Author: AIN Author

ಹುಬ್ಬಳ್ಳಿ:- ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೆ ಶೀಘ್ರವೇ ಮೋದಿ ಉತ್ತರ ಕೊಡ್ತಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. https://ainkannada.com/special-flight-to-bring-kannadigas-safely-minister-prahlad-joshi/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಪ್ರಧಾನಿ ಮೋದಿ, ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲೆಸಿತ್ತು. ಹೀಗಾಗಿ ಹೆಚ್ಚಿನ ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಲು ಆರಂಭ ಮಾಡಿದ್ದರು ಎಂದಿದ್ದಾರೆ. ದೇಶದ ಜನತೆ ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು ಅನ್ನೋ ಇಚ್ಛೆ ಹೊಂದಿದ್ದಾರೆ. ಮೃತ ಕುಟುಂಬದ ಜೊತೆಗೆ ದೇಶ, ಭಾರತ ಸರ್ಕಾರವಿದೆ. ಉಗ್ರಗಾಮಿಗಳ ಹತ್ಯೆಯಾಗುತ್ತದೆ. ಭಾರತ ದೇಶ ಜಗತ್ತಿನಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಅದನ್ನು ಸಹಿಸಲು ಪಾಕಿಸ್ತಾನಕ್ಕೆ ಆಗುತ್ತಿಲ್ಲ. ಪಾಕಿಸ್ತಾನ ಅವನತಿ ಆರಂಭವಾಗಿದೆ. ಹಿಂದೂಗಳನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಿದ್ದಾರೆ. ಮೋದಿ ಅವರು ಬಲಾಢ್ಯ ರಾಷ್ಟ್ರ ಕಟ್ಟುತ್ತಿದ್ದಾರೆ. ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ. ಭದ್ರತಾ ವ್ಯವಸ್ಥೆ ಸರಿಯಿದೆ ಎಂದು…

Read More

ಹುಬ್ಬಳ್ಳಿ:- ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. https://ainkannada.com/terrorist-attack-in-kashmir-siddaramaiah-says-centres-intelligence-failure/ ಈ ಸಂಬಂಧ ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆ ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಅವರವರ ಊರುಗಳಿಗೆ ತಲುಪಿಸಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು. ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ ಊರುಗಳಿಗೆ ಸುರಕ್ಷಿತವಾಗಿ ತಲುಪಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮಂಗಳವಾರ ರಾತ್ರಿಯೇ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಕನ್ನಡಿಗರನ್ನು ಸುರಕ್ಷಿತವಾಗಿ ಮರಳಿ ಕರೆತರಲು ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷ ವಿಮಾನ ವ್ಯವಸ್ಥೆ ಸಹ ಮಾಡಲಾಗಿದೆ. ಸದ್ಯಕ್ಕೆ ಮುಂಬೈ ಮತ್ತು ದೆಹಲಿಗೆ ಪ್ರವಾಸಿಗರನ್ನು ರವಾನಿಸಲು ಸರ್ಕಾರ ವಿಮಾನ ವ್ಯವಸ್ಥೆ ಮಾಡಿದೆ. ಇನ್ನೆರೆಡು ದಿನಗಳಲ್ಲಿ ಎಲ್ಲ ಪ್ರವಾಸಿಗರನ್ನೂ ಅವರವರ ಸ್ವಸ್ಥಾನಗಳಿಗೆ ಸುರಕ್ಷಿತವಾಗಿ ಮರಳಿಸಲಾಗುತ್ತದೆ ಎಂದು ತಿಳಿಸಿದರು.

Read More

ಬೆಂಗಳೂರು, ಏಪ್ರಿಲ್ 23 : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://ainkannada.com/terrorist-attacks-in-kashmir-are-unfortunate-minister-k-venkatesh/ ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡಿಗರನ್ನು ಕರೆತರಲು ಕಾರ್ಮಿಕ ಸಚಿವರಿಗೆ ಸೂಚನೆ: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು.. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು. ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ…

Read More

ಚಾಮರಾಜನಗರ: ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬAಧಿಸಿದAತೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬAಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾತಾದಿದ ಅವರು, ಉಗ್ರರ ದಾಳಿ ಅತ್ಯಂತ ದುರಾಧೃಷ್ಟಕರ ಸಂಗತಿ. ಅಮಾಯಕರ ಹತ್ಯೆ ಮಾಡೋದು, ಶೂಟ್ ಮಾಡೋದು ನೋವಿನ ಸಂಗತಿ. ಹೀಗಾಗಿ ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಅಲ್ಲದೇ ಕೇಂದ್ರ ಇಂತಹ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಇನ್ನೂ ಆರ್ಟಿಕಲ್ ೩೭೦ ತೆಗೆದಿದ್ದೇ ಉಗ್ರರ ದಾಳಿಗೆ ಕಾರಣವೆಂಬ ಕಾಂಗ್ರೆಸ ಶಾಸಕನ ಹೇಳಿಕೆ ವಿಚಾರವಾಗಿ ಮಾತಾನಾಡಿ,ಅದು ಅವರ ವೈಯಕ್ತಿಕ ವಿಚಾರ ಎಂದು ಹೇಳುವ ಮೂಲಕ ಪ್ರತಿಕ್ರಿಯಿಸಲು ಸಚಿವರು ನಿರಾಕರಿಸಿದರು.

Read More

ಬೇಸಿಗೆಯಲ್ಲಿ ಹಣ್ಣುಗಳು ಮತ್ತು ತರಕಾರಿಗಳ ತಾಜಾತನ ಬೇಗ ಹಾಳಾಗುತ್ತದೆ. ಅದಕ್ಕಾಗಿಯೇ ಅವುಗಳನ್ನು ಫ್ರಿಡ್ಜ್​ನಲ್ಲಿ ಸಂಗ್ರಹಿಸಿಡಬೇಕಾದುದು ಅನಿವಾರ್ಯ. ಆದರೆ, ಫ್ರಿಡ್ಜ್​ನಲ್ಲಿಟ್ಟು ತಿನ್ನುವುದು ಆರೋಗ್ಯಕ್ಕೆ ಹೆಚ್ಚು ಆರೋಗ್ಯಕರವಲ್ಲ. https://ainkannada.com/protest-demanding-that-terrorists-be-shot-dead/ ಕೆಲವು ಬಗೆಯ ಹಣ್ಣುಗಳನ್ನು ಮಾತ್ರ ತಂಪಾದ ಸ್ಥಳದಲ್ಲಿ ಸಂಗ್ರಹಿಸುವುದು ಉತ್ತಮ. ವಿಶೇಷವಾಗಿ ಈ 5 ಬಗೆಯ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿಟ್ಟ ನಂತರ ತಿನ್ನುವುದರಿಂದ ನಿಮಗೆ ಅನಾರೋಗ್ಯ ಉಂಟಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಬಾಳೆಹಣ್ಣುಗಳು ಬಾಳೆಹಣ್ಣನ್ನು ಫ್ರಿಡ್ಜ್ ನಲ್ಲಿ ಇಡುವುದರಿಂದ ಅವು ಬೇಗನೆ ಕಪ್ಪಾಗುತ್ತವೆ ಮತ್ತು ಅವುಗಳ ಸಿಹಿ ರುಚಿ ಕಡಿಮೆಯಾಗುತ್ತದೆ. ಶೀತ ತಾಪಮಾನವು ಬಾಳೆಹಣ್ಣಿನಲ್ಲಿರುವ ಸಕ್ಕರೆಗಳನ್ನು ಒಡೆಯುತ್ತದೆ, ಇದರಿಂದಾಗಿ ಅವು ಗಟ್ಟಿಯಾಗುತ್ತವೆ ಅಥವಾ ಮೆತ್ತಗಾಗುತ್ತವೆ. ಬಾಳೆಹಣ್ಣುಗಳನ್ನು ಕೋಣೆಯ ಉಷ್ಣಾಂಶದಲ್ಲಿ ಮತ್ತು ಚೆನ್ನಾಗಿ ಗಾಳಿ ಇರುವ ಪ್ರದೇಶದಲ್ಲಿ ಸಂಗ್ರಹಿಸಿ. ಅವು ಅತಿಯಾಗಿ ಹಣ್ಣಾಗಿದ್ದರೆ, ಅವುಗಳನ್ನು ಸಿಪ್ಪೆ ಸುಲಿದು ಫ್ರೀಜರ್‌ನಲ್ಲಿ ಸಂಗ್ರಹಿಸಿ ಸ್ಮೂಥಿಗಳಿಗೆ ಬಳಸಬಹುದು. ಮಾವಿನಹಣ್ಣುಗಳು ಮಾವಿನಹಣ್ಣನ್ನು ಫ್ರಿಡ್ಜ್ ನಲ್ಲಿ ಇಡುವುದರಿಂದ ಅವುಗಳ ನೈಸರ್ಗಿಕ ರುಚಿ ಮತ್ತು ರಸಭರಿತವಾದ ರಚನೆಗೆ ಹಾನಿಯಾಗುತ್ತದೆ. ಶೀತ ತಾಪಮಾನವು ಮಾವಿನ ಹಣ್ಣಿನಲ್ಲಿರುವ…

