ಬೆಂಗಳೂರು:- PSI ನೇಮಕಾತಿ ಮರುಪರೀಕ್ಷೆಗೆ ಹೈಕೋರ್ಟ್ ಸಮ್ಮತಿ ನೀಡಿರುವುದಕ್ಕೆ ಸಚಿವ ಪ್ರಿಯಾಂಕ ಖರ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಉಚ್ಚ ನ್ಯಾಯಾಲಯವು ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹ. ಹಿಂದೆ ನಡೆದಿರುವ 545 ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಸಂಪೂರ್ಣ ರದ್ದುಗೊಳಿಸಲು ಆದೇಶಿಸಿ ಸ್ವತಂತ್ರ ಸಂಸ್ಥೆಯಿಂದ ಮತ್ತೆ ಮರುಪರೀಕ್ಷೆ ನಡೆಸಬೇಕು ಎಂದು ಆದೇಶಿಸಿರುವುದು ಹಿಂದಿನ ಬಿಜೆಪಿ ಸರ್ಕಾರದ ದುಷ್ಟ ಆಡಳಿತಕ್ಕೆ ಉಚ್ಚ ನ್ಯಾಯಾಲಯದ ಸಾಕ್ಷಿ ಮುದ್ರೆಯಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದೇ ಇಲ್ಲಾ ಎಂದು ಹಲವಾರು ಬಾರಿ ಸದನಕ್ಕೆ ವಾದಿಸಿದ್ದ ಹಿಂದಿನ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಾಗೂ ಪ್ರಕರಣವನ್ನು ಹಳ್ಳ ಹಿಡಿಸಲು ತನಿಖೆ ಮೇಲೆ ಪ್ರಭಾವ ಬೀರಿದ ಮತ್ತು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದ್ದ ಅಂದಿನ ಬಿಜೆಪಿ ಸಚಿವರಿಗೆ ಛೀಮಾರಿಗೆ ಹಾಕಿದಂತೆ’ ಎಂದರು. ಆಗಿರುವ ಅಕ್ರಮದ ಸಂಪೂರ್ಣ ಚಿತ್ರಣವನ್ನು ನ್ಯಾಯಾಲಯಕ್ಕೆ ಸಮರ್ಥವಾಗಿ ಮನವರಿಕೆ ಮಾಡಿಸಿ 56,000ಕ್ಕೂ ಹೆಚ್ಚು ಆಕಾಂಕ್ಷಿಗಳ ಪರವಾಗಿ ತೀರ್ಪು ಬರುವಂತೆ…
Author: AIN Author
ಬೆಂಗಳೂರು;- ಕೇಂದ್ರದ ಭಿಕ್ಷೆ ನಮಗೆ ಬೇಡ, ಕಾನೂನು ಪ್ರಕಾರ ಬರಪರಿಹಾರ ಕೊಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಈಗಾಗಲೇ ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಬಿಜೆಪಿ-ದಳದವರಿಗೆ ಅನುಕಂಪ ಬಂದು ಬರ ಅಧ್ಯಯನಕ್ಕೆ ಹೊರಟಿದ್ದಾರೆ. ಅದರ ಬದಲು ಬರದ ಹಿನ್ನೆಲೆಯಲ್ಲಿ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಪರಿಹಾರ ಹಣ ಕೊಡಿಸಬೇಕು. ಪ್ರಚಾರಕ್ಕಾಗಿ ಎರಡು ಗಿಡ ನೋಡಿಕೊಂಡು ಬಂದರೆ ಏನು ಆಗುವುದಿಲ್ಲ. ನಾವು ಗಿಡಗಳನ್ನು ನೋಡಿದ್ದೇವೆ, ನಿಮ್ಮಿಂದ ರಾಜ್ಯಕ್ಕೆ ಏನಾಗಿದೆ?. ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಹಣ ಬಿಡುಗಡೆ ಮಾಡಬೇಕು ಎಂದರು. ಈಗಾಗಲೇ ಸರ್ಕಾರ ಉತ್ತಮ ಅಧ್ಯಯನ ನಡೆಸಿದೆ. ಕೇಂದ್ರ ಸರ್ಕಾರಕ್ಕೆ ವರದಿ ಕೊಡಲಾಗಿದೆ. ವರದಿಯನ್ನು ಸ್ವೀಕಾರ ಮಾಡಿದ ಕೇಂದ್ರ ಸರ್ಕಾರ, ಅಧ್ಯಯನಕ್ಕೆ ಅಧಿಕಾರಿಗಳನ್ನು ಕಳುಹಿಸಿದ್ರು. 26 ಸಂಸದರು, 19 ಜೆಡಿಎಸ್ ಶಾಸಕರು, 65 ಬಿಜೆಪಿ ಶಾಸಕರು ಪ್ರಧಾನಿಯವರನ್ನು ಭೇಟಿ ಮಾಡಲಿ ಎಂದು ಆಗ್ರಹಿಸಿದರು. ಸಚಿವ…
ಬೆಂಗಳೂರು:- ಉಬರ್ ಮಾದರಿ ಬೆಂಗಳೂರಿನಲ್ಲಿ ರ‍್ಯಾಪಿಡೋದಿಂದ ಶೀಘ್ರವೇ ಟ್ಯಾಕ್ಸಿ ಸೇವೆ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಕ್ಯಾಬ್ ಸೇವೆಗಳನ್ನು ನಡೆಸಲು ನಾವು ರ‍್ಯಾಪಿಡೋದಿಂದ ಅರ್ಜಿಯನ್ನು ಸ್ವೀಕರಿಸಿದ್ದೇವೆ. ಪ್ಯಾನಿಕ್ ಬಟನ್‌ಗಳು, ಕಂಟ್ರೋಲ್ ರೂಮ್ ಮತ್ತು ಜಿಪಿಎಸ್ ಟ್ರ್ಯಾಕಿಂಗ್ ಮತ್ತು ಇತರ ಸುರಕ್ಷತಾ ಕ್ರಮಗಳ ಸ್ಥಾಪನೆಯನ್ನು ಪರಿಶೀಲಿಸಿದ ನಂತರವೇ ಪರವಾನಗಿಯನ್ನು ನೀಡಬಹುದು. ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಕನಿಷ್ಠ ಒಂದು ತಿಂಗಳು ಬೇಕಾಗುತ್ತದೆ “ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಹೇಮಂತ್ ಕುಮಾರ್ ಹೇಳಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಆಟೋ ಚಾಲಕರಿಂದ ವಿರೋಧ ವ್ಯಕ್ತವಾದ ನಂತರ ರ‍್ಯಾಪಿಡೋ ನಗರದಲ್ಲಿ ‘ಆಟೋ ಪ್ಲಸ್’ ಎಂಬ ಸೇವೆಯನ್ನು ಆರಂಭಿಸಿದೆ. ಇದು ಯಾವುದೇ ರದ್ದತಿಗಳಿಲ್ಲದೆ ಸವಾರಿಗಳನ್ನು ಖಾತರಿಪಡಿಸುತ್ತದೆ, ಪ್ರಯಾಣಿಕರಿಗೆ ವಿಶ್ವಾಸಾರ್ಹತೆ ಮತ್ತು ಅದರ ಚಾಲಕರಿಗೆ ನಿಶ್ಚಿತ ಆದಾಯವನ್ನು ಖಾತ್ರಿಗೊಳಿಸುತ್ತದೆ. ಈ ಹೊಸ ವೈಶಿಷ್ಟ್ಯದ ಶುಲ್ಕಗಳು ಅಪ್ಲಿಕೇಶನ್‌ನಲ್ಲಿ ಸಾಮಾನ್ಯ ಆಟೋ ಸವಾರಿ ದರಗಳಿಗಿಂತ 25 ರಿಂದ 30 ಪ್ರತಿಶತ ಹೆಚ್ಚಿವೆ ಎಂದು ವರದಿಯಾಗಿದೆ. ರ‍್ಯಾಪಿಡೋ ತನ್ನ ನಿಯಮಿತ ಆಟೋ ಸೇವೆಗೆ ಕನಿಷ್ಠ ದರವಾಗಿ ₹46…
ನಿನ್ನೆಯಷ್ಟೇ ಬ್ರೆಜಿಲಿಯನ್ ನ ಪ್ರಸಿದ್ಧ ಗಾಯಕ ಡಾರ್ಲಿನ್ ಮೊರೈಸ್ ಜೇಡ ಕಚ್ಚಿದ ಪರಿಣಾಮ ಸಾವನ್ನಪ್ಪಿದ್ದರು. ಇದೀಗ ಆಸ್ಟ್ರೇಲಿಯಾದ (Australia) ನಟ, ಗಾಯಕ ಜಾನಿ ರೆಪೋ ಕ್ಯಾನ್ಸರ್ (Cancer) ನಿಂದಾಗಿ ನಿಧನರಾಗಿದ್ದಾರೆ. ಜಾನಿ ರೆಪೋ (Johnny Ruffo) 1017ರಿಂದಲೂ ಮೆದುಳು ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. https://ainlivenews.com/knee-pain-treatment-joint-pain-treatment/ ತಾವು ಕ್ಯಾನ್ಸರ್ ಗೆ ತುತ್ತಾಗಿದ್ದೇನೆ ಎಂದು ತಿಳಿಯುತ್ತಿದ್ದಂತೆಯೇ ಕ್ಯಾನ್ಸರ್ ವಿರುದ್ಧ ಹೋರಾಟದ ಅಭಿಯಾನದಲ್ಲೂ ಸಕ್ರಿಯರಾಗಿದ್ದರು. ಹಲವಾರು ಸಿನಿಮಾಗಳು, ವೆಬ್ ಸರಣಿಗಳು ಮತ್ತು ಟಿವಿ ಶೋಗಳಲ್ಲೂ ಜಾನಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ, ಅನೇಕ ಸಂಗೀತ ಕಾರ್ಯಕ್ರಮಗಳನ್ನೂ ಇವರು ನಡೆಸಿಕೊಟ್ಟಿದ್ದಾರೆ. ಶುಕ್ರವಾರವಷ್ಟೇ 35ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ನವದೆಹಲಿ: ಪ್ರಶ್ನೆಗಾಗಿ ಲಂಚ ಪ್ರಕರಣದಲ್ಲಿ (Cash for Query Case) ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ (TMC MP Mahua Moitra) ಸಂಕಷ್ಟ ಎದುರಾಗಿದೆ. ಅವರ ಲೋಕಸಭೆ (Lok Sabha) ಸದಸ್ಯತ್ವ ರದ್ದಾಗುವ ಸಾಧ್ಯತೆಯಿದೆ. ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಸಭೆಯ ನೈತಿಕ ಸಮಿತಿ, ಮಹುವಾ ಲೋಕಸಭೆ ಸದಸ್ಯತ್ವ ರದ್ದು ಮಾಡುವಂತೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ನೇತೃತ್ವದ ಸಮಿತಿಯು ಸಭೆ ಸೇರಿ, ತನ್ನ ವರದಿಯನ್ನು ಅಂಗೀಕರಿಸಿ ಮಹುವಾರನ್ನು ಉಚ್ಚಾಟಿಸುವಂತೆ ಶಿಫಾರಸು ಮಾಡಿದೆ ಎಂದು ವರದಿಗಳು ತಿಳಿಸಿವೆ. ಮೊಯಿತ್ರಾ ನಡೆ ಅತ್ಯಂತ ಆಕ್ಷೇಪಾರ್ಹ, ಅನೈತಿಕ, ಹೇಯ, ದೋಷಪೂರಿತ ಎಂದು ವರದಿಯಲ್ಲಿ ಉಲ್ಲೇಖವಾಗಿದೆ ಎನ್ನಲಾಗಿದೆ. ನೈತಿಕ ಸಮಿತಿಯ ಒಟ್ಟು 10 ಮಂದಿಯಲ್ಲಿ ಆರು ಸದಸ್ಯರು ವರದಿಯನ್ನು ಅಂಗೀಕರಿಸುವುದನ್ನು ಬೆಂಬಲಿಸಿದ್ದಾರೆ ಮತ್ತು ಉಳಿದ ನಾಲ್ವರು ಅದನ್ನು ವಿರೋಧಿಸಿದ್ದಾರೆ. https://ainlivenews.com/knee-pain-treatment-joint-pain-treatment/ ಮುಂದಿನ ಕ್ರಮಕ್ಕಾಗಿ ವರದಿಯನ್ನು ಈಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರಿಗೆ ಕಳುಹಿಸಲಾಗುವುದು ಎಂದು ಮೂಲಗಳು…
ಕನ್ನಡದ ಸಿನಿಮಾ ರಂಗದ ಪ್ರತಿಭಾವಂತ ನಟ ಪ್ರಜ್ವಲ್ ದೇವರಾಜ್ ನಟನೆಯ ಹೊಸ ಸಿನಿಮಾದಲ್ಲಿ ಮೇಘಾ ಶೆಟ್ಟಿ (Megha Shetty) ಕೂಡ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ. ಮೊನ್ನೆಷ್ಟೇ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದ್ದು, ಈ ಚಿತ್ರದಲ್ಲಿ ಶ್ರುತಿ ಹರಿಹರನ್ ಕೂಡ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಜಲಕ್ಷ್ಮಿ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ ನಟಿಸುತ್ತಿರುವ ‘ಚೀತಾ’ (Cheeta) ಚಿತ್ರದ ಮುಹೂರ್ತ ಸಮಾರಂಭ ಕನ್ನಡ ರಾಜ್ಯೋತ್ಸವದ ಶುಭದಿನದಂದು ಹೆಚ್. ಎಂ. ಟಿ ಶಾಲೆ ಆಟದ ಮೈದಾನದಲ್ಲಿ ನೆರವೇರಿದೆ. ಪ್ರಜ್ವಲ್ ದೇವರಾಜ್ ಕನ್ನಡ ಬಾವುಟ ಹಾರಿಸುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು.
ಕಾಮರೆಡ್ಡಿ ನ 10: ಕರ್ನಾಟಕ ರಾಜ್ಯದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಹಿಂದುಳಿದ ವರ್ಗಗಳ ನಿರ್ಣಯ” ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. BREAKING: KEA ಪರೀಕ್ಷಾ ಅಕ್ರಮ: ಕೊನೆಗೂ ಕಿಂಗ್ʼಪಿನ್ RD ಪಾಟೀಲ್ ಅರೆಸ್ಟ್ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಸರಣಿ ಸುಳ್ಳುಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಕೆ.ಸಿ.ಆರ್ ಅವರೇ ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಬಳಿಕ ಚರ್ಚೆಗೆ ಬನ್ನಿ ಎಂದು ಪಂಥಾಹ್ವಾನ ನೀಡಿದರು. BJP ಮತ್ತು BRC ಎರಡೂ ಒಂದೇ. BRS ತೆಲಂಗಾಣದಲ್ಲಿ BJP ಯ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್…
ಬೆಂಗಳೂರು: ಚಿತ್ರದುರ್ಗದ ಮುರುಘಾ ಶ್ರೀ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನ.15ಕ್ಕೆ ಮುಂದೂಡಿ ಆದೇಶಿಸಿದೆ. https://ainlivenews.com/2-thousand-additional-special-transport-system-by-ksrtc/ ಈ ಕುರಿತು ಸ್ವಾಮೀಜಿ ಪರ ವಕಿಲರಾದ ಸಂದೀಪ್ ಪಾಟೀಲ್ ಪ್ರತಿಕ್ರಿಯೆ ನೀಡಿ, ಮುರುಘಾ ಶ್ರೀಗಳಿಗೆ ಜಾಮೀನು ಅರ್ಜಿಗೆ ಸಂಬಂಧಿಸಿ ಮೊದಲ ಪ್ರಕರಣದ ದಾಖಲೆ ಪರಿಶೀಲನೆಯನ್ನು ನಡೆಸಲಿದೆ. ಬಳಿಕ ಕೊಟ್ಟಿರೋ ಶ್ಯೂರಿಟಿ ಪರಿಶೀಲನೆ ನಡೆಸಿ ನಂತರ ಬಿಡುಗಡೆಗೆ ನ್ಯಾಯಾಲಯ ಆದೇಶ ನೀಡಲಿದೆ. ಮೊದಲನೇ ಪ್ರಕರಣ ಇಟ್ಟುಕೊಂಡು 2ನೇ ಪ್ರಕರಣದಲ್ಲಿ ಜಾಮೀನು ನೀಡಲಿದೆ. ಎರಡನೇ ಕೇಸ್ ಅಷ್ಟೊಂದು ಊರ್ಜಿತವಲ್ಲ. ಪದೇ ಪದೇ ಇಂತಹ ಕೇಸ್ ಗಳು ಮಾಡ್ತಾ ಹೋಗ್ತಾ ಇದಾರೆ ಹೀಗಾಗಿ ಈ ಕೇಸ್ ವಜಾ ಮಾಡಿ ಅಂತ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇವೆ, ಮೆಡಿಕಲ್ ರಿಪೋರ್ಟ್ ಸ್ವಾಮೀಜಿ ಪರವಾಗಿಯೇ ಬಂದಿದೆ ಬಹುತೇಕ ನವೆಂಬರ್ 15 ರಂದು ಸ್ವಾಮೀಜಿ ಬಿಡುಗಡೆಯಾಗಲಿದ್ದಾರೆ ಅನ್ನೋ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು: ಹಾಸನಾಂಬೆ ದೇವಸ್ಥಾನದಲ್ಲಿ ವಿದ್ಯುತ್ ಶಾಕ್ ಮತ್ತು ನೂಕು ನುಗ್ಗಲು ಪ್ರಕರಣ ಸಂಬಂಧ ವಿಧಾನಸೌಧದಲ್ಲಿ ಹಾಸನ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. https://ainlivenews.com/current-shock-during-hassanambe-darshan-devotees-scattered/ ವಿದ್ಯುತ್ ತಂತಿ ಬ್ಯಾರಿಕೇಡ್ ಗೆ ಟಚ್ ಆಗಿ ಈ ಘಟನೆ ಆಗಿದೆ ಓರ್ವ ಮಹಿಳೆಗೆ ಸ್ಬಲ್ಪ ಗಾಯ ಆಗಿದೆ ಬೇರೆ ಯಾರಿಗೂ ಸಮಸ್ಯೆ ಆಗಿಲ್ಲ ಈ ಗಾಬರಿಯಲ್ಲಿ ಸ್ವಲ್ಪ ತುಳಿತ ಆಗಿದೆ ಸದ್ಯ ಎಲ್ಲವೂ ನಿಯಂತ್ರಣಕ್ಕೆ ಬಂದಿದೆ ಎಂದಿದ್ದಾರೆ. ಶಾಸಕರು, ಸಂಸದರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಆತಂಕಕಾರಿ ಅಂಶ ಏನೂ ಇಲ್ಲ ಇವಾಗ ದರ್ಶನ ಮತ್ತೆ ಪ್ರಾರಂಭ ಆಗಿದೆ ಹಾಸನ ಜಿಲ್ಲಾಧಿಕಾರಿ ಬೆಂಗಳೂರಿಗೆ ಬಂದಿದ್ದರು ಸ್ಥಳಕ್ಕೆ ಹೋಗ್ತಿದ್ದಾರೆ ನಾನು ಘಟನಾ ಸ್ಥಳಕ್ಕೆ ತೆರಳುತ್ತಿದ್ದೇನೆ ನೂಕುನುಗ್ಗಲು, ಗಾಬರಿಯಲ್ಲಿ ಸ್ವಲ್ಪ ಜನ ಆತಂಕಗೊಂಡಿದ್ದರು ಯಾರೂ ಆತಂಕಪಡುವ ಅಗತ್ಯವಿಲ್ಲ ಯಾವುದೇ ದೊಡ್ಡ ಆಘಾತಕಾರಿ ಘಟನೆ ನಡೆದಿಲ್ಲ ಭಕ್ತಾದಿಗಳಿಗೆ ಸಮಸ್ಯೆ ಆಗದಂತೆ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಸಿಎಂ ಘಟನೆ ಬಗ್ಗೆ ಡಿಸಿ ಜೊತೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಹೇಳಿದರು.
ಹಾಸನ: ಹಾಸನಾಂಬೆ ದರ್ಶನದ ವೇಳೆ ವಿದ್ಯುತ್ ತಗುಲಿ 17 ಜನರು ಅಸ್ವಸ್ಥರಾಗಿದ್ದ ಹಿನ್ನಲೆ ಹಾಸನ ಜಿಲ್ಲಾಸ್ಪತ್ರೆ ಬಳಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆಳಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ಹಾಸನಾಂಬೆ ದರ್ಶನದ ವೇಳೆ ಕರೆಂಟ್ ಶಾಕ್ ಹೊಡೆದಿದ್ದು ಸ್ಪಷ್ಟವಾಗಿದೆ. https://ainlivenews.com/knee-pain-treatment-joint-pain-treatment/ ಇದೇ ವೇಳೆ ನೂಕಾಟ ತಳ್ಳಾಟದ ವೇಳೆ ಹಲವರಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ, ಸದ್ಯ ಆರೋಗ್ಯವಾಗಿದ್ದು, ಕರೆಂಟ್ ಶಾಕ್ನಿಂದ ಓರ್ವ ಯುವತಿ ಅಸ್ವಸ್ಥಗೊಂಡಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದರು.