Author: AIN Author

ಬೆಂಗಳೂರು:- ಕುಮಾರಸ್ವಾಮಿ ಆರೋಪ ನಿಜವಾಗಿದ್ದರೆ ರಾಜೀನಾಮೆ ಕೊಡಲು ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ವರ್ಗಾವಣೆ ಅಥವಾ ಹಣದ ಬಗ್ಗೆಯಾಗಲಿ ಮಾತನಾಡಿಲ್ಲ ಎಂದರು. ಒಎಸ್‍ಡಿ ಮಹದೇವ್ ಅವರಿಗೆ ಅಕ್ರಮವಾಗಿ ಬಡ್ತಿ ನೀಡಿ ಇಟ್ಟುಕೊಳ್ಳಲಾಗಿದೆ ಎಂಬ ಬಗ್ಗೆ ಉತ್ತರಿಸಿ ಮಹದೇವ್ ಅವರು ನಮ್ಮೂರಿನವರೇ, ಉಪನೋಂದಣಾಧಿಕಾರಿಯಾಗಿದ್ದಾರೆ. ಅವರನ್ನು ನಮ್ಮ ಕಚೇರಿಗೆ ತೆಗೆದುಕೊಳ್ಳಲಾಗಿದೆ. ಅದರಲ್ಲಿ ತಪ್ಪೇನು ಎಂದರು. ವೀಡಿಯೋದಲ್ಲಿ ಹಣದ ಬಗ್ಗೆ ಮಾತನಾಡಿದ್ದಾರೆಯೇ? ಅಥವಾ ವರ್ಗಾವಣೆಯ ಬಗ್ಗೆ ಮಾತನಾಡಿದ್ದಾರೆಯೇ ಎಂದು ಪ್ರಶ್ನಿಸಿದರು. ಅದನ್ನು ವರ್ಗಾವಣೆಗೆ ತಳಕು ಹಾಕಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇಂದಿನವರೆಗೆ ಒಂದು ವರ್ಗಾವಣೆಗೆ ಹಣ ಪಡೆದಿದ್ದೇನೆ ಎಂದು ನಿರೂಪಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಪುನರುಚ್ಚರಿಸಿದರು. ಆಶ್ರಯ ಸಮಿತಿ ಅಧ್ಯಕ್ಷರು ಹಾಗೂ ಕೆಡಿಪಿ ಸದಸ್ಯರಾಗಿರುವ ಹಾಗೂ ಕ್ಷೇತ್ರವನ್ನು ನೋಡಿಕೊಳ್ಳುತ್ತಿರುವ ಯತೀಂದ್ರ ನನ್ನ ಬಳಿ ಮಾತನಾಡಿ ಸಿಎಸ್‍ಆರ್ ನಿಧಿಯ ಕುರಿತು ಪ್ರಶ್ನಿಸಿದಾಗ ಪಟ್ಟಿಯನ್ನು ಮಹದೇವಪ್ಪ ಅವರಿಗೆ ನೀಡಲಾಗಿದೆ ಎಂದು ತಿಳಿಸಿದೆ. ಕುಮಾರಸ್ವಾಮಿ…

Read More

ಬೆಂಗಳೂರು:- ವಿದ್ಯುತ್ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಗೆ ಬೆಸ್ಕಾಂ ಭಾರೀ ದಂಡ ವಿಧಿಸಿದೆ. ಇನ್ನು ಈ ಕುರಿತು ಬೆಸ್ಕಾಂ ಬೆಸ್ಕಾಂ ಜಾಗೃತಾ ದಳದ ಡಿವೈಎಸ್ ಪಿ ಅನುಷ ನೇತೃತ್ವದಲ್ಲಿ ವಿದ್ಯುತ್ ಬಳಕೆ ಕೌಂಟಿಂಗ್ ಮಾಡಿ, 10 ನಿಮಿಷಕ್ಕೆ​ ಎಷ್ಟು ವಿದ್ಯುತ್ ಬಳಕೆ ಆಗುತ್ತದೆ ಎನ್ನುವುದನ್ನು ಲೆಕ್ಕ ಮಾಡಿದ್ದರು. ಇದರಿಂದ ಎರಡು ದಿನ ಎಷ್ಟು ಬಳಕೆ ಆಗಿದೆ ಎಂಬುದರ ಲೆಕ್ಕ ತೆಗೆದು, ನ.14 ರಂದು ಅಧಿಕಾರಿಗಳು ರಿಪೋರ್ಟ್ ನೀಡಿದ್ದರು. ಇದೀಗ ಬೆಸ್ಕಾಂ ಇಲಾಖೆ ಬರೊಬ್ಬರಿ 68 ಸಾವಿರ ದಂಡ ವಿಧಿಸಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ವಿಚಾರ ಭಾರಿ ಸುದ್ದಿಯಾಗಿತ್ತು. ಅದೇ ರೀತಿ ಅವರ ನಿವಾಸದ ಮುಂಭಾಗ ಪೋಸ್ಟರ್‌ಗಳು ಕಾಣಿಸಿಕೊಂಡಿತ್ತು. ಬಳಿಕ ಪೋಸ್ಟರ್‌ಗಳನ್ನು ಪೊಲೀಸರು ತೆರವು ಮಾಡಿದ್ದರು. ಇದೀಗ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು…

Read More

ಬೆಂಗಳೂರು:- ಹುಡಿಗಿಯರನ್ನೇ ಟಾರ್ಗೆಟ್‌ ಮಾಡಿಕೊಂಡು, ನಿಮಗೆ ಸರ್ಕಾರಿ ನೌಕರಿ ಕೊಡಿಸುತ್ತೇನೆಂದು ಹೇಳಿ ಲಕ್ಷಾಂತರ ರೂ. ಹಣವನ್ನು ವಸೂಲಿ ಮಾಡುವ ಗ್ಯಾಂಗ್‌ ಬೆಂಗಳೂರಿನಲ್ಲಿ ಸಕ್ರಿಯವಾಗಿದೆ. ಗ್ರಾಮೀಣ ಭಾಗದಲ್ಲಿ ಕಾಲೇಜು ಹಂತದವರೆಗೆ ಓದಿಕೊಂಡು ಮನೆಯಲ್ಲಿರುವ ಬಡತನವನ್ನು ನೀಗಿಸಲು ಬೆಂಗಳೂರಿಗೆ ಬಂದು ಸಣ್ಣಪುಟ್ಟ ಕಂಪನಿಗಳು ಹಾಗೂ ಫ್ಯಾಕ್ಟರಿಗಳಲ್ಲಿ ಕೆಲಸಕ್ಕೆ ಸೇರಿಕೊಂಡು ಜೀವನ ನಡೆಸುವಂತಹ ಹುಡುಗಿಯರು ಹಾಗೂ ಹೆಣ್ಣು ಮಕ್ಕಳೇ ಹುಷಾರಾಗಿರಿ. ಕಾರಣ ನಿಮ್ಮಂತಹ ದುಡಿಮೆಗೆ ಬಂದ ಹೆಣ್ಣು ಮಕ್ಕಳನ್ನೇ ಟಾರ್ಗೆಟ್‌ ಮಾಡಿಕೊಂಡು ನಿಮಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಬಣ್ಣ ಬಣ್ಣದ ಮಾತನಾಡಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುವ ಹಾಗೂ ಕೆಲಸದ ಆಮಿಷವೊಡ್ಡಿ ಅನ್ಯ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳುವ ಗ್ಯಾಂಗ್‌ ಸಕ್ರಿಯವಾಗಿದೆ. ಹೀಗೆ, ಹಳ್ಳಿ ಹುಡುಗಿಯರಿಂದ ಲಕ್ಷಾಂತರ ರೂ. ಹಣವನ್ನು ಪಡೆದು ಬ್ಯಾಂಕಾಕ್‌ಗೆ ಹೋಗಿ ಮಜಾ ಉಡಾಯಿಸುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿಕಟ್ಟಿ ಜೈಲಿಗಟ್ಟಿದ್ದಾರೆ. ಬಣ್ಣ ಬಣ್ಣದ ಮಾತನಾಡಿ ಲಕ್ಷಾಂತರ ರೂ. ಹಣವನ್ನು ಪಡೆದು ಮೋಸ ಮಾಡಿ ತಾನು ಬ್ಯಾಂಕಾಕ್‌ಗೆ ಹೋಗಿ ಮಜಾ ಮಾಡುತ್ತಿದ್ದ ಆರೋಪಿ ಮೋಹನ್…

Read More

ಯುವ ಸಂಗೀತ ನಿರ್ದೇಶಕ ವಾಸುಕಿ ವೈಭವ್ (Vasuki Vaibhav) ಇಂದು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ವಾಸುಕಿ ಮದುವೆ ಆಗುತ್ತಿರುವ ಬೃಂದಾ (Brunda) ಯಾರು ಎನ್ನುವ ವಿಚಾರವನ್ನು ಈವರೆಗೂ ವಾಸುಕಿ ಯಾರ ಜೊತೆಯೂ ಹಂಚಿಕೊಂಡಿರಲಿಲ್ಲ. ಬೃಂದಾ ಕೂಡ ರಂಗಭೂಮಿ ಕಲಾವಿದರು. ಸಾಕಷ್ಟು ನಾಟಕಗಳಲ್ಲಿ ಅವರು ನಟಿಸಿದ್ದಾರೆ. ಸ್ವತಃ ವಾಸುಕಿ ಜೊತೆಯೇ ರಂಗಭೂಮಿಯಲ್ಲಿ ಕೆಲಸ ಮಾಡಿದ್ದಾರೆ. ಹಲವು ವರ್ಷಗಳಿಂದಲೂ ಈ ಜೋಡಿ ಪ್ರೀತಿಸುತ್ತಿದ್ದ ಎನ್ನುತ್ತವೆ ಮೂಲಗಳು. ವಾಸುಕಿ ಅವರ ಮದುವೆ ತೀರಾ ಸರಳವಾಗಿ ಇಂದು ನಡೆದಿದೆ. ನಟ ಸಿಹಿ ಕಹಿ ಸೇರಿದಂತೆ ಹಲವು ಕಲಾವಿದರು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಮದುವೆ ತೀರಾ ಖಾಸಗಿ ಆಗಿರಲಿ ಎಂದು ಅವರು ಮಾಧ್ಯಮಗಳಿಗೂ ಮದುವೆ ವಿಚಾರವನ್ನು ತಿಳಿಸಿರಲಿಲ್ಲ.

Read More

ಬೆಳಗಾವಿ: ವರ್ಗಾವಣೆ ಬಗ್ಗೆ ಸಿಎಂ ಪುತ್ರ ಯತೀಂದ್ರ ವಿಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಯಾವ ವಿಚಾರದ ಬಗ್ಗೆ ಅವರು ಮಾತನಾಡಿದ್ದಾರೋ ಗೊತ್ತಿಲ್ಲ. ಇದಕ್ಕೆ ಸ್ಪಷ್ಟೀಕರಣ ಕೊಡಬೇಕಾಗತ್ತೆ, ಯಾವ ಸಂದರ್ಭದಲ್ಲಿ ಮಾತನಾಡಿದ್ದು ಏನು ಅಂತ ಇದರಲ್ಲಿ ಎಷ್ಟು ರಿಯಾಲಿಟಿ ಇದೆ ನೋಡಬೇಕು. https://ainlivenews.com/joint_pain_suprem_ray_treatment_reiki/ ನಂತರ ಸಂಬಂಧ ಪಟ್ಟವರು ಸ್ವಷ್ಟನೆ ಕೊಡುತ್ತಾರೆ.  ಕುಮಾರಸ್ವಾಮಿಯವರ ಆರೋಪಕ್ಕೆ ನಾನು ಉತ್ತರ ಕೊಡಲು ಆಗಲ್ಲ. ಸಂಬಂಧ ಪಟ್ಟವರು ಅದಕ್ಕೆ ಸ್ಪಷ್ಟೀಕರಣ ಕೊಡಬೇಕಾಗುತ್ತದೆ. ಅದು ನನ್ನ ಇಲಾಖೆ ಅಲ್ಲ ನನಗೆ ಸಂಬಂಧಪಟ್ಟ ವಿಚಾರ ಇಲ್ಲ ಎಂದರು.

