ಬೆಂಗಳೂರು: ಸಾಕು ನಾಯಿ ಬೊಗಳಿದ್ದಕ್ಕೆ ನಾಯಿಯ (Dog) ಮಾಲೀಕನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ದೇವನಹಳ್ಳಿಯ (Devanahalli) ದೊಡ್ಡಚೀಮನಹಳ್ಳಿಯಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ವ್ಯಕ್ತಿಯನ್ನು ಮಧುಕುಮಾರ್ (34) ಎಂದು ಗುರುತಿಸಲಾಗಿದೆ. ಚಾಕು ಇರಿತದ ರಭಸಕ್ಕೆ ಚಾಕುವಿನ ತುದಿ ಮುರಿದು ದೇಹದೊಳಗೆ ಉಳಿದುಕೊಂಡಿದೆ. ಆತನನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮನ್ನು ನೋಡಿ ನಿಮ್ಮ ನಾಯಿ ಬೊಗಳುತ್ತಿದೆ ಅದಕ್ಕೆ ಬುದ್ದಿ ಹೇಳಲು ಆಗಲ್ವಾ? ಎಂದು ಅದೇ ಗ್ರಾಮದ ಸುನೀಲ್, ಅನೀಲ್, ದೇವರಾಜ್ ಹಾಗೂ ಅಜಯ್ ಎಂಬವರು ಮಧುಕುಮಾರ್ ಬಳಿ ಗಲಾಟೆ ಆರಂಭಿಸಿದ್ದಾರೆ. ಬಳಿಕ ಗಲಾಟೆ ತಾರಕಕ್ಕೇರಿ ನಾಲ್ವರು ಸೇರಿ ಚಾಕುವಿನಿಂದ ಇರಿದಿದ್ದಾರೆ. ಅಲ್ಲದೇ ಆತನ ಪತ್ನಿ ಮಮತಾ ಮೇಲೂ ಹಲ್ಲೆ ನಡೆಸಿದ್ದಾರೆ. ಕೃತ್ಯದ ಬಳಿಕ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ವಿಶ್ವನಾಥಪುರ ಪೊಲೀಸ್ (Police) ಠಾಣೆಯಲ್ಲಿ ಐಪಿಸಿ ಸೆಕ್ಷನ್ 307ರ ಅಡಿ ಕೊಲೆ ಯತ್ನ, 504, 506ರ ಅಡಿ ಸಾರ್ವಜನಿಕ ಸ್ಥಳದಲ್ಲಿ ನಿಂದನೆ, 354,…
Author: AIN Author
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ (Customs Officers) ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಣಿಕೆ ಮಾಡುತ್ತಿದ್ದ ಪ್ರಯಾಣಿಕನ ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಕೆಂಪೇಗೌಡ ಏರ್ ಪೋರ್ಟ್‍ಗೆ (Bengaluru Aiport) ಆಗಮಿಸಿದ್ದ ಪ್ರಯಾಣಿಕನನ್ನು ಚೆಕ್ಕಿಂಗ್ ಮಾಡಿದ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ಅನುಮಾನ ಬಂದಿದೆ. ಹೀಗಾಗಿ ಆತನನ್ನು ತೀವ್ರ ತಪಾಸಣೆ ನಡೆಸಿದಾಗ ಪೇಸ್ಟ್ ರೂಪದಲ್ಲಿ ಚಿನ್ನವನ್ನ ಪ್ಯಾಂಟ್ ನ ಸೊಂಟದ ನಡುವೆ ಮರೆಮಾಚಿ ಸಾಗಾಟಕ್ಕೆ ಯತ್ನಿಸಿದ್ದು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರು: ಸೋಮವಾರ ರಾತ್ರಿ 11.30ರ ಸುಮಾರಿಗೆ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆಯೂ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದ್ದಾರೆ, ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ. ಬಾಂಬ್ ಬೆದರಿಕೆ ಕರೆಯ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಪತ್ತೆಗೆ ಮುಂದಾಗಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಕಮೀಷನರ್ ದಯಾನಂದ್ ಸುದ್ದಿಗೋಷ್ಠಿ ನಡೆಸಿ ನೆನ್ನೆ ರಾತ್ರಿ ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಫೋನ್ ಕರೆ ಬಂದಿತ್ತು. ನಮ್ಮ ಪೊಲೀಸರು ರಾಜಭವನದಲ್ಲಿ ಸಂಪೂರ್ಣವಾಗಿ ಪರಿಶೀಲನೆ ಮಾಡಿದ್ದಾರೆ.ಅಲ್ಲಿ ಆ ರೀತಿಯ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆಯಾಗಿದೆ ಎಂದಿದ್ದಾರೆ. ಹುಸಿ ಬಾಂಬ್ ಬೆದರಿಕೆ ಕರೆ ಮಾಡಿರೋ ವ್ಯಕ್ತಿಯ ಶೋಧ ನೆಡೆಯುತ್ತಿದೆ. ಆರೋಪಿಯನ್ನು ಆದಷ್ಟು ಬೇಗ ಅರೆಸ್ಟ್ ಮಾಡ್ತೀವಿ. ಎಂದು ನಗರ ಪೊಲೀಸ್ ಕಮೀಷನರ್ ಬಿ ದಯಾನಂದ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಗದಗ: ಗದಗ ನಗರದ 31 ನೇ ವಾರ್ಡ ನಿವಾಸಿಗಳಿಂದ ಶೌಚಾಲಯಕ್ಕೆ ಆಗ್ರಹಿಸಿ ಬಕೆಟ್, ಚಂಬು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿದರು. 1ನೇ ನಂಬರ್ ಶಾಲೆಯ ಹತ್ತಿರ ಇರುವ ಸಾರ್ವಜನಿಕ ಶೌಚಾಲಯ ದುರಸ್ಥಿಗೊಳಿಸುವಂತೆ ಆಗ್ರಹಿಸಿದ್ದಾರೆ. ವಾರ್ಡ ಮೇಂಬರ್ ಗೆ ಹೇಳಿದ್ರೂ ಕ್ಯಾರೆ ಅಂತಿಲ್ಲ, ಮಹಿಳೆಯರು ಮಕ್ಕಳಿಗೆ ತೊಂದರೆಯಾಗಿದೆ. ಕಲುಶಿತ ನೀರು ನಿಂತಿದ್ರಿಂದಾಗಿ ಸೊಳ್ಳೆಗಳ ಕಾಟ ಕೂಡ ಹೆಚ್ಚಾಗಿದೆ ಎಂದು ಅಳಲು ತೊಡಿಕೊಂಡಿದ್ದಾರೆ.
ಬೆಂಗಳೂರು: ಹೊಸ ವರ್ಷಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಅದಾಗಲೇ ಸಿಲಿಕಾನ್ ಸಿಟಿಯನ್ನು ನಶೆಯಲ್ಲಿ ತೇಲಿಸೋಕ್ಕೆ ಗ್ಯಾಂಗ್ ರೆಡಿಯಾಗಿತ್ತು. ಆದ್ರೆ ಪಕ್ಕಾ ಮಾಹಿತಿ ಕಲೆ ಹಾಕಿದ್ದ ಸಿಸಿಬಿ .