ಬೆಂಗಳೂರು:- ಮರಾಠಿಗರ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲೆ ಎಂಇಎಸ್ ಪುಂಡರ ದಬ್ಬಾಳಿಕೆ ಖಂಡಿಸಿ ಇಂದು ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ಇದು ಎಣ್ಣೆ ಪವರ್ ಗುರು: ಕುಡಿದ ಮತ್ತಲ್ಲಿ ರೈಲನ್ನೇ ತಡೆದು ನಿಲ್ಲಿಸಿದ ಕುಡುಕ!
ಅದರಂತೆ ಹಲವು ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಹಲವೆಡೆ ಸಂಚಾರ ಎಂದಿನಂತೆ ಯಥಾಸ್ಥಿತಿ ಯಲ್ಲಿದೆ.
ಇನ್ನೂ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು ಸಂಚರಿಸುತ್ತಿವೆ. ನಗರದ ಮೆಜೆಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣ ಯಥಾಸ್ಥಿತಿಯಲ್ಲಿದೆ. ಆದರೆ ಪ್ರಯಾಣಿಕರ ಸಂಖ್ಯೆ ಸ್ಪಲ್ಪ ಕಡಿಮೆಯಾಗಿದೆ.
ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ಬಂದ್ ಬಿಸಿ ತಟ್ಟಿದೆ. ತಮ್ಮ ತಮ್ಮ ಊರುಗಳಿಗೆ ವೀಕೆಂಡ್ಗಳಲ್ಲೇ ಹೆಚ್ಚಾಗಿ ಹೋಗುವ ಜನ ಇಂದು ಬಂದ್ ಕಾರಣಕ್ಕೆ ಸ್ಯಾಟಲೈಟ್ ಬಸ್ ನಿಲ್ದಾಣದ ಕಡೆ ಮುಖ ಮಾಡಿಲ್ಲ. ಸ್ಯಾಟಲೈಟ್ ಕೆಎಸ್ಆರ್ಟಿಸಿ ನಿಲ್ದಾಣ ಇಂದು ಪ್ರಯಾಣಿಕರ ಕೊರತೆ ಎದುರಿಸುತ್ತಿದೆ.
ರಾಮನಗರ, ಮೈಸೂರು, ಮದ್ದೂರು, ಮಂಡ್ಯ, ಚಾಮರಾಜನಗರ, ಕೊಳ್ಳೇಗಾಲ, ಟಿ.ನರಸೀಪುರ, ನಂಜನಗೂಡು, ಮಳವಳ್ಳಿ, ಕೊಡಗು, ಹಾಸನ ಭಾಗಕ್ಕೆ ಹೋಗುವವರು ಬಹಳಷ್ಟು ಜನ ಬಂದ್ ಅಂತ ಇಂದು ಮನೆಗಳಲ್ಲೇ ಉಳಿದುಕೊಂಡಿದ್ದಾರೆ. ಇದರ ಪರಿಣಾಮ ಬಸ್ಗಳು ಖಾಲಿ ಖಾಲಿ ಸಂಚಾರ ಮಾಡುತ್ತಿವೆ.