Read More

ಕಲಘಟಗಿ: ಗ್ರಾಮೀಣ ಭಾಗದಲ್ಲಿ ಸಹಕಾರಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ನವೆಂಬರ್ 17 ಕಲಘಟಗಿಯ ಹನ್ನೆರಡು ಎತ್ತಿನ ಮಠದ ಆವರಣದಲ್ಲಿ ಸಹಕಾರಿ ಸಪ್ತಾಹ ನಡೆಯಲಿದೆ ಎಂದು ರಾಜ್ಯ ಸಂಯುಕ್ತ ಸಹಕಾರಿ ಸಂಘಗಳ ಅಧ್ಯಕ್ಷರಾದ ಜಿ.ನಂಜನಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಸಚಿವ ಸಂತೋಷ್ ಲಾಡ್ ಅವರ ಪ್ರೋತ್ಸಾಹದಿಂದ ಈ ಕಾರ್ಯಕ್ರಮ ಕಲಘಟಗಿಯಲ್ಲಿ ಆಯೋಜನೆಗೊಂಡಿದೆ ಎಂದು ಕೆಸಿಸಿ ಬ್ಯಾಂಕಿನ ನಿರ್ದೇಶಕರಾದ ಮಂಜುನಾಥ್ ಮುರಳ್ಳಿ  ತಿಳಿಸಿದರು. https://ainlivenews.com/joint_pain_suprem_ray_treatment_reiki/ ಸಹಕಾರ ಸಚಿವರಾಗಿರುವ ಕೆ. ರಾಜಣ್ಣನವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದೂ ಕೇಂದ್ರ ಸಚಿವರಾಗಿರುವ ಪ್ರಹ್ಲಾದ ಜೋಷಿ, ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಬೆಳಗಾವಿ ವಲಯದ ಜಂಟಿ ನಿಬಂಧಕರಾದ ಸುರೇಶ್ ಗೌಡ ಪಾಟೀಲ್, ಸಹಕಾರಿ ಕ್ಷೇತ್ರಗಳ ನಿರ್ದೇಶಕರಾದ ಮಲ್ಲಿಕಾರ್ಜುನ ಹೊರಕೇರಿ, ಕೆಸಿಸಿ ಬ್ಯಾಂಕಿನ ಮುಖ್ಯಾಧಿಕಾರಿ ಕೆ.ಮುನಿಯಪ್ಪ ಮತ್ತು ಸಚಿವ ಸಂತೋಷ್ ಲಾಡ್ ಅವರ ಆಪ್ತ ಸಹಾಯಕರಾದ ಸೋಮಶೇಖರ್ ಬೆನ್ನುರ್, ಹರಿಶಂಕರ್ ಮಠದ್, ಹಾಗೂ ಬಾಳು ಖಾನಾಪುರ ಉಪಸ್ಥಿತರಿದ್ದರು.  ವರದಿ, ಮಾರುತಿ ಲಮಾಣಿ

Read More

ಜೈಪುರ: ರಾಜಸ್ಥಾನ (Rajasthan) ವಿಧಾನಸಭಾ ಚುನಾವಣೆಗೆ (Assembly Elections) ಬಿಜೆಪಿ (BJP) ಗುರುವಾರ ತನ್ನ ಪ್ರಣಾಳಿಕೆಯನ್ನು (Manifesto) ಬಿಡುಗಡೆ ಮಾಡಿದ್ದು, ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಎಲ್‌ಪಿಜಿ (LPG) ಸಿಲಿಂಡರ್‌ಗೆ 450 ರೂ. ಸಬ್ಸಿಡಿ ಮತ್ತು 2.5 ಲಕ್ಷ ಸರ್ಕಾರಿ ಉದ್ಯೋಗಗಳ ಭರವಸೆ ನೀಡಿದೆ. ‘ಸಂಕಲ್ಪ ಪತ್ರ’ ಬಿಡುಗಡೆ ಮಾಡಿದ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ (JP Nadda), ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ (Congress) ಸರ್ಕಾರದ ಕಾಗದ ಸೋರಿಕೆ ಮತ್ತು ಇತರ ಆರೋಪಗಳ ಹಗರಣಗಳ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು ಎಂದು ಹೇಳಿದರು. ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಘೋಷಿಸಿದ ಅವರು, https://ainlivenews.com/joint_pain_suprem_ray_treatment_reiki/ ಪ್ರತಿ ಜಿಲ್ಲೆಯಲ್ಲಿ ‘ಮಹಿಳಾ ಠಾಣೆ’ ಮತ್ತು ಪ್ರತಿ ಪೊಲೀಸ್ ಠಾಣೆಯಲ್ಲಿ ‘ಮಹಿಳಾ ಡೆಸ್ಕ್’ ಮತ್ತು ಪ್ರತಿ ನಗರದಲ್ಲಿ ‘ಆ್ಯಂಟಿ ರೋಮಿಯೋ ಸ್ಕ್ವಾಡ್’ ಅನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು. ಹೆಣ್ಣುಮಗು ಜನಿಸಿದಾಗ 2 ಲಕ್ಷ ರೂ. ಉಳಿತಾಯ ಬಾಂಡ್ ಮತ್ತು ಭೂಮಿ ಹರಾಜಾದ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪೂರ್ವ, ಪಶ್ಚಿಮ, ಯಲಹಂಕ ಹಾಗೂ ದಕ್ಷಿಣ ವಲಯ ವ್ಯಾಪ್ತಿಯಲ್ಲಿಯ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಇಂದು ನಡೆಸಲಾಯಿತು. ಪೂರ್ವ ವಲಯ: ಪೂರ್ವ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತ ಓ.ಎಫ್.ಸಿ. ಕೇಬಲ್‌ಗಳ ತೆರವು ಕಾರ್ಯಾಚರಣೆಯನ್ನು 6 ವಿಧಾನ ಸಭಾ ಕ್ಷೇತ್ರಗಳಾದ ಶಾಂತಿನಗರ, ಶಿವಾಜಿನಗರ, ಸಿ.ವಿ.ರಾಮನ್‌ನಗರ, ಪುಲಿಕೇಶಿನಗರ, ಸರ್ವಜ್ಞನಗರ ಮತ್ತು ಹೆಬ್ಬಾಳ ವ್ಯಾಪ್ತಿಯಲ್ಲಿ ನಡೆಸಲಾಗಿದೆ. ಪಾದಚಾರಿ ಮಾರ್ಗದಲ್ಲಿ ಒತ್ತುವರಿಯಾಗಿರುವ ಅಂಗಡಿ ಮಳಿಗೆಗಳ ಮೇಲ್ಚಾವಣಿ, ತಳ್ಳುವ ಗಾಡಿ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಓ.ಎಫ್.ಸಿ. ಕೇಬಲ್‌ಗಳ ತೆರವು ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ. ಅದರಂತೆ, ಪೂರ್ವ ವಲಯ ವ್ಯಾಪ್ತಿಯಲ್ಲಿ 6 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಚಾರಿ ಮಾರ್ಗ ಹಾಗೂ ಒ.ಎಫ್.ಸಿ ಕೇಬಲ್ ತೆರವುಕಾರ್ಯಾಚರಣೆ ನಡೆಸಲಾಗಿದ್ದು, ಈ ಪೈಕಿ 13 ಕಿ.ಮೀ ವ್ಯಾಪ್ತಿಯ ರಸ್ತೆಯಲ್ಲಿ 104 ತಳ್ಳುವ ಗಾಡಿ ಜಪ್ತಿ ಮಾಡಲಾಗಿದೆ. 54 ಪಾದಚಾರಿ ಮಾರ್ಗಕ್ಕೆ ಚಾಚಿಕೊಂಡ ಅಂಗಡಿ ಮುಂಗಟ್ಟುಗಳ ಮೇಲ್ಚಾವಣಿ, 19 ಅನಧಿಕೃತ ನಾಮಫಲಕಗಳು, 7000 ಮೀಟರ್ ಅನಧಿಕೃತ ಒ.ಎಫ್.ಸಿ ಕೇಬಲ್‌ಗಳು ಹಾಗೂ 5…

Read More

ಬೆಂಗಳೂರು: ಯತೀಂದ್ರ ಬೆಳವಣಿಗೆ ಇವತ್ತಿಂದಲ್ಲ ಸರ್ಕಾರ ಬಂದಾಗಿಲಿನಿಂದ ಸಿಎಂ ಅಧಿಕಾರವನ್ನು ಯತೀಂದ್ರ ಚಲಾಯಿಸುತ್ತಿರುವುದು ಜಗಜ್ಜಾಹೀರಾಗಿದೆ ಎಂದು ಬಿಜೆಪಿ ಶಾಸಕ ಆರ್​.ಅಶೋಕ್ ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೋ ವೈರಲ್ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು,  ಈಗ ಬಂದಿರುವ ವೀಡಿಯೋ 10ನೇಯದ್ದೋ 15ನೇಯದ್ದೋ ಇರಬೇಕು. ಕಾಂಗ್ರೆಸ್ ಅಂದರೆ ಈ ರೀತಿ ದಂಧೆ ಮಾಡುವುದರಲ್ಲಿ ಎಕ್ಸ್​​ಪರ್ಟ್​. ವೀಡಿಯೋ ಬಗ್ಗೆ ತನಿಖೆಯಾಗಬೇಕು ಎಂದರು. ಏನು ಆದೇಶ ಮಾಡುತ್ತಾರೋ ಅದನ್ನು 100% ಫಾಲೋ ಮಾಡಲ್ಲ. ವರ್ಗಾವಣೆ ಮಾಡಬಾರದು ಅಂತಾ ಆದೇಶ ಮಾಡುತ್ತಾರೆ, ಆದರೆ ಸಾವಿರಾರು ವರ್ಗಾವಣೆ ಮಾಡಿದ್ದಾರೆ. ದಿನನಿತ್ಯ ಇದೇ ದಂಧೆ ಆಗಿಬಿಟ್ಟಿದೆ ಈ ಕೂಡಲೇ ಸಿಎಂ ರಾಜೀನಾಮೆ ಕೊಡಬೇಕು ಎಂದು ಕಿಡಿಕಾರಿದ್ದಾರೆ.

Read More

ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸಂಬಂಧಿಸಿ ಕೆಎಸ್‌ಆರ್‌ಟಿಸಿ ವತಿಯಿಂದ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಮಹಿಳೆಯರು ಕೆಎಸ್​ಆರ್​ಟಿಸಿ ಬಸ್​ ನಲ್ಲಿ ಪ್ರಯಾಣಿಸುವಾಗ ಇನ್ಮುಂದೆ ಮೊಬೈಲ್‌ನಲ್ಲಿ ಆಧಾರ್‌ ಕಾರ್ಡ್‌ ತೋರಿಸಿ ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ತಿಳಿಸಿದೆ. ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲ, ನಕಲು, ಡಿಜಿ ಲಾಕರ್ ಪ್ರತಿ ತೋರಿಸಿ ಪ್ರಯಾಣ ಮಾಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಮಹಿಳಾ ಪ್ರಯಾಣಿಕರು ಮೊಬೈಲ್‌ನಲ್ಲಿ ಅಧಿಕೃತ ಗುರುತಿನ ಚೀಟಿ ತೋರಿಸಿದಾದಾಗಲೂ ಮೊಬೈಲ್‌ನಲ್ಲಿನ ಗುರುತಿನ ಚೀಟಿಯನ್ನು ಮಾನ್ಯ ಮಾಡುವುದಿಲ್ಲ ಎಂದು ಕೆಲವು ನಿರ್ವಾಹಕರು ಅನವಶ್ಯಕವಾಗಿ ಮಹಿಳೆಯರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕೆಎಸ್‌ಆರ್‌ಟಿಸಿ ಸ್ಪಷ್ಟನೆ ನೀಡಿದೆ.

Read More