ಹೊಸ ವರ್ಷಕ್ಕೆ ಡ್ರಗ್ಸ್ ಸರಬರಾಜಗೆ ಬ್ರೇಕ್ ಹಾಕಿದೆ. ಸಿಸಿಬಿ ಸಿಕ್ರೇಟ್ ಅಪರೇಷನ್ ಡಿಟೇಲ್ಸ್ ಇಲ್ಲಿದೆ ನೋಡಿ. ಪ್ರತಿವರ್ಷದಂತೆ ಈ ವರ್ಷವು ನಗರದಲ್ಲಿ ಡ್ರಗ್ಸ್ ಸರಬರಾಜು ಮತ್ತು ಮಾರಾಟ ಮಾಡುವವರ ಮೇಲೆ ಸಿಸಿಬಿ ನಿಗಾ ಇಟ್ಟಿದೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದ ತಂಡ ನಗರದಲ್ಲಿ ಹೊಸ ವರ್ಷಕ್ಕೆ ರೆಸ್ಟೋರೆಂಟ್ ಹೊಟೇಲ್ ಪಾರ್ಟಿ, ರೇವಾ ಪಾರ್ಟಿಗಳಿಗೆ ಸರಬರಾಜು ಮಾಡೋದಿಕ್ಕೆ ಇಟ್ಟಿದ್ದ 21 ಕೋಟಿ ಮೌಲ್ಯದ ಎಮ್ ಡಿ ಎಮ್ ಎ ಕಿಸ್ಟ್ರಲ್, ಹಾಗು 500 ಗ್ರಾಂ ಕೋಕೇನ್ ವಶಪಡಿಸಿಕೊಂಡಿದ್ದಾರೆ. ರಾಮಮೂರ್ತಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆಫ್ರಿಕಾ ಪ್ರಜೆ ಲಿಯೋನಾರ್ಡ್ ಒಕ್ವಿಡಿಲಿ ಎಂಬಾತ ಡ್ರಗ್ಸ್ ಸ್ಟಾಕ್ ಮಾಡಿಟ್ಟಿಕೊಂಡಿದ್ದ. ಸಿಸಿಬಿ ದಾಳಿ ನಡೆಸಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಬ್ಯೂಸಿನೆಸ್ ವೀಸಾದಲ್ಲಿ ನಗರಕ್ಕೆ…
ಬೆಂಗಳೂರು: ಸೋಮವಾರ ರಾತ್ರಿ 11.30ರ ಸುಮಾರಿಗೆ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆಯೂ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದ್ದಾರೆ, ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ. ಬಾಂಬ್ ಬೆದರಿಕೆ ಕರೆಯ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಪತ್ತೆಗೆ ಮುಂದಾಗಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿವೆ. ಸರಿಯಾಗಿ 12 ದಿವಸದ ಹಿಂದೆ ಡಿಸೆಂಬರ್ 1 ರಂದು ಬೆಂಗಳೂರಿನ 60ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದು ಶಾಲಾ ಆಡಳಿತ ಮಂಡಳಿಗೆ ಶಾಕ್ ನೀಡಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ತಂಡ ಎಲ್ಲ ಶಾಲೆಗಳನ್ನು ಪರಿಶೀಲಿಸಿದ್ದರು. ಆಗ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ತಿಳಿಯಿತು. ಇನ್ನು ವಿಷಯ ಗೊತ್ತಾಗುತ್ತಿದ್ದಂತೆ ಶಾಲೆಗಳಿಗೆ ತೆರಳಿದ ಪೋಷಕರು ಮಕ್ಕಳನ್ನು ಮನೆಗಳಿಗೆ ಕರೆದುಕೊಂಡು ಬಂದಿದ್ದರು. ಅಂದು ಒಂದು ದಿನ ಶಾಲೆಗಳಿಗೆ ರಜೆ ನೀಡಲಾಗಿತ್ತು.