ಬೆಂಗಳೂರು: ಬೆಂಗಳೂರನ್ನು ಗ್ರೇಟರ್ ಅಲ್ಲ. ಕ್ವಾರ್ಟರ್ ಬೆಂಗಳೂರು ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರನ್ನು ಗ್ರೇಟರ್ ಅಲ್ಲ. ಕ್ವಾರ್ಟರ್ ಬೆಂಗಳೂರು ಮಾಡಿದ್ದಾರೆ.
ನಾಡಪ್ರಭು ಕೆಂಪೇಗೌಡರು ಒಂದು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್ ಸರಕಾರ ಬೆಂಗಳೂರನ್ನು ಮೂರು ಭಾಗ ಮಾಡಲು ಮುಂದಾಗಿದೆ. ಇದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ನಿಮ್ಮದು ಬೋಳು ತಲೆಯಾ!? ಕೂದಲು ಬೆಳೆಯಲು ಈರುಳ್ಳಿ ಎಣ್ಣೆಯನ್ನು ಈ ರೀತಿ ಬಳಸಿ ಸಾಕು!
ಯಾರದ್ದೋ ಜಮೀನಿನ ಮೌಲ್ಯ ಹೆಚ್ಚಾಗುವಂತೆ ಮಾಡಲು ಇಂತಹ ಯೋಜನೆ ರೂಪಿಸಲಾಗಿದೆ. ಇದರಿಂದಾಗಿ ಕೆಂಪೇಗೌಡರ ಚಿಂತನೆಗೆ ದ್ರೋಹ ಬಗೆದಂತಾಗಿದೆ. ಬೆಂಗಳೂರು ಭಾಗವಾದರೆ ಆದಾಯ ಬರುವುದಿಲ್ಲ. ಮೂರು ಪಾಲಿಕೆ ರಚನೆಯಾದರೆ ಅಲ್ಲಿ ಕನ್ನಡಿಗರೇ ಮೇಯರ್ ಆಗುತ್ತಾರೆಂಬ ಖಚಿತತೆ ಇಲ್ಲ ಎಂದು ಹೇಳಿದರು.