Author: AIN Author

ವಿಜಯಪುರ: ಇತ್ತೀಚಿಗೆ ಗಂಡು ಮಕ್ಕಳಿಗೆ ಮದ್ವೆಗೆ ಹೆಣ್ಣು ಹುಡುಕೋದೇ ಕಷ್ಟವಾಗಿದೆ. ಹುಡ್ಗಿಗೆ ಹುಡುಕೋಕೆ ಒಂದಲ್ಲಾ ಒಂದು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ ಇಲ್ಲೊಂದು ಯುವಕರ ತಂಡ ಹುಡ್ಗಿನ ಹುಡ್ಕೋಕೆ ಒಂದು ಜಬರ್ದಸ್ತ್ ಪ್ಲಾನ್ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿದ್ದು. ಜಾತ್ರೆಗಾಗಿ ಸಾವಿರಾರು ಜನ ಬಂದಿದ್ದಾರೆ. ಇದೇ ಒಳ್ಳೆ ಚಾನ್ಸ್ ಅಂದುಕೊಂಡ ಯುವಕರು ಜಾತ್ರೆಯ ಫ್ಲೆಕ್ಸ್ನಲ್ಲಿ ವಿಶೇಷ ಬೇಡಿಕೆ ಇಟ್ಟಿದ್ದಾರೆ. ಸದ್ಯ ಈ ಫೋಟೋ ಎಲ್ಲಾ ಕಡೆ ವೈರಲ್ ಆಗುತ್ತಿದೆ. https://ainkannada.com/lics-best-scheme-just-save-rs-50-a-day-and-you-can-get-rs-6-lakh/ 20 ಜನ ಯುವಕರು ಬ್ರ್ಯಾಂಡ್ ಬಾಯ್ಸ್ ಹೆಸರಿನಲ್ಲಿ ಬ್ಯಾನರ್ ಹಾಕಿದ್ದಾರೆ. ಬ್ಯಾನರ್ನಲ್ಲಿ ತಮ್ಮೆಲ್ಲರ ಫೋಟೋಗಳನ್ನು ಹಾಕಿ, ಬ್ಯಾನರ್ ನೋಡಿ ಹಾಗೇ ಹೋಗಬೇಡಿ. ಎಲ್ಲರಿಗೂ ಹುಡುಗಿ ನೋಡಿ” ಎಂದು ಬರೆಸಿದ್ದಾರೆ. ಈ ಬ್ಯಾಚುಲರ್ ಬಾಯ್ಸ್ ಹಾಕಿರುವ ಬ್ಯಾನರ್ ಇದೀಗ ಜಾತ್ರೆಗೆ ಬಂದವರ ಗಮನ ಸೆಳೆಯುತ್ತಿದೆ. ಜೊತೆಗೆ ಫೋಟೋಗಳು ಕೂಡ ವೈರಲ್ ಆಗುತ್ತಿವೆ.

Read More

ಚಾಮರಾಜನಗರ : ಉಗ್ರರು ಎಲ್ಲೇ ಇರಲಿ, ಯಾವುದೇ ರಾಜ್ಯದಲ್ಲಿರಲಿ ಅವರನ್ನ ಮಟ್ಟ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಂಪುಟ ಸಭೆಗಾಗಿ ಚಾಮರಾಜನಗರಕ್ಕೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಪಹಲ್ಗಾಮ್‌ನಲ್ಲಿನ ಉಗ್ರ ದಾಳಿ ಬಗ್ಗೆ ಪ್ರತಿಕ್ರಿಯಿಸಿ, ಉಗ್ರ ಚಟುವಟಿಕೆ ಬೆಳೆಯಲು, ನಡೆಸಲು ಕೇಂದ್ರ ಸರ್ಕಾರ ಅವಕಾಶ ಕೊಡಬಾರದು. ಮೊನ್ನೆ ನಡೆದ ಘಟನೆ ಅತ್ಯಂತ ಅಮಾನವೀಯ,  ಹೇಯ ಕೃತ್ಯವಾಗಿದೆ. ಪುಲ್ವಾಮ ಘಟನೆ ನಡೆದಿತ್ತು, ಈಗ ಇದು ನಡೆದಿದೆ, ಮತ್ತೊಮ್ಮೆ ಈ ರೀತಿ ಘಟನೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು. https://ainkannada.com/terrorist-attack-in-pahalgam-178-kannadigas-stranded-in-srinagar-airlifted/ ಪುಲ್ವಾಮ ಘಟನೆ ಬಳಿಕ ಸ್ವಲ್ಪವೂ ವಿಶ್ರಮಿಸಬಾರದಿತ್ತು. ಕೇಂದ್ರ ಸರ್ಕಾರದ ಇಂಟಲಿಜೆನ್ಸ್ ವೈಫಲ್ಯ ಇದೆ ಅನ್ಸುತ್ತೆ. ಉಗ್ರರು ಯಾವುದೇ ಜಾತಿ ಧರ್ಮಕ್ಕೆ ಸೇರಿದವರಾಗಲಿ ಅವರನ್ನ ಮಟ್ಟ ಹಾಕಬೇಕು. ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ನಮ್ಮ ಸರ್ಕಾರ, ಪಕ್ಷ ಬೆಂಬಲ ನೀಡಲಿದೆ. ಎಲ್ಲರ ಜೊತೆ ನಾವೀದ್ದೇವೆ. 10 ಲಕ್ಷ ಪರಿಹಾರ ಕೊಟ್ಟಿದ್ದೇವೆ. ಬಹಳ…

Read More

ದೇವನಹಳ್ಳಿ : ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ ಪ್ರಕರಣ ಸಂಬಂಧ ಶ್ರೀನಗರದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಏರ್‌ಲಿಫ್ಟ್‌ ಮಾಡಲಾಗಿದೆ. ಶ್ರೀನಗರದಿಂದ ಕೆಂಪೇಗೌಡ ಏರ್ಪೋಟ್ ಗೆ ಕನ್ನಡಿಗರ ಹೊತ್ತ ಏರ್‌ ಇಂಡಿಗೋ ವಿಮಾನ ಆಗಮಿಸಿದ್ದಾರೆ. 6E9198 ಇಂಡಿಗೋ ವಿಮಾನದಲ್ಲಿ 178 ಜನ ಕನ್ನಡಿಗರನ್ನು ಏರ್‌ ಲಿಫ್ಟ್‌ ಮಾಡಲಾಗಿದೆ. ಕಾಶ್ಮೀರದ ಪಹಲ್ಗಾಮ್ ಗೆ ಹೊರಟಿದ್ದ ಕನ್ನಡಿಗರು ರಾಜ್ಯಕ್ಕೆ ಮರಳಿದ್ದಾರೆ. ತಾಯ್ನಾಡಿಗೆ ಬರಳಿದ ತಕ್ಷಣ ನಿಟ್ಟುಸಿರು ಬಿಟ್ಟ ಬಿಟ್ಟಿದ್ದು, ನಾವು ಕ್ಷೇಮವಾಗಿ ರಾಜ್ಯಕ್ಕೆ ಬಂದಿರುವುದು ಖುಷಿ ಕೊಟ್ಟಿದೆ. ಆದರೆ ಇನ್ನೊಂದ ಕಡೆ ಕಾಶ್ಮೀರದ ಪಹಲ್ಗಾಮ್ ಕ್ಷಣಗಳನ್ನು ನೆನೆದು ನೋವಾಗುತ್ತಿದೆ ಎಂದು ಕಣ್ಣೀರಿಟ್ಟಿದ್ದಾರೆ. https://ainkannada.com/90-tourists-from-doddaballapur-taluk-who-had-gone-on-a-trip-to-kashmir-are-safe/ ಕನ್ನಡಿಗರು ವಾಪಸ್ ಆಗಮಿಸುತ್ತಿರುವ ಹಿನ್ನೆಲೆ ಏರ್ಪೋಟ್ ನಲ್ಲಿ ಸಕಲ ಸಿದ್ದತೆ ನಡೆಸಲಾಗಿದ್ದು, ಬಂದವರನ್ನ ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ.

Read More

ಕೋಲಾರ  : ಪ್ಲಾಸ್ಟಿಕ್ ಗೋಡೌನ್ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಕೋಲಾರ ನಗರದ ಹೊರವಲಯದ ಈಲಂ ಬಳಿ ಘಟನೆ ನಡೆದಿದೆ. ಅಸ್ಲಾಂ ಪಾಷ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು,  30 ಲಕ್ಷ ರೂಪಾಯಿ ಮೌಲ್ಯದ ಅಧಿಕ ಪ್ಲಾಸ್ಟಿಕ್ ವಸ್ತುಗಳು ಹಾಗೂ ಮೆಷಿನ್‌ಗಳು ಬೆಂಕಿಗಾಹುತಿಯಾಗಿವೆ. https://ainkannada.com/youths-attack-buddi-for-telling-him-not-to-smoke-cigarettes/ ಕೋಲಾರ ಹಾಗೂ ಬಂಗಾರಪೇಟೆ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು,ಸತತ ಏಳುಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಕೋಲಾರ – ಮುಳಬಾಗಿಲು ನಗರ ಹಾಗೂ ಕೋಲಾರ ಗ್ರಾಮಾಂತರ ಸೇರಿದಂತೆ ಒಂಬತ್ತು ಕಡೆ ವಿವಿಧ ಸಂದರ್ಭಗಳಲ್ಲಿ ಕನ್ನ ಹಾಕಿ ಚಿನ್ನ ಹಾಗೂ ಬೆಳ್ಳಿ ಕದ್ದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ಬಳಿಯ ಇಲಿಯಾಸ್‌ ನಗರದ ನಿವಾಸಿ ಸೈಯದ್‌ ಅಫ್ಸರ್‌ (37) ಬಂಧಿತ ಆರೋಪಿ. ಬಂಧಿತನಿಂದ 557 ಗ್ರಾಂ ಚಿನ್ನ, ಎರಡೂವರೆ ಕೆ.ಜಿ ಬೆಳ್ಳಿ ಸೇರಿದಂತೆ ಸುಮಾರು ₹ 52.63 ಲಕ್ಷ ಮೌಲ್ಯದ ಆಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. https://ainkannada.com/youths-attack-buddi-for-telling-him-not-to-smoke-cigarettes/ ಮುಳಬಾಗಿಲು ನಗರದ ಮಂಜುನಾಥ್‌ ಕಾಲೋನಿಯ ಸೋಮಶೇಖರಪ್ಪ  ಎಂಬುವರ ನಿವಾಸದಲ್ಲಿ ಏ.4ರಂದು ಕಳ್ಳತನ ನಡೆದಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಾಗಿಲು ಮುರಿದು ಚಿನ್ನ ಕದ್ದಿರುವ ಬಗ್ಗೆ ಮುಳಬಾಗಿಲು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರ ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ಆರೋಪಿ ಸೈಯದ್‌ ಅಫ್ಸರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವಿಷಯ ಗೊತ್ತಾಗಿದೆ. ‘ಕಳ್ಳತನ ಮಾಡಿರುವ ಬಗ್ಗೆ ಆರೋಪಿ ಅಫ್ಸರ್‌ ಒಪ್ಪಿಕೊಂಡಿದ್ದಾನೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಮುಳಬಾಗಿಲು…

Read More

ಧಾರವಾಡ : ಸಿಗರೇಟು ಸೇದಬೇಡಿ ಎಂದು ಬುದ್ದಿ ಹೇಳಿದಕ್ಕೆ ಹಲ್ಲೆ ಮಾಡಿದ ಘಟನೆ ಧಾರವಾಡ ನಗರದ ಗಾಂಧಿ ಚೌಕ್ ಬಳಿ ನಡೆದಿದೆ. ಆರ್‌ಎಸ್‌ ಎಸ್‌ ಮುಖಂಡ ಶಿರಿಶ್ ಬಳ್ಳಾರಿ ಮತ್ತು ಕುಟುಂಬಸ್ಥರ ಮೇಲೆ ಹಲ್ಲೆ ನಡೆದಿದೆ. ಸಿಗರೇಟ್‌ ಸೇದಬೇಡಿ ಎಂದಿದ್ದಕ್ಕೆ  ಮುಸ್ಲಿಂ ಯುವಕರಿಂದ ಹಲ್ಲೆ ನಡೆದಿದೆ. ಆರ್ ಎಸ್ ಎಸ್ ಮುಖಂಡ ಶಿರಿಶ್ ಬಳ್ಳಾರಿ ಅವರ ಮನೆಯೊಳಗೆ ನುಗ್ಗಿದ  ಮುಸ್ಲಿಂ ಯುವಕರು, ಶಿರಿಶ್‌ ಬಳ್ಳಾರಿ ಮತ್ತು ಅವರ ಕುಟುಂಬದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. https://ainkannada.com/cabinet-meeting-at-malemahadeshwara-hill-chamarajanagar-district-to-get-special-package/ ಇನ್ನೂ ಆರ್ ಎಸ್ ಎಸ್ ಮುಖಂಡ ಶ್ರಿರಿಶ್ ಅವರು ಧಾರವಾಡ ಶಹರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸದ್ಯ ಹಲ್ಲೆ ಮಾಡಿದ ನಾಲ್ವರು ಯುವಕರು ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಶಹರ ಪೋಲಿಸ್ ಠಾಣೆಯ ಎದುರು ಸೇರಿದ ನೂರಾರು ಹಿಂದೂ ಕಾರ್ಯಕರ್ತರು, ತಪ್ಪಿತಸ್ಥರ ಕ್ರಮ ಆಗಬೇಕು ಎಂದು ಆಗ್ರಹಿಸಿದ್ದಾರೆ.

