ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ. https://ainkannada.com/rape-case-applications-sought-to-transfer-the-case-to-another-court/ ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು, ಇಂದು ಬೆಳಗ್ಗೆಯಿಂದ ಸಂತ್ರಸ್ತ ಕನ್ನಡಿಗರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಮೃತ ಕನ್ನಡಿಗರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ಒದಗಿಸಿದ್ದಾರೆ. ಕರ್ನಾಟಕಕ್ಕೆ ಮರಳುವ ಪ್ರವಾಸಿಗರಿಗೆ ವಿಶೇಷ ವಿಮಾನದ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಪರ್ಕ ಸಂಖ್ಯೆ ಸಂಗ್ರಹಿಸಿ ಗುರುವಾರ ಹೊರಡಲಿರುವ ವಿಮಾನಕ್ಕೆ ಸಜ್ಜಾಗಿ ಎಂದು ಲಾಡ್ ಅವರೇ ತಿಳಿಸುತ್ತಿದ್ದಾರೆ. ಎಷ್ಟು ಪ್ರವಾಸಿಗರು ಇದ್ದೀರಿ? ಎಲ್ಲಿಯವರು ಎಂಬೆಲ್ಲ ವಿವರಗಳನ್ನು ಸಚಿವರು ಕಲೆ ಹಾಕಿ ರಾಜ್ಯಕ್ಕೆ ಮರಳಲು ಕೈ ಜೋಡಿಸಿದ್ದಾರೆ. ಯಾವಾಗ ವಿಮಾನದ ಟಿಕೆಟ್ ಬುಕ್ ಮಾಡಿದ್ದೀರಿ. ಯಾವುದೇ ತೊಂದರೆ ಇಲ್ಲವೇ. ಸುರಕ್ಷಿತವಾಗಿ…
Author: AIN Author
ಬೆಂಗಳೂರು:- ಅತ್ಯಾಚಾರ ಕೇಸ್ ಗೆ ಸಂಬಧಪಟ್ಟಂತೆ ಬೇರೆ ಕೋರ್ಟ್ಗೆ ಪ್ರಕರಣ ವರ್ಗಾಯಿಸಲು ಕೋರಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಲಾಗಿದೆ. https://ainkannada.com/militant-attacks-in-kashmir-massive-protests-by-pro-hindu-organizations/ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅತ್ಯಾಚಾರ ಪ್ರಕರಣ ವರ್ಗಾವಣೆ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣವನ್ನು ಬೇರೆ ಕೋರ್ಟ್ಗೆ ವರ್ಗಾಯಿಸುವಂತೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಪ್ರಧಾನ ಸಿಟಿ ಸಿವಿಲ್ ಕೋರ್ಟ್, ವಿಚಾರಣೆ ವಿಳಂಬಗೊಳಿಸುವ ಪ್ರಯತ್ನಗಳಿಗೆ ಖಂಡನೆ ವ್ಯಕ್ತಪಡಿಸಿ, ವಿಚಾರಣೆ ಮುಂದುವರಿಸುವಂತೆ ಸೂಚನೆ ನೀಡಿ ಅರ್ಜಿ ವಜಾಗೊಳಿಸಿದೆ. ಇನ್ನು, ಈ ಪ್ರಕರಣದಿಂದ ನಿವೃತ್ತರಾಗಲು ಪ್ರಜ್ವಲ್ ರೇವಣ್ಣ ಪರ ವಕೀಲ ಜಿ.ಅರುಣ್ ನಿಶ್ಚಯಿಸಿದ್ದರು. ಈ ಸಂಬಂಧ ನ್ಯಾಯಾಲಯಕ್ಕೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ವಕೀಲ ಜಿ.ಅರುಣ್ ಪ್ರಕರಣದಿಂದ ನಿವೃತ್ತರಾಗಲು ಅನುಮತಿ ನೀಡಿದೆ. ಹೀಗಾಗಿ, ಬೇರೆ ವಕೀಲರನ್ನು ನಿಯೋಜಿಸಲು ಪ್ರಜ್ವಲ್ ರೇವಣ್ಣ ಸಮಯ ಕೇಳಿದ್ದಾರೆ. ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಕ್ಕೆ ಮುಂದೂಡಿದೆ.
ಮಂಡ್ಯ :- ಜಮ್ಮುವಿನ ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯನ್ನು ಖಂಡಿಸಿ ಬಜರಂಗ ದಳ, ಹಿಂದೂ ಪರ ಸಂಘಟನೆಗಳು ಮತ್ತು ಮದ್ದೂರು ತಾಲೂಕು ಭಾರತೀಯ ಜನತಾ ಮೋರ್ಚಾ ಬುಧವಾರ ಸಂಜೆ ನೂರಾರು ಕಾರ್ಯಕರ್ತರು ಮೇಣದ ಬತ್ತಿ ಹಿಡಿದು ಬೃಹತ್ ಪ್ರತಿಭಟನೆ ಮತ್ತು ಮಡಿದರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. https://ainkannada.com/inspector-celebration-in-the-countrys-mourning-road-show-in-home-ministers-hometown/ ಮದ್ದೂರು ಪಟ್ಟಣದ ಹಳೇ ಬಸ್ ನಿಲ್ದಾಣ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯದ ಆವರಣದಿಂದ ಪೇಟೆ ಬೀದಿ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ( ಟಿ.ಬಿ.ಸರ್ಕಲ್ ) ವೃತ್ತದವರೆಗೆ ಮೇಣದ ಬತ್ತಿ ಮೆರವಣಿಗೆ ನಡೆಸಿ ಕೆಲ ಕಾಲ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪಾಕಿಸ್ತಾನಿ ಭಯೋತ್ಪಾದಕರ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಮಾಜಿ ಯೋಧ ಸಿ.ಕೆ.ಸತೀಶ್ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಹಿಂದೂಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಇನ್ನು ಕೆಲ ದಿನಗಳಲ್ಲೇ ಅಮರನಾಥ ಯಾತ್ರೆಯು ಆರಂಭಗೊಳ್ಳುವುದರಲ್ಲಿ ಇತ್ತು. ಯಾತ್ರೆಗಾಗಿ ನೋಂದಣಿ…
ತುಮಕೂರು:- ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ಇಡೀ ದೇಶವೇ ಮರುಗುತ್ತಿದ್ದರೆ, ಇಲ್ಲಿನ ಇನ್ಸ್ಪೆಕ್ಟರ್ ಮಾತ್ರ ಸಂಭ್ರಮಾಚರಣೆಯಲ್ಲಿ ಮುಳುಗಿ ಹೋಗಿದ್ದಾರೆ. https://ainkannada.com/terrorist-attack-in-kashmir-state-government-announces-compensation-of-rs-10-lakh-each-for-the-families-of-deceased-kannadigas/ ಹೌದು, ಜಮ್ಮು ಕಾಶ್ಮೀರದಲ್ಲಿನ ಉಗ್ರರ ದಾಳಿಗೆ ಒಂದೆಡೆ ಇಡೀ ದೇಶವೇ ಮರುಕ ವ್ಯಕ್ತಪಡಿಸಿದೆ. ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡು ಎಷ್ಟೋ ಮೃತರ ಕುಟುಂಬಗಳು ದುಖಃದಲ್ಲಿ ಮುಳುಗಿದೆ. ಒಂದೆಡೆ ದೇಶವೇ ಶೋಕಾಚರಣೆಯಲ್ಲಿ ಮುಳುಗಿದರೆ, ಅದೆಲ್ಲ ಮರೆತ ಇನ್ಸ್ ಪೆಕ್ಟರ್ ಮಾತ್ರ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಎಸ್, ತುಮಕೂರು ಸಿಪಿಐ ಬಿ.ಎಸ್.ದಿನೇಶ್ ಕುಮಾರ್ ನಿಂದ ಸಂಭ್ರಮಾಚರಣೆ ನಡೆದಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗೆ ತುಮಕೂರಿನಿಂದ ಕುಶಾಲನಗರಕ್ಕೆ ದಿನೇಶ್ ಕುಮಾರ್ ವರ್ಗಾವಣೆ ಆಗಿದ್ದರು. ಹೀಗಾಗಿ ಅವರಿಗೆ ಕ್ರೇನ್ ನಲ್ಲಿ ಹಾರ ಹಾಕಿ ಬೀಳ್ಕೊಡುಗೆ ಕೊಡಲಾಗಿದೆ. ತೆರದ ಜೀಪ್ ನಲ್ಲಿ ರ್ಯಾಲಿ ಮಾಡಿ ಶೋ ಮಾಡಲಾಗಿದ್ದು, ಹಾರದ ಒಳಗೆ ಹುಲಿ ಫೋಟೊ ಹಾಕಿ ಇನ್ಸ್ ಪೆಕ್ಟರ್ ಶೋ ಕೊಟ್ಟಿದ್ದಾರೆ. ಗೃಹ ಮಂತ್ರಿ ಡಾ.ಜಿ ಪರಮೇಶ್ವರ್ ತವರಿನಲ್ಲೇ ನಡೆದ ಈ ಸಂಭ್ರಮಾಚರಣೆಯಲ್ಲಿ ಇನ್ಸ್ ಪೆಕ್ಟರ್ ರೋಡ್ ಶೋ ಮಾಡಿದ್ದು,…
ಬೆಂಗಳೂರು/ ಶ್ರೀನಗರ:- ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದೆ. https://ainkannada.com/terrorist-attack-in-kashmir-candlelight-vigil-for-the-souls-of-the-deceased/ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ದಾಳಿಯಲ್ಲಿ ಕನ್ನಡಿಗರೂ ಮೃತಪಟ್ಟಿದ್ದು, ಅವರ ಪಾರ್ಥೀವ ಶರೀರವನ್ನು ರಾಜ್ಯಕ್ಕೆ ತರಲು ಸಕಲ ಸಿದ್ಧತೆಗಳು ನಡೆದಿವೆ. ಪಾರ್ಥೀವ ಶರೀರ ರಾಜ್ಯಕ್ಕೆ ಬರುತ್ತಿದ್ದಂತೆ ಅಂತ್ಯಸಂಸ್ಕಾರಕ್ಕೆ ಸಲ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಬದುಕುಳಿದಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.
ಚಿತ್ರದುರ್ಗ:- ಕಾಶ್ಮೀರದ ಪೆಹಲ್ಗಾಂನಲ್ಲಿ ಯಾತ್ರಿಕರ ಮೇಲೆ ಭಯೋತ್ಪಾದಕ ಕೃತ್ಯ ನಡೆದಿದನ್ನು ಖಂಡಸಿ ದಾಳಿಯಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರಲು ಮೇಣದ ಬತ್ತಿ ಹಿಡಿದು ಶಾಂತಿ ನಡಿಗೆಯ ಮೂಲಕ ಶಾಂತಿ ಕೋರಲಾಯಿತು. https://ainkannada.com/how-much-do-you-know-about-the-specialty-of-the-soil-pot-pottery-water-is-the-best/ ಚಿತ್ರದುರ್ಗ ಜಿಲ್ಲಾ ಬಾಜಪಾ ಮತ್ತು ಇತ್ರೆ ಸಂಘಟನೆಗಳು ಮತ್ತು ಸಾರ್ವಜನಿಕರು ಸೇರಿ ಮೇಣದ ಬತ್ತಿ ಹಿಡಿದು ಮೆರವಣಿಗೆ ನಡೆಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಚಿತ್ರದುರ್ಗ ನಗರದ ನೀಲಕಂಠೇಶ್ವರ ದೇವಾಲಯದಿಂದ ಆರಂಭವಾಗಿ ಪ್ರಮುಖ ಬೀದಿಯಲ್ಲಿ ಚಲಿಸಿದ ನಂತ್ರ ಒಬವ್ವ ವೃತ್ತದಲ್ಲಿ ಎರಡು ನಿಮಿಷ ಮೌನಾಚರಣೆಯ ಅರ್ಪಿಸಲಾಯಿತು.
ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತಾಪಮಾನ ಏರಿಕೆ ಆಗಿದೆ. ಈ ಸಮಯದಲ್ಲಿ ಬಾಯಾರಿಕೆ ಹೆಚ್ಚಾಗಿರುತ್ತದೆ. ಹೀಗಾಗಿ ಎಷ್ಟೇ ನೀರು ಕುಡಿದರೂ ಅದು ನಮಗೆ ಸಾಕಾಗುವುದಿಲ್ಲ ಎಂದೇ ಅನಿಸುತ್ತದೆ. ಅನೇಕ ಮಂದಿ ಬೇಸಿಗೆಯ ಉಷ್ಣತೆ ಸಹಿಸಲಾಗದೇ ಫ್ರಿಡ್ಜ್ ನೀರನ್ನು ಕುಡಿಯುತ್ತಾರೆ. ಆದರೆ ಫ್ರಿಡ್ಜ್‌ನ ನೀರು ಕುಡಿಯೋದರಿಂದ ಶೀತವಾಗುತ್ತದೆ, ಗಂಟಲು ನೋವು ಶುರುವಾಗುತ್ತದೆ. https://ainkannada.com/militant-attack-modi-north-kodtare-soon-jagdish-shetter/ ಕೆಲವರು ಮಣ್ಣಿನ ಮಡಿಕೆಯಲ್ಲಿ ನೀರು ತುಂಬಿಟ್ಟು ಅಲ್ಲಿಂದ ನೀರು ಕುಡಿಯುತ್ತಾರೆ. ಕೆಲವರಿಗೆ ರೆಫ್ರಿಜರೇಟರ್ ನೀರು ಸರಿಹೋಗುವುದಿಲ್ಲ. ಅದರಿಂದ ಗಂಟಲು ನೋವು, ಶೀತದಂತಹ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಆದರೆ ಮಣ್ಣಿನ ಪಾತ್ರೆಯಿಂದ ನೀರು ಕುಡಿಯುವುದರಿಂದ ಇದು ಸಂಭವಿಸುವುದಿಲ್ಲ ಮಣ್ಣಿನ ಮಡಿಕೆಯಲ್ಲಿರುವ ನೀರು ಆರೋಗ್ಯದ ಮೇಲೆ ಸಮಸ್ಯೆ ಬೀರಲ್ಲ. ಅದರ ರುಚಿಯಲ್ಲಿ ಸಿಹಿ ಇರುತ್ತದೆ. ಪ್ರಶ್ನೆ ಏನೆಂದರೆ ಮಣ್ಣಿನ ಮಡಕೆಯಲ್ಲಿರುವ ನೀರು ಹೇಗೆ ತಂಪಾಗಿರುತ್ತದೆ. ವಾಸ್ತವವಾಗಿ.. ಮಡಿಕೆಯ ಗೋಡೆಗಳಲ್ಲಿ ಲೆಕ್ಕವಿಲ್ಲದಷ್ಟು ಸಣ್ಣ, ಸಣ್ಣ ರಂಧ್ರಗಳಿರುತ್ತವೆ. ಅವುಗಳ ಮೂಲಕ ನೀರು ಸೋರುತ್ತಲೇ ಇರುತ್ತದೆ. ಇದರಿಂದ ಮಡಿಕೆಯ ಮೇಲ್ಮೈ ಯಾವಾಗಲೂ ತೇವವಾಗಿರುತ್ತದೆ. ಈ ರಂಧ್ರಗಳಿಂದ ನೀರು…
ಹುಬ್ಬಳ್ಳಿ:- ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೆ ಶೀಘ್ರವೇ ಮೋದಿ ಉತ್ತರ ಕೊಡ್ತಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. https://ainkannada.com/special-flight-to-bring-kannadigas-safely-minister-prahlad-joshi/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಪ್ರಧಾನಿ ಮೋದಿ, ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲೆಸಿತ್ತು. ಹೀಗಾಗಿ ಹೆಚ್ಚಿನ ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಲು ಆರಂಭ ಮಾಡಿದ್ದರು ಎಂದಿದ್ದಾರೆ. ದೇಶದ ಜನತೆ ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು ಅನ್ನೋ ಇಚ್ಛೆ ಹೊಂದಿದ್ದಾರೆ. ಮೃತ ಕುಟುಂಬದ ಜೊತೆಗೆ ದೇಶ, ಭಾರತ ಸರ್ಕಾರವಿದೆ. ಉಗ್ರಗಾಮಿಗಳ ಹತ್ಯೆಯಾಗುತ್ತದೆ. ಭಾರತ ದೇಶ ಜಗತ್ತಿನಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಅದನ್ನು ಸಹಿಸಲು ಪಾಕಿಸ್ತಾನಕ್ಕೆ ಆಗುತ್ತಿಲ್ಲ. ಪಾಕಿಸ್ತಾನ ಅವನತಿ ಆರಂಭವಾಗಿದೆ. ಹಿಂದೂಗಳನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಿದ್ದಾರೆ. ಮೋದಿ ಅವರು ಬಲಾಢ್ಯ ರಾಷ್ಟ್ರ ಕಟ್ಟುತ್ತಿದ್ದಾರೆ. ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ. ಭದ್ರತಾ ವ್ಯವಸ್ಥೆ ಸರಿಯಿದೆ ಎಂದು…
ಹುಬ್ಬಳ್ಳಿ:- ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. https://ainkannada.com/terrorist-attack-in-kashmir-siddaramaiah-says-centres-intelligence-failure/ ಈ ಸಂಬಂಧ ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆ ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಅವರವರ ಊರುಗಳಿಗೆ ತಲುಪಿಸಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು. ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ ಊರುಗಳಿಗೆ ಸುರಕ್ಷಿತವಾಗಿ ತಲುಪಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮಂಗಳವಾರ ರಾತ್ರಿಯೇ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಕನ್ನಡಿಗರನ್ನು ಸುರಕ್ಷಿತವಾಗಿ ಮರಳಿ ಕರೆತರಲು ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷ ವಿಮಾನ ವ್ಯವಸ್ಥೆ ಸಹ ಮಾಡಲಾಗಿದೆ. ಸದ್ಯಕ್ಕೆ ಮುಂಬೈ ಮತ್ತು ದೆಹಲಿಗೆ ಪ್ರವಾಸಿಗರನ್ನು ರವಾನಿಸಲು ಸರ್ಕಾರ ವಿಮಾನ ವ್ಯವಸ್ಥೆ ಮಾಡಿದೆ. ಇನ್ನೆರೆಡು ದಿನಗಳಲ್ಲಿ ಎಲ್ಲ ಪ್ರವಾಸಿಗರನ್ನೂ ಅವರವರ ಸ್ವಸ್ಥಾನಗಳಿಗೆ ಸುರಕ್ಷಿತವಾಗಿ ಮರಳಿಸಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು, ಏಪ್ರಿಲ್ 23 : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://ainkannada.com/terrorist-attacks-in-kashmir-are-unfortunate-minister-k-venkatesh/ ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡಿಗರನ್ನು ಕರೆತರಲು ಕಾರ್ಮಿಕ ಸಚಿವರಿಗೆ ಸೂಚನೆ: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು.. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು. ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ…