ಬೆಂಗಳೂರು ;- ಸರ್ಕಾರ ಪತನಕ್ಕೆ ಆಪರೇಷನ್ ಯಾಕೆ ಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಈ ಸರ್ಕಾರ ಕೆಡವಲು ನಾವು ಆಪರೇಷನ್ ಕಮಲ ನಡೆಸಬೇಕಿಲ್ಲ, ಅದೇ ನಾರ್ಮಲ್ ಡೆಲಿವರಿಯಾಗುತ್ತದೆ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆಗೆ ಕುಮಾರಸ್ವಾಮಿ ಸಲಹೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರೀಗ ನಮ್ಮ ಮಿತ್ರ ಪಕ್ಷದವರು. ನಮಗೆ ಸಲಹೆ ನೀಡುವುದಕ್ಕೆ ಕುಮಾರಸ್ವಾಮಿಯವರಿಗೆ ಅಧಿಕಾರವಿದೆ. ನಾವು ಜೆಡಿಎಸ್‌ಗೆ ಸಲಹೆ ನೀಡಬಹುದು. ನಾವು ಹೊಂದಾಣಿಕೆಯಲ್ಲಿ ಇದ್ದೇವೆ. ಕುಮಾರಸ್ವಾಮಿಗೆ ಸಲಹೆ ಕೊಡುವ ಸ್ಥಿತಿ ಈಗ ಇಲ್ಲ. ಆ ಸಂದರ್ಭ ಬಂದಾಗ ಕೊಡುತ್ತೇನೆ. ಅವರು ಬಹಳ ಅನುಭವಿ, ಎರಡು ಬಾರಿ ಮುಖ್ಯಮಂತ್ರಿಯಾದವರು ಎಂದರು.
Author: AIN Author
ದಾವಣಗೆರೆ:ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧಿಸಿರುವ ಚನ್ನಗಿರಿ ಪೊಲೀಸರು, 4.50 ಲಕ್ಷ ರೂಪಾಯಿ ಮೌಲ್ಯದ ಒಟ್ಟು 89.52 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯ ವಡ್ನಾಳ್ ರಾಜಣ್ಣ ಬಡಾವಣೆ ವಾಸಿ ಖಾಜಿ ಮೊಹಲ್ಲಾದ ಚಾಲಕ ಮೊಹಮ್ಮದ್ ಗೌಸ್ ಎಸ್. ಅಲಿಯಾಸ್ ಅಸ್ಲಾಂ (32) ಬಂಧಿತ ಆರೋಪಿ. 4,50,000 ರೂಪಾಯಿ ಮೌಲ್ಯದ 89.52 ಗ್ರಾಂ ಬಂಗಾರದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಚನ್ನಗಿರಿ ನಗರದ ಕಾಳಮ್ಮನ ಬೀದಿ ವಾಸಿ ಜ್ಯೋತಿ ಮಂಡಕ್ಕಿ ವ್ಯಾಪಾರಿ ಮಂಜುನಾಥ್ ಅವರ ಪತ್ನಿ ಜ್ಯೋತಿ ಅವರು ಅಕ್ಟೋಬರ್ 14ರಂದು ಸಂಜೆ ನಾಲ್ಕು ಗಂಟೆಗೆ ಎಂದಿನಂತೆ ಮಂಡಕ್ಕಿ ಬೋಂಡಾ ವ್ಯಾಪಾರಕ್ಕೆಂದು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದರು. ಈ ವೇಳೆ ಯಾರೋ ಕಳ್ಳರು ಮನೆಯ ಬೀಗವನ್ನು ಮುರಿದು ಬೀರುವಿನಲ್ಲಿದ್ದ ಒಟ್ಟು 4 ಲಕ್ಷ 61 ಸಾವಿರ ರೂಪಾಯಿ ಮೌಲ್ಯದ 132 ಗ್ರಾಂ ಬಂಗಾರದ ಒಡವೆಗಳನ್ನು ಮತ್ತು 15 ಸಾವಿರ ರೂಪಾಯಿ ಮೌಲ್ಯದ 250 ಗ್ರಾಂ ಬೆಳ್ಳಿ ವಸ್ತುಗಳು, ಹಾಗೂ 1…
ರಾಮನಗರ ;- ಕೇಂದ್ರ ಸರ್ಕಾರ ರಾಜ್ಯವನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೇಂದ್ರ ಸರ್ಕಾರದ ನಡವಳಿಕೆಯನ್ನು ನೋಡಿದರೆ ನಮ್ಮ ರಾಜ್ಯವನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಭಾವನೆ ಮೂಡುತ್ತಿದೆ ಎಂದರು. ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕ. ಆದರೆ ನಮಗೆ ಪರಿಹಾರ ಕೊಡುವಾಗ ಕೇಂದ್ರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯದಲ್ಲಿ 25 ಬಿಜೆಪಿ ಸಂಸದರಿ¨ªಾರೆ. ಮೋದಿ ಬಳಿ ಕುಳಿತು ರಾಜ್ಯದ ವಾಸ್ತವ ಮನವರಿಕೆ ಮಾಡುವ ಧೈರ್ಯ ಯಾರಿಗೂ ಇಲ್ಲ. ಮೋದಿ ಬಳಿ ದೇವರಿಗೆ ನಮಸ್ಕಾರ ಹಾಕಿದ ರೀತಿ ನಮಸ್ಕಾರ ಹಾಕಿ ಬರ್ತಾರೆ ಅಷ್ಟೇ. ರಾಜ್ಯದ ಜನರು, ರೈತರ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇಲ್ಲ. ಅವರಿಂದ ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಸಂಸದರ ವಿರುದ್ಧ ಟೀಕಾಪ್ರಹಾರ ನಡೆಸಿದರು.
ಚಿಕ್ಕಮಗಳೂರು:- ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿಯವರ ಪ್ರಯತ್ನ ಫಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಮ್ಮ ಸರ್ಕಾರ ಗಟ್ಟಿಯಾಗಿದೆ. ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿಯವರ ಪ್ರಯತ್ನ ಫಲಿಸುವುದಿಲ್ಲ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಬೆದರಿಸುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ಇದೆಯೇ ಎಂಬ ಪ್ರಶ್ನೆಗೆ ಆ ಇಲಾಖೆ ನನ್ನ ಕೈಕೆಳಗೆ ಕೆಲಸ ನಿರ್ವಹಿಸುತ್ತಿದೆ. ಈ ವಿಚಾರ ಮೊದಲು ನನಗೆ ತಿಳಿಯಬೇಕಲ್ಲವೇ ಇದೆಲ್ಲ ಸುಳ್ಳು ಎಂದು ಅಲ್ಲಗಳೆದರು. ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ತುಳಿತದಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೊಪ್ಪಳ;- ಕಾಂಗ್ರೆಸ್ ಸೇರಲು ಬಿಜೆಪಿ, ಜೆಡಿಎಸ್‌ನ ಕೆಲ ಶಾಸಕರು ಸಜ್ಜಾಗಿದ್ದಾರೆ ಎಂದು ಸಚಿವ ಆರ್ ಬಿ ತಿಮ್ಮಾಪುರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮುಂಬರುವ ಲೋಕಸಭಾ ಚುನಾವಣೆ ವೇಳೆಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಕೆಲವರು ನನ್ನೊಂದಿಗೂ ಸಂಪರ್ಕದಲ್ಲಿದ್ದಾರೆ’ ಎಂದರು. ಪಕ್ಷಕ್ಕೆ ಬರುವ ಶಾಸಕರ ಹೆಸರು ಹೇಳಲು ಈಗಿನ್ನು ಕಾಲ ಪಕ್ವವಾಗಿಲ್ಲ. ಇದು ರಾಜಕಾರಣದ ಶಕ್ತಿಯ ಆಟ. ಯಾವಾಗ ಹೇಳಬೇಕೊ ಆವಾಗ ಹೇಳುತ್ತೇನೆ’ ಎಂದರು. ‘ನನ್ನೊಂದಿಗೆ ಸಂಪರ್ಕದಲ್ಲಿರುವ ಬೇರೆ ಶಾಸಕರ ಹೆಸರು ಹೇಳಿದರೆ ಅವರಿಗೆ ಕಷ್ಟವಾಗುತ್ತದೆ. ಚುನಾವಣೆ ಹತ್ತಿದ ಬಂದಾಗ ನಿಮಗೇ ಎಲ್ಲ ಗೊತ್ತಾಗುತ್ತದೆ’ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಲೂಟಿಕೋರ ಎಂದು ಕೆ.ಎಸ್. ಈಶ್ವರಪ್ಪ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿ ‘ಈಶ್ವರಪ್ಪ ಅವರ ವಯಸ್ಸಿಗೆ ಸರಿಯಾದ ನಡವಳಿಕೆಯಿಲ್ಲ. ಇದನ್ನು ಜನ ಕೂಡ ಒಪ್ಪುವುದಿಲ್ಲ’ ಎಂದರು.
ಬೆಂಗಳೂರು;- ಮುಂದಿನ 24 ಗಂಟೆಗಳ ಕಾಲ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನ ಕೆಲ ಭಾಗದಲ್ಲಿ ಸುಳಿಗಾಳಿ ಉಂಟಾಗಿದೆ. ಅದರ ಪರಿಣಾಮ ರಾಜ್ಯದಲ್ಲಿ ಇನ್ನೂ ಮೂರು ದಿನ ಹೆಚ್ಚಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿಗೆ ಮಳೆಯಾಗಲಿದೆ. ಮುಂದಿನ ವಾರ ಬಹುತೇಕ ಹಿಂಗಾರು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಪ್ರಸಾದ್ ಅವರು ತಿಳಿಸಿದ್ದಾರೆ.
ಮಧುಗಿರಿ;- ಕರ್ನಾಟಕದ ಬಗ್ಗೆ ಕೇಂದ್ರಕ್ಕೆ ಕಾಳಜಿ ಇಲ್ಲ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೇಂದ್ರ ಸರ್ಕಾರ ರಾಜ್ಯದ ರೈತರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕೇಂದ್ರದ ಬರ ಅದ್ಯಯನ ತಂಡ ರಾಜ್ಯದಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿ ವರದಿ ನೀಡಿದ ನಂತರವೂ ಕೇಂದ್ರದಿಂದ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ’ ಎಂದರು. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ರಾಜ್ಯದ ರೈತರ ಕಷ್ಟಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ರಾಜಕೀಯಕ್ಕಾಗಿ ಬಿಜೆಪಿ ಬರ ಅಧ್ಯಯನ ಮಾಡುತ್ತಿದೆ. ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಹಣ ಕೊಡಿಸುವ ಕೆಲಸ ಮಾಡಬೇಕು ಎಂದರು. ಶೇ 75 ಮಳೆ ಕುಂಠಿತವಾಗಿದೆ. ₹37 ಸಾವಿರ ಕೋಟಿ ನಷ್ಟವಾಗಿದೆ. ಕೆಂದ್ರ ಸರ್ಕಾರಕ್ಕೆ ₹17 ಸಾವಿರ ಕೋಟಿ ನಷ್ಟ ಬರಿಸಿ ಕೊಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈವರೆಗೆ ಹಣ ಬಿಡುಗಡೆ ಮಾಡಿಲ್ಲ. ರಾಜ್ಯದ ಬರ ಪರಿಸ್ಥಿತಿ ವಿವರಿಸಲು ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಮೂರು…
