Author: AIN Author

ವಾಷಿಂಗ್‍ಟನ್: ಅಮೆರಿಕದ Osprey ಮಿಲಿಟರಿ ವಿಮಾನವೊಂದು ಜಪಾನ್‍ನ (Japan) ಯಕುಶಿಮಾ ದ್ವೀಪದ ಬಳಿ ಪತನಗೊಂಡಿದ್ದು, ಅದರಲ್ಲಿದ್ದ 8 ಸೇನಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳಿಯ ಕಾಲಮಾನ ಮಧ್ಯಾಹ್ನ 02:47 ಗಂಟೆಗೆ ವಿಮಾನ ಯಕುಶಿಮಾ ದ್ವೀಪದಲ್ಲಿ ಪತನಗೊಂಡಿದೆ. ವಿಮಾನ ಕೆಳಗೆ ಬರುವಾಗ ಎಡ ಭಾಗದ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ವಿಮಾನವು ಪಶ್ಚಿಮ ಜಪಾನ್‍ನ ಸಮುದ್ರಕ್ಕೆ ಅಪ್ಪಳಿಸಿದೆ. https://ainlivenews.com/dont-organize-marriage-ceremonies-abroad-pm-modi/ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ ಎಂದು ಜಪಾನ್‍ನ ಕರಾವಳಿ ಕಾವಲು ಪಡೆ ಹೇಳಿದೆ. ವಿಮಾನ ಪತನಗೊಂಡ ಪ್ರದೇಶದಲ್ಲಿ ಅಮೆರಿಕದ (America) ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ವಿಮಾನ ಪತನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಆಗ‌ಸ್ಟ್‌ನಲ್ಲಿ ಉತ್ತರ ಆಸ್ಟ್ರೇಲಿಯಾದಲ್ಲಿ Osprey ವಿಮಾನ ಪತನಗೊಂಡಿತ್ತು. ಘಟನೆಯಲ್ಲಿ 32 ಮಂದಿ ಸಾವಿಗೀಡಾಗಿದ್ದರು.

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶ್ರೀ‌ಕಾಗಿನೆಲೆ ಮಹಾಸಂಸ್ಥಾನ ಕನಕ‌ಗುರುಪೀಠದಲ್ಲಿ 536ನೇ ಶ್ರೀ ಕನಕ ಜಯಂತ್ಯೋತ್ಸವವನ್ನು ಉದ್ಘಾಟಿಸಿದರು. ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರೇವಣಸಿದ್ದೇಶ್ವರ, ಶ್ರೀ ಬೀರಲಿಂಗೇಶ್ವರ, ಶ್ರೀ ಮೈಲಾರಲಿಂಗೇಶ್ವರ, ಶ್ರೀ ಮಹಾಸಿದ್ದೇಶ್ವರಿ ದೇವರುಗಳ ಕುಂಭಾಭಿಷೇಕ ನೆರವೇರಿಸಿದರು. ಹುಬ್ಬಳ್ಳಿ, ಮೂರುಸಾವಿರ ಮಠದ ಶ್ರೀಮನ್ ಮಹಾರಾಜ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು, ಹಜರತ್ ಬೀಜಾಪುರದ ಹಾಶಿಮ್ ಪೀರ್ ದರ್ಗಾದ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ, ಕರ್ನಾಟಕ ಧರ್ಮಪ್ರಾಂತ್ಯದ ಧರ್ಮಗುರು ಡಾ.ಫಾ.ಅಲ್ಫೋನ್ಸ್ ಫರ್ನಾಂಡೀಸ್ ಯೇಸ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ್, ಪ್ರಾಥಮಿಕ‌ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನಸಭೆಯ ಉಪಸಭಾಪತಿಗಳಾದ ರುದ್ರಪ್ಪ ಲಮಾಣಿ, ಮಾಜಿ ಸಚಿವರಾದ ಎಚ್ ವಿಶ್ವನಾಥ್ ,ಹೆಚ್.ಎಂ.ರೇವಣ್ಣ, ಬ್ಯಾಡಗಿ ಶಾಸಕರಾದ ಬಸವರಾಜ ಶಿವಣ್ಣನವರ್ ಹೊಸದುರ್ಗ ಶಾಸಕರಾದ ಬಿ.ಜಿ.ಗೋವಿಂದಪ್ಪ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ್, ರಾಣೆಬೆನ್ನೂರು ಶಾಸಕರಾದ ಪ್ರಕಾಶ್ ಕೋಳಿವಾಡ, ಹಾನಗಲ್ ಶಾಸಕರಾದ ಶ್ರೀನಿವಾಸ್ ಮಾನೆ ಸೇರಿ ಹಲವು…

Read More

ಉಚಿತ ಸಾಮೂಹಿಕ ವಿವಾಹಕ್ಕೆ ಸದಾಕಾಲ ದಾನಮ್ಮ ತಾಯಿ ಪ್ರೇರಣೆಯನ್ನು ನೀಡುತ್ತಾಳೆ. ಉಚಿತ ಬಡವರಿಗಾಗಿ ಸಾಮೂಹಿಕ ವಿವಾಹ ನಡೆದಿದ್ದು ಸಮಾಜದಲ್ಲಿ ಒಂದು ಉತ್ತಮ ಕೆಲಸ ಬಡವರಿಗೆ ಈ ಮದುವೆ ಸಾಕಿಯಾಗಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ ಎರಡು ಜೋಡಿ ಉಚಿತ ಸಾಮೂಹಿಕ ವಿವಾಹ ಗುರು ಹಿರಿಯರ ಸಾಕ್ಷಿಯೊಂದಿಗೆ ವಿವಾಹ ಕಾರ್ಯಕ್ರಮ ನಡೆಯಿತು. ವರ ದೈವ ಸಾಕ್ಷಿಯಾಗಿ ಹೆಂಡತಿಯನ್ನು ಗೌರವದಿಂದ ಕಾಣಬೇಕು. ವಧು ದೈವ ಸಾಕ್ಷಿಯಾಗಿ ಕೈಹಿಡಿದ ಗಂಡನನ್ನು ಗೌರವದಿಂದ ಕಾಣಿ ಕೊನೆಯದಾಗಿ ಮೋಕ್ಷ ಪಡೆದುಕೊಳ್ಳಬೇಕು ಎಂದು ಹೇಳಿದರು. ಮೋಕ್ಷ ಪಡೆಯುವ ಮುಂಚೆ ವಧು-ವರರು ಧರ್ಮದ ಹಾದಿಯಲ್ಲಿ ನಡಿಯಿರಿ ಧರ್ಮವನ್ನು ಗೌರವಿಸಿ ಧರ್ಮವನ್ನು ಅರಿತುಕೊಳ್ಳಿ ಧರ್ಮವನ್ನು ಗೌರವಿಸಿದರೆ ನಮ್ಮಣ್ಣ ಅದು ನಮ್ಮಣ್ಣ ಗೌರವಿಸುತ್ತದೆ. ಇಂದು ಉಚಿತವಾಗಿ ವಿವಾಹ ದಾಂಪತ್ಯಕ್ಕೆ ಕಾಲಿರುವ ನವದಂಪತಿಗಳಿಗಳು ನೀವು ಪುಣ್ಯವಂತರು ಹಣ ಖರ್ಚು ಮಾಡಿ ಮದುವೆ ಆದರೆ ಇಷ್ಟು ಸುಂದರ ಆಗಲಿಕ್ಕಿಲ್ಲ ಅಷ್ಟೊಂದು ಗುರು ಹಿರಿಯರ ಪೂಜ್ಯರ ಸಮ್ಮುಖದಲ್ಲಿ ಸಾಕ್ಷಿಯಾಗಿ ಇಂದು…

Read More

ಹಾವೇರಿ, ನವೆಂಬರ್ 29 : ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪಕ್ಷದ ವರಿಷ್ಠರಿಗೆ ಅಂತಿಮ ಪಟ್ಟಿ ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಅಧ್ಯಕ್ಷರ ನೇಮಕಾತಿಗೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದರು. 150 ದಿನಗಳ ಉದ್ಯೋಗ ನೀಡಲು ಕೇಂದ್ರವಿನ್ನೂ ಒಪ್ಪಿಗೆ ಸೂಚಿಸಿಲ್ಲ : ಬರಪರಿಹಾರದಲ್ಲಿ ರೈತರ ಪಾಲಿನ ಮೊತ್ತದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ 226…

Read More

ಬೆಂಗಳೂರು: ಶಕ್ತಿಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್​ ಸೇವೆಯನ್ನು ಮಹಿಳೆಯರು ದುರುಪಯೋಗ ಪಡಿಸಿಕೊಳ್ಳುತ್ತಿರು ಆರೋಪಗಳು ಕೇಳಿ ಬರುತ್ತಿದೆ. https://ainlivenews.com/i-have-done-nothing-wrong-there-are-people-there-is-god/ ಕಾಂಗ್ರೆಸ್​ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್​ಗಳಲ್ಲಿ ರಾಜ್ಯಾದ್ಯಂತ ಉಚಿತ ಸಾರಿಗೆ ಸೇವೆಯನ್ನು ಮಹಿಳಾ ಪ್ರಯಾಣಿಕರು ದುರುಪಯೋಗಪಡಿಸಿಕೊಳ್ಳುತ್ತಿದ್ದು ಕಂಡೆಕ್ಟರ್ ಗಳಿಗೆ ತಲೆನೋವಾಗಿ ಪರಿಣಮಿಸಿದೆ. ಉಚಿತ ಬಸ್​ ಸೇವೆಯ ಟಿಕೆಟ್ ಪಡೆಯುವಾಗ ಮಹಿಳಾ ಪ್ರಯಾಣಿಕರು ತಮ್ಮ ಆಧಾರ್​ ಕಾರ್ಡ್​ ಅಥವ ಇತರೇ ಗುರುತಿನ ಚೀಟಿಗಳನ್ನು ತೋರಿಸಿ ತಮಗೆ ಬೇಕಾದ ಸ್ಟಾಪ್​ ಗಳಿಗೆ ಟಿಕೆಟ್​ ಪಡೆಯುತ್ತಾರೆ. ಬಳಿಕ, ಮಾರ್ಗ ಮಧ್ಯದಲ್ಲೇ ಇಳಿದು ಹೋಗುತ್ತಿದ್ದಾರೆ, ಇಂಥ ಸಂದರ್ಭದಲ್ಲಿ ಟಿಕೆಟ್​ ಚೆಕಿಂಗ್ ಅಧಿಕಾರಿಗಳು ಬಂದಾಗ ಮಹಿಳಾ ಪ್ರಯಾಣಿಕರಿಗೆ ನೀಡಿದ ಟಿಕೆಟ್​ ನ ಲೆಕ್ಕದಲ್ಲಿ ವ್ಯತ್ಯಾಸಗಳು ಕಂಡುಬರುತ್ತಿದ್ದು, ಕಂಡೆಕ್ಟರ್​ಗಳು ತಮಗೆ ಇಷ್ಟಬಂದಂತೆ ಟಿಕೆಟ್​ ಗಳ  ಹರಿಯುತ್ತಿದ್ದಾರೆ ಇದರಿಂದ ಸರ್ಕಾರಕ್ಕೆ ನಷ್ಟವನ್ನು ಉಂಟುಮಾಡುತ್ತಿದ್ದಾರೆ ಎನ್ನುವ ಆರೋಪಗಳು ಕಂಡೆಕ್ಟರ್​ಗಳ ಹೊತ್ತುಗಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

