Author: AIN Author

ಗದಗ: ಬರ ಪರಿಸ್ಥಿತಿ ಬಗ್ಗೆ ಗಮನ ಕೊಡಬೇಕಿದ್ದ ತಹಶೀಲ್ದಾರ್ ಧನಂಜಯ್ ಮಾಲಗತ್ತಿ ಅದ್ಧೂರಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಹೌದು ರಾಜ್ಯ ಎಂಥ ಸಂಕಷ್ಟದಲ್ಲಿದೆ ಎಂಬ ಕಿಂಚಿತ್ ಪರಿವೆಯೂ ಅವನಿಗಿದ್ದಂತಿಲ್ಲ. ರೈತರು ಮಳೆಯಿಲ್ಲದೆ ಕಂಗಾಲಾಗಿದ್ದಾರೆ. ರಾಜ್ಯದ ಪ್ರಮುಖ ನಗರಗಳಲ್ಲಿ ಬೇಸಿಗೆಯಲ್ಲಿ ಕುಡಿಯಲು ಸಹ ನೀರು ಸಿಗದ ಆತಂಕವಿದೆ. ರೈತರ ದನಕರುಗಳಿಗೆ ತಿನ್ನಲು ಮೇವಿಲ್ಲ. ಇದರ ಮಧ್ಯೆ ತಹಶೀಲ್ದಾರ್ ಧನಂಜಯ್ ಮಾಲಗತ್ತಿ ಅವರ 48 ನೇ ವರ್ಷದ ಹುಟ್ಟು ಹಬ್ಬವನ್ನ ಸಂಜೆ ತಹಶೀಲ್ದಾರ್ ಕ್ವಾಟರ್ಸ್ ನಲ್ಲಿ ಮಾಡ್ಲಾಗಿದೆ.. ಫಯರ್ ವರ್ಕ್ ಸ್ವಾಗತದೊಂದಿದೆ ತಹಶೀಲ್ದಾರ್ ಸಾಹೇಬರಿಗೆ ಸ್ವಾಗತಿಸಿ ಕೇಕ್ ಕಟ್ ಮಾಡ್ಲಾಗಿದೆ.. ತಹಶೀಲ್ದಾರ್ ಅವರು ಹಾಡು ಹಾಡುವ ಮೂಲಕ ಸಭಿಕರನ್ನ ರಂಜಿಸುವ ಕೆಲಸವನ್ನೂ ಮಾಡಿದ್ದಾರೆ..  ಬರ ಪರಿಸ್ಥಿತಿ ಬಗ್ಗೆ ಗಮನ ಕೊಡಬೇಕಿದ್ದ ತಹಶೀಲ್ದಾರ್ ಸಾಹೇಬರು ಅದ್ಧೂರಿ ಹುಟ್ಟು ಹಬ್ಬದ ಮಾಡ್ಕೊಂಡಿರೋದು ಎಷ್ಟರ ಮಟ್ಟಿಗೆ ಸರಿ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಹುಟ್ಟಿದೆ.‌

Read More

ಬೆಂಗಳೂರು: ವಿಶ್ವ ಸಾರ್ವಜನಿಕ ಸಾರಿಗೆ ದಿನ ಹಿನ್ನಲೆಯಲ್ಲಿ ಇಂದು  ಬಸ್ ಗಳಲ್ಲಿ ಪ್ರಯಾಣ ಮಾಡಿದ ಬೆಂಗಳೂರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ , ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಹಾಗೂ ಸಂಚಾರಿ ಡಿಸಿಪಿ ಕುಲದೀಪ್ ಜೈನ್ ರಿಂದ ಬಸ್ ನಲ್ಲಿ ಪ್ರಯಾಣ ಮಾಡಿದರು. ಸಾರ್ವಜನಿಕ ಸಾರಿಗೆ ಬಳಕೆಯನ್ನ ಪ್ರೋತ್ಸಾಹಿಸಲು ಬಸ್ ನಲ್ಲಿ ಪ್ರಯಾಣ ಮಾಡಿದೆ ಎಂದು ತಿಳಿಸಿದರು.

Read More

ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮೂವರನ್ನು ಮದ್ದೂರು ಪಟ್ಟಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹೌದು ಮಂಡ್ಯದ ಮದ್ದೂರಿನಲ್ಲಿ ಈ ಘಟನೆ ನಡೆದಿದ್ದು, ಸಹಪಾಠಿಗಳೇ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಪುನೀತ್‌ ಎಂಬಾತ ಮೈಸೂರಿನ ಯುವ ದಸರಾದಲ್ಲಿ ಸಂತ್ರಸ್ತೆಯನ್ನು ಪರಿಚಯ ಮಾಡಿಕೊಂಡಿದ್ದ. ಪರಿಚಯದ ಬಳಿಕ ಪ್ರೀತಿ ಮಾಡುವುದಾಗಿ ನಂಬಿಸಿ, ಸಲುಗೆಯನ್ನು ಬೆಳೆಸಿಕೊಂಡಿದ್ದ. ಈ ನಡುವೆ ನವೆಂಬರ್ 4 ರಂದು ಮದ್ದೂರಿನ ಲಾಡ್ಜ್ ಕರೆದುಕೊಂಡು ಹೋಗಿದ್ದ ಕಾಮುಕ, ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದ. ಅತ್ಯಾಚಾರದ ವಿಡಿಯೊ ಮಾಡಿಕೊಂಡ ಕಿರಾತಕರು ಆನಂತರ ಅಪ್ರಾಪ್ತೆ ಮೊಬೈಲ್‌ಗೆ ಕಳುಹಿಸಿ ಕರೆದಾಗ ಬರಬೇಕೆಂದು ಬೆದರಿಕೆ ಹಾಕಿದ್ದಾರೆ. ಇವರ ಕಿರುಕುಳದಿಂದ ಕಂಗಲಾದ ಅಪ್ರಾಪ್ತೆ ನಡೆದಿದ್ದನ್ನು ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಅಪ್ರಾಪ್ತೆ ಪೋಷಕರಿಂದ ದೂರು ದಾಖಲಾದ ಬೆನ್ನಲ್ಲೇ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.

Read More

ಬಳ್ಳಾರಿ: ತುಂಗಭದ್ರಾ ಜಲಾಶಯದ  ಬಲದಂಡೆ ಮೇಲ್ಮಟ್ಟದ ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸುವುದನ್ನು ಖಂಡಿಸಿ ರೈತ ಸಂಘ ಶುಕ್ರವಾರ ಕರೆ ನೀಡಿರುವ ಬಳ್ಳಾರಿ ಬಂದ್‌ ಶುರುವಾಗಿದೆ.  ನೀರಾವರಿ ಸಲಹಾ ಸಮಿತಿಯ ಸಭೆ ಈ ಮೊದಲ ನಿರ್ಣಯದಂತೆ ನ.30ರ ವರೆಗೆ ನೀರು ಹರಿಸಬೇಕೆಂದು ಆಗ್ರಹಿಸಿ ಮಾಧವರೆಡ್ಡಿ ನೇತೃತ್ವದ ರೈತ ಸಂಘ  ಬಳ್ಳಾರಿ ಬಂದ್‌ಗೆ ಕರೆ ನೀಡಿದೆ.  ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನವೆಂಬರ್ ಅಂತ್ಯದವರೆಗೆ ನೀರು ಹರಿಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದರೆ ನಂತರ ಬೆಂಗಳೂರಿನಲ್ಲಿ ನಡೆದ ಮತ್ತೊಂದು ಸಭೆಯಲ್ಲಿ ನ.10ರ ವರೆಗೆ ಮಾತ್ರ ನೀಡಲಿದೆ ಎಂದು ಹೇಳಿರುವುದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ಹಮ್ಮಿಕೊಂಡಿದೆ. https://ainlivenews.com/knee-pain-treatment-joint-pain-treatment/ ಪೆಟ್ರೋಲ್‌ ಬಂಕ್‌, ಹಾಲಿನ ಅಂಗಡಿಗಳು ಸೇರಿ ಅಗತ್ಯ ಸೇವೆಗಳು ಆರಂಭಗೊಂಡಿವೆ. ಹೊಟೇಲ್‌ಗಳು ವಿರಳ ಸಂಖ್ಯೆಯಲ್ಲಿ ತೆರೆದಿವೆ. ಬೀದಿ ಬದಿ ವ್ಯಾಪಾರಸ್ಥರು ವಹಿವಾಟನ್ನು ಬೆಳಿಗ್ಗೆಯಿಂದಲೇ ಆರಂಭಿಸಿದ್ದಾರೆ.  ರೈತ ಸಂಘದ  ಬಂದ್ ಗೆ ವಿವಿಧ ಸಂಘಟನೆಗಳಿಗೆಬೆಂಬಲ ವ್ಯಕ್ತಪಡಿಸಿವೆ.

Read More

ಇಸ್ಲಾಮಾಬಾದ್‌: ಪಾಕಿಸ್ತಾನದ (Pakistan) ಖೈಬರ್ ಪಖ್ತುಂಖ್ವಾದಲ್ಲಿ ಅಪರಿಚಿತರು ಲಷ್ಕರ್-ಎ-ತೊಯ್ಬಾ ಕಮಾಂಡರ್ (Lashkar e Taiba Terrorist) ಅಕ್ರಮ್ ಘಾಜಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಒಂದು ವಾರದ ಅವಧಿಯಲ್ಲಿ ನಡೆದ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನ ಎರಡನೇ ಹತ್ಯೆ ಇದಾಗಿದೆ. ಬಜೌರ್ ಜಿಲ್ಲೆಯಲ್ಲಿ ಬೈಕ್‌ನಲ್ಲಿ ಬಂದ ಪಾಕಿಸ್ತಾನದ ಅಪರಿಚಿತ ವ್ಯಕ್ತಿಗಳು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕ್ರಮ್ ಖಾನ್ ಅಲಿಯಾಸ್ ಘಾಜಿ (Akram Ghazi) 2018-2020 ರ ಅವಧಿಯಲ್ಲಿ ಲಷ್ಕರ್‌ಗೆ ಉನ್ನತ ನೇಮಕಾತಿದಾರರಲ್ಲಿ ಒಬ್ಬನಾಗಿದ್ದ. ಕಳೆದ ಎರಡು ವರ್ಷಗಳಲ್ಲಿ ಕಾಶ್ಮೀರ ಕಣಿವೆಗೆ ಅನೇಕ ಬ್ಯಾಚ್‌ಗಳಲ್ಲಿ ನುಸುಳಿದ ಹಲವಾರು ಭಯೋತ್ಪಾದಕರ ಜವಾಬ್ದಾರಿಯನ್ನು ಹೊತ್ತಿದ್ದ. ಜಮ್ಮು ಮತ್ತು ಕಾಶ್ಮೀರದಲ್ಲಿ 2018 ರ ಸುಂಜ್ವಾನ್ ಭಯೋತ್ಪಾದನಾ ದಾಳಿಯ ಮಾಸ್ಟರ್‌ಮೈಂಡ್‌ಗಳಲ್ಲಿ ಒಬ್ಬನಾಗಿದ್ದ ಖ್ವಾಜಾ ಶಾಹಿದ್‌ನನ್ನು ಭಾನುವಾರ ಅಪಹರಿಸಲಾಗಿತ್ತು. https://ainlivenews.com/knee-pain-treatment-joint-pain-treatment/ ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಶಿರಚ್ಛೇದನ ಮಾಡಲಾಯಿತು. ಘಾಜಿ ಹತ್ಯೆಯಲ್ಲಿ ವಿವಿಧ ಭಯೋತ್ಪಾದಕ ಗುಂಪುಗಳು ಸೇರಿದಂತೆ ಸ್ಥಳೀಯ ವಿರೋಧಿಗಳ ಪಾತ್ರ ಇರಬಹುದು ಎನ್ನಲಾಗಿದೆ.…

Read More

ಶಿವಮೊಗ್ಗ: ಕೆಇಎ ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ತಪ್ಪಿಸಿಕೊಂಡಿರುವ ಆರ್​ಡಿ ಪಾಟೀಲ್ ಕುರಿತು ಮಾತನಾಡಿದ ಮಾಜಿ ಗೃಹಸಚಿವ, ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಎಲ್ಲಾ ಪರೀಕ್ಷೆಗಳಲ್ಲೂ ಆರ್​.ಡಿ.ಪಾಟೀಲ್​ ಅಕ್ರಮ ಮಾಡಿದ್ದಾನೆ. ನಮ್ಮ ಸರ್ಕಾರ ಇದ್ದಾಗ ಹೆಡೆಮುರಿ ಕಟ್ಟಿ ಅರೆಸ್ಟ್ ಮಾಡಿದ್ದೆವು. ಬಳಿಕ ಜಾಮೀನಿನ ಮೇಲೆ ಆರ್​.ಡಿ.ಪಾಟೀಲ್ ಹೊರ ಬಂದಿದ್ದ. https://ainlivenews.com/knee-pain-treatment-joint-pain-treatment/ ಈಗ R.D.ಪಾಟೀಲ್​ ತಪ್ಪಿಸಿಕೊಂಡು ಹೋಗಲು ಬಿಟ್ಟಿದ್ಯಾರು? ಪೊಲೀಸರ ಕೈವಾಡವಿಲ್ಲದೆ ಆತ ತಪ್ಪಿಸಿಕೊಂಡು ಹೋಗಲು ಆಗಲ್ಲ. ಆರ್.ಡಿ.ಪಾಟೀಲ್ ರಕ್ಷಣೆಗೆ ಪ್ರಿಯಾಂಕ್ ಖರ್ಗೆ ನಿಂತಿದ್ದಾರೆ. ಪರೀಕ್ಷಾ ಕೇಂದ್ರ ಸೆಲೆಕ್ಟ್​ ಮಾಡುವುದು ಸಹ ಆರ್​.ಡಿ.ಪಾಟೀಲ್​​. ಇಂತಹ ವ್ಯಕ್ತಿಗಳಿಗೆ ರಕ್ಷಣೆ ಕೊಡುವುದು ಕಾಂಗ್ರೆಸ್ ಸರ್ಕಾರದವರು. ಪೊಲೀಸರ ವಿರುದ್ಧವೂ ತನಿಖೆ ಮಾಡಲಿ ಎಂದರು.

Read More

ಬೆಂಗಳೂರು: ವಿಶ್ವಕಪ್ (World Cup) ಟೂರ್ನಿಯಲ್ಲಿ ಅದ್ಬುತ ಪ್ರದರ್ಶನದ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದ ಕರ್ನಾಟಕ ಮೂಲದ ನ್ಯೂಜಿಲೆಂಡ್ ಆಟಗಾರ ರಚಿನ್ ರವೀಂದ್ರ (Rachin Ravindra) ಅವರ ಅಜ್ಜಿ ದೃಷ್ಟಿ ತೆಗೆಯುವ ವೀಡಿಯೋ ವೈರಲ್ ಆಗಿದೆ. ಶ್ರೀಲಂಕಾ ಪಂದ್ಯದ ನಂತರ ಬೆಂಗಳೂರಿನಲ್ಲೇ ಇರುವ ತಮ್ಮ ಅಜ್ಜಿ ಮನೆಗೆ ಭೇಟಿ ರಚಿನ್ ಭೇಟಿ ನೀಡಿದ್ದಾರೆ. ಈ ವೇಳೆ ತಮ್ಮ ಮೊಮ್ಮಗನಿಗೆ ಯಾರ ದೃಷ್ಟಿಯೂ ಬೀಳಬಾರದು ಎಂದು ಅಜ್ಜಿ ಪ್ರೀತಿಯಿಂದ ದೃಷ್ಟಿ ತೆಗೆದಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಮೊದಲ ಬಾರಿಗೆ ವಿಶ್ವಕಪ್ ಆಡುತ್ತಿರುವ ರಚಿನ್ ಈ ಆವೃತ್ತಿಯಲ್ಲಿ ಒಟ್ಟು ಮೂರು ಶತಕ ಬಾರಿಸಿ ಕ್ರಿಕೆಟ್ ದಂತಕತೆ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿದಂತೆ ಅನೇಕ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ. ಸದ್ಯ 565 ರನ್ ಗಳಿಸಿರುವ ಅವರು ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

