ಬೆಳಗಾವಿ : ಆಟೋದಲ್ಲಿ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ರಾಘವೇಂದ್ರ ಜಾಧವ್ (28), ರಂಜೀತಾ ಚೋಬರಿ (26) ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಘವೇಂದ್ರ, ರಂಜೀತಾ ಇಬ್ಬರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಹದಿನೈದು ದಿನಗಳ ಹಿಂದಷ್ಟೇ ರಂಜಿತಾ ನಿಶ್ಚಿತಾರ್ಥವಾಗಿತ್ತು. ಮನೆಯಲ್ಲಿ ಮದುವೆ ಒಪ್ಪದೇ ಬೇರೊಬ್ಬ ಯುವಕನೊಟ್ಟಿಗೆ ಮದುವೆ ನಿಶ್ಚಿಯ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಂದು ಬೆಳಗ್ಗೆ ಇಬ್ಬರು ಒಂದೇ ಆಟೋದಲ್ಲಿ ಬಂದಿದ್ದು, ನಿರ್ಜನ ಪ್ರದೇಶದಲ್ಲಿ ಬಂದು ಆಟೋದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.