ಗದಗ: ಭಾರತ ಕೇವಲ ಹಿಂದೂಗಳ ದೇಶ ಅಲ್ಲ. ಇಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ದಲಿತರು ಹೀಗೆ ಅನೇಕ ಜಾತಿ ಜನಾಂಗದವರಿದ್ದು, ಇದು ಬಹುತ್ವದ ದೇಶ. ಭಾರತ ಹಿಂದೂ ರಾಷ್ಟ್ರ ಎನ್ನುವುದು ಬಿಜೆಪಿಯ ಸ್ಲೋಗನ್ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದೇವೇಳೆ ಬಿಜೆಪಿ, ಸಂಘ ಪರಿವಾರ, ಎಬಿವಿಪಿ, ಬಜರಂಗದಳ, ಯುವ ಮೋರ್ಚಾ ಎಲ್ಲವೂ ಸುಳ್ಳಿನ ಕಾರ್ಖಾನೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1950ರಲ್ಲಿ ಜನಸಂಘ ಸ್ಥಾಪನೆಯಾಯಿತು. ಅಂದಿನಿಂದ ಇಂದಿನ ವರೆಗೆ ಭಾರತ ಹಿಂದೂ ರಾಷ್ಟ್ರ ಮಾಡುತ್ತೇವೆ ಎನ್ನುತ್ತಲೇ ಬಂದಿದ್ದಾರೆ. ಹಿಂದೂ ರಾಷ್ಟ್ರ ಬಿಜೆಪಿಯ ಸ್ಲೋಗನ್ ಅಷ್ಟೇ, ಭಾರತ ಕೇವಲ ಹಿಂದೂ ರಾಷ್ಟç ಆಗಲು ಸಾಧ್ಯವಿಲ್ಲ ಎಂದರು. https://ainlivenews.com/yatnal-is-like-a-mad-dog-mp-renukacharya-lashes-out/ ಎಬಿವಿಪಿ, ಭಜರಂಗದಳ ಇವೆಲ್ಲಾ ಬಿಜೆಪಿ ಅಂಗ ಸಂಸ್ಥೆಗಳು. ಸುಳ್ಳು ಹೇಳುವುದೇ ಇವರ ಕೆಲಸ. ಬಿಜೆಪಿ ಎಂದರೆ ಸುಳ್ಳಿನ ಕಾರ್ಖಾನೆ. ನಮ್ಮ ಸರಕಾರ ನುಡಿದಂತೆ ನಡೆದಿದೆ. 4 ಗ್ಯಾರಂಟಿಗಳನ್ನು ಈಗಾಗಲೇ ಈಡೇರಿಸಲಾಗಿದೆ. 5 ಗ್ಯಾರಂಟಿಯನ್ನು 2024ರ ಜನವರಿಯಲ್ಲಿ ಜಾರಿಗೊಳಿಸಲಾಗುವುದು. ಸರಕಾರದ ಬಳಿ ಅನುದಾನದ ಕೊರತೆ ಇಲ್ಲ…
Author: AIN Author
ಬೆಂಗಳೂರು:- ಹೊಸ ವರ್ಷಾಚರಣೆಗೆ ಕೌಂಟ್ ಡೌನ್ ಶುರುವಾಗಿದ್ದು, ಮುನ್ನೆಚ್ಚರಿಕೆಗಾಗಿ ಬೆಂಗಳೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ. ಬೆಂಗಳೂರಲ್ಲಿ ಪ್ರತಿ ಬಾರಿ ಹೊಸ ಸಂಭ್ರ,ಮದಲ್ಲಿದ್ದ ಸಿಟಿ ಜನರು ನಗರದ ಬ್ರಿಗೇಡ್ ರೋಡ್, ಎಂಜಿ ರಸ್ತೆಯಲ್ಲಿ ಸೇರಿಕೊಂಡು ಎಂಜಾಯ್ ಮಾಡುತ್ತಾರೆ ಈ ನಡುವೆ ಗಲಭೆಗಳು ನಡೆಯುತ್ತಲೇ ಇರುತ್ತದೆ. ಈ ನಿಟ್ಟಿನಲ್ಲಿ ಅಹಿತಕರ ಘಟನೆ ನಡೆಯದಂತೆ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಅವರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಗೈಡ್ ಲೈನ್ಸ್ ನಲ್ಲಿ ಏನಿದೆ?* -ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು -ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ -ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್ -ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ -ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ -ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ -ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ -ಬಾರ್, ಪಬ್ ಗಳಿಗೂ…
ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಪ್ರಚೋದಾನಾಕಾರಿ ಭಾಷಣವನ್ನು ಮಾಡಿದ್ದಾರೆ. ನಮ್ಮ ಸಮಾಜದ ನಾಯಕರು, ಮಠಾಧೀಪತಿಗಳ ಕೈಯಲ್ಲಿ ಆಯುಧ ಕೊಡಬೇಕು. ಆಯುಧ ಕೊಟ್ಟು ಮಠ ಮಾನ್ಯಗಳು, ಗಣ್ಯರ ರಕ್ಷಣೆ ಮಾಡಬೇಕು ಎಂದು ಪುರಾಣದ ಮಾತು ಉಲ್ಲೇಖಿಸಿ ಆಯುಧ ಕೊಡಬೇಕು ಎಂದು ಸ್ವಾಮೀಜಿ ಹೇಳಿದ್ದು, ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ದೇವಿ ಕಡೆ ಸ್ವತಂತ್ರ ಆಯುಧ ಇರಲಿಲ್ಲ. ಎಲ್ಲರೂ ಒಂದು ಆಯುಧ ಕೊಟ್ಟಿರುವ ಕಾರಣಕ್ಕೆ ದುಷ್ಟರ ಸಂಹಾರ ಮಾಡಿದಳು. ಇದನ್ನು ಹೇಳೋಕೆ ಕಾರಣ, ನಮ್ಮ ನಾಯಕರುಗಳಿಗೆ ಒಬ್ಬೊಬ್ಬರು ಆಯುಧ ಕೊಡಬೇಕು. ಸಮಾಜದಲ್ಲಿ ಬಲಿಷ್ಠ ಆಗುವ ವ್ಯಕ್ತಿಗಳಿಗೆ ತೊಂದರೆ ಕೊಡುವ ಕೆಲಸ ಈ ನಾಡಿನಲ್ಲಿದೆ. ಮಠಾಧಿಪತಿಗಳಿಗೂ ಇದು ತಪ್ಪಿಲ್ಲ. ಮಠಾಧಿಪತಿಗಳನ್ನು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ ಎಂದಿದ್ದಾರೆ. ನಮ್ಮ ಮಠಗಳನ್ನ ನಾಶ ಮಾಡುವುದರ ಜೊತೆಗೆ ಎರಡನೇ ಹಂತದ ನಾಯಕರನ್ನು ರಾಜಕೀಯವಾಗಿ ನಾಶ ಮಾಡುವ ವ್ಯವಸ್ಥೆ ಇದೆ. ಹುಟ್ಟುಹಬ್ಬದಲ್ಲಿ ಇದನ್ನು ಹೇಳಬೇಕೋ ಬೇಡವೋ, ಆದರೆ ನಮ್ಮ ಭಾವನೆ ಹೇಳುತ್ತೇನೆ. ಯಾರ ಅಧಃಪತನವನ್ನೂ ನಾವು…
ದಾವಣಗೆರೆ: ಸಾಕಿದ ನಾಯಿ ಎಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಯತ್ನಾಳರದ್ದು ಯಾವಾಗಲೂ ಅಶ್ಲೀಲ ಪದ ಬಳಸುವುದೇ ಚಾಳಿ. ಅಂತವರ ಬಗ್ಗೆ ಮಾತಾಡೋಕೆ ನನಗೆ ಅಸಹ್ಯ ಅನಿಸುತ್ತೆ, ನಾಚಿಕೆ ಆಗುತ್ತೆ ಎಂದು ತಿರುಗೇಟನ್ನ ನೀಡಿದ್ದಾರೆ. ದಾವಣಗೆರೆಯಲ್ಲಿ ಈ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ, ಶಾಸಕ ಯತ್ನಾಳ್ ವಿರುದ್ದ ಹರಿಹಾಯ್ದರು. ಆನೆ ಬೀದಿಗೆ ಇಳಿದಾಗ ಹುಚ್ಚು ನಾಯಿ ಬೊಗಳುತ್ತವೆ. ಅವುಗಳು ಬೊಗಳಿದರೆ ಆನೆಯ ತೂಕವೇನು ಕಡಿಮೆಯಾಗಲ್ಲ. ಹೀಗೆ ಯತ್ನಾಳ್ ಕೂಡ ಮಾತಾನಾಡುತ್ತಾರೆ. ಅವರು ಮಾತಾಡುವುದರಿಂದ ಯಡಿಯೂರಪ್ಪನ ತೂಕವೇನು ಕಡಿಮೆಯಾಗಲ್ಲ. ನಾಯಿಗೆ ಇರುವ ನಿಯತ್ತು ಕೂಡ ಆ ಮನುಷ್ಯನಿಗೆ ಇಲ್ಲ. https://ainlivenews.com/yatnal-is-like-a-mad-dog-mp-renukacharya-lashes-out/ ನಿಮ್ಮನ್ನ ಬಿಜೆಪಿಗೆ ಕರೆ ತಂದದ್ದು ಯಡಿಯೂರಪ್ಪ, ಕೇಂದ್ರ ಮಂತ್ರಿ ಮಾಡಿದ್ದು ಯಡಿಯೂರಪ್ಪ. ಈತ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಬೆಳಕು ಚಲ್ಲಬೇಕಿತ್ತು. ಅದನ್ನು ಬಿಟ್ಟು ಕೇವಲ ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಒಳಗು ಹೊರಗು ಅದನ್ನೇ…
