ಚಿತ್ರದುರ್ಗ : ಬೈಕ್ ನ ಬ್ಯಾಗಿನಲ್ಲಿದ್ದ ಎರಡು ಲಕ್ಷ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಹಿಡಿದು ಹಣದ ಮಾಲೀಕನಿಗೆ ವಾಪಾಸ್ಸು ಕೊಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿದೆ. ಚಳ್ಳಕೆರೆ ಹಾಲುಗೊಂಡನಹಳ್ಳಿ ಇದ್ದಲು ವ್ಯಾಪಾರಿ ತಿಪ್ಪೇಸ್ವಾಮಿ ಇಂದು ಬೆಳಗ್ಗೆ ಕೆನರಾ ಬ್ಯಾಂಕಿನಲ್ಲಿ ಎರಡು ಲಕ್ಷ ಹಣ ಡ್ರಾ ಮಾಡಿಕೊಂಡು, ಬೈಕ್ ನಲ್ಲಿಟ್ಟು ಬೈಕ್ ಹತ್ತುವ ವೇಳೆ ಕಳ್ಳನೊಬ್ಬ ಹಣ ದೋಚಿ ಪರಾರಿಯಾಗುತ್ತಿದ್ದ. https://ainkannada.com/heavy-rain-forecast-for-these-parts-of-the-country-for-a-week/ ಇದನ್ನು ಗಮನಿಸಿದ ಕಾಟಪ್ಪನಹಟ್ಟಿ ಯುವಕ ಮಂಜುನಾಥ್ ಅಪ್ರಾಪ್ತ ಕಳ್ಳನನ್ನು ಹಿಡಿದು ಹಣ ವಾಪಾಸ್ಸು ಕೊಡಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಪ್ರಾಪ್ತ ಕಳ್ಳ ಸೊಲ್ಲಾಪುರದ ನಿವಾಸಿ ಎಂದು ತಿಳಿದು ಬಂದಿದ್ದು, ಪೋಲಿಸರು ತನಿಖೆ ಆರಂಭಿಸಿದ್ದಾರೆ.
Author: AIN Author
ನವದೆಹಲಿ: ಹವಾಮಾನ ಇಲಾಖೆ ದೆಹಲಿ-NCR ಪ್ರದೇಶ ಸೇರಿದಂತೆ ವಾಯುವ್ಯ ಭಾರತ ಹಾಗೂ ಪೂರ್ವ ಮತ್ತು ಮಧ್ಯ ಭಾರತದಲ್ಲಿ ಭಾರೀ ಮಳೆಯ ನಿರೀಕ್ಷೆ ಇದ್ದು, ಮುಂದಿನ ನಾಲ್ಕು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ವಾರವಿಡೀ ಈ ಪ್ರದೇಶಗಳಲ್ಲಿ ಭಾರೀ ಮಳೆ ಜೊತೆಗೆ ಮಿಂಚು, ಆಲಿಕಲ್ಲು ಮತ್ತು ಬಲವಾದ ಗಾಳಿ ಬೀಳುವ ಸಾಧ್ಯತೆ ಇದೆ ಎಚ್ಚರಿಕೆ ನೀಡಿದೆ. ಕಳೆದ 24 ಗಂಟೆಗಳಲ್ಲಿ, ದೆಹಲಿಯ ಸಫ್ದರ್ಜಂಗ್ ನಿಲ್ದಾದಣದಲ್ಲಿ 77 ಮಿಮೀ ಮಳೆಯಾಗಿದ್ದು, ಇದು 1901 ರಿಂದ ಮೇ ತಿಂಗಳಿನಲ್ಲಿ ಸುರಿದ ಎರಡನೇ ಅತಿ ಹೆಚ್ಚು ಮಳೆಯಾಗಿದೆ. ಮೇ 20, 2021 ರಂದು ಸಫ್ದರ್ಜಂಗ್ ವಿಮಾನ ನಿಲ್ದಾಣದಲ್ಲಿ ದಾಖಲಾಗಿದ್ದ 119.3 ಮಿಮೀ ಅತ್ಯಧಿಕ ಮಳೆಯಾಗಿದೆ. https://ainkannada.com/heavy-rains-in-national-capital-delhi-four-killed-as-house-collapses/ “ತೌಕ್ತೆ” ಚಂಡಮಾರುತದ ಗುಜರಾತ್ ಕರಾವಳಿಯನ್ನು ದಾಟಿದ ಪರಿಣಾಮ ಭಾರೀ ಮಳೆಯಾಗುತ್ತಿದೆ. ಗುಡುಗು ಸಹಿತ ಭಾರಿ ಮಳೆಯಾದ ನಂತರ, ದೆಹಲಿ-ಎನ್ಸಿಆರ್ನಲ್ಲಿ ಕನಿಷ್ಠ ತಾಪಮಾನವು 8°C ಯಷ್ಟು ಕಡಿಮೆಯಾಗಿದೆ. ಐಎಂಡಿ ವರದಿಗಳ ಪ್ರಕಾರ, ದೇಶದ ಪ್ರಮುಖ ಪ್ರದೇಶಗಳಲ್ಲಿ ನಿರಂತರ ಮಳೆ, ಗುಡುಗು ಸಹಿತ…
