ಕೋಲಾರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವೀರಶೈವ ಲಿಂಗಾಯತ ಸಮುದಾಯ ಇವರ ಸಂಯುಕ್ತ ಆಶ್ರಯದಲ್ಲಿ ಮಹಾಶರಣ, ವಿಶ್ವಮಾನವ, ಜಗಜ್ಯೋತಿ ಬಸವೇಶ್ವರರ ಜಯಂತೋತ್ಸವದ ಅಂಗವಾಗಿ ಅದ್ದೂರಿ ಮೆರವಣಿಗೆಯನ್ನು ನಡೆಸಲಾಯಿತು.
ಮೆರವಣಿಗೆಗೆ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ನಗರಸಭಾ ಅಧ್ಯಕ್ಷೆ ಲಕ್ಷ್ಮಿದೇವಮ್ಮ ಚಾಲನೆ ನೀಡಿದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.
ಪ್ರತಿ ವರ್ಷದಂತೆ ಈ ವರ್ಷವೂ ಸಹ ವೀರಶೈವ ಸಮುದಾಯದವರು ಶ್ರದ್ಧಾ ಭಕ್ತಿಗಳಿಂದ ಬಸವೇಶ್ವರರ ಜಯಂತಿಯನ್ನು ಆಚರಿಸುತ್ತಿದ್ದು. ಇನ್ನು ಮೆರವಣಿಗೆಯಲ್ಲಿ ವೀರಗಾಸೆ ಹಾಗೂ ತಮಟೆ ವಾದ್ಯಗಳು ನೋಡುಗರ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಡಾ.ನಯನ, ಉಪ ವಿಭಾಗಾಧಿಕಾರಿ ಮೈತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ಮುಂತಾದವರು ಉಪಸ್ಥಿತರಿದ್ದರು.