ಐಪಿಎಲ್ 2024ರ ಆಟಗಾರ ಮಿನಿ ಹರಾಜಿನ ಮೇಲೆ ಅಭಿಮಾನಿಗಳ ಚಿತ್ತ ನೆಟ್ಟಿದೆ. 10 ತಂಡಗಳ ಅಭಿಮಾನಿಗಳು ತಮ್ಮ ತಂಡಕ್ಕೆ ಯಾವ ಆಟಗಾರು ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಕುತೂಹಲದಲ್ಲಿದ್ದಾರೆ. ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಭಾರತದ ವಿಶ್ವಕಪ್ ಟ್ರೋಫಿ ಕನಸನ್ನು ಭಗ್ನ ಗೊಳಿಸಿದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರಿಗೆ ಈ ಬಾರಿಯ ಹರಾಜಿನಲ್ಲಿ ಭಾರಿ ಮೊತ್ತ ಸಿಗುವ ನಿರೀಕ್ಷೆ ಇದೆ. ಈಗಾಗಕೇ ಅವರನ್ನು ಆಕ್ಷನ್ನಲ್ಲಿ 20 ಕೋಟಿ ರೂ. ನೀಡಿಯಾದರೂ ಖರೀದಿಸಲು ಕೆಲವು ಫ್ರಾಂಚೈಸಿ ಮುಂದಾಗಿದೆ ಎಂದು ವರದಿಯಾಗಿದೆ 50 ಲಕ್ಷ ಮೂಲಬೆಲೆ ಹೊಂದಿರುವ ನ್ಯೂಜಿಲ್ಯಾಂಡ್ನ ಯುವ ಆಟಗಾರ ರಚಿನ್ ರವೀಂದ್ರ ಅವರಿಗೂ ಭಾರಿ ಮೊತ್ತ ಸಿಗುವ ಸಾಧ್ಯತೆ ಇದೆ. ಈ ಬಾರಿಯ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಚೊಚ್ಚಲ ಬಾರಿ ಕಣಕ್ಕಿಳಿದರೂ, ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನ ತೋರುವ ಮೂಲಕ ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದಿದ್ದರು. ವಿಶ್ವಕಪ್ನಲ್ಲಿ ಅವರು 578 ರನ್ ಬಾರಿಸಿದ್ದರು.…
ಬೆಳಗಾವಿ: ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕ, ಅಧ್ಯಕ್ಷನಾಗಿ ಮಾಡಬೇಕಾದ ಕೆಲಸವನ್ನು ನಾನು ಸಮರ್ಥವಾಗಿ ನಿಭಾಯಿಸಿದ್ದೇನೆ. ಇದನ್ನು ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಶಾಸಕರೇ ಒಪ್ಪಿದ್ದಾರೆ. ಈ ಮೂಲಕ ನಾನು ಉತ್ತರ ಕರ್ನಾಟಕದ ನಾಯಕರೂ ಸಮರ್ಥವಾಗಿ ಕೆಲಸ ಮಾಡುತ್ತಾರೆ ಎಂಬುದನ್ನು ತೋರಿಸಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. https://ainlivenews.com/yatnal-is-like-a-mad-dog-mp-renukacharya-lashes-out/ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆದಿರುವುದು ಸಮಾಧಾನ ತಂದಿದೆ. ಮೂರು ದಿನಗಳ ಕಾಲ ನಡೆದ ಸುದೀರ್ಘ ಚರ್ಚೆಯ ಬಳಿಕ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರಿಗೂ ಈ ಭಾಗಕ್ಕೆ ಅನ್ಯಾಯವಾಗಿರುವುದು ಮನದಟ್ಟಾಗಿದೆ. ಹೀಗಾಗಿ ಉತ್ತರ ಕರ್ನಾಟಕದ ನಾನಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ಹಣ ಮಂಜೂರು ಮಾಡಿದ್ದಾರೆ.
ಹುಬ್ಬಳ್ಳಿ:- ಇಲ್ಲಿನ ಹಳೇ ಮೂರಾರ್ಜಿ ನಗರದಲ್ಲಿ ಜೋಡಿಯೊಂದು ಆಟೋ ಡ್ರೈವರ್ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಲೋಕೇಶ ಹಾಗೂ ಆತನ ಹೆಂಡತಿಯ ತಂಗಿಯಾದ ಶಾಂತಿ ಎಂದು ಗುರುತಿಸಲಾಗಿದೆ. ಇವರಿಬ್ಬರ ನಡುವೆ ಹಲವು ದಿನಗಳಿಂದ ವಿವಾಹೇತರ ಸಂಬಂಧ ಇತ್ತು ಎಂಬ ಆರೋಪ ಇದೆ. ಹೀಗಾಗಿ ಇಬ್ಬರು ಬೆಂಗಳೂರಿನಿಂದ ಹುಬ್ಬಳ್ಳಿ ನಗರಕ್ಕೆ ಓಡಿ ಬಂದಿದ್ದರು ಎನ್ನಲಾಗಿದೆ. ಹುಬ್ಬಳ್ಳಿಗೆ ಬಂದ ಈ ಜೋಡಿ ನಗರದಲ್ಲಿ ಅಟೋವೊಂದನ್ನು ಬಾಡಿಗೆ ಪಡೆದಿದ್ದಾರೆ. ಬಳಿಕ ಆಟೋದಲ್ಲೇ ಅಕ್ಷಯ ಪಾರ್ಕ್ ಹಾಗೂ ಇನ್ನಿತರ ಕಡೆ ಸುತ್ತಾಡಿ ಆಟೋ ಡ್ರೈವರ್ ಜೊತೆ ಪರಿಚಯ ಬೆಳೆಸಿಕೊಂಡಿದ್ದಾರೆ. ಈ ಜೋಡಿ ಆಟೋ ಚಾಲಕನಿಗೆ ಹೇಳಿ ಊಟವನ್ನು ತರಿಸಿಕೊಂಡಿದ್ದಾರೆ. ಪರಿಚಯವಾಗಿದ್ದರಿಂದ ಆಟೋ ಚಾಲಕ ಆ ಜೋಡಿಯನ್ನು ಮೂರಾರ್ಜಿ ನಗರದಲ್ಲಿನ ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ. ನಂತರ ನಮ್ಮ ಮನೆಯಲ್ಲಿಯೇ ಊಟವನ್ನು ಮಾಡಿ ಎಂದು ಇವರಿಬ್ಬರಿಗೂ ಹೇಳಿ ತಾನು ಬೇರೆ ಪ್ಯಾಸೆಂಜರ್‌ನ್ನ ಬಿಡಲು ತೆರಳಿದ್ದಾನೆ. ಪ್ಯಾಸೆಂಜರ್ ಬಿಟ್ಟು ಮನೆಗೆ ಬಂದು ನೋಡಿದಾಗ ಇಬ್ಬರೂ ಒಂದೇ…
ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯುವ ನಿರೀಕ್ಷೆಯಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಒಂದೆರಡು ಭಾಗದಲ್ಲಿ ಮಾತ್ರ ಮಳೆ ಸುರಿಯಬಹುದು. ಆದರೆ ಉತ್ತರ ಕರ್ನಾಟಕದಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ತಿಳಿಸಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನವೂ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಕೆಲವೆಡೆ ಸಾಧಾರಣ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ನೋಡುವುದಾದರೆ ಗರಿಷ್ಠ ಉಷ್ಣಾಂಶದಲ್ಲಿ ಕೊಂಚ ಕುಸಿತ ಕಾಣಲಿದೆ. ಗರಿಷ್ಠ ಉಷ್ಣಾಂಶವು ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ 26 ಡಿಗ್ರಿ ಸೆಲ್ಸಿಯಸ್‌ನಷ್ಟು ಇದ್ದರೆ, ಕನಿಷ್ಠ ಉಷ್ಣಾಂಶದ ಪ್ರಮಾಣ 19 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲು…
ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್)ಯ ಮಾಜಿ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರ ಹೆಸರಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಲಾಗಿದೆ. ಖದೀಮರು ಕಿಮ್ಸ್‌ನ ಮಾಜಿ ನಿರ್ದೇಶಕ, ಪ್ರಸೂತಿ ಮತ್ತು ಸೀರೋಗ ಶಾಸ ವಿಭಾಗದ ಪ್ರಾಧ್ಯಾಪಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಐಡಿ ಖಾತೆ ಸೃಷ್ಟಿಸಿ, ವಾಟ್ಸ್‌ಅಪ್‌ನಲ್ಲಿ 7578851012 ಸಂಖ್ಯೆ ಮೂಲಕ ಸ್ನೇಹಿತರ ಕೋರಿಕೆ ಹಾಗೂ ಹಣಕಾಸಿನ ವಿನಂತಿ ಮಾಡುತ್ತಿದ್ದಾರೆ. ದಯಮಾಡಿ ಯಾರು ಇದನ್ನು ಸ್ವೀಕರಿಸಬಾರದು ಮತ್ತು ಇದಕ್ಕೆ ಪ್ರತಿಕ್ರಿಯಿಸಬಾರದು ಎಂದು ಡಾ. ರಾಮಲಿಂಗಪ್ಪ ಅಂಟರತಾನಿ ಅವರು ತಮ್ಮ ವಾಟ್ಸ್‌ಅಪ್ ಸ್ಟೇಟಸ್‌ನಲ್ಲಿ ಮನವಿ ಮಾಡಿದ್ದಾರೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿಮೂಡಿಸಿ ಹಲವಾರು ಕನ್ನಡ ಶಾಲೆಗಳ ಉಳಿವಿಗೆ ಕಾರಣನಾಗಿರುವ ನಟ ನಿರ್ದೇಶಕ ರಿಷಬ್ ಶೆಟ್ಟಿ ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೇ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ರಿಷಭ್ ಶೆಟ್ಟಿ ಫೌಂಡೇಶನ್ ಮೂಲಕ ಅಳಿವಿನಂಚಿನಲ್ಲಿದ್ದ ತಾನು ಓದಿದ ಕೆರಾಡಿ (Keradi) ಸರ್ಕಾರಿ ಕನ್ನಡ ಶಾಲೆಯನ್ನು (School) ದತ್ತು ಪಡೆದಿದ್ದಾರೆ ಕೆರಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಗೆ ಭೇಟಿನೀಡಿ ಕನ್ನಡ ಶಾಲೆ ಉಳಿಸುವ ಮತ್ತು ಬೆಳೆಸುವ ತನ್ನ ಕನಸನ್ನು ಬಿಚ್ಚಿಟ್ಟರು. ಈ ಸಂದರ್ಭದಲ್ಲಿ ಊರ ಪ್ರಮುಖರು,ಹಿರಿಯರು ಉಪಸ್ಥಿತರಿದ್ದು ಹುಟ್ಟೂರಿನ ಶಾಲೆಯ ದತ್ತು ರಿಷಬ್ ಶೆಟ್ಟಿಯವರನ್ನು ಅಭಿನಂದಿಸಿದರು. ರಿಷಬ್ ಸದ್ಯ ಕಾಂತಾರ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಮೊನ್ನೆಯಷ್ಟೇ ರಿಲೀಸ್ ಆಗಿರುವ ಕಾಂತಾರ (Kantara) ಚಾಪ್ಟರ್ 1 ಸಿನಿಮಾದ ಟೀಸರ್ (Teaser) ಕೋಟಿ ಕೋಟಿ ವಿವ್ಸ್ಯೂ ಪಡೆಯುತ್ತಿದ್ದು, ಟೀಸರ್ ನೋಡಿದ ಭಾರತವೇ ಬೆಚ್ಚಿ ಬಿದ್ದಿದೆ. ಟೀಸರ್ ನಲ್ಲಿ ತೋರಿಸಲಾದ ಆಶಯ ಮತ್ತು ರಿಷಬ್ ಶೆಟ್ಟಿ…