ಬೆಂಗಳೂರು: ವಿರಾಟ್ ಪತ್ನಿ ಅನುಷ್ಕಾ ಶರ್ಮಾ ಅವರು ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಎನ್ನುವ ಸುದ್ದಿ ಕೆಲ ತಿಂಗಳಿಂದ ಕೇಳಿ ಬರುತ್ತಲೇ ಇದೆ. ಈ ಬಗ್ಗೆ ಅನುಷ್ಕಾ ಶರ್ಮಾ ಆಗಲೀ, ವಿರಾಟ್ ಕೊಹ್ಲಿ ಆಗಲಿ ಸ್ಪಷ್ಟನೆ ನೀಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಹೀಗೊಂದು ಚರ್ಚೆಗಳು ನಡೆಯುತ್ತಲೆ ಇದೆ. ಸದ್ಯ ಇದಕ್ಕೆ ಸಂಬಂಧಿಸಿದಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್ ಕಾಣಿಸಿದೆ. ಭಾರತ ಹಾಗೂ ನೆದರ್ಲ್ಯಾಂಡ್ ಮ್ಯಾಚ್ ಬೆಂಗಳೂರಿನಲ್ಲಿ ಇದೆ. ಇದಕ್ಕಾಗಿ ಭಾರತ ತಂಡ ಬೆಂಗಳೂರಿಗೆ ಆಗಮಿಸಿದೆ. ಬೆಂಗಳೂರಿನ ಹೋಟೆಲ್ ಒಂದರಲ್ಲಿ ವಿರಾಟ್ ಉಳಿದುಕೊಂಡಿದ್ದಾರೆ. ಹೋಟೆಲ್ನಲ್ಲಿ ವಿರಾಟ್ ಹಾಗೂ ಅನುಷ್ಕಾ ಕೈ ಕೈ ಹಿಡಿದು ಸಾಗುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್ ಗಮನ ಸೆಳೆದಿದೆ.
Author: AIN Author
ಮಂಗಳೂರು: ಪಟಾಕಿ ಮಳಿಗೆ ಹಾಕಲು ಹೊಸ ನಿಯಮಾವಳಿ ಹಾಕಿದ್ದು ಕಾಂಗ್ರೆಸ್ ಸರ್ಕಾರ ಸೃಷ್ಟಿಸಿದ ಹುನ್ನಾರ ಎಂದು ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಗಂಭೀರ ಆರೋಪ ಮಾಡಿದ್ದಾರೆ. https://ainlivenews.com/knee-pain-treatment-joint-pain-treatment/ ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿ ಮಾಡಲಾಗುತ್ತಿದೆ. ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಅಡ್ಡಿ ಮಾಡುತ್ತಿದ್ದಾರೆ. ಈ ಮೂಲಕ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು ವಾಗ್ದಾಳಿ ಮಾಡಿದರು.
ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ (State Government) ಹೊರಡಿಸಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ (Karnataka High court) ಗ್ರೀನ್ ಸಿಗ್ನಲ್ ನೀಡಿದೆ. ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋಟ್ ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿದೆ. ಸರ್ಕಾರದ ಆದೇಶವನ್ನ ಎತ್ತಿಹಿಡಿದೆ. ಮರುಪರೀಕ್ಷೆ ನಡೆಸದಂತೆ ಕೋರ್ಟ್ ಮೊರೆಹೋಗಿದ್ದ ಅಭ್ಯರ್ಥಿಳಿಗೆ ನಿರಾಸೆಯಾಗಿದೆ. ಅಂದರೆ 545 ಪಿಎಸ್‌ಐಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಮತ್ತು ಬಳಿಕ ಪ್ರಕಟಿಸಿದ ನೇಮಕಾತಿ ಪಟ್ಟಿಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ಹೈಕೋರ್ಟ್ ಅವಕಾಶ ಮಾಡಿಕೊಟ್ಟಿದೆ. ನ್ಯಾಯಮೂರ್ತಿಗಳಾದ ಪಿ ಎಸ್ ದಿನೇಶ್ ಕುಮಾರ್ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಇದು ಮರುಪರೀಕ್ಷೆ ಬೇಡ, ಕಳಂಕಿತರನ್ನು ಹೊರತುಪಡಿಸಿ ನೇಮಕಾತಿ ಪಟ್ಟಿಯನ್ನು ಪ್ರಕಟಿಸಲು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಕೋರಿದ್ದ ಅಭ್ಯರ್ಥಿಗಳ ಪರ ದಾವೆಯನ್ನು ತಿರಸ್ಕರಿಸಲಾಗಿದೆ. ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ…
ಕನ್ನಡ ಸಿನಿಮಾ ರಂಗದ ಹೆಸರಾಂತ ನಟ ವಸಿಷ್ಠ ಸಿಂಹ (Vasishtha Simha) ಹಾಗೂ ನಟಿ ಹರಿಪ್ರಿಯಾ (Haripriya) ಇಂದು ಹಾಸನಕ್ಕೆ ತೆರಳಿ ಹಾಸನಾಂಬೆ (Hassanambe) ದೇವಿ ದರ್ಶನ ಪಡೆದರು. ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತ ಸಾಗರ ಹರಿದು ಬಂದ ಹಿನ್ನಲೆಯಲ್ಲಿ, ಕಳೆದ ಮೂರು ಗಂಟೆಯಿಂದ ಪ್ರವಾಸಿ ಮಂದಿರದಲ್ಲಿದ್ದ ವಶಿಷ್ಠ ಸಿಂಹ ದಂಪತಿ ಕಾಯ್ದರು. ಮಧ್ಯಾಹ್ನ 2.30 ರಿಂದ ನೈವೇದ್ಯ ಕಾರಣ ಗರ್ಭಗುಡಿ ಬಂದ್ ಮಾಡಿದ್ದರು ಅರ್ಚಕರು. ಗರ್ಭಗುಡಿ ಬಾಗಿಲು ತೆರೆಯುತ್ತಲೆ ಪ್ರವಾಸಿ ಮಂದಿರದಿಂದ ದೇವಿ ದರ್ಶನಕ್ಕೆ ಪತ್ನಿಯೊಂದಿಗೆ ಬಂದು ಹಾಸನಾಂಬೆಯ ದರ್ಶನ ಪಡೆದರು ವಸಿಷ್ಠ ಸಿಂಹ. ಮೊದಲನೆ ಸರಿ ಬಂದಿರುವುದು ತುಂಬಾ ಖುಷಿಯಾಗಿದೆ. ಮದುವೆಯಾದ ಮೇಲೆ ಇವರ ಜೊತೆ ಬಂದಿದ್ದೇನೆ. ಎರಡು ವರ್ಷದ ಹಿಂದೆ ಇರುವ ಬಂದಾಗ ಹೇಗಾಯ್ತ ದೇವಿ ದರ್ಶನ ಅಂಥ ಕೇಳಿದ್ದೆ. ಈಗ ಒಟ್ಟಿಗೆ ಬಂದಿದ್ದೇವೆ, ತುಂಬಾ ಖುಷಿಯಾಯ್ತು. ಪುನಃ ಪುನಃ ದರ್ಶನ ಭಾಗ್ಯ ಕೊಡಮ್ಮ ಅಂತ ದೇವರ ಬಳಿ ಬೇಡ್ಕಂಡೆ. ಪ್ರತಿವರ್ಷ ಬರೋಣ ಅಂತ ಅಂದುಕೊಂಡಿದ್ದೇವೆ. ತಾಯಿ…
