ಬೆಂಗಳೂರು: ರಾಜಕಾಲುವೆ ಒತ್ತುವರಿ ವಿಚಾರವಾಗಿ ಆರಂಭದಲ್ಲಿ ಪಾಲಿಕೆ ಶೂರತ್ವ ತೋರಿತ್ತು.ದೊಡ್ಡವರ ಹೆಸರು ಕೇಳಿಬಂದ ತಕ್ಷಣ ಇಡೀ ಕಾರ್ಯಾಚರಣೆ ನಿಲ್ಲಸಿಬಿಟ್ಟಿತ್ತು.ದೊಡ್ಡವರಿಗೆ ಒಂದು ನ್ಯಾಯ, ಸಾಮಾನ್ಯರಿಗೆ ಒಂದು ನ್ಯಾಯವೇ ಅಂತ ಜನ ಪ್ರಶ್ನೆ ಮಾಡಿದರು.ಆದ್ರೆ ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಇದೀಗ ಮತ್ತೆ ಬಿಬಿಎಂಪಿ ಮತ್ತೆ ರಾಜಕಾಲುವೆ ಒತ್ತುವರಿ ತೆರವಿಗೆ ಕೈ ಹಾಕಿದ್ದು, ಒತ್ತುವರಿದಾರರಿಗೆ ನಡುಕ ಹುಟ್ಟಿಸಿದೆ. ಮಳೆ ಬಂದಾಗ ಬೆಂಗಳೂರಿನಲ್ಲಿ ಆಗೋ ಅನಾಹುತ ಅಷ್ಟಿಷ್ಟಲ್ಲ.ಪ್ರತಿ ಮಳೆಗಾಲದಲ್ಲೂ ಮಳೆರಾಯ ಅವಾಂತರಗಳನ್ನೇ ಸೃಷ್ಟಿ ಮಾಡ್ತಾನೆ..ಈ ಅನಾಹುತಗಳಿಗೆ ಪ್ರಮುಖ ಕಾರಣ ರಾಜಕಾಲುವೆ ಒತ್ತುವರಿ.ಆದ್ರೆ ಸಾಕಷ್ಟು ಅನಾಹುತ ನಡೆದ ಬಳಿಕ ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ವಿಚಾರದಲ್ಲಿ ನಾಟಕವಾಡ್ತಿದೆ. ಬಡವರ ಮನೆ ಡೆಮಾಲೀಷನ್ ಮಾಡಿ ಶ್ರೀಮಂತರ ಮನೆ ಹೊಡೆಯದೆ ಸೈಲೆಂಟ್ ಆಗ್ತದೆ. ಆದ್ರೆ ಈ ಬಾರಿ ನಗರದಲ್ಲಿ ಕಾನೂನುಬಾಹಿರವಾಗಿ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಮನೆ, ವಾಣಿಜ್ಯ ಮಳಿಗೆಗಳು ಕೈಗಾರಿಕೆಗಳು ಸೇರಿದಂತೆ ಬೆಲೆ ಬಾಳುವ ಐಷಾರಾಮಿ ಕಟ್ಟಡಗಳನ್ನು ನಿರ್ಮಿಸಿಕೊಂಡ ಮಾಲೀಕರಿಗೆ ಮರ್ಮಾಘಾತ ನೀಡಲು ಪ್ಲಾನ್ ರೂಪಿಸಿದೆ. ಹೌದು.ಭೂಗಳ್ಳರು ರಾಜಕಾಲುವೆ ಒತ್ತುವರಿ ಮಾಡಿಕೊಂಡ…
Author: AIN Author
ತುಮಕೂರು:- ಕರ್ಕಶ ಶಬ್ದದೊಂದಿಗೆ ದ್ವಿಚಕ್ರ ವಾಹನ ಚಲಾಯಿಸಿದ ಸವಾರರಿಗೆ 8 ಸಾವಿರ ದಂಡ ವಿಧಿಸಲಾಗಿದೆ. ಗಿರಿನಗರದಲ್ಲಿ ಕರ್ಕಶ ಶಬ್ದ ಮಾಡಿಕೊಂಡು ಬೈಕ್ ಓಡಿಸುತ್ತಿದ್ದರು. ಈ ವಿಷಯ ಕ್ಯಾತ್ಸಂದ್ರ ಪೊಲೀಸರ ಗಮನಕ್ಕೆ ಬಂದಿದ್ದು, ಬೈಕ್ ವಶಕ್ಕೆ ಪಡೆದು ಸೈಲೆನ್ಸರ್ ಕಿತ್ತು ಹಾಕಿ ದಂಡ ವಿಧಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುವುದು ಮತ್ತು ಕರ್ಕಶ ಶಬ್ದದೊಂದಿಗೆ ವಾಹನ ಚಲಾಯಿಸುವುದು ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿ ಬಂದಿತ್ತು. ಇದೀಗ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ.