ಬೆಂಗಳೂರು;-ಬೆಲೆ ಇಲ್ಲದವರ ಹೇಳಿಕೆಗೆ ತಲೆಕೆಡಿಸಿಕೊಳ್ಳಲ್ಲ ಎಂದು ಹೇಳುವ ಮೂಲಕ ಈಶ್ವರಪ್ಪಗೆ ST ಸೋಮಶೇಖರ್ ಟಾಂಗ್ ಕೊಟ್ಟಿದ್ದಾರೆ. ʻʻನನ್ನನ್ನು ಪಕ್ಷದಿಂದ ಬಿಟ್ಟು ಹೋಗು ಅಂತ ಹೇಳಲು ಈಶ್ವರಪ್ಪ ಯಾರು!? ʻʻನಾನು ಈಶ್ವರಪ್ಪನನ್ನು ನಂಬಿ ಪಕ್ಷಕ್ಕೆ ಬರಲಿಲ್ಲ. ನಾನು ಯಡಿಯೂರಪ್ಪ ಅವರನ್ನು ನಂಬಿ ಪಕ್ಷಕ್ಕೆ ಬಂದಿದ್ದೇನೆ. ಇದೆಲ್ಲ ಬೆಳವಣಿಗೆಯಾದ ಮೇಲೆ ನಾನು ಯಡಿಯೂರಪ್ಪ ಜತೆ ಮಾತನಾಡಿದ್ದೇನೆ. ಅವರು ಯಾವುದೇ ಕಾರಣಕ್ಕೆ ಪಕ್ಷ ಬಿಡಬೇಡ ಎಂದು ಹೇಳಿದ್ದಾರೆ. ಅವರ ಮಾತಿಗೆ ಬೆಲೆ ಕೊಟ್ಟು ಪಕ್ಷದಲ್ಲಿದ್ದೇನೆ. ಈಗ ಯಾರೋ ಐದು ಜನರು ಮಾತನಾಡುತ್ತಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲʼʼ ಎಂದು ಮೈಸೂರಿನಲ್ಲಿ ಮಾತನಾಡುತ್ತಾ ಅವರು ಹೇಳಿದರು. ʻʻಎಸ್.ಟಿ.ಸೋಮಶೇಖರ್ ಬೆಂಬಲಿಗರು ಮಾತ್ರ ಪಕ್ಷ ಬಿಟ್ಟಿದ್ದಲ್ಲ. ಆರ್ ಅಶೋಕ್ ಕ್ಷೇತ್ರದಲ್ಲಿ ಹೋಗಿಲ್ಲವೇ? ಮುನಿರತ್ನ ಕ್ಷೇತ್ರದಲ್ಲಿ ಹೋಗಿಲ್ಲವೇ? ದಾಸರಹಳ್ಳಿ, ಕೆ.ಆರ್.ಪುರಂ ಕ್ಷೇತ್ರದಲ್ಲಿ ಹೋಗಿಲ್ಲವೇ? ಕೇವಲ ನನ್ನನ್ನೇ ಯಾಕೆ ಟಾರ್ಗೆಟ್ ಮಾಡುತ್ತೀರಾ? ಕ್ಷೇತ್ರದಲ್ಲಿ ಸಾವಿರ ಜನ ಲೀಡರ್ ಇರುತ್ತಾರೆ. ಚುನಾವಣೆ ಸಂಧರ್ಭದಲ್ಲಿ ಆ ಕಡೆ ಈ ಕಡೆ ಹೋಗುತ್ತಾರೆʼʼ ಎಂದು ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್…
ಬೆಂಗಳೂರು;- ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಸದಾನಂದ ಗೌಡ ನಿವೃತ್ತಿ ಘೋಷಿಸಿದ್ದಾರೆ. ಈ ಸಂಬಂಧ ಮಾತನಾಡಿದ ಸದಾನಂದಗೌಡ, ಪಕ್ಷ ನನಗೆ ಎಲ್ಲವನ್ನೂ ನೀಡಿದೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ. ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ರಾಜ್ಯ ಪಕ್ಷದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ’ ಎಂದು ಹೇಳಿದರು.
ಬೆಂಗಳೂರು;- ಉದ್ಯಮಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಹಿರೇಹಡಗಲಿಯ ಹಾಲ ಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಹಾಲಶ್ರೀ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕದಸ್ಯ ಪೀಠ ಅಭಿನವ ಹಾಲಶ್ರೀಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಅಭಿನವ ಹಾಲಶ್ರೀಗಳನ್ನು ಸೆಪ್ಟೆಂಬರ್ 19ರಂದು ಒಡಿಶಾದ ಕಟಕ್‌ನಲ್ಲಿ ಬಂಧಿಸಲಾಗಿತ್ತು