ಬಿಗ್’ ಮನೆಯಲ್ಲಿ (Bigg Boss House) ಮತ್ತೊಂದು ಚೆಂದದ ಜೋಡಿಯಾಗಿ ನಮ್ರತಾ ಗೌಡ (Namratha Gowda) ಮತ್ತು ಸ್ನೇಹಿತ್ (Snehith Gowda) ಹೈಲೆಟ್ ಆಗಿದ್ದಾರೆ. ನಮ್ರತಾ ಹಿಂದೆ ಹಿಂದೆ ಹೋಗೋದು. ತುಂಟಾಟ ಆಡೋದು ಈಗಂತೂ ಸ್ನೇಹಿತ್‌ಗೆ ಟಾಸ್ಕ್ ಆಗಿ ಹೋಗಿದೆ. ಹೀಗಿರುವಾಗ ನಮ್ರತಾ ಜೊತೆ ರೊಮ್ಯಾನ್ಸ್ ಮಾಡೋದು ಇಷ್ಟ ಎಂದಿದ್ದಾರೆ ಸ್ನೇಹಿತ್. ಮೊನ್ನೆಯಷ್ಟೇ ಕಿಚ್ಚನ ಪಂಚಾಯಿತಿಯಲ್ಲಿ ನಮ್ರತಾ ಕಡೆಯಿಂದ ಎಂದೂ ರಾಖಿ ಕಟ್ಟಿಸಿಕೊಳ್ಳೋದಿಲ್ಲ ಎಂದು ನೇರವಾಗಿ ಸುದೀಪ್ (Sudeep) ಮುಂದೆ ಸ್ನೇಹಿತ್ ಹೇಳಿದ್ದರು. ಆಗ ಕಿಚ್ಚ, ಸರಿ ನಿಮಗೊಂದು ವಾರ ಕಾಲಾವಕಾಶ ಕೊಡುತ್ತೇನೆ ಅದೇನು ಮಾಡ್ತಿರೋ ಮಾಡಿ. ನಮ್ರತಾನಾ ಒಪ್ಪಿಸಿ ಎಂದು ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ಅದನ್ನೇ ಸ್ನೇಹಿತ್ ಸಿರಿಯಸ್ ಆಗಿ ಪರಿಣಿಸಿದಂತಿದೆ. ಈಗ ನಮ್ರತಾಗೆ ಸ್ನೇಹಿತ್ ಕಾಳು ಹಾಕೋಕೆ ಶುರು ಮಾಡಿದ್ದಾರೆ. ಅವರು ಅದೆಷ್ಟೇ ಹುಸಿ ಮುನಿಸು ತೋರಿಸಿದ್ದರು. ನಮ್ರತಾರನ್ನ ಬಿಟ್ಟು ಬಿಡದೇ ಸ್ನೇಹಿತ್ ಕಾಡ್ತಿದ್ದಾರೆ. ಇದೀಗ ನಮ್ರತಾ ಮುಂದೆ ರೊಮ್ಯಾನ್ಸ್ ಬಗ್ಗೆ ಸ್ನೇಹಿತ್ ಮಾತೆತ್ತಿದ್ದಾರೆ. ನೀವು ಬಂದ ಮೇಲೆ…
ತಾತ ಮೊಮ್ಮಗನ ಸುತ್ತ ನಡೆಯುವ ಕಥಾಹಂದರ ಇಟ್ಟುಕೊಂಡು ಅಶೋಕ್ ಕಡಬ ಅವರು ನಿರ್ದೇಶಿಸಿರುವ ಚಿತ್ರ “ಸತ್ಯಂ” (Satyam) ಇದೀಗ ಬಿಡುಗಡೆಯ ಹಂತಕ್ಕೆ ಬಂದಿದೆ. ಶ್ರೀ ಮಾತಾ ಕ್ರಿಯೇಶನ್ಸ್ ಮೂಲಕ ಮಾಂತೇಶ್ ವಿಕೆ. ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಆಧ್ಯಾತ್ಮಕ ಚಿಂತಕರಾದ ಜಂಬುನಾಥ್ ಸ್ವಾಮಿ ಅವರು ಈ ಚಿತ್ರದ ಟೀಸರ್ (Teaser) ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕ ಮಾಂತೇಶ್. ವಿ.ಕೆ. ಮಾತನಾಡುತ್ತಾ, ನಮ್ಮ ಸಂಸ್ಥೆಯ ಎರಡನೇ ಚಿತ್ರವಿದು. ಈ ಹಿಂದೆ ಮಹಾಮಹಿಮ ಲಡ್ಡು ಮುತ್ಯ ಎಂಬ ಚಿತ್ರ ನಿರ್ಮಿಸಿದ್ದೆ. ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಮೂಡಿಬಂದಿದೆ. ನಾನೊಬ್ಬ ಸಿವಿಲ್ ಕಾಂಟ್ರಾಕ್ಟರ್ ಆಗಿದ್ದರೂ ಸಿನಿಮಾ ಮೇಲೆ ತುಂಬಾ ಆಸಕ್ತಿ, ಪ್ರೀತಿಯಿದೆ. ನಮ್ಮ ಬ್ಯಾನರ್ ಮೂಲಕ ಸದಭಿರುಚಿಯ ಚಿತ್ರವನ್ನು ನೀಡುವುದು ನಮ್ಮ ಉದ್ದೇಶ. ಅಶೋಕ್ ಕಡಬ ಅವರು ಈ ಕಥೆ ತಂದಾಗ ವಿಶೇಷ ಅನಿಸಿತು. ಎರಡು ಕಾಲಘಟ್ಟಗಳಲ್ಲಿ ನಡೆಯೋ ಕಥೆಯಿದು. ಜಮೀನ್ದಾರ್ ಕುಟುಂಬದ ಎಳೆಯೊಂದಿಗೆ ಪ್ರಸ್ತುತ ಬದುಕಿನ…
