ಬೆಳಗಾವಿ:- ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜರುಗಿದೆ. 45 ವರ್ಷದ ರಾಮಚಂದ್ರ ಜಾಧವ್, 18 ವರ್ಷದ ಮಗ ಮಹೇಶ್ ರಾಮಚಂದ್ರ ಜಾಧವ್, ರಾಮಣ್ಣ ಅಲಿಯಾಸ್ 38 ವರ್ಷದ ರಮೇಶ್ ಮೃತ ದುರ್ದೈವಿಗಳು.
ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!
ಘಟನೆಯಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆದ್ದಾರಿ ಗಸ್ತು ಸಿಬ್ಬಂದಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಆರ್.ಬಿ ಬಸರಗಿ ಕೂಡ ಭೇಟಿ ನೀಡಿ ಮಾಹಿತಿ ಪಡೆದರು. ಆಯಿಲ್ ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕ್ರೇನ್ ಮೂಲಕ ಟ್ಯಾಂಕರ್ ಮೇಲೆತ್ತಿದ್ದಾರೆ.