ಬೆಂಗಳೂರು: ಸಿಎಂ ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮಾಜಿ ಶಾಸಕರಾದ ಮಂಜುನಾಥ್, ಗೌರಿ ಶಂಕರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬೆಂಬಲಿಗರ ಜೊತೆ ಮಂಜುನಾಥ್, ಗೌರಿಶಂಕರ್ ಕಾಂಗ್ರೆಸ್ ಸೇರಿದರು. ಗೌರಿಶಂಕರ್ ಸೇರ್ಪಡೆ ಕಾರ್ಯಕ್ರಮಕ್ಕೆ ತುಮಕೂರು ನಾಯಕರೇ ಗೈರಾಗಿದ್ದಾರೆ https://ainlivenews.com/joint_pain_suprem_ray_treatment_reiki/ ಸಿದ್ದರಾಮಯ್ಯ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದ ಮಾಜಿ ಶಾಸಕರಾದ ಗೌರಿ ಶಂಕರ್ ಮತ್ತು ಮಂಜುನಾಥ್ 2018ರಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಸಾದ್ ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಜಿ ಶಾಸಕ ಗೌರಿ ಶಂಕರ್ ಜೊತೆಗೆ ನೂರಕ್ಕೂ ಹೆಚ್ಚು ಮಂದಿ ಮುಖಂಡರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ ಜೆಡಿಎಸ್ ವಕ್ತಾರ ಚರಣ್ ಗೌಡ ಸೇರಿದಂತೆ ದಾಸರಹಳ್ಳಿಯ 100ಕ್ಕೂ ಹೆಚ್ಚು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಡಿ.ಸಿ. ಗೌರಿಶಂಕರ್ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ಪ್ರಧಾನ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ.…
Author: AIN Author
ರಾಮನಗರ: ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಇಂದು ಕನಕಪುರ ತಾಲ್ಲೂಕು ಹುಕುಂದ ಗ್ರಾಮದಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಮರು ಭೂ ಮಾಪನ ಕಾರ್ಯವನ್ನು ಪರಿಶೀಲನೆ ನಡೆಸಿದರು. ಸಂಸದ ಡಿಕೆ ಸುರೇಶ್ ಶಾಸಕ ಎಸ್ ರವಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು.
ರಾಯಚೂರು: ರಾಯಚೂರು ತಾಲೂಕಿನ ಗೋನಾಳ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ರೈತರ ಹೊಲಗಳಿಗೆ ಭೇಟಿ ನೀಡಿ ಬರಗಾಲ ಬೆಳೆ ಸಮೀಕ್ಷೆ ನಡೆಸಿದರು. ರಾಯಚೂರು ತಾಲ್ಲೂಕು ಸೇರಿದಂತೆ ಜಿಲ್ಲೆಯ ಬೆಳೆ ನಾಶದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ರೈತರ ಹೊಲದಲ್ಲಿ ರೈತರೊಂದಿಗೆ ಸಂವಾದ ನಡೆಸಿದರು. ಇನ್ನೂ ಹತ್ತಿ, ತೊಗೆರಿ ಮತ್ತು ಜೋಳ ಬೆಳೆ ವೀಕ್ಷಣೆ ಮಾಡಿದ ಸಚಿವರು.. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಪಟ್ಟಾಭಿಷೇಕ ಹಿನ್ನೆಲೆ ಅದರ ಬಗ್ಗೆ ಪ್ರತಿಕ್ತಿಯೇ ನೀಡಿದರು. ಅದನ್ನ ತಗೊಂಡು ಏನ್ ಮಾಡೋದು, ಯಾವ ವಿಜೇಂದ್ರ ನನಗೆ ಗೊತ್ತಿಲ್ಲ. ನಾನು ಬರ ವೀಕ್ಷಣೆ ಮಾಡೋದಿಕ್ಕೆ ಬಂದಿದ್ದೇನೆ. ಆದ್ದರಿಂದ ಯಾವ ವಿಜೇಂದ್ರ ನನಗೆ ಗೊತ್ತಿಲ್ಲ, ಮುಂದೆ ನೋಡೋಣ ಅದು ಎಲೆಕ್ಷನ್ ಬಂದಾಗ ಮಾತಾಡೋಣ ಎಂದು ರಾಯಚೂರಿನಲ್ಲಿ ಸಚಿವ ಶರಣಪ್ರಕಾರ ಪಾಟೀಲ್ ಹೇಳಿದರು.
ಬೆಂಗಳೂರು: ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ನಟ ದರ್ಶನ್ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ದರ್ಶನ್ ಮೂರು ದಿನದ ಒಳಗೆ ಸಿಸಿಟಿವಿ ಫೂಟೇಜ್ ಜೊತೆ ವಿಚಾರಣೆಗೆ ಬರಬೇಕೆಂದು ಪೊಲೀಸ್ ರು ನೋಟೀಸ್ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕೊನೆಗೂ ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ನಟ ದರ್ಶನ್ ತನಿಖಾಧಿಕಾರಿ ಇನ್ಸ್ ಪೆಕ್ಟರ್ ಶಿವಕುಮಾರ್ ಮುಂದೆ ವಿಚಾರಣೆಗೆ ಹಾಜರು. ಏನಿದು ಪ್ರಕರಣ? ಈ ಹಿಂದೆ ದರ್ಶನ್ ವಿರುದ್ಧ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.
ಗದಗ: ಬಸ್ ಕೊರತೆ ಹಾಗೂ ಬಸ್ ನಿಲುಗಡೆ ಮಾಡದ ಹಿನ್ನೆಲೆ ಗದಗ ಹೊರವಲಯದ ಮಲ್ಲಸಮುದ್ರ ಕ್ರಾಸ್ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಬಂದ್ ಮಾಡಿ, ಬಸ್ ಗಳನ್ನು ತಡೆದು ನಿಲ್ಲಿಸಿ ರಸ್ತೆಗೆ ಅಡ್ಡಲಾಗಿ ಕಲ್ಲುಗಳನ್ನಿಟ್ಟು ಆಕ್ರೋಶ ವ್ಯಕ್ತಪಡಿಸದರು. ಮಲ್ಲಸಮುದ್ರ ಗ್ರಾಮಕ್ಕೆ ಶಾಲಾ ಕಾಲೇಜು ಸಮಯಕ್ಕೆ ಬಸ್ ಗಳನ್ನು ಬಿಡಬೇಕು, ಗ್ರಾಮಕ್ಕೆ ಬಸ್ ಗಳ ನಿಲುಗಡೆ ಮಾಡಬೇಕು ಅಂತಾ ಆಗ್ರಹಿಸಿ ಏಕಾಏಕಿ ಪ್ರತಿಭಟನೆ ಮಾಡಿದ್ರಿಂದಾಗಿ ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತವು. ಇದರಿಂದ ಪ್ರಯಾಣಿಕರು ಹಾಗೂ ಜಿಮ್ಸ್ ಆಸ್ಪತ್ರೆಗೆ ತೆರಳೋ ರೋಗಿಗಳ ಪರದಾಟ ನಡೆಸುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳಕ್ಕೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳು ಬರಬೇಕು ಅಂತಾ ಪಟ್ಟು ಹಿಡಿದ ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಸಾಥ್ ನೀಡಿದರು.
ಬೆಂಗಳೂರು: ಬೆಂಗಳೂರು: ನಾನು ಲಿಂಗಾಯತ, ನಾನು ಒಕ್ಕಲಿಗ, ಆ ಜಾತಿ, ಈ ಜಾತಿ ಅಂತ ಬಿಟ್ಟು ನಾನು ಭಾರತೀಯ ಜನತಾ ಪಾರ್ಟಿಯ (BJP) ಕಾರ್ಯಕರ್ತ ಅಂತ ಭಾವಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಕೆಲಸ ಮಾಡಬೇಕೆಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ಕರ್ನಾಟಕ ಬಿಜೆಪಿಯ (Karnataka BJP) 11ನೇ ಅಧ್ಯಕ್ಷರಾಗಿ ಶಾಸಕ ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು ನನ್ನನ್ನು ಅಧ್ಯಕ್ಷರಾಗಿ ನೇಮಿಸಿರುವ ರಾಷ್ಟ್ರೀಯ ವರಿಷ್ಠರಿಗೆ ಧನ್ಯವಾದ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಜೆ.ಪಿ.ನಡ್ಡಾರಿಗೆ ಧನ್ಯವಾದ. ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷವು ಅಧ್ಯಕ್ಷರಾಗಿ ನೇಮಕ ಮಾಡಿದೆ.ಪಕ್ಷದ ಎಲ್ಲಾ ನಾಯಕರ ವಿಶ್ವಾಸ ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿದೆ. ನನಗೆ ನೀಡಿರುವ ಸ್ಥಾನದ ಬಗ್ಗೆ ಅರಿವು ಇದೆ, ಜವಾಬ್ದಾರಿ ಹೆಚ್ಚಿದೆ. ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಕಾರ್ಯಕರ್ತರು ತಲೆತಗ್ಗಿಸುವ ಕೆಲಸ ಮಾಡದಂತೆ ಪಕ್ಷ ಸಂಘಟನೆ ಮಾಡುವೆ ಎಂದು ಅಧಿಕಾರ…
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ (Bus) ಪಲ್ಟಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬ್ಯಾಡಗಿಯ (Byadagi) ಮೊಟೇಬೆನ್ನೂರಿನ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಘಟನೆಯಲ್ಲಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. https://ainlivenews.com/joint_pain_suprem_ray_treatment_reiki/ ಬಸ್ ಹುಬ್ಬಳ್ಳಿಯಿಂದ ಬೆಂಗಳೂರಿಗೆ (Bengaluru) ಹೊರಟಿತ್ತು. ಈ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಹೈವೇ ಸಿಬ್ಬಂದಿ ಅಂಬುಲೆನ್ಸ್ ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಕ್ರೇನ್ ಮೂಲಕ ಬಸ್‍ನ್ನು ರಸ್ತೆಯ ಪಕ್ಕಕ್ಕೆ ಸ್ಥಳಾಂತರಿಸಲಾಯಿತು. ಬ್ಯಾಡಗಿ ಪೊಲೀಸ್ (Police) ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ (Accident) ನಡೆದಿದೆ.
ಶಿವಮೊಗ್ಗ: ಸಹಕಾರಿಗಳು ಇರದಿದ್ದರೇ ರೈತರಿಗೆ ಬಡವರಿಗೆ ಸಹಕಾರವೇ ಸಿಗುತ್ತಿರಲಿಲ್ಲ. ಸರ್ಕಾರದ ಪರವಾಗಿ ಯಾರಾದ್ರೂ ಸಹಕಾರ ಮಾಡ್ತಾರೆ ಅಂದ್ರೆ ಅದು ಸಹಕಾರಿ ಕ್ಷೇತ್ರದಿಂದಲೇ .ಜವಹಾರ ನೆಹರು ಇಚ್ಚಾಶಕ್ತಿಯಿಂದಾಗಿ ಜಾರಿಗೆ ಬಂದ ಯೋಜನೆ ನಿರಂತರವಾಗಿ ಇರುತ್ತದೆ. ಸರ್ಕಾರ ಇರುವವರೆಗೂ ಸಹಕಾರಿ ಕ್ಷೇತ್ರ ಇರುತ್ತದೆ. ಅದು ಇರಬೇಕು ಕೂಡ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. ಲಕ್ಷೀಶ್ವರದಲ್ಲಿ ಶೂ ಬದಲು ಚಪ್ಪಲಿ ನೀಡಿದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರೀಯಿಸಿ ಮಾತನಾಡಿದ ಮಧು ಬಂಗಾರಪ್ಪ, ಹಂಗೇನಾದರೂ ಘಟನ ನಡೆದಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಶೂ ಅಂದ್ರೆ ಶೂ ಮೊಟ್ಟೆ ಅದ್ರೆ ಮೊಟ್ಟೆ ಕೊಡಲೇ ಬೇಕು. ರಾಜ್ಯದಲ್ಲಿ 60 ಸಾವಿರ ಶಾಲೆಗಳಿವೆ, ಅದರಲ್ಲಿ ಒಂದು ಶಾಲೆಯಲ್ಲಿ ಚಪ್ಪಲಿ ಕೊಚ್ಚಿದ್ದ ಮಾತ್ರಕ್ಕೆ ನೀವು ಅದನ್ನು ತೋರಿಸಲು ಹೋಗಬೇಡಿ ಎಂದು ಮಾದ್ಯಮದವರಿಗೆ ಮಧು ಬಂಗಾರಪ್ಪ ಕುಟುಕಿದ್ದಾರೆ. ಯಾರು ಚಪ್ಪಲಿ ನೀಡಿದ್ದಾರೋ ಅವರ ವಿರುದ್ಧ ಇಲಾಖೆಯಿಂದ ನೂರಕ್ಕೆ ನೂರರಷ್ಟು ಕ್ರಮ ಕೈಗೊಳ್ಳುತ್ತೇನೆ. ಬೇರೆ ಕಡೆಗಳಲ್ಲಿ ಒಳ್ಳೆ ಒಳ್ಳೆ ಶೂಗಳನ್ನು ಕೊಟ್ಟಿದ್ದಾರೆ ಅದನ್ನು ತೋರಿಸಿ…
ಬೆಂಗಳೂರು: ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ವಿಜಯೇಂದ್ರಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಶುಭ ಹಾರೈಸಿದರು. ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಗೆ ಶಕ್ತಿ, ಉತ್ಸಾಹ ಬಂದಿದೆ. ಎಲ್ಲರೂ ಒಟ್ಟಾಗಿ ನಡೆದರೆ ಲೋಕಸಭೆಯಲ್ಲಿ ಯಶಸ್ಸು ಸಿಗುತ್ತದೆ. ವಿಜಯೇಂದ್ರ ಸಾರಥ್ಯದಲ್ಲಿ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದರು. https://ainlivenews.com/joint_pain_suprem_ray_treatment_reiki/ ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಬಿ.ವೈ.ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ನನಗೆ ಕೊಟ್ಟ ಸಹಕಾರವನ್ನು ಬಿ.ವೈ.ವಿಜಯೇಂದ್ರಗೂ ಕೊಡಬೇಕು. ರಾಜ್ಯಾಧ್ಯಕ್ಷರಾದ ವಿಜಯೇಂದ್ರಗೆ ನಾವೆಲ್ಲರೂ ಜೊತೆಯಾಗಿ ನಿಲ್ತೇವೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲೂ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಎಂದರು.
ತುಮಕೂರು: ಬಿಜೆಪಿ-ಜೆಡಿಎಸ್ ಮೈತ್ರಿಯಾದ ಬಳಿಕ ಜೆಡಿಎಸ್ ನಾಯಕರು ಪಕ್ಷ ಬಿಡುತ್ತಿರುವ ವೇಗ ಹೆಚ್ಚಾಗಿದೆ. ಇದೀಗ ಲೋಕಸಭಾ ಚುನಾವಣೆಯ ಸಿದ್ಧತೆ ಹೊತ್ತಲ್ಲಿ ತುಮಕೂರಿನಲ್ಲಿ ಜೆಡಿಎಸ್‌ಗೆ ಬಿಗ್ ಶಾಕ್ ಎದುರಾಗಿದೆ. ತುಮಕೂರು ಜಿಲ್ಲೆಯ ಜೆಡಿಎಸ್‌ನ ಪ್ರಭಾವಿ ನಾಯಕ, ತುಮಕೂರು ಗ್ರಾಮಾಂತರದ ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಅವರು, https://ainlivenews.com/joint_pain_suprem_ray_treatment_reiki/ ತೆನೆ ಇಳಿಸಿ ಕೈ ಹಿಡಿಯಲು ಮುಂದಾಗಿದ್ದಾರೆಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಸಿ ಗೌರಿಶಂಕರ್ ಅವರು ಕಾಂಗ್ರೆಸ್ ಪಕ್ಷ ಸೇರುವ ಮುಹೂರ್ತ ಫಿಕ್ಸ್ ಆಗಿದೆ. ಸುಮಾರು ಎರಡು ಸಾವಿರ ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.