ಬೆಂಗಳೂರು: ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ, ಐಟಿ ಹಬ್ ಹೀಗೆ ಹಲವು ವಿಚಾರಗಳಲ್ಲಿ ಬೆಂಗಳೂರು ಈಗಾಗಲೇ ವಿಶ್ವಮಟ್ಟದಲ್ಲಿ ಮಹತ್ವ ಪಡೆದಿದೆ. ಇದೀಗ ರಾಜಧಾನಿ ನಗರದ ಹೆರಿಗೇ ‘ಗ್ರೇಟರ್’ ಎಂಬ ಕಿರೀಟ ತೊಡಿಸಲು ಸರ್ಕಾರ ಮುಂದಾಗಿದೆ. ಹೌದು ಇಂದಿನಿಂದ ಗ್ರೇಟರ್ ಬೆಂಗಳೂರು ಜಾರಿ ಆಗಲಿದೆ.
ಆ ಮೂಲಕ ಬಿಬಿಎಂಪಿ ಗ್ರೇಟರ್ ಬೆಂಗಳೂರು ಅಥಾರಿಟಿ ಆಗಲಿದೆ. ಸದ್ಯ ಮೇ 5ರಿಂದ ಗ್ರೇಟರ್ ಬೆಂಗಳೂರು ಜಾರಿಗೆ ಬರುವಂತೆ ಸರ್ಕಾರ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷರಾಗಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ಗೆ ಉಪಾಧ್ಯಕ್ಷರಾಗಲಿದ್ದಾರೆ.
ಬೇಸಿಗೆಯಲ್ಲಿ ಮೊಟ್ಟೆ ತಿಂದ್ರೆ ನಿಮಗೆ ಅನಾರೋಗ್ಯ ಕಾಡುತ್ತೆ..! ಇದನ್ನು ನೀವೂ ನಂಬಲೆಬೇಕು
ಸದ್ಯ ಬಿಬಿಎಂಪಿ ವಿಸರ್ಜನೆಯಾಗಿದ್ದು, 3 ಭಾಗಗಳಾಗಿ ಬೆಂಗಳೂರು ವಿಂಗಡಣೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಸೇರಿ ಮೂರು ಭಾಗಗಳಾಗಿ ವಿಂಗಡಣೆ ಮಾಡಲು ಚಿಂತನೆ ಮಾಡಲಾಗುತ್ತಿದೆ. ಪ್ರತೀ ಪಾಲಿಕೆಯಲ್ಲೂ125 ವಾರ್ಡ್ ಗಳು ಇರಲಿವೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ – 2024ರ ಕಲಂ 1(2)ರ ಕಲಂ 3ರಂತೆ ಬಿಬಿಎಂಪಿ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಪ್ರದೇಶವೆಂದು ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಅಲ್ಲದೇ ಈ ಗ್ರೇಟರ್ ಬೆಂಗಳೂರು ಬಡಜನರಿಗೆ ಮತ್ತಷ್ಟು ಹೊರೆಯಾಗುವ ಸಾಧ್ಯತೆ ಕೂಡ ಹೆಚ್ಚಾಗಿದೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ – 2024ರ ಅನುಸಾರದಲ್ಲಿ ಆಡಳಿತಕ್ಕೆ ಬರಲಿದೆ. ಮುಖ್ಯಮಂತ್ರಿ ನೇತೃತ್ವದ ಗ್ರೇಟರ್ ಬೆಂಗಳೂರು ಪ್ರಾಧಿಕಾರವು 120 ದಿನಗಳಲ್ಲಿ ರಚನೆಯಾಗಬೇಕಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (ಜಿಬಿಎ)ಕ್ಕೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರುತ್ತಾರೆ.
ಬೆಂಗಳೂರು ಅಭಿವೃದ್ಧಿ ಸಚಿವರೇ ಜಿಬಿಎ ನ ಉಪಾಧ್ಯಕ್ಷರಾಗಿರುತ್ತಾರೆ. ಮೂರು ನಗರ ಪಾಲಿಕೆಗಳು ತಲಾ 125 ವಾರ್ಡ್‌ಗಳನ್ನು ಒಳಗೊಂಡಿರುತ್ತದೆ. ಪ್ರತಿ ಪಾಲಿಕೆಗೂ ‘ಗ್ರೇಟರ್ ಬೆಂಗಳೂರು ಪ್ರದೇಶ’ದ ಗಡಿ ನಿಗಧಿಪಡಿಸಲಾಗುತ್ತದೆ.