Author: AIN Author

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದು, ಉಗ್ರರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ 27ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಕಾಶ್ಮೀರದ ಸೊಬಗನ್ನು ಸವಿಯುತ್ತಿದ್ದ . ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ಮಾಡಿದ್ದಾರೆ . ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇನ್ನೂ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯಅವರು ಅಧಿಕಾರಿಗಳ ಸಭೆ ನಡೆಸಿ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕನ್ನಡಿಗರ ನೆರವಿಗೆ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. https://ainkannada.com/terrorist-attack-in-pahalgam-is-a-heinous-act-mp-basavaraj-bommai/ ಉಗ್ರರ ಹೇಯಕೃತ್ಯಕ್ಕೆ ತೀವ್ರ ಖಂಡನೆ ಇನ್ನೂ ಉಗ್ರರ ದಾಳಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಖಂಡಿಸಿದ್ದು, ಪ್ರವಾಸಿಗರ ಮೇಲಿನ ಉಗ್ರರ ಗುಂಡಿನ ದಾಳಿ ಆಘಾತ, ನೋವು ತಂದಿದೆ. ಇದು ಒಂದು ಹೇಯ ಮತ್ತು ಅಮಾನವೀಯ ಕೃತ್ಯವಾಗಿದ್ದು, ಇದನ್ನು…

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಈವರೆಗೂ ಸುಮಾರು 27ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದರಲ್ಲಿ ಕರ್ನಾಟಕ ಮೂಲದ ಇಬ್ಬರೂ ಸೇರಿದ್ದಾರೆ. ಇನ್ನೂ ಉಗ್ರ ದಾಳಿಯ ಬಳಿಕ ಪ್ರವಾಸಿಗರಿಗೆ ಸಹಾಯ ಮಾಡಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ 24/7 ತುರ್ತು ಸಹಾಯವಾಣಿ ಆರಂಭಿಸಿದೆ. “ಸಹಾಯ ಅಥವಾ ಮಾಹಿತಿ ಅಗತ್ಯವಿರುವ ಪ್ರವಾಸಿಗರಿಗಾಗಿ ಅನಂತನಾಗ್ ಜಿಲ್ಲಾಡಳಿತವು 24×7 ತುರ್ತು ಸಹಾಯ ಕೇಂದ್ರವನ್ನು ಸ್ಥಾಪಿಸಿದೆ. ಪ್ರವಾಸಿಗರು ಮಾಹಿತಿ ಅಥವಾ ಸಹಾಯಕ್ಕಾಗಿ 01932222337, 7780885759, 9697982527 ಅಥವಾ 6006365245 ಅನ್ನು ಸಂಪರ್ಕಿಸಬಹುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರದಲ್ಲಿಯೂ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.  ಪಹಲ್ಗಾಮ್ ಭಯೋತ್ಪಾದಕ ಘಟನೆಯ ಕುರಿತು ಸಹಾಯಕ್ಕಾಗಿ ಪ್ರವಾಸಿಗರು 01942457543, 01942483651 ಅಥವಾ 7006058623 ಅನ್ನು ಸಂಪರ್ಕಿಸಬಹುದು ಎಂದು ವಕ್ತಾರರು ತಿಳಿಸಿದ್ದಾರೆ. https://ainkannada.com/two-people-from-karnataka-killed-in-terrorist-attack-in-pahalgam/ ಬೈಸರನ್ ಕಣಿವೆಯಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 27ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ.

Read More

ಶ್ರೀನಗರ/ಹಾವೇರಿ : ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಕರ್ನಾಟಕದ ಮತ್ತೊಬ್ಬರು ಬಲಿಯಾಗಿದ್ದು, ಈ ಮೂಲಕ ಇಬ್ಬರು ಕನ್ನಡಿಗರು ಸಾವನ್ನಪ್ಪಿದಂತಾಗಿದೆ. ದ ಹಾವೇರಿಯ ರಾಣೆಬೆನ್ನೂರು ಮೂಲದ ಭರತ್ ಭೂಷಣ್ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಭರತ್‌ ಅವರು ಮಾಜಿ ಸ್ಪೀಕರ್‌ ಕೆ. ಬಿ. ಕೋಳಿವಾಡ ಅವರ ಅಳಿಯನ ಸ್ನೇಹಿತ ಎಂಬ ಮಾಹಿತಿ ಇದೆ. ಇದಕ್ಕೂ ಮೊದಲು ದಾಳಿಯಲ್ಲಿ ಶಿವಮೊಗ್ಗ ಮೂಲದ ಉದ್ಯಮಿ ಮಂಜುನಾಥ್‌ ಎಂಬವರು ಸಾವಿಗೀಡಾಗಿದ್ದರು. https://ainkannada.com/terrorist-attack-in-pahalgam-is-a-heinous-act-mp-basavaraj-bommai/ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 27 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Read More

