ಹುಬ್ಬಳ್ಳಿ:- ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಕನ್ನಡಿಗರು ಬಲಿಯಾದ ಹಿನ್ನಲೆ ಬೆಳಗಿನ ಜಾವವಿಶೇಷ ವಿಮಾನ ಮೂಲಕ ಸಚಿವ ಸಂತೋಷ ಲಾಡ್ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ https://ainkannada.com/it-is-not-easy-for-these-piles-to-change-the-stance-on-behalf-of-the-spouse-wednesdays-future-23-april-2025/ ಸಿಎಂ ಸೂಚನೆ ಹಿನ್ನಲೆ ಸಚಿವ ಸಂತೋಷ ಲಾಡ್ ಅವರು ಹುಬ್ಬಳ್ಳಿ ಯಿಂದ ವಿಶೇಷ ವಿಮಾನ ಮೂಲಕ ಕಾಶ್ಮೀರಕ್ಕೆ ಪಯಣ ಬೆಳೆಸಿದ್ದಾರೆ. ಕಾಂಗ್ರೆಸ್ ಯುವ ಮುಖಂಡ ಮಯೂರ ಮೋರೆ, ಸಚಿವ ಲಾಡ್ ಆಪ್ತ ಸಹಾಯಕಾದ ಅಲಿ ಗೊರವನಕೊಳ್ಳ, ಸಂದೀಪ ಸೇರಿ 4 ಜನರು ಪ್ರಯಾಣ ಬೆಳೆಸಿದ್ದಾರೆ. ಪೆಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಸಿಲುಕಿದ ಕನ್ನಡಿಗರ ರಕ್ಷಣೆಗೆ ಲಾಡ್ ತೆರಳಿದರು. ಕಾಶ್ಮೀರದ ದಾಳಿಗೆ ಸಿಲುಕಿದ ಕನ್ನಡಿಗರು: ದಕ್ಷಿಣ ಕಾಶ್ಮೀರದ ಪ್ರಮುಖ ಪ್ರವಾಸಿ ತಾಣವಾದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಏಕಾಏಕಿ ನಡೆಸಿರುವ ದಾಳಿಯಲ್ಲಿ ಇಬ್ಬರು ವಿದೇಶಿಗರು ಸೇರಿದಂತೆ ಸುಮಾರು 26 ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಯಲ್ಲಿ ಶಿವಮೊಗ್ಗ ಹಾವೇರಿ ಮೂಲದ ಇಬ್ಬರು ಪ್ರವಾಸಿಗರು ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಈ ಘಟನೆಯಲ್ಲಿ ಕೆಲವು ಕನ್ನಡಿಗರು ಸಿಕ್ಕಿರುವ…
Author: AIN Author
ಸೂರ್ಯೋದಯ – 5:58 ಬೆ ಸೂರ್ಯಾಸ್ತ – 6:30 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ದಶಮಿ ನಕ್ಷತ್ರ – ಧನಿಷ್ಥೆ ಯೋಗ – ಶುಕ್ಲ ಕರಣ – ವಿಷ್ಟಿ **ಮಳೆ ನಕ್ಷತ್ರ- ಅಶ್ವಿನಿ* * ರಾಹು ಕಾಲ – 12:00 ದಿಂದ 01:30 ವರೆಗೆ ಯಮಗಂಡ – 07:30 ದಿಂದ 09:00 ವರೆಗೆ ಗುಳಿಕ ಕಾಲ – 10:30 ದಿಂದ 12:00 ವರೆಗೆ ಬ್ರಹ್ಮ ಮುಹೂರ್ತ – 4:22 ಬೆ. ದಿಂದ 5:10 ಬೆ.ವರೆಗೆ ಅಮೃತ ಕಾಲ – 3:59 ಬೆ. ದಿಂದ 5:30 ಬೆ. ವರೆಗೆ ಅಭಿಜಿತ್ ಮುಹುರ್ತ – ಇಲ್ಲ ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ…
ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದು, ಉಗ್ರರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ 27ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಕಾಶ್ಮೀರದ ಸೊಬಗನ್ನು ಸವಿಯುತ್ತಿದ್ದ . ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ಮಾಡಿದ್ದಾರೆ . ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇನ್ನೂ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯಅವರು ಅಧಿಕಾರಿಗಳ ಸಭೆ ನಡೆಸಿ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕನ್ನಡಿಗರ ನೆರವಿಗೆ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. https://ainkannada.com/terrorist-attack-in-pahalgam-is-a-heinous-act-mp-basavaraj-bommai/ ಉಗ್ರರ ಹೇಯಕೃತ್ಯಕ್ಕೆ ತೀವ್ರ ಖಂಡನೆ ಇನ್ನೂ ಉಗ್ರರ ದಾಳಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಖಂಡಿಸಿದ್ದು, ಪ್ರವಾಸಿಗರ ಮೇಲಿನ ಉಗ್ರರ ಗುಂಡಿನ ದಾಳಿ ಆಘಾತ, ನೋವು ತಂದಿದೆ. ಇದು ಒಂದು ಹೇಯ ಮತ್ತು ಅಮಾನವೀಯ ಕೃತ್ಯವಾಗಿದ್ದು, ಇದನ್ನು…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಈವರೆಗೂ ಸುಮಾರು 27ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದರಲ್ಲಿ ಕರ್ನಾಟಕ ಮೂಲದ ಇಬ್ಬರೂ ಸೇರಿದ್ದಾರೆ. ಇನ್ನೂ ಉಗ್ರ ದಾಳಿಯ ಬಳಿಕ ಪ್ರವಾಸಿಗರಿಗೆ ಸಹಾಯ ಮಾಡಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ 24/7 ತುರ್ತು ಸಹಾಯವಾಣಿ ಆರಂಭಿಸಿದೆ. “ಸಹಾಯ ಅಥವಾ ಮಾಹಿತಿ ಅಗತ್ಯವಿರುವ ಪ್ರವಾಸಿಗರಿಗಾಗಿ ಅನಂತನಾಗ್ ಜಿಲ್ಲಾಡಳಿತವು 24×7 ತುರ್ತು ಸಹಾಯ ಕೇಂದ್ರವನ್ನು ಸ್ಥಾಪಿಸಿದೆ. ಪ್ರವಾಸಿಗರು ಮಾಹಿತಿ ಅಥವಾ ಸಹಾಯಕ್ಕಾಗಿ 01932222337, 7780885759, 9697982527 ಅಥವಾ 6006365245 ಅನ್ನು ಸಂಪರ್ಕಿಸಬಹುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರದಲ್ಲಿಯೂ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ಘಟನೆಯ ಕುರಿತು ಸಹಾಯಕ್ಕಾಗಿ ಪ್ರವಾಸಿಗರು 01942457543, 01942483651 ಅಥವಾ 7006058623 ಅನ್ನು ಸಂಪರ್ಕಿಸಬಹುದು ಎಂದು ವಕ್ತಾರರು ತಿಳಿಸಿದ್ದಾರೆ. https://ainkannada.com/two-people-from-karnataka-killed-in-terrorist-attack-in-pahalgam/ ಬೈಸರನ್ ಕಣಿವೆಯಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 27ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ.
ಶ್ರೀನಗರ/ಹಾವೇರಿ : ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಕರ್ನಾಟಕದ ಮತ್ತೊಬ್ಬರು ಬಲಿಯಾಗಿದ್ದು, ಈ ಮೂಲಕ ಇಬ್ಬರು ಕನ್ನಡಿಗರು ಸಾವನ್ನಪ್ಪಿದಂತಾಗಿದೆ. ದ ಹಾವೇರಿಯ ರಾಣೆಬೆನ್ನೂರು ಮೂಲದ ಭರತ್ ಭೂಷಣ್ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಭರತ್ ಅವರು ಮಾಜಿ ಸ್ಪೀಕರ್ ಕೆ. ಬಿ. ಕೋಳಿವಾಡ ಅವರ ಅಳಿಯನ ಸ್ನೇಹಿತ ಎಂಬ ಮಾಹಿತಿ ಇದೆ. ಇದಕ್ಕೂ ಮೊದಲು ದಾಳಿಯಲ್ಲಿ ಶಿವಮೊಗ್ಗ ಮೂಲದ ಉದ್ಯಮಿ ಮಂಜುನಾಥ್ ಎಂಬವರು ಸಾವಿಗೀಡಾಗಿದ್ದರು. https://ainkannada.com/terrorist-attack-in-pahalgam-is-a-heinous-act-mp-basavaraj-bommai/ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 27 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು : ಜಮ್ಮುಕಾಶ್ಮೀರದಲ್ಲಿನ ಪಹಲ್ಗಾಮ್ನಲ್ಲಿನ ಭಯೋತ್ಪಾದಕರ ದಾಳಿಯನ್ನು ಸಂಸದ ಬಸವರಾಜ್ ಬೊಮ್ಮಾಯಿ ಖಂಡಿಸಿದ್ದಾರೆ. https://ainkannada.com/no-politics-over-terror-attacks-in-jammu-and-kashmir-minister-santosh-lad/ ಉಗ್ರ ದಾಳಿ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಂಸದ ಬಸವರಾಜ್ ಬೊಮ್ಮಾಯಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಅಮಾಯಕರ ಮೇಲೆ ಹಲ್ಲೆ ಮಾಡಿರುವುದು ಇದೊಂದು ಹೇಯ ಕೃತ್ಯ ಮತ್ತು ಇದು ಭಯೋತ್ಪಾದನೆ ಮರುಸ್ಥಾಪಿಸುವ ಪ್ರಯತ್ನ. ಇದನ್ನು ಪ್ರತಿಯೊಬ್ಬ ನಾಗರಿಕರು ಖಂಡಿಸುತ್ತೇವೆ. ಧರ್ಮದ ಹೆಸರು ಕೇಳಿ ಗುಂಡು ಹಾರಿಸಿರುವುದು ಭಾರತದ ವಿರೋಧಿ ಶಕ್ತಿಗಳ ಕೈವಾಡ ಇರುವುದು ಬಹಳ ಸ್ಪಷ್ಟ. ಇದನ್ನು ಕೂಡಲೇ ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಮಟ್ಟ ಹಾಕಬೇಕು. ಮತ್ತು ಜಮ್ಮು ಕಾಶ್ಮೀರ ಕಣಿವೆಯಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರಲು ರಾಜ್ಯ ಸರ್ಕಾರ ಎಲ್ಲ ವ್ಯವಸ್ಥೆಯನ್ನು ಮಾಡಬೇಕು. ಘಟನೆಯಲ್ಲಿ ಮೃತರಾದವರ ಕುಟುಂಬದವರಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಭಗವಂತ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಪೋಸ್ಟ್ ಮಾಡಿದ್ದಾರೆ.
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿನ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, “ಈ ಹೀನ ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಅವರ ದುಷ್ಟ ಉದ್ದೇಶ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಸೌದಿ ಅರೇಬಿಯಾ ಪ್ರವಾಸದಲ್ಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದಾರೆ. ಜೊತೆಗೆ ದಾಳಿಯಾಗಿರುವ ಸ್ಥಳಕ್ಕೆ ಭೇಟಿನ ನೀಡಿ ಪರಿಸ್ಥಿತಿಯನ್ನು ಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ. https://ainkannada.com/no-politics-over-terror-attacks-in-jammu-and-kashmir-minister-santosh-lad/ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ 26 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹಲವು ಮಂದಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಮೃತ ವ್ಯಕ್ತಿಗಳ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದ್ದು ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ…
ಧಾರವಾಡ : ಜಮ್ಮುಕಾಶ್ಮೀರದಲ್ಲಿ ಉಗ್ರರ ದಾಳಿ ವಿಚಾರವಾಗಿ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದರು. ಈ ವಿಷಯದಲ್ಲಿ ನಾವು ರಾಜಕೀಯ ಮಾತನಾಡುವುದಿಲ್ಲ. ಈಗ ರಾಜಕೀಯ ಮಾತನಾಡುವುದು ಸರಿಯಲ್ಲ. ಇನ್ನೂ ಕೂಡ ಏನು ಆಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲ. ಶಿವಮೊಗ್ಗದವರ ಮಾಹಿತಿ ಬಿಟ್ರೇ ಬೇರೆ ಮಾಹಿತಿ ಬಂದಿಲ್ಲ. ಪುಲ್ವಾಮ್ ಬಳಿಕ ಜನ ಎಲ್ಲ ಮರೆತು ಬಿಟ್ಟಿದ್ರು. ಈಗ ಅದನ್ನು ಮಾತನಾಡಿದರೆ ರಾಜಕೀಯ ಆಗುತ್ತದೆ https://ainkannada.com/they-shot-at-people-asking-about-religion-firing-on-those-who-were-tied-up-in-bel-puri-terrorists-heinous-act-in-jammu-and-kashmir/ ಜಮ್ಮು-ಕಾಶ್ಮೀರದಲ್ಲಿ 2000ಕ್ಕಿಂತ ಹೆಚ್ಚು ಇಂತಹ ಘಟನೆಗಳು ಆಗಿವೆ. ಕಳೆದ ಹತ್ತು ವರ್ಷಗಳಲ್ಲಿ 800ಕ್ಕೂ ಹೆಚ್ಚು ಸಣ್ಣ ಸಣ್ಣ ಬಾಂಬ್ ಸ್ಫೋಟವಾಗಿವೆ. ಇದರ ಬಗ್ಗೆ ವ್ಯಾಪಕವಾಗಿ ಚರ್ಚೆ ಆಗಿಲ್ಲ. ಇವತ್ತು ಈ ವಿಷಯದಲ್ಲಿ ರಾಜಕೀಯ ಟೀಕೆ ಸರಿಯಲ್ಲ. ಪುಲ್ವಾಮ್ ದಾಳಿ ಆಗಿತ್ತು, ಅದರಲ್ಲಿ ಎಷ್ಟು ಜನರನ್ನು ಹಿಡಿದಿದ್ದಾರೆ. 300ಕೆಜಿ RDX ಬಂದಿತ್ತು. ಅದು ಎಲ್ಲಿಂದ ಬಂತು ಎಂಬ ಮಾಹಿತಿ ಸಿಕ್ಕಿಲ್ಲ. ಅಲ್ಲಿನ ರಾಜ್ಯಪಾಲರು ಸಂಪೂರ್ಣ ಮಾಹಿತಿ ಕೊಟ್ಟಿದ್ದರು. ಆದರೂ ಆ ಬಗ್ಗೆ ಚರ್ಚೆ…
ಜಮ್ಮುಕಾಶ್ಮೀರ : ಜಮ್ಮುಕಾಶ್ಮೀರದಲ್ಲಿ ಭಯೋತ್ಪಾದಕರು ದುಷ್ಕೃತ್ಯ ನಡೆದಿದ್ದು, ಐವರು ಮೃತರಾಗಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇನ್ನೂ ಈ ದುಷ್ಕೃತ್ಯವನ್ನು ಕಣ್ಣಾರೆ ಕಂಡ ಪ್ರತ್ಯಕ್ಷ ದರ್ಶಿಗಳು ಎಳೆಎಳೆಯಾಗಿ ತೆರೆದಿಟ್ಟಿದ್ದಾರೆ. ಈ ಉಗ್ರರು ನೀವು ಯಾವ ಧರ್ಮ ಅಂತ ಕೇಳಿ ಹಿಂದೂ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. https://ainkannada.com/firing-attack-in-jammu-and-kashmir-three-killed-including-a-tourist-from-shivamogga/ ಇನ್ನೂ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಸಹ ಬಲಿಯಾಗಿದ್ದಾರೆ . ಆದರೆ ಗುಂಡಿನ ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಇನ್ನು ಏಳು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳಾಂತರಿಸಲು ಆ್ಯಂಬುಲೆನ್ಸ್ ಗಳನ್ನು ರವಾನಿಸಲಾಗಿದೆ.
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಇದೇ ರೀತಿ ನಮ್ಮ ವಿರುದ್ಧ ಇಲ್ಲಸಲ್ಲದ್ದನ್ನು ಮಾತನಾಡುವುದು ಮುಂದುವರೆಸಿದರೆ, ಆತನ ವಿರುದ್ಧ ಇರುವ ಪ್ರಕರಣದ ಮಾಹಿತಿಗಳನ್ನು ರಾಜರಾಜೇಶ್ವರಿ ನಗರ ಕ್ಷೇತ್ರದ ಪ್ರತಿ ಮನೆ ಮನೆಗೆ ಹಂಚಬೇಕಾಗುತ್ತದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಂಗಳವಾರ ಮಾತನಾಡಿದ ಅವರು, ಆತನ ಕರ್ಮಾಕಾಂಡಗಳನ್ನು ನಮ್ಮ ಕಾರ್ಯಕರ್ತರು ಕೇವಲ ಒಂದು ದಿನ ಹಂಚಿ ಸುಮ್ಮನಾಗುವುದಿಲ್ಲ, ನಿರಂತರವಾಗಿ ಹಂಚಲಿದ್ದಾರೆ. ಒಕ್ಕಲಿಗರ ಹೆಣ್ಣು ಮಕ್ಕಳನ್ನು ಮಂಚಕ್ಕೆ ಕರೆಯಲು ಆತನಿಗೆ ನಾಚಿಕೆಯಾಗುವುದಿಲ್ಲವೇ? ಮತಕ್ಕಾಗಿ ದಲಿತರನ್ನು ಬಳಸಿಕೊಂಡು ಅವರಿಗೆ ಅವಾಚ್ಯವಾಗಿ ನಿಂದಿಸುತ್ತಾನೆ. ಮಾಧ್ಯಮದವರ ಮುಂದೆ ಬಾಯಿಗೆ ಬಂದಂತೆ ಮಾತನಾಡುತ್ತಾನೆ. ನಾನು ಮಾಧ್ಯಮ ನಡೆಸುತ್ತಿದ್ದೇನೆ, ನನ್ನ ಬಗ್ಗೆಯೇ ಮಾತನಾಡುತ್ತೀರಾ, ನನ್ನ ಮೇಲೆ ಕೇಸ್ ಹಾಕುತ್ತೀರಾ ಎಂದು ಬೆದರಿಕೆ ಹಾಕುತ್ತಾನೆ” ಎಂದು ಹರಿಹಾಯ್ದರು. https://ainkannada.com/kannadigas-performance-in-upsc-exam-results/ ಆಣೆ ಪ್ರಮಾಣದ ಸವಾಲಿನ ಬಗ್ಗೆ ಕೇಳಿದಾಗ, “ಆತ ಯಾರ ಮೇಲೆ ಆಣೆ ಪ್ರಮಾಣ ಮಾಡಿಲ್ಲ? ನೀವು ಹೋದರೆ ನಿಮ್ಮ…