ದೆಹಲಿ;- ಕರ್ನಾಟಕ ಜಗಳಕ್ಕೆ ಮಾದರಿ ಎಂದು ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶದ ಚುನಾವಣಾ ಪ್ರಚಾರದ ವೇಳೆ ಹೇಳಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪ್ರಧಾನಿಗಳು ನಮ್ಮನ್ನು ನೆನೆಸಿಕೊಳ್ಳುತ್ತಿದ್ದಾರಲ್ಲಾ ಅಷ್ಟೇ ಸಾಕು. ನಮ್ಮ ಗ್ಯಾರಂಟಿ, ಕೆಲಸ, ಒಗ್ಗಟ್ಟು ಅವರ ನಿದ್ರೆ ಕೆಡಿಸಿದೆ. ಇದು ಸಂತೋಷದ ವಿಚಾರ, ಅವರಿಗೆ ಅಭಿನಂದನೆಗಳು. ಅದಕ್ಕೆ ಮುಖ್ಯಮಂತ್ರಿ ಏನು ಉತ್ತರ ಕೊಡಬೇಕೋ ಕೊಟ್ಟಿದ್ದಾರೆ ಎಂದು ಹೇಳಿದರು. ಇನ್ನೂ ಬಿಜೆಪಿ ಅವರ ಪಕ್ಷದ, ನಾಯಕತ್ವದ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಅದನ್ನು ಹೊರಗೆ ಹೇಳಿಕೊಳ್ಳಲು ಆಗದೆ, ಇಂತಹ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ಯಾರೋ ಬಂದಂತೆ, ಹೋದಂತೆ ಮಾಡಿ ಹೇಳಿಕೆ ನೀಡುತ್ತಿದ್ದಾರೆ. ಕ್ಷೇತ್ರದ ಕೆಲಸಗಳಿಗೆ, ಕುಶಲೋಪರಿ ವಿಚಾರಿಸಲು ಅನೇಕರು ಬಂದಿರುತ್ತಾರೆ. ಆದರೆ ಮನೆಯಿಂದ ಹೊರಗೆ ಬಂದು ರಾಜಕೀಯ ವಿಚಾರಕ್ಕೆ ಬಂದಿದ್ದೇ ಎಂದು ಮಾಧ್ಯಮಗಳ ಮುಂದೆ ಹೇಳುತ್ತಾರೆ. ಚಲಾವಣೆಯಲ್ಲಿ ಇರಬೇಕಾದ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರು.
Author: AIN Author
ರಾಯಬಾಗ;- ದಲಿತ ಕೆರಿಯನ್ನ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕಡೆಗಣಿಸುತ್ತಿರುವ ಎಂದು ಆರೋಪ ಕೇಳಿ ಬಂದಿದೆ ರಾಯಬಾಗ ಪಟ್ಟಣದ ದಲಿತ ಕೇರಿಯನ್ನ ಕಡೆಗಣನೆ ಮಾಡುತ್ತಿರುವುದು ಜನರು ಅಧಿಕಾರಿಗಳ ಮೇಲೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು ಕಾಲೋನಿ ತುಂಬಾ ಗಟಾರು ಸ್ವಚ್ಛತೆ ಇಲ್ಲದೆ ಮಾರಕವಾದ ರೋಗಗಳು ಹೆಚ್ಚುತ್ತಿವೆ ಕೆಟ್ಟ ದುರ್ವಾಸನೆ ಬೀರುತ್ತಿದೆ ಅಲ್ಲೇ ಸರ್ಕಾರಿ ಶಾಲೆ ಇದ್ದು ಸ್ವಚ್ಛತೆ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿರುವುದು ಸ್ಥಳೀಯ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಬೆಂಗಳೂರು;- ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರಿಗೆ ಬೆಂಗಳೂರಿನ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅರ್ಜಿ ಆಲಿಸಿದ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಮುರುಘಾ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಪೀಠ ಈ ಆದೇಶ ನೀಡಿದೆ. ವಿಸ್ತೃತವಾದ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಈ ಆದೇಶದಿಂದಾಗಿ ಕಳೆದ ಒಂದು ವರ್ಷದಿಂದ ಜೈಲಿನಲ್ಲಿರುವ ಶ್ರೀಗಳಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಅರ್ಜಿ ಸಂಬಂಧ ಈ ಹಿಂದೆ ನಡೆದ ವಿಚಾರಣೆ ವೇಳೆ ದೂರು ಸಲ್ಲಿಸಲು ಸಂತ್ರಸ್ತರಿಗೆ ನೆರವಾಗಿದ್ದ ಒಡನಾಡಿ ಸೇವಾ ಸಂಸ್ಥೆಯ ಪರವಾಗಿ ವಕೀಲ ಡಿ.ಸಿ. ಶ್ರೀನಿವಾಸ್, ಆರೋಪಿ ಶ್ರೀಗಳು ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಅವರಿಗೆ ಜಾಮೀನು ನೀಡಿದರೆ ಪ್ರಕರಣದಲ್ಲಿನ ಸಂತ್ರಸ್ತರಾದ ಬಡ ಮಕ್ಕಳಿಗೆ ಬೆದರಿಕೆ ಎದುರಾಗುವ ಸಾಧ್ಯತೆ ಇದೆ. ಶರಣರು ತಮ್ಮನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂಬುದಾಗಿ ಸಂತ್ರಸ್ತರು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಸ್ವಯಂಕೃತ ಹೇಳಿಕೆ ದಾಖಲಿಸಿದ್ದಾರೆ. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಬೇಕು…
ಬೆಂಗಳೂರು;- ನನ್ನ ವಿರುದ್ಧ ಕೇಳಿಬಂದ ಆರೋಪ ಸಾಬೀತಾದರೆ ಹುದ್ದೆ ತೊರೆಯುತ್ತೇನೆ ಎಂದು ಸಿ ಎಸ್ ಷಡಕ್ಷರಿ ಹೇಳಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ತಮ್ಮ ವರ್ಗಾವಣೆ ಕುರಿತಂತೆ ಮಾತನಾಡಿದ ಅವರು, ನನ್ನ ವಿರುದ್ಧ ಕೇಳಿಬಂದಿರುವ ಆರೋಪಗಳ ಅಧಿಕೃತ ದಾಖಲಾತಿ ತೋರಿಸಲಿ. ಒಂದೊಮ್ಮೆ ತಪ್ಪು ಎಸಗಿರುವುದು ಸಾಬೀತಾದರೆ ಹುದ್ದೆಯನ್ನೇ ತೊರೆಯುತ್ತೇನೆ ಎಂದು ಸವಾಲು ಕೂಡಾ ಹಾಕಿದ್ದಾರೆ. ಈ ವರ್ಗಾವಣೆ ಬಗ್ಗೆ ಮುಖ್ಯಮಂತ್ರಿ ಅವರನ್ನ ಭೇಟಿಯಾಗಿ ಮಾತನಾಡುತ್ತೇನೆ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೆಕ್ಕಾಧೀಕ್ಷಕರಾಗಿದ್ದ ಷಡಕ್ಷರಿ ಅವರನ್ನು ಕೋಲಾರ ಜಿಲ್ಲೆಯಲ್ಲಿ ಖಾಲಿ ಇದ್ದ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾವಣೆಗೊಳಿಸಿ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ (ಆಡಳಿತ ಮತ್ತು ಮುಂಗಡಗಳು ವಿಭಾಗ) ಆದೇಶಿಸಿದ್ದರು. ಸರ್ಕಾರದ ಈ ಆದೇಶ ಹೊರ ಬೀಳುತ್ತಿದ್ದಂತೆ ಬೆನ್ನಲ್ಲೇ ಪರ-ವಿರೋಧ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಈಟಿವಿ ಭಾರತದೊಂದಿಗೆ…
ಹಾಸನ: ರಾಜ್ಯದಲ್ಲಿ ಖಾಲಿ ಇರುವ ಎಲ್ಲಾ ವೈದ್ಯರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಹಾಸನ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. https://ainlivenews.com/knee-pain-treatment-joint-pain-treatment/ ಜಿಲ್ಲೆಯಲ್ಲಿ ವೈದ್ಯರ ಹುದ್ದೆ ಖಾಲಿ ಕುರಿತು ಪ್ರಶ್ನೆಗೆ ಉತ್ತರಿಸದ ಸಿಎಂ ‘ ರಾಜ್ಯದ ಎಲ್ಲ ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆ ಭರ್ತಿಗೆ ಮಾಡಿಕೊಳ್ಳುವುದಾಗಿ ಹೇಳಿದರು. ಜೊತೆಗೆ ಬಹಳ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಇರುವುದಿಲ್ಲ, ಯಾವುದೇ ಅಧಿಕಾರಿಗಳು ಕೂಡ ತಮ್ಮ ಕೇಂದ್ರ ಸ್ಥಾನದಲ್ಲಿ ಇರಬೇಕು ಎಂದರು.