ಬೆಂಗಳೂರು : ಜಮ್ಮುಕಾಶ್ಮೀರದಲ್ಲಿನ ಪಹಲ್ಗಾಮ್‌ನಲ್ಲಿನ ಭಯೋತ್ಪಾದಕರ ದಾಳಿಯನ್ನು ಸಂಸದ ಬಸವರಾಜ್‌ ಬೊಮ್ಮಾಯಿ ಖಂಡಿಸಿದ್ದಾರೆ. https://ainkannada.com/no-politics-over-terror-attacks-in-jammu-and-kashmir-minister-santosh-lad/ ಉಗ್ರ ದಾಳಿ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಂಸದ ಬಸವರಾಜ್‌ ಬೊಮ್ಮಾಯಿ,  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ಹಲ್ಲೆ ಮಾಡಿರುವುದು ಇದೊಂದು ಹೇಯ ಕೃತ್ಯ ಮತ್ತು ಇದು ಭಯೋತ್ಪಾದನೆ ಮರುಸ್ಥಾಪಿಸುವ ಪ್ರಯತ್ನ. ಇದನ್ನು ಪ್ರತಿಯೊಬ್ಬ ನಾಗರಿಕರು ಖಂಡಿಸುತ್ತೇವೆ. ಧರ್ಮದ ಹೆಸರು ಕೇಳಿ ಗುಂಡು ಹಾರಿಸಿರುವುದು ಭಾರತದ ವಿರೋಧಿ ಶಕ್ತಿಗಳ ಕೈವಾಡ ಇರುವುದು ಬಹಳ ಸ್ಪಷ್ಟ. ಇದನ್ನು ಕೂಡಲೇ ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಮಟ್ಟ ಹಾಕಬೇಕು. ಮತ್ತು ಜಮ್ಮು ಕಾಶ್ಮೀರ ಕಣಿವೆಯಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರಲು ರಾಜ್ಯ ಸರ್ಕಾರ ಎಲ್ಲ ವ್ಯವಸ್ಥೆಯನ್ನು ಮಾಡಬೇಕು. ಘಟನೆಯಲ್ಲಿ ಮೃತರಾದವರ ಕುಟುಂಬದವರಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಭಗವಂತ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಪೋಸ್ಟ್‌ ಮಾಡಿದ್ದಾರೆ.

Read More

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿನ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, “ಈ ಹೀನ ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಅವರ ದುಷ್ಟ ಉದ್ದೇಶ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಸೌದಿ ಅರೇಬಿಯಾ ಪ್ರವಾಸದಲ್ಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದಾರೆ. ಜೊತೆಗೆ ದಾಳಿಯಾಗಿರುವ ಸ್ಥಳಕ್ಕೆ ಭೇಟಿನ ನೀಡಿ ಪರಿಸ್ಥಿತಿಯನ್ನು ಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ. https://ainkannada.com/no-politics-over-terror-attacks-in-jammu-and-kashmir-minister-santosh-lad/ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ 26 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹಲವು ಮಂದಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಮೃತ ವ್ಯಕ್ತಿಗಳ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದ್ದು ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ…

Read More

ಧಾರವಾಡ : ಜಮ್ಮುಕಾಶ್ಮೀರದಲ್ಲಿ ‌ ಉಗ್ರರ ದಾಳಿ ವಿಚಾರವಾಗಿ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದರು. ಈ ವಿಷಯದಲ್ಲಿ ನಾವು ರಾಜಕೀಯ ಮಾತನಾಡುವುದಿಲ್ಲ. ಈಗ ರಾಜಕೀಯ ಮಾತನಾಡುವುದು ಸರಿಯಲ್ಲ. ಇನ್ನೂ ಕೂಡ ಏನು ಆಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲ. ಶಿವಮೊಗ್ಗದವರ ಮಾಹಿತಿ ಬಿಟ್ರೇ ಬೇರೆ ಮಾಹಿತಿ ಬಂದಿಲ್ಲ. ಪುಲ್ವಾಮ್ ಬಳಿಕ ಜನ ಎಲ್ಲ ಮರೆತು ಬಿಟ್ಟಿದ್ರು. ಈಗ ಅದನ್ನು ಮಾತನಾಡಿದರೆ ರಾಜಕೀಯ ಆಗುತ್ತದೆ https://ainkannada.com/they-shot-at-people-asking-about-religion-firing-on-those-who-were-tied-up-in-bel-puri-terrorists-heinous-act-in-jammu-and-kashmir/ ಜಮ್ಮು-ಕಾಶ್ಮೀರದಲ್ಲಿ 2000ಕ್ಕಿಂತ ಹೆಚ್ಚು ಇಂತಹ ಘಟನೆಗಳು ಆಗಿವೆ. ಕಳೆದ ಹತ್ತು ವರ್ಷಗಳಲ್ಲಿ 800ಕ್ಕೂ ಹೆಚ್ಚು ಸಣ್ಣ ಸಣ್ಣ ಬಾಂಬ್ ಸ್ಫೋಟವಾಗಿವೆ. ಇದರ ಬಗ್ಗೆ ವ್ಯಾಪಕವಾಗಿ ಚರ್ಚೆ ಆಗಿಲ್ಲ. ಇವತ್ತು ಈ ವಿಷಯದಲ್ಲಿ ರಾಜಕೀಯ ಟೀಕೆ ಸರಿಯಲ್ಲ. ಪುಲ್ವಾಮ್ ದಾಳಿ ಆಗಿತ್ತು, ಅದರಲ್ಲಿ ಎಷ್ಟು ಜನರನ್ನು ಹಿಡಿದಿದ್ದಾರೆ. 300ಕೆಜಿ RDX ಬಂದಿತ್ತು. ಅದು ಎಲ್ಲಿಂದ ಬಂತು ಎಂಬ ಮಾಹಿತಿ ಸಿಕ್ಕಿಲ್ಲ. ಅಲ್ಲಿನ ರಾಜ್ಯಪಾಲರು ಸಂಪೂರ್ಣ ಮಾಹಿತಿ ಕೊಟ್ಟಿದ್ದರು. ಆದರೂ ಆ ಬಗ್ಗೆ ಚರ್ಚೆ…

Read More

ಜಮ್ಮುಕಾಶ್ಮೀರ : ಜಮ್ಮುಕಾಶ್ಮೀರದಲ್ಲಿ ಭಯೋತ್ಪಾದಕರು ದುಷ್ಕೃತ್ಯ ನಡೆದಿದ್ದು, ಐವರು ಮೃತರಾಗಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.  ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇನ್ನೂ ಈ ದುಷ್ಕೃತ್ಯವನ್ನು ಕಣ್ಣಾರೆ ಕಂಡ ಪ್ರತ್ಯಕ್ಷ ದರ್ಶಿಗಳು ಎಳೆಎಳೆಯಾಗಿ ತೆರೆದಿಟ್ಟಿದ್ದಾರೆ. ಈ ಉಗ್ರರು ನೀವು ಯಾವ ಧರ್ಮ ಅಂತ ಕೇಳಿ ಹಿಂದೂ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. https://ainkannada.com/firing-attack-in-jammu-and-kashmir-three-killed-including-a-tourist-from-shivamogga/ ಇನ್ನೂ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಸಹ ಬಲಿಯಾಗಿದ್ದಾರೆ . ಆದರೆ ಗುಂಡಿನ ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಇನ್ನು ಏಳು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳಾಂತರಿಸಲು ಆ್ಯಂಬುಲೆನ್ಸ್ ಗಳನ್ನು ರವಾನಿಸಲಾಗಿದೆ.

Read More

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಇದೇ ರೀತಿ ನಮ್ಮ ವಿರುದ್ಧ ಇಲ್ಲಸಲ್ಲದ್ದನ್ನು ಮಾತನಾಡುವುದು ಮುಂದುವರೆಸಿದರೆ, ಆತನ ವಿರುದ್ಧ ಇರುವ ಪ್ರಕರಣದ ಮಾಹಿತಿಗಳನ್ನು ರಾಜರಾಜೇಶ್ವರಿ ನಗರ ಕ್ಷೇತ್ರದ ಪ್ರತಿ ಮನೆ ಮನೆಗೆ ಹಂಚಬೇಕಾಗುತ್ತದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಂಗಳವಾರ ಮಾತನಾಡಿದ  ಅವರು, ಆತನ ಕರ್ಮಾಕಾಂಡಗಳನ್ನು ನಮ್ಮ ಕಾರ್ಯಕರ್ತರು ಕೇವಲ ಒಂದು ದಿನ ಹಂಚಿ ಸುಮ್ಮನಾಗುವುದಿಲ್ಲ, ನಿರಂತರವಾಗಿ ಹಂಚಲಿದ್ದಾರೆ. ಒಕ್ಕಲಿಗರ ಹೆಣ್ಣು ಮಕ್ಕಳನ್ನು ಮಂಚಕ್ಕೆ ಕರೆಯಲು ಆತನಿಗೆ ನಾಚಿಕೆಯಾಗುವುದಿಲ್ಲವೇ? ಮತಕ್ಕಾಗಿ ದಲಿತರನ್ನು ಬಳಸಿಕೊಂಡು ಅವರಿಗೆ ಅವಾಚ್ಯವಾಗಿ ನಿಂದಿಸುತ್ತಾನೆ. ಮಾಧ್ಯಮದವರ ಮುಂದೆ ಬಾಯಿಗೆ ಬಂದಂತೆ ಮಾತನಾಡುತ್ತಾನೆ. ನಾನು ಮಾಧ್ಯಮ ನಡೆಸುತ್ತಿದ್ದೇನೆ, ನನ್ನ ಬಗ್ಗೆಯೇ ಮಾತನಾಡುತ್ತೀರಾ, ನನ್ನ ಮೇಲೆ ಕೇಸ್ ಹಾಕುತ್ತೀರಾ ಎಂದು ಬೆದರಿಕೆ ಹಾಕುತ್ತಾನೆ” ಎಂದು ಹರಿಹಾಯ್ದರು. https://ainkannada.com/kannadigas-performance-in-upsc-exam-results/ ಆಣೆ ಪ್ರಮಾಣದ ಸವಾಲಿನ ಬಗ್ಗೆ ಕೇಳಿದಾಗ, “ಆತ ಯಾರ ಮೇಲೆ ಆಣೆ ಪ್ರಮಾಣ ಮಾಡಿಲ್ಲ? ನೀವು ಹೋದರೆ ನಿಮ್ಮ…

Read More

ನವದೆಹಲಿ : ಯುಪಿಎಸ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕೇಂದ್ರ ಲೋಕಸೇವಾ ಆಯೋಗ 2024ರ ನಾಗರಿಕ ಸೇವಾ ಪರೀಕ್ಷೆಯಲ್ಲಿ 1009 ಅಭ್ಯರ್ಥಿಗಳ ಉತ್ತೀರ್ಣರಾಗಿದ್ದಾರೆ. ಟಾಪ್‌ 50ರ ಪಟ್ಟಿಯಲ್ಲಿ ಕರ್ನಾಟಕದ ಇಬ್ಬರು ಸ್ಥಾನ ಪಡೆದಿದ್ದಾರೆ. ಶಕ್ತಿ  ಎಂಬುವರು ದೇಶದಲ್ಲಿ ನಂಬರ್‌ 1 ಸ್ಥಾನ ಪಡೆದಿದ್ದು, ಟಾಪ್‌ 50ರೊಳಗೆ ಕರ್ನಾಟಕದ ಇಬ್ಬರು ವೈದ್ಯರಿದ್ದರು. ಡಾ.ರಂಗ ಮಂಜು 24ನೇ ಮತ್ತು ಡಾ.ಸಚಿನ್ ಹರಿಹರ್ 41ನೇ ಸ್ಥಾನ ಪಡೆದಿದ್ದಾರೆ.  ಶಕ್ತಿ ದುಬೆ, ಹರ್ಷಿತಾ ಗೋಯೆಲ್, ಡೋಂಗ್ರೆ ಅರ್ಚಿತ್ ಪರಾಗ್, ಶಾ ಮಾರ್ಗಿ ಚಿರಾಗ್, ಆಕಾಶ್ ಗರ್ಗ್, ಕೊಮ್ಮಲ್ ಪುನಿಯಾ, ಆಯುಷಿ ಬನ್ಸಾಲ್, ರಾಜ್ ಕೃಷ್ಣ ಝಾ, ಆದಿತ್ಯ ವಿಕ್ರಮ್ ಅಗರ್ವಾಲ್, ಮಾಯಾಂಕ್ ತ್ರಿಪಾಠಿ ಟಾಪ್‌ ಹತ್ತರ ಸ್ಥಾನದಲ್ಲಿದ್ದಾರೆ. ಇನ್ನೂ ಯುಪಿಎಸ್ ಸಿ ಫಲಿತಾಂಶದಲ್ಲಿ ವಿಜಯಪುರ‌ ಜಿಲ್ಲೆಯ ವೈದ್ಯನ ಸಾಧನೆ ಮಾಡಿದ್ದಾರೆ. ಮುದ್ದೇಬಿಹಾಳ ತಾಲ್ಲೂಕಿನ ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಮಹೇಶ್ ಮಡಿವಾಳರ 482 ನೇ ರ್ಯಾಂಕ್‌ ಪಡೆದಿದ್ದಾರೆ. https://ainkannada.com/people-did-not-leave-during-vijayendras-speech-yatnal-criticizes-janakrosha-yatra/ ಇನ್ನೂ ಕೋಲಾರ ತಾಲೂಕು ಇರಗಸಂದ್ರ ಗ್ರಾಮದ…

Read More

ವಿಜಯಪುರ : ವಿಜಯೇಂದ್ರ ನೇತೃತ್ವದ ಜನಾಕ್ರೋಶ ಯಾತ್ರೆ ವಿಚಾರವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವ್ಯಂಗ್ಯವಾಡಿದ್ದು, ಮತ್ತೆ ಬಿಎಸ್‌ವೈ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ. ವಿಜಯಪುರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಬಿಎಸ್‌ವೈ ಕುಟುಂಬದ ವೈಭವಿಕರಣದ ಯಾತ್ರೆ. ವಿಜಯೇಂದ್ರ 60 ವಾಹನಗಳನ್ನ ತೆಗೆದುಕೊಂಡು ಅಡ್ಡಾಡುತ್ತಿದ್ದಾನೆ. ದಾವಣಗೆರೆಯಲ್ಲಿ 60 ವಾಹನಗಳ ಸಮೇತ ಅಡ್ಡಾಡಿದ್ದಾನೆ. ಆದರೆ ಸಾವಿರಕ್ಕಿಂತ ಹೆಚ್ಚು ಜನ ಎಲ್ಲಿಯೂ ಸೇರಿಲ್ಲ. ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ವೇಳೆ ಜನ ಇರಲಿಲ್ಲ. ಐದು ಸಾವಿರ ಕೆಪಾಸಿಟಿ ಗ್ರೌಂಡಲ್ಲಿ ಶೇ. 25 ರಷ್ಟು ಚೇರ್ ಇರಲಿಲ್ಲ. ನನ್ನ ಉಚ್ಚಾಟನೆ ಯಾತ್ರೆಯ ಆಕ್ರೋಶ ಕಡಿಮೆ ಮಾಡಲು ಈ ಯಾತ್ರೆ. ಜನಾಕ್ರೋಶ ಯಾತ್ರೆ ಕಾಂಗ್ರೆಸ್ ವಿರುದ್ಧ ಅಲ್ಲ ಎಂದು ಲೇವಡಿ ಮಾಡಿದ್ದಾರೆ. https://ainkannada.com/cm-siddaramaiah-is-not-a-clean-politician-bjp-state-president-b-y-vijayendra/ ಇನ್ನೂ  ವಿಜಯೇಂದ್ರಗೆ ತಮಿಳುನಾಡು ಕಾ ಅಧ್ಯಕ್ಷನನ್ನ ತೆಗೆದಂತೆ ತನ್ನನ್ನು ತೆಗೆಯುತ್ತಾರೆ ಎನ್ನುವ ಭಯ ಕಾಡುತ್ತಿದೆ ಎಂದು  ಮತ್ತೆ ವಿಜಯೇಂದ್ರ ವಿರುದ್ದ ಮತ್ತೆ ಮುಗಿಬಿದ್ದರು.

Read More