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಾವೇರಿ ನೀರು ಕಳ್ಳರಿಗೆ ಮತ್ತೊಂದು ಶಾಕ್ ಕಾದಿದ್ದು ಅಕ್ರಮ ನೀರಿನ ಸಂಪರ್ಕ ಪಡೆದ ಜನರ ಮೇಲೆ ಕಾನೂನು ಅಸ್ತ್ರ ಪ್ರಯೋಗಿಸಲು ಜಲಮಂಡಳಿ ರೆಡಿಯಾಗಿದೆ. ಇನ್ಮೇಲೆ ಅಕ್ರಮ ನೀರಿನ ಸಂಪರ್ಕ ಪಡೆದಿದ್ರೆ ದಂಡ ಅಲ್ಲಜೈಲು ಶಿಕ್ಷೆ ಕೂಡ ವಿಧಿಸಲಾಗುತ್ತೆ ಬೆಂಗಳೂರಿನಲ್ಲಿ ಅನಧಿಕೃತ ಕಾವೇರಿ ನೀರಿನ ಸಂಪರ್ಕ ಶಿಕ್ಷಾರ್ಹ ಅಪರಾಧ ಆದ್ರೂ ಕಾವೇರಿ ನೀರು ಕಳ್ಳತನ ಮಾಡ್ತಿರೋ ಸಿಲಿಕಾನ್ ಸಿಟಿ ಜನ ಕೇಸ್ ಹಾಕ್ತೀವಿ ಅಂದ್ರೂ ಅನಧಿಕೃತ ಸಂಪರ್ಕ ಪಡೆದಯುತ್ತಿದ್ದಾರೆ ಹೀಗಾಗಿ ಅನಧಿಕೃತ ಸಂಪರ್ಕ ಪಡೆದವರ ಮೇಲೆ ಕಾನೂನು ಕ್ರಮಕ್ಕೆ ಸನ್ನದ್ದ ಬೆಂಗಳೂರು ನಗರದಲ್ಲಿ ಸಾವಿರಾರು ಮಂದಿ ಅನಧಿಕೃತ ನೀರಿನ ಸಂಪರ್ಕ ಪಡೆದುಕೊಂಡಿದ್ದಾರೆ ರಾಜಧಾನಿಯಲ್ಲಿ ಶೇ 35 ರಷ್ಟು ನೀರು ಲೆಕ್ಕಕ್ಕೆ ಸಿಗ್ತಿಲ್ಲಅನಧಿಕೃತ ಸಂಪರ್ಕಗಳನ್ನ ಪತ್ತೆಗೆ ವಿಶೇಷ ತಂಡ ರಚನೆ ಇದ್ರೂ ಕೇವಲ ದಂಡಕ್ಕೆ ಮಾತ್ರ ಸೀಮಿತ ಇಷ್ಟು ದಿನ ಜಲಮಂಡಳಿ ಇಂಜಿನಿಯರ್ಸ್ ದಂಡ ಹಾಕಿ ಸೈಲೆಂಟ್ ಆಗ್ತಿದ್ರು ಇದೀಗ ಅನಧಿಕೃತ ನೀರಿನ ಸಂಪರ್ಕ ಪಡೆದವರ ಮೇಲೆ ಎಫ್ ಐಆರ್…
ಚಾಮರಾಜನಗರ: ಹುಲಿಗಳ ನಾಡು ಎಂದೇ ಖ್ಯಾತಿ ಪಡೆದಿರುವ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿಗೆ ಆದಿವಾಸಿ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಬಂಡೀಪುರ ಹುಲಿ ಸಂರಕ್ಚಿತ ಅರಣ್ಯ ಪ್ರದೇಶದ ಆಡಿನ ಕಣಿವೆ ಗ್ರಾಮದ ಬಸವಯ್ಯ ಎಂಬ (55) ವರ್ಷದ ವ್ಯಕ್ತಿ ಮೇಕೆಗಳಿಗೆ ಮೇವು ತರಲು ಬೆಳಿಗ್ಗೆ ಜಮೀನಿನ ಕಡೆಗೆ ಹೊಗಿದ್ದು ವಾಪಸ್ ಮನೆಗೆ ಬಂದಿರಲಿಲ್ಲಾ ಇದರಿಂದ. ಗಾಬರಿಯಾದ ಕುಟುಂಬದವರು ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದರು. ಈ ವೇಳೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕುಂದಕೆರೆ ಅರಣ್ಯ ವಲಯದ ವ್ಯಾಪ್ತಿಗೆ ಬರುವ ವೀರೇಶ್ವರ ಗುಡ್ಡ ಎಂಬ ಅರಣ್ಯದಲ್ಲಿ ಇಂದು ಬಸವಯ್ಯನ ಅರ್ದ ದೇಹ ಪತ್ತೆಯಾಗಿದ್ದು ಹುಲಿಯು ದಾಳಿ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳು ಮತ್ತು ಮನುಷ್ಯರ ನಡುವಿನ ಇಂತಹ ದಾಳಿಗಳು ಪದೇ ಪದೇ ನಡೆಯುತ್ತಿದೆ.ಕಳೆದ ಒಂದು ವಾರದ ಹಿಂದೆ ಓಂಕಾರ ಅರಣ್ಯವ್ಯಾಪ್ತಿಯ ನಾಗಣಾಪುರಗ್ರಾಮದ ಮಹಿಳೆಯ ಮೇಲಿನದಾಳಿಯನ್ನ ಸ್ಮರಿಸಬಹುದಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ…
ಬೆಂಗಳೂರು: ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ (Cycle) ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ (Ravikumar) ಪ್ರಶ್ನೆಗೆ ಅವರು ಉತ್ತರಿಸಿದರು. ಶಾಲಾ ಮಕ್ಕಳಿಗೆ ಯಾಕೆ ಸೈಕಲ್ ಕೊಡ್ತಿಲ್ಲ? ಬಿಜೆಪಿ ಸರ್ಕಾರ (BJP Government) ಸೈಕಲ್ ನಿಲ್ಲಿಸಿತ್ತು ಒಪ್ಪುತ್ತೇನೆ? ಅದಕ್ಕೆ ಜನ ನಮ್ಮನ್ನ ಇಲ್ಲಿಗೆ ಕೂರಿಸಿದ್ದಾರೆ. ಆದ್ರೆ ಈ ಸರ್ಕಾರಕ್ಕೆ ಸೈಕಲ್ ಕೊಡಲು ಹಣದ ಕೊರತೆ ಇದೆಯಾ? ಎಂದು ಪ್ರಶ್ನೆ ಮಾಡಿದರು. ಮಕ್ಕಳಿಗೆ ಶೂ, ಸಾಕ್ಸ್, ಸಮವಸ್ತ್ರಕ್ಕೆ 100 ರೂ. ಕೊಡ್ತಿದ್ದಾರೆ. ಖರ್ಚೀಫ್ ಗೆ ಕೊಡುವಷ್ಟು ಹಣ ಕೊಡ್ತಿದ್ದಾರೆ. ಇಷ್ಟು ಹಣ ಶೂ, ಸಾಕ್ಸ್, ಸಮವಸ್ತ್ರಕ್ಕೆ ಸಾಕಾಗುತ್ತದೆಯೇ? ಶೂ, ಸಾಕ್ಸ್ ಹಣ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, 2023-24ನೇ ಸಾಲಿನಲ್ಲಿ 55,43,828 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಲಾಗಿದೆ. 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಿಸಲಾಗಿದೆ. ವಿದ್ಯಾರ್ಥಿಗಳಿಗೆ…
ಕಲಬುರಗಿ: ಸತತ ನಾಲ್ಕು ಬಾರಿ ಮುಂದೂಡಿದ್ದ ಕಲಬುರಗಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಮತ್ತೆ ಫಿಕ್ಸ್ ಆಗಿದ್ದು ಇದೇ 20 ರಂದು ಡೇಟ್ ನಿಗದಿಯಾಗಿದೆ.. ಪದೇಪದೇ ಸಭೆ ಮುಂದೂಡಿದ್ದ ಹಿನ್ನಲೆ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿತ್ತು. ಹೀಗಾಗಿ ಇದೀಗ ಮತ್ತೆ ದಿನಾಂಕ ನಿಗದಿಯಾಗಿದೆ ಅನ್ನೋ ಮಾತುಗಳು ಕೇಳಿಬರ್ತಿವೆ. ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನೇತ್ರತ್ವದಲ್ಲಿ ಸಭೆ ನಡೆಯಲಿದ್ದು ಡಿಸಿ ಕಚೇರಿ ಸಭಾಂಗಣದಲ್ಲಿ ಅವತ್ತು ಬೆಳಿಗ್ಗೆ 10.30 ಕ್ಕೆ ಎಲ್ಲ ಅಧಿಕಾರಿಗಳು ಪೂರ್ಣ ಮಾಹಿತಿಯೊಂದಿಗೆ ಸಭೆಗೆ ಹಾಜರಿರಬೇಕು ಅಂತ ಜಿಲ್ಲಾಡಳಿತ ಸೂಚಿಸಿದೆ..