ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬರೊಬ್ಬರಿ 2 ಸಾವಿರ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ. ನವೆಂಬರ್ 12 ಮತ್ತು 14 ರಂದು ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಹಬ್ಬ ಇರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ ನ.10 ರಿಂದ 12 ರವರೆಗೆ ಬೆಂಗಳೂರಿನಿಂದ ಕೆಳಕಂಡ ಸ್ಥಳಗಳಿಗೆ 2 ಸಾವಿರ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆಯನ್ನು ನಿಗಮ ಮಾಡಿದೆ. ಇದರ ಜೊತೆಗೆ ಅಂತರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನ.14 ಹಾಗೂ 15 ರಂದು ವಿಶೇಷ ಬಸ್ಸುಗಳು ಕೂಡ ಸಂಚರಿಸಲಿವೆ ಎಂದು KSRTC ತಿಳಿಸಿದೆ. https://ainlivenews.com/mysore-bangalore-mangalore-special-train-for-passengers-going-to-coastal-areas/ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಹೆಚ್ಚುವರಿ ಬಸ್ಗಳು ಕಾರ್ಯನಿರ್ವಹಿಸಲಿವೆ.
Author: AIN Author
ರಾಮನಗರ: ಇದೊಂದು ಸುದಿನ. ಟೊಯೋಟಾ 25 ವರ್ಷ ಪೂರೈಸಿದೆ. ಹೆಣ್ಣು ಮಕ್ಕಳಿಗೆ ಶಕ್ತಿ ತುಂಬಲು ತರಬೇತಿ ಯೋಜನೆ ರೂಪಿಸಿರೋದು ಶ್ಲಾಘನೀಯ. ಭಾರತದ ಅದರಲ್ಲೂ ಕರ್ನಾಟಕದ ಹೆಮ್ಮೆಯ ಸಂಸ್ಥೆ. ಗುಣಮಟ್ಟದಲ್ಲಿ ಯಾವತ್ತೂ ರಾಜಿ ಮಾಡಿಕೊಂಡಿಲ್ಲ ಎಂದು ಸಂಸದ ಡಿ ಕೆ ಸುರೇಶ್ ಹೇಳಿದರು. ಟೊಯೋಟಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆಯಲ್ಲಿ ಹೆಮ್ಮೆಯಿಂದ ತಲೆ ಎತ್ತಿ ನಿಂತಿದೆ. ಇವತ್ತಿನ ಸವಾಲು ಉದ್ಯೋಗ ಸೃಷ್ಟಿ. ಸಂಸ್ಥೆ ಅದನ್ನು ಸಮರ್ಪಕವಾಗಿ ನಿಭಾಯಿಸುತ್ತಿದೆ. ಯುವಕ, ಯುವತಿಯರಿಗೆ ಬದುಕು ಕಟ್ಟಿ ಕೊಡುತ್ತಿದೆ. ಹೆಣ್ಣು ಮಕ್ಕಳಿಗೆ ವಿಶೇಷ ತರಬೇತಿಗೆ ಮುಂದಾಗಿರೋದು ಮಾದರಿ. ಶಿಕ್ಷಣ, ಗಾರ್ಮೆಂಟ್ ಉದ್ಯಮದಲ್ಲಿ ಸಾಧನೆ ಮಾಡಿರುವ ಮಹಿಳೆಯರ ಕೈಗೆ ಸ್ಕ್ರೂ ಡ್ರೈವರ್, ಸ್ಪಾನರ್ ಕೊಟ್ಟು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆಗೆ ಪ್ರೇರಣೆ ನೀಡಿರುವುದು ಅನುಕರಣನೀಯ. ವಿಶ್ವದಲ್ಲಿ ಮಹಿಳಾ ಶಕ್ತಿ ಪ್ರಾಮುಖ್ಯತೆ ಪಡೆದಿದೆ. ಮಹಿಳೆಯರು ಸ್ವಾವಲಂಬನೆ ಸಾಧಿಸುತ್ತಿರೋದು ಶ್ಲಾಘನೀಯ. ಡಿಸಿಎಂ ಮೂಲಕ ಸಿಎಂ ಅವರಿಗೆ ವಿಶೇಷ ಮನವಿ ಮಾಡುತ್ತೇನೆ. ಉದ್ಯೋಗದಲ್ಲಿ ಮಹಿಳೆಯರಿಗೆ ಶೇಕಡಾ 25 ರಷ್ಟು ಮೀಸಲಿಡಲು ಕೋರುತ್ತೇನೆ. ಟೊಯೋಟಾದಲ್ಲಿ…
ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಹಿನ್ನೆಲೆ ಎಚ್ಚತ್ತ ಸರ್ಕಾರ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.ಬಿಬಿಎಂಪಿ ಮನವಿ ಮಾಲಿನ್ಯ ರಹಿತ ದೀಪಾವಳಿಯನ್ನಾಗಿ ಆಚರಣೆ ಮಾಡಲು ಮನವಿ ಹಸಿರು ಪಟಾಕಿಗಷ್ಟೇ ಅನುಮತಿ ನೀಡಿದ ಸರ್ಕಾರ ನಿಯಮ ಮೀರಿದರೆ ಕಾನೂನು ಕ್ರಮದ ಎಚ್ಚರಿಕೆ https://ainlivenews.com/it-would-be-good-if-sumalta-contested-from-bangalore-north-constituency/ ಪಟಾಕಿ ಮಾರುವ ಮಳಿಗೆಗೆ ಕೆಲವು ನಿಭಂದನೆಗಳನ್ನು ನೀಡಿದ ಸರ್ಕಾರ ಹಾಗಿದ್ರೆ ಪಟಾಕಿ ಮಾರಾಟ ಮಾಡುವ ಮಳಿಗೆಗಳ ನಿಬಂಧನೆಗಳು ಏನು? ಇಲ್ಲಿದೆ ನೋಡಿ! ಹಾಗಿದ್ರೆ ಪಟಾಕಿ ಮಾರಾಟ ಮಾಡುವ ಮಳಿಗೆಗಳ ನಿಬಂಧನೆಗಳು ಏನು? -ಹಸಿರು ಪಟಾಕಿ ಮಾರುವುದು ಕಡ್ಡಾಯ, -ಹಸಿರು ಪ್ಯಾಕೆಟ್‌ಗಳ ಮೇಲೆ ಹಸಿರು ಪಟಾಕಿ ಚಿಕ್ಕ ಕ್ಯೂಆರ್ ಕೋಡ್ ಕಡ್ಡಾಯ -ಮಳಿಗೆಗಳ ವಿಸ್ತೀರ್ಣ 10×10 ಅಡಿ ಸೀಮಿತ -ನಿಗದಿಗಿಂತ ಹೆಚ್ಚು ಪ್ರಮಾಣದ ಪಟಾಕಿ ದಾಸ್ತಾನು ಮಾಡುವಂತಿಲ್ಲ -ಸಾಧ್ಯವಾದಷ್ಟೂ ಬೆಂಕಿ ತಡೆಯುವ ಉಪಕರಣಗಳನ್ನೇ ಬಳಸಿ ಮಳಿಗೆ ನಿರ್ಮಿಸಬೇಕು -ಮಳಿಗೆ ಮುಂಭಾಗ ಹಾಗೂ ಹಿಂಭಾಗ ಪ್ರವೇಶಿಸುವ ಅವಕಾಶ ಇರಬೇಕು -ಪ್ರತಿ ಮಾರಾಟ ಮಳಿಗೆಗೆ 3 ಮೀಟರ್…
ರಾಮನಗರ: ಬೆಂಗಳೂರು ಹೊರವಲಯದ ರಾಮನಗರ ಜಿಲ್ಲೆ ಬಿಡದಿಯ ಟೊಯೋಟಾ ತಾಂತ್ರಿಕ ತರಬೇತಿ ಸಂಸ್ಥೆಯ ವಿಸ್ತರಣೆ ಘಟಕದ (TTTI) ಉದ್ಘಾಟನೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಶುಕ್ರವಾರ ಉದ್ಘಾಟಿಸಿದರು. ಸಚಿವ ಮಂಕಾಳ ವೈದ್ಯ, ಸಂಸದ ಡಿ ಕೆ ಸುರೇಶ್, ಶಾಸಕ ಎಚ್ ಸಿ ಬಾಲಕೃಷ್ಣ, ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಟೊಯೋಟಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಸುದೀಪ್ ದಾಲ್ವಿ, ಕಾರ್ಯನಿರ್ವಾಹಕ ಉಪಾಧ್ಯಕ್ಷ ಸ್ವಪನೇಶ್ ಮಾರು ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.
ದಾವಣಗೆರೆ: ದಾವಣಗೆರೆಯಲ್ಲಿ ಪಂಚಮಸಾಲಿ 2A ಮೀಸಲಾತಿ ಹೋರಾಟ ಆರಂಭಗೊಂಡಿದೆ. ದಾವಣಗೆರೆ ರಾಷ್ಟ್ರೀಯ 48 ರಲ್ಲಿ ಇಷ್ಟ ಲಿಂಗಪೂಜೆ ಪೂಜೆ ಮೂಲಕ ಬಾಡಾ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. 2A ಮೀಸಲಾತಿಗಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ 7ನೇ ಹಂತದ ಪ್ರತಿಭಟನೆಯಾಗಿದ್ದು, ಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅನುಪಸ್ಥಿತಿಯಲ್ಲಿ ಮನವಿ ಸ್ವೀಕರಿಸಿದರು. ಪಂಚಮಸಾಲಿ ಸಮಾಜದ ನೂರಾರು ಜನರು ಭಾಗಿಯಾಗಿದ್ದರು.
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರಿನಿಂದ ಕರಾವಳಿ ಭಾಗಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಮೈಸೂರು-ಬೆಂಗಳೂರು -ಮಂಗಳೂರು ವಿಶೇಷ ರೈಲು ಸಂಚರಿಸಲಿದೆ. ದೀಪಾವಳಿ ಹಬ್ಬದ ಮುಂಚಿನ ದಿನದಂದು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ವಿಶೇಷ ರೈಲು ಮೈಸೂರು-ಮಂಗಳೂರು ರೈಲು ಬೆಂಗಳೂರು ಮಾರ್ಗವಾಗಿ ಒಂದು ಟ್ರಿಪ್ ಸಂಚಾರ ಮಾಡುತ್ತದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. Mysore-Bangalore-Mangalore special train for passengers going to coastal areas ರೈಲು ನಂಬರ್ 07303 ಮೈಸೂರಿನಿಂದ ಮಂಗಳೂರಿಗೆ ನವೆಂಬರ್ 10 ರಂದು ರಾತ್ರಿ 8.30ಕ್ಕೆ ಮೈಸೂರಿನಿಂದ ಹೊರಟು ನವೆಂಬರ್ 11 ರಂದು ಬೆಳಿಗ್ಗೆ 9.40 ಕ್ಕೆ ಮಂಗಳೂರು ತಲುಪಲಿದೆ. ರೈಲು ಮಾರ್ಗದಲ್ಲಿ ಮಂಡ್ಯ, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ,ಪುತ್ತೂರು, ಬಂಟ್ವಾಳದಲ್ಲಿ ನಿಲುಗಡೆಯಾಗಲಿದೆ.
ಎರಡು ಬಾರಿ ಬಿಗ್ ಬಾಸ್ ಸ್ಪರ್ಧಿಯಾಗಿ ರಂಜಿಸಿರುವ ನಟಿ ದೀಪಿಕಾ ದಾಸ್ (Deepika Das) ಯಾಕೋ ಬಿಗ್ ಬಾಸ್ ಮೇಲೆ (Bigg Boss Kannada) ಕೋಪಿಸಿಕೊಂಡಿದ್ದಾರೆ. ಬಿಗ್ ಬಾಸ್ ಸೀಸನ್ ಹತ್ತರ ಕಂಟೆಸ್ಟೆಂಟ್ (Contestant) ಬಗ್ಗೆ ಅವರು ಬಗ್ಗೆ ಆಗಿದ್ದಾರೆ. ಜೊತೆಗೆ ತಮ್ಮ ಮನದಾಳದ ಅಭಿಪ್ರಾಯವನ್ನೂ ಅವರು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಎರಡೆರಡು ಬಾರಿ ಬಿಗ್ ಬಾಸ್ ಮನೆಯೊಳಗೆ ಹೋಗಲು ಅವಕಾಶ ಸಿಗುವುದು ತುಂಬಾ ವಿರಳ. ಅಂಥದ್ದೊಂದು ಅವಕಾಶವನ್ನು ದೀಪಿಕಾ ಪಡೆದುಕೊಂಡಿದ್ದರು. ಎರಡೂ ಬಾರಿಯೂ ಅವರು ಉತ್ತಮ ಕಂಟೆಸ್ಟೆಂಟ್ ಆಗಿಯೇ ಜನಪ್ರಿಯತೆ ಪಡೆದರು. ಹಾಗಾಗಿ ಈ ಬಾರಿಯ ಕಂಟೆಸ್ಟೆಂಟ್ ಬಗ್ಗೆ ಅವರು ಕೋಪವಿದೆ. ಅಲ್ಲದೇ, ದೊಡ್ಮನೆಯ ಸದಸ್ಯರು ಆಡುತ್ತಿರುವ ಟಾಸ್ಕ್ ಬಗ್ಗೆ ಅವರಿಗೆ ಅಸಮಾಧಾನವಿದೆ. ಹಾಗಾಗಿಯೇ ಅವರು ಸೋಷಿಯಲ್ ಮೀಡಿಯಾದಲ್ಲಿ ತಮಗೆ ಅನಿಸಿದ್ದನ್ನು ಬರೆದುಕೊಂಡಿದ್ದಾರೆ. ಬಿಗ್ ಬಾಸ್ ಸ್ಪರ್ಧಿಗಳಿಂದ ಇಂತಹ ಹುಚ್ಚುತನ, ಸಂವೇದನಾರಹಿತ ನಡೆ ಮತ್ತು ಅಸಹಿಷ್ಣುತೆಯ ವರ್ತನೆಯನ್ನು ಸಹಿಸಿಕೊಳ್ಳಲು ಅಸಾಧ್ಯ. ನಾನು ಮಾಜಿ ಸ್ಪರ್ಧಿ ಆಗಿರುವುದರಿಂದ ಯಾರನ್ನು ದೂಷಿಸಬೇಕು…
ಬೆಂಗಳೂರು: ಇಲ್ಲಿನ ಉತ್ತರ ಲೋಕಸಭಾ ಕ್ಷೇತ್ರಕ್ಕೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಬಂದರೆ ಸ್ವಾಗತ ಮಾಡ್ತೀನಿ. ಸುಮಲತಾ ಸೇರಿದಂತೆ ಯಾರೇ ಬೆಂಗಳೂರು ಉತ್ತರದ ಅಭ್ಯರ್ಥಿಯಾದರೂ ಅವರ ಪರ ಸಂತೋಷವಾಗಿ ಕೆಲಸ ಮಾಡ್ತೀನಿ ಅಂತ ಮಾಜಿ ಸಿಎಂ, ಸಂಸದ ಸದಾನಂದಗೌಡ (DV Sadananda Gowda) ಸ್ಪಷ್ಟಪಡಿಸಿದ್ದಾರೆ. ಚುನಾವಣೆ ರಾಜಕೀಯ ನಿವೃತ್ತಿ ಕುರಿತು ಮಾತಾನಾಡಿದ ಅವರು, ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡುವ ನಿರ್ಧಾರ ನನ್ನ ಸ್ವಂತ ನಿರ್ಧಾರ ಯಾರು ನನ್ನ ಮೇಲೆ ಒತ್ತಡ ಹಾಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನನ್ನ ಚುನಾವಣೆ (Elections) ರಾಜಕೀಯ ನಿವೃತ್ತಿ ನಿರ್ಧಾರ ದಿಢೀರ್ ನಿರ್ಧಾರ ಅಲ್ಲ. ಕಳೆದ ಚುನಾವಣೆಯಲ್ಲಿಯೇ ನಿವೃತ್ತಿ ಘೋಷಣೆ ಮಾಡಿದ್ದೆ. ಅದರಂತೆ ಪಕ್ಷಕ್ಕಾಗಿ ನಿವೃತ್ತಿ ಘೋಷಣೆ ಮಾಡಿದ್ದೇನೆ. ಯುವಕರಿಗೆ ಅವಕಾಶ ಕೊಡುವ ನಿಟ್ಟಿನಲ್ಲಿ ನಿವೃತ್ತಿ ಘೋಷಣೆ ಮಾಡಿದ್ದೇನೆ. ಇನ್ಮುಂದೆ ಪಕ್ಷದ ಕೆಲಸ ಮಾಡಿಕೊಂಡು ಇರುತ್ತೇನೆ ಎಂದರು.
ಬೆಂಗಳೂರು: ಅಡುಗೆ ಮನೆಯನ್ನೇ ಡ್ರಗ್ಸ್ ತಯಾರಿಸುವ ಕಾರ್ಖಾನೆಯನ್ನಾಗಿ ಮಾಡಿಕೊಂಡಿದ್ದ ನೈಜೀರಿಯಾದ ಪ್ರಜೆಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ನೈಜೀರಿಯಾ ಪ್ರಜೆ ಬೆಂಜಮಿನ್ ಅವಲಹಳ್ಳಿಯ ತನ್ನ ಮನೆಯ ಕಿಚನ್‌ನಲ್ಲಿ ಕಚ್ಚಾ ಪದಾರ್ಥ ಬಳಸಿಕೊಂಡು ಸ್ಟೌ ಮೇಲಿಟ್ಟು ಬೆಂಕಿ ಹೊತ್ತಿಸಿ, ದೋಸೆಯ ರೀತಿ ಮಾಡಿಕೊಳ್ತಿದ್ದ. ಆ ಬಳಿಕ ಪ್ರೆಶರ್ ಕುಕ್ಕರ್‌ಗೆ (Pressure Cooker) ಪೈಪ್ ಅಳವಡಿಸಿ ಆವಿಯಿಂದ ಕ್ರಿಸ್ಟಲ್ ಬರುವಂತೆ ಮಾಡಿ ಎಂಡಿಎಂಎ (MDMA) ತಯಾರು ಮಾಡುತ್ತಿದ್ದ. ಸಿಸಿಬಿಯ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ರಾಮಮೂರ್ತಿ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರಂಭದಲ್ಲಿ ಆರೋಪಿ ಬಳಿ 100 ಗ್ರಾಂ ಎಂಡಿಎಂಎ ಪತ್ತೆಯಾಗಿದೆ. ಆರೋಪಿ ಎಲ್ಲಿಂದ ಎಂಡಿಎಂಎ ತರಿಸುತ್ತಿದ್ದಾನೆ ಎಂದು ಪರಿಶೀಲನೆ ನಡೆಸಿದ ವೇಳೆ ಬೆಂಜಮಿನ್ ವಾಸವಿದ್ದ ಮನೆಯಲ್ಲೇ ಎಂಡಿಎಂಎ ಕ್ರಿಸ್ಟಲ್ ತಯಾರಿಸುತಿದ್ದ ವಿಚಾರ ಬೆಳಕಿಗೆ ಬಂದಿದೆ.
ಬೆಂಗಳೂರು: ಬಿಜೆಪಿ ವಿರುದ್ಧ ಎಸ್.ಟಿ.ಸೋಮಶೇಖರ್ ಅಸಮಾಧಾನ ವಿಚಾರ ‘ಅವರಿಗೆ ನಾನು ಜಾಮೂನು ಕೊಟ್ಟಿಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘S.T.ಸೋಮಶೇಖರ್ರನ್ನು ನಾನೇ ಪಕ್ಷಕ್ಕೆ ಕರೆದುಕೊಂಡು ಬಂದಿದ್ದು, ಅಂದು ಅಯ್ಯಪ್ಪ ದೇಗುಲಕ್ಕೆ ಕರೆದೊಯ್ದು ಪ್ರಸಾದ ಕೊಟ್ಟಿದ್ದೆ ಅಷ್ಟೇ, ನಾನು ಅಂತೂ ಜಾಮೂನು ಕೊಟ್ಟಿಲ್ಲ ಎಂದರು. ಗುರುವಾರ ಮಾತನಾಡಿದ ‘S.T.ಸೋಮಶೇಖರ್ ಬಿಜೆಪಿಯವರು ಪಕ್ಷಕ್ಕೆ ಬರುವಾಗ ಜಾಮೂನು ಕೊಡುತ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ ಎಂದು ಸ್ವಪಕ್ಷದ ವಿರುದ್ಧವೇ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಿಡಿಕಾರಿದರು. ನಾನು ಕಾಂಗ್ರೆಸ್‌ನಲ್ಲಿದ್ದವನು. ಅವರಾಗೆ ಪಕ್ಷಕ್ಕೆ ಸೇರಿಸಿಕೊಂಡರು. ಈಗ ಎಸ್.ಟಿ.ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ. ನನ್ನನ್ನ ಪಕ್ಷ ಬಿಡಿಸಲು ರೆಡಿಯಾಗಿದ್ದಾರೆ. ನಾನು ಕ್ಷೇತ್ರದ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಹತ್ತಿರ ಹೋಗುತ್ತೇನೆ. ಇದರಲ್ಲಿ ತಪ್ಪೇನಿದೆ? ಜೊತೆಗೆ ನಾನು ಸಿಎಂ, ಡಿಸಿಎಂ ಹೊಗಳುವುದನ್ನು ಸಹಿಸುತ್ತಿಲ್ಲ. ನನ್ನ ಕಚೇರಿಯಿಂದ ಕಾಂಗ್ರೆಸ್ ಗ್ಯಾರಂಟಿಯಿಂದ ಫಾಲೋಅಪ್ ಮಾಡಿದ್ದೇನೆ. ಇದರಿಂದ ನನ್ನ ಕ್ಷೇತ್ರದ…