ಬೆಂಗಳೂರು: ಕಳೆದ ಐದಾರು ತಿಂಗಳಿನಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಆಯ್ಕೆ ಆಗಿದ್ದಾರೆ. ಲಿಂಗಾಯತ ಸಮುದಾಯ ಪಕ್ಷದ ಹಿಡಿತದಿಂದ ತಪ್ಪಿಹೋಗದಂತೆ ಬಿ.ವೈ.ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಗೆಯೂ ಸಿದ್ಧತೆ ನಡೆದಿದೆ. https://ainlivenews.com/we-didnt-expect-vijayendra-to-get-the-post-of-state-president-bsy/ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ಹಿನ್ನೆಲೆ ಬೆಂಗಳೂರಿನಲ್ಲಿ ಸಂಸದ ಪಿ.ಸಿ. ಮೋಹನ್ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯೇಂದ್ರ ಪಕ್ಷದಲ್ಲಿ ಸುಮಾರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆಲವರ ಆಸೆಗಳು ಸಹಜ. ಹಾಗಂತ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಶಕ್ತಿ ವಿಜಯೇಂದ್ರಗಿದೆ ಎಂದರು.
Author: AIN Author
ಹುಬ್ಬಳ್ಳಿ: ಬಿಜೆಪಿಯವರು ಸಾಕಷ್ಟು ಭ್ರಮೆಯಲ್ಲಿದ್ದಾರೆ, ಈಗಾಗಲೇ ಬೇರೆ ಕಡೆ ಆಪರೇಷನ್ ಕಮಲ ಮಾಡಲು ಹೋಗಿ ಕೈ ಸುಟ್ಟುಕೊಂಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50-60 ಶಾಸಕರನ್ನು ಕರೆದುಕೊಂಡು ಬಂದು ಮತ್ತೆ ಸರ್ಕಾರ ರಚನೆ ಮಾಡುವ ಭ್ರಮೆಯಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಹಿಂದೆ ಏನೆ ಕಾರಣ ಇರಲಿ, ಅದಕ್ಕೆ ಜನ ಉತ್ತರ ನೀಡುತ್ತಾರೆ. ಈಗ ಸಿದ್ದರಾಮಯ್ಯ ಮುಖ್ಯ ಮಂತ್ರಿ ಇದ್ದಾರೆ. ಪವರ್ ಶೇರಿಂಗ್ ಬಗ್ಗೆ ಯಾರೋ ಮಾತನಾಡುತ್ತಾರೆ ಅಂತಾ ಚರ್ಚೆ ಮಾಡುವುದು ಸರಿಯಲ್ಲಾ. ಅದು ಬರೀ ಚರ್ಚೆ ಆಗುತ್ತೆ. ಪಂಚ ರಾಜ್ಯದ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪರವಾಗಿ ಇರಲಿದೆ ಎಂದು ಶೆಟ್ಟರ್ ಹೇಳಿದರು. ಇನ್ನೂ ವಿಜಯೇಂದ್ರ ರಾಜಾಧ್ಯಕ್ಷರಾಗಿ ಆಯ್ಕೆ ಆಗಿರುವ ಬಗ್ಗೆ ಮಾತನಾಡಿದ ಶೆಟ್ಟರ್, ಇವಗ್ಯಾಕೆ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಆಯ್ತು, ಏನೋ ಅತ್ತು ಕರೆದು ಮಾಡಿರೋ ತರಹ ಕಾಣತ್ತೆ ಎಂದು ವ್ಯಂಗ್ಯವಾಡಿದರು. ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ, ರಾಜಕೀಯ…
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ. ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸರು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ FIR ದಾಖಲಿಸಿದ್ದಾರೆ. ಈ ವಿಷಯದ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ. ರಶ್ಮಿಕಾ ಮಂದಣ್ಣ ಅವರ ತಿರುಚಿದ ವಿಡಿಯೋಗೆ ಸಂಬಂಧಿಸಿದಂತೆ, ಐಪಿಸಿಯ ಯು/ಎಸ್ 465 ಮತ್ತು 469, 1860 ಮತ್ತು ಐಟಿ ಆಕ್ಟ್, 2000 ರ ಸೆಕ್ಷನ್ 66 ಸಿ ಮತ್ತು 66 ಇ ಅಡಿಯಲ್ಲಿ ದೆಹಲಿ ಪೊಲೀಸ್ ವಿಶೇಷ ಕೋಶದಲ್ಲಿ FIR ದಾಖಲಿಸಲಾಗಿದೆ. ಅರೆಬೆತ್ತಲಾಗಿದ್ದ ಮಹಿಳೆಯೊಬ್ಬರ ವೀಡಿಯೋಗೆ ನಟಿ ರಶ್ಮಿಕಾ ಅವರ ಮುಖ ಸೇರಿಸಿ ಡೀಪ್‌ಫೇಕ್ ವೀಡಿಯೋ ಮಾಡಲಾಗಿತ್ತು. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದಕ್ಕೆ ರಶ್ಮಿಕಾ ಮಂದಣ್ಣ ಸೇರಿ ಖ್ಯಾತ ನಟರು ಸಹ ಆಕ್ರೋಶ ವ್ಯಕ್ತಪಡಿಸಿದ್ದರು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ದೆಹಲಿ ಮಹಿಳಾ ಆಯೋಗ ಕೂಡ…
ಕಾರವಾರ: ಖಾಸಗಿ ಚಾನಲ್ ಒಂದರ ರಿಯಾಲಿಟಿ ಶೋನಲ್ಲಿ ಈ ಹಿಂದೆ ಭಾಗವಹಿಸಿದ್ದ ಸ್ಪರ್ಧಿಯೊಬ್ಬನನ್ನು ಕಳ್ಳತನ ಆರೋಪದ ಮೇಲೆ ಪೊಲೀಸರು (Police) ಬಂಧಿಸಿದ್ದಾರೆ. ಅಂಕೋಲದ (Ankola) ಬಾಳೆಗದ್ದೆ ಗ್ರಾಮದ ಯುವಕ ಭಾಸ್ಕರ್ ಸಿದ್ದಿ ಬಂಧನಕ್ಕೊಳಗಾದ ಆರೋಪಿಯಾಗಿದ್ದಾನೆ. ಈತ ಯಲ್ಲಾಪುರದ ಅಂಗಡಿ ಒಂದರಲ್ಲಿ ಹಣವನ್ನು ಕಳ್ಳತನ ಮಾಡಿದ್ದ. https://ainlivenews.com/great-job-opportunity-in-hindustan-aeronautics-limited-posting-in-bangalore/ ಆರೋಪಿ ಹಣ ಕದಿಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆತನನ್ನು ಬಂಧಿಸಲಾಗಿದೆ. ಆತ ಈ ಹಿಂದೆ ಖಾಸಗಿ ಚಾನಲ್ ಒಂದರ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ. ಆರೋಪಿಯಿಂದ ಕಳ್ಳತನ ಮಾಡಿದ್ದ 14,300 ರೂ. ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಯಲ್ಲಾಪುರ (Yellapur) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೆಲುಗು (Telugu) ಸಿನಿಮಾ ರಂಗದ ಖ್ಯಾತ ನಟ ಚಂದ್ರ ಮೋಹನ್ (Chandra Mohan) ಹೃದಯಾಘಾತದಿಂದ (Heart attack) ನಿಧನರಾಗಿದ್ದಾರೆ (Death). 82ರ ವಯಸ್ಸಿನ ಚಂದ್ರಮೋಹನ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗಿ ವಿಧಿವಶರಾಗಿದ್ದಾರೆ. ತೆಲುಗು ಚಿತ್ರೋದ್ಯಮದಲ್ಲಿ ದಾಖಲೆ ಎನ್ನುವಷ್ಟು ಸಿನಿಮಾಗಳಲ್ಲಿ ಚಂದ್ರ ಮೋಹನ್ ನಟಿಸಿದ್ದಾರೆ. ಈವರೆಗೂ 900ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 1966ರಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅವರು, ರಂಗುಲ ರತ್ನಂ ಚಿತ್ರಕ್ಕೆ ಮೊದಲ ಬಾರಿಗೆ ಬಣ್ಣ ಹಚ್ಚಿದ್ದರು. ಆನಂತರ ತಿರುಗಿ ನೋಡಿದ ಇತಿಹಾಸವೇ ಇರಲಿಲ್ಲ. ನೂರಾರು ಸಿನಿಮಾಗಳಲ್ಲಿ ನಾಯಕರಾಗಿ, ಅನೇಕ ಚಿತ್ರಗಳಲ್ಲಿ ಸಹ ನಟರಾಗಿ ಕೆಲಸ ಮಾಡಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ ಹೆಚ್ಚಾಗಿ ಅಭಿಮಾನಿಗಳನ್ನು ರಂಜಿಸಿದ್ದರು ಚಂದ್ರಮೋಹನ್. ಹಿರಿಯ ನಟನ ನಿಧನಕ್ಕೆ ಅನೇಕ ಸಿನಿಮಾ ನಟರು, ನಟಿಯರು ಹಾಗೂ ತಂತ್ರಜ್ಞರು ಸಂತಾಪ ಸೂಚಿಸಿದ್ದಾರೆ. ರಾಜಕೀಯ ಗಣ್ಯರು ಕೂಡ ಕಂಬನಿ ಮಿಡಿದಿದ್ದಾರೆ.
ಕನ್ನಡ ಡಿಜಿಟಲ್ ಕ್ಷೇತ್ರದಲ್ಲಿ ಸಕ್ಕತ್ ಸ್ಟುಡಿಯೋ ಟ್ರೆಂಡ್ಸೆಟ್ಟರ್ ಆಗಿರುವುದು ಸುಳ್ಳಲ್ಲಾ.. ಸುನೀಲ್ ರಾವ್, ಅನುಪಮಾ ಗೌಡ, ಸಿಂಧು ಲೋಕನಾಥ್ ಮುಂತಾದವರು ನಟಿಸಿರುವ “ಲೂಸ್ ಕನೆಕ್ಷನ್” ನಮ್ಮ ಕನ್ನಡದ ಮೊದಲ ವೆಬ್ ಸರಣಿಯ ನಿರ್ಮಿಸಿದ್ದು ಇದೇ ಸಂಸ್ಥೆ. ಸ್ಟಾರ್ ದಂಪತಿಗಳಾದ ಆರ್. ಜೆ. ಪ್ರದೀಪ್ ಮತ್ತು ಶ್ವೇತಾ ಆರ್ ಪ್ರಸಾದ್ ಅವರ ನೇತೃತ್ವದಲ್ಲಿ ಶುರುವಾದ ಸಕ್ಕತ್ ಸ್ಟುಡಿಯೋ ವೈವಿಧ್ಯಮಯ ವೆಬ್ ಸರಣಿಗಳೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸುತ್ತಲೇ ಇತ್ತು. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ರವರ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಅವರ ಸಹಯೋಗದೊಂದಿಗೆ ಸಕ್ಕತ್ ಸ್ಟುಡಿಯೋ, ನಾಗಭೂಷಣ ಮತ್ತು ಸಂಜನಾ ಆನಂದ್ ಅಭಿನಯದ “ಹನಿಮೂನ್”, ಪೂರ್ಣ ಮೈಸೂರು ಮತ್ತು ಸಿರಿ ರವಿಕುಮಾರ್ ಅಭಿನಯದ “ಬೈ ಮಿಸ್ಟೇಕ್” ಮತ್ತು ಅರವಿಂದ್ ಅಯ್ಯರ್ ಮತ್ತು ದಿಶಾ ಮದನ್ ಅಭಿನಯದ “ಹೇಟ್ ಯು ರೋಮಿಯೋ” ಹೀಗೆ ಉನ್ನತ ಮಟ್ಟದ ಸರಣಿಗಳು ನಿರ್ಮಾಣವಾಗಿ ವೂಟ್ ( Voot), ಆಹಾ (Aha ), ಮುಂತಾದ ಒಟಿಟಿ ಪ್ಲಾಟ್‌ಫಾರಂ ಗಳಲ್ಲಿ ನೋಡುಗರ ಗಮನ…
ಬೆಂಗಳೂರು: ಚಿತ್ರನಟ ದರ್ಶನ್ ಅವರ ಮನೆಯ ಸಾಕು ನಾಯಿಗಳು ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದು ದರ್ಶನ್ ಸೇರಿ ಇಬ್ಬರ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ಎಫ್‌ಐಆರ್ ದಾಖಲಾಗಿದೆ. ಆರ್.ಆರ್.ನಗರದ ಬಿಇಎಂಎಲ್ 5ನೇ ಹಂತದ ನಿವಾಸಿ, ವಕೀಲೆ ಅಮಿತಾ ಜಿಂದಾಲ್ ಎಂಬುವರು ದೂರು ನೀಡಿದ್ದಾರೆ. ಅ.28ರಂದು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದರು. https://ainlivenews.com/preparation-of-rr-nagar-police-to-issue-notice-to-actor-darshan/ ಸ್ಪರ್ಶ ಆಸ್ಪತ್ರೆಗೆ ಕಾರ್ಯಕ್ರಮವೊಂದಕ್ಕೆ 28ರಂದು ತೆರಳಿದ್ದೆ. ಕಾರನ್ನು ದರ್ಶನ್ ಮನೆ ಪಕ್ಕದಲ್ಲಿದ್ದ ಖಾಲಿ ಪ್ರದೇಶದ ಎದುರಿನ ರಸ್ತೆಯಲ್ಲಿ ನಿಲುಗಡೆ ಮಾಡಿದ್ದೆ. ಕಾರ್ಯಕ್ರಮ ಮುಗಿಸಿ ವಾಪಸ್ ಬಂದಾಗ ನಾಯಿಗಳು ದಾಳಿ ನಡೆಸಿದವುದು ತಿಳಿಸಿದ್ದಾರೆ. ಎರಡು ನಾಯಿಗಳನ್ನು ಕಟ್ಟಿದ್ದು, ಒಂದನ್ನು ಹಾಗೆಯೇ ಬಿಡಲಾಗಿತ್ತು. ಕಾರು ತೆಗೆದುಕೊಳ್ಳಬೇಕಿದ್ದು, ನಾಯಿಗಳನ್ನು ಬೇರೆಯಡೆ ಒಯ್ಯಲು ಕಾವಲುಗಾರನಲ್ಲಿ ಮನವಿ ಮಾಡಿದೆ. ಆದರೆ, ಆತ ಕಾರು ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ನಡೆಸಿದ.ಈ ಸಂದರ್ಭದಲ್ಲಿ ನಾಯಿಗಳು ದಾಳಿ ನಡೆಸಿದವು ಹೊಟ್ಟೆ ಭಾಗಕ್ಕೆ ಗಾಯವಾಗಿದೆ. ಬಟ್ಟೆ ಹರಿದುಹಾಕಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ನಾಯಿಗಳು ಕಚ್ಚುತ್ತವೆ ಎಂದು ಎಚ್ಚರಿಕೆ ವಹಿಸಿರಲಿಲ್ಲ.…
ಉಡುಪಿ: 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ (Raghupathi Bhat) ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ 1 ವರ್ಷ ಜೈಲುಶಿಕ್ಷೆ ವಿಧಿಸಿ ಉಡುಪಿ ಸಿಜೆಎಂ ಜಿಲ್ಲಾ ನ್ಯಾಯಾಲಯ (Udupi CJM Court) ಶುಕ್ರವಾರ ಆದೇಶಿಸಿದೆ. ಜೂನ್ 10, 2008 ರಂದು ಉಡುಪಿಯಲ್ಲಿ (Udupi) ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್ ರಾವ್‌ಗೆ 1 ವರ್ಷ ಜೈಲು (Jail) ಶಿಕ್ಷೆಯೊಂದಿಗೆ ದಂಡ ವಿಧಿಸಿದೆ. 15 ವರ್ಷಗಳ ಹಿಂದೆ ನಡೆದಿದ್ದಾದ್ರೂ ಏನು? 2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಅತುಲ್ ರಾವ್, ಮನೆಯಿಂದ ಪದ್ಮಪ್ರಿಯ ಅವರನ್ನು ಆಕೆಯ ಕಾರಿನಲ್ಲಿ ಕರೆದು ಕೊಂಡು ಹೋಗಿ ಕುಂಜಾರುಗಿರಿಯ ದಾರಿ ಮಧ್ಯೆ ಕಾರನ್ನು ಇಟ್ಟು, ಅದರ ಒಳಗೆ ಬಳೆಯ ಚೂರು, ರಕ್ತದ…
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ (Deep Fake Video) ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು. ಸ್ವತಃ ಕೇಂದ್ರ ಸರಕಾರವೇ ಈ ಕುರಿತು ಪ್ರತಿಕ್ರಿಯಿಸಿತ್ತು. ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಕೂಡ ಆಕ್ರೋಶ ಹೊರ ಹಾಕಿದ್ದರು. ಇದೀಗ ಕನ್ನಡದ ನಟಿಯರಾದ ಚೈತ್ರಾ ಆಚಾರ್ (Chaitra Achar) ಮತ್ತು ರುಕ್ಮಿಣಿ (Rukmini) ಕೂಡ ಈ ಕುರಿತು ಮಾತನಾಡಿದ್ದಾರೆ. ಈ ನಡೆ ಅಪಾಯಕಾರಿಯಾದದ್ದು ಎಂದಿದ್ದಾರೆ. ಇಂತಹ ದುಷ್ಟ ನಡೆಯನ್ನು ಮುಲಾಜಿಲ್ಲದೇ ಎಲ್ಲರೂ ಖಂಡಿಸಬೇಕು. ಮೊದಲು ಇಂತಹ ಆಪ್ ಗಳನ್ನು ನಟಿಯರೇ ಬ್ಯಾನ್ ಮಾಡಬೇಕು. ಎಲ್ಲ ರೀತಿಯಲ್ಲೂ ಇದನ್ನು ನಾವು ವಿರೋಧಿಸಬೇಕು. ಸೆಲೆಬ್ರಿಟಿಗಳಿಗೆ ಹೀಗೆ ಆದರೆ, ಸಾಮಾನ್ಯ ಇನ್ನೆಷ್ಟು ಕಷ್ಟ ಪಡಲ್ಲ ಎಂದು ನಟಿಯರು ಮಾತನಾಡಿದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ ವಿಡಿಯೋ ಬಗ್ಗೆ ಇದೀಗ ಎಲ್ಲಾ ಕಡೆ ಚರ್ಚೆಗೆ ಗ್ರಾಸವಾಗಿದೆ. ರಶ್ಮಿಕಾ ಪರ ಬಿಗ್ ಬಿ, ನಾಗಚೈತನ್ಯ, ಮೃಣಾಲ್ ಠಾಕೂರ್ ಸೇರಿದಂತೆ ಅನೇಕರು ಧ್ವನಿಯೆತ್ತಿದ್ದಾರೆ. ಈ ಬೆನ್ನಲ್ಲೇ, ಗೆಳತಿ ರಶ್ಮಿಕಾ…
ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ನಟನೆಯ ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್ (Teaser) ಇದೇ ನವೆಂಬರ್ 12ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಖ್ಯಾತ ನಟ ದರ್ಶನ್ (Darshan) ಮತ್ತು ನಟಿ, ಸಂಸದೆ ಸುಮಲತಾ ಅಂಬರೀಶ್ (Sumalatha) ಅವರು ಟೀಸರ್ ಅನ್ನು ಬಿಡುಗಡೆ ಮಾಡಲಿದ್ದಾರೆ. ಇದು ಸೂರಿ ಸಿನಿಮಾವಾಗಿದ್ದರಿಂದ ಟೀಸರ್ ಬಗ್ಗೆ ಕುತೂಹಲ ಮೂಡಿದೆ. ಭಾವ ತುಂಬಿದ ಹಾಡುಗಳ ಮೂಲಕ ಫೇಮಸ್ ಆಗಿದ್ದ ಜಯಂತ್ ಕಾಯ್ಕಿಣಿ, ಇದೀಗ ಅಭಿಷೇಕ್ ಅಂಬರೀಶ್ (Abhishek Ambarish) ನಟನೆಯ ‘ಬ್ಯಾಡ್ ಮ್ಯಾನರ್ಸ್’ (Bad Manners) ಸಿನಿಮಾಗಾಗಿ ಮಾಸ್ ಗೀತೆಯೊಂದನ್ನು ಬರೆದಿದ್ದಾರೆ. ‘ಓಗ.. ಓಗ..’ ಎಂದು ಶುರುವಾಗುವ ಗೀತೆಯಲ್ಲಿ ಕೇಳದೇ ಇರುವಂಥ ಹಲವು ಪದಗಳನ್ನು ಬಳಸಲಾಗಿದೆ. ಅವೆಲ್ಲವೂ ಗ್ರಿಬಿಶ್ ಪದಗಳಾಗಿವೆಯಂತೆ. ಹೀಗಾಗಿ ಹಾಡು ಹೊಸ ರೀತಿಯಲ್ಲೇ ಕೇಳಿಸುತ್ತದೆ. ಚರಣ್ ರಾಜ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡಿಗೆ ಜಯಂತ್ ಕಾಯ್ಕಿಣಿ (Jayant Kaykini) ಸಾಹಿತ್ಯ ಬರೆದಿದ್ದರೆ, ಕಪಿಲ್ ಕಪಿಲನ್ ಹಾಡಿದ್ದಾರೆ. ಅಭಿಷೇಕ್ ಅಂಬರೀಶ್ ಸಖತ್ತಾಗಿಯೇ ಗೀತೆಗೆ ಸ್ಟೆಪ್ ಹಾಕಿದ್ದಾರೆ.…