ ಮೇಲಿನವರನ್ನು “ಸೂಪರ್ ಸೀನಿಯರ್ ಸಿಟಿಜನ್ಸ್” ಎಂದು ವರ್ಗೀಕರಿಸುತ್ತದೆ. ಈ ಎರಡೂ ವರ್ಗದವರಿಗೆ ತೆರಿಗೆಯಲ್ಲಿ ವಿಶೇಷ ರಿಯಾಯಿತಿಗಳಿವೆ. ವರ್ಷಕ್ಕೆ 3 ಲಕ್ಷ ರೂಪಾಯಿಗಳವರೆಗೆ ಆದಾಯವಿದ್ದರೆ ತೆರಿಗೆ ಇಲ್ಲ. ಸೂಪರ್ ಸೀನಿಯರ್ ಸಿಟಿಜನ್ಸ್ (80+ ವರ್ಷ): 5 ಲಕ್ಷ ರೂಪಾಯಿಗಳವರೆಗೆ ಆದಾಯವಿದ್ದರೆ ತೆರಿಗೆ ಇಲ್ಲ. ಇತರರು: 2.5 ಲಕ್ಷ ರೂಪಾಯಿಗಳವರೆಗೆ ಮಾತ್ರ…

Read More