ಮೈಸೂರು: ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟ ಮತ್ತು ಬಳಕೆ ನಿಯತ್ರಿಸುವ ಕುರಿತು ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ. ಪಟಾಕಿಗಳ ಸಿಡಿತದಿಂದ ಉಂಟಾಗುವ ಶಬ್ಧ ಹಾಗು ಸಾರ್ವಜನಿಕ ಆಸ್ತಿ ಹಾಗೂ ಆರೋಗ್ಯ ಸಂರಕ್ಷಣೆ ಹಿನ್ನೆಲೆಯಲ್ಲಿ ಹಲವು ನಿಯಮ ಜಾರಿ ಮಾಡಿದೆ. https://ainlivenews.com/knee-pain-treatment-joint-pain-treatment/ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಗೆ ನಿಷೇಧ ಹೇರಿದೆ. ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಜೊತೆಗೆ ಕ್ಯೂ ಅರ್ ಕೋಡ್, ಸದರಿ ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯಲ್ಲ ಎಂದು ಹೇಳಿದೆ. ಒಂದು ವೇಳೆ ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮತ್ತು ಬಳಕೆ ಮಾಡಿದರೇ ಕ್ರಮ ಕೈಗೊಳ್ಳಲಾಗುವುದು ಎಂದಿದೆ.
ಅತೀ ಸಣ್ಣ ವಯಸ್ಸಿನಲ್ಲೇ ಸಂಗೀತ ಕ್ಷೇತ್ರಕ್ಕೆ ಧುಮುಕಿ, ಅಪಾರ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ಗಾಯಕ ಡಾರ್ಲಿನ್ ಮೊರೈಸ್ (Darlene Morais), ಜೇಡ ಕಚ್ಚಿಸಿಕೊಂಡು ಸಾವನ್ನಪ್ಪಿದ್ದಾರೆ. ಬ್ರೆಜಿಲಿಯನ್ (Brazilian) ನ ಈ ಗಾಯಕನಿಗೆ (Singer) ಕೇವಲ 28 ವರ್ಷ ವಯಸ್ಸಾಗಿತ್ತು. ಅತೀ ಕಡಿಮೆ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿರುವುದು ಅಭಿಮಾನಿಗಳಿಗೆ ಶಾಕ್ ಆಗಿದೆ. ಜೇಡ ಕಚ್ಚಿದ ದಿನವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಕೂಡ ಪಡೆದಿದ್ದರು. ಮನೆಗೆ ಬಂದ ಬಳಿಕ ತೀವ್ರ ಆಯಾಸದಿಂದ ಬಳಲುತ್ತಿದ್ದರು. ದಿನದಿಂದ ದಿನಕ್ಕೆ ಅವರ ದೇಹದ ಬಣ್ಣ ಕೂಡ ಬದಲಾಗುತ್ತಿದ್ದು, ಮತ್ತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.
ಹುಬ್ಬಳ್ಳಿ: ಬಿಜೆಪಿ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದೆ ಅದನ್ನು ಎತ್ತುವ ಕೆಲಸ ಮಾಡಲಿ. ಒಬ್ಬ ವಿರೋಧಪಕ್ಷದ ನಾಯಕರನ್ನು ನೇಮಿಸಲಾಗದಷ್ಟು ದುಸ್ಥಿತಿಗೆ ಬಂದಿರುವ ಬಿಜೆಪಿಯು ಮುರುಕಲು ಮನೆಯಾಗಿದ್ದು, ಕಾಂಗ್ರೆಸ್‌ಗೆ ನೀತಿ ಪಾಠ ಹೇಳುವು ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಅವರು ಟೀಕಿಸಿದ್ದಾರೆ. ಅವರು ಪತ್ರಿಕಾ ಪ್ರಕಟಣೆ ನೀಡಿ, ಬಿಜೆಪಿಗೆ ರಾಜ್ಯದ ಜನ ಕೇವಲ 66 ಸ್ಥಾನಗಳನ್ನು ನೀಡಿದ್ದಾರೆ. ಅವರ ದುರಾಡಳಿತಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಅವರಿಗೆ ಅದು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ. ನಾಲ್ಕು ಗುಂಪುಗಳಾಗಿವೆ ಎಂದು ಹೇಳುತ್ತಾ ತಿರುಗುತ್ತಿದ್ದಾರೆ. ಇಡೀ ದೇಶದ ಆಡಳಿತದ ಚುಕ್ಕಾಣಿ ಹಿಡಿದಿರುವ ಒಂದು ರಾಷ್ಟ್ರೀಯ ಪಕ್ಷ ಬಿಜೆಪಿಗೆ ರಾಜ್ಯದ ವಿರೋಧ ಪಕ್ಷದ ನಾಯಕರನ್ನು ನೇಮಿಸಲಾಗದಷ್ಟು ದುಸ್ಥಿತಿಗೆ ಬಂದಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆಯುವಂತಾಗಿದೆ. ಬಿಜೆಪಿಯ ಶಾಸಕರುಗಳು ನಾಯಕರುಗಳು ಅವರ ಪಕ್ಷದ ವಿರುದ್ಧವೇ ಮಾಧ್ಯಮಗಳ ಮುಂದೆ ಹರಿ ಹಾಯುತ್ತಿದ್ದಾರೆ. ಅದರ ಬಗ್ಗೆ ಗಮನ ಕೊಡುವುದು ಬಿಟ್ಟು…
ಬೆಂಗಳೂರು: ಅಗ್ನಿಶಾಮಕ ದಳದ ಮೂಲಕ ಮಾಹಿತಿ ಪಡೆದು ಪಟಾಕಿ ಮಾರಾಟಕ್ಕೆ ಲೈಸೆನ್ಸ್ ನೀಡಲಾಗಿದೆ. ಎಲ್ಲೆಲ್ಲಿ ಮಳಿಗೆ ಹಾಕಬೇಕೆಂದು ಬಿಬಿಎಂಪಿ ಅನುಮತಿ ನೀಡಲಿದೆ. ಬೆಂಗಳೂರಲ್ಲಿ ಒಟ್ಟು 62 ಮೈದಾನದಲ್ಲಿ 320 ಪಟಾಕಿ ಅಂಗಡಿಗಳನ್ನು ಹಾಕಲು ಪರವಾನಿಗೆ ನೀಡಲಾಗಿದೆ. 964 ಜನರು ಪಟಾಕಿ ಮಾರಾಟದ ಲೈಸೆನ್ಸ್ಗಾಗಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 263 ಜನರಿಗೆ ಲಾಟರಿ ಮೂಲಕ ಲೈಸೆನ್ಸ್ ನೀಡಲಾಗಿದೆ. ಅನಧಿಕೃತ ಪಟಾಕಿ ಮಾರಾಟ ಪತ್ತೆ ಹಚ್ಚಲು ಟಾಸ್ಕ್ಫೋರ್ಸ್ ರಚಿಸಲಾಗಿದೆ. ಪೊಲೀಸ್, ಅಗ್ನಿಶಾಮಕ, ಬಿಬಿಎಂಪಿ ಸಹಯೋಗದಲ್ಲಿ ಟಾಸ್ಕ್ಫೋರ್ಸ್ ರಚಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಹೇಳಿದರು.