ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೋಮವಾರ ರೋಚಕವಾಗಿ ಗೆದ್ದು ಬೀಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆರ್ ಸಿಬಿ ಪಂದ್ಯಾವಳಿಯ ಮೂರನೇ ಗೆಲುವು ಸಾಧಿಸಿದೆ.
ದ್ವಿತೀಯ ಪಿಯು ಫಲಿತಾಂಶ ; ಕಲಾವಿಭಾಗದಲ್ಲಿ ಸಂಜನಾಬಾಯಿ ಫಸ್ಟ್ ; ಲಾರಿ ಡ್ರೈವರ್ ಮಗಳ ಸಾಧನೆ
ಪಂದ್ಯ ಗೆದ್ದ ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಗೆ ಬಿಸಿಸಿಐ ಶಾಕ್ ಕೊಟ್ಟಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಕಡಿಮೆ ಓವರ್ ದರ ಕಾಯ್ದುಕೊಂಡಿದ್ದಕ್ಕಾಗಿ ಬಿಸಿಸಿಐ ರಜತ್ ಪಾಟಿದಾರ್‌ಗೆ ದಂಡ ವಿಧಿಸಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ, ಕನಿಷ್ಠ ಓವರ್ ದರದ ಅಪರಾಧಗಳಿಗೆ ಸಂಬಂಧಿಸಿದಂತೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ಪ್ರಕಾರ, ಅನುಬಂಧ 2 ರಲ್ಲಿ ಒಳಗೊಂಡಿರುವ ಕನಿಷ್ಠ ಓವರ್ ದರದ ಅವಶ್ಯಕತೆಗಳನ್ನು ಪೂರೈಸಲು ಫೀಲ್ಡಿಂಗ್ ತಂಡವು ಪಂದ್ಯದಲ್ಲಿ ಭಾಗವಹಿಸುವಲ್ಲಿ ವಿಫಲವಾದರೆ, ಸಂಬಂಧಿತ ತಂಡದ ನಾಯಕ ಮತ್ತು ಆ ಫೀಲ್ಡಿಂಗ್ ತಂಡದ ಪ್ರತಿಯೊಬ್ಬ ಆಟಗಾರರು ಈ ನೀತಿ ಸಂಹಿತೆಯ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗುತ್ತದೆ. ಇದಕ್ಕೆ ದಂಡ ವಿಧಿಸಲಾಗುತ್ತದೆ.