ಸಹ ನಟಿಯ ಮೇಲಿನ ಅತ್ಯಾಚಾರದ ಕೇಸ್ನಲ್ಲಿ ಮನು ಜೈಲಿಗೆ ಹೋಗಿದ್ದಾಗ, ಇತ್ತ ಕಡೆ ಅವರದ್ದು ಎನ್ನಲಾದ ಆಡಿಯೋ ಕ್ಲಿಪ್ವೊಂದು ವೈರಲ್ ಆಗಿತ್ತು. ಶಿವರಾಜ್ಕುಮಾರ್, ದರ್ಶನ್, ಧ್ರುವ ಸರ್ಜಾ ಅವರ ಬಗ್ಗೆ ಆ ಆಡಿಯೋದಲ್ಲಿ ಅವಹೇಳನಕಾರಿಯಾಗಿ ಮಾತನಾಡಲಾಗಿತ್ತು. “ಶಿವರಾಜ್ ಕುಮಾರ್ ಇನ್ನು ಆರು ವರ್ಷ,
ದರ್ಶನ್ ಸತ್ತೋದ, ಆಮೇಲೆ ನಾನೇ ಹೀರೋ” ಎಂಬ ಮಾತುಗಳು ಆಡಿಯೋದಲ್ಲಿದ್ದವು. ಈ ಆಡಿಯೋ ವೈರಲ್ ಆಗುತ್ತಿದ್ದಂತೆಯೇ, ಶಿವರಾಜ್ಕುಮಾರ್, ದರ್ಶನ್, ಧ್ರುವ ಸರ್ಜಾ ಅವರ ಅಭಿಮಾನಿಗಳು ಕೆರಳಿದ್ದರು ಮತ್ತು ಮನು ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬ್ಯಾನ್ ಮಾಡಿದ್ದರು.
ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?
ಇದೀಗ ಮನುಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ಮೇಲೆ ಹೇರಿದ್ದ ನಿಷೇಧವನ್ನು ತೆರೆವುಗೊಳಿಸಲು ತೀರ್ಮಾನಿಸಲಾಗಿದೆ. ನಿರ್ಮಾಪಕ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಅವರನ್ನು ಮನು ಭೇಟಿ ಆಗಿದ್ದಾರೆ. ಮೂವರೂ ನಟರಿಗೆ ಕ್ಷಮೆ ಕೋರಿ ಮನು ಪತ್ರ ಬರೆದಿದ್ದಾರೆ.
ಮಡೆನೂರು ಮನು ಕ್ಷಮೆ ಕೇಳಿ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಅವರಿಗೆ ಒಂದು ಅವಕಾಶ ನೀಡುವುದಾಗಿ ಉಮೇಶ್ ಬಣಕಾರ್ ಹೇಳಿದ್ದಾರೆ. ‘ಮನು ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಪ್ರಾಯಶ್ಚಿತ್ತ, ಪಾಪಪ್ರಜ್ಞೆ ಅವರಿಗೆ ಕಾಡಿದೆ.
ಈ ಕ್ಷಮಾಪಣೆಯ ಕಾಗದ ನೀಡಿದ್ದಾರೆ. ಬಹಿರಂಗವಾಗಿ ಅವರು ಕ್ಷಮೆ ಕೇಳಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಅವಕಾಶ ಮಾಡಿಕೊಡಿ ಅಂತ ಅವರು ಮನವಿ ಮಾಡಿದ್ದಾರೆ. ಅದನ್ನು ಪುರಸ್ಕರಿಸುತ್ತೇವೆ’ ಎಂದು ಉಮೇಶ್ ಬಣಕಾರ್ ಹೇಳಿದ್ದಾರೆ.