ಕಲಬುರಗಿ: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಬೇಕೆಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಎಲ್ಲಾ ತಾಲೂಕಿನ ಪಿಡಿಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸೇಡಂ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ `ಟಾಸ್ಕ್ ಪೋರ್ಸ್’ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ್ , ಪಂಚಾಯತ್ ಮಟ್ಟದಲ್ಲಿ ಪಿಡಿಓಗಳು ಬೋರ್ವೆಲ್ಗಳು ಹಾಗೂ ಜಲ ಮೂಲಗಳನ್ನು ಪರೀಕ್ಷಿಸಿ ಕ್ರಮಕೈಗೊಂಡು ವರದಿ ಸಲ್ಲಿಸಬೇಕು. ಹೆಚ್ಚು ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಶಾಶ್ವತ ಬೋರ್ವೆಲ್ ಕೊರೆಸಿ, ಇತರೆ ಬೋರ್ವೆಲ್ಗಳನ್ನು ಫ್ಲಶಿಂಗ್ ಮಾಡಿಸಿ ಜನರ ಅನುಕೂಲಕ್ಕೆ ತಕ್ಕಂತೆ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದರು.
ಯತ್ನಾಳ್ ಉಚ್ಚಾಟನೆ ; ವಿಜಯಪುರ ಜಿಲ್ಲಾ ಬಿಜೆಪಿ ಕೋರ್ ಕಮೀಟಿಯಿಂದ ಠರಾವು ಪಾಸು
ಪಿಡಿಓಗಳು ಗ್ರಾಮಗಳಿಗೆ ಭೇಟಿ ನೀಡಿ ಒಂದು ವಾರದಲ್ಲಿ ನನಗೆ ವರದಿ ಸಲ್ಲಿಸಬೇಕು. ಹೆಚ್ಚು ಬಿಸಿಲಿದೆ ಎಂದು ಮನೆಯಲ್ಲಿಯೇ ಕುಳಿತು ಮೊಬೈಲ್ನಲ್ಲಿ ವರದಿ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.