ಪಣಜಿ: ಗೋವಾ ರಾಜ್ಯದಲ್ಲಿ 4 ಲಕ್ಷಕ್ಕೂ ಹೆಚ್ಚು ಕನ್ನಡಿಗರು ಸ್ಥಾಯಿಕರಾಗಿದ್ದಾರೆ. ಇಡೀ ಗೋವಾದ ಜನಸಂಖ್ಯೆ 15 ಲಕ್ಷ ಕರ್ನಾಟಕದಿಂದ ಗೋವಾದಲ್ಲಿ ಉದ್ಯೋಗಕ್ಕಾಗಿ ಬಂದು ಹೋಗುವವರ ಸಂಖ್ಯೆ ಕೂಡ ಇದಕ್ಕಿಂತ ಹೆಚ್ಚಾಗಿದೆ. ಇಷ್ಟೊಂದು ಸಂಖ್ಯೆಯಲ್ಲಿ ಕನ್ನಡಿಗರಿರುವ ಗೋವಾದಲ್ಲಿ ಶೀಘ್ರದಲ್ಲಿಯೇ ಕನ್ನಡ ಭವನ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಗೋವಾ ಕನ್ನಡಿಗರಿಗೆ ಭರವಸೆ ನೀಡಿದರು. ಗೋವಾದ ವಾಸ್ಕೊ ಜುವಾರಿನಗರದಲ್ಲಿರುವ ಶ್ರೀ ಯಲ್ಲಾಲಿಂಗೇಶ್ವರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಗೋವಾದ ವಿವಿಧ ಸರ್ಕಾರಿ ಇಲಾಖೆಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರಸಕ್ತ ಬಾರಿ ಗೋವಾದಲ್ಲಿ ಕನ್ನಡ ಭವನಕ್ಕೆ ಕನಿಷ್ಠ ಒಂದು ಎಕರೆ ಅಥವಾ ಅರ್ಧ ಎಕರೆಯನ್ನಾದರೂ ಭೂಮಿಯನ್ನೂ ಖರೀದಿಸುತ್ತೇವೆ. ಇಷ್ಟು ಹೊತ್ತಿಗಾಗಲೇ ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕತ್ತು, ಬೇರೆ ರಾಜ್ಯಗಳಲ್ಲಿ ಕನ್ನಡ ಭವನ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು…
ತುಮಕೂರು:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪುರುಷರ ಸ್ನಾತಕೋತ್ತರ ವಿದ್ಯಾರ್ಥಿ ನಿಲಯ ಗಬ್ಬು ನಾರುತ್ತಿದೆ. ಕುವೆಂಪು ನಗರದಲ್ಲಿರುವ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಘಟನೆ ಜರುಗಿದೆ. ಮುರಿದ ಕಿಟಕಿ, ಬಾಗಿಲುಗಳು, ಪಾಚಿ ಕಟ್ಟಿದ ಗೋಡೆಗಳಿಂದ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಹಾಸ್ಟೆಲ್‌ನಲ್ಲಿ 250 ವಿದ್ಯಾರ್ಥಿಗಳಿಗೆ ಕೇವಲ 10 ಶೌಚಾಲಯಗಳಿವೆ. ಇರುವ ಶೌಚಾಲಯಗಳು ಒಂದು ವಾರದಿಂದ ಬ್ಲಾಕ್ ಆಗಿದ್ದು, ಪ್ರತಿ ದಿನ ಪರದಾಡುತ್ತಿದ್ದಾರೆ. ಈ ಬಗ್ಗೆ ಗಮನ ಹರಿಸಬೇಕಿದ್ದ ಅಧಿಕಾರಿಗಳು ಇತ್ತ ತಲೆ ಎತ್ತಿ ನೋಡುತ್ತಿಲ್ಲ. ನಿಲಯ ಪಾಲಕರು ವಾರಕ್ಕೊಮ್ಮೆ ‘ಅತಿಥಿ’ಯಂತೆ ಬಂದು ಹೋಗುತ್ತಿದ್ದಾರೆ. ಹಾಸ್ಟೆಲ್ ಹಿಂಭಾಗದಲ್ಲಿರುವ ತೆರೆದ ಚರಂಡಿಯನ್ನು ಕಳೆದ ಒಂದು ವರ್ಷದಿಂದ ಮುಚ್ಚಿಲ್ಲ. ರಾತ್ರಿ ಸಮಯದಲ್ಲಿ ಯಾರಾದರೂ ಗಮನಿಸದೆ ಮುಂದೆ ಹೆಜ್ಜೆ ಹಾಕಿದರೆ ಅಪಾಯ ಖಚಿತ. ಹೊಸದಾಗಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸೂಕ್ತವಾದ ಕೊಠಡಿ ವ್ಯವಸ್ಥೆ ಇಲ್ಲವಾಗಿದೆ. ಕೊಠಡಿಗಳ ಬಾಗಿಲು ಮುರಿದಿದ್ದು, ಹಾಸ್ಟೆಲ್‌ಗೆ ಭದ್ರತೆ ಕಲ್ಪಿಸಿಲ್ಲ. ಪ್ರತಿ ದಿನ ಮೆನು ಪ್ರಕಾರ ಊಟ, ತಿಂಡಿ ನೀಡುತ್ತಿಲ್ಲ. ಮೆನು ಚಾರ್ಟ್ ಕೇವಲ…
ಬೆಂಗಳೂರು: ವಿಷ್ಣುವರ್ಧನ್ (Vishnuvardhan) ಅಂತ್ಯ ಸಂಸ್ಕಾರವಾದ ಜಾಗದಲ್ಲಿ ಪುಣ್ಯಭೂಮಿ ಆಗಬೇಕು ಎಂದು ವಿಷ್ಣು ಅಭಿಮಾನಿಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಷ್ಣುವರ್ಧನ್ ಅಭಿಮಾನಿಗಳೆಲ್ಲರೂ ಸೇರಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ (Protest) ಹಮ್ಮಿಕೊಂಡಿದ್ದಾರೆ ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯಭೂಮಿಗಾಗಿ ಹೋರಾಟ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ವಿಷ್ಣು ಅಭಿಮಾನಿಗಳಿಂದ ಪ್ರತಿಭಟನೆ ನಡೆಯುತ್ತಿದ್ದು ವಿಷ್ಣುವರ್ಧನ್ ಇಹಲೋಕ ತ್ಯಜಿಸಿ 14 ವರ್ಷಗಳು ಕಳೆದಿವೆ ಆದ್ರೂ ನಿರ್ಣಾಯಕ ಅಂತ್ಯ ಕಾಣದ ಸ್ಮಾರಕ ವಿಚಾರ ಬೆಂಗಳೂರಿಗೆ ಕರ್ನಾಟಕದ ಬೇರೆ ಜಿಲ್ಲೆಗಳಿಂದಲೂ ಬಂದ ಅಭಿಮಾನಿಗಳು ಬೆಂಗಳೂರಿನಲ್ಲೇ ವಿಷ್ಣು ಸ್ಮಾರಕ ನಿರ್ಮಾಣ ಆಗುವಂತೆ ಒತ್ತಾಯ ವಿಷ್ಣು ಪುಣ್ಯಭೂಮಿಗಾಗಿ ‘ಅಭಿಮಾನ’ದ ಹೋರಾಟ..! ‘ಯಜಮಾನ’ರ ಪುಣ್ಯಭೂಮಿ ನಮ್ ಹಕ್ಕು ಅಂತಿರೋ ವಿಷ್ಣು ಫ್ಯಾನ್ಸ್ ವಿಷ್ಣುವರ್ದನ್ ಅಭಿಮಾನಿಗಳ ಹೋರಾಟಕ್ಕೆ ಕರವೆ ಬೆಂಬಲ ಕೂಡ ನೀಡಿದೆ. ವಿಷ್ಣುವರ್ಧನ್ ಸ್ಮಾರಕ ಬೆಂಗಳೂರಿನಲ್ಲಿ ಆಗುವಂತೆ ಒತ್ತಾಯ ನನ್ನ ಒತ್ತಾಯವಿದೆ ಈ ಬಗ್ಗೆ ಡಿಕೆ ಶಿವಕುಮಾರ್ ಬಳಿಯೂ ಮಾತನಾಡಿದ್ದೇನೆ ಡಿಕೆ ಶಿವಕುಮಾರ್ ಕೂಡ ಭರವಸೆ ನೀಡಿದ್ದಾರೆ ಬೇಡಿಕೆ ಇರುವ 10 ಗುಂಟೆ ಜಾಗ ಕೊಡಿಸುತ್ತೇನೆ ಎಂದಿದ್ದಾರೆ…
ಮಡಿಕೇರಿ:- ಕೊಳೆತ ಸ್ಥಿತಿಯಲ್ಲಿ ಗಂಡಾನೆ ಮೃತದೇಹ ಪತ್ತೆಯಾಗಿರುವ ಘಟನೆ ಮಡಿಕೇರಿಯ ದುಬಾರೆಯ ಕಾಡಿನೊಳಗೆ ಜರುಗಿದೆ. ಸುಮಾರು 15 ದಿನಗಳಿಗೂ ಹಿಂದೆ ಮೃತಪಟ್ಟಿರುವ ಈ ಕಾಡಾನೆಯ ದೇಹ ಸಂಪೂರ್ಣ ಕೊಳೆತು ಹೋಗಿದೆ. ಆನೆಯ ಎರಡೂ ದಂತಗಳು ಸಿಕ್ಕಿವೆ. ಕಾಲಿಗೆ ಗಾಯವಾಗಿ ಕುಂಟುತ್ತಾ ಹೋಗುತ್ತಿದ್ದ ಆನೆಯೊಂದನ್ನು ಇತ್ತೀಚೆಗೆ ಸಿಬ್ಬಂದಿಯೊಬ್ಬರು ಪತ್ತೆ ಹಚ್ಚಿದ್ದರು. ಬಹುಶಃ ಅದೇ ಆನೆ ಇರಬಹುದು ಎಂದು ಅಂದಾಜು ಮಾಡಲಾಗಿದೆ’ ಎಂದು ತಿಳಿಸಿದರು. ಆನೆಕಾಡಿಗೆ ಕುರುಡು ಆನೆ ಮೃತದೇಹ ಶುಕ್ರವಾರ ರಾತ್ರಿ ಮೃತಪಟ್ಟಿದ್ದ ಕಣ್ಣು ಕಾಣದೇ ಅಲೆಯುತ್ತಿದ್ದ ಹೆಣ್ಣಾನೆಯ ಮೃತದೇಹವನ್ನು ಕುಶಾಲನಗರ ಸಮೀಪದ ಆನೆಕಾಡಿಗೆ ತರಲಾಯಿತು. ಮರಣೋತ್ತರ ಪರೀಕ್ಷೆ ನಡೆಸಿದಾಗ ಇದು ಗರ್ಭಿಣಿ ಅಲ್ಲ ಎಂದು ಖಚಿತಗೊಂಡಿತು
ಬೆಂಗಳೂರು: ವಿಷ್ಣುವರ್ಧನ್ (Vishnuvardhan) ಅಂತ್ಯ ಸಂಸ್ಕಾರವಾದ ಜಾಗದಲ್ಲಿ ಪುಣ್ಯಭೂಮಿ ಆಗಬೇಕು ಎಂದು ವಿಷ್ಣು ಅಭಿಮಾನಿಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಷ್ಣುವರ್ಧನ್ ಅಭಿಮಾನಿಗಳೆಲ್ಲರೂ ಸೇರಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ (Protest) ಹಮ್ಮಿಕೊಂಡಿದ್ದಾರೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ ಎ ನಾರಾಯಣಗೌಡ ಮತ್ತು ಡಾ ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಪ್ರತಿನಿಧಿಗಳು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭಾನುವಾರ ಭೇಟಿ ಮಾಡಿದರು. ಬೆಂಗಳೂರಿನ ಉತ್ತರಹಳ್ಳಿ-ಕೆಂಗೇರಿ ಮುಖ್ಯರಸ್ತೆಯಲ್ಲಿ ವಿಷ್ಣುವರ್ಧನ್ ಸಮಾಧಿ ಸ್ಥಳ ಸೇರಿದಂತೆ ಆರು ಗುಂಟೆ ಜಾಗವನ್ನು ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಸರಕಾರದಿಂದ ಮಂಜೂರು ಮಾಡಿಸಬೇಕು ಎಂದು ಮನವಿ ಸಲ್ಲಿಸಿದರು.
ಬೆಂಗಳೂರು: ಮಹಿಳೆ (Belagavi Woman) ಮೇಲಿನ ದೌರ್ಜನ್ಯ ಪ್ರಕರಣ ದೊಡ್ಡಮಟ್ಟದಲ್ಲಿ ಸದ್ದು ಮಾಡ್ತಿದೆ. ಇದೇ ಹೊತ್ತಲ್ಲಿ ಸಂತ್ರಸ್ತೆಯ ಭೇಟಿಗೆ ಹೈಕೋರ್ಟ್ (High Court) ನಿರ್ಬಂಧ ವಿಧಿಸಿದೆ. ರಾಜಕಾರಣಿಗಳು ಸೇರಿ ಯಾರೇ ಆಗಲಿ ವೈದ್ಯರ ಲಿಖಿತ ಅನುಮತಿ ಇಲ್ಲದೇ ಸಂತ್ರಸ್ತೆಯನ್ನು ಭೇಟಿ ಮಾಡುವಂತಿಲ್ಲ. ಇದು ಕುಟುಂಬಸ್ಥರು, ಶಾಸನಬದ್ಧ ಸಂಸ್ಥೆ, ತನಿಖಾಧಿಕಾರಿಗಳಿಗೆ ಅನ್ವಯಿಸಲ್ಲ. ಹೀಗಾಗಿ ವೈದ್ಯರು, ಕುಟುಂಬಸ್ಥರು ಹಾಗೂ ತನಿಖಾಧಿಕಾರಿಗಳು ಮಾತ್ರ ಭೇಟಿ ಮಾಡಬಹುದು ಎಂದು ಸಿಜೆ ವರಾಳೆ ನೇತೃತ್ವದ ವಿಭಾಗೀಯ ಪೀಠ ಆದೇಶ ನೀಡಿದೆ. ಪ್ರಕರಣ ಸಂಬಂಧ ಶುಕ್ರವಾರ ದೆಹಲಿಯಲ್ಲಿ ದನಿ ಎತ್ತಿದ್ದ ಬಿಜೆಪಿಗರು (BJP) ಶನಿವಾರ ಬೆಳಗಾವಿಗೆ ಭೇಟಿ ನೀಡಿದ್ದಾರೆ. ಸಂಸದೆ ಅಪರಾಜಿತಾ ಸಿಂಗ್ ನೇತೃತ್ವದ ಬಿಜೆಪಿ ಸತ್ಯಶೋಧನಾ ಸಮಿತಿ ಸದಸ್ಯರು ಸಂತ್ರಸ್ತೆಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ರು. ಘಟನೆಯ ಬಗ್ಗೆ ಮಾಹಿತಿ ಪಡೆದ್ರು. ಘಟನಾ ಸ್ಥಳಕ್ಕೂ ತೆರಳಿ ಪರಿಶೀಲಿಸಿದ್ರು. ಇದು ನಿಜಕ್ಕೂ ತಲೆ ತಗ್ಗಿಸುವ ಘಟನೆ. ಬೆಳಗಾವಿಲಿದ್ರೂ ಸಿಎಂ ಸೇರಿ ಯಾರು ಕೂಡ ಸಂತ್ರಸ್ತೆಯನ್ನು ಏಕೆ ಭೇಟಿ ಮಾಡ್ಲಿಲ್ಲ ಎಂದು ಆಕ್ರೋಶ…
