ವಿಜಯಪುರ: ತನ್ವೀರ್ ಪೀರಾ ಅವರು ಯಾವ ಉಗ್ರ ಸಂಘಟನೆಯೊಂದಿಗೂ ಸಂಬಂಧ ಹೊಂದಿಲ್ಲ. ಬೇಕಿದ್ದರೆ ಎನ್‍ಐಎ ತನಿಖೆಗೆ ಕೊಡಲಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ಎಂ.ಬಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಸುಳ್ಳುಗಾರ ಎಂದರು. ತನ್ವೀರ್ ಪೀರಾ ಅವರು ಯಾವ ಉಗ್ರ ಸಂಘಟನೆಯೊಂದಿಗೂ ಸಂಬಂಧ ಹೊಂದಿಲ್ಲ. ಬೇಕಿದ್ದರೆ ಎನ್‍ಐಎ ತನಿಖೆಗೆ ಕೊಡಲಿ. ಆರೋಪ ಸುಳ್ಳು ಎಂದು ಸಾಬೀತಾದರೆ ಏನು ಮಾಡ್ತಾರೆ? ಎಂಬುದನ್ನು ಅವರು ಹೇಳಲಿ. ನಾವು ಅವರಿಗೆ ದೇಶ ಬಿಟ್ಟು ಹೋಗಿ ಎಂದು ಹೇಳುವುದಿಲ್ಲ. ಈ ಬಗ್ಗೆ ಅವರು ಸ್ಪಷ್ಟನೆ ಕೊಡಲಿ ಎಂದು ಸವಾಲ್ ಹಾಕಿದ್ದಾರೆ. https://ainlivenews.com/allotment-of-charge-of-additional-portfolios-to-four-union-ministers-including-karandlaje/ ಮುಖ್ಯಮಂತ್ರಿ ಅವರನ್ನು ನಾನೇ ತನ್ವೀರ್ ಪೀರಾ ಅವರ ಮನೆಗೆ ಕರೆದುಕೊಂಡು ಹೋಗಿದ್ದೆ. ಅವರೊಂದಿಗೆ ನಮ್ಮ ಒಡನಾಟ ಮೊದಲಿನಿಂದಲೂ ಇದೆ. ಯತ್ನಾಳ್ ಹಾಗೂ ತನ್ವೀರ್ ಪೀರಾ ಕುಟುಂಬಸ್ಥರ ಉದ್ಯಮಗಳು ಇದ್ದವು. ಹೋಟೆಲ್ ಹಾಗೂ ಇನ್ನಿತರೆ ಉದ್ಯಮದಲ್ಲಿ ಇವರೊಟ್ಟಿಗೆ ಅನೇಕರು ಪಾಲುದಾರರಾಗಿದ್ದರು. ಯತ್ನಾಳ್…
Author: AIN Author
ದಾವಣಗೆರೆ: ಜಾರ್ಖಂಡ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಅವರ ಮನೆಯಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಭಂಧಿಸಿದಂತೆ ಹೊನ್ನಾಳಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ನಗರದ ಟಿ.ಬಿ.ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದ ವರೆಗೆ ಬೃಹತ್ ಪ್ರತಿಭಟನೆ ನಡೆಸಿದರು. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಧೀರಜ್ ಸಾಹು ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಧೀರಜ್ ಸಾಹು ಅವರನ್ನು ಬಂಧಿಸುವಂತೆ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ನಡೆಯಿತು. ಈ ಕಾರ್ಯಕ್ರಮಕ್ಕೆ ಸಂಸದ ಡಾ.ಉಮೇಶ್ ಜಾಧವ್ ಚಾಲನೆ ನೀಡಿದ್ರು.. ವಿಕಸಿತ ಭಾರತ್ ಸಂಕಲ್ಪ ಯಾತ್ರೆ ವಿವಿಧ ಸಾರ್ವಜನಿಕ ಕಲ್ಯಾಣ ಯೋಜನೆಗಳೊಂದಿಗೆ ಸಮಾಜದ ಕೊನೆಯ ವ್ಯಕ್ತಿಯನ್ನು ತಲುಪುವ ಗುರಿಯನ್ನು ಹೊಂದಿದ್ದು ಕೇಂದ್ರ ಸರ್ಕಾರದ ಪ್ರಮುಖ ಯೋಜನೆ ಇದಾಗಿದೆ. ಇಂತಹ ಯೋಜನೆಗಳ ಲಾಭವನ್ನು ಜನಸಾಮಾನ್ಯರಿಗೆ ತಲುಪಿಸಲು ಕೇಂದ್ರ ಸರ್ಕಾರವು ಅವಿರತವಾಗಿ ಶ್ರಮಿಸುತ್ತಿದೆ.ಇಂತಹ ಉದ್ದೇಶಕ್ಕಾಗಿ ರಾಷ್ಟ್ರವ್ಯಾಪಿ ಅಭಿಯಾನ, ವಿಕಸಿತ ಭಾರತ್ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಲಾಗಿದೆ.ಈ ಕಾರ್ಯಕ್ರಮದ ಬಗ್ಗೆ ತಿಳಿಸಿದ ಸಂಸದ ಡಾ.ಉಮೇಶ್ ಜಾಧವ್ ವಿವಿಧ ಸಾರ್ವಜನಿಕ ಕಲ್ಯಾಣ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು..