Read More

ಶಿವಮೊಗ್ಗ: ಪಹಲ್ಗಾಮ್‌ನಲಲಿ ಭಯೋತ್ಪಾದಕರ ದುಷ್ಕೃತ್ಯಕ್ಕೆ ಬಲಿಯಾದ ಉದ್ಯಮಿ ಮಂಜುನಾಥ್‌ ರಾವ್‌ ಮೃತದೇಹ ಶಿವಮೊಗ್ಗಕ್ಕೆ ತಲುಪಿದೆ. ಗುರುವಾರ ಬೆಂಗಳೂರಿಗೆ ಮಂಜುನಾಥ್‌ ರಾವ್‌ ಪಾರ್ಥೀವ ಶರೀರ ತರಲಾಯಿತು. ಬೆಂಗಳೂರು, ತುಮಕೂರು ಮತ್ತು ಚಿತ್ರದುರ್ಗ ಮಾರ್ಗವಾಗಿ ಮಂಜುನಾಥ್ ಪಾರ್ಥಿವ ಶರೀರ ಶಿವಮೊಗ್ಗಕ್ಕೆ ರವಾನಿಸಲಾಯಿತು. ಇದೇ ವೇಳೆ ತುಮಕೂರಿನ ಕ್ಯಾತಸಂದ್ರದ ಟೋಲ್ ಗೇಟ್‍ನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಶಾಸಕ ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು. https://ainkannada.com/militant-attack-shraddhanjali-offering-to-victims-of-firing/ ಮಂಜುನಾಥ್ ರಾವ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಶಿವಮೊಗ್ಗದಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮನೆ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಚಾಮರಾಜನಗರ : ಪ್ರಸಿದ್ದ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ಸಂಪುಟ ಸಭೆ ನಡೆಯಲಿದ್ದು, ಸಭೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ವಜ್ರಮಲೆ ವಸತಿ ಗೃಹ ಎದುರಿನ ಆವರಣದಲರಲ ಜರ್ಮನ್‌ ಟೆಂಟ್‌ ಅಳವಡಿಸಿದ್ದು, ಅಲ್ಲಿಯೇ ಸಭೆಯ ನಡೆಯಲಿದೆ. ಇನ್ನೂ ಸಚಿವ ಸಂಪುಟ ಸಭೆಯಲ್ಲೆಯ ಮೈಸೂರು ಭಾಗದ ಜಿಲ್ಲೆಗಳ ಅಭಿವೃದ್ದಿ ಕುರಿತು ಚರ್ಚೆಯಾಗಲಿದೆ. ಎಂಟು ಜಿಲ್ಲೆಗಳ ವಿವಿಧ ಯೋಜನೆಗಳ ಬಗ್ಗೆ ಚರ್ಚೆಯಾಗಲಿದ್ದು, ಅನುಮೋದನೆ ಸಾಧ್ಯತೆಯಿದೆ. ಜೊತೆಗೆ ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಸಿಗುವ ಸಾಧ್ಯತೆ ಇದೆ. https://ainkannada.com/cabinet-meeting-at-mahadeshwara-hill-local-mlas-ignored-kollegal-mla-a-r-krishna-unhappy/ ಇಂದು ಬೆಳಗ್ಗೆ 11:30ಕ್ಕೆ ಹೆಲಿಕಾಪ್ಟರ್ ಮೂಲಕ ಮಹದೇಶ್ವರ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಸಚಿವ ಸಂಪುಟ ಸಭೆಗೂ ಮುನ್ನ ಮಹದೇಶ್ವರರ ಇತಿಹಾಸ ಸಾರುವ ಮ್ಯೂಸಿಯಂ, 376 ಕೊಠಡಿಗಳ ವಸತಿ ಗೃಹ, 1 ಮೆಗಾ ವ್ಯಾಟ್ ಸೋಲಾರ್ ಪ್ಲಾಂಟ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ. ಬಳಿಕ ಮಧ್ಯಾಹ್ನ 12:00 ಗಂಟೆಗೆ ಸಚಿವ ಸಂಪುಟ ಸಭೆ ಆರಂಭಗೊಳ್ಳಲಿದ್ದು, ಬಳಿಕ ಪತ್ರಿಕಾಗೋಷ್ಠಿ…

