ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಕಸಂದ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ನೆಲದಡಿ ಮೆಟ್ರೊ ನಿಲ್ದಾಣದಿಂದ ಬಾಷ್ ಕ್ಯಾಂಪಸ್‌ಗೆ ನೇರ ಸಂಪರ್ಕ ಒದಗಿಸಲು ಬಿಎಂಆರ್‌ಸಿಎಲ್ ಮತ್ತು ಬಾಷ್ ಸಂಸ್ಥೆ ಒಪ್ಪಂದ ಮಾಡಿಕೊಂಡಿವೆ ಎನ್ನಲಾಗಿದೆ. https://ainlivenews.com/millions-of-crores-of-fraud-to-businessman-chaitra-kundapura-confessed-before-cbi/ ಮೆಟ್ರೊ ನಿಲ್ದಾಣದಿಂದ ಬಾಷ್ ಆವರಣಕ್ಕೆ ನೇರ ಸಂಪರ್ಕ ಒದಗಿಸಲು ಒಪ್ಪಂದ ಮಾಡಿಕೊಂಡಿರುವುದರಿಂದ ಬಾಷ್ ಸಂಸ್ಥೆಯ 1,200ಕ್ಕೂ ಅಧಿಕ ಉದ್ಯೋಗಿಗಳಿಗೆ ರಸ್ತೆ ದಾಟುವ ಪ್ರಯಾಸ ತಪ್ಪಲಿದೆ. 30 ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ನೆಲದಡಿ ಸಂಪರ್ಕ (70 ಅಡಿ ಉದ್ದ) ಕಾಮಗಾರಿಯನ್ನು ಬಿಎಂಆರ್‌ಸಿಎಲ್ ನಿರ್ವಹಿಸಲಿದೆ. ಅದರ ಅಂದಾಜು ವೆಚ್ಚ ₹ 30 ಕೋಟಿಯನ್ನು ಬಾಷ್ ಭರಿಸಲಿದೆ. ಕಾಳೇನ ಅಗ್ರಹಾರದಿಂದ ನಾಗವಾರವರೆಗಿನ ರೀಚ್-6 ಮೆಟ್ರೊ ಮಾರ್ಗದಲ್ಲಿ ಇದು ಮೊದಲ ಒಪ್ಪಂದವಾಗಿದ್ದು, ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮತ್ತು ಬಾಷ್ ಸಂಸ್ಥೆಯ ಹಿರಿಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ಮಯ್ಯ ಒಪ್ಪಂದಕ್ಕೆ ಸಹಿ ಹಾಕಿದರು ಎಂದು ಹೇಳಲಾಗಿತ್ತಿದೆ.
Author: AIN Author
ಕನ್ನಡ ಕಿರುತೆರೆ ಲೋಕದಲ್ಲಿ ಜೀ ಕನ್ನಡ ಈಗಾಗ್ಲೇ ಹಲವು ವಿಭಿನ್ನ ಪ್ರಯತ್ನಗಳನ್ನಾ ಮಾಡುತ್ತಾ ಬಂದಿದೆ. ಕನ್ನಡದ ನಂಬರ್ 1 ಮನರಂಜನಾ ಚಾನೆಲ್ ಎಂಬ ಎಂಬ ಖ್ಯಾತಿಯನ್ನು ತನ್ನದಾಗಿಸಿಕೊಂಡಿದ್ದು, ಜೊತೆಗೆ ಜೀ5 ಒಟಿಟಿ ಮೂಲಕ ಒಳ್ಳೆ ಕಂಟೆಂಟ್ ಸಿನಿಮಾಗಳನ್ನು ಪ್ರಪಂಚದೆದುರು ತೆರೆದಿಡ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಭಿನ್ನ-ವಿಶೇಷ ಯೋಜನೆಗಳನ್ನು ಈ ಒಟಿಟಿ ಹಾಕಿಕೊಂಡಿದೆ. ಸದ್ಯ ಜೀ5 ಒಟಿಟಿಯಲ್ಲಿ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಧಮಾಕ ಎಬ್ಬಿಸ್ತಿದೆ. ಸಾಹಸ ಥ್ರಿಲ್ಲರ್ ಸಿನಿಮಾ ಘೋಸ್ಟ್ ಇದೇ ನವೆಂಬರ್ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಶಿವಣ್ಣನ ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಿಲ್ಲದೆ ಇರುವವರು ಜೀ5 ಒಟಿಟಿಯಲ್ಲಿ ಕಣ್ತುಂಬಿಕೊಳ್ಳಬಹುದು. ಈಗಾಗಲೇ ನೋಡಿರುವವರು ಇನ್ನೊಮ್ಮೆ ಒಟಿಟಿಯಲ್ಲೂ ನೋಡಬಹುದು. ಸಿನಿಮಾ ಜೀ5ನಲ್ಲಿ ರಿಲೀಸ್ ಆಗಿರುವುದಕ್ಕೆ ಅದ್ದೂರಿಯಾಗಿ ಪ್ರಚಾರ ಮಾಡಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ ಹತ್ತು ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರ್ಅನ್ನು ಜೀ5 ಬಿಡುಗಡೆ ಮಾಡಿದೆ. ಜಯನಗರದ ಎಂಇಎಸ್ ಗ್ರೌಂಡ್ ನಲ್ಲಿ ಘೋಸ್ಟ್ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ.…
ವಾರಂಗಲ್: ” ತೆಲಂಗಾಣದ ವಿಧಾನಸಭೆ ಚುನಾವಣೆಯಲ್ಲಿ ಜನರು ತಮ್ಮ ಅಗಾಧ ಬೆಂಬಲದ ಮೂಲಕ ಕಾಂಗ್ರೆಸ್ ಬಿರುಗಾಳಿಯನ್ನು ಎಬ್ಬಿಸಲಿದ್ದಾರೆ. ಬಿಆರ್‌ಎಸ್ ಹೀನಾಯವಾಗಿ ಸೋಲು ಕಾಣಲಿದೆ. ಬದಲಿಗೆ ಕಾಂಗ್ರೆಸ್ ತನ್ನ ಬದ್ಧತೆಯಾಗಿರುವ ಒಬಿಸಿ ಸಮುದಾಯದ ಮೀಸಲು ಪ್ರಮಾಣವನ್ನು ಪಂಚಾಯಿತಿಗಳಲ್ಲಿ ಶೇ 23 ನಿಂದ ಶೇ 42ಕ್ಕೆ ಏರಿಕೆ ಮಾಡಲಿದೆ,” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಅವರು ಶುಕ್ರವಾರ ತೆಲಂಗಾಣದ ಪಿನಾಪಾಕ, ನರಸಂಪೇಟ್‌ನಲ್ಲಿ ಚುನಾವಣಾ ಪ್ರಚಾರ ರಾಲಿಗಳನ್ನು ನಡೆಸಿದರು. ಪಂಚಾಯಿತಿ ಮಟ್ಟದಲ್ಲಿ ಮೀಸಲು ಪ್ರಮಾಣ ಹೆಚ್ಚಳದಿಂದ ತೆಲಂಗಾಣದಲ್ಲಿ 24 ಸಾವಿರ ಹೊಸ ಪಂಚಾಯಿತಿ ನಾಯಕರ ಉದಯವಾಗಲಿದೆ. ಮುಖ್ಯವಾಗಿ ಆದಿವಾಸಿಗರಿಗೆ, ದಲಿತರಿಗೆ ರಾಜಕೀಯದಲ್ಲಿ ಸ್ಥಾನಮಾನ ಸಿಗಲಿದೆ. ರಾಜ್ಯದ ಆಡಳಿತಕ್ಕೆ ಹೊಸ ದಿಕ್ಕು ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. https://ainlivenews.com/how-to-make-hotel-style-palak-paneer-antira-here-it-is/ ತೆಲಂಗಾಣ ರಚನೆಯಾದಾಗ ಹಿದುಳಿದ ವರ್ಗಗಳು, ದಲಿತರು ಮತ್ತು ಆದಿವಾಸಿಗಳು ರಾಜಕಾರಣದಲ್ಲಿ ಸ್ಥಾನ ಪಡೆಯಲಿದ್ದಾರೆ ಎನ್ನುವ ಆಶಯ ಕಾಂಗ್ರೆಸ್‌ಗೆ ಇತ್ತು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮೊದಲು ಮಾಡುವ ಕೆಲಸವೇ ಜಾತಿ ಗಣತಿ…
ಬೆಂಗಳೂರು: ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ವೇಳೆ ಚೈತ್ರಾ (Chaitra) ತಪ್ಪೊಪ್ಪಿಗೆ ನೀಡಿದ್ದಾರೆ. ಸಿಸಿಬಿ ಎದುರು ಚೈತ್ರಾ ನೀಡಿದ ಸ್ವ-ಇಚ್ಛಾ ಹೇಳಿಕೆ ಏನು..?, ವಿಷದ ಬಾಟಲಿ ನಾಟಕದ ಬಗ್ಗೆ ಚೈತ್ರಾ ಹೇಳಿದ್ದೇನು..?, ಯಾರ್ಯಾರನ್ನ ಬಳಸಿಕೊಂಡು ಎಲ್ಲೆಲ್ಲಿ ಹಣ ವಸೂಲಿಗೆ ನಿಂತಿದ್ರು..?, ಡೀಲ್ ಮಾಡೋದಕ್ಕೆ ಸಿಮ್ ಖರೀದಿ ಮಾಡಿಸಿಕೊಟ್ಟಿದ್ದು ಯಾರು ಎಂಬುದರ ಇಂಚಿಂಚು ಮಾಹಿತಿ ಇಲ್ಲಿದೆ. ತಪ್ಪೊಪ್ಪಿಗೆ ಪ್ರತಿಯಲ್ಲಿ ಏನಿದೆ..?: 2018ರಲ್ಲಿ ಅಭಿನವ ಹಾಲಶ್ರೀಯನ್ನು (Halashree) ಭೇಟಿ ಮಾಡಿದ್ದೆ. ನನಗೂ ಬಿಜೆಪಿಯ ಕೆಲ ನಾಯಕರು ಗೊತ್ತಿದ್ರಿಂದ ಅಭಿನವ ಹಾಲಶ್ರೀ ನನಗೆ ಒಂದು ಮಾತು ಹೇಳಿದ್ರು. ಈಗಾಗಲೇ 10 ಜನರ ಪೈಕಿ 6 ಜನರಿಗೆ ಟಿಕೆಟ್ ಕೊಡಿಸಿದ್ರು. ಇನ್ನು 4 ಜನರಿಗೆ ಟಿಕೆಟ್ ಕೊಡಿಸ್ತೀನಿ ಅಂತ ಹೇಳಲಾಗಿತ್ತು. ಬಿಜೆಪಿಯ ಟಿಕೆಟ್ (BJP Ticket) ಯಾರಿಗಾದ್ರೂ ಬೇಕು ಅಂದ್ರೆ ನನಗೆ ಹೇಳಿ ಟಿಕೆಟ್ ಕೊಡಿಸ್ತೀನಿ ಅಂದಿದ್ರು. https://ainlivenews.com/vivekanandas-name-appears-in-the-police-transfer-list/ 2022ರಲ್ಲಿ ಪ್ರಸಾದ್ ಬೈಂದೂರು (Prasad Baindoor) ಮೂಲಕ ನನಗೆ ಗೋವಿಂದ ಬಾಬು ಪೂಜಾರಿ (Govinda…
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಬಿಬಿಎಂಪಿ ಪಾಲಿಕೆ ಹೊಸ ಯೋಜನೆಯೊಂದನ್ನು ರೂಪಿಸಿದ್ದು, ನಗರದಲ್ಲಿ ಲಾಲ್‌ಬಾಗ್, ಕಬ್ಬನ್ ಪಾರ್ಕ್ ಮಾದರಿಯಲ್ಲಿ ಮತ್ತೊಂದು ಸಸ್ಯಕಾಶಿ ತಲೆ ಎತ್ತಲಿದೆ. https://ainlivenews.com/this-time-the-world-cup-is-here-team-india-will-win-if-it-wins/ ಗಾರ್ಡನ್ ಸಿಟಿಯಲ್ಲಿ ಸುಮಾರು 150 ಎಕರೆ ವಿಸ್ತೀರ್ಣದ ಸಸ್ಯತೋಟ (Plantation) ನಿರ್ಮಿಸಲು ಬಿಬಿಎಂಪಿ ಪ್ಲಾನ್ ಮಾಡಿದೆ. ಈಗಾಗಲೇ ಸಸ್ಯಕಾಶಿ ನಿರ್ಮಾಣಕ್ಕೆ ಅರಣ್ಯ ಇಲಾಖೆ (Forest Department) ಬ್ಲೂ ಪ್ರಿಂಟ್ (Blue Print) ರೆಡಿ ಮಾಡಿದೆ. ಬೆಂಗಳೂರಿನ ಹೊರಭಾಗದಲ್ಲಿ ಸಸ್ಯಕಾಶಿ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ. ಯಲಹಂಕ (Yelahanka) ಬಳಿ ಬಿಬಿಎಂಪಿ 150 ಎಕರೆ ಜಾಗ ಗುರುತಿಸಿದ್ದು, ವಿಭಿನ್ನ, ವಿಶಿಷ್ಟ ರೀತಿಯಲ್ಲಿ ಸಸ್ಯಕಾಶಿ ನಿರ್ಮಾಣವಾಗಲಿದೆ ಸಸ್ಯಕಾಶಿಯಲ್ಲಿ ವಿವಿಧ ಬಗ್ಗೆಯ ಮರಗಳು, ಔಷಧೀಯ ಅಂಶವುಳ್ಳ ಸಸಿಗಳನ್ನು ನೆಟ್ಟು ಬೆಳೆಸಲಾಗುತ್ತದೆ. ಲಾಲ್ ಬಾಗ್, ಕಬ್ಬನ್ ಪಾರ್ಕ್‌ಗಿಂತ ವಿನೂತನವಾಗಿ ಸಸ್ಯಕಾಶಿ ನಿರ್ಮಾಣವಾಗಲಿದೆ. ಈ ಕುರಿತು ಈಗಾಗಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಡಿಕೆ ಶಿವಕುಮಾರ್ ಅವರಿಂದ ಅನುಮತಿ ಸಿಕ್ಕ ಕೂಡಲೇ ಸಸ್ಯಕಾಶಿ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗುತ್ತದೆ
ನವದೆಹಲಿ: ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಮತ್ತು ನನ್ನ ನಡುವೆ ಯಾವುದೇ ಮನಸ್ತಾಪ ಇಲ್ಲ, ನಾನು ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಹಿನ್ನೆಲೆ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದು ಮಾಜಿ ಶಾಸಕ ಸಿ.ಟಿ ರವಿ (CT Ravi) ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಭವನದಲ್ಲಿ ಮಾತನಾಡಿದ ಅವರು, ನಾನು ಮಧ್ಯಪ್ರದೇಶಕ್ಕೆ ತೆರಳುವ ಮುನ್ನ ಬಿ.ವೈ ವಿಜಯೇಂದ್ರ ಜೊತೆಗೆ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಪಕ್ಷದ ವಿಚಾರದಲ್ಲಿ ಯಾರನ್ನೂ ಬಿಟ್ಟುಕೊಟ್ಟಿಲ್ಲ, ನನ್ನ ಪಕ್ಷ ನಿಷ್ಠೆಗೆ ಕಾಂಗ್ರೆಸ್ (Congress) ನಿಂದ ಸರ್ಟಿಫಿಕೇಟ್ ಬೇಕಿಲ್ಲ, ನನಗೆ ಅಸಮಾಧಾನ ಇಲ್ಲ. ಯಾರೇ ಅಧ್ಯಕ್ಷರಾದರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. https://ainlivenews.com/how-to-make-hotel-style-palak-paneer-antira-here-it-is/ ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರವಾಗಿ ಮಾತನಾಡಿ, ಪಕ್ಷದ ವೀಕ್ಷಕರರಾಗಿ ನಿರ್ಮಲಾ ಸೀತಾರಾಮನ್, ದುಷ್ಯಂತ್ ಕುಮಾರ್ ಹೋಗಿದ್ದಾರೆ. ಎಲ್ಲ ನಾಯಕರ ಅಭಿಪ್ರಾಯ ಪಡೆಯಲಿದ್ದಾರೆ. ಹಿಂದೆಯೂ ಅಭಿಪ್ರಾಯ ಪಡೆದು ನಿರ್ಣಯ ತೆಗೆದುಕೊಳ್ಳಲಿದ್ದಾರೆ ಆದಷ್ಟು ಬೇಗ ಆಯ್ಕೆಯಾಗಲಿ ಅನ್ನೊದು ಎಲ್ಲರ ಆಶಯ…
ಕನ್ನಡದ ಬ್ಯೂಟಿ ದೀಪಿಕಾ ಪಡುಕೋಣೆ (Deepika Padukone) ಸದ್ಯ ಬಾಲಿವುಡ್‌ನಲ್ಲಿ (Bollywood) ನಂಬರ್ ಒನ್ ನಟಿಯಾಗಿ ಮಿಂಚ್ತಿದ್ದಾರೆ. ಹೀಗಿರುವಾಗ ಭಾರತ ಬಿಟ್ಟು ವಿದೇಶದಲ್ಲಿ ಸೆಟಲ್ ಆಗಿ ಹಾಲಿವುಡ್‌ನಲ್ಲಿ ಮಿಂಚ್ತಿರುವ ಪ್ರಿಯಾಂಕಾ ಚೋಪ್ರಾಗೆ (Priyanka Chopra) ದೀಪಿಕಾ ಟಾಂಗ್ ಕೊಟ್ಟಿದ್ದಾರೆ. ಗೋಬ್ಲಲ್ ಸ್ಟಾರ್ ಆಗಲು ಭಾರತ ಬಿಟ್ಟು ಹೋಗಬೇಕು ಎಂದೇನೂ ಇಲ್ಲ ಅಂತ ಪ್ರಿಯಾಂಕಾಗೆ ದೀಪಿಕಾ ಮಾತಿನ ಚಾಟಿ ಬೀಸಿದ್ದಾರೆ. ಈ ಮೂಲಕ ಗ್ಲೋಬಲ್ ಸ್ಟಾರ್ ಎನಿಸಿಕೊಳ್ಳಲು ಭಾರತ ಬಿಟ್ಟು ಹೋದ ಪ್ರಿಯಾಂಕಾ ಚೋಪ್ರಾಗೆ ಟಾಂಗ್ ನೀಡಿದ್ದಾರೆ. ವಿಶ್ವಮಟ್ಟದಲ್ಲಿ ಗುರುತು ಮೂಡಿಸಲು ನಾನೇಕೆ ನನ್ನ ಲಗೇಜು ಎತ್ತಿಕೊಂಡು ದೇಶ ಬಿಟ್ಟು ಹೊರಡಬೇಕು. ನನಗೆ ಮಾಡೆಲಿಂಗ್ ಸಮಯದಲ್ಲೇ ಹಾಲಿವುಡ್‌ನಿಂದ ಆಫರ್ಸ್ ಬಂದಿತ್ತು ಎಂದು ನಟಿ ಹಳೆಯ ದಿನಗಳ ಬಗ್ಗೆ ಮಾತನಾಡಿದ್ದಾರೆ. ಕನ್ನಡದ ‘ಐಶ್ವರ್ಯ’ (Aishwarya) ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪರಿಚಿತರಾದ ದೀಪಿಕಾ ಪಡುಕೋಣೆ ಈಗ ಬಾಲಿವುಡ್ ಚಿತ್ರರಂಗವನ್ನ ಆಳುತ್ತಿದ್ದಾರೆ. ಪಠಾಣ್, ಜವಾನ್ ಸಕ್ಸಸ್ ನಂತರ ದೀಪಿಕಾಗೆ ಭರ್ಜರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ.
ವಿಭಿನ್ನ ಕಥೆಗಳ ಸಿನಿಮಾಗಳನ್ನು ನಿರ್ದೇಶಿಸಿ ಪ್ರಸಿದ್ದಿ ಪಡೆದಿರುವ ನಿರ್ದೇಶಕ ‘ಸಿದ್ದು ಪೂರ್ಣಚಂದ್ರ’ ಮತ್ತೊಂದು ಅಂತಹದ್ದೇ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರ ತಾರಿಣಿ (Tarini). ಪ್ರತಿಷ್ಟಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೊಂದಾದ (Chirotsava) “ರಾಜಸ್ಥಾನ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್” ಗೆ ಈ ಸಿನಿಮಾ ಆಯ್ಕೆಯಾಗಿದೆ. ಜನವರಿ ತಿಂಗಳಲ್ಲಿ ರಾಜಸ್ಥಾನದ ಜೈಪುರ್ ನಲ್ಲಿ ತಾರಿಣಿ ಚಿತ್ರ ಪ್ರದರ್ಶನವಿದೆ. ದೇಶದ ವಿವಿಧ ಭಾಗಗಳಿಂದ ಬರುವ ಚಿತ್ರ ಪ್ರೇಮಿಗಳು ಈ ಚಿತ್ರವನ್ನು ಕಣ್ತುಂಬಿಕೊಳ್ಳುವರು ಎಂದು ಚಿತ್ರದ ನಿರ್ದೇಶಕ ಸಿದ್ದು ಪೂರ್ಣಚಂದ್ರ (Siddu Poornchandra) ಮಾಹಿತಿ ನೀಡಿದ್ದಾರೆ. ಶ್ರೀ ಗಜನಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಸುರೇಶ್ ಕೋಟ್ಯಾನ್ ಚಿತ್ರಾಪು ಬಂಡವಾಳ ಹೂಡಿದ್ದಾರೆ. ಜೊತೆಗೆ ಒಂದು ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಗರ್ಭಿಣಿ ಮಹಿಳೆ ಕುರಿತಾದ ಕಥಾ ಸಾರಾಂಶ ಹೊಂದಿರುವ ತಾರಿಣಿ ಚಿತ್ರದಲ್ಲಿ ನಿಜವಾಗಿಯೂ ಪ್ರಗ್ನೆಂಟ್ ಆಗಿಯೇ ಮಮತಾ ರಾಹುತ್ ಅಭಿನಯಿಸಿದ್ದಾರೆ. ಆಗಷ್ಟೇ ಹುಟ್ಟಿದ ಮಮತಾ ರಾಹುತ್ (Mamata Rahut) ಅವರ ಮಗುವಿನ ದೃಶ್ಯಗಳೂ ‘ತಾರಿಣಿ’ ಚಿತ್ರದಲ್ಲಿರುವುದು ವಿಶೇಷ.
