ಬೆಂಗಳೂರು:- ಡೆಂಟಲ್ ವಿದ್ಯಾರ್ಥಿನಿಯೊಬ್ಬರು ನೇಣಿಗೆ ಕೊರಳೊಡ್ಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
IPL 2025: ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಮುಂಬೈ: ಡೆಲ್ಲಿಗೆ ಮೊದಲ ಸೋಲು!
ರಾಜಾಜಿನಗರ ಖಾಸಗಿ ಕಾಲೇಜಿನಲ್ಲಿ ದ್ವೀತಿಯ ವರ್ಷದ ಡೆಂಟಲ್ ಓದುತ್ತಿದ್ದ ಸೌಮ್ಯ ಗಣೇಶ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ನಿನ್ನೆ ಸಂಜೆ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಶರಣಾಗಿದ್ದಾಳೆ.
ಪರೀಕ್ಷೆ ಸಮಯದಲ್ಲಿ ಆತಂಕಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಕಳೆದ 15 ದಿನಗಳ ಹಿಂದೆ ಯುವತಿಗೆ ಪೋಷಕರು ಕೌನ್ಸೆಲಿಂಗ್ ಮಾಡಿಸಿದ್ದರು. ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.