Author: AIN Author

ಕತಾರ್‌ನ ಸುಹೀಮ್ ಬಿನ್ ಹಮದ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ದೋಹಾ ಡೈಮಂಡ್ ಲೀಗ್‌ನಲ್ಲಿ ಚಿನ್ನದ ಹುಡುಗ ನೀರಜ್ ಚೋಪ್ರಾ ಹೊಸ ಇತಿಹಾಸ ಬರೆದಿದ್ದಾರೆ. ನೀರಜ್ ಅವರು 90.23 ಮೀಟರ್ ಜಾವೆಲಿನ್ ಎಸೆದು ಭಾರತದ ಪರ ಇತಿಹಾಸ ಬರೆದಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಮತ್ತೊಮ್ಮೆ 90 ಮೀಟರ್ ಜಾವೆಲಿನ್ ಎಸೆಯುವ ಮೂಲಕ ತನ್ನ ಹಳೆ ದಾಖಲೆಯನ್ನೇ ಮುರಿದಿದ್ದಾರೆ. ನೀರಜ್ ಚೋಪ್ರಾ 88.44 ಮೀಟರ್ ಜಾವೆಲಿನ್ ಎಸೆದು ಆರಂಭಿಕ ಮುನ್ನಡೆ ಸಾಧಿಸಿದರು. ನೀರಜ್ ಚೋಪ್ರಾ ಕೊನೆಯ ಎಸೆತದಲ್ಲಿ 90.23 ಮೀಟರ್ ದೂರಕ್ಕೆ ಎಸೆದು ದೋಹಾ ಡೈಮಂಡ್ ಲೀಗ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಭಾರತದ ಇನ್ನೋರ್ವ ಕ್ರೀಡಾಪಟು ಕಿಶೋರ್ ಜೆನಾ ಪುರುಷರ ಜಾವೆಲಿನ್ ಥ್ರೋ ಭಾಗಿಯಾಗಿದ್ದರು.

Read More

ಬೆಂಗಳೂರು:- ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ ಎಂದು HD ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. https://ainkannada.com/ipl-2025-today-is-a-strong-team-against-kkr-who-is-in-the-rcb-team/ ಈ ಸಂಬಂಧ X ಮಾಡಿರುವ ಅವರು, ಪಹಲ್ಗಾಮ್‌ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ ಮತ್ತು ಉಗ್ರರಿಗೆ ಪಾಕಿಸ್ತಾನದ ಚಿತಾವಣಿಯಷ್ಟೇ ಅಲ್ಲದೇ ತನ್ನ ತನು-ಮನ-ಧನ ಅರ್ಪಣೆ ಮಾಡುತ್ತಿರುವುದನ್ನು ಖಂಡಿಸುವ ಬದಲಿಗೆ ಕಾಂಗ್ರೆಸ್ ಪಕ್ಷವು ಸೇನಾಪಡೆಗಳನ್ನು, ಪ್ರಧಾನಿ ಶ್ರೀ ಮೋದಿ ಅವರನ್ನೂ ನಿಂದಿಸುತ್ತಿರುವುದು ನಾಚಿಕೆಗೇಡು ಎಂದು ಬರೆದುಕೊಂಡಿದ್ದಾರೆ. ಕಾಂಗ್ರೆಸ್, ಭಾರತದ ರಾಜಕೀಯ ಪಕ್ಷವೋ? ಅಥವಾ ಶತ್ರು ದೇಶದ ವಕ್ತಾರಿಕೆ ಮಾಡುತ್ತಿರುವ ಪಕ್ಷವೋ? ಅದರ ತನ್ನ ಡಿಎನ್‌ಎ ಭಾರತದ್ದೋ ಅಥವಾ ಪಾಕಿಸ್ತಾನದ್ದೋ ಎಂಬುದನ್ನು ಅದುವೇ ಸ್ಪಷ್ಟಪಡಿಸಬೇಕು. ಪಾಕಿಸ್ತಾನ ಸೃಷ್ಟಿಯಾಗಿದ್ದು ಹೇಗೆ? ಅದರಲ್ಲಿ ಕಾಂಗ್ರೆಸ್ ಪಾತ್ರವೇನು? ಎಂಬ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ಆದರೆ, ದೇಶ ವಿಭಜನೆಯಾಗಿ ಏಳೂವರೆ ದಶಕ ಮೀರಿದರೂ ಆ ಪಕ್ಷ ಇನ್ನೂ ಪಾಕಿಸ್ತಾನ ಮನಸ್ಥಿತಿಯಲ್ಲೇ ಇದೆ. ಅಸ್ತಿತ್ವ ಮಾತ್ರ ಭಾರತದಲ್ಲಿ, ಅದರ ಹೃದಯ ಮಾತ್ರ ಪಾಕಿಸ್ತಾನದಲ್ಲಿದೆ. ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ ಆಕ್ರೋಶ…