ಬಿಗ್ ಬಾಸ್ ಮನೆಯ (Bigg Boss House) ಚೆಂದದ ಜೋಡಿ ಅಂದರೆ ಸಂಗೀತಾ ಮತ್ತು ಕಾರ್ತಿಕ್. ಮನೆಯೊಳಗೂ ಮನೆಹೊರಗೂ ಈ ಜೋಡಿ ಸಖತ್ ಹೈಪ್ ಕ್ರಿಯೆಟ್ ಮಾಡಿದೆ. ಇದೀಗ ಬಿಗ್ ಮನೆಯಲ್ಲಿ ಸಂಗೀತಾಗೆ ರಕ್ತಪಿಪಾಸು ಎಂದು ಕಾರ್ತಿಕ್ ಕರೆದಿದ್ದಾರೆ. ನನ್ನ ರಕ್ತಹೀರಿಕೊಂಡು ಬಿಟ್ಟಿದ್ದಾರೆ ಎಂದು ಸಂಗೀತಾಗೆ ರೇಗಿಸಿದ್ದಾರೆ ಕಾರ್ತಿಕ್. ಸಂಗೀತಾ ಮತ್ತು ಕಾರ್ತಿಕ್ ಅದ್ಯಾವಾಗ ಜಗಳ ಮಾಡಿಕೊಳ್ಳುತ್ತಾರೆ. ಅದ್ಯಾವಾಗ ಒಂದಾಗುತ್ತಾರೆ. ಮನೆಯೊಳಗೆ ಇರುವವರಿಗೂ ಪ್ರೇಕ್ಷಕರಿಗೂ ಇಬ್ಬರಿಗೂ ಅಚ್ಚರಿ ಮೂಡಿಸಿದೆ. ಟಾಸ್ಕ್‌ವೊಂದರಲ್ಲಿ ಒಬ್ಬರನೊಬ್ಬರು ಸೇಫ್ ಮಾಡಿಲ್ಲ ಎಂಬ ವಿಚಾರಕ್ಕೆ ಕಾರ್ತಿಕ್- ಸಂಗೀತಾ (Sangeetha Sringeri) ಇಬ್ಬರೂ ಸೂರು ಕಿತ್ತು ಹೋಗುವ ಹಾಗೆ ಜಗಳವಾಡಿದ್ದಾರೆ. ಇದರ ನಡುವೆ ಗಾಳಿಯಲ್ಲಿ ಗುಂಡು ಎಂಬಂತೆ ಇಬ್ಬರೂ ಇನ್ ಡೈರೆಕ್ಟ್ ಆಗಿ ಮಾತನಾಡಲು ಶುರುಮಾಡಿದ್ದಾರೆ. ಕಾರ್ತಿಕ್ (Karthik Mahesh) ಅಡುಗೆ ಮನೆಯಲ್ಲಿ ತರಕಾರಿ ಕತ್ತರಿಸುವಾಗ ಕೈಗೆ ಕೊಂಚ ಚಾಕು ತಾಗಿ ಗೆರೆ ಬಿದ್ದಿದೆ. ಬ್ಯಾಂಡೇಜ್ ಬೇಕಾ ಅಂತ ನಮ್ರತಾ ಕೇಳುತ್ತಾರೆ. ಆಗ ರಕ್ತ ಬರುತ್ತಿಲ್ಲ, ರಕ್ತ ಹೀರಿಕೊಳ್ಳುವವರೆಲ್ಲಾ ಆಗಲೇ…
ಮೈಸೂರು: ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್ ವಿಚಾರ ಸಂಬಂಧ ಯತೀಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ. ಸಿಎಸ್ಆರ್ ಫಂಡ್ ಬಗ್ಗೆ ನಾನು ಅವತ್ತು ಮಾತನಾಡಿದ್ದು ಎಂದು ಮೈಸೂರಿನಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದ್ರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ. ವಿವೇಕಾನಂದ ಯಾರು ಅಂತಾ ನನಗೆ ಗೊತ್ತಿಲ್ಲ. https://ainlivenews.com/how-to-make-hotel-style-palak-paneer-antira-here-it-is/ ಇನ್ಸ್ಪೆಕ್ಟರ್ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ. ನಮ್ಮ ಕ್ಷೇತ್ರದಲ್ಲಿ ವಿವೇಕಾನಂದ ಅಂತಾ ಬಿಇಒ ಕೂಡ ಇದ್ದಾರೆ. ವಿಪಕ್ಷಗಳು ಹತಾಶರಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ. ಇವರು ಅಧಿಕಾರದಲ್ಲಿದ್ದರು, ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂಧೆಯನ್ನೇ ಮಾಡುತ್ತಿದ್ರಾ? ಭ್ರಷ್ಟಾಚಾರ, ದಂಧೆ ಆಗ್ತಿದೆ ಎಂದು ಸುಳ್ಳು ಆರೋಪ ಮಾಡಬಾರದು ಎಂದರು.