ಹಾವೇರಿ: ಇಂದಿನ ಕಾಲದಲ್ಲಿ ಮನುಷ್ಯ ಮನುಷ್ಯನಿಗೆ ರಕ್ತದಾನ ಮಾಡಲು ಹಿಂದೇಟು ಹಾಕುತ್ತಾನೆ ಆದರೆ ಇಲ್ಲೊಂದು ವಿಶೇಷವಾದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ಶ್ವಾನ ಶ್ವಾನಕ್ಕೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದೆ.ಹಾನಗಲ್ ತಾಲೂಕಿನ ಹುಲ್ಲತ್ತಿ ಗ್ರಾಮದ ನಿವಾಸಿ ನಾಗರಾಜ್ ಗೊಲ್ಲರ ಎಂಬುವರ ಶ್ವಾನವೊಂದು, Acute Leptospairosis ರೋಗದಿಂದ ಬಳಲುತ್ತಿತ್ತು. ಈ ಶ್ವಾನಕ್ಕೆ ರಕ್ತದಾನ ಮಾಡಿ ಸಿರಿ ಎಂಬ ಸಾಕು ನಾಯಿ ಎಲ್ಲರಿಂದ ಭೇಷ್ ಎನಿಸಿಕೊಂಡಿದೆ.ಬಮ್ಮನಹಳ್ಳಿ ಗ್ರಾಮದ ರಂಜಿತ್ ಎಂಬುವರಿಗೆ ಸೇರಿಸ ಸಿರಿ ಎಂಬ ಹೆಸರಿನ ಶ್ವಾನ ಅನಾರೋಗ್ಯದಿಂದ ಬಳಲುತ್ತಿದ್ದ ಶ್ವಾನಕ್ಕೆ ರಸ್ತದಾನ ಮಾಡಿದೆ. ಈ ಚಿಕಿತ್ಸೆಗೆ ಅಕ್ಕಿಆಲೂರನ ಹಿರಿಯ ಪಶುವೈದ್ಯಾಧಿಕಾರಿ ಡಾ ಅಮಿತ್ ಪುಠಾಣಿಕರ್ ಮತ್ತು ಪಶುವೈದ್ಯ ಡಾ ಸಂತೋಷ್ ಮಲಗುಂದ ಮತ್ತು ತಂಡದವರು ಚಿಕಿತ್ಸೆ ಮಾಡಲಾಗಿ. ರಕ್ತದಾನಕ್ಕೆ ಹೆಸರಾಗಿರುವ ಅಕ್ಕಿಆಲೂರು ಪಶು ಆಸ್ಪತ್ರೆ ಮತ್ತೊಂದು ವಿಶೇಷ ಮಾನವೀಯತೆ ಕೆಲಸಕ್ಕೆ ಸಾಕ್ಷಿಯಾಗಿದೆ.
ಹುಬ್ಬಳ್ಳಿ : ಭಾರತ ದೇಶ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ. ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿ ಭಾರತ ಸೇರ್ಪಡೆಯಾಗಲಿದೆ. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಕಲ್ಪ ಮಾಡಿದ್ದು, ಭಾರತ ಸಹ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ. 2047 ರೊಳಗೆ ಅಭಿವೃದ್ಧಿ ಹೊಂದಿದ ದೇಶವಾಗಿಸಲು ನಾನು ಕೂಡ ಬದ್ಧನಿದ್ದೇನೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದರು. ಇಂದು ವರೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆಯಬೇಕು. ಜನರಿಗೆ ಖಾಯಿಲೆಗಳು ಬಂದಾಗ ಚಿಕಿತ್ಸೆಗೆ ಹೆಚ್ಚು ಹಣ ಬೇಕಾಗುತ್ತದೆ. ಆಗ ಸರ್ಕಾರದ ಯೋಜನೆಗಳು ಸಹಾಯಕವಾಗಲಿವೆ. ಆಯುಷ್ಮಾನ್ ಭಾರತ ಯೋಜನೆಯಡಿ ಚಿಕಿತ್ಸೆ ಪಡೆಯಬಹುದು. ವ್ಯಾಪಾರ ಆರಂಭಿಸಲು ಮುದ್ರಾ ಯೋಜನೆಯಡಿ ಲೋನ್ ಪಡೆದುಕೊಳ್ಳಲು ಅವಕಾಶವಿದೆ. ರಾಸಾಯನಿಕ ಗೊಬ್ಬರ ಹಾಕಲಾರದೆ ಸಾವಯವ ಗೊಬ್ಬರ ಬಳಸಿ ಬೆಳೆಗಳನ್ನು ಬೆಳೆಯಬೇಕು. ಬ್ಯಾಂಕಿನಿಂದ ಆರ್ಥಿಕ ಸಹಾಯಧನ…
ನ್ಯಾ. ಎ ಜೆ ಸದಾಶಿವ ಆಯೋಗದ ಒಳ ಮೀಸಲಾತಿ ವರದಿಯನ್ನ ಬೆಳಗಾವಿ ಅಧಿವೇಶನದ ಎರಡು ಸದನಗಳಲ್ಲಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಸಂಘಟನೆಗಳ ಮಹಾ ಒಕ್ಕೂಟ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತು ತಪ್ಪಿದೆ ಎಂದು ಮಹಾ ಒಕ್ಕೂಟದ ಅಧ್ಯಕ್ಷ ಹೆಚ್. ಮಲ್ಲೇಶ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಎಚ್ .ಮಲ್ಲೇಶ್, ಹಿಂದೆ ಚುನಾವಣೆ ಪ್ರಚಾರದ ವೇಳೆ ಚಿತ್ರದುರ್ಗದಲ್ಲಿ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಹಾಗೂ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅಂಗೀಕಾರದ ಬಗ್ಗೆ ಪ್ರಣಾಳಿಕೆ ಯಲ್ಲಿ ಪ್ರಕಟಿಸಿದ್ದರು. ಅಲ್ಲದೆ, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೊದಲ ಅಧಿವೇಶನದಲ್ಲಿಯೇ ಜಾರಿ ಮಾಡುವ ಭರವಸೆಯನ್ನು ನೀಡಿದ್ದರು. ಆದರೆ, ಸಿದ್ದರಾಮಯ್ಯ ಆ ರೀತಿ ಮಾಡಿಲ್ಲ. ಈಗ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಜಾರಿ ಮಾಡಿರುವ ಭರವಸೆಯನ್ನ ನೀಡಿದ್ದು, ಅದರಂತೆ ಈ ಅಧಿವೇಶನದಲ್ಲಿ ಎರಡು ಸದನಗಳಲ್ಲಿ ಅಂಗೀಕರಿಸಿ…
ತಮ್ಮ ನೆಚ್ಚಿನ ತೋಟದಲ್ಲೇ ಮಣ್ಣಲ್ಲಿ ಮಣ್ಣಾಗಿ ಮಲಗಿದರು ಹಿರಿಯ ನಟಿ ಲೀಲಾವತಿ (Leelavathi). ನೆಲಮಂಗಲದ ಸೋಲದೇವನಹಳ್ಳಿ (Soladevanahalli) ಬಳಿ ಲೀಲಾವತಿ ಅವರ ಫಾರ್ಮ್ ಹೌಸ್ ಇದೆ. ಅದರ ಸಮೀಪದಲ್ಲೇ ತೋಟ ಕೂಡ ಇದೆ. ಅದೇ ತೋಟದಲ್ಲೇ ಹಿಂದೂ ಸಂಪ್ರದಾಯದಂತೆ ಲೀಲಾವತಿ ಅವರ ಅಂತ್ಯಕ್ರಿಯೆ ನಡೆಯಿತು. ಅಂತಿಮ ವಿಧಿ ವಿಧಾನ ಕಾರ್ಯವನ್ನು ಪುತ್ರ ವಿನೋದ್ ರಾಜ್ (Vinod Raj) ಹಾಗೂ ಮೊಮ್ಮಗ ಯುವರಾಜ್ ನೆರವೇರಿಸಿದರು. ಬೆಂಗಳೂರಿನಿಂದ ಪಾರ್ಥಿವ ಶರೀರ ಹೊತ್ತು ತಂದ ಅಂಬುಲೆನ್ಸ್ ಅನ್ನು ಅಲ್ಲಲ್ಲಿ ತಡೆದು, ಲೀಲಾವತಿ ಅವರ ಅಂತಿಮ ದರ್ಶನ ಪಡೆದರು ಅಭಿಮಾನಿಗಳು. ಅದರಲ್ಲೂ ಸೋಲದೇವನಹಳ್ಳಿ ಸುತ್ತಲಿನ ಅನೇಕ ಗ್ರಾಮಸ್ಥರು, ಮನವಿ ಮಾಡಿಕೊಂಡು ಅಂಬುಲೆನ್ಸ್ ನಿಲ್ಲಿಸುವಲ್ಲಿ ಯಶಸ್ವಿ ಆದರು. ತಮ್ಮ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆದರು. https://ainlivenews.com/allotment-of-charge-of-additional-portfolios-to-four-union-ministers-including-karandlaje/ ಬೆಂಗಳೂರಿನಿಂದ ತಂದೆ ಪಾರ್ಥಿವ ಶರೀರವನ್ನು ನವಿಲಿನಾಕೃತಿಯ ವಿಶೇಷ ಹೂವಿನ ಪಲ್ಲಕ್ಕಿಯಲ್ಲಿ ಕೂರಿಸಲಾಯಿತು. 200 ಮೀಟರ್ ಉದ್ದ ಪಾರ್ಥಿವ ಶರೀರದ ಮೆರವಣಿಗೆ ಕೂಡ ಮಾಡಲಾಯಿತು. ನಂತರ ಪೊಲೀಸ್ ಗೌರವ ಸಲ್ಲಿಸಲಾಯಿತು. ಅನೇಕ…
ಉಡುಪಿ: ಸ್ಯಾಂಡಲ್ ವುಡ್ ನ ಹಿರಿಯ ನಟಿ ಲೀಲಾವತಿ ಅಗಲಿದ್ದಾರೆ. ಬಣ್ಣದ ಲೋಕವೇ ಹಾಗೆ. ನಮ್ಮ ಜೀವನವೇ ಹಾಗೆ. ಲೀಲಾವತಿ ಕೊನೆಯ ದಿನದವರೆಗೂ ಕಷ್ಟದ ಜೀವನ ಸಾಗಿಸಿದರು. ದುಃಖದಲ್ಲಿ ಎಲ್ಲಾ ಅಪಮಾನಗಳನ್ನು ಸಹಿಸಿಕೊಂಡು ಜೀವಿಸಿದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೀಲಾವತಿ ದುಃಖವನ್ನು ನುಂಗಿ ಬದುಕಿದ ಕಲಾವಿದೆ. ಸಮಾಜಕ್ಕೆ ಏನಾದರೂ ಮಾಡಬೇಕೆಂದು ಬೆಂಗಳೂರಿನಿಂದ ದೂರ ಹೋಗಿ ನೆಲಮಂಗಲದಲ್ಲಿ ನೆಲೆಸಿದರು. ಸಮಾಜ ಸೇವೆಯ ಮೂಲಕ ಕೊನೆಯ ದಿನಗಳನ್ನು ಖುಷಿಯಾಗಿ ಕಳೆದರು. ಬಣ್ಣದ ಬದುಕು ಕಷ್ಟ. ಲೀಲಾವತಿಯವರ ಬದುಕು ಇನ್ನೂ ಕಷ್ಟ ಎಂದರು. https://ainlivenews.com/ta-sharavana-condoles-death-of-veteran-actress-leelavati/ ಲೀಲಾವತಿ ನಮ್ಮೂರಿನವರು. ನನಗೆ ಸಿಕ್ಕಾಗೆಲ್ಲ ತುಳುವಿನಲ್ಲೇ ಮಾತನಾಡುತ್ತಿದ್ದರು. ಬೆಂಗಳೂರಿನಲ್ಲಿ (Bengaluru) ನೆಲೆಸಿ ಚಲನಚಿತ್ರರಂಗಕ್ಕೆ ಅಪಾರ ಸೇವೆ ನೀಡಿದ್ದಾರೆ. ಸಮಾಜ ಸೇವೆ, ಪ್ರಾಣಿಗಳ ಸೇವೆಯ ಮೂಲಕ ಪೂರ್ಣವಾಗಿ ತೊಡಗಿಸಿಕೊಂಡಿದ್ದರು. ವಿನೋದ್ ರಾಜ್, ಕುಟುಂಬ ಬಂಧು ಬಳಗಕ್ಕೆ ನೋವು ಸಹಿಸುವ ಶಕ್ತಿ ಕೊಡಲಿ ಎಂದು ಸಂತಾಪ ಸೂಚಿಸಿದರು.
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಹಾಗೂ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಸಿ.ಕೆ.ನಾನು ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ತಿಳಿಸಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇಬ್ಬರು ನಾಯಕರ ಉಚ್ಛಾಟನೆ ನಿರ್ಧಾರವನ್ನು ಪ್ರಕಟಿಸಿದರು. ಪಕ್ಷದ ಹಿತಕ್ಕಾಗಿ ಅವರ ಸಮ್ಮುಖದಲ್ಲಿಯೇ ಕೈಗೊಂಡ ನಿರ್ಧಾರವನ್ನು ಅವರು ವಿರೋಧಿಸಿ, ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಅಪಪ್ರಚಾರ ನಡೆಸಿದರು. ಇದರಿಂದ ಪಕ್ಷದ ವರ್ಚಸ್ಸು, ಹಿತಕ್ಕೆ ಧಕ್ಕೆ ಆಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಕರೆದು ಉಚ್ಛಾಟನೆಯ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು. ಮಂಡ್ಯ ಜಿಲ್ಲೆಯ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಅವರು, ಇಬ್ರಾಹಿಂ ಅವರನ್ನು ಹಾಗೂ ಪಶ್ಚಿಮ ಬಂಗಾಳ ಜೆಡಿಎಸ್ ಘಟಕದ ಅಧ್ಯಕ್ಷ ಪುನೀತ್ ಕುಮಾರ ಸಿಂಗ್ ಅವರು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕೇರಳದ ಸಿ.ಕೆ.ನಾನು ಅವರನ್ನು…
ನವದೆಹಲಿ: ಕೇಂದ್ರ ಸಚಿವ ಸಂಪುಟಕ್ಕೆ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ರೇಣುಕಾ ಸಿಂಗ್ ಸಾರುತಾ ಅವರು ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಶೋಭಾ ಕರಂದ್ಲಾಜೆ (Shobha Karandlaje) ಸೇರಿ ನಾಲ್ವರು ಕೇಂದ್ರ ಸಚಿವರಿಗೆ ಹೆಚ್ಚುವರಿ ಖಾತೆಗಳ ಉಸ್ತುವಾರಿ ನೀಡಲಾಗಿದೆ. ಈಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಇವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರಿಗೆ ಈಗ ಇರುವ ಖಾತೆಯ ಜೊತೆಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. https://ainlivenews.com/night-time-sleep-bartilwa-then-follow-this/ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರೂ ಆಗಿರುವ ಶೋಭಾ ಕರಂದ್ಲಾಜೆ ಅವರಿಗೆ ಹೆಚ್ಚುವರಿಯಾಗಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವರ ಜವಾಬ್ದಾರಿಯನ್ನು ನೀಡಲಾಗಿದೆ. ರಾಜೀವ್ ಚಂದ್ರಶೇಖರ್ ಅವರು ತಮ್ಮ ಈಗಿರುವ ಖಾತೆ ಜೊತೆಗೆ ಹೆಚ್ಚುವರಿಯಾಗಿ ಜಲಶಕ್ತಿ ರಾಜ್ಯ ಸಚಿವರಾಗಿ ಕೆಲಸ ನಿರ್ವಹಿಸಲಿದ್ದಾರೆ.