ಬೆಂಗಳೂರು :- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತ ಉನ್ನತ ಮಟ್ಟದ ಸಭೆ ನಡೆಸಿದರು. ಕೃಷ್ಣಾ ನ್ಯಾಯಾಧಿಕರಣ-2 ಗೆಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಸಭೆಯಲ್ಲಿ ಚರ್ಚಿಸಿದರು. https://ainkannada.com/hindu-activist-suhash-shetty-murder-case-what-is-the-background-of-the-arrested-persons/ ಸಭೆಯ ಪ್ರಮುಖ ಮುಖ್ಯಾಂಶಗಳು ಹೀಗಿವೆ: • ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು. • ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ…
ಮಂಗಳೂರು : ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿನ ಕಾರನ್ನು ಅಪಘಾತಗೊಳಿಸಿ, ಬಳಿಕ ತಲವಾರ್ಗಳಿಂದ ಕೊಚ್ಚಿ ಹಲ್ಲೆ ಮಾಡಲಾಗಿತ್ತು. ಈ ಹತ್ಯೆ ವಿಡಿಯೋ ಕೂಡ ಎಲ್ಲೆಡೆ ಹರಿದಾಡಿತ್ತು. ಇದೇ ವಿಡಿಯೋ ಆಧರಿಸಿ ಆರೋಪಿಗಳ ಬೆನ್ನತ್ತ ಪೊಲೀಸರು, ಎಂಟು ಮಂದಿಯನ್ನು ಬಂಧಿಸಿದ್ದಾರೆ. ಈ ಎಂಟು ಮಂದಿಯಲ್ಲಿ ಇಬ್ಬರು ಹಿಂದೂಗಳಿದ್ದು, ರಂಜಿತ್, ನಾಗರಾಜು ಮತ್ತು ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಝಮಿಲ್, ಕಲಂದರ್ ಶಾಫಿ, ಮೊಹಮ್ಮದ್ ರಿಜ್ವಾನ್ ನ ಬಂಧಿತರಾಗಿದ್ದಾರೆ. ಇನ್ನೂ ತನಿಖೆ ಆರಂಭಿಸಿದ ಪೊಲೀಸರಿಗೆ 2023ರಲ್ಲಿ ನಡೆದಿದ್ದ ಸಫ್ವಾನ್ ಹಾಗೂ ಸುಹಾಸ್ ಶೆಟ್ಟಿಯ ಆಪ್ತನ ನಡುವಿನ ಗಲಾಟೆಯ ಲಿಂಕ್ ಸಿಕ್ಕಿದೆ. ಸಫ್ವಾನ್ ಎಂಬಾತನ ಜತೆಗೆ ಸುಹಾಸ್ ಶೆಟ್ಟಿ ಆಪ್ತ ಪ್ರಶಾಂತ್ ಗಲಾಟೆ ಮಾಡಿಕೊಂಡಿದ್ದ. ಗಲಾಟೆ ವಿಚಾರಕ್ಕೆ ಮಾತುಕತೆ ನಡೆಸೋದಕ್ಕೆ ಸಫ್ವಾನ್ನನ್ನು ಕರೆದಿದ್ದ. 2023ರ ಸೆಪ್ಟೆಂಬರ್ನಲ್ಲಿ ಮಾತಾನಾಡುವುದಕ್ಕೆ ಎಂದು ಕರೆದ ಪ್ರಶಾಂತ್ ಹಾಗೂ ಗ್ಯಾಂಗ್ ಸಫ್ವಾನ್ಗೆ ಡ್ರ್ಯಾಗನರ್ನಿಂದ ಇರಿದಿತ್ತು. ಬಳಿಕ ಚೂರಿ ಇರಿತಕ್ಕೆ ಒಳಗಾದ ಸಫ್ವಾನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ಚೂರಿ ಇರಿತ…
