ಬಿಗ್ ದೀಪಾವಳಿ ಸೇಲ್ನಲ್ಲಿ ಕಾರು ಖರೀದಿಸುವವರಿಗೆ ಅತಿ ಕಡಿಮೆ ಬೆಲೆಗೆ ನಿಮ್ಮ ಆದಾಯಕ್ಕೆ ಅನುಗುಣವಾಗಿ ಕಾರು ಕೊಳ್ಳಬಹುದು. ನಿಮಗೆ ತಕ್ಕಮೈಲೆಜ್ ಕೊಡುವಂತಹ ಕಾರಿಗಳು ಈಗ ಶೋರೂಂಗಳಲ್ಲಿ ಲಭ್ಯವಾಗಿವೆ. ಯಾವುವು ಅಂತೀರಾ ನೋಡೋಣ ಬನ್ನಿ.. ಮಾರುತಿ ಸುಜುಕಿ ಬ್ರೆಝಾ: ಬ್ರೆಝಾ ಮೂಲ ರೂಪಾಂತರದ ಬೆಲೆಯು ರೂ. 8.29 ಲಕ್ಷ (ಎಕ್ಸ್ ಶೋ ರೂಂ) ರೂ.ನಿಂದ ಪ್ರಾರಂಭವಾಗುತ್ತದೆ. ಇದರ ವಿಶೇಷತೆ ಎಂದರೆ ಮಾರುತಿ ಕಾರುಗಳಲ್ಲಿಯೇ ಅತ್ಯಂತ ಸುರಕ್ಷಿತ ಕಾರಾಗಿ ಗುರ್ತಿಸಿಕೊಂಡಿದೆ. ಗ್ಲೋಬಲ್ NCAP ನಿಂದ 4-ಸ್ಟಾರ್ ಸುರಕ್ಷತಾ ರೇಟಿಂಗ್ ಅನ್ನು ಪಡೆದುಕೊಂಡಿದೆ. ಮಾರುತಿ ಸುಜುಕಿ ಬ್ರೆಝಾ: ಬ್ರೆಝಾ ಮೂಲ ರೂಪಾಂತರದ ಬೆಲೆಯು ರೂ. 8.29 ಲಕ್ಷ (ಎಕ್ಸ್ ಶೋ ರೂಂ) ರೂ.ನಿಂದ ಪ್ರಾರಂಭವಾಗುತ್ತದೆ. ಇದರ ವಿಶೇಷತೆ ಎಂದರೆ ಮಾರುತಿ ಕಾರುಗಳಲ್ಲಿಯೇ ಅತ್ಯಂತ ಸುರಕ್ಷಿತ ಕಾರಾಗಿ ಗುರ್ತಿಸಿಕೊಂಡಿದೆ. ಗ್ಲೋಬಲ್ NCAP ನಿಂದ 4-ಸ್ಟಾರ್ ಸುರಕ್ಷತಾ ರೇಟಿಂಗ್ ಅನ್ನು ಪಡೆದುಕೊಂಡಿದೆ. ಮಾರುತಿ ಸುಜುಕಿ ಬ್ರೆಝಾ: ಇದರ ಬೆಲೆ 8.29ಲಕ್ಷರೂ.ನಿಂದ ಪ್ರಾರಂಭವಾಗಿದ್ದು ಇದರವೇಶೆಷತೆ ಏನ್ ಗೊತ್ತಾ ಮಾರುತಿಕಾರುಗಳಲ್ಲಲಿಯೇ ಅತ್ಯಂತ…
Author: AIN Author
ಬೆಂಗಳೂರು;- ಖಾಸಗಿ ಬಸ್‌ಗಳಲ್ಲಿ ಧ್ವನಿ ಪ್ರಕಟಣೆ ಅಳವಡಿಸಲು ಹೈಕೋರ್ಟ್ ಸೂಚನೆ ನೀಡಿದೆ. ಎನ್. ಶ್ರೇಯಸ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎನ್.ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ, ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಆಡಿಯೋ ವ್ಯವಸ್ಥೆ ಅಳವಡಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಆದರೆ, ಕೆಲವು ಮಾರ್ಗಗಳಲ್ಲಿ ಖಾಸಗಿ ಬಸ್‌ಗಳೂ ಕೂಡ ಸಂಚಾರ ಕೈಗೊಳ್ಳುತ್ತಿರುವುದರಿಂದ, ಆ ಬಸ್‌ಗಳಲ್ಲಿ ವಿಶೇಷ ಚೇತನರ ಪ್ರಯಾಣಕ್ಕೆ ಅಗತ್ಯ ನೆರವನ್ನು ಕಲ್ಪಿಸಿಕೊಡಬೇಕಿದೆ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸರ್ಕಾರ ಈ ವಿಚಾರದಲ್ಲಿ ಸಾಕಾರಾತ್ಮಕ ಕ್ರಮಗಳನ್ನು ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ. ಸರ್ಕಾರ ಖಾಸಗಿ ಬಸ್ ಆಪರೇಟರ್‌ಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿ ಸುತ್ತೋಲೆ ಹೊರಡಿಸಬೇಕು. ಆ ನಿರ್ದೇಶನ ಹಾಲಿ ಹಲವು ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬಸ್‌ಗಳಿಗೆ ಮಾತ್ರವಲ್ಲ, ಹೊಸದಾಗಿ ಪರ್ಮಿಟ್ ನೀಡುವ ಬಸ್ಗಳಿಗೂ ಅನ್ವಯವಾಗುವಂತೆ ಇರಬೇಕು ಎಂದು ನ್ಯಾಯಾಲಯ ತಾಕೀತು ಮಾಡಿತು.…
ಈ ಬಾರಿ ಚಳಿ ಹೆಚ್ಚಾಗಿಯೇ ಇದೆ. ಚಳಿಗಾಲ ಬಂತು ಅಂದ್ರೆ ಸಾಕು ಎಲ್ಲಿಲ್ಲದ ಕಾಯಿಲೆಗಳು ನಮ್ಮನ್ನ ಹುಡುಕುತ್ತಾ ಬರುತ್ತವೆ. ಜ್ವರ, ಶೀತ ಕೆಮ್ಮು ಮತ್ತು ಶೀತಗಳ ಹೊರತಾಗಿ, ಅತೀ ನೋವನ್ನುಂಟು ಮಾಡುವ ಗಂಟಲು ನೋವು ಹೆಚ್ಚಾಗಿ ಕಾಣಿಸುತ್ತವೆ. ಚಳಿಗಾಲದಲ್ಲಿ ವೈರಸ್ಗಳು ಬೇಗ ಮನುಷ್ಯರನ್ನ ಆವರಿಸುತ್ತವೆ. ಅತಿ ಹೆಚ್ಚು ಗಂಟಲು ನೋವು ಕಾಣಿಸಿಕೊಳ್ಳೋದಕ್ಕೆ ಬ್ಯಾಕ್ಟೀರಿಯಾಗಳು ಸಹ ಕಾರಣ ಎಂದು ಹೇಳಲಾಗುತ್ತೆ. ಸ್ಟ್ರೆಪ್ಟೋಕೊಕಸ್ ಬ್ಯಾಕ್ಟೀರಿಯಾದಿಂದ ಉಂಟಾಗುವ ಸ್ಟ್ರೆಪ್ ಗಂಟಲಿಗೆ ಹೆಚ್ಚು ಅಪಾಯಕಾರಿ. ಸ್ಟ್ರೆಪ್ಟೋಕೊಕಸ್ ಬ್ಯಾಕ್ಟೀರಿಯಾದ ಸೋಂಕಿನಿಂದಲೂ ಹೆಚ್ಚಿನ ಜ್ವರ ಉಂಟಾಗುತ್ತದೆ. ಸ್ಟ್ರೆಪ್ ಥ್ರೋಟ್ ಸೋಂಕು ವೈರಲ್ ಗಂಟಲಿನ ಸೋಂಕಿಗಿಂತ ಹೆಚ್ಚು ತೊಂದರೆ ಉಂಟುಮಾಡಬಹುದು. ಆದರೆ, ಗಾಬರಿಯಾಗಬೇಡಿ, ಗಂಟಲು ನೋವನ್ನು ತೊಡೆದುಹಾಕಲು ನೀವು ಕೆಲವು ಮನೆಮದ್ದುಗಳನ್ನ ಉಪಯೋಗಿಸಬಹುದು. ಶೀತ ಮತ್ತು ಗಂಟಲು ನೋವು ತೊಡೆದುಹಾಕಲು ಕೆಲವೊಂದು ಪರಿಹಾರಗಳು 1.ಅರಿಶಿನ ಚಹಾ: ಗಂಟಲು ನೋವಿನ ಸಮಸ್ಯೆ ಪ್ರತಿಯೊಬ್ಬರಲ್ಲಿ ಕಾಡೋದು ಸಹಜ, ಗಂಟಲು ನೋವಿನ ವಿರುದ್ಧ ಅರಿಶಿಣ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತದೆ. ಅರಿಶಿನ ಚಹಾ ಗಂಟಲಿನ ಉರಿಯೂತವನ್ನು…
ನವದೆಹಲಿ: ಪಸ್ತುತ ನಡೆಯುತ್ತಿರುವ 2023 ರ ಐಸಿಸಿ ವಿಶ್ವಕಪ್‌ನಲ್ಲಿ ಭಾರತದ ಬ್ಯಾಟರ್ ಶುಭಮನ್ ಗಿಲ್ (Shubman Gill) ವಿಶ್ವದ ನಂ. 1 ODI ಬ್ಯಾಟರ್ ಆಗಿ, ಬಾಬರ್ ಅಜಂರನ್ನು (Babar Azam) ಸಿಂಹಾಸನದಿಂದ ಕೆಳಗಿಳಿಸಿದ್ದಾರೆ. ಬುಧವಾರ ಐಸಿಸಿ ಪುರುಷರ ODI ಬ್ಯಾಟಿಂಗ್ ಶ್ರೇಯಾಂಕ ಪಟ್ಟಿ ಪ್ರಕಟಿಸಿದ್ದು, ಮೆನ್ ಇನ್ ಬ್ಲೂ ಓಪನರ್ ಪಾಕಿಸ್ತಾನದ ನಾಯಕನ ಸ್ಥಾನವನ್ನು ಅಲಂಕರಿಸಿದ್ದಾರೆ. ಶುಭಮನ್ ಅವರು ಒಟ್ಟು 830 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ. ಆ ಮೂಲಕ ಬಾಬರ್ ಅವರನ್ನು ಹಿಂದಿಕ್ಕಿದ್ದಾರೆ. ಬಾಬರ್ 824 ರೇಟಿಂಗ್‌ನೊಂದಿಗೆ ನಂ. 2 ಸ್ಥಾನಕ್ಕೆ ಕುಸಿದಿದ್ದಾರೆ. 24 ವರ್ಷದ ಭಾರತದ ಆರಂಭಿಕ ಆಟಗಾರ ಗಿಲ್ ನವೆಂಬರ್ 2 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಉತ್ತಮ ಫಾರ್ಮ್ ಪ್ರದರ್ಶಿಸಿದರು. ಅದರೊಟ್ಟಿಗೆ ಭಾರತದ ಗೆಲುವಿಗೆ ಕೊಡುಗೆ ನೀಡಿದರು ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಯುವ ತಾರೆ ರೆಡ್-ಹಾಟ್ ಫಾರ್ಮ್‌ನಲ್ಲಿದ್ದಾರೆ. ರನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರು ಈ ವರ್ಷ 26 ODIಗಳಲ್ಲಿ 63.00 ಸರಾಸರಿಯಲ್ಲಿ 1,149…
ಭಾರತೀಯ ಕ್ರಿಕೆಟ್ (Marriage) ರಂಗದ ಹೆಸರಾಂತ ಕ್ರಿಕೆಟಿಗ ಮೊಹಮ್ಮದ್ ಶಮಿಯನ್ನು(Mohammed Shami) ಮದುವೆಯಾಗಲು ಓಪನ್ ಆಫರ್ ಮಾಡಿದ್ದಾರೆ ದಕ್ಷಿಣದ ನಟಿ ಪಾಯಲ್ ಘೋಷ್. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ನಾನು ಶಮಿಯನ್ನು ಮದುವೆಯಾಗಲು ರೆಡಿ ಇದ್ದೇನೆ. ಅವರು ಒಪ್ಪಿಕೊಳ್ಳಬೇಕು ಅಷ್ಟೇ’ ಎಂದು ಬರೆದುಕೊಂಡಿದ್ದಾರೆ. ಪಾಯಲ್ ಈ ಆಫರ್ ಸಖತ್ ವೈರಲ್ ಕೂಡ ಆಗಿದೆ. ಇಂಥದ್ದೇ ಕಾರಣಗಳಿಂದಾಗಿ ಪಾಯಲ್ ಸದಾ ಸುದ್ದಿಯಲ್ಲಿರುತ್ತಾರೆ. ಮೀಟೂ ಆರೋಪದ ಮೂಲಕ ಬಾಲಿವುಡ್ (Bollywood) ಗೆ ಬೆಂಕಿ ಹಚ್ಚಿದ್ದ ನಟಿ ಪಾಯಲ್ ಘೋಷ್ (Payal Ghosh) ಮೊನ್ನೆಯಷ್ಟೇ ಮತ್ತೊಂದು ಬಾಂಬ್ ಸಿಡಿಸಿದ್ದರು. ಈ ಹಿಂದೆ ಮೀಟೂ (Metoo) ಅಭಿಯಾನದಲ್ಲಿ ಪಾಲ್ಗೊಂಡಿದ್ದ ಪಾಯಲ್, ‘ಬಾಲಿವುಡ್ ಟಾಪ್ ನಿರ್ದೇಶಕರೊಬ್ಬರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ’ ಎಂದು ಅವರು ಆರೋಪ (Allegation) ಮಾಡಿದ್ದರು. ಇದೀಗ ಪಾಯಲ್ ಘೋಷ್ 11ನೇ ಸಿನಿಮಾವನ್ನು ಮುಗಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿರುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಈ ಖುಷಿಯ ಜೊತೆಗೆ ಕಹಿ…
ಬೆಂಗಳೂರು;- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಭಾರಿ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಹೆಚ್ಚು ಮಳೆಯಾಗಲಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ವರ್ಷಧಾರೆಯ ಸಾಧ್ಯತೆ ಇದೆ ಎಂದು ಹೇಳಿದೆ.
ಕನ್ನಡದಲ್ಲಿ ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ನಟಿಸಿ, ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದ ಲಿಯೋನಿಲ್ಲಾ ಶ್ವೇತಾ ಡಿಸೋಜಾ (Leonilla Shweta D’Souza) ಇದೀಗ ಮತ್ತೆ ಕನ್ನಡ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಮರಿ ಟೈಗರ್ ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುತ್ತಿರುವ ನೆಲ್ಸನ್ ಚಿತ್ರದಲ್ಲಿ ಲಿಯೋನಿಲ್ಲಾ ಶ್ವೇತಾ ಡಿಸೋಜಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೊಂದು ಹೊಸ ರೀತಿಯ ಪಾತ್ರ ಎನ್ನಲಾಗುತ್ತಿದೆ. ಗೊಂಬೆಗಳ ಲವ್ ಮೂಲಕ ಸ್ಯಾಂಡಲ್ವುಡ್ನಲ್ಲಿ ಭರವಸೆ ಮೂಡಿಸಿದ್ದ ನಟ ಅರುಣ್ ಕುಮಾರ್ (Arun Kumar) ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ (Nelson) ಎಂಬ ಶೀರ್ಷಿಕೆ ಇಡಲಾಗಿದ್ದು, ರಕ್ತದಲ್ಲಿ ನೆಂದ ದೇವರಕಾಡು ಎಂಬ ಅಡಿ ಬರಹ ಚಿತ್ರದ ಸಾರಂಶವನ್ನು ವಿವರಿಸ್ತಿದೆ. ಟೀಸರ್ ರಿಲೀಸ್ ಆಗಿದ್ದು, ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಸಖತ್ ಮಾಸ್ ಆಗಿ ಮೂಡಿಬಂದಿರುವ ನೆಲ್ಸನ್ ಟೀಸರ್ ನಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಆಂಗ್ರಿ ಯಂಗ್ ಮ್ಯಾನ್ ಅವತಾರದಲ್ಲಿ ಅಬ್ಬರಿಸಿದ್ದಾರೆ. ಇಂದು ಎಂಎಂ ಲೆಗಸಿಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ ಲಾಂಚ್…
ಬೆಂಗಳೂರು;- ಕೇಂದ್ರ ಸರ್ಕಾರದಿಂದ ನಯಾ ಪೈಸೆ ಬರ ಪರಿಹಾರ ಬಂದಿಲ್ಲ ಎಂದು ಹೆಚ್ ಕೆ ಪಾಟೀಲ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಂಪುಟ ಸಭೆಯಲ್ಲಿ ಬರದ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ನರೇಗಾ ದಡಿ ನೂರು ದಿನ ಕೆಲಸ ಮುಗಿಸಿದ ಕುಟುಂಬ ಬಹಳಷ್ಟು ಇದೆ. ಮಾನವ ದಿನಗಳನ್ನು 150 ಏರಿಸಲು ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಕೂಡಲೇ ಮಾನವ ದಿನವನ್ನು 150ಕ್ಕೆ ಏರಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವಂತೆ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು. ಬರ ನಿರ್ವಹಣೆ ಹಾಗೂ ಮಾನವ ದಿನ ವೃದ್ಧಿಸುವ ಸಂಬಂಧ ಕೇಂದ್ರಕ್ಕೆ ಮನವಿ ಕೊಡಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಸಿಎಂಗೆ ಪ್ರಧಾನಿ ಭೇಟಿಗೆ ಸಮಯ ನೀಡಿಲ್ಲ. ಕಂದಾಯ ಸಚಿವರಿಗೆ ಸಮಯಾವಕಾಶ ನೀಡಿಲ್ಲ. ಕೇಂದ್ರದ ಬರ ಅಧ್ಯಯನ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ತಮ್ಮ ವರದಿ ನೀಡಿದ್ದಾರೆ. ಆದರೆ, ಇಂದಿನವರೆಗೆ ಕೇಂದ್ರ ಸರ್ಕಾರ ನಯಾ ಪೈಸೆ ಬರ ಪರಿಹಾರ ಕೊಟ್ಟಿಲ್ಲ. ಇದಕ್ಕೆ ತೀವ್ರ ಕಳವಳ…
ಚೆನ್ನೈ: ಮದ್ಯ ಖರೀದಿಗೆ ಹಣ ನೀಡಲಿಲ್ಲ ಎಂದು ಜ್ಯೂನಿಯರ್ ಒಬ್ಬನ ಮೇಲೆ ಹಲ್ಲೆ ನಡೆಸಿದ ಕೊಯಮತ್ತೂರಿನ ಖಾಸಗಿ ಕಾಲೇಜಿನ 7 ಜನ ವಿದ್ಯಾರ್ಥಿಗಳನ್ನು (Students) ಪೊಲೀಸರು (Police) ಬಂಧಿಸಿದ್ದಾರೆ. ಹಿರಿಯ ವಿದ್ಯಾರ್ಥಿಗಳು ಕಾಲೇಜಿನ ಕ್ಯಾಂಪಸ್‍ನಲ್ಲಿರುವ ಹಾಸ್ಟೆಲ್‍ಗೆ ತೆರಳಿ ಮದ್ಯ ಖರೀದಿಸಲು ಹಣ ಕೇಳಿದ್ದಾರೆ. ಈ ವೇಳೆ ನಿರಾಕರಿಸಿದ ವಿದ್ಯಾರ್ಥಿಯನ್ನು ತಮ್ಮ ಕೋಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. https://ainlivenews.com/knee-pain-treatment-joint-pain-treatment/ ಅಲ್ಲದೇ ಟ್ರಿಮ್ಮರ್ ಬಳಸಿ ಕೈಗಳ ಮೇಲೆ ಗಾಯಮಾಡಿದ್ದಾರೆ. ಮರುದಿನ ಆತನ ರೂಮ್‍ಗೆ ತೆರಳುವಂತೆ ಹೇಳಿ ನಡೆದ ವಿಚಾರ ಬಾಯಿಬಿಟ್ಟರೆ ಮತ್ತೆ ಹಲ್ಲೆಗೈಯುವ ಬೆದರಿಕೆ ಹಾಕಿದ್ದಾರೆ. ಕಾಲೇಜು ಆಡಳಿತ ಮಂಡಳಿ ತಕ್ಷಣ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪೀಲಮೇಡು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾನೆ. ದೂರಿನ ಅನ್ವಯ ಪೊಲೀಸರು ರ‍್ಯಾಗಿಂಗ್ ನಿಷೇಧ ಕಾಯ್ದೆ ಅಡಿ ಐಪಿಸಿ ಸೆಕ್ಷನ್ 355 ಹಾಗೂ 323 ಹಲ್ಲೆ ಪ್ರಕರಣ ದಾಖಲಿಸಿಕೊಂಡು 7 ಜನ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಪೊಲೀಸರು ಹೇಳಿದ್ದಾರೆ.
ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ ಫೇಕ್ ವಿಡಿಯೋ ಬಗ್ಗೆ ಇದೀಗ ಎಲ್ಲಾ ಕಡೆ ಚರ್ಚೆಗೆ ಗ್ರಾಸವಾಗಿದೆ. ರಶ್ಮಿಕಾ ಪರ ಬಿಗ್ ಬಿ, ನಾಗಚೈತನ್ಯ, ಮೃಣಾಲ್ ಠಾಕೂರ್ ಸೇರಿದಂತೆ ಅನೇಕರು ಧ್ವನಿಯೆತ್ತಿದ್ದಾರೆ. ಈ ಬೆನ್ನಲ್ಲೇ, ಗೆಳತಿ ರಶ್ಮಿಕಾ ಪರ ವಿಜಯ್ ದೇವರಕೊಂಡ (Vijay Devarakonda) ಕೂಡ ಮಾತನಾಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ವಿಜಯ್ ಕಿಡಿಕಾರಿದ್ದಾರೆ. ರಶ್ಮಿಕಾ ಡೀಪ್ ಫೇಕ್ ವಿಡಿಯೋ ವೈರಲ್ ಆದ ಬಳಿಕ ಡೀಪ್ ಫೇಕ್ರ್ಸ್ ನಿಯಂತ್ರಣಕ್ಕೆ ಮುಂದಾದ ಪೊಲೀಸರು ಎಂದು ಪ್ರಕಟ ಆಗಿರುವ ಸುದ್ದಿಯನ್ನು ವಿಜಯ್ ಶೇರ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿ, ಭವಿಷ್ಯಕ್ಕಾಗಿ ಇದು ಮುಖ್ಯವಾದ ಕ್ರಮ. ಇದು ಯಾರಿಗೂ ಆಗಬಾರದು. ಸೈಬರ್ ಕ್ರೈಮ್ ತೆಡೆಯಲು ಸಮರ್ಥವಾದ ಮತ್ತು ಸುಲಭಕ್ಕೆ ಜನರ ಸಂಪರ್ಕಕ್ಕೆ ಸಿಗುವಂತಹ ಸೈಬರ್ ಘಟಕ ಎಲ್ಲರಿಗೂ ಸಿಗಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾದರೆ ಜನರಿಗೆ ಹೆಚ್ಚು ರಕ್ಷಣೆ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ. ವಿಜಯ್- ರಶ್ಮಿಕಾ (Rashmika) ತೆಲುಗು ಸಿನಿಮಾರಂಗದಲ್ಲಿ ಬೆಸ್ಟ್ ಜೋಡಿಯಾಗಿ ಜನಪ್ರಿಯತೆ ಪಡೆದಿದ್ದಾರೆ. ಇಬ್ಬರ…