Author: AIN Author

ಅಹಮದಾಬಾದ್‌ : ಬರೋಬ್ಬರಿ 64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ ನಡೆಯುತ್ತಿದೆ. ಸತತ ಎರಡು ಲೋಕಸಭೆ , ಹಲವು ವಿಧಾನಸಭೆಗಳಲ್ಲಿ ಸತತ ಸೋಲು ಅನುಭವಿಸಿರುವ ಕಾಂಗ್ರೆಸ್‌ ಇದೀಗ ಪಕ್ಷವನ್ನು ಪುನರಜ್ಜೀವನಗೊಳಿಸಲು ಗುರಿಯತ್ತ ಹೆಜ್ಜೆ ಇಟ್ಟಿದೆ. ಇಂದಿನಿಂದ ಗುಜರಾತ್‌ನ ಅಹಮದಾಬಾದ್‌ನಲ್ಲಿ 89ನೇ ಕಾಂಗ್ರೆಸ್‌ ಮಹಾಅಧಿವೇಶನ ನಡೆಯಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಮುಂದಿನ ಚುನಾವಣೆಗಳಲ್ಲಿನ ಗೆಲುವಿಗಾಗಿ ತಳ ಮಟ್ಟದಲ್ಲಿ ಪಕ್ಷ ಸಂಘಟನೆಗೆ  ಒತ್ತು ನೀಡುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಜಿಲ್ಲಾ ಘಟಕಗಳನ್ನು ಪುನರಚಿಸಲಿದೆ. https://ainkannada.com/waqf-amendment-bill-uproar-in-jammu-and-kashmir-assembly/ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ಚುನಾವಣೆ, ಮುಂದಿನ ವರ್ಷದಲ್ಲಿ ನಡೆಯಲಿರುವ ಕೇರಳ, ತಮಿಳುನಾಡು, ಪುದುಚೇರಿ,  ಪಶ್ಚಿಮ ಬಂಗಾಲ ಮತ್ತು ಅಸ್ಸಾಂ ರಾಜ್ಯಗಳ ಚುನಾವಣೆಯ ಪೂರ್ವ ತಯಾರಿ ಚರ್ಚೆಗಳೂ ನಡೆಯಲಿವೆ. ಚುನಾವಣಾ ಕಾರ್ಯತಂತ್ರಗಳನ್ನು ಬಗ್ಗೆಯೂ ಚರ್ಚೆ ನಡೆಯಲಿದೆ. ಸರ್ದಾರ್‌ ವಲ್ಲಭಬಾಯ್‌ ಪಟೇಲ್‌ ಸ್ಮಾರಕದಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದೆ. ಅದರಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಹಿತ 169 ಮಂದಿ…

Read More

ಬೆಂಗಳೂರು:- ಗೋಲ್ಡ್ ಪ್ರಿಯರಿಗೆ ಚಿನ್ನದಂತ ಸುದ್ದಿ ಸಿಕ್ಕಿದ್ದು, ಬಂಗಾರದ ಬೆಲೆ ಭಾರೀ ಇಳಿಕೆ ಆಗಿದೆ. https://ainkannada.com/darshan-absent-from-court-due-to-back-pain-pavitra-gowda-present/ ಶರವೇಗದಲ್ಲಿ ಚಿನ್ನದ ದರ ಏರಿಕೆ ಕಂಡಿತ್ತು. ಜನ ಸಾಮಾನ್ಯರು ಚಿನ್ನ ಮುಟ್ಟಿದ್ರೇ ಶಾಕ್ ಎಂಬ ಪರಿಸ್ಥಿತಿ ಉದ್ಭವವಾಗಿತ್ತು. ಆದರೀಗ ಟ್ರಂಪ್ ಸುಂಕ ನೀತಿಯಿಂದ ಚಿನ್ನದ ದರ ಇಳಿಕೆ ಕಂಡಿದೆ. ಎಷ್ಟು ದರ ಇಳಿಕೆ? *ಚಿನ್ನದ ದರ ಕಳೆದ 3 ದಿನದಿಂದ ಇಳಿಯುತ್ತಿದೆ *22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 8,285 ರೂಪಾಯಿ ಆಗಿದೆ. *24 ಕ್ಯಾರೆಟ್ ಚಿನ್ನದ ದರ 9,038 ರೂಪಾಯಿ ಆಗಿದೆ. *22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಕಡಿಮೆ ಆಗಿದೆ. ಟ್ರಂಪ್ ಸುಂಕ ನೀತಿಯಿಂದ ಚಿನ್ನದ ದರ ದಿಢೀರ್ ಇಳಿಕೆ ಕಂಡಿದೆ. ಮುಂದಿನ ದಿನದಲ್ಲಿ ಪ್ರತಿ ಗ್ರಾಂಗೆ 7,500 ರೂ. ಆಗಬಹುದು ಎನ್ನುವ ಲೆಕ್ಕಾಚಾರ ವನ್ನು ತಜ್ಞರು ಮಾಡುತ್ತಿದ್ದಾರೆ.

Read More

ಬಾಗಲಕೋಟೆ : ಬಿಜೆಪಿಯವರಿಗೆ ಮಾಡೋಕೆ ಬೇರೆ ಕೆಲಸ ಇಲ್ಲ ಅದಕ್ಕೆ ಹೋರಾಟ ಮಾಡುತ್ತಾಋೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅವರು ಬಿಜೆಪಿ ಜನಾಕ್ರೋಶ ಯಾತ್ರೆಗೆ ತಿರುಗೇಟು ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಾಲಿಂಗಪುರ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್ ಕಾಲದಲ್ಲಿ ಬೆಲೆ  ಏರಿಕೆಯಾಗಿಲ್ಲ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಬಾರಿ ಬೆಲೆ ಏರಿಕೆ ಕಂಡಿದೆ.  ಬಿಜೆಪಿಯವರ ತಟ್ಟೆಯಲ್ಲಿ ಕತ್ತಿ ಸತ್ತಿದೆ. ಅದನ್ನು ಅವರು ನೋಡ್ತಾ ಇಲ್ಲ. ನಮ್ಮ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಹೇಳುತ್ತಾರೆ. ಹಾಗಾಗಿ ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ ಅವರು ಪ್ರತಿಭಟನೆ ಮಾಡುತ್ತಾರೆ ಮಾಡ್ಲಿ ಬಿಡಿ ಎಂದು ತಿರುಗೇಟು ನೀಡಿದರು. https://ainkannada.com/bjp-has-made-jds-a-joker-kumaranna-is-worried-mla-raviganiga/ ಇನ್ನೂ ರೈತರಿಗೆ ಅನುಕೂಲವಾಗಲೆಂದು ಹಾಲಿನ ದರ ಏರಿಕೆಯಾಗಿದೆ. ಉಳಿದೆಲ್ಲ ಬೆಲೆ ಏರಿಕೆಯೂ ಕೇಂದ್ರ ಸರ್ಕಾರವೇ ಮಾಡಿದೆ. ಬಿಜೆಪಿಯವರು ಮೊದಲು ಇದನ್ನ ಅರ್ಥ ಮಾಡಿಕೊಳ್ಳಲಿ ಎಂದರು.

Read More

ಬೆಂಗಳೂರು:- ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಬಂದ ಯುವಕನೊಬ್ಬ ಬಲವಂತವಾಗಿ ತಬ್ಬಿಕೊಳ್ಳಲು ಯತ್ನಿಸಿ ಎದೆಯ ಭಾಗವನ್ನು ಮುಟ್ಟಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹುಡುಕೋದೆ ಪೊಲೀಸರಿಗೆ ಸವಾಲಾಗಿದೆ. https://ainkannada.com/shivamogga-dcc-bank-president-accused-of-misappropriation-of-funds-investigations-underway-in-8-places-including-bangalore/ ಹೌದು, ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಪತ್ತೆಹಚ್ಚುವುದೇ ದೊಡ್ಡ ಸವಾಲಾಗಿದೆ. ಪೊಲೀಸ್‌ ತಂಡಗಳು ಎಷ್ಟೇ ಹುಡುಕಾಟ ನಡೆಸಿದರೂ ಸಂತ್ರಸ್ತ ಯುವತಿ ಪತ್ತೆಯಾಗಿಲ್ಲ. ಏಪ್ರಿಲ್‌ 3 ರ ಮಧ್ಯರಾತ್ರಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ತಬ್ಬಿದ ಯುವಕ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿರುವ ಸುದ್ದಗುಂಟೆಪಾಳ್ಯ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಆರೋಪಿ ಮತ್ತು ಸಂತ್ರಸ್ತ ಯುವತಿಯ ಪತ್ತೆಗೆ ಇಳಿದಿದ್ದಾರೆ. ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಏಪ್ರಿಲ್ 3ರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಈ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಘಟನೆ ಸಂಬಂಧ ಸ್ಥಳೀಯ ನಿವಾಸಿಯೊಬ್ಬರ ದೂರು ಆಧರಿಸಿ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಇಬ್ಬರು…

Read More

ಬೆಂಗಳೂರು/ಶಿವಮೊಗ್ಗ:- ಕೋಟ್ಯಂತರ ಹಣ ದುರ್ಬಳಕೆ ಮಾಡಿದ ಆರೋಪದಡಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಮನೆ ಸೇರಿ ಹಲವೆಡೆ ಇಡಿ ದಾಳಿ ನಡೆದಿದೆ. ಶಿವಮೊಗ್ಗ ಸೇರಿ ಬೆಂಗಳೂರಿನ 8 ಕಡೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. https://ainkannada.com/in-this-part-of-india-onions-are-banned-from-being-used-or-sold-where-why/ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ನಿವಾಸ ಸೇರಿದಂತೆ 8 ಕಡೆ ಇಡಿ ದಾಳಿ ನಡೆಸಿದೆ. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್‌ ಮೇಲೂ ದಾಳಿ ನಡೆದಿದೆ. ಕೋಟ್ಯಂತರ ರೂ ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಮಂಜುನಾಥ ಗೌಡ ಅವರನ್ನು ಎಸಿಬಿ ಬಂಧನ ಮಾಡಿತ್ತು. ಆದರೆ ಚಾರ್ಜ್ ಶೀಟ್ ಅಲ್ಲಿ ಮಂಜುನಾಥ್ ಗೌಡ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು.

Read More

ʻಈರುಳ್ಳಿ ಅಡುಗೆ ಮನೆಯ ರಾಜ ಎಂದೇ ಕರೆಯಲಾಗುತ್ತದೆ. ಈರುಳ್ಳಿ ಇಲ್ಲದೇ ಅಡುಗೆ ಸಾಧ್ಯವೇ ಇಲ್ಲ ಎನ್ನುವಷ್ಟರ ಮಟ್ಟಿಗೆ ಜನಕ್ಕೆ, ಅಡುಗೆಗೆ ಒಗ್ಗಿಕೊಂಡು ಬಿಟ್ಟಿದೆ. ಯಾವುದೇ ಅಡುಗೆ ಇರಲಿ, ಸಲಾಡ್ ಇರಲಿ ಈರುಳ್ಳಿ ಒಂದಿರಬೇಕು. ಇದು ತರಕಾರಿಯೂ ಹೌದು, ಸಾಂಬಾರ್​ ಪದಾರ್ಥವೂ ಹೌದು, ಔಷಧಿಯ ಮೂಲವೂ ಹೌದು, ಆರೋಗ್ಯ ವರ್ಧಕವೂ ಹೌದು. ಈರುಳ್ಳಿಯು ಹಲವು ಪೋಷಕಾಂಶಗಳ ಗಣಿಯಾಗಿದೆ. https://ainkannada.com/husbands-illicit-affair-wife-hangs-herself-in-shame/ ಭಾರತದ ಈ ಏಕೈಕ ಪ್ರದೇಶದಲ್ಲಿ ಈರುಳ್ಳಿಯನ್ನು ಜನರು ಸೇವಿಸುವುದಿಲ್ಲ. ಅದು ಮಾತ್ರವಲ್ಲ ಇಲ್ಲಿ ಯಾವುದೇ ಅಂಗಡಿಗಳಲ್ಲಿ ಈರುಳ್ಳಿ ಮಾರಾಟ ಬ್ಯಾನ್ ಮಾಡಲಾಗಿದೆ. ಈ ಒಂದು ಪ್ರದೇಶದಲ್ಲಿ ಯಾವುದೇ ರೀತಿಯಲ್ಲಿ ಈರುಳ್ಳಿಯನ್ನು ಸೇವಿಸುವುದಿಲ್ಲ. ಇಲ್ಲಿಗೆ ಬರುವವರಿಗೆ ಈರುಳ್ಳಿ ಹಾಕಿದ ಪದಾರ್ಥವನ್ನು ನೀಡುವುದೂ ಇಲ್ಲ. ಈ ಪ್ರದೇಶದ ಹೆಸರು ಜಮ್ಮುವಿನ ಕಟ್ರಾ ನಗರ. ಇಲ್ಲಿ ಸರ್ಕಾರ ಈರುಳ್ಳಿಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಕಟ್ರಾ ಎಂಬುದು ಭಾರತದ ಒಂದು ಪವಿತ್ರ ಕ್ಷೇತ್ರದ ತೀರ್ಥಯಾತ್ರೆಯ ಆರಂಭಗೊಳ್ಳುವ ಸ್ಥಳವಾಗಿದೆ. ಮಾತಾ ವೈಷ್ಣೋದೇವಿಯ ದರ್ಶನದ ಯಾತ್ರೆಗೆ ಹೊರಡುವ ಜನರು ಇಲ್ಲಿಂದಲೇ ಯಾತ್ರೆಯನ್ನು ಕೈಗೊಳ್ಳುತ್ತಾರೆ.…

Read More

ಬೆಂಗಳೂರು:-ಗಂಡನ ಅಕ್ರಮ ಸಂಬಂಧದಿಂದ ಮನನೊಂದು ಪತ್ನಿ ನೇಣಿಗೆ ಶರಣಾದ ಘಟನೆ ಹೆಬ್ಬಾಳದ ಕನಕನಗರದಲ್ಲಿ ಜರುಗಿದೆ. https://ainkannada.com/jcb-roars-in-mahalingapura-town-sheds-where-30-families-lived-evacuated/ ಮೃತ ಮಹಿಳೆಯನ್ನು 29 ವರ್ಷದ ಬಾಹರ್ ಅಸ್ಮಾ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಮದುವೆ ಆಗಿದ್ದರು. ಆತನಿಗೆ ಬೇರೆ ಯುವತಿ ಜೊತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆ ಕುಟುಂಬಸ್ಥರು ಅಸ್ಮಾಳನ್ನು ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಆರೋಪಿಸಿದೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು ಕೇಳಿ ಬಂದಿದೆ. ಬೆಳ್ಳಂಬೆಳಗ್ಗೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್‌ ನಡೆಸಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸರಿಂದ ರೌಡಿಶೀಟರ್‌ ಮಲಿಕ್ ತಾಜುದ್ದೀನ್ ಆದೋನಿ  ಮೇಲೆ ಫೈರಿಂಗ್‌ ನಡೆದಿದೆ. ಮಲ್ಲಿಕ್ ತಾಜುವುದ್ದಿನ್ ಆದೋನಿ ಅಟೋ ಚಾಲಕನಾಗಿದ್ದ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ರೌಡಿಗಳ ನಡುವೆ ಗಲಾಟೆ ನಡೆದಿತ್ತು. ಇದೇ ಪ್ರಕರಣ ಸಂಬಂಧ ಆರೋಪಿಗಳ ಬಂಧಿಸಲು ತೆರಳಲು ಹೋಗಿದ್ದ ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ರೌಡಿಶೀಟರ್‌ ಮೇಲ ಫೈರಿಂಗ್‌ ನಡೆಸಿದ್ದಾರೆ. https://ainkannada.com/jcb-roars-in-mahalingapura-town-sheds-where-30-families-lived-evacuated/ ಇನ್ನೂ ಹಳೆ ಹುಬ್ಬಳ್ಳಿ ಪಿಎಸ್ ಐ ವಿಶ್ವನಾಥ ಆಲದಮಟ್ಟಿ ,ಸಿಪಿಸಿ  ಶರೀಫ ನದಾಫ್ ಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Read More

ಬೆಂಗಳೂರು, ಏ.08: “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. https://ainkannada.com/ipl-2025-rajat-kohli-jitesh-bombat-batting-bangalore-ahead-of-mumbai/ ಎಲ್ ಪಿಜಿ ಹಾಗೂ ಇಂಧನ ತೈಲಗಳ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಾಜ್ಯದಲ್ಲಿ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದು, ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

Read More

ಮಂಡ್ಯ : ಜೆಡಿಎಸ್‌ನ್ನು ಬಿಜೆಪಿ ಜೋಕರ್ ಸ್ಥಾನದಲ್ಲಿ ನಿಲ್ಲಿಸಿದೆ ಎಂದು ಜೆಡಿಎಸ್‌ ಬಿಜೆಪಿ ಮೈತ್ರಿ ಬಗ್ಗೆ ಕಾಂಗ್ರೆಸ್‌ ಶಾಸಕ ಗಣಿಗ ರವಿಕುಮಾರ್ ವ್ಯಂಗ್ಯವಾಡಿದ್ದಾರೆ. ಇದೇ ವೇಳೆ ಬಿಜೆಪಿಗರ ಜನಾಕ್ರೋಶ ಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿಗರ ವಿರುದ್ದ ಹರಿಹಾಯ್ದಿದಿದ್ದಾರೆ.   ಇಂದು ಮಂಡ್ಯ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ನೆಲದಲ್ಲಿ ಜೆಡಿಎಸ್ ಬಿಟ್ಟು ಜನಾಕ್ರೋಶ ಯಾತ್ರೆ ಮಾಡ್ತಿದ್ದಾರೆ. ಕುಮಾರಸ್ವಾಮಿ ನೆಲದಲ್ಲೆ ಅವರನ್ನ ಬಿಟ್ಟಿದ್ದಾರೆ. ಬರಿ ಬಿಜೆಪಿಯವರು ಬರ್ತಿರೋದರಿಂದ ಗೊತ್ತಾಗಿದೆ ಮನೆ ಒಡೆದಿದೆ ಅಂತ  ಕುಮಾರಸ್ವಾಮಿಯವ್ರಿಗೆ ಪಾಪಾ ಈ ಪರಿಸ್ಥಿತಿ ಬರಬಾರ್ದಿತ್ತು. ಕುಮಾರಸ್ವಾಮಿ ಎಲ್ಲಿಗೋದ್ರು ಈತರ ಬೆನ್ನಿಗೆ ಚಾಕು ಹಾಕಿಸಿಕೊಳ್ಳುತ್ತಾರೆ. ಗುಜರಾತ್ ರೀತಿ ಕರ್ನಾಟಕದಲ್ಲೂ ನಿಮ್ ಜನತಾದಳ ಮುಗಿಸ್ತಾರೆ ಹುಷಾರ್ ಕುಮಾರಣ್ಣ. ಕುಮಾರಣ್ಣನಿಗೆ ಇದು ಎಚ್ಚರಿಕೆ ಗಂಟೆ ಎಂದು ತಿರುಗೇಟು ನೀಡಿದರು. https://ainkannada.com/public-outcry-against-price-hike-saffron-trumpets-rang-out-at-cms-residence/ ಮೋದಿ ಬೆಲೆ ಏರಿಕೆ ಮಾಡಿದ್ದಾರೆ.  ಅವರ ವಿರುದ್ದ ಇಂದು ಮಂಡ್ಯದಲ್ಲಿ ಪ್ರತಿಭಟನೆ ಮಾಡ್ತಿದ್ದಾರಾ?. ಮಹಿಳೆಯರ ಬಾಯಿಗೆ ಮೋದಿಯವ್ರು ಮಣ್ಣಾಕಿದ್ದಾರೆ. ಮಹಿಳೆಯರ ಬಾಯಿಗೆ ಮೋದಿ ಮಣ್ಣಾಕಿದಕ್ಕೆ ಪ್ರತಿಭಟನೆ ಮಾಡ್ತಿದ್ದಾರಾ?. ಮೋದಿ…

Read More