ಧಾರವಾಡ: ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ಮಾಡಿರುವ ಆದೇಶವನ್ನು ಹಿಂಪಡೆಯಲು ಆಗ್ರಹಿಸಿ, ಧಾರವಾಡದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರು ಕಾರ್ಮಿಕ ಸಮಸ್ಯೆ ನಿವಾರಣೆಗೆ ಮಾಡಬೇಕು, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಮಕ್ಕಳಿಗೆ ಪ್ರತಿ ವರ್ಷ ನೀಡುತ್ತಿದ್ದ ಶೈಕ್ಷಣಿಕ ಸಹಾಯ ಧನವನ್ನು ಕಳೆದ 2 ವರ್ಷಗಳಿಂದ ನೀಡಿಲ್ಲ, ಧನ ಸಹಾಯ ಕಡಿಮೆ ಮಾಡಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಶಾಲಾ ಖರ್ಚುಗಳು ಏರುಗತಿಯಲ್ಲಿರುವ ಇಂದಿನ ಬೆಲೆಯೇರಿಕೆಯ ದಿನಗಳಲ್ಲಿ ಮಂಡಳಿಯ ಈ ನಿರ್ಧಾರ ಕಾರ್ಮಿಕರ ಹಕ್ಕನ್ನು ಕಿತ್ತುಕೊಂಡಂತೆ. ಆದ್ದರಿಂದ ಕೂಡಲೇ ಈ ಆದೇಶ ಹಿಂಪಡೆಯಬೇಕು, ಎಂದು ಸರ್ಕಾರವನ್ನು ಅಗ್ರಹಿಸಿದರು.
Author: AIN Author
ದಾವಣಗೆರೆ: ಕರ್ನಾಟಕ ಸರ್ಕಾರ ಯಾವಾಗಾದ್ರು ಬಿದ್ದೋಗಬಹುದು ಎಂಬ ಪಿಎಂ ಮೋದಿ ಹೇಳಿಕೆ ವಿಚಾರಕ್ಕೆ ಸಂಭಂಧಿಸಿದಂತೆ ನಮ್ಮ ರಾಹುಲ್ ಗಾಂಧಿ ಜೊತೆಗೆ 75-80 ಜನ ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೊನ್ನಾಳಿ ಶಾಸಕ ಡಿಜಿ ಶಾಂತನಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ” ಕರ್ನಾಟಕ ಸರ್ಕಾರ ಯಾವಾಗ ಬೇಕಾದ್ರೂ ಬೀಳಬಹುದು ಎಂದಿದ್ದ ಮೋದಿಗೆ ತಿರುಗೇಟು ಕೊಟ್ಟ ಶಾಂತನಗೌಡ, ರಾಹುಲ್ ಗಾಂಧಿ ಸಂಪರ್ಕದಲ್ಲಿ 70-80 ಶಾಸಕರು ಇದ್ದಾರೆ ಎಂದು ಹೇಳಿದರು. ಈ ಬಗ್ಗೆ ನಮ್ಮ ಬಳಿ ರಿಪೋರ್ಟ್ ಇದೆ ಎಂದು ಹೇಳಿದ್ದಾರೆ. ಮೋದಿ ಹೇಳಿದ ತಕ್ಷಣ ಸರ್ಕಾರ ಬೀಳೋಕೆ ಇದು ಪ್ರಜಾಪ್ರಭುತ್ವ, ಪ್ರಧಾನಿಯವರಿಗೆ ಗೌರವ ಇದೆ, ಉಳಿಸಿಕೊಳ್ಳಲಿ, ಮೋದಿ ಜೊತೆ ಶಾಸಕರು ಸಂಪರ್ಕ ಇದ್ದಾರೆ ಎಂದು ಹೇಳುತ್ತಾರೆ. ನಮ್ಮ ರಾಹುಲ್ ಗಾಂಧಿ ಜೊತೆ 75-80 ಬಿಜೆಪಿ ಮಾಜಿ ಹಾಲಿ ಶಾಸಕರು ಸಂಪರ್ಕ ಇದ್ದಾರೆ, ಪಿಎಂ ಕುರ್ಚಿ ಅಲುಗಾಡುತ್ತಿದೆ, ಅದಕ್ಕೆ ಹೀಗೆ ಹೇಳಿದ್ದಾರೆ, ಲೋಕ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು…
ಬೆಂಗಳೂರು : ಭಾರತದ ಕ್ಲಾಸ್ ಬ್ಯಾಟರ್, ರನ್ ಮೆಷಿನ್ ಹಾಗೂ ಕರುನಾಡಿನ ದತ್ತು ಪುತ್ರ ವಿರಾಟ್ ಕೊಹ್ಲಿ ಅವರು ನೆದರ್ಲೆಂಡ್ಸ್ ವಿರುದ್ಧದ ಮುಂದಿನ ವಿಶ್ವಕಪ್ ಪಂದ್ಯಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಕೋಲ್ಕತ್ತಾದಿಂದ ಎಕಾನಮಿ ಕ್ಲಾಸ್ ವಿಮಾನದಲ್ಲಿ ನೇರವಾಗಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಇದು ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. ತಂಡದ ಇತರೆ ಆಟಗಾರರಿಗಿಂತ ಕೊಹ್ಲಿ ಕರುನಾಡಿಗೆ ಬಂದಿರುವುದು ವಿಶೇಷ. ಇನ್ನೂ, ವಿರಾಟ್ ಕೊಹ್ಲಿಯನ್ನು ನೋಡಲು ವಿಮಾನ ನಿಲ್ದಾಣದಲ್ಲಿ ಸಾಕಷ್ಟು ಅಭಿಮಾನಿಗಳು ನೆರೆದಿದ್ದರು. ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವನ್ನು ವಿರಾಟ್ ಕೊಹ್ಲಿ ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ, ವಿರಾಟ್ಗೆ ಬೆಂಗಳೂರಿನಲ್ಲಿ ಇರುವ ಅಭಿಮಾನಿಗಳ ಫಾಲೋಯಿಂಗ್ ಬಗ್ಗೆ ಹೆಚ್ಚೆನೂ ಹೇಳಬೇಕಿಲ್ಲ. ಕರ್ನಾಟಕದಲ್ಲಿಯೂ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ನವೆಂಬರ್ 12 ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಹಾಗೂ ನೆದರ್ಲೆಂಡ್ಸ್ ನಡುವೆ ವಿಶ್ವಕಪ್ ಪಂದ್ಯ ನಡೆಯಲಿದೆ. ಇದೀಗ, ಈ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಇತರೆ ಆಟಗಾರರಿಗಿಂತ ಮೊದಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಕಲಬುರಗಿ: ರಾಜ್ಯದ ಒಟ್ಟು 1000 ಸ್ಮಾರಕಗಳ ದತ್ತು ಕೊಡುವ ಉದ್ದೇಶವಿದ್ದು ಇದು ಎರಡು ವರ್ಷದಲ್ಲಿ ಈಡೇರಿಸುವ ಆಸೆ ಇದೆ. ಈ ಎಲ್ಲ ಸ್ಮಾರಕಗಳ ರಕ್ಷಣೆ ಆ ಬಗ್ಗೆ ಪುಸ್ತಕಗಳ ಪ್ರಕಟಣೆ ಸೇರಿದಂತೆ ಜನರಿಗೆ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಹೇಳಿದ್ರು. ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿರುವ ಪುರಾತನ ನಾಗಾವಿ ಕ್ಷೇತ್ರಕ್ಕೆ ಭೇಟಿ ನೀಡಿ ನಂತ್ರ ಮಾತನಾಡಿ ಈ ರೀತಿ ಹೇಳಿದ್ರು.. ಕನ್ನಡದ ಮೊಟ್ಟಮೊದಲ ವಿವಿ ಅಂದ್ರೆ ಅದು ನಾಗಾವಿ ವಿವಿ ಇಲ್ಲಿ ಕಾನೂನು, ಗಣಿತ, ವೇದ, ಮನು ಸಾಹಿತ್ಯ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇಲ್ಲಿ ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತಿತ್ತು. ಸುಮಾರು 1800 ವರ್ಷಗಳ ಹಿಂದೆ ವಿವಿ ಕೆಲಸ ಮಾಡುತ್ತಿತ್ತು ಎನ್ನುವುದೇ ಹಿರಿಮೆ ಎಂದು ಹೊಗಳಿದರು.ಇಂತಹ ನಾಗಾವಿ ಪುನರುಜ್ಜೀವನ ಗೊಳ್ಳಬೇಕು ಇದಕ್ಕೆ ಬೇಕಾಗುವ ಎಲ್ಲ ರೀತಿಯ ಸಹಕಾರ ನೀಡಲು ಸಿದ್ದ ಎಂದು ಸಚಿವ ಪ್ರಿಯಾಂಕ್ ಅವರಿಗೆ ಭರವಸೆ ನೀಡಿದ್ರು…
ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಈ ಭಾಗದ ಚಿತ್ರೀಕರಣಕ್ಕಾಗಿ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಮೈಸೂರಿಗೆ (Mysore) ಬಂದಿಳಿದಿದ್ದಾರೆ. ಮೈಸೂರು ಸುಪ್ರಸಿದ್ಧ ಮೈಸೂರು ಪಾಕ್ ಅನ್ನು ಶಿಲ್ಪಾ ಸವಿದಿದ್ದಾರೆ. ಆ ವಿಡಿಯೋವನ್ನು ಇನ್ಸ್ಟಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಮೊನ್ನೆಯಷ್ಟೇ ಧ್ರುವ ಸರ್ಜಾ ಹುಟ್ಟುಹಬ್ಬಕ್ಕಾಗಿ (Birthday) ‘ಕೆಡಿ’ ಸಿನಿಮಾ ತಂಡ ಚಿತ್ರದ ಪೋಸ್ಟರ್ (Poster) ರಿಲೀಸ್ ಮಾಡುವ ಮೂಲಕ ಶುಭಾಶಯ ತಿಳಿಸಿತ್ತು. ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್‌ನ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ಧ್ರುವ ಹೊಸ ರೀತಿಯ ಪಾತ್ರವನ್ನು ಮಾಡಿದ್ದಾರೆ. ಆ ಪಾತ್ರದ ಹಿನ್ನೆಲೆಯಾಗಿಟ್ಟುಕೊಂಡು ಈ ಪೋಸ್ಟರ್ ಸಿದ್ಧ ಮಾಡಿತ್ತು ಚಿತ್ರತಂಡ. ಕ್ರಿಯೆಟಿವ್ ಡೈರೆಕ್ಟರ್ ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ `ಕೆಡಿ’ (Kd Film) ಸಿನಿಮಾದ ಫೋಟೋವೊಂದು ಈ ಹಿಂದೆ ಲೀಕ್ ಆಗಿತ್ತು. ಮೈಸೂರಿನಲ್ಲಿ ಚಿತ್ರದ ಶೂಟಿಂಗ್ ನಡೆದಾಗ, ಆ ಭಾಗದ ಶೂಟಿಂಗ್‌ನಲ್ಲಿ ಧ್ರುವ ಸರ್ಜಾ ರೆಟ್ರೋ ಲುಕ್ (Retro Look) ನಲ್ಲಿ ಕಂಡಿದ್ದರು. ಅಭಿಮಾನಿಗಳ…
ಕಲಬುರಗಿ: ಕಲಬುರಗಿಯ ಬರ ಪೀಡಿತ ಪ್ರದೇಶಗಳಿಗೆ ಇವತ್ತು ಬಿಜೆಪಿ ತಂಡ ಭೇಟಿ ನೀಡಿ ಪರಿಶೀಲಿಸಿತು.ಶಾಸಕ ಬಿವೈ ವಿಜಯೇಂದ್ರ ನೇತ್ರತ್ವದ ತಂಡ ಕಲಬುರಗಿ ಪ್ರವಾಸದಲ್ಲಿ ಮೊದಲು ಪಟ್ನಾ ಗ್ರಾಮಕ್ಕೆ ನಂತ್ರ ಜೋಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿನ ಬರ ವೀಕ್ಷಣೆ ಮಾಡಿ ರೈತರ ಸಂಕಷ್ಟವನ್ನ ಆಲಿಸಿತು.. ನಂತ್ರ ಮಾತನಾಡಿದ ವಿಜಯೇಂದ್ರ ಉಸ್ತುವಾರಿ ಸಚಿವರು ನಿಮ್ಮ ಊರಿಗೆ ಬಂದಿದ್ರಾ ಅಂತ ಕೇಳಿದ್ರು. ಒಟ್ಟಾರೆ ರಾಜ್ಯ ಸರ್ಕಾರ ಎಕರೆಗೆ 25 ಸಾವಿರ ರೂಪಾಯಿ ಮಧ್ಯಂತರ ಪರಿಹಾರ ನೀಡಬೇಕೆಂದು ವಿಜಯೇಂದ್ರ ಆಗ್ರಹಿಸಿದ್ರು.
ಬಳ್ಳಾರಿ: ಗಾಂಧಿನಗರ ಭರ್ಜರಿ ಕಾರ್ಯಾಚರಣೆ ನಡೆಸಿ ಕೇವಲ 48 ಗಂಟೆಯಲ್ಲಿ ಕಳ್ಳರನ್ನು ಬಂಧಿಸಿದ್ದಾರೆ. ಮದುವೆ ಕಾರ್ಡ್ ಕೊಡುವ ನೆಪದಲ್ಲಿ ಖದೀಮರು ವೃದೆಯಿಂದ ಚಿನ್ನಭಾರಣ ಕಳುವು ಮಾಡಿದ್ದರು. ನಗರದ ಬಗೀಚಾ ಹೋಟಲ್ ಹಿಂಬದಿಯ, ಶ್ರಿಹರಿ ನಿಲಯದಲ್ಲಿ ಒಬ್ಬರೇ ಇದ್ದ ಅಜ್ಜಿಯನ್ನು ಗಮನಿಸಿ ಕಳ್ಳರಿಂದ ದುಶ್ಕೃತ್ಯ ಎಸಗಲಾಗಿದ್ದು, ವೃದ್ದೆಗೆ ಚಾಕುತೋರಿಸಿ ಬೆದರಿಕೆ ಹಾಕಿ, ಬಂಗಾರವನ್ನು ಕದ್ದಿದ್ದ ಕಳ್ಳರು, ವೃದ್ದೆಯ ಮೈಮೇಲೆ ಇದ್ದ 48 ಗ್ರಾಮ್ ಚೈನ್, 90 ಗ್ರಾಮ್ ತೂಕದ 6 ಬಳೆಗಳು, 9 ಗ್ರಾಮ್ ತೂಕದ 3 ಉಂಗುರಗಳನ್ನು ಕದ್ದು ಎಸ್ಕೆಪ್ ಆದ ಕಳ್ಳರು, ಒಟ್ಟು 7,35,000-ರೂ ಮೌಲ್ಯದ 147 ಗ್ರಾಮ್ ಬಂಗಾರದ ಸಾಮಾನುಗಳನ್ನು ಕದ್ದಿದ್ದರು. ಬಳ್ಳಾರಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಂಜೀತ್ ಭಂಡಾರು ಅವರ ಮಾರ್ಗದರ್ಶನದಲ್ಲಿ ಪಿಐ ಸಿದ್ದಾರಾಮೇಶ್ವರವರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಕೇವಲ 48 ಗಂಟೆಗಳಲ್ಲಿ ಆರೋಪಿಗಳಾದ ಸೇಲ್ವರಾಜನ್ ರಾಕೇಶ್(43) ಮತ್ತು ಶ್ರೀಕಾಂತ್ (44) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯದಲ್ಲಿ ಪಾಲ್ಗೊಂಡು, ಪ್ರಕರಣವನ್ನು…
ಬೆಂಗಳೂರು: ನಿನ್ನೆ ಸಂಜೆ ಶುರುವಾದ ಮಳೆ ರಾತ್ರಿಯಿಡಿ ಸುರಿದು ನಾನಾ ಅವಾಂತರ ಸೃಷ್ಟಿ ಮಾಡಿದೆ. ರಸ್ತೆಗಳೆಲ್ಲಾ ಜಲಾವೃತವಾದ್ರೆ, ಮನೆಗಳಿಗೆ ನೀರು ನುಗ್ಗಿ ಜನ ಜಾಗರಣೆ ಮಾಡುವಂತಾಗಿದೆ. ಅಂಗಡಿ-ಆಸ್ಪತ್ರೆಗಳಿಗೂ ಜಲದಿಗ್ಬಂಧನವಾಗಿದೆ. ಮನೆ ಮುಂದೆ ನಿಲ್ಲಿಸಿದ ಕಾರು-ಬೈಕು ಮುಳುಗಿ ಹೋಗಿದೆ. ಬೆಳಗ್ಗೆಯಾದ್ರೂ ಮನೆಗೆ ಬಂದ ನೀರು ಹೊರಹಾಕಲು ಜನರು ಪರದಾಡಿದ್ರು. ಗಾರ್ಡನ್ ಸಿಟಿ ಬೆಂಗಳೂರು ಭೀಕರ ಮಳೆಗೆ ಮತ್ತೆ ಬೆಚ್ಚಿ ಬಿದ್ದಿದೆ. ಮಳೆ ಇಲ್ಲದೆ ತೀವ್ರ ಪರದಾಟ ಶುರುವಾಗಿದ್ದ ಸಮಯದಲ್ಲಿ ಮಳೆರಾಯ ಕರುಣೆ ತೋರಿಸಲಿಲ್ಲ, ಆದರೆ ಇದೀಗ ಚಳಿಗಾಲ ಹತ್ತಿರವಾಗುತ್ತಿರುವ ವೇಳೆ ಮಳೆ ಅಬ್ಬರ ಜೋರಾಗುತ್ತಿದೆ. ಈ ಮೂಲಕ ಮುಂಗಾರು ಮಳೆ ಕೈಕೊಟ್ಟರೂ, ಹಿಂಗಾರು ಮಳೆ ರಾಜ್ಯದ ಜನರ ಕೈಹಿಡಿದಿದೆ. ಅಷ್ಟಕ್ಕೂ ಕಳೆದ ರಾತ್ರಿ ಶುರುವಾದ ಮಳೆ ಆರ್ಭಟ, ಸಿಲಿಕಾನ್ ಸಿಟಿ ಎಂಬ ಬಿರುದು ಪಡೆದ ರಾಜಧಾನಿ ಬೆಂಗಳೂರನ್ನು ಅಕ್ಷರಶಃ ನಲುಗಿ ಹೋಗುವಂತೆ ಮಾಡಿದೆ. ಈ ಸಮಯದಲ್ಲೇ ವಾಹನ ಸವಾರರು ಹಾಗೂ ಅಪಾರ್ಟ್‌ಮೆಂಟ್ ನಿವಾಸಿಗಳು ಮಳೆಯ ನೀರು ಪಾರ್ಕಿಂಗ್ ಏರಿಯಾಗೆ ನುಗ್ಗಿದ ಕಾರಣ ಪರದಾಡಿದ್ದಾರೆ.…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನೂ 2-3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯಿದ್ದು, ಈ ಕೂಡಲೆ ವಿಪತ್ತು ನಿರ್ವಹಣೆಗಾಗಿ ಪ್ರತಿ ವಾರ್ಡ್ನಲ್ಲೂ ಒಬ್ಬ ಇಂಜಿನಿಯರ್ ಗೆ ಜವಾಬ್ದಾರಿ ವಹಿಸಲು ಆಡಳಿತಾಧಿಕಾರಿಯಾದ ರಾಕೇಶ್ ಸಿಂಗ್ ರವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿದರು. ಬೆಂಗಳೂರಿನ ವಿವಿಧೆಡೆ ನಿನ್ನೆ ರಾತ್ರಿ ಹಲವು ಗಂಟೆಗಳ ಕಾಲ ನಿರಂತರವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ಇಂದು ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಪತ್ತು ನಿರ್ವಹಣೆ, ರಸ್ತೆ ಗುಂಡಿ, ಕಸದ ಸಮಸ್ಯೆ, ಪಾದಚಾರಿ ಮಾರ್ಗ ದುರಸ್ತಿಪಡಿಸುವ ಸಲುವಾಗಿ ಪ್ರತಿ ವಾರ್ಡ್ ನಲ್ಲೂ ಪ್ರತ್ಯೇಕವಾಗಿ ಒಬ್ಬೊಬ್ಬ ಇಂಜಿನಿಯರ್ ಗೆ ಜವಾಬ್ದಾರಿ ನೀಡಲು ಸೂಚಿಸಿದರು. ಮೆಟ್ರೋ, ಬೆಸ್ಕಾಂ, ಜಲಮಂಡಳಿ ಕೆಲಸ ನಡೆಯುವ ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಸಂಬಂಧಪಟ್ಟ ಇಲಾಖೆಗಳಿಗೆ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಎಲ್ಲಾದರು ಸಮಸ್ಯೆ ಇದ್ದರೆ ಅದಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಿ ನಂತರ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು…
ಚೆನ್ನೈ: ತಮಿಳುನಾಡು ಸಚಿವ ಮತ್ತು ಡಿಎಂಕೆ (DMK) ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಸೋಮವಾರ ‘ಸನಾತನ ಧರ್ಮ’ ಕುರಿತು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಕೊನೆವರೆಗೂ ಸನಾತನ ಧರ್ಮ ವಿರೋಧಿಸುತ್ತೇನೆ ಎಂದು ಉದಯನಿಧಿ ಹೇಳಿಕೆ ನೀಡಿದ್ದಾರೆ. ಸನಾತನ ಧರ್ಮವನ್ನು (Sanatana Dharma) ‘ಡೆಂಗ್ಯೂ’ ಮತ್ತು ‘ಮಲೇರಿಯಾ’ಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್, ತಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ ಎಂದಿದ್ದರು. ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಕಾನೂನು ಪರಿಣಾಮ ಎದುರಿಸಲು ಸಿದ್ಧ ಎಂದು ಹೇಳಿದ್ದರು. ಸನಾತನ ಧರ್ಮದ ಕುರಿತು ಮತ್ತೆ ಮಾತನಾಡಿರುವ ಸಿಎಂ ಸ್ಟಾಲಿನ್ ಪುತ್ರ, ನಾನೇನೂ ತಪ್ಪಾಗಿ ಹೇಳಿಲ್ಲ. ನಾನು ಹೇಳಿದ್ದು ಸರಿ, ಅದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. ನನ್ನ ಹೇಳಿಕೆಯನ್ನು ಬದಲಾಯಿಸುವುದಿಲ್ಲ. ನನ್ನ ಸಿದ್ಧಾಂತವನ್ನು ಮಾತನಾಡಿದ್ದೇನೆ. ಅಂಬೇಡ್ಕರ್, ಪೆರಿಯಾರ್ ಹೇಳಿದ್ದಕ್ಕಿಂತ ಹೆಚ್ಚಾಗಿ ಮಾತನಾಡಿಲ್ಲ. https://ainlivenews.com/supreme-ray-healing-centre-reiki-treatment/ ನಾನು ಎಂಎಲ್ಎ ಆಗಬಹುದು, ಮಂತ್ರಿಯಾಗಬಹುದು ಅಥವಾ ಯುವ ಘಟಕದ ಕಾರ್ಯದರ್ಶಿಯಾಗಿ ನಾಳೆ ನಾನು ಇರಬಹುದು. ಆದರೆ ಮನುಷ್ಯನಾಗಿರುವುದು ಹೆಚ್ಚು ಮುಖ್ಯ ಎಂದು ತಿಳಿಸಿದ್ದಾರೆ. ನಾವು ಹಲವಾರು ವರ್ಷಗಳಿಂದ ಸನಾತನದ…