Read More

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಕೊನೆಯ 17 ಪಂದ್ಯಗಳಿಗೆ ಇಂದು ಚಾಲನೆ ಸಿಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ 58ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. https://ainkannada.com/today-rcb-match-fans-who-paid-special-tribute-to-virat-its-big-gift-for-kohli/ ಚಿನ್ನಸ್ವಾಮಿಯಲ್ಲಿ ಹಲವು ಬಾರಿ 200ಕ್ಕೂ ಹೆಚ್ಚು ರನ್ ದಾಖಲಾಗಿದೆ. ಬ್ಯಾಟರ್​​ಗಳಿಗೆ ಹೇಳಿ ಮಾಡಿಸಿದ ಪಿಚ್ ಇದಾಗಿದೆ. ಜೊತೆಗೆ ಸ್ಪಿನ್ನರ್​ ಸ್ನೇಹಿಯೂ ಆಗಿದೆ. ಮೊದಲು ಬ್ಯಾಟ್ ಮಾಡಿದ ತಂಡ ಆಟದಲ್ಲಿ ಪ್ರಾಭಲ್ಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ತಂಡ 43 ಬಾರಿ ಗೆದ್ದರೆ, ಚೇಸಿಂಗ್ ತಂಡ 53 ಬಾರಿ ಗೆದ್ದಿದೆ ಹವಾಮಾನ ವರದಿಯು ಮಳೆಯಾಗುವ ನಿರೀಕ್ಷೆ ಇದೆ ಎಂದಿದೆ. ಸಂಜೆ ಮತ್ತು ರಾತ್ರಿ ಆಕಾಶದಲ್ಲಿ ಮಿಂಚು ಬೀಳಬಹುದು. ಮಳೆಯಿಂದಾಗಿ ಪಂದ್ಯವು ಹಲವು ಬಾರಿ ನಿಲ್ಲುವ ಸಾಧ್ಯತೆ ಇದೆ. ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೆ ಆರ್‌ಸಿಬಿ ಮತ್ತು ಕೆಕೆಆರ್ ನಡುವೆ 35 ಪಂದ್ಯಗಳು ನಡೆದಿವೆ. ಅದರಲ್ಲಿ ಕೋಲ್ಕತ್ತಾ 20 ಬಾರಿ ಗೆದ್ದಿದ್ದರೆ, ಬೆಂಗಳೂರು 15 ಬಾರಿ…

Read More

ಟೆಸ್ಟ್‌ ಕ್ರಿಕೆಟ್‌ ಬದುಕಿಗೆ ವಿದಾಯ ಘೋಷಿಸಿರುವ ವಿರಾಟ್‌ ಕೊಹ್ಲಿಗೆ ಅವರ ಅಭಿಮಾನಿಗಳು ಇಂದು ಬೆಂಗಳೂರಿನಲ್ಲಿ ನಡೆಯುವ RCB ಪಂದ್ಯದಲ್ಲಿ ವಿಶೇಷ ಗೌರವ ಸಲ್ಲಿಸಲು ಮುಂದಾಗಿದ್ದಾರೆ. ಇಂದು ಐಪಿಎಲ್ 2025 ಪುನರಾರಂಭವಾಗಲಿದ್ದು, ಆರ್‌ಸಿಬಿ vs ಕೆಕೆಆರ್‌ ನಡುವಣ ಪಂದ್ಯ ನಡೆಯಲಿದೆ. ಈ ಪಂದ್ದ ಸಂದರ್ಭದಲ್ಲಿ ಅಭಿಮಾನಿಗಳು ಕೊಹ್ಲಿಗೆ ವಿಶಿಷ್ಟ ಗೌರವ ನೀಡಲು ಯೋಜನೆ ರೂಪಿಸಿದ್ದಾರೆ. https://ainkannada.com/this-piles-time-is-not-right-dont-hand-over-the-innovative-task-saturdays-rashi-future-17-may-2025/ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಸಂಜೆ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಐಪಿಎಲ್ ಪಂದ್ಯ ನಡೆಯಲಿದೆ. ವಿರಾಟ್‌ ಕೊಹ್ಲಿ ರನ್ ಹಸಿವು ಕಿಂಚಿತ್ತೂ ಕಡಿಮೆಯಾಗಿರಲಿಲ್ಲ. ಅದಾಗಲೇ ವೈಟ್ ಜೆರ್ಸಿ ಕ್ರಿಕೆಟ್‌ಗೆ ವಿದಾಯ ಹೇಳಿಬಿಟ್ಟಿದ್ದ ಕೊಹ್ಲಿಗೆ ಕೊನೆ ಪಕ್ಷ ಬಿಸಿಸಿಐ ವಿದಾಯದ ಪಂದ್ಯವಾಡಿಸಿ ಬೀಳ್ಕೊಡುಗೆ ನೀಡಬಹುದಿತ್ತು. ಆದ್ರೆ ಅದೂ ಆಗಲಿಲ್ಲ. ಹೀಗಾಗಿ ಆರ್‌ಸಿಬಿ ಫ್ಯಾನ್ಸ್ ಶನಿವಾರ ನಡೆಯುವ ಮ್ಯಾಚ್‌ಗೆ ನಂಬರ್ 18ರ ವೈಟ್ ಜೆರ್ಸಿ ಧರಿಸಿ ಕೊಹ್ಲಿಗೆ ಗೌರವ ನೀಡಲು ಸಿದ್ಧರಾಗಿದ್ದಾರೆ. ಇಂಡಿಯಾ ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿ ಮಧ್ಯೆ…

Read More

ಸೂರ್ಯೋದಯ – 5:47 ಬೆ. ಸೂರ್ಯಾಸ್ತ – 6:37 ಸಂಜೆ. ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ಪಂಚಮಿ ನಕ್ಷತ್ರ – ಪೂರ್ವಾಷಾಢ ಯೋಗ – ಸಾಧ್ಯ ಕರಣ – ಕೌಲವ ಮಳೆ ನಕ್ಷತ್ರ: ಕೃತಿಕಾ ರಾಹು ಕಾಲ – 09:00 ದಿಂದ 10:30 ವರೆಗೆ ಯಮಗಂಡ – 01:30 ದಿಂದ 03:00 ವರೆಗೆ ಗುಳಿಕ ಕಾಲ – 06:00 ದಿಂದ 07:30 ವರೆಗೆ ಬ್ರಹ್ಮ ಮುಹೂರ್ತ – 4:11 ಬೆ. ದಿಂದ 4:59 ಬೆ. ವರೆಗೆ ಅಮೃತ ಕಾಲ – 12:36 ಮ. ದಿಂದ 2:19 ಮ. ವರೆಗೆ ಅಭಿಜಿತ್ ಮುಹುರ್ತ – 11:46 ಬೆ. ದಿಂದ 12:38 ಮ. ವರೆಗೆ ಮೇಷ ರಾಶಿ ( ಅಶ್ವಿನಿ ಭರಣಿ ಕೃತಿಕ 1) ವಿದೇಶ ಭಾಗ್ಯ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜಯ, ಎಣ್ಣೆ,, ನೀರು,…

Read More

ಉಡುಪಿ: ಅಪರಿಚಿತ ವಾಹನವೊಂದು ತಡರಾತ್ರಿ ಪಾದಚಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ,ಪಾದಚಾರಿ ಮೃತಪಟ್ಟ ಘಟನೆ ಸಂಭವಿಸಿದೆ. ನಿಟ್ಟೂರು ಸಮೀಪ ರಾಷ್ಟ್ರೀಯ ಹೆದ್ದಾರಿ ಗಣೇಶ್ ಮಾರ್ಬಲ್‌‌ ಬಳಿ‌ ಈ ದುರ್ಘಟನೆ ಸಂಭವಿಸಿದೆ. ಕುಂದಾಪುರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿ ಹೊಡೆದಿರಬಹುದೆಂದು ಶಂಕಿಸಲಾಗಿದ್ದು, ಸಂಚಾರ ಪೋಲಿಸ್ ಠಾಣೆಯ‌ ಪೋಲಿಸರು ಸ್ಥಳಕ್ಕಾಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. https://ainkannada.com/instead-of-pumping-our-share-of-water-instead-of-a-novel-parallel-dam/ ಪೋಲಿಸರು ಸಾವಿಗೆ ಕಾರಣವಾಗಿರುವ ವಾಹನದ ಪತ್ತೆ ಕಾರ್ಯ, ಸಿ ಸಿ ಕ್ಯಾಮರಾ ಪರೀಶೀಲನೆ ನಡೆಸುತ್ತಿದ್ದಾರೆ. ಡಿಕ್ಕಿ ಹೊಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಗಾಯಾಳುವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಪರೀಕ್ಷಿಸಿದ ವೈದ್ಯರು ಗಾಯಾಳು ಅದಾಗಲೇ ಮೃತಪಟ್ಟಿರುವುದನ್ನು ದೃಢೀಕರಿಸಿದರು. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ.‌ ಮೃತ ಪಾದಚಾರಿ ಯುವಕನ‌ ಹೆಸರು ವಿಳಾಸ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹೊಸಪೇಟೆ:- “ತುಂಗಭದ್ರಾ ಅಣೆಕಟ್ಟಿನ ಹೂಳು ತೆಗೆಯುವುದು ಕಾರ್ಯಸಾಧುವಲ್ಲ. ಇದರ ಬದಲಾಗಿ ನವಲಿ ಬಳಿ ಸಮನಾಂತರ ಅಣೆಕಟ್ಟು ನಿರ್ಮಾಣ ಅಥವಾ ನಮ್ಮ ಪಾಲಿನ 27 ರಿಂದ 30 ಟಿಎಂಸಿ ನೀರನ್ನು ಬಸವಸಾಗರದಿಂದ ಪಂಪ್ ಮಾಡಿ ಮೇಲಿನ ಕೆರೆಗಳನ್ನು ತುಂಬಿಸುವ ಬಗ್ಗೆ ರಾಜ್ಯದ ತಾಂತ್ರಿಕ ಸಮಿತಿ ವರದಿ ನೀಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. https://ainkannada.com/greater-bangalore-elections-in-the-next-four-months-dcm-dk-shivakumar/ ರಾಜ್ಯ ಸರಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20 ರಂದು ಹಮ್ಮಿಕೊಂಡಿರುವ ಸಾಧನಾ ಸಮಾವೇಶದ ಪೂರ್ವ ಸಿದ್ಧತೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ ಅವರು ಶುಕ್ರವಾರ ಪರಿಶೀಲಿಸಿದರು. ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದರು. “ಈ ಪ್ರಸ್ತಾವನೆಯನ್ನು ತುಂಗಭದ್ರಾ ನಿಗಮದ ಮುಂದಿಟ್ಟಿದ್ದೇವೆ. ಇದರ ಬಗ್ಗೆ ಚರ್ಚೆ ನಡೆಸಲು ಆಂಧ್ರ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಬಳಿ ಸಮಯ ಕೇಳಿದ್ದೇನೆ. ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇನ್ನು ಸಮಯ ನೀಡಿಲ್ಲ. ಈ ಭಾಗದ ಜನರಿಗೆ ನವಲಿ ಅಣೆಕಟ್ಟು ಕಟ್ಟುವುದಾಗಿ ನಾವು ಬಜೆಟ್…

Read More

ಮೈಸೂರು, ಮೇ 16: “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. https://ainkannada.com/dakshina-kannada-district-will-soon-become-a-podimukta-district-cm-siddaramaiah/ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು. ಸದನದಲ್ಲಿಈ ಬಗ್ಗೆ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು. ಅವರ ಶೇ 90 ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು. ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ. ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು” ಎಂದು ತಿಳಿಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದನ್ನು ಕ್ವಾರ್ಟರ್…

Read More

ಮಂಗಳೂರು ಮೇ 16: ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ  ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. https://ainkannada.com/bidadi-town-ship-scheme-is-a-plan-to-be-plundered-by-congress-leaders-r-ashoka/ ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ ಕಟ್ಟಡವನ್ನು ಪ್ರಜಾರ್ಪಣೆಗೊಳಿಸಿ  ಮಾತನಾಡಿದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಗುದ್ದಲಿ ಪೂಜೆ ನೆರವೇರಿಸಿ ಮೊದಲ ಹಂತದ ಕಾಮಗಾರಿಗೆ ಹಣ ಬಿಡುಗಡೆ ಮಾಡಿದ್ದೆವು. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧದ ಕೆಲಸ ನಿಂತು ಹೋಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಾಮಗಾರಿ ಮುಂದುವರೆಯಲೇ ಇಲ್ಲ. ಇದನ್ನು ಪೂರ್ಣಗೊಳಿಸಲು ಮತ್ತೆ ನಾವೇ ಅಧಿಕಾರಕ್ಕೆ ಬರಬೇಕಾಯಿತು. ಬಿಜೆಪಿ ಅವಧಿಯಲ್ಲಿ ಉದ್ಘಾಟನೆ ಆಗಲಿಲ್ಲ ಏಕೆ ಎಂದು ವೇದಿಕೆಯಲ್ಲೇ ಇದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4.5 ಲಕ್ಷ…

Read More

ಬೆಂಗಳೂರು:- ಬಿಡದಿ ಟೌನ್ ಶಿಪ್ ಯೋಜನೆ ಎಂಬುದು ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ. ಇದರಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. https://ainkannada.com/prisoners-fight-in-parappana-agrahara-prison-sacrifice-from-bath-room-tiles/ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಮಾಡುತ್ತಿರುವ ಭೂ ಸ್ವಾಧೀನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಿಂದಾಗಿ ಬೆಂಗಳೂರಿಗೆ ಹಾನಿಯಾಗಲಿದೆ. ನಗರದ ಸುತ್ತಮುತ್ತಲಿನ ಜಮೀನುಗಳ ಬೆಲೆ ಹೆಚ್ಚಿಸಲು ಈ ರೀತಿ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಭೂ ಸ್ವಾಧೀನ ಎನ್ನುವುದೇ ದೊಡ್ಡ ಮಾರಿ. ಈ ಮನೆಹಾಳು ಬುದ್ಧಿ ಕಾಂಗ್ರೆಸ್ ನಾಯಕರಿಗೆ ಬಂದಿದೆ ಎಂದರು. ಈಗ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಆರೋಪ ಮಾಡಲಾಗುತ್ತಿದೆ. ನಾನು ಕೂಡ ಕಂದಾಯ ಸಚಿವನಾಗಿದ್ದೆ. ಆಗ ಎಂದೂ ನಾನು ಭೂ ಸ್ವಾಧೀನ ಮಾಡಲು ಬರಲಿಲ್ಲ‌. ರೈತರು ಬೇಡ ಎಂದಾಗಲೇ ಸ್ವಾಧೀನ ಕೈ ಬಿಡಲಾಗಿತ್ತು. ಕಾಂಗ್ರೆಸ್ ಎಂದರೆ ರಿಯಲ್ ಎಸ್ಟೇಟ್ ಸರ್ಕಾರ ಎಂದರು. ಗ್ಯಾರಂಟಿಗಳ ಹೆಸರಲ್ಲಿ ಕಾಂಗ್ರೆಸ್ ಸರ್ಕಾರ 2…

Read More