ಧಾರವಾಡ:– ರಸ್ತೆ ಅಪಘಾತದಲ್ಲಿ ಬ್ಯಾಂಕ್ ಮ್ಯಾನೇಜರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ಪ್ರಹ್ಲಾದ್ ಜೋಶಿಯವರಿಗೆ ಧೈರ್ಯ ಇಲ್ವಾ!? ಎಂಬಿ ಪಾಟೀಲ್ ಹಿಂಗೇಳಿದ್ಯಾಕೆ?
40 ವರ್ಷದ ರಾಹುಲ್ ಶುಕ್ಲಾ ಮೃತ ದುರ್ದೈವಿ ಎನ್ನಲಾಗಿದೆ. ಧಾರವಾಡ ಕಡೆಯಿಂದ ವಾಪಸ್ ಬೆಳಗಾವಿ ಕಡೆಗೆ ತೆರಳುತ್ತಿದ್ದ ಸಂದರ್ಭ ಎದುರು ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ರಾಹುಲ್ ಶುಕ್ಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಪತ್ನಿ ಹಾಗೂ ಮೂರು ವರ್ಷದ ಮಗಳು ಕಿಯಾನಾ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ನಿಲ್ಲಿಸದ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.