Author: AIN Author

ಬಾಗಲಕೋಟೆ : ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಬೆಳಂಬೆಳಗ್ಗೆ ಜೆಸಿಬಿ ಘರ್ಜನೆ ಘರ್ಜಿಸಿದ್ದು,  ಆಶ್ರಯ ಕಾಲೋನಿಯಲ್ಲಿನ ಶೆಡ್ ಗಳ ತೆರವು ಕಾರ್ಯಾಚರಣೆ ನಡೆದಿದೆ. ವಾರ್ಡ್ ನಂಬರ್ 13ರ ಕೆಂಗೇರಿ ಮಡ್ಡಿಯಲ್ಲಿರುವ ಆಶ್ರಯ ಕಾಲೋನಿಯಲ್ಲಿ ಹಲವು ವರ್ಷಗಳಿಂದ ವಾಸವಿದ್ದ 30 ಕುಟುಂಬಗಳ ಶೆಡ್ ತೆರವು ಮಾಡಲಾಗಿದೆ. ತಹಶೀಲ್ದಾರ್ ಹಾಗೂ ಪುರಸಭೆ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆದಿದ್ದು, 30 ಕುಟುಂಬಗಳು ಇದೀಗ ಆತಂಕದಲ್ಲಿವೆ. https://ainkannada.com/rabakavi-mahishwadagi-bridge-work-delayed-minister-satish-jarkiholi-warns-officials/ ಚುನಾವಣೆ ವೇಳೆ ಶಾಸಕರು ಇಲ್ಲೇ ನಿವೇಶನ ಕಲ್ಪಿಸುವ ಭರವಸೆ ನೀಡಿದ್ದರು. ಸ್ಥಳೀಯ ಪುರಸಭೆ ಸದಸ್ಯರ ರಾಜಕೀಯ ತಿಕ್ಕಾಟದಿಂದ ತೆರವು ಕಾರ್ಯಾಚರಣೆ ನಡೆಸಲಾಗಿದೆ. ನೋಟಿಸ್ ನೀಡದೆ ಏಕಾಏಕಿ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂದು ಸ್ಥಳೀರು ಆರೀಪಿಸಿದ್ದಾರೆ. ಸದ್ಯ ತೆರವು ಕಾರ್ಯಾಚರಣೆ ವೇಳೆ ಯಾರೂ ನೆರವಿಗೆ ಬರುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.  

Read More

ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರೋಚಕವಾಗಿ ಗೆದ್ದು ಬೀಗಿದೆ. https://ainkannada.com/rabakavi-mahishwadagi-bridge-work-delayed-minister-satish-jarkiholi-warns-officials/ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಗೆಲ್ಲಲು 222 ರನ್ ಗಳ ಗುರಿ ಪಡೆದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ209 ರನ್ ಗಳನ್ನು ಗಳಿಸಿತು. ಹೀಗಾಗಿ ಪ್ರೇಕ್ಷಕರವನ್ನು ಕೊನೆಯ ಓವರ್ ವರೆಗೂ ತುದಿಗಾಲಲ್ಲಿ ನಿಲ್ಲಿಸಿದ ರೋಚಕ ಪಂದ್ಯದಲ್ಲಿ ಆರ್ ಸಿಬಿ ತಂಡ 12 ರನ್ ಗಳಿಂದ ಜಯಭೇರಿ ಭಾರಿಸಿತು. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 5 ವಿಕೆಟ್‌ ನಷ್ಟಕ್ಕೆ 221 ರನ್‌ ಬಾರಿಸಿತ್ತು. 222 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್‌ನಲ್ಲಿ ಮುಂಬೈ ಗೆಲುವಿಗೆ 19 ರನ್‌ಗಳ ಅಗತ್ಯವಿತ್ತು. ಕೃನಾಲ್‌ ಪಾಂಡ್ಯ ಬೌಲಿಂಗ್‌ನಲ್ಲಿದ್ದರೆ, ಮಿಚೆಲ್‌ ಸ್ಯಾಂಟ್ನರ್‌ ಸ್ಟ್ರೈಕ್‌ನಲ್ಲಿದ್ದರು. ಮೊದಲ ಎಸೆತದಲ್ಲೇ ಸ್ಯಾಂಟ್ನರ್‌ ಸಿಕ್ಸರ್‌ ಸಿಡಿಸಲು ಪ್ರಯತ್ನಿಸಿ ಬೌಂಡರಿ ಲೈನ್‌…

Read More

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದ ಕಾಂಗ್ರೆಸ್  ಮುಖಂಡ ಸಿದ್ದು ಕೊಣ್ಣೂರ ನಿವಾಸದಲ್ಲಿ ತ್ವರಿತವಾಗಿ ರಬಕವಿ  ಮಹಿಷವಾಡಗಿ ಬ್ರಿಡ್ಜ್ ನಿರ್ಮಾಣ ಮಾಡಬೇಕೆಂದು ರಬಕವಿ ದೈವ ಮಂಡಳಿ ಹಿರಿಯರು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಅದಕ್ಕೆ ಸ್ಪಂದಿಸಿ ಮಾತನಾಡಿದ ಸಚಿವರಾದ ಸತೀಶ್‌ ಜಾರಕಿಹೊಳಿ ಅವರು,  ಸುದ್ದಿಗಾರರೊಂದಿಗೆ ಮಾತನಾಡಿ 2018 ರಲ್ಲಿ ಪ್ರಾರಂಭಗೊಂಡ ರಬಕವಿ ಮಹಿಷವಾಡಗಿ ಬ್ರಿಡ್ಜ್ ಇನ್ನೂ ಕಾಮಗಾರಿ ಮುಗಿಸಲಿಲ್ಲ ಎಂದು ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದರು. ರಬಕವಿ ಮಹಿಷವಾಡಗಿ ಬ್ರಿಡ್ಜ್ ೨೦೨೫ ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕು. ಇಲ್ಲ ಅಂದ್ರೆ ನಿಮ್ಮ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಖಡಕ ವಾರ್ನಿಂಗ್ ನೀಡಿದರು, https://ainkannada.com/rabakavi-mahishwadagi-bridge-construction-work-stalled-halfway/ ನಾನು ಈಗಾಗಲೇ ಸಂಬಂಧಪಟ್ಟ ಇಂಜಿನಿಯರಗಳ ಜೊತೆ ಮೂರ್ನಾಲ್ಕು ಮೀಟಿಂಗ್  ಮಾಡಿದ್ದೇನೆ ನಮ್ಮ ಅಧಿಕಾರಿಗಳ ಬೇಜವಾಬ್ದಾರಿತನ ರಬಕವಿ ಮಹಿಷವಾಡಗಿ ಬ್ರಿಡ್ಜ್ ಕಾಮಗಾರಿ ವಿಳಂಬವಾಗಿದೆ  2025 ಡಿಸೆಂಬರ್ ಅಂತ್ಯದೊಳಗೆ ಸಂಪೂರ್ಣ ಕಾಮಗಾರಿ ಮುಗಿಸುತ್ತೇನೆ ಎಂದು ಭರವಸೆ ನೀಡಿದರು. …

Read More

ಮಂಡ್ಯ : ವಿಶ್ವವಿಖ್ಯಾತ, ಐತಿಹಾಸಿಕ ಮೇಲುಕೋಟೆ ಕ್ಷೇತ್ರದ ಶ್ರೀ ಚೆಲುವನಾರಾಯಣಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ವಿಶ್ವಾವಸು ಸಂವತ್ಸರದ ಚೈತ್ರ ಮಾಸದ ಪುಷ್ಯ ನಕ್ಷತ್ರದ ಶುಭ ದಿನದಂದು ವಜ್ರಖಚಿತ ವೈರಮುಡಿ ಧರಿಸಿದ್ದ ಚೆಲುವನಾರಾಯಣಸ್ವಾಮಿಯು ದೇವಾಲಯದಿಂದ ಹೊರ ಬರುತ್ತಿದ್ದಂತೆ ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು ಗೋವಿಂದ, ಗೋವಿಂದಾ ಎಂಬ ಜಯಘೋಷಗಳನ್ನು ಮೊಳಗಿಸಿದರು. ಗಂಡ-ಭೇರುಂಡ ಸ್ವರೂಪಿ ಚಂದ್ರಪ್ರಭೆ ಪ್ರಭಾವಳಿಯ ಮಧ್ಯದಲ್ಲಿ ಅಲಂಕಾರ ಸ್ವರೂಪಿಯಾಗಿದ್ದ ಸ್ವಾಮಿಯ ಉತ್ಸವವನ್ನು ನೋಡಿ ಭಕ್ತರು ದರ್ಶನ ಪಡೆದು ಸಂಭ್ರಮಿಸಿದರು. https://www.youtube.com/watch?v=tddlCTBLoZ0 ರಾಮಾನುಜಾಚಾರ್ಯರ ಸನ್ನಿಧಿಯಲ್ಲಿ ಪ್ರಥಮ ಪೂಜೆ ಸಲ್ಲಿಸಿದ ನಂತರ ವೈರಮುಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವ ಸಾಗುವ ರಾಜಬೀದಿಯನ್ನು ತಳಿರು-ತೋರಣ, ವಿಶೇಷ ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿತ್ತು. ಬೀದಿಯ ಎರಡೂ ಬದಿಯಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದರು. ನೆರೆಯ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳದಿಂದಲೂ ಸಹಸ್ರಾರು ಭಕ್ತಾದಿಗಳು ಆಗಮಿಸಿದ್ದರು. ಮೇಲುಕೋಟೆಯ ವಸತಿ ಗೃಹಗಳು, ಛತ್ರಗಳು ಭಕ್ತರಿಂದ ಕಿಕ್ಕಿರಿದು ತುಂಬಿದ್ದವು. ಸೋಮವಾರ ಬೆಳಗ್ಗೆ ಜಿಲ್ಲಾ ಖಜಾನೆ ಕಚೇರಿಯಲ್ಲಿದ್ದ ವೈರಮುಡಿ…

Read More

ಸೂರ್ಯೋದಯ – 6:08 ಬೆ ಸೂರ್ಯಾಸ್ತ – 6:27 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ಏಕಾದಶಿ ನಕ್ಷತ್ರ – ಆಶ್ಲೇಷ ಯೋಗ – ಶೂಲ ಕರಣ – ವಣಿಜ ರಾಹು ಕಾಲ – 03:00 ದಿಂದ 04:30 ವರೆಗೆ ಯಮಗಂಡ – 09:00 ದಿಂದ 10:30 ವರೆಗೆ ಗುಳಿಕ ಕಾಲ – 12:00 ದಿಂದ 01:30 ವರೆಗೆ ಬ್ರಹ್ಮ ಮುಹೂರ್ತ – 4:32 ಬೆ ದಿಂದ 5:20 ಬೆ ವರೆಗೆ ಅಮೃತ ಕಾಲ – 5:29 ಬೆ. ದಿಂದ 7:11 ಬೆ. ವರೆಗೆ ಅಭಿಜಿತ್ ಮುಹುರ್ತ – 11:53 ಬೆ ದಿಂದ 12:42 ಮ. ವರೆಗೆ ಮೇಷ ರಾಶಿ: ವ್ಯಾಪಾರದಲ್ಲಿ ದ್ವಿಗುಣ ಲಾಭ, ವಿದೇಶ ಪ್ರವಾಸ ಯೋಗವಿದೆ, ನೌಕರನಿಗೆ ಮಹತ್ವದ ಕೆಲಸಕ್ಕೆ ವರ್ಗಾವಣೆ, ಸರ್ಕಾರದ ಸೌಲತ್ತು ದೊರೆಯುವುದು, ಹೊಸ ಜಾಗ ಖರೀದಿಸಿ…

Read More

ಬೇಸಿಗೆ ಕಾಲ ಬರುತ್ತಿದೆ. ಈ ಋತುವಿನಲ್ಲಿ ಕಲ್ಲಂಗಡಿ ಹಣ್ಣನ್ನು ಹೆಚ್ಚಾಗಿ ತಿನ್ನುತ್ತಾರೆ. ಸುಮಾರು 90 ಪ್ರತಿಶತ ಕಲ್ಲಂಗಡಿ ನೀರಿನಿಂದ ತುಂಬಿರುತ್ತದೆ. ಇದು ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ಸಹಕಾರಿ. ಗರ್ಭಿಣಿಯರು ಮತ್ತು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ನಿಯಮಿತವಾಗಿ ಕಲ್ಲಂಗಡಿ ತಿನ್ನಲು ಸೂಚಿಸಲಾಗುತ್ತದೆ. https://ainkannada.com/public-outcry-against-price-hike-saffron-trumpets-rang-out-at-cms-residence/ ಬೇಸಿಗೆಯಲ್ಲಿ ನೀವು ಅಗತ್ಯಕ್ಕಿಂತ ಹೆಚ್ಚು ಕಲ್ಲಂಗಡಿ ಸೇವಿಸಿದರೆ, ಅದು ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಆದ್ದರಿಂದ, ಹೆಚ್ಚಿನ ಪ್ರಮಾಣದಲ್ಲಿ ಕಲ್ಲಂಗಡಿ ಸೇವಿಸುವುದನ್ನು ತಪ್ಪಿಸಿ. ಕಲ್ಲಂಗಡಿ ಹಣ್ಣನ್ನು ಅತಿಯಾಗಿ ತಿನ್ನುವುದರಿಂದ ಯಾವ ಸಮಸ್ಯೆಗಳು ಉಂಟಾಗಬಹುದು ಎನ್ನುವುದನ್ನು ತಿಳಿಯೋಣ. ಕಲ್ಲಂಗಡಿಯಲ್ಲಿ ಹೆಚ್ಚು ನೀರಿನಂಶ ಇರುವುದರಿಂದ ಮೂತ್ರವರ್ಧಕ ಗುಣಗಳನ್ನು ಹೊಂದಿದೆ. ಆದ್ದರಿಂದ ನೀವು ಹೆಚ್ಚು ಕಲ್ಲಂಗಡಿ ಸೇವಿಸಿದರೆ ಅದು ಆಗಾಗ್ಗೆ ಮೂತ್ರ ವಿಸರ್ಜನೆಗೆ ಕಾರಣವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ದೇಹವು ಸೋಡಿಯಂ ಮತ್ತು ಪೊಟ್ಯಾಸಿಯಮ್‌ನಂತಹ ಅಗತ್ಯ ಎಲೆಕ್ಟ್ರೋಲೈಟ್‌ಗಳ ಕೊರತೆಯನ್ನು ಹೊಂದಿರಬಹುದು. ಇದರಿಂದಾಗಿ ನೀವು ದೌರ್ಬಲ್ಯ, ತಲೆತಿರುಗುವಿಕೆ ಮತ್ತು ನಿರ್ಜಲೀಕರಣದಂತಹ ಸಮಸ್ಯೆಗಳನ್ನು ಎದುರಿಸಬಹುದು.ಕಲ್ಲಂಗಡಿಯಲ್ಲಿ ಹೆಚ್ಚು ನೀರಿನಂಶ ಇರುವುದರಿಂದ ಮೂತ್ರವರ್ಧಕ ಗುಣಗಳನ್ನು ಹೊಂದಿದೆ. ಆದ್ದರಿಂದ ನೀವು ಹೆಚ್ಚು ಕಲ್ಲಂಗಡಿ…

Read More

ಮೈಸೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಬೀದಿಗಿಳಿದಿದ್ದು, ಜನಾಕ್ರೋಶ ಯಾತ್ರೆ ಹೆಸರಿನಲ್ಲಿ ಬೃಹತ್‌ ಹೋರಾಟ ಆರಂಭಿಸಿದೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆ ಹೋರಾಟಕ್ಕೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದ್ದಾರೆ. ಇಂದಿನಿಂದ ಮೇ 3 ವರೆಗೆ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಸಾಗಲಿದೆ.  ಅಗತ್ಯ ವಸ್ತುಗಳ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ದಲಿತರ ಹಣ ಲೂಟಿ ಖಂಡಿಸಿ ನಡೆಯುತ್ತಿರುವ ಜನಾಕ್ರೋಶ ಪ್ರತಿಭಟನಾ ಯಾತ್ರೆಯಲ್ಲಿ ಮೈಸೂರು, ಚಾಮರಾಜನಗರ ಜಿಲ್ಲಾ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು. https://ainkannada.com/minister-santosh-lads-sarcasm-on-bjps-janakrosha-yatra/ ಯಾತ್ರೆ ನಂತರ ಗಾಂಧಿ ವೃತ್ತದ‌ ಬಳಿವ ಸಾರ್ವಜನಿಕ ಸಭೆ ನಡೆಸಲಾಯಿತು.  ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕರಾದ ಆರ್ ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ…

Read More

ಬೆಳಗಾವಿ : ಕ್ಯಾಬೇಜ್ ಬೆಳೆಗೆ ಸೂಕ್ತ ಬೆಲೆ ನೀಡಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ರೈತರ ಪ್ರತಿಭಟನೆ ನಡೆಸಿದ್ದು, ತಾವು ಬೆಳೆದ ಕ್ಯಾಬೇಜ್ ರಸ್ತೆ ಮೇಲೆ ಸುರಿದ ಆಕ್ರೋಶ ವ್ಯಕ್ತಪಡಿಸಿದರು. ಕಷ್ಟ ಪಟ್ಟು ಬೆಳೆದ ಕ್ಯಾಬೇಜ್ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ ಎಂದು ಸೂಕ್ತ ಬೆಲೆ ನೀಡಬೇಕು ಎಂದು ಆಗ್ರಹಿಸಿ ಧರಣಿ ಬೆಳಗಾವಿ ತಾಲೂಕಿನ ಅಗಸಗಾ ಗ್ರಾಮದ ರೈತರು ಪ್ರತಿಭಟನೆ ನಡೆಸಿದರು. ರೈತ ಅಪ್ಪಾಸಾಬ್ ಪಾಟೀಲ್ ನೇತೃತ್ವದಲ್ಲಿ  ಧರಣಿ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. https://ainkannada.com/low-demand-for-red-beauties-tomato-prices-suddenly-drop-gadag-farmers-in-panic/ ಮಾರುಕಟ್ಟೆಯಲ್ಲಿ ಒಂದು ಕ್ಯಾಬಿಜ್ ಗೆ ಕೇವಲ ಎಪ್ಪತ್ತು ಪೈಸೆಯಿಂದ ಒಂದು ರೂಪಾದಂತೆ ಮಾರಾಟ ಆಗುತ್ತಿದೆ. ಇದರಿಂದಾಗಿ ರೈತರಿಗೆ ತುಂಬಾ ನಷ್ಟ ಆಗುತ್ತಿದೆ. ಹೀಗಾಗಿ ಸರ್ಕಾರ ಮತ್ತು ಜಿಲ್ಲಾಡಳಿತ ಕ್ಯಾಬೇಜ್ ಗೆ ಸೂಕ್ತ ಬೆಲೆ ನಿಗದಿ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು. ಸಗಸಗಾ ಗ್ರಾಮದಲ್ಲಿ ಬಹುತೇಕ ರೈತರು ಕ್ಯಾಬಿಜ್ ಬೆಳೆಯುತ್ತಾರೆ‌ ಬಹುತೇಕ ರೈತರು ಕ್ಯಾಬಿಜ್ ಬೆಳೆ ಬೆಳೆದು ನಷ್ಟ ಅನುಭವಿಸುತ್ತಿದ್ದಾರೆ‌. ಒಂದು ಎಕರೆ …

Read More

ಹುಬ್ಬಳ್ಳಿ: ಶಾಸಕ ವಿನಯ ಕುಲಕರ್ಣಿಯವರ ನಿರ್ದೇಶನದ ಮೇರೆಗೆ ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಬಿಜೆಪಿ ಬೆಂಬಲಿತ ಪರಶುರಾಮ ಮಾನೆ ಐದು ಮತ ಪಡೆದು ಸೋಲು ಅನುಭವಿಸಿದರು. https://ainkannada.com/ac-breaks-down-in-snr-hospital-icu-patients-struggle/ ಕಾಂಗ್ರೆಸ್‌ನ  ಈರಣ್ಣ ಹಸಬಿಯವರು ಏಳು ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿ ಹಾಗೂ ಅವರ ತಂಡ ನೂತನ ಅಧ್ಯಕ್ಷರಿಗೆ ಸನ್ಮಾನಿಸಿ ಸಿಹಿ ತಿನ್ನಿಸಿ ಸಂಭ್ರಮಿಸಿದರು.  ಬ್ಲಾಕ್ ಅಧ್ಯಕ್ಷರಾದ ಅರವಿಂದ ಏಗನಗೌಡರ, ಈಶ್ವರ ಶಿವಳ್ಳಿ, ಪಾಲಿಕೆ ಸದಸ್ಯರಾದ ಪ್ರಕಾಶ ಘಾಟಗೆ, ಮುಖಂಡರಾದ ಮಡಿವಾಳಪ್ಪ ದಿಂಡಲ ಕೊಪ್ಪ, ನಂದೀಶ್ ನಾಯ್ಕರ, ಶಿವಾನಂದ ಮುದ್ದಿ ಸೇರಿದಂತೆ, ಪಿ ಎಲ್ ಡಿ ಬ್ಯಾಂಕಿನ ನಿರ್ದೇಶಕರುಗಳಾದ ಬಸವಪ್ರಭು  ಹುಂಬೇರಿ, ದೇವರಾಜ್ ಪಾಟೀಲ್, ಹಸನಪ್ಪ ತಳವಾರ, ಶಾಂತಕ್ಕ ಹಟ್ಟಿ, ಮಂಜುನಾಥ ಮುಗ್ಗನವರ, ಶೇಕಪ್ಪ ಕುಂಬಾರ ಹಾಗೂ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.

Read More

ಬೆಂಗಳೂರು:- ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್, ಇಬ್ಬರು ಕಾನ್ಸ್‌ಟೇಬಲ್ ಸೇರಿ 7 ಜನರ ಮೇಲೆ ಎಫ್ಐಆರ್ ದಾಖಲಾಗಿದೆ. https://ainkannada.com/ac-breaks-down-in-snr-hospital-icu-patients-struggle/ ಬೆಂಗಳೂರಿನಲ್ಲಿ ಪ್ರತಿಷ್ಠಿತ ಏರಿಯಾದಲ್ಲಿ ಇದ್ದ 4 ಕೋಟಿ ರೂ. ಮೌಲ್ಯದ ಮನೆಯನ್ನು ಕೇವಲ 60 ಲಕ್ಷ ರೂ.ಗೆ ಕಬಳಿಸಲು ಮುಂದಾಗಿದ್ದ ಸಿಎಂ ಚಿನ್ನದ ಪದಕ ಪಡೆಯಲು ಆಯ್ಕೆಯಾಗಿದ್ದ ಇನ್ಸ್‌ಪೆಕ್ಟರ್ ಎ.ವಿ. ಕುಮಾರ್ ಸೇರಿದಂತೆ ಅನ್ನ ಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಹಾಗೂ ಇತರೆ ನಾಲ್ವರು ಖಾಸಗಿ ವ್ಯಕ್ತಿಗಳು ಸೇರಿದಂತೆ 7 ಜನರ ವಿರುದ್ಧ ಬೆಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇನ್ಸ್‌ಪೆಕ್ಟರ್ ಎ ವಿ ಕುಮಾರ್ ಎ1 ಆರೋಪಿ, ಎಸ್ ಬಿ ಕಾನ್ಸ್‌ಟೇಬಲ್ ಉಮೇಶ್ ಹಾಗೂ ಮತ್ತೊಬ್ಬ ಕಾನ್ಸ್‌ಟೇಬಲ್ ಅನಂತ್ ಮೇಲೆ ಎಫ್ಐಆರ್ ದಾಖಲಾಗಿದೆ. ಮೂವರು ಸರ್ಕಾರಿ ನೌಕರರು, ಹಾಗು ನಾಲ್ವರು ಖಾಸಗಿ ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ಚೆನ್ನೇಗೌಡ ನೀಡಿದ ದೂರಿನ ಮೇಲೆ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.…

Read More