G9 communication media & entertainment ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರದ ತಂತ್ರಜ್ಞರಿಗಾಗಿ ಆಯೋಜಿಸಲಾಗಿದ್ದ ಈ ಪತ್ರಿಕಾಗೋಷ್ಠಿಯಲ್ಲಿ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ), ನಮ್ಮ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಸಂಕಲನ ಕಾರ್ಯ ನಡೆಯುತ್ತಿದೆ. ನಮ್ಮ ಚಿತ್ರದ ತಂತ್ರಜ್ಞರನ್ನು ಪರಿಚಯಿಸುವ ಸಲುವಾಗಿ ಈ ಪತ್ರಿಕಾಗೋಷ್ಠಿ ಆಯೋಜಿಸಲಾಗಿದೆ. ನಾನು ಹಿಂದೆ ನಿರ್ಮಾಪಕನಾಗಿ ಬಂದಾಗ ಯಾರು ಕೂಡ ನನ್ನನ್ನು ಪರಿಚಯಿಸಿರಲಿಲ್ಲ. ಆಗ ನನಗೆ ತುಂಬಾ ಬೇಸರವಾಗಿತ್ತು. ನಿರ್ಮಾಪಕರಿಗೆ ಸಲುವ ಗೌರವ ಸಲ್ಲಲ್ಲೇ ಬೇಕು. ಹಾಗಾಗಿ ನಾನು ಮೊದಲು ನಿರ್ಮಾಪಕರನ್ನು ಪರಿಚಯಿಸುತ್ತಿದ್ದೇನೆ. ಶರದ್ ನಾಡಗೌಡ, ವಿಶ್ವನಾಥ್ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.…
ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಶೇಕಡ 95ರಷ್ಟು ಮನೆಯ ಒಡತಿಯರಿಗೆ ತಲುಪಿದ್ದು, ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. https://ainlivenews.com/knee-pain-treatment-joint-pain-treatment/ ಬೆಂಗಳೂರಿನ ಬಿಡಬ್ಲ್ಯುಎಸ್ಎಸ್ ಬಿ ಕಚೇರಿಯಲ್ಲಿರುವ ಬೆಂಗಳೂರು ಒನ್ ಕೇಂದ್ರದಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ತರಬೇತಿ ಕುರಿತು ಸಚಿವರು ಮಾಹಿತಿ ಪಡೆದು ಕೊಂಡರು. ಗೃಹಲಕ್ಷ್ಮಿ ಯೋಜನೆ ಕುರಿತು ಆಗಿರುವ ತಾಂತ್ರಿಕ ದೋಷಗಳನ್ನು ಶೀಘ್ರವೇ ಬಗೆಹರಿಸಬೇಕೆಂದು ಸಿಡಿಪಿಒಗಳಿಗೆ ಸೂಚನೆ ನೀಡಿದರು. ತಾಂತ್ರಿಕ ದೋಷ, ಸಿಬ್ಬಂದಿಗಳ ತೊಡಕಿನ ಕುರಿತು ಪರಿಶೀಲನೆ ನಡೆಸಿದರು. * ಶೇಕಡ 95 ರಷ್ಟು ಯಶಸ್ವಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆ ಇದುವರೆಗೂ ಶೇಕಡ 95 ರಷ್ಟು ಯಶಸ್ವಿಯಾಗಿದ್ದು, ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಪ್ರತಿದಿನ ಮೂರು ಜಿಲ್ಲೆಗಳ ಸಿಡಿಪಿಒಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು. ಗೃಹಲಕ್ಷ್ಮಿ ಯೋಜನೆಗೆ ಇದುವರೆಗೂ…
ಬಾಗಲಕೋಟೆ: ಬಿಜೆಪಿ ಕಾರ್ಯಕರ್ತೆ ಹಾಗೂ ಖಾಸಗಿ ಶಾಲೆಯ ಶಿಕ್ಷಕಿಯ ಫೋಟೋದಿಂದ ಅಶ್ಲೀಲ ವೀಡಿಯೋ ತಯಾರಿಸಿ ಬ್ಲ್ಯಾಕ್‍ಮೇಲ್ ಮಾಡಿದ ಪ್ರಕರಣ ಜಮಖಂಡಿಯಲ್ಲಿ ನಡೆದಿದೆ. ಮಹಿಳೆಯ ಫೋಟೋ ಒಂದಕ್ಕೆ ಕಣ್ಣಿಗೆ ಕಪ್ಪು ಪಟ್ಟಿ ಹಾಕಿ ಎಡಿಟ್ ಮಾಡಿ ಅಶ್ಲೀಲ ವೀಡಿಯೋ ತಯಾರಿಸಲಾಗಿದೆ. ನಂತರ ಯಾವುದೋ ಅಶ್ಲೀಲ ವೀಡಿಯೋ ಒಂದನ್ನು ಬ್ಲರ್ ಮಾಡಿ ಬಿಜೆಪಿ ಕಾರ್ಯಕರ್ತೆಯ ವೀಡಿಯೋ ಎಂಬಂತೆ ಬಿಂಬಿಸಲಾಗಿದೆ. ಅಲ್ಲದೇ ಬಿಜೆಪಿ ಕಾರ್ಯಕರ್ತೆಯ ರಾಸಲೀಲೆ ಎಂಬ ಬರಹ ಹಾಕಲಾಗಿದೆ. https://ainlivenews.com/knee-pain-treatment-joint-pain-treatment/ ಈ ವಿಚಾರವಾಗಿ ಬಂದೆನವಾಜ್ ಸರಕಾವಸ್ ಎಂಬಾತ ಮಹಿಳೆಗೆ ಕರೆ ಮಾಡಿ ನಾನು ಖಾಸಗಿ ಸುದ್ದಿ ವಾಹಿನಿಯ ವರದಿಗಾರ. ನನ್ನ ಬಳಿ ನಿಮ್ಮ ರಾಸಲೀಲೆ ವೀಡಿಯೋ ಇದೆ ಎಂದು ಹೇಳಿಕೊಂಡಿದ್ದಾನೆ. ಅಲ್ಲದೇ ನೀವು ನನ್ನನ್ನು ಭೇಟಿಯಾಗಿ ಈ ವಿಚಾರವನ್ನು ಸರಿ ಮಾಡಿಕೊಳ್ಳಿ, ಸ್ವಲ್ಪ ಹಣ ಖರ್ಚಾಗುತ್ತದೆ ಎಂದಿದ್ದಾನೆ. ಹಣ ನೀಡದಿದ್ದರೆ ವೀಡಿಯೋ ವೈರಲ್ ಮಾಡುವ ಬೆದರಿಕೆ ಹಾಕಿದ್ದಾನೆ ಎಂದು ಎಫ್‍ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಜಮಖಂಡಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ನವೆಂಬರ್ 12 ರಂದು ಬೆಂಗಳೂರಿನ (Bangalore) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಕ್ರಿಕೆಟ್ (Cricket) ಪಂದ್ಯಾವಳಿಯನ್ನು ವೀಕ್ಷಿಸುವುದಕ್ಕಾಗಿ ಬಾಲಿವುಡ್ ನಟಿ, ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಪತ್ನಿ ಅನುಷ್ಕಾ ಶರ್ಮಾ ಬೆಂಗಳೂರಿಗೆ ಆಗಮಿಸಿದ್ದಾರೆ. ಸದ್ಯ ಅವರು ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ಒಂದರಲ್ಲಿ ಉಳಿದುಕೊಂಡಿದ್ದಾರೆ. https://ainlivenews.com/knee-pain-treatment-joint-pain-treatment/ ನೆದರ್ ಲ್ಯಾಂಡ್ಸ್ ವಿರುದ್ಧ ಭಾರತವು ಅಂದು ಆಡಲಿದ್ದು, ಜೊತೆಗೆ ವಿರಾಟ್ ಕೊಹ್ಲಿ 50ನೇ ಶತಕವನ್ನು ಬಾರಿಸಬಹುದು ಎನ್ನುವ ನಿರೀಕ್ಷೆ ಕೂಡ ಇದೆ. ಹೀಗಾಗಿ ಕಡ್ಡಾಯವಾಗಿ ಅನುಷ್ಕಾ (Anushka Sharma) ಈ ಪಂದ್ಯವನ್ನು ವೀಕ್ಷಿಸುವುದಕ್ಕಾಗಿ ಬಂದಿದ್ದಾರೆ. ಮೊನ್ನೆಯಷ್ಟೇ ವಿರಾಟ್ ಕೊಹ್ಲಿ 49ನೇ ಸೆಂಚ್ಯುರಿ ಬಾರಿಸಿ, ಸಚಿನ್ ದಾಖಲೆಯನ್ನು ಮುರಿದಿದ್ದಾರೆ. ಈಗಾಗಲೇ ಭಾರತವು ಎಂಟು ಪಂದ್ಯಗಳನ್ನು ಆಡಿದ್ದು, ಇದು ಕೊನೆಯ ಪಂದ್ಯವಾಗಿದೆ. ಈಗಾಗಲೇ ಭಾರತವು ಒಟ್ಟು ಎಂಟು ಪಂದ್ಯಗಳನ್ನು ಗೆದ್ದಿದೆ. ಒಂಬತ್ತನೆ ಪಂದ್ಯವನ್ನೂ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಕ್ರಿಕೆಟ್ ಪ್ರೇಮಿಗಳದ್ದು. ಈಗಾಗಲೇ ಅಂದಿನ ಎಲ್ಲ ಟಿಕೆಟ್ ಸೋಲ್ಡ್ ಔಟ್ ಆಗಿವೆ.
ಬೆಂಗಳೂರು : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅನುದಾನ ಕೊಕ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ಯಾರಿಗೆ ಹಣ ಕೊಟ್ಟಿದ್ದಾರೆ ಹೇಳಲಿ. ಕಟ್ಟಡ ಕಾರ್ಮಿಕರು ಮಾತ್ರವಲ್ಲ. ಎಸ್ಸಿ, ಎಸ್ಟಿ ಮಕ್ಕಳಿಗೂ ಅನ್ಯಾಯ ಮಾಡಿದ್ದಾರೆ. ಟೆಂಡರ್ ಶುರುಮಾಡಬೇಕಾದ ಕಾರ್ಯವನ್ನೂ ನಿಲ್ಲಿಸಿ ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. Congress are looters, this is a shameful government: KS Eshwarappa! ಬಡವರು, ಕಟ್ಟಡ ಕಾರ್ಮಿಕರ ದುಡ್ಡು ಹೊಡೀತಿದ್ದಾರೆ. ಕಾಂಗ್ರೆಸ್ನವರು ಲೂಟಿಕೋರರು. ನಾವು ಲೂಟಿ ಹೊಡೆಯೋದು ಮುಂದುವರಿಸುತ್ತೇವೆ ಅಂತ ಹೊರಟಿದ್ದಾರೆ. ಇದು ನಾಚಿಕೆಗೇಡಿನ ಸರ್ಕಾರ. ನನ್ನ ಜೀವನದಲ್ಲಿ ಇಷ್ಟು ಕರೆಪ್ಟ್ (ಭ್ರಷ್ಟ) ಸರ್ಕಾರ ನೋಡಿಲ್ಲ. ಇವರು ಲೂಟಿಕೋರರು ಅಂತ ನೇರವಾಗಿ ಆರೋಪ ಮಾಡ್ತೀನಿ. ಅದಕ್ಕೆ ನಾನು ಹೇಳಿದ್ದೇನೆ, ಒಬ್ಬ ಜಡ್ಜ್, ರಿಟೈರ್ಡ್ ಜಡ್ಜ್ ನೇಮಕ ಮಾಡಲಿ. ಯಾರ್ಯಾರು ಎಷ್ಟು ಲೂಟಿ ಹೊಡೆದಿದ್ದಾರೆ. ಅವರ ಬಳಿ ಕರೆದುಕೊಂಡು ಹೋಗಿ ನಿಲ್ಲಿಸ್ತೇನೆ ಎಂದು ಕೆ.ಎಸ್ ಈಶ್ವರಪ್ಪ ಸವಾಲ್…