ಬಳ್ಳಾರಿ: ನರೇಂದ್ರ ಮೋದಿ ಮೊದಲು ಭಾರತವನ್ನು ಭಿಕ್ಷುಕರ ದೇಶ ಹಾವಾಡಿಗರ ದೇಶ ಎಂದು ಕರೆಯುತ್ತಿದ್ದರು, ಈಗ ಕಾಲ ಬದಲಾಗಿದೆ. ಇದೀಗ ಭಾರತವನ್ನು ಪ್ರಧಾನಿ ಮೋದಿ ವಿಶ್ವವೇ ನೋಡುವಂತೆ ಮಾಡಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಪ್ರಧಾನಿ ಮೋದಿ ಸರ್ಕಾರ 11 ವರ್ಷ ಪೂರೈಸಿದ ಹಿನ್ನೆಲೆ ಹನ್ನೊಂದು ವರ್ಷದ ಸಾಧನೆ ಕುರಿತು ಮಾತನಾಡಿದ ಅವರು, ನರೇಂದ್ರ ಮೋದಿ ಬರೋದಕ್ಕೂ ಮೊದಲು ಭಾರತವನ್ನು ಭಿಕ್ಷುಕರ ದೇಶ, ಹಾವಾಡಿಗರ ದೇಶ ಎಂದು ಕರೆಯುತ್ತಿದ್ದರು. ಈಗ ಕಾಲ ಬದಲಾಗಿದೆ, ಇದೀಗ ಭಾರತವನ್ನು ವಿಶ್ವವೇ ನೋಡುವಂತೆ ಮಾಡಿದ್ದಾರೆ.
ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!
ನೆಹರು ಅವರ ಕಾಲದಲ್ಲಿ ವೈಯಕ್ತಿಕ ಹಿತಾಸಕ್ತಿಗೆ ಕೆಲಸ ಮಾಡಿದ್ದರು. ದೇಶದ ಅಭಿವೃದ್ಧಿ ಬಗ್ಗೆ ನೆಹರು ಕುಟುಂಬ ಚಿಂತನೆ ಮಾಡಿಲ್ಲ. ವೈಯಕ್ತಿಕ ಅಭಿವೃದ್ಧಿ ಹೊಂದಿದ್ದ ಹೊರತು ದೇಶ ಅಭಿವೃದ್ಧಿ ಮಾಡಲಿಲ್ಲ.
ಚೀನಾ–ಭಾರತದ ಯುದ್ಧದಲ್ಲಿ ಭಾರತ ಮಂಡಿಯೂರಿತು. ಇದಕ್ಕೆ ನೆಹರು ನಿಲುವು ಕಾರಣವಾಯಿತು. ನೆಹರು ಅವರ ಕಾಲಘಟ್ಟ ಕೆಟ್ಟದಾಗಿತ್ತು, ಸಾವಿರಾರು ಸೈನಿಕರು ಹುತಾತ್ಮರಾದರು ಎಂದು ನೆಹರು ಮತ್ತು ಇಂದಿರಾ ಗಾಂಧಿ ಕಾಲಘಟ್ಟದ ಭ್ರಷ್ಟಾಚಾರದ ವಿವರಣೆ ನೀಡಿದರು.