ಬೆಂಗಳೂರು:- ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ 14 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಯಲಹಂಕದ ಮಿನಿ ವಿಧಾನಸೌಧದ ಬಳಿ ಲೋಕಾರ್ಪಣೆ ಮಾಡಿದರು. https://ainkannada.com/accident-ksrtc-bus-collides-with-auto-two-dead-two-children-among-survivors/ ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಮುಖ್ಯಮಂತ್ರಿಯವರನ್ನು ಶಾಲು ಹೊದಿಸಿ ಸನ್ಮಾನಿಸಿದರಲ್ಲದೆ ಖಡ್ಗವೊಂದನ್ನು ನೀಡಿ ಗೌರವಿಸಿದರು. ವೇದಿಕೆ ಮೇಲಿದ್ದ ಸಮಾಜ ಕಲ್ಯಾಣ ಖಾತೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮತ್ತು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೂ ವಿಶ್ವನಾಥ್ ಅವರು ಖಡ್ಗ ನೀಡಿ ಸನ್ಮಾನಿಸಿದರು. ವೇದಿಕೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವರಾದ ಕೃಷ್ಣಬೈರೇಗೌಡ, ಹೆಚ್ ಸಿ ಮಹದೇವಪ್ಪ, ಬೈರತಿ ಸುರೇಶ್ ಸಾಥ್ ಕೊಟ್ಟಿದ್ದಾರೆ. ಇದೆ ವೇಳೆ ಸಿಎಂ ಸಂವಿಧಾನದ ಪೀಠಿಕೆ ಬೋಧಿಸಿದರು. ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.
ಮಂಗಳೂರು: ಕರಾವಳಿಯಲ್ಲಿ ನಡೆದ ಸರಣಿ ಹತ್ಯೆಗಳಿಂದಾಗಿ ಕಾನೂನು ಸುವ್ಯವಸ್ಥೆ ಬಗ್ಗೆಯ ಚರ್ಚೆ ಎದಿದ್ದಿ,. ಹೀಗಾಗಿ ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿಗೆ ಭೇಟಿ ನೀಡಿದ್ದು, ಸ್ಥಳೀಯ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಚಿವ ಪರಮೇಶ್ವರ್ ಸರ್ಕೀಟ್ ಹೌಸ್ ನಲ್ಲಿ ಮಾತುಕತೆ ನಡೆಸಿದ್ದಾರೆ. https://ainkannada.com/strict-action-will-be-taken-against-anyone-who-makes-a-statement-that-hurts-communal-sentiments-home-minister-parameshwara/ ಬಜ್ಪೆಯ ಕಿನ್ನಿಪದವಿನಲ್ಲಿ ಹಿಂದುತ್ವಪರ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಕಾರನ್ನು ಅಪಘಾತ ಮಾಡಿ, ಬಳಿಕ ಆತನಿಗೆ ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿದ್ದರು.
ನೆಲಮಂಗಲ:- ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಇಬ್ಬರು ದುರ್ಮರಣ ಹೊಂದಿದ್ದು, ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಜರುಗಿದೆ. https://ainkannada.com/dolly-dhananjays-film-is-ready-to-come-to-ott-which-film-where-is-it-streaming/ ಕೆಎಸ್ಆರ್ ಟಿಸಿ ಬಸ್, ಬೆಂಗಳೂರಿನಿಂದ ಹೊರನಾಡಿಗೆ ಸಂಚರಿಸುತ್ತಿತ್ತು. ಈ ವೇಳೆ ನೆಲಮಂಗಲ ತಾಲೂಕಿನ ಶಾಂತಿನಗರದಿಂದ ನೆಲಮಂಗಲ ನಗರಕ್ಕೆ ಒಂದೇ ಕುಟುಂಬ ಆಟೋದಲ್ಲಿ ಬರುತ್ತಿತ್ತು. ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ಕುಟುಂಬಸ್ಥರು ವಾಪಸ್ಸಾಗುತ್ತಿದ್ದರು. ಇದೆ ವೇಳೆ ಆಟೋ ಚಾಲಕ ಯೂಟರ್ನ್ ತೆಗೆದುಕೊಳ್ಳುವ ವೇಳೆ ಅಪಘಾತ ಸಂಭವಿಸಿದೆ. ಪರಿಣಾಮ ಪುಟ್ಟಮ್ಮ 55, ಚಾಲಕ ಶ್ರೀನಿವಾಸ್ 40, ಸಾವನ್ನಪ್ಪಿದ್ದಾರೆ. ಇನ್ನೂ ಲೇಖನ11, ವರ್ಷಿಣಿ13, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ನಾಗರತ್ಮಮ್ಮ 35, ವೆಂಕಟೇಶ್ 37 ಸಣ್ಣಪುಟ್ಟಗಾಯಗಳಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ನೆಲಮಂಗಲ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
ಬೆಂಗಳೂರು ಗ್ರಾಮಾಂತರ : ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ, ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಬಳಿ ನಡೆದಿದೆ. ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಘಟನೆ ನಡೆದಿದೆ. ಬೆಂಗಳೂರಿನಿಂದ ಹೊರನಾಡಿಗೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಸಂಚರಿಸುತ್ತಿತ್ತು. ಶಾಂತಿನಗರದಿಂದ ನೆಲಮಂಗಲ ನಗರಕ್ಕೆ ಬರುತ್ತಿದ್ದ ಆಟೋದಲ್ಲಿ ಒಂದೇ ಕುಟುಂಬದ 6 ಮಂದಿ ಬರುತ್ತಿದ್ದರು. ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಚಾಲಕ ಯೂಟರ್ನ್ ತೆಗೆದುಕೊಳ್ಳುವ ವೇಳೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. https://ainkannada.com/fire-incident-at-kozhikode-medical-college-four-died/ ಪುಟ್ಟಮ್ಮ (55), ಶ್ರೀನಿವಾಸ್ (40)ಮೃತರಾಗಿದ್ದು, ಲೇಖನ (11), ವರ್ಷಿಣಿ(13), ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ನಾಗರತ್ಮಮ್ಮ (35), ವೆಂಕಟೇಶ್ (37) ಸಣ್ಣಪುಟ್ಟಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು:-ಯಾರೇ ಆಗಲಿ ಕೋಮುಭಾವನೆ ಕೆಡಿಸೋ ಹೇಳಿಕೆ ನೀಡಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. https://ainkannada.com/india-bans-all-imports-from-pakistan-tensions-at-the-border/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕೋಮುಗಲಭೆ ನಿಗ್ರಹಕ್ಕೆ ಕರಾವಳಿಯಲ್ಲಿ ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ. ಹೀಗಾಗಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಲ್ಲಿ ಭಾಗಿಯಾದ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯನ್ನು ಜನಸಮುದಾಯ ಇಷ್ಟ ಪಡೋದಿಲ್ಲ. ಸುಹಾಸ್ ಹಾಗೂ ಅಶ್ರಫ್ ಕೊಲೆಯಿಂದ ಜಿಲ್ಲೆಯ ಕೋಮುಸೌಹಾರ್ದಕ್ಕೆ ಧಕ್ಕೆಯಾಗಿದೆ. ಸುಹಾಸ್ ಕೊಲೆಯಲ್ಲಿ 8 ಜನ, ಅಶ್ರಫ್ ಕೊಲೆಯಲ್ಲಿ 21 ಜನ ಆರೋಪಿಗಳನ್ನು ಬಂಧಿಸಿದ್ದೇವೆ. ಯಾರನ್ನೂ ಕಾನೂನು ಉಲ್ಲಂಘನೆ ಮಾಡಲು ಬಿಡೋದಿಲ್ಲ ಎಂದು ಹೇಳಿದರು ಅವರನ್ನ ಹತ್ತಿಕ್ಕಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆ ಶಾಂತಿಯಿಂದ ಇರಬೇಕು. ಹಿಂದೆ ಈ ಜಿಲ್ಲೆಯಲ್ಲೂ ಶಾಂತಿಗಾಗಿ ನಾವು ಪಾದಯಾತ್ರೆ ನಡೆಸಿದ್ದೆವು. ಸರ್ಕಾರ ಒಂದು ತೀರ್ಮಾನಕ್ಕೆ ಬಂದಿದೆ. ಇನ್ಮುಂದೆ ಇಂತಹ ಘಟನೆಗಳು ಮರುಕಳಿಸಬಾರದೆಂದು ನಾವು ಹೊಸದಾಗಿ…
ನವದೆಹಲಿ/ಇಸ್ಲಾಮಾಬಾದ್:- ಪಾಕ್ ನಿಂದ ಬರುವ ಎಲ್ಲಾ ಆಮದುಗಳಿಗೆ ಭಾರತ ನಿರ್ಬಂಧ ವಿಧಿಸಿದೆ. ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಾಕಿಸ್ತಾನ ಹಾಗೂ ಭಾರತದಲ್ಲಿ ಉದ್ವಿಗ್ನತೆ ಸ್ಥಿತಿ ನಿರ್ಮಾಣ ಆಗಿದೆ. ಯಾವುದೇ ಸಮಯದಲ್ಲಿ ಯುದ್ಧ ಘೋಷಣೆ ಆಗುವ ಸಾಧ್ಯತೆ ಇದೆ. ಅಲ್ಲದೇ ಪಾಕ್ ಜೊತೆಗಿನ ಸಂಬಂಧದ ಕೊಂಡಿಯನ್ನು ಸಂಪೂರ್ಣವಾಗಿ ಭಾರತ ಕಳಚಿದೆ. ಈ ನಡುವೆಯೇ ಭಾರತ ದೇಶ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. https://ainkannada.com/pocso-case-businessman-kiran-arrest-crime-news/ ನೆರೆಯ ದೇಶ ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನು ಭಾರತ ನಿಷೇಧಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದು ಪಾಕಿಸ್ತಾನದಿಂದ ಸಾಗಣೆಯಲ್ಲಿರುವ ಎಲ್ಲಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಹೇಳಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಇಂದು ತಿಳಿಸಿದೆ. ಪಾಕಿಸ್ತಾನದಲ್ಲಿ ತಯಾರಾಗುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ…