ಬೆಂಗಳೂರು;- ಮಾರಕಾಸ್ತ್ರಗಳಿಂದ ಹೊಡೆದು ರೌಡಿ ಕೊಲೆ ನಡೆದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರೌಡಿ ಸಹದೇವನನ್ನು (32) ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸಹದೇವ್, ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ಚಹಾ ಕುಡಿಯಲು ಅಂಗಡಿಯೊಂದಕ್ಕೆ ಬಂದಿದ್ದ. ಇದೇ ಸಂದರ್ಭದಲ್ಲಿ ಮೂರು ಬೈಕ್‌ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು, ಕೊಲೆ ಮಾಡಿ ಪರಾರಿಯಾಗಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ 2016ರಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದಲ್ಲಿ ಸಹದೇವ್ ಆರೋಪಿಯಾಗಿದ್ದ. ಕೋಣನಕುಂಟೆ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿತ್ತು’ ಎಂದು ತಿಳಿಸಿವೆ. ‘ಸ್ಥಳೀಯ ಪರಿಚಯಸ್ಥರ ಜೊತೆ ಸಹದೇವ್ ಜಗಳ ಮಾಡಿದ್ದನೆಂಬ ಮಾಹಿತಿಯಿದೆ. ಇದೇ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ಇದೆ’ ಎಂದು ಹೇಳಿವೆ.
Author: AIN Author
ಯಲಹಂಕ:- ಮೂರು ದಿನಗಳಿಂದ ಸುರಿಯುತ್ತಿರೊ ಮಳೆಗೆ ಅಪಾರ್ಟ್ಮೆಂಟ್ ಗೆ ಹಾವು ನುಗ್ಗಿದ ಘಟನೆ ಜರುಗಿದೆ. ಕೇಂದ್ರೀಯ ವಿಹಾರದ ನೆಲಮಹಡಿಯ ನೀರಲ್ಲಿ ಕೆರೆ ಹಾವು ಕಾಣಿಸಿಕೊಂಡಿದೆ. ಯಲಹಂಕ ಕೆರೆ ಕೋಡಿ ಬಿದ್ದರೆ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಮುಳುಗಡೆಯಾಗಿದೆ. ವೆಂಕಟಾಲ ಕಡೆಯ ಯಲಹಂಕ ಕೆರೆಕೋಡಿಯ ಮೂಲಕ ಕೆರೆ ಹಾವು ಬಂದಿದೆ. ತಗ್ಗು ಪ್ರದೇಶದಲ್ಲಿ ಕೇಂದ್ರೀಯ ವಿಹಾರ ನಿರ್ಮಾಣ ಆಗಿದ್ದು, ಮಳೆ ಬಂದರೆ ವಿಷಜಂತುಗಳಿಗೆ ಇದು ಸ್ವರ್ಗವಾಗಿದೆ. ಎಲ್ಲಾ ಹಾವು, ಕ್ರಿಮಿಕೀಟ, ಕಪ್ಪೆಗಳು, ಮಳೆ ನೀರಿಂದ ಕೇಂದ್ರಿಯ ವಿಹಾರಕ್ಕೆ ಬಂದಿವೆ. ಮೊನ್ನೆ ಮತ್ತು ಕಳೆದ ರಾತ್ರಿ ಸುರಿದ ಮಳೆಗೆ ಕೆರೆಹಾವು ಕೇಂದ್ರೀಯ ವಿಹಾರಕ್ಕೆ ಆಗಮಿಸಿವೆ. ಮಳೆ ಕಡಿಮೆಯಾದರೆ ಸಹಜವಾಗಿಯೇ ಹಾವು ಚೇಳು ಕಣ್ಮರೆಯಾಗ್ತವೆ. ಮಳೆಗಾಲದಲ್ಲಿ, ಹೆಚ್ಚು ಮಳೆಯಾದರೆ ಮಾತ್ರ ಆತಂಕ ಶುರುವಾಗಿದೆ. ವಯಸ್ಸಾದ ಹಿರಿಯರು, ನಿವೃತ್ತ ನೌಕರರು, ಕೇಂದ್ರ ಸರ್ಕಾರದ ನೌಕರರು ಇಲ್ಲಿಯ ವಾಸಿಗಳಾಗಿವೆ. ಇದೀಗ ಎಲ್ಲರೂ ಹಾವು, ವಿಷಜಂತುಗಳಿಂದ ಭಯಗೊಂಡಿದ್ದಾರೆ.
ಬೆಂಗಳೂರು ;- ಮುನಿರತ್ನ ವಿರುದ್ಧ ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡ್ತಿದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಖಂಡಿಸಿ ಹಾಗು ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ವಿರೋಧಿಸಿ ತಿಂಗಳಾಂತ್ಯಕ್ಕೆ ಮೂರು ದಿನ ಸರ್ಕಾರದ ವಿರುದ್ಧ ಧರಣಿ ನಡೆಸಲಿದ್ದು ಬೆಳಗಾವಿ ಅಧಿವೇಶನದಲ್ಲಿಯೂ ಈ ವಿಚಾರವನ್ನು ಇರಿಸಿಕೊಂಡು ಬಿಜೆಪಿ ಹೋರಾಟ ನಡೆಸಲಿದೆ ಎಂದರು. ಮುನಿರತ್ನ ವಿರುದ್ಧ ಈ ರೀತಿಯ ಸೇಡಿನ ರಾಜಕಾರಣ ಸರಿಯಲ್ಲ. ಆಡಳಿತ ಪಕ್ಷ ನಮ್ಮ ಶಾಸಕ ಮುನಿರತ್ನ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿರುವುದನ್ನು ಖಂಡಿಸುತ್ತೇನೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮಂಜೂರಾಗಿ ಅರ್ಧಂಬರ್ಧ ಕೆಲಸ ಆಗಿ ನಿಲ್ಲಿಸುವ ಮೂಲಕ ಒಂದು ರೀತಿಯ ಗೊಂದಲದ ವಾತಾವರಣ ನಿರ್ಮಾಣ ಮಾಡಿದೆ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಕೊಡಲಿ ಪೆಟ್ಟು ನೀಡಿದೆ ಎಂದು ಆರೋಪಿಸಿದರು.
ಬೆಂಗಳೂರು;- ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ ವಿಚಾರವಾಗಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಬಿಜೆಪಿಯವರಿಗೆ ಆಪರೇಷನ್ ಬಿಟ್ಟರೆ ಬೇರೆ ಇನ್ನೇನಾದರೂ ಗೊತ್ತಿದೆಯಾ?. ಆಪರೇಷನ್ ಒಂದೇ ಗೊತ್ತಿರೋದು. ಜನಕ್ಕೆ ಏನು ಬೇಕೋ ಅದನ್ನು ಮಾಡುವುದು ಗೊತ್ತಿಲ್ಲ ಅವರಿಗೆ. ಭ್ರಷ್ಟಾಚಾರದಲ್ಲಿ ಮುಳುಗಿ ಕೆಲಸ ಇಲ್ಲದೇ ಕೂತಿದ್ದಾರೆ ಇವತ್ತು. ಜನರೇ ತಿರಸ್ಕಾರ ಮಾಡಿದ್ದಾರೆ ಅವರನ್ನು. ಜನರು ಬಿಜೆಪಿ ಮೇಲೆ ನಂಬಿಕೆ ಕಳೆದುಕೊಂಡಾಗ ಈ ತರಹ ಮಾತಾಡೋದು ಸರ್ವೆ ಸಾಮಾನ್ಯ ಎಂದು ಟೀಕಿಸಿದರು. ಜನರ ಮನಸ್ಸನ್ನು ಬೇರೆ ಕಡೆಗೆ ಒಯ್ಯಬೇಕು ಅಂದ್ರೆ ಬಿಜೆಪಿ ಆಪರೇಷನ್ ಹೆಸರೇ ಹೇಳಬೇಕು. ಬಿಜೆಪಿಗೆ ನಮ್ಮ ಗ್ಯಾರಂಟಿಗಳಿಂದ ಆಘಾತ ಆಗಿದೆ. ಆಘಾತ ತಪ್ಪಿಸಿಕೊಳ್ಳಲು ಆಪರೇಷನ್ ಕಮಲದ ಹೆಸರು ಹೇಳ್ತಿದ್ದಾರೆ. ವಿಪಕ್ಷ ನಾಯಕರು ಇದ್ದಾರೋ ಇಲ್ವೋ ಅವರಿಗೆ ಬಿಟ್ಟಿದ್ದು. ಆದರೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದು, ನಮ್ಮ ತಟ್ಟೆಯಲ್ಲಿ ಜಿರಳೆ ಹುಡಿಕಿದರೆ ನಾವೇನು ಮಾಡೋಕಾಗತ್ತೆ? ಎಂದರು. ಡಿ.ಕೆ. ಸುರೇಶ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ,…
ಬೆಂಗಳೂರು;- ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ದೇಶ ಆಳಿ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬ್ರಿಟೀಷರ ವಿರುದ್ಧ ಹೋರಾಡಲು ಸೇವಾದಳ ಕಟ್ಟಲಾಯಿತು. ಸೇವಾ ದಳದ ಕಾರ್ಯಕರ್ತರನ್ನು, ಯಾರೇ ಗಾಂಧಿ ಟೋಪಿ ಹಾಕಿದವರು, ಇವರು ಸೇವಾ ದಳದವರೇ ಎಂದು ಗುರುತಿಸಿಕೊಳ್ಳುತ್ತಾರೆ. ಸೇವಾದಳ ಕಾಂಗ್ರೆಸ್ನ ಆಧಾರಸ್ತಂಬ ಇದ್ದಂತೆ. ಮಹಾತ್ಮಾ ಗಾಂಧಿ ನಾಯಕತ್ವದಲ್ಲಿ ಬ್ರಿಟೀಷರ ವಿರುದ್ಧ ಹೋರಾಟ ಮಾಡಿ ಸ್ವಾತಂತ್ರ್ಯ ತಂದುಕೊಟ್ಟರು. ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಸೇವಾದಳದ ಕಾರ್ಯಕರ್ತರು ಹುತಾತ್ಮರಾಗಿದ್ದಾರೆ. ಕಾಂಗ್ರೆಸ್ ಮಾತ್ರ ಈ ದೇಶಕ್ಕೆ ಸ್ವಾತಂತ್ರ್ಯ ಕೊಟ್ಟವರು. ಬಿಜೆಪಿಯವರು ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿಲ್ಲ ಎಂದು ಟೀಕಿಸಿದರು. ಬಿಜೆಪಿಯಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಯಾರೊಬ್ಬರೂ ಮಡಿದಿಲ್ಲ. ಆದರೆ, ಅವರು ದೇಶ ಭಕ್ತಿ ಬಗ್ಗೆ ಪುಂಕಾನುಪುಂಕವಾಗಿ ಮಾತನಾಡುತ್ತಾರೆ. ಇವತ್ತು ದೇಶ ಭಕ್ತಿ ಇದ್ದರೆ ಅದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮಾತ್ರ. ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟವರು. ನಾವು ವೈವಿಧ್ಯತೆಯಲ್ಲಿ ಏಕತೆ ಕಾಣುವವರು. ಸಮಗ್ರ ಭಾರತ…
ಮಂಡ್ಯ :- ಹೈಕಮಾಂಡ್ ಸೂಚನೆ ಮೇರೆಗೆ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರವೇ ಹೊರತು ಇದರಲ್ಲಿ ಯಾರದ್ದೇ ಹಸ್ತಕ್ಷೇಪ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಸ್ಪಷ್ಟಪಡಿಸಿದರು. ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಸಿದ್ದೇಗೌಡನದೊಡ್ಡಿ, ಹರಕನಹಳ್ಳಿ ಹಾಗೂ ಚಾಕನಕೆರೆ ಗ್ರಾಮಗಳಲ್ಲಿ ಗುರುವಾರ ಬರಪರಿಸ್ಥಿತಿ ಅಧ್ಯಯನ ಹಾಗೂ ರೈತ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸೋಮವಾರವಷ್ಟೆ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ ಬಳಿಕ ಬರ ಅಧ್ಯಯನ ಪ್ರವಾಸದಲ್ಲಿ ಭಾಗಿಯಾಗಿದ್ದ ಅವರು, ಮನುಷ್ಯನಿಗೆ ಕೆಲವು ಇತಿಮಿತಿ ಇರಬೇಕು. ಮೂವತ್ತು ವರ್ಷದಿಂದ ಪಕ್ಷ ನನಗೆ ಎಲ್ಲ ಸ್ಥಾನಮಾನ ಕೊಟ್ಟಿದೆ. ಪಕ್ಷದಲ್ಲಿ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದೆ, ಕೇಂದ್ರ ಸರ್ಕಾರದಲ್ಲಿ ಏಳು ವರ್ಷ ಸಚಿವರಾಗಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಕೆಲಸ ಮಾಡಿದ್ದೇನೆ. ರಾಜ್ಯದ ಮುಖ್ಯಮಂತ್ರಿಯೂ ಆಗಿದ್ದೆ. ರಾಜ್ಯಾಧ್ಯಕ್ಷನಾಗಿ ಪಕ್ಷವನ್ನು ಮುನ್ನೆಡೆಸಿದ್ದೇನೆ ರಾಜಕೀಯದಲ್ಲಿ ಇಷ್ಟು ಮಾತ್ರ ಸಾಕಲ್ಲವೇ ಎಂದು ಪ್ರಶ್ನಿಸಿದರು. ರಾಜಕಾರಣಕ್ಕೆ ಪ್ರವೇಶಿಸಿದ 25 ವರ್ಷದ ನಂತರ ಚುನಾವಣಾ…
ಗದಗ;- ಟೈರ್ ಬಸ್ಟ್ ಹಿನ್ನೆಲೆ ಲಾರಿ ಹೊತ್ತಿ ಉರಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ. ತಕ್ಷಣ ಕಾರ್ಯಪ್ರವೃತ್ತರಾಗಿ ಸಹಾಯಕ್ಕೆ ಸ್ಥಳೀಯರು ಧಾವಿಸಿದ್ದಾರೆ. ಬೆಂಕಿ ನಂದಿಸೋ ಕಾರ್ಯಕ್ಕೆ ಸ್ಥಳೀಯರು ಮುಂದಾಗಿದ್ದಾರೆ. ಅದೃಷ್ಟವಶಾತ್ ಚಾಲಕ ಬಚಾವ್ ಆಗಿದ್ದು ನಂತರ ಬಂದ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸೋ ಕಾರ್ಯ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಬೆಂಗಳೂರು;- ವಿವಿಧ ಯೋಜನೆಯಡಿ ಪಿಂಚಣಿಗಳನ್ನು ಪಡೆಯುವ ಫಲಾನುಭವಿಗಳಿಗೆ ಮಹತ್ವದ ಸೂಚನೆಯೊಂದಿದೆ. ಫಲಾನುಭವಿಗಳ ಬ್ಯಾಂಕ್/ ಅಂಚೆ ಇಲಾಖೆಯ ಉಳಿತಾಯ ಖಾತೆಗೆ ಎನ್‍ಪಿಸಿಐ ಲಿಂಕ್ ಕಡ್ಡಾಯವಾಗಿದೆ. ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಗಳನ್ನು ಫಲಾನುಭವಿಗಳಿಗೆ ಆಧಾರ್ ಆಧಾರಿತ ನೇರ ಹಣ ಸಂದಾಯ (ಡಿಬಿಟಿ) ಯೋಜನೆ ಮೂಲಕ ಪಾವತಿಸಲಾಗುತ್ತಿದೆ. ಇದಕ್ಕಾಗಿ ಕಡ್ಡಾಯವಾಗಿ ಫಲಾನುಭವಿಗಳ ಬ್ಯಾಂಕ್/ ಅಂಚೆ ಇಲಾಖೆಯ ಉಳಿತಾಯ ಖಾತೆಗೆ ಎನ್‍ಪಿಸಿಐ ಲಿಂಕ್ ಮಾಡಬೇಕು ಎಂದು ಹೇಳಲಾಗಿದೆ. ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಗಳಾದ ವೃದ್ದಾಪ್ಯ ಯೋಜನೆ, ವಿಧವಾ ಯೋಜನೆ, ಅಂಗವಿಕಲ ಯೋಜನೆ, ಸಂಧ್ಯಾ ಸುರಕ್ಷಾ ಯೋಜನೆ, ಮನಸ್ವಿನಿ ಯೋಜನೆ, ಮೈತ್ರಿ ಯೋಜನೆಗಳ ಮಾಸಿಕ ಪಿಂಚಣಿಯನ್ನು ಡಿಬಿಟಿ ಮೂಲಕ ಪಾವತಿಸಲು ಸರ್ಕಾರ ನಿರ್ಧರಿಸಿದೆ. ಆದ್ದರಿಂದ ಬ್ಯಾಂಕ್/ ಅಂಚೆ ಖಾತೆಗೆ ಎನ್‍ಪಿಸಿಐ ಲಿಂಕ್ ಆಗದ ಫಲಾನುಭವಿಗಳ ಪಟ್ಟಿಯು ಆಧಾರ್ ಗ್ರಾಮ ಆಡಳಿತಾಧಿಕಾರಿ (ವಿಎ) ಕಚೇರಿಯಲ್ಲಿರುತ್ತದೆ. ಫಲಾನುಭವಿಗಳು ವಿಎ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಲು ಮನವಿ ಮಾಡಲಾಗಿದೆ. ಒಂದು ವೇಳೆ ನಿಮ್ಮ ಖಾತೆಯು ಎನ್‍ಪಿಸಿಐ ಲಿಂಕ್ ಆಗದಿದ್ದಲ್ಲಿ ಕೂಡಲೇ ತಮ್ಮ ಆಧಾರ್…
ನೆಲಮಂಗಲ: ನೆಲಮಂಗಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಲೋಕೇಶ್ ಮನೆಯ ಮುಂದೆ ರಾತ್ರಿ ಸಾಕು ಕೋಳಿಗಳ ಮೇಲೆ ದಾಳಿ ನಡೆದಿದ್ದು, ನೆಲಮಂಗಲ ತಾಲೂಕಿನ ಗೊರವನಹಳ್ಳಿ ಗ್ರಾಮದ ಬಳಿ ಘಟನೆ ಜರುಗಿದೆ. ಮನೆಯ ಸಿಸಿಟಿವಿ ಕ್ಯಾಮರದಲ್ಲಿ ಚಿರತೆಯ ದಾಳಿಯ ದೃಶ್ಯ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನೆಲಮಂಗಲ: ಖದೀಮರು ಮಂಕಿ ಕ್ಯಾಪ್ ಹಾಕಿಕೊಂಡು ಎಟಿಎಂ ದರೋಡೆಗೆ ಯತ್ನಿಸಿದ ಘಟನೆ ನೆಲಮಂಗಲ ತಾಲೂಕಿನ ಕುಲವನಹಳ್ಳಿಯಲ್ಲಿ ಘಟನೆ ಜರುಗಿದೆ. ನಾಲ್ಕೈದು ಮಂದಿಯಿಂದ ಎಟಿಎಂ ದರೋಡೆ ನಡೆದಿದೆ. ಕೆನರಾ ಬ್ಯಾಂಕ್ ಗೆ ಸೇರಿದ ಎಟಿಎಂ ಇದಾಗಿದ್ದು, ಕಳ್ಳರ ಕರಾಮತ್ತು ಬ್ಯಾಂಕ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಾರೆಯ ಮೂಲಕ ಬಾಗಿಲು ಮೀಟಲು ಯತ್ನ ವಿಫಲವಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.