Read More

ಬೆಂಗಳೂರು: ಸಂಘಟಿತ ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಪ್ರದರ್ಶನದಿಂದ ನ್ಯೂಜಿಲೆಂಡ್‌ (New Zealand) ತಂಡವು ಶ್ರೀಲಂಕಾ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿ, ಸೆಮಿಫೈನಲ್‌ ಹಾದಿಯನ್ನು ಸುಲಭವಾಗಿಸಿಕೊಂಡಿದೆ. ಆದ್ರೆ ಪಾಕಿಸ್ತಾನ (Pakistan) ತಂಡಕ್ಕೆ ಇದು ನುಂಗಲಾರದ ತುತ್ತಾಗಿದೆ. ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಪಾಕಿಸ್ತಾನ ತಂಡ 275+ ರನ್‌ಗಳ ಅಂತರದಿಂದ ಇಂಗ್ಲೆಂಡ್‌ (England) ತಂಡವನ್ನು ಸೋಲಿಸಬೇಕಿದೆ. ಅಥವಾ 2.3 ಓವರ್‌ಗಳಲ್ಲಿ ಇಂಗ್ಲೆಂಡ್‌ ಟಾರ್ಗೆಟ್‌ ಅನ್ನು ಚೇಸ್‌ ಮಾಡಬೇಕಿದೆ ಎಂದು ಕ್ರಿಕೆಟ್‌ ತಜ್ಞರು ಅಂದಾಜಿಸಿದ್ದಾರೆ. ಆದ್ರೆ ಇಂಗ್ಲೆಂಡ್‌ ತಂಡವನ್ನು ಅಷ್ಟು ಸುಲಭದಲ್ಲಿ ಸೋಲಿಸುವುದು ಪಾಕ್‌ಗೆ ಅಸಾಧ್ಯವಾಗಿದ್ದು, ಬಹುತೇಕ ಸೆಮಿ ಫೈನಲ್‌ ಕನಸು ಭಗ್ನ ಎಂದೇ ವಿಶ್ಲೇಷಿಸಲಾಗುತ್ತಿದೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಕಿವೀಸ್‌, ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಶ್ರೀಲಂಕಾಗೆ (Sri Lanka) ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ 171 ರನ್‌ಗಳಿಗೆ ಸರ್ವಪತನ ಕಂಡಿತು. ಈ ಗುರಿ ಬೆನ್ನತ್ತಿದ್ದ ಕಿವೀಸ್‌ 23.2 ಓವರ್‌ಗಳಲ್ಲೇ 172 ರನ್‌ ಗಳಿಸಿ ಸೆಮಿಫೈನಲ್‌ ಹಾದಿಯನ್ನು ಸುಲಭವಾಗಿಸಿಕೊಂಡಿತು.…

Read More

ಕ್ಯಾನ್ಬೆರಾ: ಆಸ್ಟ್ರೇಲಿಯಾಕ್ಕೆ (Australia) ಬರೋಬ್ಬರಿ 7 ವಿಶ್ವಕಪ್ (World Cup) ಟ್ರೋಫಿಗಳನ್ನು ಗೆದ್ದುಕೊಟ್ಟ ಮಹಿಳೆಯರ ಕ್ರಿಕೆಟ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ (Meg Lanning) ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ (International Cricket) ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಕ್ರಿಕೆಟ್ ಜೀವನದಲ್ಲಿ ದಾಖಲೆಯ 241 ಪಂದ್ಯಗಳನ್ನಾಡಿರುವ ಅವರು, ವೃತ್ತಿಬದುಕಿಗೆ ವಿದಾಯ ಹೇಳಿದ್ದಾರೆ. ಒಟ್ಟು ಆರು ಟೆಸ್ಟ್ ಪಂದ್ಯಗಳು, 103 ಏಕದಿನ ಪಂದ್ಯಗಳು ಮತ್ತು 132 ಟಿ20 ಪಂದ್ಯಗಳನ್ನು ಆಡಿರುವ ಲ್ಯಾನಿಂಗ್, ಸದ್ಯ ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳಿದ್ದಾರೆ. ದೇಶದ ಒಳಗೆ ಕ್ರಿಕೆಟ್ ಆಡುವುದನ್ನು ಮುಂದುವರಿಸಲಿದ್ದಾರೆ. ಆಸ್ಟ್ರೇಲಿಯಾದಲ್ಲಿ ಮಾತ್ರವಲ್ಲದೆ ಭಾರತದಲ್ಲಿ ನಡೆಯಲಿರುವ ಡಬ್ಲ್ಯೂಪಿಎಲ್ ಟೂರ್ನಿಯಲ್ಲೂ ಬಹುತೇಕ ಆಡಲಿದ್ದಾರೆ ಎನ್ನಲಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‍ನಿಂದ ಹೊರಗೆ ಹೋಗುವ ನಿರ್ಧಾರ ಕೈಗೊಳ್ಳುವಾಗ ಕಷ್ಟಕರವಾಗಿತ್ತು. 13 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಆನಂದಿಸಿರುವ ನಾನು ನಿಜಕ್ಕೂ ಅದೃಷ್ಟಶಾಲಿಯಾಗಿದ್ದೇನೆ. ನಿವೃತ್ತಿಗೆ ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ. ಒಟ್ಟು ಎರಡು ಏಕದಿನ ವಿಶ್ವಕಪ್ ಮತ್ತು ಐದು ಟಿ20 ವಿಶ್ವಕಪ್‍ಗಳನ್ನು ಗೆದ್ದಿರುವ…

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಯಾವುದೇ ಭಯ ಭೀತಿ ಇಲ್ಲದೆ ನಡುಬೀದಿಯಲ್ಲಿ ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡೋದು ಕಾಮನ್ ಆಗ್ತಿದೆ.. ಸಣ್ಣ ಪುಟ್ಟ ಕಾರಣಕ್ಕೂ ಜೀವ ತೆಗೆಯುವಂತಹ ಕೃತ್ಯಗಳು ನಡೆಯುತ್ತಿದೆ. ಇಂಥದ್ದೇ ಕಾರಣಕ್ಕೆ ನಡೆದ ಎರಡು ಭೀಕರ ಹತ್ಯೆ ಕುರಿತ ಡಿಟೇಲ್ಸ್ ಇಲ್ಲಿದೆ.. ಹೆಲ್ಮೆಟ್ ಜೀವರಕ್ಷಕ.. ಅದೇ ಹೆಲ್ಮೇಟ್ ನಿಂದಲೇ ಜೀವವನ್ನು‌ ತೆಗೆಯಬಹುದು.. ಈ ದೃಶ್ಯ ನೀವು ನೋಡಿದ್ರೆ ಖಂಡಿತಾ ನಡುಕವನ್ನ ಹುಟ್ಟಿಸುತ್ತೆ.. ಅಂದಹಾಗೆ ಈ ಘಟನೆ ನಡೆದಿರೋದು ಲಿಂಗರಾಜಪುರದಲ್ಲಿ. ಏರಿಯಾದಲ್ಲಿ ಡಿಜೆ‌ ಸಾಂಗ್ ವಿಚಾರದಲ್ಲಿ ಪ್ರವೀಣ್ ಎಂಬಾತನನ್ನು ಹೆಲ್ಮೆಟ್ ನಿಂದ ಹೊಡೆದು ಹೊಡೆದು ಕೊಲ್ಲಲಾಗಿದೆ.. ಪ್ರವೀಣ್ ಸ್ನೇಹಿತನೇ ಅಗಿದ್ದ ಸುಂದರ್ ಎಂಬಾತನ ಗ್ಯಾಂಗ್ ಈ ಕೃತ್ಯ ಎಸಗಿದೆ. ಹೆಲ್ಮೇಟ್ ನಿಂದ ಹಲ್ಲೆ ನಡೆಸಿ ಕೊಲ್ಲುವ ದೃಶ್ಯವನ್ನು ಸ್ಥಳಿಯರು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದಾರೆ.. ಈ ವೇಳೆ ಎಷ್ಟೇ ಚೀರಿದ್ರು ಆರೋಪಿಗಳು ಕೊಂದೇ ಎಸ್ಕೇಪ್ ಆಗಿದ್ದಾರೆ. ಸದ್ಯ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಣನಕುಂಟೆ ರೌಡಿಶೀಟರ್ ಆಗಿರುವ ಸಹಾದೇವ ಮೇಲೆ ಕೊಲೆ…

Read More