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಚಳಿಯ ಪ್ರಮಾಣ ಹೆಚ್ಚಳವಾಗುತ್ತಿದೆ. ಇದರ ನಡುವೆ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಮೈಸೂರು, ಮಂಡ್ಯ, ಮಡಿಕೇರಿ, ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೊಂಚ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಉತ್ತರ ಒಳನಾಡಿನಲ್ಲಿ ಈ ವಾರಪೂರ್ತಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಹೀಗಿದ್ದರೂ ಈ ಭಾಗದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದಿದೆ. ರಾಜ್ಯದ ಬಹುತೇಕ ಕಡೆ ಗರಿಷ್ಠ ತಾಪಮಾನ ಮತ್ತು ಕನಿಷ್ಠ ತಾಪಮಾನ ಇಳಿಕೆ ಆಗಿದೆ. ಹೀಗಾಗಿ ಚಳಿಗಾಲ ಆರಂಭವಾದ ಅನುಭವವಾಗುತ್ತಿದೆ. ಈ ಮೂಲಕ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ
ಹುಬ್ಬಳ್ಳಿ, :ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣ ಗೊತ್ತಾದ ತಕ್ಷಣವೇ ಗೃಹ ಸಚಿವರು ಮಹಿಳೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಎಲ್ಲಿ ಸರ್ಕಾರ ಫೇಲ್ ಆಗಿದೆ ಎಂದು ಪ್ರಶ್ನಿಸಿದರು. ಉತ್ತರ ಪ್ರದೇಶದಲ್ಲಿ ಶಾಸಕ 9 ವರ್ಷದ ಹುಡುಗಿ ಮೇಲೆ ರೇಪ್ ಮಾಡಿ ಜೈಲು ಸೇರಿದ್ದಾನೆ. ಇದಕ್ಕೆ ಜೆಪಿ ನಡ್ಡಾ ಮತ್ತು ಬಿಜೆಪಿ ನಾಯಕರು ಏನು ಹೇಳತ್ತಾರೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಇಂತಹ ಎಂಎಲ್ಎ ಇಟ್ಟುಕೊಂಡು ಹೆಣ್ಣುಮಕ್ಕಳು ಮೇಲೆ ದೌರ್ಜನ್ಯ ಮಾಡುವ ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡಲು ಏನು ನೈತಿಕತೆಯಿದೆ ಎಂದು ವಾಗ್ದಾಳಿ ನಡೆಸಿದರು. ಯಾರ ಕಾಲದಲ್ಲಿ ಎಷ್ಟು ಪ್ರಕರಣ ಆಗಿವೆ ಅಂತ ನ್ಯಾಷನಲ್ ಕ್ರೈಂ ಬ್ಯಿರೋ ಅವರ ವರದಿ ನೋಡಲಿ. ಯಾರ ಮೇಲೆ ದೌರ್ಜನ್ಯ ಆದರೂ ಅವರ ಮೇಲೆ ನಾವು ಕಠಿಣ ಕ್ರಮ ತೆಗೆದುಕೊಳ್ಳತ್ತವೆ. ಬೆಳಗಾವಿಯಲ್ಲಿ ನಡೆದಿದ್ದು…