Author: AIN Author

ಕಾಸರಗೋಡು: ಕೇರಳ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಟೆಕ್ವಾಂಡೋದಲ್ಲಿ ಚಿನ್ನದ ಪದಕ ಗೆದ್ದು, (Taekwondo) ಕನ್ನಡತಿ ಎನ್.‌ ಗಣ್ಯ ರಾಷ್ಟ್ರೀಯ ಶಾಲಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕಾಸರಗೋಡು (Kasaragod) ಜಿಲ್ಲೆಯ ಎಡನೀರು ಸ್ವಾಮೀಜಿಸ್‌ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಪ್ಲಸ್‌ ಒನ್‌ ವಿದ್ಯಾರ್ಥಿನಿಯಾಗಿರುವ ಗಣ್ಯ, 17 ವರ್ಷದೊಳಗಿನ ಬಾಲಕಿಯರ 50-65 ಕೆಜಿ ವಿಭಾಗದಲ್ಲಿ ಮಿಂಚಿದರು. ಗಣ್ಯ ಸಾಧನೆಯಿಂದಾಗಿ ಕಾಸರಗೋಡು ಜಿಲ್ಲೆ ಸೀನಿಯರ್‌ ಹಾಗೂ ಜೂನಿಯರ್‌ ಟೆಕ್ವಾಂಡೋ (Junior Taekwondo) ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಗೆದ್ದಿದೆ. ಆರ್‌ಎಸ್‌ಸಿ ಎರ್ನಾಕುಳಂನಲ್ಲಿ (Ernakulam) ನಡೆದ ಕೇರಳ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಗೆಲುವಿನೊಂದಿಗೆ ಗಣ್ಯ ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ಅ`ಗಣ್ಯʼ ಸಾಧನೆ..!: ಟ್ವೆಕಾಂಡೋ ಮಾತ್ರವಲ್ಲ ಗಣ್ಯಗೆ ಇತರೆ ಕ್ರೀಡೆಗಳಲ್ಲೂ ಆಸಕ್ತಿ ಇದೆ. ಗಣ್ಯಳ ಸಾಧನೆಯ ಕಿರುವಿವರ ಇಲ್ಲಿದೆ ನೋಡಿ. 2022ರಲ್ಲಿ ಕಾಸರಗೋಡು ಜಿಲ್ಲೆಯ ಪಡನ್ನಕ್ಕಾಡ್‌ನಲ್ಲಿ ನಡೆದ 23ನೇ ಕಾಸರಗೋಡು ಜಿಲ್ಲಾ ಮಟ್ಟದ ಟೆಕ್ವಾಂಡೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ 2018ರಲ್ಲಿ ಕಾಸರಗೋಡು ಜಿಲ್ಲಾ ಮಟ್ಟದ ಟ್ವೆಕಾಂಡೋ…

Read More

ರೋಹಿತ್​ ಶರ್ಮ ಅವರನ್ನು ಮುಂಬೈ ಇಂಡಿಯನ್ಸ್​ ತಂಡದ ನಾಯಕತ್ವದಿಂದ ಅಕಾಲಿಕವಾಗಿ ಕೆಳಗಿಳಿಸಿರುವುದಕ್ಕೆ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮುಂಬೈ ಇಂಡಿಯನ್ಸ್​ ತಂಡವನ್ನು ಲಾಂತರ ಸಂಖ್ಯೆಯಲ್ಲಿ ಅನ್​ಫಾಲೋ ಮಾಡುವ ಮೂಲಕವೂ ಅಭಿಮಾನಿಗಳು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಮುಂಬೈ ತಂಡದ ಕೆಲ ಸಹ ಆಟಗಾರರೂ ಪರೋಕ್ಷವಾಗಿ ಬೆಂಬಲ ಸೂಚಿಸಿದ್ದಾರೆ. ಇತ್ತೀಚೆಗೆ ಹಾರ್ದಿಕ್​ ಪಾಂಡ್ಯ ಗುಜರಾತ್​ ಟೈಟಾನ್ಸ್​ನಿಂದ ಮುಂಬೈ ತಂಡಕ್ಕೆ ಮರಳಿದಾಗ ಸಂಭ್ರಮಿಸಿದ್ದ ಅಭಿಮಾನಿಗಳಿಗೆ, ರೋಹಿತ್​ರನ್ನು ದಿಢೀರನೆ ನಾಯಕತ್ವದಿಂದ ಕೆಳಗಿಳಿಸಿರುವುದು ತೀವ್ರ ಆಘಾತ ನೀಡಿದೆ. 2011ರಿಂದ ಮುಂಬೈ ತಂಡದ ಭಾಗವಾಗಿರುವ ರೋಹಿತ್​, 2013ರಲ್ಲಿ ಮೊದಲ ಬಾರಿ ನಾಯಕತ್ವ ವಹಿಸಿಕೊಂಡಾಗಲೇ ತಂಡ ಮೊದಲ ಬಾರಿ ಐಪಿಎಲ್​ ಟ್ರೋಫಿ ಗೆದ್ದಿತ್ತು. ನಂತರದಲ್ಲಿ 6 ವರ್ಷಗಳ ಅಂತರದಲ್ಲಿ ಮತ್ತೆ 4 ಟ್ರೋಫಿ ಗೆದ್ದುಕೊಟ್ಟಿದ್ದರು. ಆದರೆ ಇದೀಗ ತಂಡದ ನಾಯಕತ್ವದಿಂದ ಕಸಿದಿರುವ ರೋಹಿತ್ ಶರ್ಮಾ ಫ್ಯಾನ್ಸ್ ನಿಂದ ಅನ್ ಫಾಲೋ ಪ್ರತಿಭಟನೆ ಜರುಗಿದೆ.

Read More

ರಿಂಕು ಉತ್ತಮ ಆಟಗಾರ, ಅವಕಾಶಗಳನ್ನು ಸೃಷ್ಟಿಸಿಕೊಂಡಿದ್ದಾರೆ ಎಂದು ಕನ್ನಡಿಗ ಕೆಎಲ್​ ರಾಹುಲ್​ ಹೇಳಿದ್ದಾರೆ. ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೂ ಮುನ್ನಾದಿನ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೆಎಲ್ ರಾಹುಲ್​​ ಮಾತನಾಡಿದರು. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಗಳಲ್ಲಿ ರಿಂಕು ಸಿಂಗ್​ ನಂ.6 ರಲ್ಲಿ ಬ್ಯಾಟ್ ಮಾಡಬಹುದೇ ಎಂದು ರಾಹುಲ್‌ ಕೇಳಿದ ಪ್ರಶ್ನೆಗೆ,”ರಿಂಕು ಎಂತಹ ಉತ್ತಮ ಆಟಗಾರ ಎಂಬುದನ್ನು ತೋರಿಸಿದ್ದಾರೆ. ಐಪಿಎಲ್‌ನಲ್ಲಿ ಅವರನ್ನು ಎಷ್ಟು ನುರಿತವರು ವೀಕ್ಷಿಸಿದ್ದಾರೆಂದು ನಮಗೆಲ್ಲರಿಗೂ ತಿಳಿದಿದೆ. ಟಿ20 ಸರಣಿಯಲ್ಲಿ ತೋರಿದ ಪ್ರದರ್ಶನ ಮತ್ತು ಒತ್ತಡವನ್ನು ನಿಯಂತ್ರಿಸುವ ರೀತಿ ಉತ್ತಮವಾಗಿದೆ. ಇದು ನೋಡಲು ಉಲ್ಲಾಸದಾಯಕವಾಗಿತ್ತು. ಅವರು ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ, ಹೀಗಾಗಿ ಅವರು ಅವಕಾಶಗಳನ್ನು ಸೃಷ್ಠಿಸಿಕೊಳ್ಳುತ್ತಾರೆ” ಎಂದಿದ್ದಾರೆ. 2023ರ ಐಪಿಎಲ್​ ಆವೃತ್ತಿಯ ಪ್ರದರ್ಶನದಿಂದ ರಾಷ್ಟ್ರೀಯ ತಂಡದಲ್ಲಿ ರಿಂಕು ಅವಕಾಶ ಪಡೆದುಕೊಂಡರು. ವೆಸ್ಟ್​ ಇಂಡೀಸ್​ ಪ್ರವಾಸ, ಐರ್ಲೆಂಡ್​ ಪ್ರವಾಸ, ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಿ20 ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಟಿ-20 ಸರಣಿಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಏಕದಿನ ತಂಡದಲ್ಲಿ ಅವಕಾಶ…

Read More

ಅಡುಗೆಯಲ್ಲಿ ಎಣ್ಣೆಯಂಶ ಹೆಚ್ಚಾಗಿದ್ದರೆ ನಾವು ಹೇಳುವ ಈ ಒಂದು ಸಲಹೆ ಪಾಲಿಸಿ. ಕೆಲವೊಮ್ಮೆ ಅಡುಗೆಯಲ್ಲಿ ಎಣ್ಣೆಯಂಶ ಹೆಚ್ಚಾಗುತ್ತದೆ. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಈ ಎಣ್ಣೆಯನ್ನು ತೆಗೆಯಲು ಈ ಸಲಹೆ ಪಾಲಿಸಿ. ಜೋಳದ ಹಿಟ್ಟನ್ನು ನೀರಿನಲ್ಲಿ ಬೇಯಿಸಿ ನಂತರ ಸಾಂಬಾರಿಗೆ ಮಿಕ್ಸ್ ಮಾಡಿದರೆ ಅದು ಎಣ್ಣೆಯಂಶವನ್ನು ಹೀರಿಕೊಳ್ಳುತ್ತದೆ. ಹಾಗೇ ತರಕಾರಿಗಳನ್ನು ಬೇಯಿಸುವಾಗ ಎಣ್ಣೆಯಂಶ ಹೆಚ್ಚಾಗಿದ್ದರೆ ಅದಕ್ಕೆ ಕಡಲೆ ಹಿಟ್ಟು ಬಳಸಬಹುದು. ಕಡಲೆಹಿಟ್ಟನ್ನು ಸಣ್ಣ ಉರಿಯಲ್ಲಿ ಹುರಿದು ನಂತರ ತರಕಾರಿಯ ಜೊತೆಗೆ ಬೆರೆಸಿದರೆ ಎಣ್ಣೆಯಂಶ ಕಡಿಮೆಯಾಗುತ್ತದೆ ಎಂದು ಹೇಳಲಾಗಿದೆ.

Read More

ಭಾರತದ ಸ್ಟಾರ್ ಆಲ್​ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಮುಂಬೈ ಇಂಡಿಯನ್ಸ್​ ತಂಡದ ನೂತನ ನಾಯಕರಾಗಿ ನೇಮಕಗೊಂಡಿದ್ದಾರೆ. ಮುಂಬೈ ಇಂಡಿಯನ್ಸ್​ ಮ್ಯಾನೇಜ್​ಮೆಂಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್​ 2024 ಸೀಸನ್​ಗೆ ನಾಯಕನನ್ನಾಗಿ ನೇಮಿಸಲಾಗಿದೆ ಎಂದು ಅಧಿಕೃತವಾಗಿ ಪ್ರಕಟಿಸಿದೆ. ಇತ್ತೀಚೆಗಷ್ಟೇ ಹಾರ್ದಿಕ್ ಪಾಂಡ್ಯ ಅವರನ್ನು ಗುಜರಾತ್ ಟೈಟಾನ್ಸ್​ನಿಂದ ಟ್ರೇಡ್ ಮೂಲಕ ಸ್ವಾಧೀನಪಡಿಸಿಕೊಂಡ ಮುಂಬೈ ತಂಡ ತಕ್ಷಣವೇ ಅವರಿಗೆ ಪ್ರಮುಖ ಜವಾಬ್ದಾರಿಯನ್ನು ನೀಡಿದೆ. ಅಲ್ಲದೆ, ಪಾಂಡ್ಯಗೆ ಆಲ್​ ದಿ ಬೆಸ್ಟ್​ ಹೇಳಿದೆ. ರೋಹಿತ್‌ ಶರ್ಮಾ ಅವರ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು 2013, 2015, 2017, 2019 ಹಾಗೂ 2020ರ ಆವೃತ್ತಿಗಳಲ್ಲಿ ಮುಂಬೈ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. 2024ರ ಆವೃತ್ತಿಯಲ್ಲಿ ಪಾಂಡ್ಯ ನಾಯಕತ್ವದಲ್ಲಿ ಟ್ರೋಫಿ ಗೆಲ್ಲುವ ವಿಶ್ವಾಸ ಹೊಂದಿದೆ ರೋಹಿತ್ ಫ್ಯಾನ್ಸ್​ ಹಾರ್ಟ್​ ಛಿದ್ರ! ಮುಂಬೈ ತಂಡದ ನಾಯಕರಾಗಿ ರೋಹಿತ್ ಬದಲಿಗೆ ಪಾಂಡ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ರೋಹಿತ್ ಶರ್ಮಾ ಅಭಿಮಾನಿಗಳು ತೀವ್ರ ನಿರಾಸೆಗೊಂಡಿದ್ದಾರೆ. ಮುಂಬೈಗೆ ಐದು ಬಾರಿ ಐಪಿಎಲ್​ ಟ್ರೋಫಿ ಗೆಲ್ಲಿಸಿಕೊಟ್ಟ…

Read More

ಪ್ರಸಕ್ತ ಸಾಲಿನಲ್ಲಿ ಹಲ್ಲಿನ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆಯೇ ಹೆಚ್ಚು ಎನ್ನುತ್ತಾರೆ ವೈದ್ಯಕೀಯ ತಜ್ಞರು. ಹಲ್ಲಿನ ಸಮಸ್ಯೆ ಇರುವವರು ಯಾವುದೇ ಆಹಾರ ಸೇವಿಸಿದರೆ ನೋವು ಬರಬಹುದು. ನೀವೂ ಈ ಸಮಸ್ಯೆಯಿಂದ ಬಳಲುತ್ತಿದ್ದೀರಾ..? ಈ ಸಲಹೆಗಳನ್ನು ಪಾಲಿಸಿ.. ಪ್ರತಿದಿನ ಬೆಳಿಗ್ಗೆ ಮತ್ತು ಮಲಗುವ ಮುನ್ನ ಹಲ್ಲುಜ್ಜಬೇಕು. ಹೀಗೆ ಮಾಡುವುದರಿಂದ ಹಲ್ಲು ನೋವು ಮತ್ತು ವಸಡು ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಹಲ್ಲುನೋವು ಎಂದರೆ ಏನು? ಅದರಿಂದ ಪರಿಹಾರ ಪಡೆಯುವುದು ಹೇಗೆ ಎಂದು ತಿಳಿಯೋಣ ಹಲ್ಲಿನ ನರವು ಹಾನಿಗೊಳಗಾದಾಗ ಹಲ್ಲುನೋವು ಸಂಭವಿಸುತ್ತದೆ. ಅಲ್ಲದೆ, ಹಲ್ಲುನೋವಿಗೆ ಹಲವು ಕಾರಣಗಳಿವೆ. ಕಿವಿ ನೋವು ಮತ್ತು ಜ್ವರದಿಂದಲೂ ನೋವು ಉಂಟಾಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನೋವು 2 ದಿನಗಳಿಗಿಂತ ಹೆಚ್ಚು ಇದ್ದರೆ, ನೀವು ದಂತವೈದ್ಯರನ್ನು ಸಂಪರ್ಕಿಸಬೇಕು. ಹಲ್ಲುನೋವಿಗೆ ಕಾರಣವಾಗುವ ಹಲವು ಪರಿಸ್ಥಿತಿಗಳೂ ಇವೆ. ಹಲ್ಲಿನ ಮುರಿತ, ಸೋಂಕಿತ ಹಲ್ಲು, ಹೃದಯದ ಸಮಸ್ಯೆ, ಆಗಾಗ್ಗೆ ಹಲ್ಲುಗಳನ್ನು ರುಬ್ಬುವ ಮೂಲಕ ನೋವು ಕೂಡ ಉಂಟಾಗುತ್ತದೆ. ಒಂದು ಚಿಟಿಕೆ ಉಪ್ಪು : ತೀವ್ರ ಹಲ್ಲುನೋವು…

Read More

ಬೆಂಗಳೂರು:- ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಭಾರತ ರಾಜ್ಯಗಳ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ಕುರುಬೂರು ಶಾಂತಕುಮಾರ್ ಹೇಳಿದರು. ಪ್ರೆಸ್ ಕ್ಲಬ್​​ದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ, ಪ್ರವಾಹ, ಮಳೆಹಾನಿ, ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಎಲ್ಲ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿದ್ದು, ಬೆಳೆ ನಾಶವಾಗಿದೆ, ಈಗ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದಕ್ಕಾಗಿ ಸಾಲಮನ್ನಾ ಆಗಲೇಬೇಕು ಎಂದು ಒತ್ತಾಯಿಸಿದರು. ಕೈಗಾರಿಕೆ, ಉದ್ಯಮಿಗಳಿಗೆ ಸಂಕಷ್ಟದ ನೆರವು ಎಂದು 12 ಲಕ್ಷ ಕೋಟಿ ಮನ್ನಾ ಮಾಡಿರುವ ಕೇಂದ್ರ ಸರ್ಕಾರ, ಅದೇ ರೀತಿ ರೈತರ ಸಾಲ ಮನ್ನಾ ಆಗಬೇಕು. ಈ ಬಗ್ಗೆ ರೈತರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಡಿ.23 ರಂದು ಕೋರಿಕೆ ಪತ್ರ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

Read More

ಬೆಂಗಳೂರು:- ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿಯನ್ನು ಸರ್ಕಾರವು ವಾಗ್ದಾನದಂತೆ ಜಾರಿಗೊಳಿಸಲಿದೆ ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ತಿಳಿಸಿದ್ದಾರೆ. ಪ್ರಸ್ತುತ ನಮ್ಮ ಐದನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆಯನ್ನು ಇದೇ ಡಿಸೆಂಬರ್‌ ತಿಂಗಳ ಕೊನೆಯಲ್ಲಿ ನಿರುದ್ಯೋಗಿ ಪದವೀಧರ ಮತ್ತು ಐಟಿಐ ಪದವೀಧರರು ಗೌರವ ಧನ ಪಡೆಯಲು ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿ ವಾಗ್ದಾನದ ಮೇಲೆ ವಿಶ್ವಾಸವಿಟ್ಟು ಮಹಾಜನತೆಯು ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಕಾಂಗ್ರೆಸ್‌ಗೆ ನೀಡಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ನೀಡಿದೆ. ಈ ಮೂಲಕ ನಮ್ಮ ಸರ್ಕಾರದ ಜವಾಬ್ದಾರಿ ಇಮ್ಮಡಿಗೊಳಿಸಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟದಲ್ಲೇ ಐದರಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡು ಅಧಿಸೂಚನೆ ಹೊರಡಿಸಲಾಯಿತು. ಮೊದಲನೆಯದಾಗಿ ಶಕ್ತಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರತಿ ದಿನ ಸುಮಾರು 60 ರಿಂದ 62 ಲಕ್ಷ ಮಹಿಳೆಯರು ಪ್ರಯಾಣಿಸುವ ಅವಕಾಶ ದೊರಕಿದೆ. ಇದುವರೆಗೆ…

Read More

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಪಂಚಮಿ 05:33 PM ತನಕ ನಂತರ ಷಷ್ಠಿ ನಕ್ಷತ್ರ: ಇವತ್ತು ಶ್ರವಣ  04:37 AM ತನಕ ನಂತರ ಧನಿಷ್ಠ ಯೋಗ: ಇವತ್ತು ವ್ಯಾಘಾತ03:48 AM ತನಕ ನಂತರ ಹರ್ಷಣ ಕರಣ: ಇವತ್ತು ಬವ 06:46 AM ತನಕ ನಂತರ ಬಾಲವ 05:33 PM ತನಕ ನಂತರ ಕೌಲವ ರಾಹು ಕಾಲ: 04:30 ನಿಂದ 06:00 ವರೆಗೂ ಯಮಗಂಡ: 12:00 ನಿಂದ 01:30 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೂ ಅಮೃತಕಾಲ: 05.15 PM to 06.44 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:50 ನಿಂದ ಮ.12:33 ವರೆಗೂ ಶ್ರೀ ಸೋಮಶೇಖರ್B.Sc ( ವಂಶಪಾರಂಪರಿತ) ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು. Mob.No.93534 88403 ಮೇಷ ರಾಶಿ: ಶ್ವೇತವರ್ಣದ ವಸ್ತ್ರ ಧರಿಸಿ ಪೂರ್ವ ದಿಕ್ಕಿನಿಂದ ಹೊರಡಿ.ಜೇಷ್ಠ ಪುತ್ರನಿಗೆ ಧನ…

Read More

ಕಲಬುರಗಿ:- ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ನಾಲ್ಕು ಲಕ್ಷ ಮೌಲ್ಯದ ಕಬ್ಬು ಸುಟ್ಟು ಕರಕಲಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿಯಲ್ಲಿ ಘಟನೆ ನಡೆದಿದ್ದು ರೈತ ಕರಣಪ್ಪಗೆ ಸೇರಿದ 4 ಲಕ್ಷ ಮೌಲ್ಯದ ಕಬ್ಬು ಧಗಧಗ ಹೊತ್ತಿ ಉರಿದಿದೆ. ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಬಂತಾದ್ರೂ ಅಷ್ಟೊತ್ತಿಗೆ ಕಬ್ಬು ಭಸ್ಮವಾಗಿತ್ತು.

Read More