Author: AIN Author

ಮೈಸೂರು:- ಮೈಸೂರಿನಲ್ಲಿ ಸುಸಜ್ಜಿತವಾದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಮಾಡಲು ಮಲೈ ಮಹದೇಶ್ವರ ಬೆಟ್ಟದಲ್ಲಿ ನಡೆದ ಸರ್ಕಾರದ ಕ್ಯಾಬಿನೆಟ್‌ ನಲ್ಲಿ ಅನುಮೋದನೆ ನೀಡಲಾಗಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಧನ್ಯವಾದ ತಿಳಿಸಿದ್ದಾರೆ. https://ainkannada.com/malai-mahadeshwar-hill-will-now-be-free-from-drinking-water-cms-announcement/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮೈಸೂರಿಗೆ ಒಂದು ಸುಸಜ್ಜಿತವಾದ ಕ್ರಿಕೆಟ್‌ ಸ್ಟೇಡಿಯಂ ಬೇಕೆಂಬುದು ಮೈಸೂರಿಗರ ಬಹು ವರ್ಷಗಳ ಕನಸಾಗಿತ್ತು. ಮೈಸೂರು ನಗರದ ಸಾತಗಳ್ಳಿ ಸಮೀಪ ಮೂಡಾ ಗುರುತು ಮಾಡಿದಂತಹ ಸುಮಾರು19.5 ಎಕರೆ ಜಾಗವನ್ನ 2021ರಲ್ಲಿ ಶ್ರೀ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಬಂದ ನಂತರ, ಆ ಭೂಮಿಯನ್ನು ಹಸ್ತಾಂತರ ಮಾಡಲು ನಾನು ಎಲ್ಲಾ ಪ್ರಯತ್ನವನ್ನು ಮಾಡಿದ್ದೆ. ಆದರೆ ಒಂದು ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಮಾಡಲು ಕನಿಷ್ಠ 06 ಎಕರೆ ಮೈದಾನಕ್ಕೆ ಹಾಗೂ 05 ಎಕರೆ ಸ್ಟೇಡಿಯಂ ನಿರ್ಮಾಣಕ್ಕೆ ಬೇಕು, ಜತೆಗೆ ಪಾರ್ಕಿಂಗ್‌, ಕ್ಲಬ್‌ ಹೌಸ್‌ ನಿರ್ಮಾಣಕ್ಕೂ ಕೂಡ ಜಾಗ ಬೇಕಾಗಿತ್ತು. ಆದರೆ 19.5 ಎಕರೆ ಜಾಗದ ಮಧ್ಯದಲ್ಲಿ ಒಂದು ನಿರ್ಜೀವ ಕೆರೆ ಇತ್ತು,…

Read More

ಮಲೈ ಮಹದೇಶ್ವರ ಏ24:  ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. https://ainkannada.com/ipl-2025-rcb-loses-toss-again-at-home-rajasthan-bowls/ ಇಲ್ಲಿಯವರೆಗೂ ಬೆಟ್ಟದಲ್ಲಿ,  ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು… *ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು. *ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು. *ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು. *ಪ್ರಾಧಿಕಾರ ಮತ್ತು…

Read More

ಐಪಿಎಲ್ 2025 ರ 42 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯವು ಆತಿಥೇಯ ತಂಡ ಆರ್‌ಸಿಬಿಗೆ ಅತ್ಯಂತ ಮಹತ್ವದ್ದಾಗಿದೆ ಏಕೆಂದರೆ ಈ ಸೀಸನ್‌ನಲ್ಲಿ ತವರಿನ ಹೊರಗೆ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಈ ತಂಡವು ತನ್ನದೇ ಆದ ನೆಲದಲ್ಲಿ ಪದೇ ಪದೇ ವಿಫಲವಾಗುತ್ತಿದೆ. ಬೆಂಗಳೂರು ತಂಡ ತವರಿನಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋತಿದ್ದು, ಈ ಆವೃತ್ತಿಯಲ್ಲಿ ಇನ್ನೂ ತವರಿನಲ್ಲಿ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಈ ಪಂದ್ಯ ರಜತ್​ ಪಡೆಗೆ ಮುಖ್ಯವಾಗಿದೆ. https://ainkannada.com/kodagu-congress-leader-mittu-changappa-is-no-more/ ಮೊದಲಿಗೆ ತವರಲ್ಲೇ ಟಾಸ್ ಸೋಲುತ್ತಿರುವ ರಜತ್ ಅವರು ಇಂದು ಕೂಡ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲು ಸಜ್ಜಾಗಿದ್ದಾರೆ. ಅದರಂತೆ ಟಾಸ್ ಗೆದ್ದಿರುವ ರಾಜಸ್ಥಾನ್ ಮೊದಲು ಬೌಲಿಂಗ್ ಮಾಡಲಿದ್ದಾರೆ. 2025ರ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಆರ್ ಸಿಬಿಗೆ ತವರು…

Read More

ಕೊಡಗು: ರಾಜಕಾರಣಿಯಾಗಿ, ಪ್ರವಾಸೋದ್ಯಮಿಯಾಗಿ, ಕೖಷಿಕರಾಗಿ, ಕಾಫಿ ಉದ್ಯಮಿಯಾಗಿ ಗಮನ ಸೆಳೆದಿದ್ದ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ (83) ಅವರು ಅಮ್ಮತ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. https://ainkannada.com/let-congressmen-in-responsible-positions-speak-responsibly-vijayendra/ ಮಿಟ್ಟು ಚಂಗಪ್ಪ ಅವರು ಐದು ದಶಕಗಳ ಕಾಲ ರಾಜಕೀಯದಲ್ಲಿ ಕಾಂಗ್ರೆಸ್ ನ ನಿಷ್ಟಾವಂತ ನಾಯಕರೆನಿಸಿದ್ದರು. ನಾಳೆ ಬೆಳಗ್ಗೆ 10 ಗಂಟೆಯಿಂದ 1 ಗಂಟೆವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಿಟ್ಟು ಚಂಗಪ್ಪ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಸಾವ೯ಜನಿಕರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ ಧಮ೯ಜ ಉತ್ತಪ್ಪ ಮಾಹಿತಿ ನೀಡಿದ್ದಾರೆ. ಮಿಟ್ಟು ಚಂಗಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೖಹ ಸಚಿವ ಜಿ. ಪರಮೇಶ್ವರ್, ಸಚಿವ ದಿನೇಶ್ ಗುಂಡೂರಾವ್, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ. ಮಂಥರ್ ಗೌಡರವರು ಶೋಕ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ಪುರಸಭೆ, ಎಂ.ಎಲ್.ಸಿ. ಚುನಾವಣೆಯಲ್ಲಿ ಸ್ಪಧಿ೯ಸಿ ಸೋತಿದ್ದರೂ ರಾಜಕೀಯದಿಂದ ಹತಾಶರಾಗದೇ ಕಿಂಗ್ ಮೇಕರ್ ಆಗಿ ಕಂಗೊಳಿಸಿದ್ದ ಮಿಟ್ಟು ಅವರು, ಇಂದಿರಾಗಾಂಧಿ, ಗುಂಡೂರಾವ್, ಎಸ್.ಎಂ. ಕೖಷ್ಣ, ಸಿದ್ದರಾಮಯ್ಯ, ಶಿವಕುಮಾರ್,…

Read More

ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು, ಪ್ರಿಯಾಂಕ್ ಖರ್ಗೆ ಅವರು ಹೊಣೆಯರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. https://ainkannada.com/did-you-know-this-fruit-reduces-fat-accumulation-in-the-body/ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನೀವು ಕೇಂದ್ರದ ಬೇಹುಗಾರಿಕಾ ವೈಫಲ್ಯಗಳ ಬಗ್ಗೆ ಮಾತನಾಡುತ್ತೀರಿ. ಮಾನ್ಯ ಸಿದ್ದರಾಮಯ್ಯನವರೇ, ನೀವು ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಪ್ರಶ್ನೆ ಮಾಡಬೇಕಿದೆ. ಕಾಂಗ್ರೆಸ್ಸಿನವರು ಸ್ವಾತಂತ್ರ್ಯ ಬಂದ ಬಳಿಕ ಈ ದೇಶವನ್ನು 60 ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ. ಭಯೋತ್ಪಾದನೆಯನ್ನು ಈ ದೇಶದಿಂದ ಕಿತ್ತು ಹಾಕಲು ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಸಾಧ್ಯವಾಗಿಲ್ಲ ಎಂದು ಕೇಳಲು ಸವಾಲೆಸೆದರು. ಇದರ ಬಗ್ಗೆ ಚರ್ಚಿಸುವುದನ್ನು ಬಿಟ್ಟು, ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ಭಾರತೀಯರೂ ಒಟ್ಟಾಗಿ, ಒಂದಾಗಿ ನಿಲ್ಲಬೇಕಾಗಿದೆ. ಈ ಜಗತ್ತಿಗೆ ಒಂದು ಸ್ಪಷ್ಟ ಸಂದೇಶ ನೀಡಬೇಕಾಗಿದೆ ಎಂದು ತಿಳಿಸಿದರು. ಭಯೋತ್ಪಾದನೆ ಎಂಬುದು ಕೇವಲ ಭಾರತಕ್ಕೆ ಸೀಮಿತವಾಗಿಲ್ಲ; ಇದು ಜಾಗತಿಕ ಸಮಸ್ಯೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿಜೀ ಅವರು ಯಾವುದೇ ದೇಶಕ್ಕೆ ಹೋದಾಗಲೂ ಉಗ್ರವಾದವನ್ನು ಜಗತ್ತು…

Read More

ದೇಹದ ತೂಕ ಹೆಚ್ಚಾದರೆ ಅದರಿಂದ ಇಲ್ಲದ ಆರೋಗ್ಯ ಸಮಸ್ಯೆಗಳು ಉತ್ಪತ್ತಿಯಾಗುತ್ತವೆ. ತಮ್ಮ ದೇಹದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರು ದೇಹದ ತೂಕದ ಬಗ್ಗೆ ಕೂಡ ಗಮನಹರಿಸಬೇಕು. https://ainkannada.com/you-have-to-drink-oil-so-eat-this-fruit-sakhat-kick/ ಅನಾರೋಗ್ಯಕರ ಆಹಾರ ಶೈಲಿಯನ್ನು ಅನುಸರಿಸಿ ಕೆಟ್ಟ ಜೀವನ ಶೈಲಿಯನ್ನು ಹೊಂದಿ ಬೇಡದ ಆಹಾರಗಳನ್ನು ಸೇವನೆ ಮಾಡಿ ಈಗಾಗಲೇ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ, ಕೆಟ್ಟ ಕೊಬ್ಬಿನ ಅಂಶ ಮತ್ತು ಬೊಜ್ಜಿನ ಅಂಶವನ್ನು ತುಂಬಿಕೊಂಡು ದೇಹದ ತೂಕವನ್ನು ಹೆಚ್ಚು ಮಾಡಿಕೊಂಡಿರುವ ಪ್ರತಿಯೊಬ್ಬರೂ ಸಹ ಇನ್ನು ಮುಂದೆ ಆರೋಗ್ಯಕರ ಜೀವನ ಶೈಲಿಗೆ ಬದಲಾಗುವ ಪ್ರಯತ್ನ ಮಾಡಬೇಕು. ಬಿಲ್ವ ಹಣ್ಣು ಬಿಸಿಲಿನ ವಾತಾವರಣದಲ್ಲಿ ನಮ್ಮ ದೇಹಕ್ಕೆ ತ್ವರಿತ ತಂಪನ್ನು ನೀಡುತ್ತದೆ. ಇದು ಹೇರಳವಾದ ಔಷಧೀಯ ಗುಣಗಳನ್ನು ಹೊಂದಿದೆ. ಬಿಲ್ವ ಮರದ ಬೇರುಗಳು, ಕಾಂಡಗಳು ಮತ್ತು ಎಲೆಗಳು ಸಹ ಔಷಧೀಯ ಗುಣಗಳನ್ನು ಹೊಂದಿವೆ. ಸ್ವಲ್ಪ ಕಹಿ ರುಚಿಯನ್ನು ಹೊಂದಿರುವ ಈ ಹಣ್ಣು ಉತ್ಕರ್ಷಣ ನಿರೋಧಕಗಳಲ್ಲಿಯೂ ಸಮೃದ್ಧವಾಗಿದೆ. ಇದು ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಇದು…

Read More

ಈಗಾಗಲೇ ಬೇಸಿಗೆ ಆರಂಭವಾಗಿದೆ. ಈ ಸಮಯದಲ್ಲಿ ದೇಹವನ್ನು ತಂಪಾಗಿಟ್ಟುಕೊಳ್ಳಬೇಕು. ಅದರಲ್ಲೂ ಬೇಸಿಗೆ ಕಾಲದಲ್ಲಿ ಅನಾನಸ್ ಹಣ್ಣು ತಿನ್ನುವು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರು ನೋಡಲು ಹೊರಗಿನಿಂದ ಒರಟಾಗಿ ಮತ್ತು ಮುಳ್ಳಿನಿಂದ ಕೂಡಿರುತ್ತದೆ. ಆದರೆ ಒಳಗಿನಿಂದ ತುಂಬಾ ಸಿಹಿ ಮತ್ತು ರಸಭರಿತವಾಗಿದೆ. ಇನ್ನೂ ನಿಮಗೆ ಅನಾನಸ್ ಇಷ್ಟವೇ? ನಾವೆಲ್ಲರೂ ಈ ಸಿಹಿ ಮತ್ತು ಹುಳಿ ಹಣ್ಣನ್ನು ಇಷ್ಟಪಡುತ್ತೇವೆ. ಈ ಹಣ್ಣು ನಿಮಗೆ ತುಂಬಾ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂಬುದು ಅನೇಕ ಜನರಿಗೆ ತಿಳಿದಿಲ್ಲ. ಅದು ವೈನ್‌ನಂತೆ ತಿರುಗುತ್ತದೆ. ನೀವು ಇದನ್ನು ನಂತರ ಕುಡಿದರೆ… ಅದು ತುಂಬಾ ಕಿಕ್ ಕೊಡುತ್ತದೆ. ಈ ಅನಾನಸ್ ವೈನ್ ಅನ್ನು ಮನೆಯಲ್ಲಿಯೇ ತಯಾರಿಸಬಹುದು. ಆ ಪ್ರಕ್ರಿಯೆಯೂ ತುಂಬಾ ಸುಲಭ. ಅದನ್ನು ಹೇಗೆ ಮಾಡಬೇಕೆಂದು ಇಲ್ಲಿ ಕಲಿಯಬಹುದು ಮೊದಲು, ಚೆನ್ನಾಗಿ ಹಣ್ಣಾದ 2 ಅನಾನಸ್ ಹಣ್ಣುಗಳನ್ನು ತೆಗೆದುಕೊಳ್ಳಿ. ಸಿಪ್ಪೆ ಸುಲಿದು, ಸಣ್ಣ ತುಂಡುಗಳಾಗಿ ಕತ್ತರಿಸಿ. ಎಲ್ಲವನ್ನೂ ಈ ರೀತಿ ಕತ್ತರಿಸಿದ ನಂತರ, ತುಂಡುಗಳನ್ನು ಸ್ವಚ್ಛವಾದ ಬಾಟಲಿಯಲ್ಲಿ ಹಾಕಿ. ನಂತರ ಅದಕ್ಕೆ…

Read More

ಚಾಮರಾಜನಗರ :  ದೇಶದ ಭದ್ರತೆ ವಿಚಾರವನ್ನು ನಾವು ರಾಜಕೀಯಕ್ಕೆ ಬಳಸಿಕೊಳ್ಳಲು ಇಷ್ಟಪಡುವುದಿಲ್ಲ. ಕೆಲವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಎಲ್ಲವೂ ನಡೆಯುತ್ತದೆ. ನಮಗೆ ದೇಶದ ಐಕ್ಯತೆ ಮುಖ್ಯ  ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿ ಅವರು ದೇಶದ ಹೊರಗಡೆ ಇದ್ದಾಗಲೇ ಭಯೋತ್ಪಾದಕ ದಾಳಿಯಾಗುತ್ತವೆ ಎನ್ನುವ ಬಿಜೆಪಿ ಐಟಿ ಸೆಲ್ ಮಾಡಿದ ಆರೋಪದ ವಿರುದ್ದ ಎಫ್ ಐಆರ್ ದಾಖಲಾಗಿರುವ ಬಗ್ಗೆ ಕೇಳಿದಾಗ, “ಇಂತಹ ಸಂದಿಗ್ಧ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ನಾವು ಬೆಂಬಲ ನೀಡಬೇಕು. ದೇಶದಲ್ಲಿ ಶಾಂತಿ ಮುಖ್ಯ” ಎಂದರು. https://ainkannada.com/cabinet-meeting-resolution-condemning-terrorism-in-jammu-and-kashmir/ ದೇಶದ ಮುಸ್ಲಿಂ ಸಮುದಾಯ ಹಿಂದುಗಳ ವಿರುದ್ಧ ಇದ್ದಾರೆ ಎನ್ನುವ ವ್ಯಾಖ್ಯಾನ ಹುಟ್ಟುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ನಾವು ಶಾಂತಿಯನ್ನು ಕಾಪಾಡಬೇಕು. ಯಾರೂ ಸಹ ಇದನ್ನು ರಾಜಕೀಯಕರಣ ಮಾಡಬಾರದು. ಭಾರತೀಯರನ್ನು ಕಾಪಾಡಬೇಕು ಎನ್ನುವುದು ಮುಖ್ಯವಾಗಬೇಕು ಎಂದು ಹೇಳಿದರು.

Read More

ಚಾಮರಾಜನಗರ :  ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.  ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.   https://ainkannada.com/our-government-is-committed-to-eliminating-the-backward-district-label-attached-to-chamarajanagar-dcm-d-k-shivakumar/ ಸಭೆಯ ನಿರ್ಣಯಗಳೇನು..? ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು. ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು. ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು. ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ…

Read More

ಚಾಮರಾಜನಗರ : ನಂಜುಂಡಪ್ಪ ವರದಿಯಲ್ಲಿ ಚಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ತಮ್ಮ ಇಲಾಖೆ ವತಿಯಿಂದ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. https://ainkannada.com/cabinet-meeting-held-in-the-presence-of-malemahadeshwara-here-are-the-highlights/ ಸಾಲಿಗ್ರಾಮ ಮತ್ತು ತಗಡೂರಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ 82 ಕೋಟಿ ರೂ. ನೀಡಲಾಗಿದೆ. ಕೊಳ್ಳೆಗಾಲದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ 85 ಕೋಟಿ ನೀಡಲಾಗಿದೆ. ಹನೂರು ತಾಲೂಕಿನಲ್ಲಿ ಪ್ರಜಾಸೌಧಕ್ಕೆ 8.60 ಕೋಟಿ ರೂ. ನೀಡಲಾಗಿದೆ. ಬುಡಕಟ್ಟು ಜನರಿಗೆ ವಿದ್ಯುತ್ ಒದಗಿಸಿಕೊಡಲು 50 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಆಮೆಕೆರೆ ಅರಣ್ಯ ಪ್ರದೇಶದಲ್ಲಿದ್ದ ಸುಮಾರು 100 ರೈತರಿಗೆ…

Read More