Read More

ಕಲಬುರಗಿ:- ಅಡ್ಡಲಾಗಿ ಬಂದ ನಾಯಿ ಉಳಿಸಲು ರಸ್ತೆ ಬದಿಯ ತಡೆ ಕಂಬಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಅಫಜಲಪುರ ಮುಖ್ಯರಸ್ತೆ ಗೊಬ್ಬೂರ ಬಳಿ ಜರುಗಿದೆ. https://ainkannada.com/the-center-will-teach-a-befitting-lesson-to-those-who-victimized-innocent-people-v-somanna/ ಆಯೇಷಾ (70), ಅಜ್ಮೆರಾ (30) ಮತ್ತು ಅಜ್ಮೇರಾ ಮಗಳು ಜೈನಬ್ (2) ಮೃತ ದುರ್ದೈವಿಗಳು. ಇಂದು ಬೆಳಿಗ್ಗೆ ಕಾರಿನಲ್ಲಿ ಒಂದೇ ಕುಟುಂಬದ 8 ಜನ ಸೇರಿದಂತೆ 5 ಜನ ಮಕ್ಕಳು ಸಂಬಂಧಿಕರ ಮಗುವಿನ ಜವಳ ಕಾರ್ಯಕ್ರಮಕ್ಕೆ ಹೋಗುತ್ತಿದ್ದರು. ಅದೇ ವೇಳೆ ಗೊಬ್ಬೂರ ಗ್ರಾಮದ ಬಳಿ ಕಾರಿಗೆ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ರಸ್ತೆ ಬದಿಯ ತಡೆ ಕಂಬಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ 6 ಕಂಬಗಳು ಹಾಗೂ ಕಾರು ಸಂಪೂರ್ಣ ನಜ್ಜು ಗುಜ್ಜಾಗಿ ಹೋಗಿದೆ. ಅಲ್ಲದೇ ಸ್ಥಳದಲ್ಲಿ 3 ಮಂದಿ ಸಾವನ್ನಪ್ಪಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Read More

ಚಾಮರಾಜನಗರ : ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಆದರೆ ಈ ಸಚಿವ ಸಂಪುಟ ಸಭೆಯಲ್ಲಿ ಸ್ಥಳೀಯ ಶಾಸಕರ ಕಡೆಗಣನೆ ಮಾಡಿರುವು ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಕಾಂಗ್ರೆಸ್ ಶಾಸಕರ ಸಭೆ ನಡೆಸದೇ ಕಡೆಗಣನೆ ಮಾಡಲಾಗುತ್ತಿದೆ ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರಬೆಟ್ದದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಕೆ.ವೆಂಕಟೇಶ್ ಕಡೆಗಣನೆ ಸ್ಥಳೀಯ ಶಾಸಕರ ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. https://ainkannada.com/cabinet-meeting-at-mahadeshwara-hill-today-dk-shivakumar-pooja-at-the-temple-in-the-morning/ ಈ ಬಗ್ಗೆ ಮಾತನಾಡಿರುವ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು, ಮೈಸೂರು ಬೆಂಗಳೂರು ಮಂಡ್ಯ ಸಚಿವರು ಸ್ಥಳೀಯ ಶಾಸಕರ ಸಭೆ ನಡೆಸಿ ಜಿಲ್ಲೆಯ ಅಭಿವೃದ್ಧಿಗೆ ಅಭಿಪ್ರಾಯ ಸಂಗ್ರಹಿಸಲಾಗಿದೆ. ನಾಮಕಾವಸ್ಥೆಗೂ ಸಭೆ ನಡೆಸಲಾಗಿದೆ.  ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳೀಯ ಕಾಂಗ್ರೆಸ್ ಶಾಸಕರ ಅಭಿಪ್ರಾಯ ಸಲಹೆ ಪಡೆದಿಲ್ಲ. ಚಾಮರಾಜನಗರ ಜಿಲ್ಲಾ ಅಭಿವೃದ್ದಿಗಾಗಿ ಸ್ಥಳೀಯ ಕಾಂಗ್ರೆಸ್ ಶಾಸಕರ ಸಭೆ ಕರೆದು ಆಯಾ ಕ್ಷೇತ್ರಗಳ ಅಭಿವೃದ್ಧಿಗೆ ಸಲಹೆ…

Read More