Read More

ಬೆಂಗಳೂರು:“ಟೆಕ್ ಸಮ್ಮೇಳನದಲ್ಲಿ ಭಾಗವಹಿಸಿರುವ ಕಾರಣ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಬಗ್ಗೆ ನನಗೆ ಮಾಹಿತಿ ಇಲ್ಲ. ನ್ಯಾಯಾಲಯದ ವಿಚಾರದಲ್ಲಿ ವಕೀಲರಿಂದ ಸರಿಯಾದ ಮಾಹಿತಿ ಇಲ್ಲದೆ ಈ ವಿಚಾರವಾಗಿ ಮಾತನಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದಲ್ಲಿ ನಡೆದ ಟೆಕ್ ಸಮಿಟ್ ಕಾರ್ಯಕ್ರಮದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ನಿಮ್ಮ ವಿರುದ್ಧದ ಪ್ರಕರಣದಲ್ಲಿ ಹೈಕೋರ್ಟ್ ರಿಲೀಫ್ ನೀಡುವ ಆದೇಶ ನೀಡಿದೆ ಎಂದು ಮಾಧ್ಯಮಗಳು ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದರು. “ಈ ವಿಚಾರವಾಗಿ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಸದ್ಯಕ್ಕೆ ನಾನು ಟೆಕ್ ಸಮಿಟ್ ನಲ್ಲಿ ಭಾಗವಹಿಸಲು ಬಂದಿದ್ದೇನೆ. ನಮ್ಮ ಸಚಿವರಾದ ಪ್ರಿಯಾಂಕ್ ಖರ್ಗೆ  ಹಾಗೂ ಎಂ.ಬಿ ಪಾಟೀಲ್ ಅವರು ರಾಜ್ಯದಲ್ಲಿ ಬಂಡವಾಳ ಆಕರ್ಷಿಸಿ ರಾಜ್ಯದ ಯುವಕರಿಗೆ ಉದ್ಯೋಗ ಸೃಷ್ಟಿಸಲು, ರಾಜ್ಯವನ್ನು ಸಮೃದ್ಧಿಗೊಳಿಸಲು ಈ ಪ್ರಯತ್ನಕ್ಕೆ ಮುಂದಾಗಿದ್ದು, ಅವರಿಗೆ ಬೆಂಬಲವಾಗಿ ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ನಮ್ಮ ಸರ್ಕಾರ ನೂತನ ಬಿಟಿ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಇದರ ಬೆನ್ನಲ್ಲೆ ಈಗ ಪ್ರತಿ ತಿಂಗಳು ನಾಡ ದೇವತೆ  ಚಾಮುಂಡೇಶ್ವರಿಗೆ 2 ಸಾವಿರ ಮಾಡಲಾಗುತ್ತಿದ್ದು, 59 ತಿಂಗಳ ಒಟ್ಟು ಮೊತ್ತವನ್ನು ಸಂದಾನ ಮಾಡಿದ್ದಾರೆ. https://ainlivenews.com/rockline-venkatesh-theft-in-his-house-khatarnak-nepali-gang-arrested/ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು. ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9ರಂದು ಸಿದ್ದರಾಮಯ್ಯ  ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು…

Read More

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಸಾವನಪ್ಪಿದ್ದು, ಈ ಸಾವಿಗೆ ಬಿಜೆಪಿ ಶಾಸಕರೇ ಕಾರಣ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ  ಆರೋಪಿಸಿದರು. https://ainlivenews.com/fetal-killing-issue-in-the-state-what-is-the-warning-given-by-police-commissioner-b-dayanand/ ಈ ಕುರಿತು ಬೆಂಗಳೂರಿನಲ್ಲಿ ಮಾದ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಸಾವಿಗೆ ಹಿಂದಿನ ಬಿಜೆಪಿ ಸರ್ಕಾರದ ಶಾಸಕರು ಹಾಗೂ ಸರ್ಕಾರದ ಅಧಿಕಾರಿಗಳೇ ಕಾರಣ, ಮಾನಸಿಕ ಟಾರ್ಚರ್‌ನಿಂದ ಅಂಬಿಕಾಪತಿ ಅವರಿಗೆ ನೋವಾಗಿತ್ತು. ಇತ್ತೀಚೆಗೆ ಆದ ಕೆಲ ಘಟನೆಗಳಿಂದ ಬಹಳ ನೊಂದಿದ್ದರು ಎಂದರು. ಕಳೆದ ಸರ್ಕಾರದ ಸಚಿವರೊಬ್ಬರು ಹಾಗೂ ಈಗಿನ ಸರ್ಕಾರದ ಕೆಲ ಅಧಿಕಾರಿಗಳು ಇವರ ಸಾವಿಗೆ ಕಾರಣ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್​ ಸಿಡಿಸಿದ್ದಾರೆ.

Read More

ಬೆಂಗಳೂರು:ಮಂಡ್ಯದ ಆಲೆಮನೆಯಲ್ಲಿ ಮೂರು ತಿಂಗಳಲ್ಲಿ 245 ಭ್ರೂಣ ಹತ್ಯೆ ಮಾಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅ.15ರಂದು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಸದೇ ಹೋಗಿದ್ದಾರೆ.ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ. https://ainlivenews.com/rockline-venkatesh-theft-in-his-house-khatarnak-nepali-gang-arrested/ ಹೆಣ್ಣು ಮಗು ಎಂದು ಗೊತ್ತಾದರೇ ಹತ್ಯೆ ಮಾಡುತ್ತಿರುವುದು ಗೊತ್ತಾಗಿದೆ. ಇಲ್ಲಿಯವರೆಗೂ 9 ಜನರನ್ನು ಬಂದಿಸಿದ್ದು, ಇಬ್ಬರು ಡಾಕ್ಟರ್‌ಗಳು, ಮೂವರು ಲ್ಯಾಬ್ ಟೆಕ್ನಿಷಿಯನ್ ಮತ್ತು ಮಧ್ಯವರ್ತಿಗಳು ಸಿಕ್ಕಿದ್ದಾರೆ. ಇವರೆಲ್ಲರೂ ಕೂಡಾ ಮೈಸೂರು (Mysuru) ಮತ್ತು ಮಂಡ್ಯ ಮೂಲದವರಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ್ದು, ಆರೋಪಿಗಳೇ ಒಪ್ಪಿಕೊಂಡಂತೆ ಎರಡು ವರ್ಷಗಳಿಂದ ಭ್ರೂಣ ಹತ್ಯೆ ಮಾಡುತ್ತಿದ್ದಾರೆ. ಒಂದು ವರ್ಷಕ್ಕೆ ಕನಿಷ್ಠ 1,000 ಭ್ರೂಣ ಹತ್ಯೆ ಮಾಡುತ್ತಾರೆ. ಎರಡು ವರ್ಷಕ್ಕೆ 2,000 ಭ್ರೂಣ…

Read More

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ಮಾಪಕ ಹಾಗೂ ನಟ ರಾಕ್‌ಲೈನ್‌ ವೆಂಕಟೇಶ್‌ ಅವರ ಸಹೋದರನ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನ ಬಂಧಿಸಲಾಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಪ್ರಕರಣ ಭೇದಿಸಿದ್ದು, ಕಳ್ಳತನ ಮಾಡಿದ್ದ ನೇಪಾಳಿ ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ರಾಕ್‌ಲೈನ್‌ ವೆಂಕಟೇಶ್‌ ಅವರ ತಮ್ಮ ಭ್ರಮರೇಶ್ ಅವರು ಕುಟುಂಬ ಸಮೇತ ಕಳೆದ ತಿಂಗಳು ಯುರೋಪ್​ಗೆ ಪ್ರವಾಸ ಹೋಗಿದ್ದ ವೇಳೆ ಮನೆ ಕಳ್ಳತನವಾಗಿತ್ತು. ಈ ಸಂಬಂಧ ಇದೀಗ ಪೊಲೀಸರು, 7 ಆರೋಪಿಗಳ‌ ತಂಡವನ್ನು ಅರೆಸ್ಟ್ ಮಾಡಿದ್ದು, ಬಂಧಿತರಿಂದ ಸುಮಾರು ಮೂರು ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. https://ainlivenews.com/the-gang-was-selling-15-20-days-old-hookahs-what-is-the-role-of-whom/ ಇನ್ನು, ಈ ನೇಪಾಳಿ ಗ್ಯಾಂಗ್ ದರೋಡೆ ಮಾಡಲು ಬರೋಬ್ಬರಿ ಮೂರು ತಿಂಗಳುಗಳ ಕಾಲ ಸ್ಕೆಚ್​ ಹಾಕಿತ್ತು ಎಂದು ತಿಳಿದುಬಂದಿದೆ. ಭ್ರಮರೇಶ್ ಅವರ ನಿವಾಸದ ಪಕ್ಕದ ನಿರ್ಮಾಣ ಹಂತದ ಕಟ್ಟಡದಲ್ಲಿ ಕುಳಿತುಕೊಂಡು ಮನೆ ದರೋಡೆಗೆ ಪ್ಲ್ಯಾನ್ ಮಾಡಿದ್ದರು ಎನ್ನುವ ಸ್ಫೋಟಕ ಮಾಹಿತಿ ತನಿಖೆ ವೇಳೆ ಲಭ್ಯವಾಗಿದೆ.

Read More