ಬೆಂಗಳೂರು:- ಕಾಲ್ತುಳಿತದಿಂದ ಆದ ಅಪಾರ ಸಾವು-ನೋವಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. https://ainkannada.com/the-death-of-two-people-including-a-horrific-accident-is-serious/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಇದು ರಾಜ್ಯ ಸರ್ಕಾರದ ನಿರ್ಲಕ್ಷ್ಯ. ಯಾವುದೇ ತಯಾರಿ ಮಾಡಿಕೊಳ್ಳದೇ ಈ ಕಾರ್ಯಕ್ರಮ ಮಾಡಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಪೊಲೀಸರ ಅನುಮತಿ ಇರಲಿಲ್ಲ. ಆದರೂ ಮುಖ್ಯಮಂತ್ರಿಗಳು ಒತ್ತಾಯ ಮಾಡಿ ಕಾರ್ಯಕ್ರಮ ಮಾಡಿದ್ದಾರೆ. ಹೆಣ್ಣುಮಕ್ಕಳಿಗೆ ಯಾವುದೇ ಭದ್ರತೆ ಇರಲಿಲ್ಲ. ಅಧಿಕಾರಿಗಳ ಮಕ್ಕಳು, ಅಧಿಕಾರಿಗಳು ಸೆಲ್ಫಿ ತಗೊಂಡು ಈ ರೀತಿ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಪ್ರಚಾರದ ಹುಚ್ಚಿಗೆ ಜನ ಬಲಿಯಾಗಿದ್ದಾರೆ. ಅಲ್ಲಿ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಕೊಂಡಿರಲಿಲ್ಲ. ನ್ಯಾಯಾಂಗ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಹನ್ನೊಂದಕ್ಕೂ ಹೆಚ್ಚು ಜನ ಸಾವು, ನೂರಾರು ಜನ ಚಿಕಿತ್ಸೆ ಪಡಿದ್ದಾರೆ. ಬೌರಿಂಗ್‌ನಲ್ಲಿ ಆರು ಮಂದಿ ಸತ್ಗಿದ್ದಾರೆ. ವೈದೇಹಿಯಲ್ಲಿ ನಾಲ್ಕು ಅಂತಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದಾರೆ. ರಾಜ್ಯ ಸರ್ಕಾರ ಯಾಕೆ ಆತುರ ಪಟ್ಟಿತು. ಇದಕ್ಕೆ ನೇರ ಕಾರಣ ಎಂದು ಆರೋಪಿಸಿದ್ದಾರೆ
Author: AIN Author
ಹುಬ್ಬಳ್ಳಿ : ಮದುವೆ ಸಮಾರಂಭ ಮುಗಿಸಿ ಮನೆಗೆ ಬರುತ್ತಿದ್ದ ವೇಳೆಯಲ್ಲಿ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟರೇ ಇನ್ನೋರ್ವ ಆಸ್ಪತ್ರಯಲ್ಲಿ ಸಾವನ್ನಪ್ಪಿ 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡು ಕೆಎಂಸಿಆರ್ ಐ https://ainkannada.com/a-terrible-footing-at-chinnaswamy-stadium-what-did-draupadi-murmu-and-rahul-gandhi-say-about-the-incident/ ಆಸ್ಪತ್ರೆಗೆ ದಾಖಲಾದ ಘಟನೆ ಕಲಘಟಗಿ ತಾಲ್ಲೂಕಿನ ದೇವಿಕೊಪ್ಪ ಕ್ರಾಸ್ ಬಳಿ ನಡೆದಿದೆ. ಕುಂದಗೋಳ ತಾಲ್ಲೂಕಿನ ಯಳಿವಾಳ ಗ್ರಾಮದ ಮದುವೆ ಕಾರ್ಯಕ್ರಮವನ್ನ ಕಲಘಟಗಿ ತಾಲ್ಲೂಕಿನ ದೇವಿಕೊಪ್ಪ ಗ್ರಾಮಕ್ಕೆ ಬರುವಾಗ ಘಟನೆ ನಡೆದಿದೆ. ಗಾಯಾಳುಗಳನ್ನ ಹುಬ್ಬಳ್ಳಿ ಕೆಎಂಸಿಆರ್ ಐ ಆಸ್ಪತ್ರೆಗೆ ದಾಖಲು ಮಾಡಿದ್ದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಆರೋಗ್ಯ ವಿಚಾರಣೆ ನಡೆಸಿದರು.
ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಹುಲ್ ಗಾಂಧಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. https://ainkannada.com/11-deaths-from-the-footsteps-what-did-virat-kohli-say/ ಈ ಸಂಬಂಧ X ಮಾಡಿರುವ ಅವರು, ದ್ರೌಪದಿ ಮುರ್ಮು, ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದುರಂತ ಘಟನೆಯಲ್ಲಿ ಸಂಭವಿಸಿದ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ದುರಂತ ಹೃದಯವಿದ್ರಾವಕ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುಃಖದ ಸಮಯದಲ್ಲಿ, ನಾನು ಬೆಂಗಳೂರಿನ ಜನರೊಂದಿಗೆ ನಿಲ್ಲುತ್ತೇನೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಬೆಂಬಲ ಮತ್ತು ಪರಿಹಾರವನ್ನು ಒದಗಿಸಬೇಕು. ಈ ದುರಂತವು ನೋವಿನ ಜ್ಞಾಪನೆಯಾಗಿದೆ. ಸಾರ್ವಜನಿಕ ಕಾರ್ಯಕ್ರಮಗಳಿಗೆ ಪ್ರತಿಯೊಂದು ಸುರಕ್ಷತಾ ಪ್ರೋಟೋಕಾಲ್ ಅನ್ನು ಪರಿಶೀಲಿಸಬೇಕು ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.…
ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿರುವ ಘಟನೆ ಕುರಿತು ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದಾರೆ. https://ainkannada.com/property-earning-for-these-piles-and-money-is-best-thursdays-future-is-05-june-2025/ ಮೊದಲಿಗೆ ಮೊದಲಿಗೆ RCB ಪ್ರಾಂಚೈಸಿ X ಮಾಡಿದ್ದು, ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಅಲ್ಲಿ ನಡೆದ ಅನಾಹುತದ ಕುರಿತು ಮಾಧ್ಯಮ ವರದಿಗಳ ಮೂಲಕ ತಿಳಿದುಬಂದಿದೆ. ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ’ ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ. ಪ್ರಾಣ ಕಳೆದುಕೊಂಡವರಿಗೆ ಆರ್‌ಸಿಬಿ ಶೋಕ ವ್ಯಕ್ತಪಡಿಸುತ್ತದೆ ಮತ್ತು ಪೀಡಿತ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ಮುಗಿಸಿದ್ದೇವೆ ಮತ್ತು ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ದಯವಿಟ್ಟು ಸುರಕ್ಷಿತವಾಗಿರುವಂತೆ ನಮ್ಮ ಅಭಿಮಾನಿಗಳಿಗೆ ನಾವು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ. ಇನ್ನೂ ಆರ್‌ಸಿಬಿ ಅಭಿಮಾನಿಗಳು ಅತೀ ಹೆಚ್ಚು ಇಷ್ಟಪಡುವ ವಿರಾಟ್ ಕೊಹ್ಲಿ ಅವರು ಯಾವುದೇ…
ಸೂರ್ಯೋದಯ – 5:44 ಬೆ. ಸೂರ್ಯಾಸ್ತ – 6:44 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ಜೇಷ್ಠ ಮಾಸ, ಗ್ರೀಷ್ಮ ಋತು, ತಿಥಿ – ದಶಮಿ ನಕ್ಷತ್ರ – ಹಸ್ತ ಯೋಗ – ಸಿದ್ಧಿ ಕರಣ – ತೈತಲೆ ರಾಹು ಕಾಲ – 01:30 ದಿಂದ 03:00 ವರೆಗೆ ಯಮಗಂಡ – 06:00 ದಿಂದ 07:30 ವರೆಗೆ ಗುಳಿಕ ಕಾಲ – 09:00 ದಿಂದ 10:30 ವರೆಗೆ ಬ್ರಹ್ಮ ಮುಹೂರ್ತ – 4:08 ಬೆ ದಿಂದ 4:56ಬೆ. ವರೆಗೆ ಅಮೃತ ಕಾಲ – 11:48 ರಾ. ದಿಂದ 1:36 ಬೆ. ವರೆಗೆ ಅಭಿಜಿತ್ ಮುಹುರ್ತ – 11:48 ಬೆ ದಿಂದ 12:40 ಮ.ವರೆಗೆ ಮೇಷ ರಾಶಿ: ಮಂಚ ಸೋಫಾ ಸೆಟ್ ತಯಾರಿಕಾ ಘಟಕದವರಿಗೆ ಲಾಭ ಪಡೆಯಲಿದ್ದೀರಿ, ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ…
ಬೆಂಗಳೂರು:- ಆರ್‌ಸಿಬಿ ತಂಡದ ವಿಜಯೋತ್ಸವದಲ್ಲಿ ನಡೆದ ಅವ್ಯವಸ್ಥೆಗೆ ಬಿಸಿಸಿಐ ತೀವ್ರ ವಿಷಾದ ವ್ಯಕ್ತಪಡಿಸಿದೆ. https://ainkannada.com/chinnaswamy-tragedy-this-is-a-heartbreaking-event/ ಆಯೋಜಕರು ಕಾರ್ಯಕ್ರಮವನ್ನು ಉತ್ತಮ ಸಿದ್ಧತೆಯೊಂದಿಗೆ ಮಾಡಬೇಕಾಗಿತ್ತು. ಇದು ತುಂಬಾ ದುರದೃಷ್ಟಕರ, ಆರ್‌ಸಿಬಿಯ ಗೆಲುವಿನ ನಂತರ ಸಂಘಟಕರು ಕಾರ್ಯಕ್ರಮವನ್ನು ಸರಿಯಾಗಿ ಯೋಜಿಸಬೇಕಾಗಿತ್ತು. ಅಂತಹ ವಿಜಯೋತ್ಸವ ನಡೆದಾಗ, ಸರಿಯಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ‘ಈ ವಿಜಯೋತ್ಸವದ ಮೆರವಣಿಗೆಯ ಬಗ್ಗೆ ತಿಳಿದಿರಲಿಲ್ಲ. ಈ ಅಪಘಡ ದುಃಖಕರವಾಗಿದೆ. ಆದರೆ ಇದರ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಆರ್‌ಸಿಬಿ ಆಡಳಿತ ಮಂಡಳಿಯೊಂದಿಗೆ ಮಾತನಾಡಿದ್ದೇನೆ ಎಂದರು. ಆದಾಗ್ಯೂ ಈ ಅಪಘಡದ ನಂತರ, ಆರ್‌ಸಿಬಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಈ ದುರಂತದ ನಡುವೆಯೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ನಡೆಸಿರುವುದು ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/kolar-free-health-checkup-camp-in-mulagabilu-town/ ಈ ಸಂಬಂಧ X ಮಾಡಿರುವ ಅವರು,ಸಂಭ್ರಮಾಚರಣೆಯು ಯಾವ ರೀತಿ ದುಃಖಕರ ಸಂಗತಿಯಾಗಿ ಬದಲಾಯಿತು. ನಿಜಕ್ಕೂ ಇದು ಹೃದಯವಿದ್ರಾಕ ಘಟನೆ ಎಂದು ಬರೆದುಕೊಂಡು ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಆರ್‌ಸಿಬಿ ಗೆಲುವು ವಿಜಯೋತ್ಸವದ ವೇಳೆ ಯಡವಟ್ಟು ಸಂಭವಿಸಿ, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ 10 ಮಂದಿ ಆರ್‌ಸಿಬಿ ಫ್ಯಾನ್ಸ್ ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಬೌರಿಂಗ್ ಆಸ್ಪತ್ರೆಯಲ್ಲಿ 5, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಒಬ್ಬರು ಅಭಿಮಾನಿಗಳು ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಕೋಲಾರ:- ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯ್ತು. ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಇರುವ ಮೆಡಿಕವರ್ ಆಸ್ಪತ್ರೆಯ ಸಹಬಾಗಿತ್ವದಲ್ಲಿ ಮುಳಬಾಗಿಲು ಪಟ್ಟಣದ ದೀಪಾ ಆಸ್ಪತ್ರೆಯಲ್ಲಿ ಗ್ರಾಮಾಂತರ ಜನರಿಗಾಗಿ ಎಲ್ಲಾ ರೀತಿಯ ಖಾಯಿಲೆಗಳಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯ್ತು. https://ainkannada.com/tragedy-at-chinnaswamy-stadium-condolences-to-the-deceased/ ಮುಳಬಾಗಿಲು ಪಟ್ಟಣ್ಣದಲ್ಲಿ ಇದೇ ಮೊದಲನೇ ಬಾರಿಗೆ ನಡೆಸಿದ ಬೃಹತ್ ಆರೋಗ್ಯ ತಪಾಸಣೆ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನರು ಭಾಗವಹಿಸಿ ಉಚಿತವಾಗಿ ತಪಾಸಣೆ ಮಾಡಿಸಿಕೊಂಡರು.ಹೆಚ್ಚಿನ ಚಿಕಿತ್ಸೆಗೆ ಅಗತ್ಯವಿರುವ ಕೆಲವರಿಗೆ ಬೆಂಗಳೂರಿನ ಮೆಡಿಕವರ್ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದು ವಿಶೇಷವಾಗಿತ್ತು.ಇದೇ ವೇಳೆ ಶಿಬಿರ ದಲ್ಲಿ ಭಾಗವಹಿಸಿದ್ದ ಮೆಡಿಕವರ್ ಆಸ್ಪತ್ರೆಯ ಜೀಣಾ೯ಂಗ ಮತ್ತು ಯಕೃತ್ ರೋಗ ತಜ್ಞ ವಿಭಾಗದ ವೈದ್ಯ ಡಾ.ರೋಹಿತ್ ಮೈದೂರ್ ಮಾತನಾಡಿ,ಗ್ರಾಮೀಣ ಭಾಗದ ಜನರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಶಿಬರದಾಗಿದ್ದು,ಉಚಿತವಾಗಿ ಆರೋಗ್ಯ ಶಿಬಿರ ನಡೆಸುತ್ತಿದ್ದೇವೆ. ಮೆಡಿಕವರ್ ಆಸ್ಪತ್ರೆಯಲ್ಲಿ ಆಧುನಿಕ ಗುಣಮಟ್ಟದ ಚಿಕಿತ್ಸಾ ಸೌಲಭ್ಯವಿದ್ದು ಜನರು ಇದನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಆರೋಗ್ಯ ಹಾಗೂ ಜೀವನ ಶೈಲಿಯನ್ನು…
ಬೆಂಗಳೂರು, ಜೂ.04: “ಈ ದುರ್ಘಟನೆ ಆಗಬಾರದಿತ್ತು ಆಗಿದೆ. ನಾವು ಮುಂಜಾಗೃತಾ ಕ್ರಮವಾಗಿ ಮೆರವಣಿಗೆಯನ್ನು ರದ್ದು ಮಾಡಿದ್ದೆವು. ಈ ದುರ್ಘಟನೆ ನಡೆದಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಮೃತರಿಗೆ ಸಂತಾಪ ಸೂಚಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. https://ainkannada.com/chinnaswamy-footage-tragedy-prime-minister-narendra-modi-condoled/ ಬೌರಿಂಗ್ ಅಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. “ದುರ್ಘಟನೆ ಬಗ್ಗೆ ಪೊಲೀಸ್ ಆಯುಕ್ತರ ಜತೆ ಚರ್ಚೆ ಮಾಡಿದ್ದೇನೆ. ಲಕ್ಷಾಂತರ ಜನ ಸೇರಿದ್ದು, ಕೆಲವರು ಕ್ರೀಡಾಂಗಣದ ಗೇಟ್ ಅನ್ನು ಮುರಿಯುವ ಪ್ರಯತ್ನ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ 6 ಜನ ಮೃತಪಟ್ಟಿದ್ದು, 11-12 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜನರು ಆತಂಕಕ್ಕೆ ಒಳಗಾಗದೇ, ಶಾಂತರಾಗಿ ಸಹಕಾರ ನೀಡಬೇಕು. ಆರ್ ಸಿಬಿ ತಂಡದ ಸಂಭ್ರಮಾಚಾರಣೆಯನ್ನು 10 ನಿಮಿಷಕ್ಕೆ ಮೊಟಕುಗೊಳಿಸಲಾಗಿದೆ” ಎಂದು ತಿಳಿಸಿದರು. “ಮೆಟ್ರೋಗಳಲ್ಲೂ ಜನದಟ್ಟಣೆ ಹೆಚ್ಚಾಗಿದೆ. ಪೊಲೀಸರು ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದರು. ಆದರೆ ಅನಿರೀಕ್ಷಿತವಾಗಿ ಜನ ಸೇರಿದ್ದಾರೆ” ಎಂದು…
ಬೆಂಗಳೂರು/ನವದೆಹಲಿ:- ಚಿನ್ನಸ್ವಾಮಿ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. https://ainkannada.com/chinnaswamy-tragedy-%e2%82%b9-10-lakhs-relief-for-the-family-of-the-deceased-cm-siddaramaiah-emergency-news-conference/ ಈ ಸಂಬಂಧ X ಮಾಡಿರುವ ಪ್ರಧಾನಿ ಮೋದಿ, ಬೆಂಗಳೂರಿನಲ್ಲಿ ನಡೆದ ಅಪಘಾತ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಅನುಕಂಪವಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇನ್ನೂ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾಲ್ತುಳಿತದ ನಂತರ ಅನೇಕರು ಜೀವಕ್ಕಾಗಿ ಹೋರಾಡುತ್ತಿದ್ದಾರೆ. ಜನಸಂದಣಿ ನಿಯಂತ್ರಣ ಕ್ರಮಗಳನ್ನು ತೆಗೆದುಕೊಂಡಿಲ್ಲ, ಯಾವುದೇ ಮೂಲಭೂತ ವ್ಯವಸ್ಥೆಗಳಿಲ್ಲ. ಕೇವಲ ಅವ್ಯವಸ್ಥೆಯೇ ಎದ್ದು ಕಾಣುತ್ತಿತ್ತು. ಅಮಾಯಕರು ಸಾಯುತ್ತಿದ್ದರೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರೀಲ್‌ಗಳನ್ನು ಚಿತ್ರೀಕರಿಸುವಲ್ಲಿ ಮತ್ತು ಕ್ರಿಕೆಟಿಗರೊಂದಿಗೆ ಪ್ರಚಾರದಲ್ಲಿ ನಿರತರಾಗಿದ್ದರು. ಇದು ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಗೇಡು ಎಂದು ಬಿಜೆಪಿ ಟೀಕಿಸಿದೆ,