ಪ್ರಸ್ತುತ ದಿನಗಳಲ್ಲಿ ಬ್ಯಾಂಕ್ ಅಕೌಂಟ್‌ನಲ್ಲಿರುವ ಹಣವನ್ನು ಪಡೆದುಕೊಳ್ಳಲು ಹೆಚ್ಚಿನ ಜನರು ಎಟಿಎಂ ಅನ್ನೇ ಅವಲಂಬಿಸಿದ್ದಾರೆ. ಆದರೆ, ಕೆಲವುಬಾರಿ ಹಣ ವಿತ್ ಡ್ರಾ ಮಾಡಲು ಎಟಿಎಂಗೆ ತೆರಳಿದಾಗ ಕಾರ್ಡ್ ಅನ್ನು ಮರೆತು ಹೋಗಿರುತ್ತೇವೆ. ಈ ಪರಿಸ್ಥಿತಿಯಲ್ಲಿ ನಿರಾಶೆಗೊಳ್ಳುವ ಅಗತ್ಯವಿಲ್ಲ. ಯಾಕೆಂದರೆ ಈಗ ನೀವು ಡೆಬಿಟ್ ಕಾರ್ಡ್ ಹೊಂದಿಲ್ಲದಿದ್ದರೂ ಎಟಿಎಂನಿಂದ ಹಣವನ್ನು ಹಿಂಪಡೆಯಬಹುದು. ಮೊದಲ ಬಾರಿಗೆ ATM ಕಾರ್ಡ್ ಇಲ್ಲದೆ ಯುಪಿಐ ಬಳಸಿ ಹಣ ಪಡೆಯುವ ಪ್ರಯತ್ನ ಯಶಸ್ವಿಯಾಗಿದೆ. ಗ್ಲೋಬಲ್ ಫಿಂಟೆಕ್‌ಫೆಸ್ ಪ್ರಯತ್ನ ಸಕ್ಸಸ್ ಆಗಿದ್ದು, ಇದನ್ನು ದೇಶದ ಮೊದಲ ಯುಪಿಐ ಎಟಿಎಂ ಎಂದು ಕರೆಯಲಾಗಿದೆ. ಇನ್ನೂ, ಈ ತಂತ್ರಜ್ಞಾನದಿಂದಾಗಿ ಬೌದ್ಧಿಕ ಎಟಿಎಂ ಕಾರ್ಡ್ ತೆಗೆದುಕೊಂಡು ಹೋಗುವ ಅವಶ್ಯಕತೆಲ್ಲ. ಈ ನೂತನ ಸಾಧನದ ವಿಡಿಯೊ ತುಣಕನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮೊದಲು ಪರದೆ ಮೇಲೆ ಮೂಡುವ ‘ಯುಪಿಐ ಕಾರ್ಡ್ ರಹಿತ ನಗದು ಪಡೆಯುವ ಪ್ರಕ್ರಿಯೆ’ಯನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ನಮಗೆ ಅಗತ್ಯವಿರುವ ನಗದು ಎಷ್ಟು ಎಂಬುದನ್ನು ನಮೂದಿಸಬೇಕು.…
Author: AIN Author
“ತಮ್ಮ ಜನ್ಮ ಜಾತಕದಲ್ಲಿ( ಕುಂಡಲಿ) ಸಂತಾನಯೋಗ ಫಲ ಮತ್ತು ಪರಿಹಾರ” ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಜೀವನದಲ್ಲಿ ಒಂದೇ ಒಂದು ಸಾರಿ ಮದುವೆ ಆಗುತ್ತದೆ. ಮದುವೆ ಕ್ಷಣದಿಂದ ತುಂಬಾ ಉಲ್ಲಾಸ ಜೀವನ ಮಾಡುತ್ತೀರಿ, ನಂತರ ಎರಡು ವರ್ಷ ,ಮೂರು ವರ್ಷ ಕಳೆದು ಹೋಗುತ್ತದೆ. ನಂತರ ನಿಮಗೆ ಮಕ್ಕಳಿಲ್ಲದ ಸಂಕಟ ಪ್ರಾರಂಭವಾಗುತ್ತದೆ. ಆಗ ನೀವು ಆ ದೇವರು ದರ್ಶನ, ವೈದ್ಯರ ಭೇಟಿ ಮಾಡಲು ಪ್ರಾರಂಭಿಸುತ್ತೀರಿ. ವೈದ್ಯರು ಕೆಲವು ವೈದ್ಯಕೀಯ ಪರೀಕ್ಷೆಗಳು ನಡೆಸುತ್ತಾರೆ . ಅದರಲ್ಲಿ ಯಾವುದೇ ತರಹದ ನ್ಯೂನ್ಯತೆ ಕಾಣುವುದಿಲ್ಲ . ಎಲ್ಲ ನಿಮ್ಮ ಆರೋಗ್ಯ ಚೆನ್ನಾಗಿದೆ ಹೌಷಧಿ ತಗೊಳ್ಳಿ ಅಂತ ಸಲಹೆ ನೀಡುತ್ತಾರೆ. ಆದ್ರೂ ನಿರಾಶೆ ಆಗುವ ಸಾಧ್ಯತೆ. ಆಗ ತಮಗೆ ಸಹಾಯಸ್ತ ನೀಡುವುದು ದೈವ ಭಾಗ್ಯ ಅದೇ ಜನ್ಮಜಾತಕ ಅಥವಾ ಜನ್ಮ ಕುಂಡಲಿ. ತಮ್ಮ ಜನ್ಮಕುಂಡಲಿ ಪರೀಕ್ಷಿಸಬೇಕು. ಅದರಲ್ಲಿ ಲಗ್ನದಿಂದ ಪಂಚಮ ಸ್ಥಾನ ನೋಡಿ ಸರಿಯಾಗಿ ಪರೀಕ್ಷಿಸಬೇಕು.ಪಂಚಮ ಸ್ಥಾನಕ್ಕೆ ಯಾರು ಅಧಿಪತಿ ಇದ್ದಾನೆ ,ಶುಭಗ್ರಹಗಳು…
ಜನ್ಮ ಕುಂಡಲಿಯಲ್ಲಿ ( ಜಾತಕ )ಯಾವ ಮನೆಯಲ್ಲಿ ಶನಿ ಸ್ವಾಮಿಇದ್ದರೆ ವಿವಾಹ ವಿಳಂಬಕ್ಕೆ ಕಾರಣ ವಾಗುತ್ತದೆ? ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕವಿಶ್ಲೇಷಣೆಗಾರರು ರಾಶಿಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಜನ್ಮ ಜಾತಕ ಅಥವಾ ಕುಂಡಲಿ ಲಗ್ನದಿಂದ ಅಂದರೆ ಕೇಂದ್ರದಿಂದ ಸಪ್ತಮ ಸ್ಥಾನ ಶನಿ ಸ್ವಾಮಿ ಇದ್ದರೆ ಮದುವೆ ವಿಳಂಬಕ್ಕೆ ಶನಿಸ್ವಾಮಿಯೇ ಕಾರಣವಾಗುತ್ತಾನೆ. ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ತಮ್ಮ ಮದುವೆ ತಡವಾಗಿ ಅಂದರೆ ಮೂವತ್ತರ ಪ್ರಾಯದ ಮೇಲೆ ಕಂಕಣಬಲ ಕೂಡಿ ಬರುವ ಸಾಧ್ಯತೆ ಇದೆ. ಶನಿ ಸ್ವಾಮಿಯು ನಿಮಗೇನಾದರೂ ಒಲಿದರೆ ಚಿನ್ನದ ತಟ್ಟೆಯಲ್ಲಿ ಊಟ ಮಾಡಿಸುತ್ತಾನೆ, ಆದರೆ ಒಲಿಯದೆ ಹೋದರೆ ತಮಗೆ ದುಃಖ ನೀಡುತ್ತಾನೆ, ಕರ್ಮ ಕಾರನ್ನು ಆಗಿರುತ್ತಾನೆ , ಅಲ್ಪ ಆಯಸ್ಸು ಮತ್ತು ಕಂಟಕನಾಗಿರುತ್ತಾನೆ. ಶನಿ ಸ್ವಾಮಿಗೆ ತುಲಾ ರಾಶಿಯ ಉಚ್ಚ ಸ್ಥಾನವಾಗಿದ್ದು. ಮೇಷರಾಶಿ ನೀಚಸ್ಥಾನ ವಾಗಿರುತ್ತದೆ .ಇಲ್ಲಿ ಮೇಷ ರಾಶಿಗೆ ಅಧಿಪತಿ ಕುಜ. ಕುಜ ಮತ್ತು ಶನಿ ಶತ್ರು ಗ್ರಹಗಳು. ಜ್ಯೋತಿಷ್ಯಶಾಸ್ತ್ರದ…
ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ. ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ, 7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ. 7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ. 7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ…
ಸೂರ್ಯೋದಯ: 06.15 AM, ಸೂರ್ಯಾಸ್ತ : 05.51 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಶ್ವಯುಜ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ನವಮಿ 05:50 AM ತನಕ ನಂತರ ದಶಮಿ ನಕ್ಷತ್ರ: ಇವತ್ತು ಮಖ 04:24 PM ತನಕ ನಂತರ ಪುಬ್ಬಾ ಯೋಗ: ಇವತ್ತು ಬ್ರಹ್ಮ 03:20 PM ತನಕ ನಂತರ ಇಂದ್ರ ಕರಣ: ಇವತ್ತು ಗರಜ 05:50 AM ತನಕ ನಂತರ ವಣಿಜ 07:07 PM ತನಕ ನಂತರ ವಿಷ್ಟಿ ರಾಹು ಕಾಲ: 03:00 ನಿಂದ 04:30 ವರೆಗೂ ಯಮಗಂಡ: 09:00 ನಿಂದ 10:30 ವರೆಗೂ ಗುಳಿಕ ಕಾಲ: 12:00 ನಿಂದ 01:30 ವರೆಗೂ ಅಮೃತಕಾಲ: 01.42 PM to 03.30 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:37 ನಿಂದ ಮ.12:22 ವರೆಗೂ ಮೇಷ ರಾಶಿ: ನಂಬಿದ ಸಹೋದ್ಯೋಗಿಯಿಂದ ನೌಕರದಾರರಿಗೆ ಮುಂಬಡ್ತಿಯಿಂದ ವಿಳಂಬ, “ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು” ಎಂಬ ನಾಣ್ನುಡಿಯಂತೆ…
ಕೋಲಾರ:-ಅಪ್ರಾಪ್ತ ಬಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ಬಾಲಕ ಕಾರ್ತಿಕ್ ಸಿಂಗ್ ಕುಟುಂಬಸ್ಥರು ಹಾಗೂ ಸಂಬಂದಿಕರಿಂದ ಪ್ರತಿಭಟನೆ ಜರುಗಿದೆ. ಕೋಲಾರ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆದಿದೆ. ಆರೋಪಿಗಳನ್ನು ಗುಂಡಿಕ್ಕಿ ಕೊಲ್ಲುವಂತೆ ಆಗ್ರಹಿಸಿದ್ದಾರೆ. ಇನ್ನೂ ಘಟನೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಇತೇಂದ್ರ, ಕೇಂದ್ರ ವಲಯದ ಐಜಿಪಿ ರವಿಕಾಂತೇಗೌಡ ಅವರಿಂದ ಕೋಲಾರದ ಎಸ್ಪಿ ಕಛೇರಿಯಲ್ಲಿ ಸಭೆ ನಡೆದಿದೆ.
ಹುಬ್ಬಳ್ಳಿ : ಗ್ರಾಮೀಣ ಭಾಗದಲ್ಲಿ ಜನರು ಸರ್ಕಾರದ ಬಗ್ಗೆ ಹೆಚ್ಚು ಆಶಾ ಭಾವನೆಯನ್ನು ಹೊಂದಿದ್ದಾರೆ. ಅಧಿಕಾರಿಗಳು ಕ್ರೀಯಾಶೀಲ, ಆಸಕ್ತಿಯಿಂದ ಜನರಿಗೆ ಅನುಕೂಲವಾಗುವಂತೆ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು. ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 3 ಲಕ್ಷ ಹೆಕ್ಟೇರ್ ವಿವಿಧ ಬೆಳೆ ಬಿತ್ತನೆಯಾಗಿದ್ದು, 2 ಲಕ್ಷ 11 ಸಾವಿರ ಹೆಕ್ಟೇರ್ ಸೋಯಾಬಿನ್, ಈರುಳ್ಳಿ, ಸೇರಿದಂತೆ ವಿವಿಧ ಬೆಳೆಗಳು ಹಾನಿಯಾಗಿವೆ. ಈ ಕುರಿತು ಸರ್ಕಾರಕ್ಕೆ ವರದಿ ತಯಾರಿಸಿ ಸಲ್ಲಿಸಲಾಗುತ್ತಿದೆ. ಅಲ್ಲದೇ ಸರ್ಕಾರಕ್ಕೆ ರೂ. 212 ಕೋಟಿ ಬೆಳೆ ಪರಿಹಾರ ಬೇಕು ಎಂದು ಮನವಿ ಸಲ್ಲಿಸಲಾಗಿದೆ. ಜಿಲ್ಲೆಗೆ ರೂ.12 ಕೋಟಿ ಬೆಳೆ ಪರಿಹಾರ ಘೋಷಣೆಯಾಗಿದೆ. ಮುಂದಿನ ಜೂನ್ ತಿಂಗಳವರೆಗೆ ಸುಮಾರು 3 ರಿಂದ 4 ಲಕ್ಷ ಟನ್ ಮೇವಿನ ಬೇಡಿಕೆಯಿದೆ. ಇಂದು ಬರ ಪರಿಸ್ಥಿತಿ ಪರಿಶೀಲನೆ ಸಂದರ್ಭದಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಸಹ ಮಳೆಯಾಗಬೇಕಿದೆ.…
ಬಳ್ಳಾರಿ;-ಕಾಂಗ್ರೆಸ್‌ನ ನಾನೇ ಸಿಎಂ ವಿವಾದದ ಬಗ್ಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಯಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್‌ನಲ್ಲಿ ಎಲ್ಲರೂ ಮುಖ್ಯಮಂತ್ರಿಯಾಗುವವರೇ..?. ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ ಎಂದು 224 ಜನರು ಹೇಳುತ್ತಿದ್ದಾರೆ. ಇನ್ನೂ ರಾಜಕಾರಣದಲ್ಲಿ ಕಣ್ಣು ಬಿಟ್ಟಿಲ್ಲ, ಪ್ರಿಯಾಂಕ್ ಖರ್ಗೆ ನಾನು ಸಿಎಂ ಎನ್ನುತ್ತಾರೆ. ಅವರಪ್ಪನ ಹೆಸರು ಹೇಳಿದ್ದರೆ ಒಪ್ಪಿಕೊಳ್ಳುತ್ತಿದ್ದೆ. ಆದರೆ ನಾನೇ ಸಿಎಂ ಅಂತಾನೆ ಮಗ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಲೇವಡಿ ಮಾಡಿದ್ದಾರೆ ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಮುಖ್ಯಮಂತ್ರಿ ಆಗಲು ಬಿಟ್ಟಿಲ್ಲ. ಇನ್ನು ಇವರನ್ನು ಬಿಡುತ್ತಾರಾ. ಸತೀಶ್ ಜಾರಕಿಹೊಳಿ ಅವರು ಕೂಡ ಸಿಎಂ ರೇಸ್‌ನಲ್ಲಿದ್ದಾರೆ ಎನ್ನುತ್ತಾರೆ. ಇನ್ನೂ ಜಿ. ಪರಮೇಶ್ವರ ಅವರು ಮುಖ್ಯಮಂತ್ರಿಯಾಗಲಿ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳುತ್ತಿದ್ದಾರೆ. ಪರಮೇಶ್ವರ ದೇವರು ಅನುಗ್ರಹ ಇದ್ದರೆ ಸಿಎಂ ಆಗುತ್ತೇನೆ ಎನ್ನುತ್ತಾರೆ. ದೇವರನ್ನು ಬೈಯುವ ಕಾಂಗ್ರೆಸ್‌ನವರು ಇದೀಗ ದೇವರು ಎನ್ನುತ್ತಾರೆ ಎಂದರು. ಸಂವಿಧಾನ ತಿದ್ದುಪಡಿ ಮಾಡಿ ಜಾತಿಗೊಂದು ಮುಖ್ಯಮಂತ್ರಿ ಮಾಡಲಿ. ಪರಮೇಶ್ವರ ಮತ್ತು ಖರ್ಗೆಗಾಗಿ ಅದೊಂದು ಜಾತಿಗೆ ಎರಡು…
ಹಾನಗಲ್;- ತಾರಕೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಅಡ್ಡಿಪಡಿಸಿದ್ದ ಮುಸ್ಲಿಂ ಮೂಲಭೂತವಾದಿಗಳ ಕೃತ್ಯ ಖಂಡಿಸಿ ಇಂದು ಹಾನಗಲ್ ನಗರದಲ್ಲಿ ಪಾದಯಾತ್ರೆ ನಡೆಸಲಾಯಿತು. “ಹಾನಗಲ್ ಚಲೋ” ತಾರಕೇಶ್ವರ ಪಲ್ಲಕ್ಕಿ ಶೋಭಾ ಯಾತ್ರೆಯಲ್ಲಿ ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ದ ರಾಜಯೋಗೇಂದ್ರ,ಕೂಡಲದ ಗುರು ಮಹೇಶ್ವರ ಶಿವಾಚಾರ್ಯ ಶ್ರೀಗಳು, ಅಕ್ಕಿಆಲೂರಿನ ವಿರಕ್ತಮಠದ ಶಿವಬಸವ ಶ್ರೀಗಳು,ಬಿಜೆಪಿ ಜಿಲ್ಲಾಧ್ಯಕ್ಷರಾದ ಸಿದ್ದರಾಜ ಕಲಕೋಟಿ, ಮಾಜಿ ಶಾಸಕರಾದ ಶಿವರಾಜ ಸಜ್ಜನರ, ಗವಿಸಿದ್ದಪ್ಪ ದ್ಯಾಮಣ್ಣವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣ ಈಳಗೇರ, ಶಶಿಧರ ಹೊಸಳ್ಳಿ, ರುದ್ರೇಶ್ ಚಿನ್ನಣ್ಣನವರ, ಪ್ರಮುಖರಾದ ಕಲ್ಯಾಣ ಕುಮಾರ ಶೆಟ್ಟರ, ಕೆ ಶಿವಲಿಂಗಪ್ಪ, ದೀಪಕ್ ಹರಪನಹಳ್ಳಿ, ಬಸವರಾಜ ಕೇಲಗಾರ, ಶಿವಾನಂದ ಮ್ಯಾಗೇರಿ, ಗಂಗಾಧರ ಬಾಣದ, ನಿಂಗಪ್ಪ ಗೊಬ್ಬೇರ, ಮಾಲತೇಶ್ ಸೊಪ್ಪಿನ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ರಮೇಶ್ ಪಾಲನಕರ ಹಾಗೂ ಸಾವಿರಾರು ಹಿಂದೂ ಸಮಾಜ ಬಾಂಧವರು, ಹಿಂದೂ ಸಂಘಟನೆಗಳ ಪ್ರಮುಖರು, ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಚಾಮರಾಜನಗರ;- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಗದೀಶ್ ಶೆಟ್ಟರ್ ಅವರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಲೂ ಯೋಗ್ಯತೆಯಿಲ್ಲ. ಇಂತಹವರನ್ನು ಬಿಜೆಪಿ ಮುಖ್ಯಮಂತ್ರಿ, ರಾಜ್ಯಾಧ್ಯಕ್ಷ ಹುದ್ದೆ, ವಿರೋಧ ಪಕ್ಷದ ನಾಯಕ, ಸ್ಪೀಕರ್, ಮಂತ್ರಿ ಸೇರಿದಂತೆ ಎಲ್ಲಾ ಹುದ್ದೆ ಕೊಟ್ಟಿದೆ. ಹೀಗಾಗಿ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಶೆಟ್ಟರ್‌ಗೆ ಇಲ್ಲ. ಶೆಟ್ಟರ್‌ರವರೇ ದಯವಿಟ್ಟು ಕಿರಾಣಿ ಅಂಗಡಿ ತೆಗೆದುಕೊಂಡು ಕುಳಿತುಕೊಳ್ಳಿ ಎಂದರು. ಬಿಜೆಪಿಯಲ್ಲಿ ವಿ.ಸೋಮಣ್ಣ ಅವರನ್ನು ಕಡೆಗಣನೆ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ಮಾತನಾಡಿದ ಯತ್ನಾಳ್, ಪಕ್ಷದಲ್ಲಿ ಸೋಮಣ್ಣಗೆ ದೊಡ್ಡ ಭವಿಷ್ಯವಿದೆ, ಅವರ ಕೊಡುಗೆ ದೊಡ್ಡದಿದೆ. ಹೀಗಾಗಿ ಹೈಕಮಾಂಡ್ ಬರ ಅಧ್ಯಯನ ತಂಡದಲ್ಲಿ ಅವರಿಗೆ ಸ್ಥಾನ ಕೊಟ್ಟಿಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಿದರೆ ರಾಜ್ಯಾಧ್ಯಕ್ಷ ಆಗಬಹುದು ಎಂದರು. ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಾರೆ ಅಂತಾರೆ. ಕಾಂಗ್ರೆಸ್ ತಮ್ಮಲ್ಲಿರುವ 136 ಶಾಸಕರನ್ನು ಸಮಾಧಾನಪಡಿಸಬೇಕಿದೆ. BJP ಬಿಟ್ಟು ಯಾರಾದರೂ ಕಾಂಗ್ರೆಸ್ಗೆ ಹೋದರೆ ಮಣ್ಣು ತಿನ್ನಬೇಕಾಗುತ್ತದೆ ಎಂದರು.…