Read More

ಬಹಳ ಹಿಂದಿನ ನಮ್ಮ ಪೂರ್ವಜರಂತೆ ನಮ್ಮ ಆರೋಗ್ಯ ಸರಿಯಾಗಿಲ್ಲ. ಇದಕ್ಕೆ ಕಾರಣಗಳು ಹಲವಾರು ಇರಬಹುದು. ಆದರೆ, ಇಂದಿನ ಪ್ರಪಂಚದಲ್ಲಿ ಉತ್ತಮ ಆರೋಗ್ಯವನ್ನು ಹೊಂದಬೇಕಾದರೆ ಬಹಳ ಕಷ್ಟ ಪಡಬೇಕು. ಹೀಗೆ ಆರೋಗ್ಯವನ್ನು ಕಳೆದುಕೊಳ್ಳುವುದರ ಬಗ್ಗೆ ಯೋಚಿಸಲು ಹೊರಟಾಗ ನಮಗೆ ಸಿಗುವ ಸಾಮಾನ್ಯವಾದ ಕಾರಣಗಳೆಂದರೆ ಅನಗತ್ಯ ತೂಕ ಗಳಿಕೆ, ದೇಹದಲ್ಲಿ ಹಾರ್ಮೋನುಗಳ ಬದಲಾವಣೆ, ಸರಿ ಇರದ ಆಹಾರ ಪದ್ಧತಿಗಳು, ನಮ್ಮ ಕೆಟ್ಟ ಜೀವನ ಶೈಲಿ, ಇಂದಿನ ನಮ್ಮ ಒತ್ತಡ, ಆತಂಕಗಳು, ಖಿನ್ನತೆ, ಮಾಲಿನ್ಯ. ಈ ತೊಂದರೆಗಳ ಬಗ್ಗೆ ನಾವು ಎಷ್ಟು ತಿಳಿಸಿ ಹೇಳಿದರೂ ಸಾಲದು. https://ainkannada.com/actor-darshan-was-spotted-riding-a-bullock-cart-in-his-mysuru-farmhouse/ ಬೇಸಿಗೆಯಲ್ಲಿ ದೇಹವನ್ನು ಕೂಲ್‌ ಆಗಿರಿಸಲು ಒಂದು ಗ್ಲಾಸ್‌ ಸೋಂಪು ನೀರನ್ನು ಕೂಡಾ ಸೇವನೆ ಮಾಡಬಹುದು. ಇದರಲ್ಲಿ ವಿಟಮಿನ್‌ಗಳು, ಕ್ಯಾಲ್ಸಿಯಂ, ಫೈಬರ್, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಸತುವು ಮುಂತಾದ ಅನೇಕ ಪೋಷಕಾಂಶಗಳಿದ್ದು, ಇದು ಅನೇಕ ರೋಗಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ಸೋಂಪು ನೀರು ಒಂದು ನೈಸರ್ಗಿಕ ಪರಿಹಾರವಾಗಿದ್ದು, ಇದನ್ನು ನಿಯಮಿತವಾಗಿ ಸೇವನೆ ಮಾಡುವ ಮೂಲಕ ಬೇಸಿಗೆಯಲ್ಲಿ ಆರೋಗ್ಯಕ್ಕೆ…

Read More

ಕಾಶ್ಮೀರದಲ್ಲಿ ಮಂಗಳವಾರ ಭಯಾನಕ ರೀತಿಯಲ್ಲಿ ಉಗ್ರರ ದಾಳಿಯಾಗಿದೆ. ಬೇಸಿಗೆ ರಜೆ ಕಳೆಯಲು ಕಾಶ್ಮೀರಕ್ಕೆ ಆಗಮಿಸಿದ್ದ ಪ್ರವಾಸಿಗರನ್ನೆ ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಅನಂತನಾಗ್​​ ಜಿಲ್ಲೆಯ ಪಹಲ್ಗಾಮ್​​​ನಲ್ಲಿ ಇಬ್ಬರು ವಿದೇಶಿಗರು ಸೇರಿ 27 ಪ್ರವಾಸಿಗರು ಜೀವ ಬಿಟ್ಟಿದ್ದಾರೆ. ರಾಕ್ಷಸೀ ಕೃತ್ಯ ಎಸಗಿದ ಈ ಗ್ಯಾಂಗ್​ಗೆ ಪಾಕಿಸ್ತಾನದ ಲಷ್ಕರ್​​ ಎ ತೊಯ್ಬಾ ಉಗ್ರ ಪೋಷಣೆ ಮಾಡಿದೆ. https://ainkannada.com/heavy-rain-likely-in-these-districts-of-karnataka-today-where-2/ ಕೃತ್ಯದ ಹೊಣೆಯನ್ನ ಎಲ್​​ಇಟಿಯ The Resistance Front ಹೊತ್ತುಕೊಂಡಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೈಸರನ್ ಕಣಿವೆಯಿಂದ ಇಳಿದು ಬಂದ ಉಗ್ರರು, ಪ್ರವಾಸಿಗರ ಸೋಗಿನಲ್ಲಿ ಮಾತನಾಡಿಸುವ ನೆಪದಲ್ಲಿ ದಾಳಿ ಆರಂಭಿಸಿದ್ದಾರೆ. ಇಬ್ಬರು ಸ್ಥಳೀಯರು ಸೇರಿ ಒಟ್ಟು 8 ಉಗ್ರರು ಓಪನ್​ ಫೈರ್​​ ಮಾಡಿದ್ದಾರೆ. ಕೃತ್ಯಕ್ಕೆ ಎಕೆ-47 ಗನ್​ ಬಳಕೆ ಆಗಿದ್ದು, ಸ್ಪೆಷಲಿ ಮುಸ್ಲಿಮೇತರರನ್ನು ಗುರಿಯಾಗಿಸಿ ಹೇಡಿತನ ಮೆರೆದಿದ್ದಾರೆ. ನೀವು ಹಿಂದೂಗಳಾ ಎಂದು ಕೇಳಿ ಕೇಳಿ ಟಾರ್ಗೆಟ್​​​ ಮಾಡಿದ್ದಾರೆ. ಇದೀಗ ಓರ್ವ ಭಯೋತ್ಪಾದಕನ ಸ್ಪೆಷಲ್ ಫೋಟೋ ರಿಲೀಸ್ ಆಗಿದೆ.

Read More

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಲವೆಡೆ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/pulwama-attack-shivaraj-kumar-and-raveena-tandon-react/ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರೊಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ…

Read More

ನವದೆಹಲಿ/ ಶ್ರೀನಗರ:- ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26ಕ್ಕೂ ಹೆಚ್ಚು ಪ್ರವಾಸಿಗರು ಜೀವ ಕಳೆದುಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ ಸೌದಿ ಪ್ರವಾಸವನ್ನ ಮೊಟಕುಗೊಳಿಸಿ ಭಾರತಕ್ಕೆ ವಾಪಸ್​​ ಆಗಿದ್ದಾರೆ. https://ainkannada.com/pahalgam-terror-attack-madhusudan-of-bengaluru-dies-in-hindu-massacre/ ನಿಗದಿತ ವೇಳಾಪಟ್ಟಿಯಂತೆ ಮೋದಿ ಬುಧವಾರ ರಾತ್ರಿ ನವದೆಹಲಿಗೆ ಮರಳಬೇಕಿತ್ತು. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ ಅವರು ಮುಂಚಿತವಾಗಿ ದೇಶಕ್ಕೆ ವಾಪಸ್ ಆಗಿದ್ದಾರೆ. ಮೋದಿ, ತಮಗಾಗಿ ಏರ್ಪಡಿಸಿದ್ದ ಅಧಿಕೃತ ಔತಣಕೂಟವನ್ನು ಬಿಟ್ಟು ತಮ್ಮ ಪ್ರವಾಸ ಮೊಟಕುಗೊಳಿಸಿ ಮಂಗಳವಾರ ರಾತ್ರಿ ದೇಶಕ್ಕೆ ಮರಳಿದ್ದಾರೆ. ಇನ್ನು ಪ್ರಧಾನಿ ಮೋದಿ ಅವರ ತ್ವರಿತ ಮರಳುವಿಕೆ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು, ರಾಯಲ್ ಪ್ಯಾಲೇಸ್‌ಗೆ ಭೇಟಿ ನೀಡಿ ಸೌದಿ ನಾಯಕರಿಗೆ ಮಾಹಿತಿ ನೀಡಿದ್ದಾರೆ. ಸೌದಿ ನಾಯಕರೂ ಕೂಡ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ…

Read More

ಬೆಂಗಳೂರು:- ಕಾಶ್ಮೀರದಲ್ಲಿ ಉಗ್ರರು ನಡೆಸಿದ ನಡೆದ ಭೀಕರ ಅಟ್ಟಹಾಸದಲ್ಲಿ ಬೆಂಗಳೂರಿನ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಮಧುಸೂದನ್‌ ಮೃತ ವ್ಯಕ್ತಿ. https://ainkannada.com/terrorist-attack-techie-dies-in-bengaluru-death-toll-rises/ ಮೂಲತಃ ಆಂಧ್ರದ ನೆಲ್ಲೂರಿನವರಾದ ಮಧುಸೂದನ್‌ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದರು. ಎರಡು ದಿನದ ಹಿಂದೆ ಕಾಶ್ಮೀರಕ್ಕೆ ಕುಟುಂಬ ತೆರಳಿತ್ತು. ಮಧುಸೂದನ್‌ ಅವರ ಸಾವಿನೊಂದಿಗೆ ಕರ್ನಾಟಕ ಮೂವರು ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಈಗಾಗಲೇ ಶಿವಮೊಗ್ಗದ ಮಂಜುನಾಥ್‌ ರಾವ್‌, ಬೆಂಗಳೂರಿನ ಭರತ್‌ ಮೃತಪಟ್ಟಿದ್ದಾರೆ. ಉಗ್ರರ ಪೈಶಾಚಿಕ ಕೃತ್ಯಕ್ಕೆ ಒಟ್ಟು 26 ಮಂದಿ ಬಲಿಯಾಗಿದ್ದು. ಕಣ್ಣೆದುರು ಅನೇಕರು, ತಂದೆ, ಪತಿಯನ್ನ ಕಳೆದುಕೊಂಡಿದ್ದಾರೆ.

Read More